ತುಮಕೂರು : ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಜ. 20 ರಂದು ರೈತರ ಪ್ರತಿಭಟನೆ ಬೆಂಬಲಿಸಿ ನಡೆಯಲಿರುವ ರಾಜಭವನ ಮುತ್ತಿಗೆ ಹೋರಾಟದ ಹಿನ್ನೆಲೆಯಲ್ಲಿ ನಗರದ ಎಸ್‍ಎಸ್‍ಐಟಿ ಕಾಲೇಜಿನಲ್ಲಿ ಶುಕ್ರವಾರ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ನಗರವೂ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್ ಅವರು, ಜ.20 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಗೆ ಜಿಲ್ಲೆಯಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕೆಂದು ಕರೆ ನೀಡಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ಪ್ರತಿ ಜಿಲ್ಲೆಗಳಿಂದಲೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುತ್ತಿದ್ದು, ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಿಂದಲೂ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಹೊರಡಬೇಕೆಂದು ಸೂಚಿಸಿದರು. …
Author: News Desk Benkiyabale
ಮಧುಗಿರಿ: ಎಸ್‍ಇಪಿ ಮತ್ತು ಟಿಎಸ್‍ಪಿ ಯೋಜನೆಯಡಿ ಇಲ್ಲಿನ ಪುರಸಭೆಗೆ 10 ಕೋಟಿ ರೂ. ವಿಶೇಷ ಅನುದಾನವನ್ನು ಹಂತ ಹಂತವಾಗಿ ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಬುಧವಾರ ಪುರಸಭೆ ಆವರಣದಲ್ಲಿರುವ ಮಾಲೀಮರಿಯಪ್ಪ ರಂಗಮಂದಿರದಲ್ಲಿ 2018-19ನೇ ಸಾಲಿನ ವಿಕಲಚೇತನರಿಗೆ ತ್ರಿಚಕ್ರವಾಹನ ವಿತರಣೆ ಹಾಗೂ ಜೀವ ವಿಮಾ ಬಾಂಡುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು, ಪುರಸಭಾ ಅಧ್ಯಕ್ಷ ತಿಮ್ಮರಾಜು & ಸದಸ್ಯರುಗಳು 10 ಕೋಟಿ ರೂ. ಬಿಡುಗಡೆ ಎಸ್‍ಎಫ್‍ಸಿ ಯೋಜನೆಯಡಿ 3 ಕೋಟಿ ರೂ. ಬಿಡುಗಡೆಯಾಗಿ ಅಭಿವೃದ್ದಿ ಕಾಮಗಾರಿ ಪ್ರಾರಂಭಕ್ಕೆ ಟೆಂಡರ್ ಪ್ರಕ್ರಿಯೇ ಪೂರ್ಣಗೊಂಡ ನಂತರ ಸರ್ಕಾರ ಹಣವನ್ನು ವಾಪಸ್ ಪಡೆದಿದ್ದು, ಈ ಹಣವನ್ನು ಬಿಡುಗಡೆ ಮಾಡಿಸುವಂತೆ ಮಾಡಿದ ಮನವಿಗೆ, ಸದಸ್ಯರುಗಳು ಅಭಿವೃದ್ದಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೇ ಒಗ್ಗಟ್ಟಾಗಿರಿ. ಚುನಾವಣಾ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಿ ಎಂದು ಶಾಸಕ ಎಂ.ವಿ.ವಿ ಕಿವಿ ಮಾತು ಹೇಳಿ, ಎಸ್‍ಇಪಿ ಟಿಎಸ್‍ಪಿ ಯೋಜನೆಯ ಕಾಮಗಾರಿಗಳನ್ನು 23 ವಾರ್ಡ್‍ಗಳಲ್ಲೂ ಗುರುತಿಸಿ…
ತುಮಕೂರು: ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆಬ್ರುವರಿ 6 ಮತ್ತು 7ರಂದು ನಡೆಸಲು ಅಗತ್ಯ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲಾ ನೌಕರರ ಕ್ರೀಡಾ ಕೂಟವನ್ನು ನಗರದ ಕುಣಿಗಲ್ ರಸ್ತೆಯಲ್ಲಿರುವ ಎಸ್.ಎಸ್.ಐ.ಟಿ. ಕಾಲೇಜಿನ ಆವರಣದಲ್ಲಿ ನಡೆಸಲು ತೀರ್ಮಾನಿಸಿದ್ದು, ಕ್ರೀಡಾ ಕೂಟವನ್ನು ಯಾವುದೇ ಲೋಪದೋಷವಿಲ್ಲದಂತೆ ಅಚ್ಚುಕಟ್ಟಾಗಿ ನಡೆಸಲು ವಿವಿಧ ಅಧಿಕಾರಿಗಳನ್ನೊಳಗೊಂಡ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಿದರು. ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಂದ ಸುಮಾರು 2ಸಾವಿರ ನೌಕರ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಓ.ಓ.ಡಿ. ಸೌಲಭ್ಯ ನೀಡಲಾಗುವುದು. ಮೇಲಧಿಕಾರಿಗಳು ಆಸಕ್ತ ನೌಕರರಿಗೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಬೇಕೆಂದು ನಿರ್ದೇಶನ ನೀಡಿದರು. ಕ್ರೀಡಾ ಕೂಟ ನಡೆಯಲಿರುವ ಕ್ರೀಡಾಂಗಣವನ್ನು ಸಜ್ಜುಗೊಳಿಸುವುದರೊಂದಿಗೆ ಊಟ, ಕುಡಿಯುವ ನೀರು, ಆಂಬುಲೆನ್ಸ್,…
ತುಮಕೂರು: ಜಿಲ್ಲಾ ಪೊಲೀಸ್ ಕಛೇರಿಯ ಅಕೌಂಟ್ಸ್ ಕೇಸ್ ವರ್ಕರ್ ಯಶಸ್ವಿನಿಯವರನ್ನು ಮಂಗಳವಾರ ರಾತ್ರಿ ಕರ್ತವ್ಯ ದುರುಪಯೋಗ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ತುಮಕೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯಶಸ್ವಿನಿ ಎಂಬುವವರ ಮೇಲೆ ಕರ್ತವ್ಯ ದ್ರೋಹ ಮತ್ತು ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವಾಗಿ ತುಮಕೂರು ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರು ದಾಖಲು ಮಾಡುವ ಮುನ್ನವೇ ಆಕೆಯ ಕರ್ತವ್ಯ ದುರಪಯೋಗದ ಆಧಾರದ ಮೇಲೆ ಅಮಾನತ್ತು ಮಾಡಲಾಗಿತ್ತು. ದೂರು ದಾಖಲಾದ ನಂತರ ಪ್ರಕರಣದ ತನಿಖೆಯನ್ನು ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿಸಿಆರ್‍ಬಿ ಇನ್ಸ್‍ಪೆಕ್ಟರ್ ವಿಜಯಕುಮಾರ್‍ರವರಿಗೆ ತನಿಖೆ ಮಾಡಲು ಮತ್ತು ಆರೋಪಿಗಳನ್ನ ಬಂಧಿಸಲು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಿಷೇಶವಾಗಿ ಆದೇಶ ನೀಡಿದ್ದರು. ಇನ್ಸ್‍ಪೆಕ್ಟರ್ ವಿಜಯಕುಮಾರ್‍ರವರು ಲಿಂಗಾಯತ ಸಮುದಾಯಕ್ಕೆ ಸೇರಿದವರೆನ್ನುವುದು ಇಲ್ಲಿ ಗಮನಿಸಬೇಕಾದಂತಹ ವಿಚಾರವಾಗಿರುತ್ತದೆ. ಸದರಿ ಪ್ರಕರಣ ದಾಖಲಾಗಿ ಸುಮಾರು ದಿನಗಳೇ ಕಳೆದಿದ್ದು, ಆರೋಪಿ ಸ್ಥಾನದಲ್ಲಿದ್ದ ಯಶಸ್ವಿನಿಯನ್ನು…
ತುಮಕೂರು : ಜಿಲ್ಲೆಯ ಎಲ್ಲಾ 330 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಮ್ಯಾನ್ಯುಯಲ್ ಸಮೀಕ್ಷೆ ಮಾಡುವ ಮೂಲಕ ಬರುವ ಫೆಬ್ರುವರಿ 15ರೊಳಗಾಗಿ ಪಂಚತಂತ್ರದಲ್ಲಿ ಅಳವಡಿಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸುವಂತೆ ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳ ಸಮೀಕ್ಷೆ ಮತ್ತು ಆಸ್ತಿ ತೆರಿಗೆ ಪರಿಷ್ಕರಣೆ ಕುರಿತು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಪರಿಶೀಲನಾ ಸಭೆ ಹಾಗೂ ತರಬೇತಿ ಕಾರ್ಯಗಾರವನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರವು 2019-20ರ ಆಯವ್ಯಯದಲ್ಲಿ ಮ್ಯಾನ್ಯುಯಲ್ ಸಮೀಕ್ಷೆಗೆ ಅನುಮೋದನೆ ನೀಡಿದ್ದು, ಕಳೆದ ವರ್ಷ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಅಡಗೂರು ಗ್ರಾಮ ಪಂಚಾಯತ್‍ನಲ್ಲಿ ಪ್ರಾಯೋಗಿಕವಾಗಿ ಮ್ಯಾನ್ಯುಯಲ್ ಸಮೀಕ್ಷೆಯ ಪೈಲಟ್ ಕಾರ್ಯಕ್ರಮವನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು. ಮೊದಲನೇ…
ಕೊರಟಗೆರೆ: ಶೋಷಿತ ಸಮಾಜ ಗಳನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಕೊಂಡೊಯ್ಯಬೇಕಾಗಿರುವುದು ಸರ್ಕಾರ ಗಳ ಜವಾಬ್ದಾರಿ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಜಿ ಪರಮೇಶ್ವರ್ ತಿಳಿಸಿದರು. ಅವರು ಪಟ್ಟಣದಲ್ಲಿ ಕೊರಟಗೆರೆ ತಾಲ್ಲೂಕು ಸವಿತಾಸಮಾಜದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ, ಸಮಾಜದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರು ಶೋಷಿತವರ್ಗಗಳಿಗೆ ಯಾವುದೇ ಸರ್ಕಾರವಿದ್ದರು ಸಹ ಅವುಗಳಿಗೆ ಸಮಾಜಿಕ ನ್ಯಾಯವನ್ನು ಒದಗಿಸಬೇಕು. ತಾವು ಉಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಸವಿತಾ ಸಮಾಜಕ್ಕೆ ನಿಗಮ ಮಂಡಳಿಯನ್ನು ಮಾಡಲಾಯಿತು. ಹಾಗೂ ಸವಿತಾ ಸಮಾಜದ ನಾಯಕರಾದ ಎಂ.ಸಿ ವೇಣುಗೋಪಾಲ್‍ರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಪಕ್ಷವು ಮಾಡಿತು. ಸವಿತಾ ಸಮಾಜವು ಸಹ ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು, ಶೋಷಿತ ವರ್ಗಗಳಲ್ಲಿ ಸಹ ಒಂದಾಗಿದೆ. ಇಂತಹ ಸಮಾಜಗಳಿಗೆ ಪೂರ್ಣಪ್ರಮಾಣದ ಮುಖ್ಯ ವಾಹಿನಿಗೆ ತರುವ ಯೋಜನೆಗಳನ್ನು ಸರ್ಕಾರಗಳು ಕೈಗೊಳ್ಳಬೇಕಿದೆ. ಸವಿತಾಸಮಾಜದ ಮತ್ತು ಪಕ್ಷದ ನಾಯಕರಾದ ವೀರಪ್ಪಮೋಯ್ಲಿ ರವರನ್ನು ಮುಖ್ಯಮಂತ್ರಿ ಮಾಡಿದ ಹೆಗ್ಗಳಿಕೆ ಕಾಂಗ್ರೇಸ್ ಪಕ್ಷದಾಗಿದ್ದೆ.…
ಮಧುಗಿರಿ : ಮಾರ್ಚ್ 2020 ರಲ್ಲಿ ಐತಿಹಾಸಿಕ ಶ್ರೀ ದಂಡಿನ ಮಾರ ಮ್ಮನ ಜಾತ್ರೆಯ ವೇಳೆ ಕರೋನಾ ಕಾರಣ ದಿಂದಾಗಿ ಉತ್ಸವ ಮೂರ್ತಿಯನ್ನು ಗುಡಿದುಂಬಿಸುವಲ್ಲಿ ಸಾಧ್ಯವಾಗದ ಕಾರಣ ಪ್ರಸ್ತುತ ಧಾರ್ಮಿಕ ಚಟುವಟಿಕೆಗಳ ನ್ನು ನಡೆಸಿ ಜನ ಸಂದಣೆ ಸೇರದಂತೆ ಗುಡಿದುಂಬಿಸಲು ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸೋಮಪ್ಪ ಕಡಕೋಳ ತಿಳಿಸಿದರು. ಮಂಗಳವಾರದಂದು ಪುರಸಭಾ ಸದಸ್ಯರುಗಳ ನಿಯೋಗ 2021 ರ ಜಾತ್ರೆ ಸಮೀಪಿಸುತ್ತಿದ್ದು, ಉತ್ಸವ ಮೂರ್ತಿ ದೇವಸ್ಥಾನದಲ್ಲಿಯೇ ಇರುವುದರಿಂದ ಊರ ಪ್ರವೇಶದ ನಂತರವಷ್ಟೆ ಜಾತ್ರೆ ನಡೆಸಲು ಸಾಧ್ಯ ಇದಕ್ಕೂ ಮುನ್ನ ಚಿನಕವಜ್ರ ಗ್ರಾಮಕ್ಕೆ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಿ ಮಡಲಕ್ಕಿ ತುಂಬಿಸಿಕೊಂಡ ನಂತರ ಗುಡಿದುಂಬಿಸಬೇಕೆಂದು ಜಾತ್ರೆಯ ನಿಯಮಗಳನ್ನು ಉಪವಿಭಾಗಾಧಿಕಾರಿಗಳಿಗೆ ವಿವರಿಸಿದರು. ಕರೋನಾ ಹರಡದಂತೆ ಮುನ್ನಚರಿಕೆ ಕ್ರಮಕೈಗೊಂಡು ಜಾತ್ರೆಯ ಉತ್ಸವ ಸಮಿತಿಯವರು, ಅರ್ಚಕರುಗಳ ಸಲಹೆಗಳನ್ನು ಪಡೆದು ಧಾರ್ಮಿಕಕಾರ್ಯ ಕೈಗೊಳ್ಳುವಂತೆ ತಿಳಿಸಿ ದೇವಸ್ಥಾನದ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ, ದೇವಸ್ಥಾನದ ಮುಂಭಾಗ…
ತುಮಕೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ಕೋಡಿ ಮುದ್ದನಹಳ್ಳಿ ಮುರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಜನವರಿ 4ರಿಂದ ಹಮ್ಮಿಕೊಂಡಿದ್ದ ಏಳು ದಿನಗಳ ಇಂಡಕ್ಷನ್ ತರಬೇತಿ ಸಮಾರೋಪ ಸಮಾರಂಭವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಹೊಸದಾಗಿ ನೇಮಕಗೊಂಡಿರುವ ಉಪನ್ಯಾಸಕರುಗಳಿಗಾಗಿ ಡಿಎಸ್‍ಇಆರ್‍ಟಿ ಮೂಲಕ ಇಲಾಖಾ ಸಂರಚನೆ, ಶೈಕ್ಷಣಿಕ ಕಾರ್ಯಕ್ರಮಗಳು ಹಾಗೂ ವೃತ್ತಿಪರ ಕೌಶಲ್ಯಗಳ ಅಭಿವೃದ್ಧಿಗಾಗಿ ಈ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿಯಲ್ಲಿ ಜಿಲ್ಲಾ ವ್ಯಾಪ್ತಿಯ 47 ಉಪನ್ಯಾಸಕರು ಪ್ರಯೋಜನ ಪಡೆದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು 35 ಅಧಿವೇಶನಗಳ ಮೂಲಕ ಉಪನ್ಯಾಸಕ ವೃತ್ತಿ ಬುನಾದಿ, ಕಲಿಕಾ ವಿಧಾನ, ನಡವಳಿಕೆ, ರಾಷ್ಟ್ರೀಯ ಶಿಕ್ಷಣ ನೀತಿ, ಉಪನ್ಯಾಸಕನ ಪಾತ್ರ ಕುರಿತು ತರಬೇತಿ ನೀಡಿದರು. ಸಮಾರಂಭದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಮಂಜುನಾಥ ಕೆ, ಹಿರಿಯ ಉಪನ್ಯಾಸಕ ಶ್ರೀಧರ್, ಡಿಎಸ್‍ಆರ್‍ಟಿ ನಿರ್ದೇಶಕ ಮಾರುತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ…
ಹುಳಿಯಾರು: ಹುಳಿಯಾರು ಹೋಬಳಿಯ ದಸೂಡಿ ಗ್ರಾಮ ಪಂಚಾಯ್ತಿಯ ನೂತನ ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ಕೆ.ಮರಿಯಪ್ಪ, ಡಿ.ಆರ್.ಚಿದಾನಂದ್ ಅವರು ದಸೂಡಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗಳಿಗೆ ಥರ್ಮಲ್ ಸ್ಕ್ಯಾನರ್ ಯಂತ್ರವನ್ನು ಕೊಡುಗೆಯಾಗಿ ನೀಡಿದರು. ಕೊರೊನಾ ಆತಂಕದ ನಡುವೆ ಸರ್ಕಾರ ಶಾಲೆಗಳನ್ನು ಆರಂಭಿಸಿದೆ. ಪೋಷಕರೂ ಸಹ ಭಯದಿಂದಲೇ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಹಾಗಾಗಿ ಶಾಲೆಯಲ್ಲಿ ಕೊರೊನಾ ನುಸುಳದಂತೆ ಎಚ್ಚರ ವಹಿಸುವ ಸಲುವಾಗಿ ಶಾಲೆಗೆ ಬರುವ ಮಕ್ಕಳನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕಿದೆ. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಲಭ್ಯವಿಲ್ಲದ ಥರ್ಮಲ್ ಸ್ಕ್ಯಾನರ್ ಅನ್ನು ನೂತನ ಗ್ರಾಪಂ ಸದಸ್ಯರು ಶಾಲೆಗೆ ಕೊಡುಗೆಯಾಗಿ ನೀಡಿ ಕೋವಿಡ್ ನಿಯಮ ಪಾಲನೆಗೆ ನೆರವಾಗಿದ್ದಾರೆ. ಅಲ್ಲದೆ ಶಾಲೆಗೆ ಬರುವ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಸ್ಯಾನಿಟೈಸರ್ ಹಾಗೂ ಮಾಸ್ಕ್‍ಗಳನ್ನೂ ಸಹ ಉಚಿತವಾಗಿ ವಿತರಿಸಿದರು. ಕೋವಿಡ್ ಭಯ ಎಲ್ಲೆಡೆ ಇದ್ದು ಸುರಕ್ಷತೆಗೆ ಆದ್ಯತೆ ನೀಡುವ ಅಗತ್ಯತೆಯನ್ನು ಮನಗಂಡು ಮಾಸ್ಕ್, ಥರ್ಮಲ್…
ತುಮಕೂರು : ಕೃಷಿ ಕಾಯ್ದೆ ಗಳನ್ನು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದು, ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿದ್ದ ಕೇಂದ್ರ ಸರಕಾರಕ್ಕೆ ಸುಪ್ರಿಂಕೋರ್ಟ್ ರೈತ ವಿರೋಧಿ ಕಾಯ್ದೆಗಳನ್ನು ತಡೆ ಹಿಡಿಯಿರಿ ಎಂದು ಹೇಳುವ ಮೂಲಕ ಕಪಾಳಮೋಕ್ಷ ಮಾಡಿದೆ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ಹೋರಾಟ ನಿರತ ರೈತರು ನಡೆಸುವ ಟ್ರಕ್‍ಮತ್ತು ಟ್ಯಾಕ್ಟರ್ ಪೇರೆಡ್‍ಗೆ ಪರ್ಯಾಯವಾಗಿ, ಕರ್ನಾಟಕದಲ್ಲಿಯೂ ಹೋರಾಟ ರೂಪಿಸುವ ಹಿನ್ನೆಲೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಪ್ರಜಾಸತ್ಮಾತ್ಮಕವಾಗಿ ಜನಾಭಿಪ್ರಾಯದ ನಂತರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಸಿ, ತರಬೇಕಾದ ಕಾಯ್ದೆಯನ್ನು ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆಯಿಂದ ಸುಗ್ರಿವಾಜ್ಞೆ ಮೂಲಕ ಜಾರಿಗೆ ಮಾಡುತ್ತಿರುವುದು ಸರಿಯಲ್ಲ.ಕೂಡಲೇ ಸದರಿ ಕಾಯ್ದೆಗಳ ಜಾರಿಯನ್ನು ತಡೆ ಹಿಡಿಯಿರಿ, ಇಲ್ಲವೇ ನಾವೇ ತಡೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುವ ಮೂಲಕ,ಈ ಕಾಯ್ದೆಗಳು ಜನಪರವಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಲಯ…











