ತುಮಕೂರು : ಕೋವಿಡ್ 2ನೇ ಅಲೆ ಹೆಚ್ಚುತ್ತಿದ್ದು, ನಗರ ಪ್ರದೇಶದಲ್ಲೆ ಕೋವಿಡ್ ಹರಡುತ್ತಿದ್ದು, ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಚೌಡಪ್ಪ ಸೂಚಿಸಿದರು. ಜಿಲ್ಲಾ ಪಂಚಾಯತಿಯಲ್ಲಿ ಆರ್. ಚೌಡಪ್ಪ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಬೆಂಗಳೂರು ತುಮಕೂರು ನಡುವೆ ಓಡಾಡುವರ ಸಂಖ್ಯೆ ಹೆಚ್ಚುತ್ತಿದ್ದು, ಗ್ರಾಮಾಂತರ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿದ್ದು, ಕೋವಿಡ್ ವಾರಿಯರ್ಸ್ ಶ್ರಮವಹಿಸುವಂತೆ ಸೂಚಿಸಿದರು. ಸಾರ್ವಜನಿಕರು ಸಹ ಮದುವೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಎಚ್ಚರಿಕೆ ವಹಿಸಬೇಕು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸುವ ಮೂಲಕ ಕೋವಿಡ್ ಅಲೆ ತಡೆಯಲು ಸಹಕರಿಸುವಂತೆ ಕೋರಿದರು. ಖಾಸಗಿ ಶಾಲೆಗಳು ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಶಾಲೆಗಳ ವಿರುದ್ಧ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. ಜಿ.ಪಂ.ಸದಸ್ಯ ಕೆಂಚಮಾರಯ್ಯ ಅವರು ಮಾತನಾಡಿ…
Author: News Desk Benkiyabale
ತುಮಕೂರು : ಇಂಧನ ಬೆಲೆಗಳ ನಿರಂತರ ಹೆಚ್ಚಳ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿಗಳ ವಿಳಂಬದಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಖಂಡಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದವತಿಯಿಂದ ಎತ್ತಿನಗಾಡಿ,ಜಟಕಾಗಾಡಿ, ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಹಮ್ಮಿಕೊಳ್ಳಲಾಗಿದ್ದ ಎತ್ತಿನ ಗಾಡಿ,ಜಟಕಾಗಾಡಿ ಮತ್ತು ಸೈಕಲ್ ಜಾಥಾವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಸೈಯಿದ್ ಅಹಮದ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು,ಅಂತರರಾಷ್ಟ್ರಿಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ, ಭಾರತದಲ್ಲಿ ನಿರಂತರ ವಾಗಿ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ, ಕೋರೋನ ಸಂಕಷ್ಟದಲ್ಲಿರುವ ರೈತರನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಲಿಗೆ ಮಾಡುತ್ತಿವೆ.ಇಂಧನ ಬೆಲೆಗಳ ಹೆಚ್ಚಳದ ಪರಿಣಾಮ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು, ಅದರಲ್ಲಿ ಬಡವರು ಮತ್ತು ಮಧ್ಯಮವರ್ಗದ ಜನರು ಬದುಕುವುದೇ ಕಷ್ಟವಾಗಿದೆ.ಕೇಂದ್ರ ಸರಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ.ಇದರ ವಿರುದ್ದ ಕಾಂಗ್ರೆಸ್ ನಿರಂತರ ಹೋರಾಟ…
ತುಮಕೂರು : ಕೋವಿಡ್ ಎರಡನೇ ಅಲೆ ಜಿಲ್ಲೆಗೆ ವ್ಯಾಪಿಸದಂತೆ ತಡೆಯಲು ಮುಂಜಾಗ್ರತಾ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ಎರಡನೇ ಅಲೆ ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮೊದಲನೇ ಹಂತದ ಕೋವಿಡ್-19 ನಿಯಂತ್ರಿಸಲು ಕೈಗೊಂಡ ಕ್ರಮಗಳಂತೆಯೇ ಕೋವಿಡ್-19 ಎರಡನೇ ಅಲೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಅವರು ನಿರ್ದೇಶಿಸಿದರು. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಹರಡಿದ್ದ ಕೋವಿಡ್ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ಮೊದಲ ಹಂತದ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳು ಮತ್ತು ಸರಕಾರ ನೀಡಿದ ನಿರ್ದೇಶನಗಳನ್ನು ಪಾಲಿಸಿದ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಿಸಲು ಸಾಧ್ಯವಾಯಿತು. ಅದೇ ರೀತಿಯಲ್ಲಿಯೇ ಕೋವಿಡ್ ಎರಡನೇ ಅಲೆ ಜಿಲ್ಲೆಗೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. …
ತುಮಕೂರು : ಜಿಲ್ಲೆಯಲ್ಲಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದು ನನ್ನ ಉದ್ದೇಶವಾಗಿದ್ದು, ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆರೆಗಳನ್ನು ಗುರುತಿಸಿ ಸಣ್ಣ ನೀರಾವರಿ ಇಲಾಖೆಗೆ ಒಳಪಡಿಸಿದರೆ ಆ ಕೆರೆಗಳನ್ನು ಅಭಿವೃದ್ಧಿಗೊಳಿಸಿ ನೀರು ತುಂಬಿಸಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕೆರೆ ಸಂರಕ್ಷಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆರೆಗಳ ಸರ್ವೆ ಕಾರ್ಯ ಮಾಡಿಸಿ, ಕೆರೆಗಳ ನಿರ್ವಹಣೆ ಮಾಡಬೇಕು. ಜಿಲ್ಲೆಯಲ್ಲಿ 2,500ಕ್ಕೂ ಹೆಚ್ಚು ಕೆರೆಗಳಿದ್ದು, ಅವುಗಳ ಅಭಿವೃದ್ಧಿಗೆ 2 ಕೋಟಿ ಮಾತ್ರ ಮೀಸಲಿಡಲಾಗಿದೆ. ಕೆರೆಗಳ ಅಭಿವೃದ್ಧಿಗಾಗಿ ಈ ಅನುದಾನ ಸಾಕಾಗುವುದಿಲ್ಲ ಎಂದು ಹೇಳಿದರು. ಕೆರೆಗಳಲ್ಲಿನ ಹೂಳು ತೆಗೆಯಲು ಅವಕಾಶ ಕಲ್ಪಿಸಲಾಗಿದ್ದು, ರೈತರು ಹೂಳನ್ನು ತುಂಬಿಕೊಂಡು ಹೋಗಬಹುದು. ಹೂಳು ತುಂಬಿರುವ ಕೆರೆ ಹಾಗೂ ಅರ್ಧ ಹೂಳು ಇರುವ ಕೆರೆಗಳ ಕುರಿತು ಹಾಗೂ ಕೆರೆಗಳ…
ತುಮಕೂರು: ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಹ ಫಲಾನುಭವಿಗಳು ಸಲ್ಲಿಸುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ತಿರಸ್ಕರಿಸಬಾರದು ಎಂದು ಮಹಾನಗರಪಾಲಿಕೆ ಆಯುಕ್ತೆ ರೇಣುಕಾ ವಿವಿಧ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ಸಭಾಂಗಣದಲ್ಲಿ ರಾಜ್ಯ/ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪಾಲಿಕೆ ಮೂಲಕ ಅನುಷ್ಠಾನವಾಗುವ ರಾಜ್ಯ ಹಾಗೂ ಕೇಂದ್ರ ಪುರಸ್ಕøತ ಯೋಜನೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲಕ್ಕಾಗಿ ಸಲ್ಲಿಸುವ ಅರ್ಜಿಗಳನ್ನು ಅಗತ್ಯ ದಾಖಲೆಗಳ ಕೊರತೆ, ಮತ್ತಿತರ ಕಾರಣವನ್ನು ಹೇಳಿ ಹಿಂದಿರುಗಿಸಬಾರದು. ದಾಖಲೆಗಳ ಅವಶ್ಯಕತೆ ಇದ್ದಲ್ಲಿ ಫಲಾನುಭವಿಗಳೊಂದಿಗೆ ಬ್ಯಾಂಕಿಗೆ ಭೇಟಿ ನೀಡಿ ಸಾಲ ಅರ್ಜಿಯನ್ನು ಅನುಸರಣೆ ಮಾಡಬೇಕೆಂದು ಈಗಾಗಲೇ ಯೋಜನಾನುಷ್ಠಾನಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅನುಷ್ಠಾನಾಧಿಕಾರಿಗಳು ಅಗತ್ಯ ದಾಖಲೆಗಳನ್ನು ಪೂರೈಕೆ ಮಾಡಿದ ನಂತರ ಅರ್ಹ ಫಲಾನುಭವಿಗಳಿಗೆ ಸಾಲವನ್ನು ಮಂಜೂರು ಮಾಡಬೇಕೆಂದರಲ್ಲದೆ, ಸಾಲ ಮಂಜೂರು ಮಾಡುವಾಗ ಮಧ್ಯವರ್ತಿಗಳೊಂದಿಗೆ ವ್ಯವಹರಿಸದೆ ಸಂಬಂಧಿಸಿದ ಫಲಾನುಭವಿಗಳೊಂದಿಗೆ ಮಾತ್ರ ವ್ಯವಹರಿಸಬೇಕು. ಬ್ಯಾಂಕಿನ ಅಧಿಕಾರಿಗಳಿಗೆ ಮಧ್ಯವರ್ತಿಗಳಿಂದ ಸಾಲ ಮಂಜೂರಾತಿಗಾಗಿ…
ತುಮಕೂರು : ಅಧಿಕಾರಿಗಳ ಬೇಜವಾಬ್ದಾರಿಯಿಂದ ನಗರದ 2ನೇ ವಾರ್ಡ್ ಶಿರಾಗೇಟ್‍ನಿಂದ ಸತ್ಯಮಂಗಲ, ದೇವರಾಯನದುರ್ಗ ರಸ್ತೆಯಲ್ಲಿ ಕೊಳಚೆ ನೀರು ಮನೆಗಳಿಗೆ ಮತ್ತು ರಸ್ತೆಗೆ ನುಗ್ಗಿ ಈ ಭಾಗದ ನಾಗರೀಕರು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶಿರಾಗೇಟ್‍ನಿಂದ ಸತ್ಯಮಂಗಲ, ದೇವರಾಯನದುರ್ಗ ರಸ್ತೆಯಲ್ಲಿರುವ ಹೆಚ್.ಕೆ.ಎಸ್. ಕಲ್ಯಾಣ ಮಂಟಪದ ಮುಂಭಾಗದಲ್ಲಿ ದೊಡ್ಡ ರಾಜಗಾಲುವೆ ಇದ್ದು, ಈ ರಾಜಗಾಲುವೆಯನ್ನು ಸ್ಮಾರ್ಟ್‍ಸಿಟಿ ಅಧಿಕಾರಿಗಳು ಮುಚ್ಚಿ, ಚರಂಡಿ ನೀರು ಸರಾಗವಾಗಿ ಹರಿಯಲು ಯೋಜನೆ ರೂಪಿಸದೇ ಅವೈಜ್ಞಾನಿಕ ಕಾಮಗಾರಿ ನಿರ್ವಹಣೆ ಮಾಡಿರುವುದರಿಂದ ಚರಂಡಿ ನೀರು ಈ ಭಾಗದ ಮನೆಗಳಿಗೆ ಮತ್ತು ರಸ್ತೆಗೆ ನುಗ್ಗಿ ಸಂಕಷ್ಟ ಎದರಿಸುವಂತಾಗಿದೆ. ಈ ಬಗ್ಗೆ ಯಾವುದೇ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಈ ಬಗ್ಗೆ ಈ ಭಾಗದ ನಾಗರೀಕರು ಸ್ಮಾರ್ಟ್‍ಸಿಟಿ ಅಧಿಕಾರಿಗಳನ್ನು ಕೇಳಿದರೆ, ಇದು ನಮಗೆ ಸಂಬಂಧಪಟ್ಟಿದ್ದಲ್ಲ, ವಾಟರ್ ಬೋರ್ಡ್‍ನವರಿಗೆ ಸಂಬಂಧಿಸಿದ್ದು, ಅವರು ದುರಸ್ತಿ ಮಾಡಬೇಕಿದೆ ಎನ್ನುತ್ತಾರೆ. ವಾಟರ್‍ಬೋರ್ಡ್‍ನವರನ್ನು ಕೇಳಿದರೆ ಮಹಾನಗರಪಾಲಿಕೆಯ ಜೆಟ್‍ಮಿಷನ್ ಸರಿಯಿಲ್ಲ, ಅದಕ್ಕೆ ಚರಂಡಿ…
ತುಮಕೂರು: ಗ್ರಾಮೀಣ ಪ್ರದೇಶಗಳಿಗೆ ತಾಲ್ಲೂಕು ಆರೋಗ್ಯ ಕೇಂದ್ರಗಳು ಹಾಗೂ ಅಸ್ಪತ್ರೆಗಳು ದೇವಾಲಯಗಳಿಂತಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳು, ಬಡವರು, ದೇವರಂತೆ ಕಾಣಬೇಕು ಎಂದು ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವರಿ ಸಚಿವ, ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲೆಯ ಶಿರಾ ಪಟ್ಟಣದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿರಾ ತಾಲೂಕಿಗೆ ಹಿಂದೆಯೇ ಈ ವ್ಯವಸ್ಥಿತ ಆಸ್ಪತ್ರೆ ಅವಶ್ಯಕ ಇತ್ತು ಇಂದು ತುಮಕೂರು ಜಿಲ್ಲೆಯ ವೈದ್ಯಕೀಯ ಸೇವೆಗಳಲ್ಲಿ ಶಿರಾ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಒಂದು ಮೈಲಿಗಲ್ಲು ಸಾಧಿಸಿದೆ ಸ್ಥಳೀಯವಾಗಿ ಅನೇಕ ಹೆಣ್ಣು ಮಕ್ಕಳ ಶುಶ್ರೂಷೆ ಮತ್ತು ಹೆರಿಗೆಗೆ ಸಹಾಯಕವಾಗುತ್ತದೆ ಎಂದರು. ಕಾಲಕಾಲಕ್ಕೆ ತಪಾಸಣೆ, ಉತ್ತಮ ಚಿಕಿತ್ಸೆಗಳು ಸ್ಥಳೀಯವಾಗಿ ದೊರೆತು ಆಸ್ಪತ್ರೆಗಳಲ್ಲಿ ಹೆರಿಗೆಗೆ ನೊಂದಣಿಯಾದ ಶೇಕಡ 80%ರಷ್ಟು ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆರಿಗೆಗಳಾಗಿ ಜಿಲ್ಲಾ ಮಟ್ಟದ ಆಸ್ಪತ್ರೆಗೆ ಇರುವ…
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ 10 ತಾಲ್ಲೂಕುಗಳಿಂದ 2020-21ನೇ ಸಾಲಿನ ಜನವರಿ ಅಂತ್ಯದ ವೇಳೆಗೆ 6938341 ಮಾನವ ದಿನಗಳು ಸೃಜನೆಯಾಗಿವೆ. ವೈಯಕ್ತಿಕ ಫಲಾನುಭವಿಗಳಿಗೆ ಆದ್ಯತೆಃ ನರೇಗಾ ಯೋಜನೆಯಡಿ ವೈಯಕ್ತಿಕ ಪಲಾನಭವಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈಗಾಗಲೇ ಚಾಲನೆಯಲ್ಲಿರುವ ಕೃಷಿ ಹೊಂಡ, ಕಂದಕಬದು, ಕೃಷಿ ಅರಣ್ಯ, ತೋಟಗಾರಿಕೆ ಬೆಳೆಗಳು, ರೇಷ್ಮೆ ಕೃಷಿ, ಏರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ, ಜಾನುವಾರು ಶೆಡ್ / ಕೋಳಿ ಶೆಡ್ / ಕುರಿ ಶೆಡ್/ ಹಂದಿ ಶೆಡ್ ನಿರ್ಮಾಣ ಕಾಮಗಾರಿಗಳು ಅನುಷ್ಟಾನದಲ್ಲಿವೆ. ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಖಾತರಿಃ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ ಅಕುಶಲ ಕಾರ್ಮಿಕರ ಉದ್ಯೋಗಕ್ಕಾಗಿ ಉದ್ಯೋಗ ಚೀಟಿ ಹೊಂದಿ, ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (ಬರಪೀಡತ ಪ್ರದೇಶಗಳಲ್ಲಿ…
ತುಮಕೂರು : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ 2021ರ ಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೊಸ ನ್ಯಾಯಾಲಯದ ಕಟ್ಟಡದಲ್ಲಿಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಅದರಂತೆ ಮಾರ್ಚ್ 27ರಂದು ಹಮ್ಮಿಕೊಂಡಿರುವ ಬೃಹತ್ ಲೋಕ್ ಅದಾಲತ್‍ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು…
ಹುಳಿಯಾರು: ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಸಿ.ಪಾಳ್ಯದ ಶುದ್ಧ ನೀರಿನ ಘಟಕ ಕೆಟ್ಟು ಎರಡ್ಮೂರು ತಿಂಗಳಾಗಿದ್ದು ತಕ್ಷಣ ದುರಸ್ಥಿ ಮಾಡಿ ಪುಣ್ಯ ಕಟ್ಕೊಳ್ಳಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಕೆ.ಸಿ.ಪಾಳ್ಯ ಗ್ರಾಮದ ಇನ್ನೂರಕ್ಕೂ ಹೆಚ್ಚು ಮನೆಗಳೂ ಸೇರಿದಂತೆ ಸಮೀಪದ ಲಿಂಗಪ್ಪನಪಾಳ್ಯ, ಗೌಡಗೆರೆ, ಸೋಮಜ್ಜನಪಾಳ್ಯದ ಜನರಿಗೆ ಈ ಶುದ್ಧ ನೀರಿನ ಘಟಕ ನೀರು ಪೂರೈಸುತ್ತಿತ್ತು. ಆದರೆ ಈಗ ಈ ಘಟಕ ಕೆಟ್ಟಿದ್ದು ಶುದ್ಧ ನೀರಿಗೆ ಜನ ಪರದಾಡುವಂತ್ತಾಗಿದೆ. ಪರಿಣಾಮ ಮೂರ್ನಲ್ಕು ಕಿ.ಮೀ.ದೂರದ ಕೆಂಕೆರೆ ಗ್ರಾಮಕ್ಕೆ ಹೋಗಿ ನೀರು ತರುವ ಅನಿವಾರ್ಯತೆ ನಿರ್ಮಾಣವಾಗಿದೆ. ಬೈಕು, ಸೈಕಲ್ ಉಳ್ಳವರು ಕೆಂಕೆರೆಗೆ ಹೋಗಿ ಬರುತ್ತಿದ್ದು ಇಲ್ಲದವರು ಪಂಚಾಯ್ತಿಯ ಕೊಳಾಯಿ ನೀರು ಕುಡಿಯುತ್ತಿದ್ದಾರೆ. ಈ ಫಿಲ್ಟರ್ ಪದೇ ಪದೇ ಕೆಡುತ್ತಿದ್ದು ಒಮ್ಮೆ ಕೆಟ್ಟರೆ ಎರಡ್ಮೂರು ತಿಂಗಳು ದುರಸ್ಥಿ ಮಾಡದೆ ನಿರ್ಲಕ್ಷ್ಯಿಸುತ್ತಾರೆ. ಪಂಚಾಯ್ತಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಹೇಳಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ. ಹಾಗಾಗಿ…











