ತುಮಕೂರು : ಅಕ್ಷರ ದಾಸೋಹ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಮಾರ್ಚ್ ಮಾಹೆಯೊಳಗೆ ಖರ್ಚು ಮಾಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಇಲಾಖೆಗಳಿಗೆ ಸರ್ಕಾರ ನೀಡಿರುವ ಅನುದಾನವನ್ನು ವ್ಯರ್ಥ ಮಾಡದೇ, ಜಿಲ್ಲಾ ಪಂಚಾಯತ್ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಕೈಗೊಂಡು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೋವಿಡ್-19 ನಂತರ ಶಾಲೆ ಆರಂಭವಾದ ಮೇಲೆ ಶಾಲೆಯ ವಾತಾವರಣ, ಮಕ್ಕಳು ಮತ್ತು ಪೋಷಕರ ಅಭಿಪ್ರಾಯಗಳ ಬಗ್ಗೆ ಡಿಡಿಪಿಐಗಳಿಗೆ ಪ್ರಶ್ನಿಸಿದಾಗ ಇದಕ್ಕೆ ಉತ್ತರಿಸಿದ ಡಿಡಿಪಿಐಗಳು, ಶಾಲೆ ಆರಂಭವಾದಗಿನಿಂದ ಶೇ.70ರಷ್ಟು ಹಾಜರಾತಿಯಿದ್ದು, ಮಕ್ಕಳು ಉತ್ಸುಕರಾಗಿಯೇ ಶಾಲೆಗೆ ಬರುತ್ತಿದ್ದಾರೆ. ಇದರಿಂದ ಮಕ್ಕಳ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಬಲವಂತವಾಗಿ ಯಾವ ಮಕ್ಕಳನ್ನು…
Author: News Desk Benkiyabale
ಮಧುಗಿರಿ : ದ್ವಿಚಕ್ರ ವಾಹನ ಸವಾರನೊಬ್ಬ ಆಕಸ್ಮಿಕವಾಗಿ ರಸ್ತೆಯಲ್ಲಿ ಬಿದ್ದಿದನ್ನು ಕಂಡು ತಹಶೀಲ್ದಾರ್ ಡಾ. ಜಿ. ವಿಶ್ವನಾಥ್ ರವರು ವಾಹನ ಸವಾರನಿಗೆ ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಪುರವರ ಹೋಬಳಿಯ ಬ್ಯಾಲ್ಯ ಗ್ರಾಮಕ್ಕೆ ಕಾರ್ಯದ ನಿಮಿತ್ತ ಭೇಟಿ ನೀಡುವಾಗ ಮರಬಹಳ್ಳಿ ಕೋಡಗದಾಲ ಗ್ರಾಮಗಳ ಮಧ್ಯೆ ಹಾದುಹೋಗಿರುವ ಗೌರಿಬಿದನೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಬಿದ್ದಂತಹ ದ್ವಿಚಕ್ರವಾಹನವನ್ನು ಮೇಲಕ್ಕೆತ್ತಿ ವಾಹನ ಸವಾರನ ಯೋಗಕ್ಷೇಮ ವಿಚಾರಿಸಿ ಸವಾರನ ಸಂಭಂಧಿಕರಿಗೆ ದೂರವಾಣಿ ಕರೆ ಮಾಡಿ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಸರಳ ಸಜ್ಜನಿಕೆಯ ಸರ್ಕಾರಿ ಅಧಿಕಾರಿಯಾಗಿರುವ ತಹಶೀಲ್ದಾರ್ ರವರು ಬಡ ಕುಟುಂಬದಿಂದ ಬಂದವರಾಗಿದ್ದು, ಸರ್ಕಾರಿ ಸೇವೆಗೂ ಮೊದಲು ತಮ್ಮ ಪದವಿ ಪೂರ್ವ ವಿದ್ಯಾಭ್ಯಾಸದ ಸಮಯದಲ್ಲಿ ಪತ್ರಿಕೆಗಳನ್ನು ಹಂಚುವ ಕೆಲಸ ಮಾಡಿದ್ದರು. ಇವರು ತಾಲ್ಲೂಕಿನಲ್ಲಿ ಅನೇಕ ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಜನ ಸ್ನೇಹಿ ಅಧಿಕಾರಿಯಾಗಿದ್ದಾರೆ.ತಹಶಿಲ್ದಾರರ…
ತುಮಕೂರು : ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಮಾರ್ಚ್ 23ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಜಿಲ್ಲೆಯ ಸುಪ್ರಸಿದ್ಧ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವವು ಶಾಸ್ತ್ರೋಕ್ತವಾಗಿ ಜರುಗಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪುಣ್ಯ ಪ್ರಸಿದ್ಧಿಯಾಗಿರುವ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವುದರಿಂದ ಬರುವ ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-19 ನಿಯಾಮಾವಳಿಗಳು ಕಡ್ಡಾಯವಾಗಿ ಪಾಲನೆಯಾಗಬೇಕು ಎಂದರು. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳು/ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಕೋವಿಡ್-19 ನಿಯಮಗಳನ್ನು ಪಾಲಿಸಬೇಕು. ಜಾತ್ರಾ ಸಮಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯವರು ಅಗತ್ಯ ಔಷಧಿ, ಸಿಬ್ಬಂದಿ, ಆಂಬುಲೆನ್ಸ್, ವ್ಯವಸ್ಥೆ ಮಾಡಬೇಕು. ಜಾತ್ರೆಯಲ್ಲಿ ಭಕ್ತಾದಿಗಳಿಗೆ ನೀಡುವ ಆಹಾರ(ಪ್ರಸಾದ)ವನ್ನು ತಪಾಸಣೆ ಮಾಡಬೇಕು. ವೈದ್ಯರು,…
ತಿಪಟೂರು : ಕಳೆದ 11 ದಿನಗಳಿಂದ ಸೂಕ್ತ ಅಂಡರ್ಪಾಸ್‍ಗಾಗಿ ನಗರದ ಕೆಂಚರಾಯ ನಗರ, ಬಿಳಿಕಲ್ಲ ನಗರ, ಹಳೆಪಾಳ್ಯದ ಸಾರ್ವಜನಿಕರು ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸುತ್ತಿದ್ದು, ಬಿ.ಜೆ.ಪಿ ಮುಖಂಡ ಲೋಕೇಶ್ವರ್ ಹಾಗೂ ರಾಷ್ಟ್ರೀಯ ಹೆದ್ದಾರಿ 206ರ ಯೋಜನಾಧಿಕಾರಿ ಶಿರೀಷ್ ಗಂಗಾಧರ್ ಸ್ಥಳಕ್ಕೆ ಭೇಟಿ ನೀಡಿ ಇನ್ನು 30 ದಿನಗಳಲ್ಲಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶಿವಮೊಗ್ಗ ಹಾಗೂ ತುಮಕೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಚತುಷ್ಪತ ಕಾಮಾಗಾರಿಯು ನಡೆಯುತ್ತಿದ್ದು ಈ ಕಾಮಗಾರಿಯಲ್ಲಿ ನಿರ್ಮಾಣವಾಗಿರುವ ರಸ್ತೆಯಿಂದ ನಗರದ ಹಳೆಪಾಳ್ಯ ಹಾಗೂ ಕೆಂಚರಾಯನಗರ, ಬಿಳಿಕಲ್ಲುನಗರ ಹಾಗೂ ಗೆದ್ಲೇಹಳ್ಳಿಯ ಜನರು ರಸ್ತೆಯನ್ನು ದಾಟಲು ಸುಮಾರು 1.5 ಕಿಮೀ ಸುತ್ತಿಬಳಸಿ ಬರಬೇಕು ಹಾಗೂ ಶಾಲೆಗಾಗಿ ಮಕ್ಕಳನ್ನು ಕರೆದುಕೊಂಡು ಹೋಗಲು ಸಾಧ್ಯವಾಗುವುದರ ಜೊತೆಗೆ ಕೂಲಿಕೆಲಸಕ್ಕೆ ಹೋಗುವ ಸಾಮಾನ್ಯ ಕೂಲಿಕಾರರು ಕಾಲ್ನಡಿಗೆಯಲ್ಲಿ ತಮ್ಮ ಕಾರ್ಯಸ್ಥಳವನ್ನು ತಲುಪುವ ವೇಳೆಗೆ ಸುಸ್ತಾಗುತ್ತಾರೆ. ಆದ್ದರಿಂದ ಇಲ್ಲಿ ನಮಗೆ ಅಂಡರ್ಪಾಸ್ ನಿರ್ಮಿಸಿಕೊಡಬೇಕೆಂದು ಸ್ಥಳೀಯರು ಕಳೆದ 11 ದಿನಗಳಿಂದ ಧರಣಿ…
ಮಧುಗಿರಿ: ಮಧುಗಿರಿ ಜಿಲ್ಲೆಯಾಗಲು ಎಲ್ಲಾ ಅರ್ಹತೆ ಇದ್ದು ಸರ್ಕಾರವನ್ನು ಕೇಳೋರು ಇಲ್ಲದ ಕಾರಣ ನೆನೆಗುದಿಗೆ ಬಿದ್ದಂತಾಗಿದೆ ಎಂದು ಮಾಜಿ ಶಾಸಕ ಕೆ .ಎನ್. ರಾಜಣ್ಣ ತಿಳಿಸಿದರು. ಪಟ್ಟಣದಲ್ಲಿರುವ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವಾತಂತ್ರ ಪೂರ್ವದಲ್ಲೇ ಉಪವಿಭಾಗಾಧಿಕಾರಿ ಕಚೇರಿ ಇದ್ದು.ಡಾ. ನಂಜುಂಡಪ್ಪ ವರದಿ ಆಧಾರಿತ ಅತಿ ಹಿಂದುಳಿದ ತಾಲ್ಲೂಕುಗಳಾದ ಮಧುಗಿರಿ- ಪಾವಗಡ- ಶಿರಾ- ಕೊರಟಗೆರೆ ತಾಲ್ಲೂಕುಗಳು ಸೇರಿ ಉಪವಿಭಾಗ ಕೇಂದ್ರವಾಗಿದ್ದು, ಈಗಾಗಲೇ ಶೈಕ್ಷಣಿಕ ಜಿಲ್ಲೆ ಆಗಿರುವುದರಿಂದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಖಜಾನೆ ಕಚೇರಿ ಹೊರತುಪಡಿಸಿ ಎಲ್ಲಾ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಮೂವತ್ತೊಂದನೇ ಜಿಲ್ಲೆಯಾಗಿ ವಿಜಯನಗರ ಘೋಷಣೆಯಾಗಿದ್ದು ತುಂಕೂರು ಜಿಲ್ಲೆ ಅತಿ ದೊಡ್ಡ ಜಿಲ್ಲೆ ಯಾಗಿದೆ. ಇದನ್ನು ವಿಭಜಿಸಿ ಮಧುಗಿರಿ ಜಿಲ್ಲೆಯನ್ನಾಗಿಸಿ ಎಂದು ಸರ್ಕಾರವನ್ನು ಕೇಳಬೇಕಾದ ಇಲ್ಲಿನ ಶಾಸಕರು ಸಿಲ್ಲಿ ವಿಚಾರವಾಗಿ ಚಂದ್ರಗಿರಿ ಗ್ರಾಮಪಂಚಾಯಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕ ಸ್ಥಾನದ ಗೌರವವನ್ನು ಕಳೆದಿದ್ದಾರೆಂದು ಆರೋಪಿಸಿದರು. ತುಮಕೂರು- ರಾಯದುರ್ಗ ನಡುವಿನ ರೈಲ್ವೆ…
ತುಮಕೂರು: ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ಕವಿತಾರಮೇಶ್ ಅಧ್ಯಕ್ಷತೆಯಲ್ಲಿ ಮಂಗಳವಾರ ತಾ.ಪಂ. ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಅಭಿವೃದ್ಧಿ ಕುರಿತು ಗಂಭೀರ ಚರ್ಚೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆಯೇ ತಾಪಂ ಸದಸ್ಯ ಸುರೇಶ್ ಹಿರೇಹಳ್ಳಿ ಭಾಗದಲ್ಲಿ ಕುಡಿಯುವ ನೀರಿನ ತತ್ವಾರ ಹೆಚ್ಚಾಗಿದ್ದು, ಇರುವ ಕೆಲವು ಬೋರ್‍ವೆಲ್‍ಗಳು ಬತ್ತಿಹೋಗಿದ್ದರೆ, ಇನ್ನೂ ಕೆಲವು ಬೋರ್‍ವೆಲ್‍ಗಳನ್ನು ದುರಸ್ಥಿ ಮಾಡಬೇಕಾಗಿದೆ. ಕೂಡಲೇ ಅಧಿಕಾರಿಗಳು ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕೆಂದು ಸಭೆಯಲ್ಲಿ ಒತ್ತಾಯಿಸಿದರು. ಇದಕ್ಕೆ ತಾಪಂ ಅಧ್ಯಕ್ಷೆ ಕವಿತಾ ರಮೇಶ್ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭವಾಗಿದೆ. ತಾಪಂ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿಗೆ ಮೊದಲ ಆಧ್ಯತೆ ನೀಡಬೇಕು, ಅಧಿಕಾರಿಗಳು ಜವಾಬ್ದಾರಿ ವಹಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ಎಲ್ಲಿಯೂ ನೀರಿನ ಸಮಸ್ಯೆ ಕಂಡುಬರದಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ರಾಗಿ ಖರೀದಿ ಕೇಂದ್ರಗಳು ಇನ್ನೂ ಆರಂಭವಾಗದ ಕಾರಣ…
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಗ್ರಾಮದ ಎಚ್.ಎಸ್. ಅನಂದಮೂರ್ತಿ ಅವರಿಗೆ ಸೇರಿದ ತೋಟದ ಮನೆಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಹೆಂಚಿನ ಮನೆಯಲ್ಲಿದ್ದ 23 ಸಾವಿರ ಕೊಬ್ಬರಿ, ಮನೆ ನಿರ್ಮಾಣಕ್ಕೆ ಇಟ್ಟಿದ್ದ ಬೇವಿನ ಮುಟ್ಟುಗಳು ಸೇರಿದಂತೆ ಅಗತ್ಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತುಮಕೂರು : ಕೆಎಸ್ಸಾರ್ಟಿಸಿ ಸಿಬ್ಬಂದಿಗಳು ನೇತ್ರ ಮತ್ತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್ ಬಸವರಾಜು ಸಲಹೆ ನೀಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ತುಮಕೂರು ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ನೇತ್ರ ಹಾಗೂ ಆರೋಗ್ಯ ತಪಾಸಣ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ (ದಿ:18-01-2021 ರಿಂದ ದಿ:17-02-2021 ರವರೆಗೆ)“ರಸ್ತೆ ಸುರಕ್ಷತೆ-ಜೀವನ ರಕ್ಷೆ”“( Sadak Suraksha-Jeevan Raksha )” ಹಾಗೂ ಇಂಧನ ಉಳಿತಾಯ ಮಾಸಿಕ (16-01-2021 ರಿಂದ 15-02-2021 ರವರೆಗೆ) ಆಚರಣೆ ಮಾಡಿ ಅಪಘಾತಗಳನ್ನು ಕಡಿಮೆಗೊಳಿಸುವ ಅನೇಕ ಕಾರ್ಯಕ್ರಮ, ಶಿಬಿರಗಳನ್ನು ಘಟಕಮಟ್ಟದಲ್ಲಿ ನಡೆಸಲಾಗಿದೆ ಎಂದು ತಿಳಿಸಿದರು. ದ್ವಿಚಕ್ರ ವಾಹನ ಸವಾರರು/ ಪಾದಚಾರಿಗಳ ನಡುವೆ ಹೆಚ್ಚಿನ ಅಪಘಾತ ಸಂಭವಿಸುತ್ತಿದ್ದು, ಸಂಸ್ಥೆಯ ಚಾಲಕರು ರಸ್ತೆಯಲ್ಲಿ ಸಂಚರಿಸುವ ಪಾದಚಾರಿ ಮತ್ತು ದ್ವಿಚಕ್ರ ವಾಹನಗಳನ್ನು (ಲಘು ವಾಹನಗಳು) ಸೂಕ್ಷ್ಮವಾಗಿ ನಿಗಾವಹಿಸಿ ಎಚ್ಚರಿಕೆಯಿಂದ ವಾಹನ ಚಾಲನೆ…
ಗುಬ್ಬಿ: ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಜಾತಿಗೊಂದು ನಿಗಮ ರಚನೆಯ ಭರವಸೆ ನೀಡಿದ್ದರ ಫಲ ಎಲ್ಲಾ ಜನಾಂಗಗಳೂ ಮೀಸಲಾತಿ ಹೋರಾಟ ಆರಂಭಿಸಿವೆ. ಜಾತಿ ಮೀಸಲಾತಿ ಬಗ್ಗೆ ನಡೆದಿರುವ ಹೋರಾಟಗಳಿಗೆ ನೇರ ಬಿಜೆಪಿ ಸರ್ಕಾರ ಕಾರಣ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ನೇರ ವಾಗ್ಧಾಳಿ ನಡೆಸಿದರು. ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರ್ಗಗಳ ಸೇರ್ಪಡೆಗೆ ಒಂದೊಂದೇ ಜಾತಿಗಳು ಹೋರಾಟಕ್ಕೆ ಮುಂದಾಗಿದೆ. ಬೇಡಜಂಗಮ, ಕುರುಬ ಸಮುದಾಯ ಹಾಗೂ ಪಂಚಮಸಾಲಿ ಲಿಂಗಾಯಿತ ಸಮಾಜ ಕೂಡಾ ಪಾದಯಾತ್ರೆ ಮೂಲಕ ಹೋರಾಟ ನಡೆಸಿದೆ. ಈ ಹೋರಾಟಕ್ಕೆ ಬಿಜೆಪಿ ಸರ್ಕಾರದ ಮಾತುಗಳೇ ಕಾರಣ. ಹೀಗೆ ನಡೆದಂತೆ ನಮ್ಮ ಸಮಾಜ ಎತ್ತ ಸಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸರ್ವ ತ್ಯಾಗ ಮಾಡಿದ ಸ್ವಾಮೀಜಿಗಳು ಒಂದು ಜಾತಿಗೆ ಮೀಸಲಾಗಿ ಹೋರಾಟ ಮಾಡುವುದು ಸರಿಯಲ್ಲ. ಈಗಾಗಲೇ ಹೋರಾಟ ನಿರಂತರ ನಡೆದಿರುವ ಸಂದರ್ಭದಲ್ಲಿ ಒಕ್ಕಲಿಗರಿಗೂ ಮೀಸಲು ನೀಡಬೇಕಿದೆ ಎಂಬ ಡಿಸಿಎಂ…
ತುಮಕೂರು : 2021ರ ಜನವರಿ 31ರ ಅಂತ್ಯಕ್ಕೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ 131 ವಾಹನ ಸವಾರರ ವಾಹನ ಪರವಾನಗಿ ಅಮಾನತ್ತುಗೊಳಿಸಲಾಗಿದ್ದು, ಹೆಚ್ಚು ತಪಾಸಣೆ ನಡೆಸುವ ಮೂಲಕ ಸಂಚಾರ ಸುರಕ್ಷತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪೊಲೀಸ್, ಲೋಕೋಪಯೋಗಿ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 48, 206, 75ರಲ್ಲಿ 54 ಅಪಘಾತ ವಲಯ(ಬ್ಲ್ಯಾಕ್ ಸ್ಪಾಟ್) ಹಾಗೂ ರಾಜ್ಯ ಹೆದ್ದಾರಿ 3 ಮತ್ತು 33ರಲ್ಲಿ 18 ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಈ ಅಪಘಾತ ವಲಯಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಜಂಟಿ ಸಮೀಕ್ಷೆಯಲ್ಲಿರುವ ವರದಿಯನ್ವಯ ರಸ್ತೆ ಉಬ್ಬು, ಸೂಚನಾ ಫಲಕ ಹಾಗೂ ಕ್ಯಾಟ್‍ಐಸ್ ದೀಪ ಅವಳವಡಿಸುವ ಕಾರ್ಯವನ್ನು ಮಾರ್ಚ್ 15ರೊಳಗೆ ಪೂರ್ಣಗೊಳಿಸಿ ಅನುಪಾಲನಾ ವರದಿ…











