ಹುಳಿಯಾರು: ಹಕ್ಕಿ ಜ್ವರ ಭೀತಿಯಿಂದಾಗಿ ಕೋಳಿ ಮಾಂಸದ ದರ ಹಾಗೂ ಮಾರಾಟ ಎರಡೂ ಸಹ ಕುಸಿತ ಕಂಡಿದ್ದು ಕೋಳಿ ವ್ಯಾಪಾರ ನಂಬಿ ಬದುಕು ಕಟ್ಟಿಕೊಂದಿದ್ದ ಕೋಳಿ ಅಂಗಡಿಯವರಿಗೆ ಆತಂಕ ಮನೆ ಮಾಡಿದೆ. 2020 ರ ಮಾರ್ಚಿ, ಏಪ್ರಿಲ್ ಮಾಹೆಯ ಕೊರೊನಾ ಲಾಕ್‍ಡೌನ್‍ನಿಂದಾಗಿ ಕೋಳಿ ವ್ಯಾಪಾರ ಇಲ್ದಾಗಿತ್ತು. ಮೇ, ಜೂನ್‍ನಲ್ಲಿ ಹಕ್ಕಿ ಜ್ವರ ವದಂತಿ ಹರಡಿ ತೋಚಿದ ದರಕ್ಕೆ ಕೋಳಿಗಳನ್ನು ಮಾರಿದ್ದರು. ಒಂದು ವರ್ಷದಲ್ಲಿ ಐದಾರು ತಿಂಗಳು ವ್ಯಾಪಾರ ಇಲ್ಲದೆ ಕಂಗಾಲಾಗಿದ್ದ ಕೋಳಿ ವ್ಯಾಪಾರಿಗಳಿಗೆ ಗ್ರಾಪಂ ಚುನಾವಣೆ ಚೇತರಿಕೆ ನೀಡಿತ್ತು. ಆದರೆ ಈಗ ಮತ್ತೊಮ್ಮೆ ಹಕ್ಕಿ ಜ್ವರದ ಭೀತಿ ಕೋಳಿ ವ್ಯಾಪಾರಿಗಳನ್ನು ಕಂಗಾಲಾಗಿಸಿದೆ. ಹಕ್ಕಿ ಜ್ವರ ಭೀತಿಯಿಂದಾಗಿ ಕೋಳಿ ದರವು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಲಾಕ್‍ಡೌನ್ ತೆರವಾದ ನಂತರದ ದಿನಗಳಲ್ಲಿ 130 ರೂ ಇದ್ದ ಬಾಯ್ಲರ್ ಕೋಳಿ 100 ರೂಗಲಿಗೂ, 120 ರೂಗಳಿದ್ದ ಫಾರಂ ಕೋಳಿ 100 ರೂ.ಗಳಿಗೂ ಕುಸಿತ…
Author: News Desk Benkiyabale
ಹುಳಿಯಾರು : ಬುಕ್ಕಾಪಟ್ಟಣ ಅರಣ್ಯ ವಲಯ ವ್ಯಾಪ್ತಿಯ ಹುಳಿಯಾರು ಹೋಬಳಿ ಯಳನಾಡು ಸಮೀಪದ ಕಾಚನಕಟ್ಟೆ ಗಂಗಮ್ಮನ ಕೆರೆ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶುಕ್ರವಾರ ರಾತ್ರಿ ಚಿರತೆಯೊಂದು ಸೆರೆಯಾಗಿದೆ. ಕಾಚನಕಟ್ಟೆಯ ಗ್ರಾಮಸ್ಥರು ಬಹಳ ದಿನಗಳಿಂದಲೂ ಈ ಭಾಗದಲ್ಲಿ ಚಿರತೆಯೊಂದು ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದೆಯಲ್ಲದೆ ಸಾಕು ಪ್ರಾಣಿಗಳನ್ನು ಹಿಡಿದು ತಿನ್ನುತ್ತಿದೆ ಎಂದು ಅರಣ್ಯ ಇಲಾಖೆಯವರಿಗೆ ದೂರು ನೀಡಿದ್ದರು. ಚಿರತೆಯ ಓಡಾಟದಿಂದ ಇಲ್ಲಿನ ನಿವಾಸಿಗಳು ಹಾಗೂ ದಾರಿಹೋಕರಿಗೆ ಆತಂಕ ಹಾಗೂ ಭಯದ ವಾತಾವರಣವಿದೆ. ಹಾಗಾಗಿ ಈ ವನ್ಯ ಪ್ರಾಣಿಯು ದಿನ ನಿತ್ಯ ಓಡಾಡುವ ಜಾಗದಲ್ಲಿ ಪಂಜರ (ಬೋನು) ವನ್ನಿಟ್ಟು ಸೆರೆ ಹಿಡಿಯಲು ಕ್ರಮವಹಿಸುವಂತೆ ಗ್ರಾಮಸ್ಥರ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂಧಿಸಿದ ಅರಣ್ಯ ಇಲಾಖೆಯವರು ಎರಡು ಕಡೆ ಪಂಜರವನ್ನಿಟ್ಟು ಚಿರತೆಯ ಚಲನವಲನ ಹಾಗೂ ಓಡಾಟದ ಬಗ್ಗೆ ನಿಗಾವಹಿಸುತ್ತಿದ್ದರು. ಎಂದಿನಂತೆ ಆಹಾರ ಅರಸುತ್ತಾ ಬಂದ ಚಿರತೆ ಇಲಾಖೆಯವರು ಇರಿಸಿದ ಬೋನಿಗೆ ಶುಕ್ರವಾರ…
ತುಮಕೂರು : ಅನಕ್ಷರಸ್ಥರ ವಿಶ್ವವಿದ್ಯಾಲಯದಂತಿರುವ ರಂಗಭೂಮಿ ಕಲೆ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ ಎಂದು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗಸ್ವಾಮೀಜಿ ತಿಳಿಸಿದರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಕರ್ನಾಟಕ ನಾಟಕ ಅಕಾಡೆಮಿಯಿಂದ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಂಗಭೂಮಿ ಬಹುದೊಡ್ಡ ಮಾಧ್ಯಮವಾಗಿದ್ದು, ಬದುಕಿಗೆ ಶಿಕ್ಷಣ ಕೊಡುವಲ್ಲಿ ಮತ್ತು ಜೀವನವನ್ನು ವಿಕಾಸಗೊಳಿಸುವಲ್ಲಿ ಬಹಳ ಮಹತ್ತರ ಪಡೆದಿದೆ ಎಂದರು. ಅರ್ಜಿ ಹಾಕಿ ಪ್ರಶಸ್ತಿ ಪಡೆದುಕೊಳ್ಳಬಾರದು, ಪ್ರಶ್ತಿಗಳೇ ನಮ್ಮ ಬಳಿಗೆ ಹುಡುಕಿಕೊಂಡು ಬಂದಾಗ ಆ ಪ್ರಶಸ್ತಿಯ ಗೌರವ ಹೆಚ್ವುತ್ತದೆ. ಆ ನಿಟ್ಟಿನಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಉತ್ತಮ ಹೆಜ್ಜೆ ಇಟ್ಟಿದೆ ಎಂದು ಹೇಳಿದರು. ಕಲೆ ಮತ್ತು ಕಲಾವಿದರ ಬೆಳವಣಿಗೆಗೆ ನಾಟಕ ಅಕಾಡೆಮಿ ಮತ್ತು ಸರಕಾರ ಹೆಚ್ಚು ಒತ್ತು ನೀಡಿ, ಮತ್ತಷ್ಟು ಶಕ್ತಿ ತುಂಬುವ ಕೆಲಸ ಮಾಡಬೇಕು. ಕಲಾವಿದರ ಮಾಸಾಶನ ಹೆಚ್ಚಿಸಬೇಕು…
ತುಮಕೂರು: ಅಕಾಲಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜ. 9 ಮತ್ತು 10 ನಡೆಯಬೇಕಿದ್ದ ಇತಿಹಾಸ ಪ್ರಸಿದ್ದ ಗೂಳೂರು ಗಣೇಶ ಜಾತ್ರೆಯನ್ನು ಮುಂದೂಡಲಾಗಿದೆ. ಗೂಳೂರಿನ ಗಣೇಶ ದೇವಾಲಯದಲ್ಲಿಂದು ಗ್ರಾಮದ 18 ಕೋಮಿನ ಜನಾಂಗದವರು ಸಭೆ ಸೇರಿ ಅಕಾಲಿಕ ಮಳೆಯಾಗುತ್ತಿರುವುದರಿಂದ ಜಾತ್ರೆಗೆ ಅಡಚಣೆಯಾಗುತ್ತದೆ. ಹಾಗಾಗಿ ಮುಂಜಾಗ್ರತೆಯಾಗಿಯೇ ಜ. 23 ಮತ್ತು 24ಕ್ಕೆ ಜಾತ್ರೆಯನ್ನು ಮುಂದೂಡಲು ತೀರ್ಮಾನ ಕೈಗೊಂಡಿದ್ದಾರೆ. ಈ ಬಾರಿಯ ಎರಡನೇ ಬಾರಿಗೆ ಗಣೇಶ ಜಾತ್ರೆಯನ್ನು ಮುಂದೂಡಲಾಗಿದೆ. ಗ್ರಾಮ ಪಂಚಾಯ್ತಿ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಡಿಸೆಂಬರ್ ತಿಂಗಳಲ್ಲಿ ನಿಗದಿಯಾಗಿದ್ದ ಜಾತ್ರೆಯನ್ನು ಜನವರಿ 9 ಮತ್ತು 10ಕ್ಕೆ ಮುಂದೂಡಲಾಗಿತ್ತು. ಈಗ ಅಕಾಲಿಕ ಮಳೆಯಿಂದಾಗಿ ಮತ್ತೆ 2ನೇ ಬಾರಿಗೆ ಮುಂದಕ್ಕೆ ಹಾಕಲಾಗಿದೆ ಎಂದು ಗೂಳೂರು ಗಣೇಶ ಭಕ್ತಮಂಡಳಿಯ ಅಧ್ಯಕ್ಷರೂ ಆದ ಜಿ.ಪಂ. ಸದಸ್ಯ ಶಿವಕುಮಾರ್ ತಿಳಿಸಿದರು. ಅನಿವಾರ್ಯ ಕಾರಣಗಳಿಂದ 2ನೇ ಬಾರಿಗೆ ಗಣೇಶ ಜಾತ್ರೆಯನ್ನು ಮುಂದೂಡಿರುವುದರಿಂದ ಭಕ್ತಾದಿಗಳು ಸಹಕರಿಸಬೇಕು…
ತುಮಕೂರು : ಜಿಲ್ಲೆಯಲ್ಲಿ ಜನವರಿ 17ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ 211330 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ:ಕೆ.ರಾಕೇಶ್ ಕುಮಾರ್ ತಿಳಿಸಿದರು. ತಮ್ಮ ಕಛೇರಿಯಲ್ಲಿ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೋವಿಡ್-19 ಮಾರ್ಗಸೂಚಿಯನ್ನು ಅನುಸರಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದರಲ್ಲದೆ, ಲಸಿಕಾ ಗುಣಮಟ್ಟವನ್ನು ಕಾಪಾಡಲು ಜನವರಿ 10 ರಿಂದ 20ರವರೆಗೆ ನಿರಂತರವಾಗಿ ವಿದ್ಯುತ್‍ಚ್ಛಕ್ತಿ ಸರಬರಾಜು ಮಾಡಬೇಕೆಂದು ಬೆಸ್ಕಾಂ ಅಧಿಕಾರಿಗೆ ನಿರ್ದೇಶನ ನೀಡಿದರು. ಭಾನುವಾರವೂ ಸಹ ಶಾಲೆಗಳನ್ನು ತೆರೆದಿಟ್ಟು ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದರು. ಅಂಗನವಾಡಿ ಕೇಂದ್ರಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆಯಬೇಕು. ಮನೆ-ಮನೆಗೆ ಭೇಟಿ ನೀಡಿ ಐಇಸಿ ಕರಪತ್ರ, ಭಿತ್ತಿಪತ್ರಗಳನ್ನು ವಿತರಿಸಿ ಪೋಲಿಯೋ ಹನಿ ಹಾಕಿಸುವ ಬಗ್ಗೆ ಪೋಷಕರಿಗೆ…
ತುಮಕೂರು: ಕೋವಿಡ್-19ಕ್ಕೆ ಲಸಿಕೆ ಲಭ್ಯವಾದಾಗ ಯಾವುದೇ ಲೋಪ, ಆತಂಕವಿಲ್ಲದಂತೆ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸರಕಾರದ ಮಾರ್ಗಸೂಚಿಯನ್ವಯ ಜಿಲ್ಲೆಯಲ್ಲಿ ಏಳು ಕಡೆ ಅಣುಕು ಲಸಿಕಾ ವಿತರಣಾ ತಾಲೀಮು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ತಿಳಿಸಿದರು. ತುಮಕೂರು ಜಿಲ್ಲಾಸ್ಪತ್ರೆ ಆವರಣದಲ್ಲಿ ಅಣುಕು ಲಸಿಕಾ ವಿತರಣಾ ತಾಲೀಮು(ಡ್ರೈರನ್) ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಅಣುಕು ಲಸಿಕಾ ವಿತರಣೆಯಲ್ಲಿ ಬದಲಾವಣೆಗಳ ಅಂಶಗಳೇನಾದರೂ ಕಂಡುಬಂದಲ್ಲಿ ಅದನ್ನು ಸರಿಪಡಿಸುವ ಪ್ರಕ್ರಿಯೆ ಮಾಡಲಾಗುವುದು ಎಂದು ಹೇಳಿದರು. ಈಗಾಗಲೇ ಜಿಲ್ಲೆಯಲ್ಲಿ ಫೋಲಿಯೋ ಸೇರಿದಂತೆ ಅನೇಕ ಲಸಿಕಾ ಅಭಿಯಾನಗಳನ್ನು ವರ್ಷ ಪೂರ್ತಿ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿದೆ. ಆದರೂ, ಕೋವಿಡ್-19ಕ್ಕೆ ಮೊದಲ ಬಾರಿ ಲಸಿಕಾ ಅಭಿಯಾನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಅಣುಕು ಲಸಿಕಾ ತಾಲೀಮು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಗೆ ಲಸಿಕೆ ತರಲು ಸಂಪೂರ್ಣ ಸಿದ್ಧತೆಯಾಗಿದೆಯಾ?, ಲಸಿಕೆ ಪಡೆದ ಫಲಾನುಭವಿ ವಿಶ್ರಾಂತಿ ಪಡೆದುಕೊಳ್ಳಲು ಲಸಿಕಾ ಕೇಂದ್ರಗಳಲ್ಲಿ ವಿಶ್ರಾಂತಿ ಕೊಠಡಿ ವ್ಯವಸ್ಥೆ ಇದೆಯಾ? ಎಂಬುದನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು.…
ಹುಳಿಯಾರು: ಸರ್ಕಾರ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವ ಸಲುವಾಗಿ ಹುಳಿಯಾರು ಎಪಿಎಂಸಿಯಲ್ಲಿ ತೆರೆಯಲಾಗಿದ್ದ ಕಛೇರಿ ಬೀಗ ಜಡಿದು ವಾರಗಳಾಗಿದ್ದು ಹೆಸರು ನೋಂದಣಿಗೆ ಬರುವ ರೈತರಿಗೆ ಹೇಳೋರಿಲ್ಲ, ಕೇಳೋರಿಲ್ಲ ಎನ್ನುವಂತ್ತಾಗಿದ್ದು ನಿತ್ಯ ರೈತರು ಅಲೆಯುವುದು ಮಾತ್ರ ತಪ್ಪಿಲ್ಲ. ಮಾರುಕಟ್ಟೆಯಲ್ಲಿ ರಾಗಿ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ರೈತರ ನೆರವಿಗಾಗಿ ಧಾವಿಸಿರುವ ಸರ್ಕಾರ ಕ್ವಿಂಟಲ್ ರಾಗಿಗೆ 3295 ರೂ. ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ನಿರ್ಧರಿಸಿತ್ತು. ಪರಿಣಾಮ ಹುಳಿಯಾರು ಎಪಿಎಂಸಿಯಲ್ಲಿ ರೈತರ ನೋಂದಣಿಗಾಗಿ ಕಛೇರಿಯನ್ನೂ ತೆರದು ನೋಂದಣಿಗೆ ಸಿಬ್ಬಂದಿಯನ್ನೂ ಸಹ ನೇಮಿಸಿತ್ತು. ಆದರೆ ಡಿ.28 ರಿಂದ ನೋಂದಣಿ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿದ್ದ ಜಿಲ್ಲಾಡಳಿತ ವಾರ ಕಳೆದರೂ ಹುಳಿಯಾರಿನಲ್ಲಿ ಮಾತ್ರ ಇನ್ನೂ ನೋಂದಣಿ ಪ್ರಕ್ರಿಯೆ ಆರಂಭಿಸಿಲ್ಲ. ಜಿಲ್ಲಾಡಳಿತ ಮಾತು ನಂಬಿ ನೋಂದಣಿಗಾಗಿ ಕಳೆದ ವಾರ ಆಗಮಿಸಿದ್ದ ರೈತರಿಗೆ ಸೋಮವಾರದಿಂದ ನೋಂದಣಿ ಮಾಡಿಕೊಳ್ಳುವುದಾಗಿ ಹೇಳಿದ್ದ ಇಲ್ಲಿನ ಸಿಬ್ಬಂದಿ ಏಕಾಏಕಿ ಕಳೆದ ಶುಕ್ರವಾರ ಕಚೇರಿಗೆ ಬೀಗ ಜಡಿದು…
ಮಧುಗಿರಿ: ಈ ಬಾರಿ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದ 33 ಗ್ರಾ.ಪಂ ಗಳಲ್ಲಿ 30 ಗ್ರಾ.ಪಂ ಗಳು ಕೈ ವಶವಾಗಿವೆ ಎಂದು ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ತಿಳಿಸಿದರು. ಪಟ್ಟಣದ ಅವರ ಸ್ವಗೃಹದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು ಕ್ಷೇತ್ರದ 525 ಗ್ರಾ.ಪಂ ಸದಸ್ಯರಲ್ಲಿ 363 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ತಾಲೂಕಿನ 615 ಸದಸ್ಯರ ಪೈಕಿ 423 ಸದಸ್ಯರು ಕಾಂಗ್ರೆಸ್ ನವರು ಆಯ್ಕೆಯಾಗಿದ್ದಾರೆ ಕ್ಷೇತ್ರದಲ್ಲಿ ಬಿಜೆಪಿಯ ಏಕೈಕ ಸದಸ್ಯ ಆಯ್ಕೆಯಾಗುವ ಮೂಲಕ ತಾಲೂಕಿನ ಮತದಾರರು ಬಿಜೆಪಿಗೆ ನೆಲೆಯಿಲ್ಲವೆಂದು ಸಾಬೀತು ಮಾಡಿದ್ದಾರೆ. ಈ ಚುನಾವಣೆಯಲ್ಲಿ ಯುವಕ-ಯುವತಿಯರು, ಪದವೀಧರರು ಹೆಚ್ಚು ಆಯ್ಕೆಯಾಗಿರುವುದು ಸಂತಸ ತಂದಿದೆ. ಕೋವಿಡ್-19 ನಿಯಮಗಳು ಸಡಿಲಗೊಂಡ ನಂತರ ಕಾಂಗ್ರೆಸ್ ಬೆಂಬಲಿತ ಗೆದ್ದವರನ್ನೂ-ಸೋತವರನ್ನೂ ಒಂದೇ ವೇದಿಕೆಯಲ್ಲಿ 10 ಸಾವಿರ ಕಾರ್ಯಕರ್ತರ ಸಮ್ಮುಖದಲ್ಲಿ ಅಭಿನಂದಿಸಲಾಗುವುದು. ಈ ಕಾರ್ಯಕ್ರಮಕ್ಕೆ ಜಿಲ್ಲಾ ನಾಯಕರ ಜೊತೆಗೆ ಕೆ.ಪಿ.ಸಿ.ಸಿ ಅಧ್ಯಕ್ಷ…
ತುಮಕೂರು : ಸ್ಮಾರ್ಟ್‍ಸಿಟಿಯ ಪ್ರಮುಖ ಯೋಜನೆಯಾದ ಸಮಗ್ರ ನಗರ ನಿರ್ವಹಣೆ, ಕಮ್ಯಾಂಡ್ ಮತ್ತು ಕಂಟ್ರೋಲ್ ಸೆಂಟರ್‍ನ ಪ್ರಮುಖ ಅಂಶಗಳಾದ ಪರಿಸರ ನಿಗಾವಣೆ ವೆರಿಯಬಲ್ ಮೆಸೆಜಿಂಗ್ ಸಿಸ್ಟಮ್ ಹಾಗೂ ಇ-ಚಲನ್ ಸಿಸ್ಟಮ್‍ಗೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಅವರು ಚಾಲನೆ ನೀಡಿದರು. ತುಮಕೂರು ನಗರದಾದ್ಯಂತ 5 ಸ್ಥಳಗಳಾದ ಎಸ್‍ಐಟಿ ಕಾಲೇಜು, ಶಿವಕುಮಾರ ಸ್ವಾಮೀಜಿ ವೃತ್ತ, ಕಾಲ್ಟೆಕ್ಸ್ ವೃತ್ತ, ಸೈನ್ಸ್ ಥೀಮ್ ಪಾರ್ಕ್ ಆವರಣದಲ್ಲಿ ಮತ್ತು ಪೊಲೂಷಿಯನ್ ಕಂಟ್ರೋಲ್ ರೂಂ ಬಳಿ ಪರಿಸರ ಮಾಪಕಗಳನ್ನು ಅಳವಡಿಸಲಾಗಿದ್ದು, ಇದು ಧೂಳಿನ ಕಣಗಳಾದ 10, 2.5, ಹವಾಮಾನ ಬದಲಾವಣೆ, ಓಜೋನ್, ಶಬ್ದಮಾಲಿನ್ಯ, ಉಷ್ಣತೆ, ಸಲ್ಫರ್ ಡೈ ಆಕ್ಸೈಡ್, ನೈಟ್ರೋಜನ್ ಡೈ ಆಕ್ಸೈಡ್ ನಂತಹ ಇತರೆ ಹವಾಮಾನ ಗುಣಮಟ್ಟವನ್ನು ದಾಖಲಿಸುವುದರ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಅನುಕೂಲವಾಗುವಂತೆ ವೀಕ್ಷಣಾ ಪರದೆಗಳನ್ನು ಹೊಂದಿದೆ. ಈ ಸೌಲಭ್ಯವನ್ನು ‘ಸ್ಮಾರ್ಟ್ ತುಮಕೂರು’ ಮೊಬೈಲ್ ಅಪ್ಲಿಕೇಷನ್ ಮುಖಾಂತರ ಸಾರ್ವಜನಿಕರು ಸಹ ವೀಕ್ಷಿಸಬಹುದಾಗಿದೆ. …
ತುಮಕೂರು : ಸ್ಮಾರ್ಟ್‍ಸಿಟಿ ಯೋಜನೆಯಡಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯೊಳಗೆ ಮುಗಿಯಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಗಳಲ್ಲಿ ವಿಳಂಬವಾಗಬಾರದು ಎಂದು ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜು ಅಧಿಕಾರಿಗಳಿಗೆ ಸೂಚಿಸಿದರು. ಸ್ಮಾರ್ಟ್‍ಸಿಟಿ ತುಮಕೂರು ಮಹಾನಗರಪಾಲಿಕೆ ಹಾಗೂ ಟೂಡಾ ವತಿಯಿಂದ ನಗರದಾದ್ಯಂತ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ರಿಂಗ್ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ರಾಧಾಕೃಷ್ಣ ರಸ್ತೆ, ಅಪೆಕ್ಸ್ ಬ್ಯಾಂಕ್ ಸಮೀಪ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಗಳು, ಮಹಾತ್ಮಗಾಂಧಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ, ಮಾರಿಯಮ್ಮ ಕೊಳಚೆ ಪ್ರದೇಶ ನಿವಾಸಿಗಳ ನಿವೇಶನ ಸಮುಚ್ಚಯ ಸೇರಿದಂತೆ ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದ ಅವರು, ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದೇ ನಿರ್ಲಕ್ಷ್ಯ ತೋರುವ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ನಗರದ ಬಿ.ಎಚ್. ರಸ್ತೆಯ ಅಕ್ಕಪಕ್ಕದ ಎಲ್ಲಾ ಕಾಮಗಾರಿಗಳನ್ನು…











