ತುಮಕೂರು: ಶಿಕ್ಷಣದಲ್ಲಿ ಹಿಂದುಳಿದಿರುವ ಗಾಣಿಗ ಸಮಾಜದ ಮಕ್ಕಳಿಗೆ ಶಿಕ್ಷಣ ನೀಡಲು ಸಮುದಾಯ ಮುಂದಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ ದಾಸ್ ಮೋದಿ ತಿಳಿಸಿದರು. ನಗರದ ಮೆಳೇ ಕೋಟೆಯ ಅಭಯಾಂಜನೇಯಸ್ವಾಮಿ ದೇವಾಸ್ತಾನದ ಬಳಿ, ತುಮಕೂರು ಜಿಲ್ಲಾ ಗಾಣಿಗರ ಸಂಘದ ವತಿಯಿಂದ ನಿರ್ಮಿಸಲಾಗುತ್ತಿರುವ ಸಮುದಾಯ ಭವನ ವೀಕ್ಷಿಸಿ ಅವರು ಮಾತನಾಡಿದರು. ಕರ್ನಾಟಕದ ಗಾಣಿಗ ಸಮಾಜದ ಒತ್ತಾಯದ ಮೇರೆಗೆ ಸಮುದಾಯ ಭವನ ವೀಕ್ಷಿಸಲು ಬಂದಿದ್ದು, ಸಮುದಾಯ ಭವನದಿಂದ ಸಮುದಾಯದ ಅಭಿವೃದ್ಧಿಗೆ ಸಹಾಯವಾಗಲಿದೆ, ಸಮುದಾಯ ಭವನದೊಂದಿಗೆ ಮಕ್ಕಳ ಶಿಕ್ಷಣಕ್ಕೂ ಪ್ರಾಮುಖ್ಯತೆಯನ್ನು ನೀಡಬೇಕಿದೆ ಎಂದು ಹೇಳಿದರು. ಸಮುದಾಯ ಭವನ ಅಥವಾ ದೇವಾಸ್ಥಾನ ಏನು ಮಾಡಿದರೂ ಅದು ಸಮುದಾಯದ ಅಭಿವೃದ್ಧಿಗೆ ಸಹಾಯಕವಾಗಲಿದೆ, ಹಾಗೆ ಯೇ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಐಎಎಸ್, ಐಪಿಎಸ್ ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಮಾಡ ಬೇಕಾದ ಹೊಣೆಗಾರಿಕೆಯೂ ನಮ್ಮೆಲ್ಲರ ಮೇಲಿದೆ…
Author: News Desk Benkiyabale
ತುಮಕೂರು : ಜಿಲ್ಲೆಯಲ್ಲಿ ಗ್ರಾಮಪಂಚಾಯತಿಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು (ಡಿ.11) ಕೊನೆಯ ದಿನವಾಗಿದ್ದು, ಮೊದಲ ಹಂತದ ಚುನಾವಣೆ ನಡೆಯುವ ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕಿನ ಗ್ರಾಮಪಂಚಾಯತಿಗಳಿಗೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಪಾವಗಡ ತಾಲ್ಲೂಕಿನ ರಾಜವಂತಿ, ಸಿ.ಕೆ.ಪುರ, ಮಂಗಳವಾಡ, ಕೆ.ಟಿ.ಹಳ್ಳಿ, ನಾನಿಗಾನಹಳ್ಳಿ, ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಗ್ರಾಮಪಂಚಾಯಿತಿಗಳಲ್ಲಿ ಚುನಾವಣಾ ಅಧಿಕಾರಿಗಳು ಕೈಗೊಂಡಿರುವ ಚುನಾವಣಾ ಪ್ರಕ್ರಿಯೆ ಹಾಗೂ ಸಿದ್ಧತೆಗಳ ಬಗ್ಗೆ ಪರಿಶೀಲಿಸಿ ಕೆಲವೊಂದು ನಿರ್ದೇಶನಗಳನ್ನು ನೀಡಿದರು. ಚುನಾವಣೆ ನೀತಿ ಸಂಹಿತೆ ಅನುಷ್ಟಾನ, ಚುನಾವಣಾ ಸಿದ್ಧತೆ, ಮತ್ತಿತರ ವಿಷಯಗಳ ಬಗ್ಗೆ ಚುನಾವಣಾ ಅಧಿಕಾರಿಗಳೊಂದಿಗೆ ಚರ್ಚಿಸಿ, ಚುನಾವಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು. ತದನಂತರ ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕಿನ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಚುನಾವಣಾ ಮಾರ್ಗಸೂಚಿ, ಮಾದರಿ ನೀತಿ…
ತುಮಕೂರು : ಜಿಲ್ಲೆಯ ಕೆಲ ಗ್ರಾಮಪಂಚಾಯಿತಿಗಳಲ್ಲಿ ಸದಸ್ಯ ಸ್ಥಾನಗಳಿಗೆ ಹರಾಜು ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಪ್ರಕರಣಗಳು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ: ಕೆ. ರಾಕೇಶ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸ್ಥಾನಗಳನ್ನು ಹರಾಜು ಮಾಡಿದರೆ ಅದೊಂದು ಗಂಭೀರ ದುರ್ನಡತೆ ಮತ್ತು ಅವ್ಯವಹಾರವಾಗುತ್ತದೆ. ಅಲ್ಲದೆ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು. ತುಮಕೂರು ಜಿಲ್ಲೆಯಲ್ಲಿ ಇಂತಹ ಹರಾಜು ಪ್ರಕ್ರಿಯೆಗಳನ್ನು ತಡೆಯಲು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಈಗಾಗಲೇ ನಿರ್ದೇಶನ ನೀಡಲಾಗಿದ್ದು, ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಚುನಾವಣೆಯ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದರೆ ಜನಪ್ರತಿನಿಧಿ ಕಾಯ್ದೆ ಹಾಗೂ ಪಂಚಾಯತ್ ರಾಜ್ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ…
ತುಮಕೂರು: ತುಮಕೂರು ತಾಲೂಕಿನ 41 ಗ್ರಾಮ ಪಂಚಾಯತಿಗಳ ಸದಸ್ಯ ಸ್ಥಾನಕ್ಕೆ ಡಿಸೆಂಬರ್ 22ರಂದು ಚುನಾವಣಾ ಮತದಾನ ನಡೆಯಲಿದ್ದು, 50 ಆಕ್ಸಿಲರಿ ಮತಗಟ್ಟೆ ಸೇರಿ ಒಟ್ಟು 365 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 91 ಸೂಕ್ಷ್ಮ, 77 ಅತಿಸೂಕ್ಷ್ಮ ಹಾಗೂ 197 ಸಾಮಾನ್ಯ ಮತಗಟ್ಟೆಗಳನ್ನಾಗಿ ವಿಂಗಡಿಸಲಾಗಿದೆ. ತಾಲೂಕಿನ 41 ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ 118109 ಪುರುಷರು, 118011 ಮಹಿಳೆಯರು ಹಾಗೂ 19 ಇತರೆ ಸೇರಿದಂತ ಒಟ್ಟು 236139 ಮತದಾರರಿದ್ದು ಒಟ್ಟು 746 ಸದಸ್ಯ ಸ್ಥಾನಗಳಿಗೆ ಮತದಾನ ನಡೆಯಲಿದೆ. ಮಸ್ಟರಿಂಗ್, ಡಿಮಸ್ಟರಿಂಗ್ ಹಾಗೂ ಮತ ಎಣಿಕೆಯನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ನಡೆಸಲಾಗುವುದು. ಕೋವಿಡ್-19 ಮಾರ್ಗಸೂಚಿ, ಚುನಾವಣಾ ಮಾರ್ಗಸೂಚಿಗಳನ್ವಯ ಹಾಗೂ ಮಾದರಿ ನೀತಿ ಸಂಹಿತೆಯಡಿ ಈ ಚುನಾವಣೆಯನ್ನು ನ್ಯಾಯ ಸಮ್ಮತವಾಗಿ ನಡೆಸಲಾಗುವುದು. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಿದ ಬಗ್ಗೆ ಪ್ರತಿದಿನ ಆಯಾ ಗ್ರಾಮ ಪಂಚಾಯಿತಿ ಸೂಚನಾ ಫಲಕದಲ್ಲಿ ಮಧ್ಯಾಹ್ನ 3 ಗಂಟೆಯ…
ತುಮಕೂರು: ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗಪತ್ತೆ ಮಾಡುತ್ತಿರುವ ಸ್ಕ್ಯಾನಿಂಗ್ ಸೆಂಟರ್‍ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಲಿಂಗಪತ್ತೆ ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 105 ಸ್ಕ್ಯಾನಿಂಗ್ ಸೆಂಟರ್ ನೊಂದಣಿಯಾಗಿದ್ದು, ಅದರಲ್ಲಿ ಪ್ರಸ್ತುತ 95 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದೆ. ಆನ್‍ಲೈನ್ ಬಾಲಿಕ ಸಾಫ್ಟವೇರ್‍ನಲ್ಲಿ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‍ಗಳ ನೊಂದಣಿ ಕುರಿತ ಮಾಹಿತಿ ಇರುತ್ತದೆ. ಸ್ಕ್ಯಾನಿಂಗ್ ಸೆಂಟರ್‍ಗಳ ವೈದ್ಯರಿಗೆ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ ಹಾಗೂ ಅನುಷ್ಠಾನದ ಬಗ್ಗೆ ತರಬೇತಿ ನೀಡಲಾಗಿದೆ ಎಂದರು. ಸೆಂಟರ್‍ಗಳು ಫಾರಂ-ಎಫ್ ಅನ್ನು ಅಪ್‍ಲೋಡ್ ಮಾಡುತ್ತಿದ್ದು, ಇದರಿಂದ ಮಾನಿಟರಿಂಗ್ ಮಾಡಲು ಅನುಕೂಲವಾಗಿದೆ. ಎಲ್ಲಾ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಜಿಲ್ಲಾ ತಪಾಸಣಾ ಹಾಗೂ ಮೇಲ್ವಿಚಾರಣಾ ಸಮಿತಿ ಅನಿರೀಕ್ಷಿತ ಭೇಟಿ ನೀಡಿ…
ತುಮಕೂರು : ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿಂದು ರೈತ ಸಂಘಟನೆಗಳು ಹಮ್ಮಿಕೊಂಡಿರುವ ಬಾರುಕೋಲು ಚಳವಳಿ, ವಿಧಾನಸೌಧ ಮುತ್ತಿಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜಿಲ್ಲೆಯ ರೈತ ಸಂಘಟನೆಯ ಕಾರ್ಯಕರ್ತನ್ನು ನಗರದ ಹೊರವಲಯದ ಜಾಸ್‍ಟೋಲ್‍ಗೇಟ್ ಬಳಿ ಪೊಲೀಸರು ತಡೆದ ಘಟನೆ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಮತ್ತು ಹುಳಿ ಯಾರು ಹೋಬಳಿಯ ರೈತ ಸಂಘಟನೆಗಳ ಕಾರ್ಯಕರ್ತರು ಬಾರ್ ಕೋಲ್ ಚಳವಳಿಯಲ್ಲಿ ಪಾಲ್ಗೊಳ್ಳಲು ವಾಹನದಲ್ಲಿ ತೆರಳುತ್ತಿದ್ದರು. ಸರ್ಕಾರದ ಆದೇಶದ ಮೇರೆಗೆ ಕಾರ್ಯಪ್ರವೃತ್ತರಾಗಿದ್ದ ಜಿಲ್ಲಾ ಪೊಲೀಸರು ಕ್ಯಾತ್ಸಂದ್ರದ ಜಾಸ್ ಟೋಲ್ ಗೇಟ್ ಬಳಿ ರೈತರ ವಾಹನವನ್ನು ತಡೆದು ಬೆಂಗಳೂರಿಗೆ ತೆರಳದಂತೆ ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ಪೆÇಲೀಸರು ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಸಂಘಟನೆಯ ಪದಾಧಿಕಾರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ನಂತರ ಮಾತನಾಡಿದ ರೈತ ಸಂಘಟನೆ ಮತ್ತು…
ತುಮಕೂರು : ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಬೀದಿ ವ್ಯಾಪಾರಸ್ಥರ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಈವರೆಗೆ ಆನ್‍ಲೈನ್ ಮೂಲಕ ಸ್ವೀಕೃತವಾಗಿರುವ 6995 ಬೀದಿಬದಿ ವ್ಯಾಪಾರಿಗಳ ಅರ್ಜಿಗಳ ಪೈಕಿ 1609 ಬೀದಿ ಬದಿ ವ್ಯಾಪಾರಸ್ಥರಿಗೆ ತಲಾ 10ಸಾವಿರ ರೂ.ಗಳ ಕಿರುಸಾಲವನ್ನು ವಿತರಣೆ ಮಾಡಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃಧ್ಧಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್(ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ಸಹಯೋಗದಲ್ಲಿ ನಗರದ ಎಸ್‍ಬಿಐ ಬ್ಯಾಂಕ್ ಆವರಣದಲ್ಲಿಂದು ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್ ನಿಧಿ ಯೋಜನೆಯಡಿ ಕಿರು ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ವಿತರಣೆ ಮಾಡಲು ಹಮ್ಮಿಕೊಂಡಿದ್ದ 2 ದಿನಗಳ ಕಿರುಸಾಲ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್-2019ರ…
ತುಮಕೂರು: ಕೇಂದ್ರ ಸರ್ಕಾರದ ಕಾಯ್ದೆಗಳನ್ನು ವಿರೋಧಿಸಿ ಕಳೆದ 13 ದಿನಗಳಿಂದ ರೈತರು ಹೋರಾಟ ಮಾಡುತ್ತಿದ್ದಾರೆ, ರೈತ ವಿರೋಧಿ ಕಾಯ್ದೆಯನ್ನು ವಾಪಾಸ್ ಪಡೆಯಲು ಒತ್ತಾಯಿಸಿದ್ದಾರೆ, ಕಾಯ್ದೆ ಹಿಂಪಡೆಯಲು ಮಾಜಿ ಪ್ರಧಾನಿ ದೇವೇಗೌಡರು ಪತ್ರ ಬರೆದರು ಮೋದಿ ಅವರು ಕಾಯ್ದೆಯನ್ನು ವಾಪಾಸ್ ಪಡೆಯಲಿಲ್ಲ ಎಂದು ಜೆಡಿಎಸ್ ನಗರಾಧ್ಯಕ್ಷ ಬೆಳ್ಳಿ ಲೋಕೇಶ್ ಆರೋಪಿಸಿದರು. ಭಾರತಬಂದ್ ಅಂಗವಾಗಿ ಜೆಡಿಎಸ್ ಕಚೇರಿಯಿಂದ ಟೌನ್‍ಹಾಲ್‍ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರೈತರಿಗೆ ಬೆಂಬಲ ಸೂಚಿಸಿದರು, ಈ ವೇಳೆ ಮಾತನಾಡಿದ ಅವರು, ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದರು, ಕೃಷಿ ಸಚಿವರಾಗಲಿ, ಪ್ರಧಾನಿಗಳಾಗಲಿ ರೈತರ ಅಹವಾಲು ಆಲಿಸಲು ಆಗಲಿಲ್ಲ ಎಂದರೆ ಅವರ ರೈತ ಪರ ಕಾಳಜಿಯನ್ನು ರೈತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ರಾಜ್ಯದಲ್ಲಿ ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ ನೀಡಿದ್ದು ರೈತ ಚಳವಳಿಗೆ ಬೆಂಬಲ ನೀಡುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೂಚಿಸಿದ್ದರು, ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ ಅವರ ನೇತೃತ್ವದಲ್ಲಿ ಕೇಂದ್ರದಲ್ಲಿ…
ತುಮಕೂರು : ಗ್ಯಾಸ್‍ಪೈಪ್‍ಲೈನ್ ಹಾದು ಹೋಗಿದ್ದ ಜಾಗದಲ್ಲಿ ಜೆಸಿಬಿ ಯಂತ್ರ ಅಗೆದ ಪರಿಣಾಮ ಪೈಪ್ ಒಡೆದು ಗ್ಯಾಸ್ ಸೋರಿಕೆಯಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ಪೆÇಲೀಸ್ ಪೇದೆಯ ಕಾರ್ಯಕ್ಷಮತೆಯಿಂದ ತಪ್ಪಿರುವ ಘಟನೆ ನಗರದಲ್ಲಿಂದು ಬೆಳಿಗ್ಗೆ ನಡೆದಿದೆ. ನಗರದ ಹೃದಯ ಭಾಗದಲ್ಲಿರುವ ಬಿ.ಹೆಚ್. ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮುಂಭಾಗದಲ್ಲಿ ಗ್ಯಾಸ್‍ಪೈಪ್ ಲೈನ್ ಹಾದು ಹೋಗಿದೆ. ಯಾವುದೋ ಜೆಸಿಬಿ ಯಂತ್ರ ಕೆಲಸ ಮಾಡುವ ಭರದಲ್ಲಿ ಈ ಪೈಪ್‍ಲೈನ್ ಹಾದು ಹೋಗಿರುವ ಜಾಗದಲ್ಲಿ ಅಗೆದಿರುವ ಪರಿಣಾಮ ಗ್ಯಾಸ್‍ಪೈಪ್ ಒಡೆದು ಗ್ಯಾಸ್ ಸೋರಿಕೆಯಾಗಿದೆ. ಭೂಮಿಯೊಳಗಿಂದ ಗ್ಯಾಸ್ ಬರುತ್ತಿದ್ದನ್ನು ಗಮನಿಸಿರುವ ಜೆಸಿಬಿ ಯಂತ್ರದ ಚಾಲಕ ತಕ್ಷಣ ಅಲ್ಲಿಂದ ಜೆಸಿಬಿಯೊಂದಿಗೆ ಪರಾರಿಯಾಗಿದ್ದಾನೆ. ಬೆಳಿಗ್ಗೆ ಈ ರಸ್ತೆ ಮಾರ್ಗದಲ್ಲಿ ಓಡಾಡುತ್ತಿದ್ದ ಸಾರ್ವಜನಿಕರು ಭೂಮಿಯೊಳಗಿನಿಂದ ಬರುತ್ತಿರುವ ಗ್ಯಾಸ್‍ನ್ನು ಗಮನಿಸಿ ತಕ್ಷಣ ಅಲ್ಲೇ ಸಮೀಪದಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೆÇಲೀಸ್ ಪೇದೆ ರಂಗಸ್ವಾಮಿ ಅವರಿಗೆ ಈ ಸುದ್ದಿ ತಿಳಿಸಿದ್ದಾರೆ. …
ತುಮಕೂರು : ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ಕರೆ ನೀಡಿದ್ದ ಭಾರತ್ ಬಂದ್ ಅಂಗವಾಗಿ ನಗರದಲ್ಲಿ ರೈತ ಸಂಘಟನೆಗಳು, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದವು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಜಮಾಯಿಸಿದ ರೈತ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರದ ಅಣಕು ಶವವನ್ನು ದಹಿಸಿದ ನಂತರ ಬಿ.ಎಸ್.ರಸ್ತೆ, ಜೆ.ಸಿ.ರಸ್ತೆ, ಮಂಡಿಪೇಟೆ ರಸ್ತೆ, ಬಾರ್‍ಲೈನ್‍ರಸ್ತೆನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಆಕ್ರೋಶ ಹೊರ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾದ್ಯಕ್ಷ ಆನಂದ್ ಪಟೇಲ್, ಕೇಂದ್ರ ಸರ್ಕಾರದ ದೇಶದ ಸಂವಿಧಾನಗಳಿಗೆ ಬೆಲೆ ಕೊಡದೆ ಸರ್ವಾಧಿಕಾರಿಯಂತೆ ಹಿಟ್ಲರ್ ತತ್ವಗಳನ್ನು ಅಳವಡಿಸಿಕೊಂಡು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ದೇಶದಲ್ಲಿ…










