ಕೊರಟಗೆರೆ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಶಾಲೆ ಮುಗಿಸಿ ತನ್ನ ತಂದೆಯೊಡನೆ ಮನೆಗೆ ವಾಪಾಸ್ಸು ಆಗುತ್ತಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಪಟ್ಟಣದ ದೊಡ್ಡೇಗೌಡ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು ತುಮಕೂರು ಮಾರ್ಗದಿಂದ ವೇಗವಾಗಿ ಬಂದ ದ್ವಿಚಕ್ರ ವಾಹನ ಮತ್ತು ಶಾಲೆ ಮುಗಿಸಿಕೊಂಡು ತಂದೆಯೊಟ್ಟಿಗೆ ಊರಿಗೆ ಹಿಂತಿರುತ್ತಿದ್ದ ದ್ವಿ ಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ ಎಂದು ತಿಳಿದು ಬಂದಿದೆ. ತಾಲ್ಲೂಕಿನ ಸಿ.ಎನ್ ದುರ್ಗ ಹೋಬಳಿಯ ಮಾಲಿಂಗನಹಟ್ಟಿ ಗ್ರಾಮದ ವಾಸಿ ಗೋಪಾಲಕೃಷ್ಣ ತನ್ನ ಮಗಳನ್ನು ಶಾಲೆಯಿಂದ ಕರೆದುಕೊಂಡು ಹೋಗುವಾಗ ಈ ಘಟನೆ ನಡೆದಿದ್ದು, 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವರ್ಷಿತಾ(12ವರ್ಷ)ಎಂಬ ವಿದ್ಯಾರ್ಥಿನಿಯೇ ಅಪಘಾತದಲ್ಲಿ ಸಾವಿಗೀಡಾದ ದುರ್ದೈವಿಯಾಗಿದ್ದು, ತಂದೆಗೆ ತೀವ್ರ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.…
Author: News Desk Benkiyabale
ತುಮಕೂರು : ನಗರ ಪೊಲೀಸ್ ಠಾಣಾ ವ್ಯಾಪ್ತಿ ಬಿ.ಎಸ್.ಎನ್.ಎಲ್. ಕಛೇರಿ ಮುಂಭಾಗ ಅಸ್ವಸ್ಥನಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಜನವರಿ 13ರಂದು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜನವರಿ 24ರಂದು ವ್ಯಕ್ತಿಯು ಮೃತಪಟ್ಟಿದ್ದು, ಈತನ ವಾರಸುದಾರರ ಬಗ್ಗೆ ಮಾಹಿತಿಯಿರುವುದಿಲ್ಲ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಮೃತ ವ್ಯಕ್ತಿಯು ಚಿಕಿತ್ಸೆ ಪಡೆಯುವಾಗ ತನ್ನ ಹೆಸರು ಗುಂಡಪ್ಪ ಬಿನ್ ಬಸವರಾಜು, 70 ವರ್ಷ ವಯಸ್ಸು, ಕಡೂರು ತಾಲೂಕು, ಪಂಚನಹಳ್ಳಿ ಗ್ರಾಮದ ವಾಸಿ ಎಂದು ತಿಳಿಸಿದ್ದಾನೆ. ಸುಮಾರು 150 ಸೆ.ಮೀ ಎತ್ತರ, ಬಡಜಕಲು ಶರೀರ, ಎಣ್ಣೆಗೆಂಪು ಮೈಬಣ್ಣ ಹೊಂದಿರುವ ಮೃತನ ಮೈ ಮೇಲೆ ನೀಲಿ ಬಣ್ಣದ ತುಂಬು ತೋಳಿನ ಜೀನ್ಸ್ ಷರ್ಟ್ ಇರುತ್ತದೆ. ಈತನ ವಾರಸುದಾರರು ಯಾರಾದರೂ ಇದ್ದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.
ಗುಬ್ಬಿ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದು ಶಿಕ್ಷಾರ್ಹ ಅಪರಾಧ. ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ವಜ ವಿರೂಪಗೊಳಿಸಿದ ಪ್ರಕರಣ ವರ್ಷವಾದರೂ ವಿಳಂಭ ಅನುಸರಿಸಿರುವುದು ಸರಿಯಲ್ಲ. ತಾಲ್ಲೂಕು ಆಡಳಿತ ಮತ್ತು ಶಿಕ್ಷಣ ಇಲಾಖಾಧಿಕಾರಿಗಳು ತನಿಖೆ ತೀವ್ರಗೊಳಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಪ್ರಕರಣ ಅಂತ್ಯ ಕಾಣಿಸಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯೋಧರನ್ನು ಸನ್ಮಾನಿಸಿ ಮಾತನಾಡಿದ ಅವರು ಧ್ವಜ ಪ್ರಕರಣ ವಿಳಂಬವೇ ಪ್ರಶ್ನಾತೀತವಾಗಿದೆ. ಮೂರು ಇಲಾಖೆಗಳು ಈ ಪ್ರಕರಣಕ್ಕೆ ತ್ವರಿತ ಅಂತ್ಯ ಕಾಣಿಸಲು ಮೀನಾಮೇಷ ಎಣಿಸಿವೆ. ಜವಾಬ್ದಾರಿಯಿಂದ ನುಣಚಿಕೊಳ್ಳದೇ ಶೀಘ್ರದಲ್ಲಿ ತನಿಖೆ ಪೂರ್ಣಗೊಳಿಸಲು ತಹಸೀಲ್ದಾರ್ ಅವರಿಗೆ ಸೂಚಿಸಿದರು. ಶೋಷಿತವರ್ಗವನ್ನು ಮೇಲೆತ್ತುವ ಮಹತ್ತರ ಆಶಯ ಸಂವಿಧಾನದ್ದಾಗಿದೆ. 70 ವರ್ಷ ಕಳೆದರೂ ಇನ್ನೂ ಸಮಾಜದಲ್ಲಿ ಸಮಾನತೆ ಸಾಧಿಸಲಾಗಿಲ್ಲ. ಮೇಲುಕೀಳು, ಜಾತಿ ಮತ ನಿತ್ಯ ಶೋಷಣೆಯಾಗಿ ಬಿಂಬಿತವಾಗುತ್ತಿದೆ. ಶಿಕ್ಷಣದ ಮೂಲಕ ಸಮಾನತೆ ಸಾಧಿಸಲು ಎಲ್ಲಾ…
ತುಮಕೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ದೊಡ್ಡಮನೆ ನರ್ಸಿಂಗ್ ಹೋಂ ಮುಂದಾಗಿದ್ದು, 50 ವರ್ಷ ವೈದ್ಯಕೀಯ ಸೇವೆ ಸಲ್ಲಿಸಿರುವ ಡಾ.ಹನುಮಕ್ಕ ಅವರ ಸೇವೆ ಅನನ್ಯವಾದದ್ದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದರು. ನಗರದ ದೊಡ್ಡಮನೆ ನರ್ಸಿಂಗ್ ಹೋಂನಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕೀಲುಮೂಳೆ ಮತ್ತು ಬೆನ್ನುಮೂಳೆ ಚಿಕಿತ್ಸಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೊಡ್ಡಮನೆ ನರ್ಸಿಂಗ್ ಹೋಂನ ಮುಖ್ಯಸ್ಥರಾಗಿರುವ ಡಾ.ಹನುಮಕ್ಕ ಅವರ ಸೇವೆಯಲ್ಲಿ 50 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿದ್ದಾರೆ, ಅವರೇ ದೊಡ್ಡ ಸಂಸ್ಥೆಯಾಗಿದ್ದಾರೆ ಎಂದರು. ಸುತ್ತಮುತ್ತಲ ಜಿಲ್ಲೆಯ ಜನರಿಗೆ ಉತ್ತಮ ಚಿಕಿತ್ಸೆಯನ್ನು ನೀಡುತ್ತಿರುವ ದೊಡ್ಡಮನೆ ನರ್ಸಿಂಗ್ ಹೋಂನಲ್ಲಿ ಪ್ರಾರಂಭಗೊಂಡಿರುವ ಅತ್ಯಾಧುನಿಕ ಐಸಿಯು, ಎಕ್ಸರೇ ಘಟಕದಿಂದ ಗುಣಮಟ್ಟದ ಚಿಕಿತ್ಸೆ ದೊರೆಯುವಂತಾಗಿದ್ದು, ಡಾ.ಹನುಮಕ್ಕ ಅವರ ತಂಡಕ್ಕೆ ಶುಭ ಹಾರೈಸಿದರು. ಸರ್ಕಾರಕ್ಕೆ ಸಮಸ್ಯೆ ಇಲ್ಲ: ಖಾತೆ ಬದಲಾವಣೆಯಲ್ಲಿ ಗೊಂದಲ ಉಂಟಾಗಿರುವುದು…
ಹುಳಿಯಾರು: ಕಳೆದ ವಾರ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರ ಸಮ್ಮುಖದಲ್ಲಿ ಕುಟುಂಬ ಸಮೇತ ಬಿಜೆಪಿ ಸೇರಿದ್ದ ಹಂದನಕೆರೆ ಹೋಬಳಿಯ ಬೊಮ್ಮೇನಹಳ್ಳಿಯ ಉದ್ಯಮಿ ಮಂಜುನಾಥ್ ಅವರು ಈಗ ಯೂ ಟರ್ನ್ ಹೊಡೆದಿದ್ದಾರೆ. ಹಂದನಕೆರೆ ಹೋಬಳಿಯ ಬೊಮ್ಮೇನಹಳ್ಳಿಯ ಉದ್ಯಮಿ ಮಂಜುನಾಥ್ ಅವರು ತಮ್ಮ ತಾಯಿ ವಿಎಸ್‍ಎಸ್‍ಎನ್ ಸದಸ್ಯರಾದ ಶಿವಮ್ಮ ಹಾಗೂ ಪತ್ನಿ ಗ್ರಾಪಂ ಸದಸ್ಯೆ ರಮ್ಯಾ ಅವರೊಂದಿಗೆ ಇತ್ತೀಚೆಗಷ್ಟೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ದೊಡ್ಡಎಣ್ಣೇಗೆರೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಕೈ ಜೋಡಿಸುವುದಾಗಿ ಹೇಳಿ ಮಾಧುಸ್ವಾಮಿ ಬೆಂಬಲಿಗರೊಂದಿಗೆ ವಾರದಿಂದ ಇದ್ದ ಮಂಜುನಾಥ್ ಮೀಸಲಾತಿ ಪ್ರಕಟಗೊಂಡ ನಂತರ ತಮ್ಮ ನಿಲುವು ಬದಲಾಯಿಸಿ ಜೆಡಿಎಸ್ ತೆಕ್ಕೆಗೆ ಸೇರಿಕೊಂಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಾಜಿ ಶಾಸಕ ಸಿ.ಬಿ.ಸುರೇಶ್‍ಬಾಬು ಅವರೊಂದಿಗೆ ತಮ್ಮ ಪತ್ನಿ ರಮ್ಯಾ ಜೊತೆ ಮಂಜುನಾಥ್ ಕಾಣಿಸಿಕೊಂಡಿದ್ದಾರೆ. ಮೊದಲ ಅವಧಿಯ ದೊಡ್ಡಎಣ್ಣೇಗೆರೆಯ ಅಧ್ಯಕ್ಷರ ಮೀಸಲಾತಿ ಬಿಸಿಎಂ ಬಿ ಜಾತಿಗೆ ಮೀಸಲಾಗಿದ್ದು ಜೆಡಿಎಸ್ ಹಾಗೂ ಕೆಎಸ್‍ಕೆ ಬಿಜೆಪಿ ಬಣದಿಂದ ರಮ್ಯಾ ಮಂಜುನಾಥ್…
ಹುಳಿಯಾರು : ಪ್ರಥಮ ದರ್ಜೆ ಕಾಲೇಜು ಸಿಬ್ಬಂದಿ ಕೊರತೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಿಂದಲೇ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾದ ಪ್ರದೀಪ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದೆ. ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸಚಿವರೂ ಆದ ಜೆ.ಸಿ.ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದೀರ್ಘ ಕಾಲದ ಕೋವಿಡ್ ರಜೆಯ ನಂತರ ಆರಂಭವಾದ ಕಾಲೇಜಿನ ಅಭಿವೃದ್ಧಿಯ ಬಗ್ಗೆ ಚರ್ಚಿಸಲು ಸೋಮವಾರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರಾಚಾರ್ಯ ಬಿಳಿಗೆರೆ ಕೃಷ್ಣಮೂರ್ತಿ ಅವರು ಡೆಪ್ಯೂಟೆಷನ್ ಮೇರೆಗೆ ಡಿ ಗ್ರೂಪ್ ನೌಕರರು ಬೇರೆಬೇರೆ ಕಾಲೇಜುಗಳಿಗೆ ತೆರಳಿರುವುದಿಂದ ಕಾಲೇಜಿನ ಸುಗಮ ಕೆಲಸ ಕಾರ್ಯಗಳಿಗೆ ತೊಡಕಾಗಿದೆ. ಹಾಗಾಗಿ ಕಾಲೇಜು ಅಭಿವೃದ್ಧಿ ಸಮಿತಿ ಹಣದಲ್ಲಿ ಡಿ ಗ್ರೂಪ್ ಸಿಬ್ಬಂದಿ ನೇಮಕಕ್ಕೆ ಅವಕಾಶವಿದ್ದು ನೇಮಿಸಿಕೊಳ್ಳಲು ಸಭೆ…
ತುಮಕೂರು : ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸಿ, ಎಲ್ಲರಿಗೂ ಎಲ್ಲರಂತೆ ಬಾಳುವ ಹಕ್ಕು ನೀಡಿ ವಿಶ್ವದಲ್ಲಿಯೇ ವಿಶಿಷ್ಟ ಹೆಗ್ಗಳಿಕೆ ಪಡೆದಿರುವ ದೇಶದ ಸಂವಿಧಾನದ ಆಶಯ ಹಾಗೂ ಸ್ವಾತಂತ್ರ್ಯ ಭಾರತದ ನೈಜ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯೋಣ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿಂದು ಹಮ್ಮಿಕೊಂಡಿದ್ದ 72ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಅವರು ಸಂದೇಶ ನೀಡಿದರು. ದೇಶವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಲು ಮಹಾತ್ಮಗಾಂಧೀಜಿ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಉದಾತ್ತ ಧ್ಯೇಯವನ್ನಿಟ್ಟುಕೊಂಡು ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಅವರು ಹಾಕಿಕೊಟ್ಟ ಮಾದರಿ ಹಾದಿಯಲ್ಲಿ ನಡೆಯೋಣ, ಸ್ವಾತಂತ್ರ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸೋಣ ಎಂದು ನುಡಿದರು. ದೇಶದಲ್ಲಿ ಆಹಾರ ಮತ್ತು ಶೈಕ್ಷಣಿಕ ಕ್ರಾಂತಿಯಾಗಿದೆ. ವಿಶ್ವದಲ್ಲಿ ಭಾರತವು ಆಹಾರ ಸಾಮಾಗ್ರಿ ಶೇಖರಣೆಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಭವಿಷ್ಯದಲ್ಲಿ ಎದುರಾಗಬಹುದಾಗಿದ್ದ ಆಹಾರ ಸಮಸ್ಯೆ ಆತಂಕ…
ತುಮಕೂರು : ಜಿಲ್ಲಾದ್ಯಂತ ಜನವರಿ 30 ರಿಂದ ಫೆಬ್ರುವರಿ 13ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಆಚರಿಸಲಾಗುತ್ತಿದ್ದು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಕುಷ್ಠರೋಗ ಪತ್ತೆ ಹಾಗೂ ರೋಗದ ನಿಯಂತ್ರಣದ ಬಗ್ಗೆ ಹಾಗೂ ಅಗತ್ಯ ಕ್ರಮಗಳನ್ನು ಈ ಆಂದೋಲನದಲ್ಲಿ ನಡೆಸಲು ಸೂಚಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು 15 ದಿನಗಳ ಕಾಲ ನಡೆಯುವ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ತಾಯಂದಿರ ಸಭೆ, ಗುಂಪು ಸಭೆಗಳು ಗ್ರಾಮ ಸಭೆಗಳು ಹಾಗು ಶಾಲೆಗಳಲ್ಲಿ ಆರೋಗ್ಯ ಶಿಕ್ಷಣವನ್ನು ನೀಡುವಂತೆ ತಿಳಿಸಿದರಲ್ಲದೆ ಎಲ್ಲಾ ತಾಲ್ಲೂಕುಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆ-ಮನೆ ಭೇಟಿ ನೀಡಿ ಈ…
ತುಮಕೂರು : ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ-ಮಗಳು, ಓರ್ವ ಯುವಕ ನಾಪತ್ತೆಯಾಗಿರುವ ಮೂರು ಪ್ರಕರಣಗಳು ದಾಖಲಾಗಿವೆ. ತಾಯಿ-ಮಗಳು ಕಾಣೆ: ಮಧುಗಿರಿಯ 28 ವರ್ಷದ ಅನಿತಲಕ್ಷ್ಮಿ ಹಾಗೂ 5 ವರ್ಷದ ಮಗಳು ಬೃಂದಾ ಜನವರಿ 19ರಂದು ಕಾಣೆಯಾಗಿದ್ದಾರೆ ಎಂದು ಅನಿತಲಕ್ಷ್ಮಿ ತಾಯಿ ದೂರು ದಾಖಲಿಸಿದ್ದಾರೆ. ಕಾಣೆಯಾದ ಅನಿತಲಕ್ಷ್ಮಿ 150 ಸೆ.ಮೀ. ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೋಗುವಾಗ ನೀಲಿ ಬಣ್ಣದ ಸೀರೆ, ಕೆಂಪು ಬಣ್ಣದ ರವಿಕೆ ಧರಿಸಿದ್ದರು. ಕಾಣೆಯಾದ ಮಗಳು ಬೃಂದಾ 91 ಸೆ.ಮೀ. ಎತ್ತರ, ಎಣ್ಣೆ ಕೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಯುವಕ ಕಾಣೆ; ಜನವರಿ 9ರಂದು ಮಧುಗಿರಿಯ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥ ಕುರಿ ಕಾಯುವ ಸುಮಾರು 19 ವರ್ಷದ ಗೋವಿಂದರಾಜು ಕುರಿ ಕಾಯಲು ತೆರಳಿದ್ದ ವೇಳೆ ಕಾಣೆಯಾಗಿದ್ದಾರೆ ಎಂದು ಸಂಬಂಧಿ ಶಿವರಾಜು ದೂರು ದಾಖಲಿಸಿದ್ದಾರೆ.…
ತುಮಕೂರು : ಜಿಲ್ಲೆಯ ವಿವಿಧ ಇಲಾಖೆಗಳ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವ ‘ಜಿಐಎಸ್’ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ನೀಡುವ ‘ಶುದ್ಧನೀರು’ ಮೊಬೈಲ್ ತಂತ್ರಾಂಶಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯಲ್ಲಿ ಸಂಸದರಾದ ಜಿ.ಎಸ್.ಬಸವರಾಜು ಚಾಲನೆ ನೀಡಿದರು. ಆರಂಭದಲ್ಲಿ ಕಾರ್ಯಕ್ರಮದ ಅನುಷ್ಠಾನ ಕುರಿತು ಯೋಜನಾ ನಿರ್ದೇಶಕ ಎಂ.ಜಯಚಂದ್ರನ್ ಮಾತನಾಡಿ, ಭೌಗೋಳಿಕ ಮಾಹಿತಿ ಸಂಗ್ರಹಿಸುವ ವ್ಯವಸ್ಥೆಯಡಿ ಜಿಐಎಸ್ ಅಪ್ಲಿಕೇಶನ್ ಮೂಲಕ ಜಿಲ್ಲೆಯ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುವುದು. ಜಿಐಎಸ್ ವೆಬ್ ಸೈಟ್‍ನಲ್ಲಿ ಜಿಲ್ಲೆಯ ನಗರ, ಪಟ್ಟಣ, ಹೋಬಳಿ, ಗ್ರಾಮ ಪಂಚಾಯಿತಿ ಹಾಗೂ ಸರ್ವೆ ನಂಬರ್ ಪ್ರಕಾರ ಸಂಪರ್ಕ ರಸ್ತೆ, ಸರ್ಕಾರದ ಇಲಾಖೆ, ಕಚೇರಿ ಇಲಾಖೆಗಳ ಯೋಜನಾವಾರು ಕಾರ್ಯಕ್ರಮಗಳ ಅಂಕಿಅಂಶಗಳನ್ನು ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು. ಬಳಿಕ ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್ ಮಾತನಾಡಿ, ತುಮಕೂರು ಜಿಐಎಸ್ ವೆಬ್ ಪೆÇೀರ್ಟಲ್ ರಾಜ್ಯದ ಮೊದಲ…











