ತುಮಕೂರು: ಜಿಲ್ಲೆಯ 329 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣಾ ಮತ ಎಣಿಕೆಯು ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಅಂತಿಮವಾಗಿ 5262 ಸದಸ್ಯರು ಆಯ್ಕೆಯಾಗಿದ್ದಾರೆ. ತುಮಕೂರು ತಾಲೂಕಿನ 41 ಗ್ರಾಮ ಪಂಚಾಯಿತಿಗಳ 13 ಸದಸ್ಯರು ಅವಿರೊಧವಾಗಿ, ಮತದಾನದ ನಂತರ ಆಯ್ಕೆಯಾದ 733 ಸದಸ್ಯರು ಸೇರಿದಂತೆ 746 ಸದಸ್ಯ ಸ್ಥಾನಗಳು; ಕುಣಿಗಲ್ ತಾಲೂಕಿನ 36 ಗ್ರಾಮ ಪಂಚಾಯಿತಿಗಳ ಅವಿರೊಧವಾಗಿ 37 ಸದಸ್ಯರು, ಮತದಾನದ ನಂತರ ಆಯ್ಕೆಯಾದ 459 ಸದಸ್ಯರು ಸೇರಿದಂತೆ 496 ಸದಸ್ಯ ಸ್ಥಾನಗಳು; ಗುಬ್ಬಿ ತಾಲೂಕಿನ 34 ಗ್ರಾಮ ಪಂಚಾಯಿತಿಗಳ 65 ಸದಸ್ಯರು ಅವಿರೊಧವಾಗಿ, ಮತದಾನದ ನಂತರ ಆಯ್ಕೆಯಾದ 525 ಸದಸ್ಯರು ಸೇರಿದಂತೆ 590 ಸದಸ್ಯ ಸ್ಥಾನಗಳು(36 ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿರುವ ಸ್ಥಾನಗಳು); ಕೊರಟಗೆರೆ ತಾಲೂಕಿನ 24 ಗ್ರಾಮ ಪಂಚಾಯಿತಿಗಳ 25 ಸದಸ್ಯರು ಅವಿರೊಧವಾಗಿ, ಮತದಾನದ ನಂತರ ಆಯ್ಕೆಯಾದ 367 ಸದಸ್ಯರು ಸೇರಿದಂತೆ 392 ಸದಸ್ಯ ಸ್ಥಾನಗಳು; ಪಾವಗಡ ತಾಲೂಕಿನ 33 ಗ್ರಾಮ ಪಂಚಾಯಿತಿಗಳ 16…
Author: News Desk Benkiyabale
ತುಮಕೂರು : ತುಮಕೂರು ಜಿಲ್ಲೆಯ 327 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಆಯಾ ತಾಲೂಕು ಕೇಂದ್ರಗಳಲ್ಲಿ ಯಾವುದೇ ಗೊಂದಲವಿಲ್ಲದೇ ಶಾಂತಿಯುತವಾಗಿ ನಡೆಯಿತು. ತುಮಕೂರು ತಾಲೂಕಿನ 41 ಗ್ರಾಮ ಪಂಚಾಯಿತಿಗಳು, ಗುಬ್ಬಿ-34, ಕುಣಿಗಲ್-36, ತಿಪಟೂರು-25, ತುರುವೇಕೆರೆ-27, ಚಿಕ್ಕನಾಯಕನಹಳ್ಳಿ-27, ಮಧುಗಿರಿ-39, ಶಿರಾ-41, ಕೊರಟಗೆರೆ-24 ಹಾಗೂ ಪಾವಗಡ ತಾಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ಸೇರಿದಂತೆ ಒಟ್ಟು ಜಿಲ್ಲೆಯ 327 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಶಾಂತಿಯುತವಾಗಿ ನಡೆಯಿತು. ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿಗಳ 2661 ಕ್ಷೇತ್ರಗಳ ಮತ ಎಣಿಕೆಯು 167 ಕೊಠಡಿಗಳಲ್ಲಿ 762 ಟೇಬಲ್‍ಗಳಲ್ಲಿ ನಡೆದಿದ್ದು, ಮತ ಎಣಿಕೆಗಾಗಿ 817 ಮಂದಿ ಎಣಿಕೆ ಮೇಲ್ವಿಚಾರಕರು, 1624 ಮಂದಿ ಸಹಾಯಕರನ್ನು ನೇಮಿಸಲಾಗಿತ್ತು. ತುಮಕೂರು ತಾಲ್ಲೂಕು-ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ತುಮಕೂರು, ಗುಬ್ಬಿ-ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗುಬ್ಬಿ, ತಿಪಟೂರು-ಪಲ್ಲಗಟ್ಟಿ ಅಡವಪ್ಪ ಕಾಲೇಜು, ತುರುವೇಕೆರೆ-ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕನಾಯಕನಹಳ್ಳಿ-ಸರ್ಕಾರಿ ಪದವಿ ಪೂರ್ವ ಕಾಲೇಜು, ಮಧುಗಿರಿ-ಸರ್ಕಾರಿ ಪದವಿ ಪೂರ್ವ…
ಮಧುಗಿರಿ : ತಾಲೂಕಿನ 39 ಗ್ರಾ.ಪಂಗಳ 600 ಸದಸ್ಯ ಸ್ಥಾನಗಳಿಗೆ 1794 ಅಭ್ಯರ್ಥಿಗಳ ಮತ ಎಣಿಕೆ ಕಾರ್ಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಬೆಳಗ್ಗೆ 7 ಗಂಟೆಗೆ ಚುನಾವಣಾ ಮತ ಎಣೆಕೆ ಸಿಬ್ಬಂದಿಗಳನ್ನು ಮತ ಎಣಿಕೆ ಕೇಂದ್ರಕ್ಕೆ ಬಿಡಲಾಯಿತು. ನಂತರ ಅಭ್ಯರ್ಥಿಗಳು ಮತ್ತು ಏಜೆಂಟರನ್ನು ಬಿಡಲಾಯಿತು. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿ ಮೊದಲಿಗೆ 78 ಏಕ ಸದಸ್ಯ ಸ್ಥಾನಗಳು, 124 ದ್ವಿ ಸದಸ್ಯ ಕ್ಷೇತ್ರಗಳು, 67 ಮೂರು ಸದಸ್ಯ ಕ್ಷೇತ್ರಗಳು ಮತ್ತು 22 ನಾಲ್ಕು ಸದಸ್ಯ ಕ್ಷೇತ್ರಗಳಂತೆ ಹಂತ ಹಂತವಾಗಿ 25 ಟೇಬಲ್ ಗಳಲ್ಲಿ ಗ್ರಾ.ಪಂಗೆ 2 ಕ್ಷೇತ್ರಗಳಂತೆ ಮತ ಎಣಿಕೆ ಕಾರ್ಯ ಕೈಗೊಳ್ಳಲಾಯಿತು. ಗೆದ್ದ ಮೊದಲ ಅಭ್ಯರ್ಥಿ: ತಾಲೂಕಿನ ಬ್ಯಾಲ್ಯ ಗ್ರಾ.ಪಂ ವ್ಯಾಪ್ತಿಯ ಹನುಮಂತಪುರ ಕ್ಷೇತ್ರದ ಪಿಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಬೈರಪ್ಪನವರ…
ತುಮಕೂರು : ಪೊಲೀಸ್ ಇಲಾಖೆಗೆ ಸಹಾಯಕವಾಗಿ ಕೆಲಸ ನಿರ್ವಹಿಸುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯವಾದುದು ಎಂದು 7ನೇ ಅಧಿಕ ಸತ್ರ ಜಿಲ್ಲಾ ನ್ಯಾಯಾಧೀಶರಾದ ಎಸ್. ಸುಧೀಂದ್ರನಾಥ್ ತಿಳಿಸಿದರು. ಜಿಲ್ಲಾ ಗೃಹರಕ್ಷಕದಳದ ಕಚೇರಿ ಆವರಣದಲ್ಲಿ ಗುರುವಾರ ಅಖಿಲ ಭಾರತ ಗೃಹರಕ್ಷಕ ದಳದ ದಿನಾಚರಣೆ-2020 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಯಾವುದೇ ದಬ್ಬಾಳಿಕೆ ಇಲ್ಲದೆ ಸ್ವಯಂ ಪ್ರೇರಿತವಾಗಿ ಸಮಾಜ ಸೇವೆ ಮಾಡುವಂತಹ ಗೃಹರಕ್ಷಕದಳ ಸಾಮಾನ್ಯ ನಾಗರೀಕರಿಗೆ ವಿಶೇಷ ಅಭಿಮಾನ, ಗೌರವವಿದೆ ಎಂದರು. ವಿವಿಧ ಇಲಾಖೆಗಳಿಗೆ ಸಹಾ ಪಂಚಾಬ್, ರಾಜಸ್ತಾನ ರಾಜ್ಯಗಳ ಗಡಿ ಭಾಗದಲ್ಲಿ ಬಾರ್ಡರ್ ಸೆಕ್ಯುರಿಟಿಯಾಗಿ ಕೆಲಸ ನಿರ್ವಹಿಸುವಂತಹ ಯೋಧರಿಗೂ ಸಹ ಸಹಾಯಕರಾಗಿ ಗೃಹರಕ್ಷಕದಳದ ಸಿಬ್ಬಂದಿ ಕೆಲಸ ನಿರ್ವಹಿಸುತ್ತಾರೆ. ಹೋಂಗಾಡ್ರ್ಸ್ ದೇಶದ ಒಳಗಷ್ಟೇ ಅಲ್ಲ, ದೇಶದ ಗಡಿ ಭಾಗದ ರಕ್ಷಣೆಯನ್ನೂ ಹೊತ್ತಿದ್ದಾರೆ. ಇದು ಹೋಂಗಾಡ್ರ್ಸ್ ದಳದ ವಿಶೇಷ ಎಂದು ಹೇಳಿದರು. ಕರ್ತವ್ಯ ಸಮಗ್ರತೆ, ನಿಷ್ಠೆಗೆ ಹೋಂಗಾಡ್ರ್ಸ್ ಹೆಸರುವಾಸಿ,…
ತುಮಕೂರು : ಕೋವಿಡ್-19ರ ಮಾರ್ಗಸೂಚಿಯನ್ವಯ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಜನವರಿ 1 ರಿಂದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮವನ್ನು ಪುನರಾರಂಭಿಸಲಾಗುವುದು 10ನೇ ತರಗತಿ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳನ್ನು ನಡೆಸಲಾಗುವುದು ಎಂದು ಮಧುಗಿರಿ ಡಿಡಿಪಿಐ ರೇವಣ್ಣ ಸಿದ್ಧಪ್ಪ ಅವರು ತಿಳಿಸಿದ್ದಾರೆ. ಶಾಲಾ ಪ್ರಾರಂಭದ ದಿನ ತಳಿರು-ತೋರಣಗಳಿಂದ ಶಾಲೆಗಳನ್ನು ಸಿಂಗಾರ ಮಾಡುವುದರ ಜೊತೆಗೆ ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರನ್ನು ಶಾಲೆಗೆ ಕರೆಸಿ ವಿದ್ಯಾಗಮ ಕಾರ್ಯಕ್ರಮವನ್ನು “ಶಾಲೆಗೆ ಬನ್ನಿ ಮಕ್ಕಳೇ ಮಹಾಮಾರಿ ಕೊರೋನಾ ಓಡಿಸೋಣ ಮಕ್ಕಳನ್ನು ಓದಿಸೋಣ” ಎಂಬ ಘೋಷ ವಾಕ್ಯದೊಂದಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಗುವುದು. 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳನ್ನು ನಡೆಸುವಂತೆ ಎಲ್ಲಾ ಮುಖ್ಯ ಶಿಕ್ಷಕರು ಎಸ್.ಒ.ಪಿ ಅನುಸಾರ ಮತ್ತು ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಸೂಚನೆಗಳಂತೆ ಅಗತ್ಯ ಪೂರ್ವ ಸಿದ್ದತಾ ಕ್ರಮಗಳನ್ನು ಕೈಗೊಳ್ಳುವ ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಈಗಾಗಲೇ ತಾಲ್ಲೂಕಿನ…
ತುಮಕೂರು: ಜಿಲ್ಲಾ ಕುರುಬರ ಸಂಘದ 9ನೇ ವಾರ್ಷಿಕೋತ್ಸವ ಹಾಗೂ ಸರ್ವ ಸದಸ್ಯರ ಸಭೆ ಕುಣಿಗಲ್ ರಸ್ತೆಯ ಬೀರೇಶ್ವರ ಕಲ್ಯಾಣ ಮಂಟಪದಲ್ಲಿ ಸಂಘದ ಅಧ್ಯಕ್ಷ ಟಿ.ಆರ್.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಘದ ಅಧ್ಯಕ್ಷರಾದ ಟಿ.ಆರ್.ಸುರೇಶ್, ಕಳೆದ 9 ವರ್ಷಗಳಿಂದ ಸಂಘ- ಸಮಾಜದ ಅಭಿವೃದ್ಧಿಗೆ ದುಡಿಯುತ್ತಾ ಬಂದಿದೆ. ಕುರುಬ ಸಮುದಾಯಕ್ಕೆ ಸರಕಾರದಿಂದ ಹಾಗೂ ಇನ್ನಿತರ ಕಡೆಗಳಿಂದ ಅನ್ಯಾಯಗಳು,ತೊಂದರೆಗಳಾದಾಗ ಸಮಾಜದ ಜೊತೆ ನಿಂತು ಹೋರಾಟ ನಡೆಸುವ ಮೂಲಕ ನ್ಯಾಯ ದೊರಕಿಸಿಕೊಡಲು ಶ್ರಮಿಸಿದೆ. ಇತ್ತೀಚಿನ ಪೀರಣ್ಣವಾಡಿಯ ಸಂಗೋಳಿ ರಾಯಣ್ಣ ಪ್ರತಿಮೆ ದ್ವಂಸ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ಉಗ್ರ ಹೋರಾಟ ನಡೆಸುವ ಮೂಲಕ ಸಮಾಜದ ಹಿರಿಯರಿಗೆ ಬೆಂಬಲವಾಗಿ ನಿಂತಿದೆ. ಅಲ್ಲದೆ ಕುರುಬ ಸಮಾಜದ ಶೈಕ್ಷಣಿಕ, ಸಾಮಾಜಿಕ, ಅರ್ಥಿಕ, ರಾಜಕೀಯ ಅಭಿವೃದ್ದಿಗೆ ಜಿಲ್ಲಾ ಕುರುಬರ ಸಂಘದ ನಿರಂತರವಾಗಿ ಪ್ರಯತ್ನಿಸುತ್ತಾ ಬಂದಿದೆ ಎಂದರು. ತುಮಕೂರು ನಗರದ ಮುಖ್ಯರಸ್ತೆಯೊಂದಕ್ಕೆ ಮಾಜಿ ಸಂಸದ ಸಿ.ಎನ್.ಭಾಸ್ಕರಪ್ಪ ಅವರ…
ತುಮಕೂರು : ಕೋವಿಡ್-19 ಮಾರ್ಗಸೂಚಿಯನ್ವಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಹಾಗೂ 10ನೇ ಮತ್ತು 12ನೇ ತರಗತಿಗಳನ್ನು ಜನವರಿ 1ರಿಂದ ಪ್ರಾರಂಭ ಮಾಡಬೇಕೆಂದು ಡಿಡಿಪಿಐ ಹಾಗೂ ಬಿಇಓಗಳಿಗೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಶಾಲಾ ತರಗತಿಗಳ ಪ್ರಾರಂಭಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಶಾಲೆ ಪ್ರಾರಂಭಕ್ಕೆ ಮುನ್ನ ಪೋಷಕರ ಸಭೆ ನಡೆಸುವ ಮೂಲಕ ಕೋವಿಡ್-19ರ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಮತ್ತು ಸ್ಯಾನಿಟೈಸ್ ಮಾಡುವ ಬಗ್ಗೆ ಮತ್ತು ಆಗಿಂದಾಗ್ಗೆ ಲಿಕ್ಟಿಡ್ ಸೋಪಿನಲ್ಲಿ ಕೈತೊಳೆಯುವ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸಬೇಕು ಎಂದರು. ವಿದ್ಯಾರ್ಥಿಗಳಲ್ಲಿ ಕೆಮ್ಮು, ನೆಗಡಿ, ಸೀತ, ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ…
ಗುಬ್ಬಿ: ಹೆಚ್ಚಿದ ಅಪರಾಧ ಕೃತ್ಯದಿಂದ ಗುಬ್ಬಿ ನಾಗರೀಕರಲ್ಲಿ ಆತಂಕ ಮನೆ ಮಾಡಿದೆ. ಸರಗಳ್ಳರ ಹಾವಳಿ ಜತೆಗೆ ಈಚೆಗೆ ಪುಂಡರ ಹಾವಳಿ ಹೆಚ್ಚಾಗಿ ಪಟ್ಟಣದ ಹಾಡುಹಗಲೇ ಗುಂಪು ಕಟ್ಟಿಕೊಂಡು ಯುವಕನೊರ್ವನ ಮೇಲೆ ಹಲ್ಲೆ ಜತೆಗೆ ಜಾತ್ರೆಗೆ ಸಂಬಂಧಿಸಿದ ಹಣ ದರೋಡೆ ಯತ್ನ ನಡೆದಿರುವುದು ಭಯವನ್ನುಂಟು ಮಾಡಿದೆ. ಕಳೆದೊಂದು ವಾರದಲ್ಲಿ ಅಪರಾಧ ಕೃತ್ಯಗಳು ಸಾಲು ಸಾಲಾಗಿ ನಡೆದಿವೆ. ಸರಗಳ್ಳರು ಮತ್ತೊಮ್ಮೆ ತಮ್ಮ ಕೈಚಳಕ ತೋರಿದ್ದಾರೆ. ಈಚೆಗೆ ಸೈಲೆಂಟ್ ಆಗಿದ್ದ ಪಟ್ಟಣದಲ್ಲಿ ಸರಗಳ್ಳರು ಸೋಮವಾರದಂದೇ ಗುರಿಯಾಗಿಸಿಕೊಂಡು ಆಗಮಿಸುತ್ತಿರುವುದು ವಿಪರ್ಯಾಸವಾಗಿದೆ. ಸಂತೇ ದಿನದ ಸಂಜೆ ವೇಳೆ ಹೊಸಬಡಾವಣೆಗಳನ್ನೇ ಆಯ್ಕೆ ಮಾಡಿಕೊಂಡು ಪಟ್ಟಣದ ಕೊನೆಯ ರಸ್ತೆಗಳಲ್ಲಿ ಒಂಟಿ ಮಹಿಳೆಯರ ಬರುವಿಕೆಗೆ ಕಾದು ಸರಗಳಿಗೆ ಕೈ ಹಾಕುತ್ತಿದ್ದಾರೆ. ವಿನಾಯಕ ಬಡಾವಣೆ ಮತ್ತು ಮಾರುತಿನಗರ ಶುಭೋದಯ ಶಾಲೆಯ ಸಮೀಪದಲ್ಲಿ ಎರಡು ಪ್ರಕರಣ ಒಂದೇ ದಿನ ನಡೆದಿದೆ. ಈ ಹಿಂದೆ ಸರದಿ ಕಳ್ಳತನ, ಸರಗಳ್ಳತನ ನಾಗರೀಕರನ್ನು ಬೆಚ್ಚಿಬೇಳಿಸಿತ್ತು. ಕೊರೋನಾ ಸಮಯದಲ್ಲಿ…
ಹುಳಿಯಾರು: ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ರಾಗಿ ಖರೀದಿಸಲು ಹುಳಿಯಾರು ಮಾರುಕಟ್ಟೆಯಲ್ಲಿ ಕಛೇರಿ ತೆರೆಯಲಾಗಿದೆ. ಆದರೆ ಕಛೇರಿ ತೆಗೆದು ವಾರವಾದರೂ ಇನ್ನೂ ನೋಂದಣಿ ಪ್ರಕ್ರಿಯೆ ಮಾತ್ರ ಆರಂಭವಾಗಿಲ್ಲ. ಪರಿಣಾಮ ನಿತ್ಯ ನೂರಾರು ರೈತರು ಎಪಿಎಂಸಿಗೆ ಅಲೆಯುವಂತ್ತಾಗಿದೆ. ಈ ವರ್ಷ ಉತ್ತಮ ಮಳೆ ಬಂದ ಪರಿಣಾಮ ತಾಲೂಕಿನಲ್ಲಿ ರಾಗಿ ಬಂಪರ್ ಬೆಳೆ ಬಂದಿದೆ. ಅಲ್ಲದೆ ಕೋವಿಡ್‍ನಿಂದಾಗಿ ಹಳ್ಳಿಗೆ ಮರಳಿದ ಯುವ ರೈತರು ಉತ್ಸುಕರಾಗಿ ರಾಗಿ ಬೆಳೆದಿದ್ದಾರೆ. ಕಳೆದ 2 ವರ್ಷಗಳಿಂದ ರಾಗಿ ಖರೀದಿ ಕೇಂದ್ರ ತೆರೆದಿದ್ದರಿಂದ ಈ ವರ್ಷವೂ ತೆರೆಯುವ ನಿರೀಕ್ಷೆಯೊಂದಿಗೆ ಮಾರುಕಟ್ಟೆಗೆ ರಾಗಿ ಬಿಡದೆ ಸಂಗ್ರಹಿಸಿಟ್ಟಿದ್ದಾರೆ. ಹೆಸರು ನೊಂದಾಯಿಸಲು ಅಗತ್ಯವಾದ ಬೆಳೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಪ್ರತಿ ಕೈಯಲ್ಲಿಟ್ಟುಕೊಂಡು ಕಾಯುತ್ತಿದ್ದರು. ರೈತರ ನಿರೀಕ್ಷೆಯಂತೆ ಮಾರುಕಟ್ಟೆಯಲ್ಲಿ ರಾಗಿ ಬೆಲೆ ಕುಸಿದಿರುವುದರಿಂದ ಸರ್ಕಾರ ಮಧ್ಯ ಪ್ರವೆಶಿಸಿ ಒಂದು ಕ್ವಿಂಟಾಲ್‍ಗೆ 3295 ರೂ. ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವುದಾಗಿ ಘೋಷಿಸಿತ್ತು.…
ತುಮಕೂರು : ತುಮಕೂರು ಜಿಲ್ಲೆಯ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಇಂದು ಸಂಬಂಧಿಸಿದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಮತ ಎಣಿಕೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ತುಮಕೂರು ತಾಲೂಕಿನ 41 ಗ್ರಾಮ ಪಂಚಾಯಿತಿಗಳು, ಗುಬ್ಬಿ-34, ಕುಣಿಗಲ್-36, ತಿಪಟೂರು-25, ತುರುವೇಕೆರೆ-27, ಚಿಕ್ಕನಾಯಕನಹಳ್ಳಿ-27, ಮಧುಗಿರಿ-39, ಶಿರಾ-41, ಕೊರಟಗೆರೆ-24 ಹಾಗೂ ಪಾವಗಡ ತಾಲೂಕಿನ 33 ಗ್ರಾಮ ಪಂಚಾಯಿತಿಗಳು ಸೇರಿದಂತೆ ಒಟ್ಟು ಜಿಲ್ಲೆಯ 327 ಗ್ರಾಮ ಪಂಚಾಯಿತಿಗಳ ಮತ ಎಣಿಕೆಯು ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿಗಳ 2661 ಕ್ಷೇತ್ರಗಳ ಮತ ಎಣಿಕೆಯು 167 ಕೊಠಡಿಗಳಲ್ಲಿ 762 ಟೇಬಲ್‍ಗಳಲ್ಲಿ ನಡೆಯಲಿದೆ. ಮತ ಎಣಿಕೆಗಾಗಿ 817 ಮಂದಿ ಎಣಿಕೆ ಮೇಲ್ವಿಚಾರಕರು, 1624 ಮಂದಿ ಸಹಾಯಕರನ್ನು ನೇಮಿಸಲಾಗಿದೆ. ಮತ ಎಣಿಕೆಯು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ತುಮಕೂರು ತಾಲ್ಲೂಕು-ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ತುಮಕೂರು, ಗುಬ್ಬಿ-ಸರ್ಕಾರಿ ಪ್ರಥಮ…











