Author: News Desk Benkiyabale

ತುಮಕೂರು :       ತುಮಕೂರು ಜಿಲ್ಲೆಯಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‍ಡೌನ್ ಇರುವುದರಿಂದ ಜಿಲ್ಲೆಯ ರೈತರು ಬೆಳೆದಿರುವ ಕಲ್ಲಂಗಡಿ, ಕರಬೂಜ, ಟಮೋಟೋ ಹಾಗೂ ಪಪ್ಪಾಯ ಹಣ್ಣುಗಳನ್ನು ಹಾಪ್‍ಕಾಮ್ಸ್ ಹಾಗೂ ವ್ಯಾಪಾರಸ್ಥರನ್ನು ಲಿಂಕ್ ಮಾಡುವ ಮೂಲಕ ಖರೀದಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.       ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಾ, ಇದಕ್ಕಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಕ್ರಮ ಕೈಗೊಂಡಿದ್ದು, ಜಿಲ್ಲೆಗೆ ಅಗತ್ಯವಿರುವಷ್ಟು ಜಿಲ್ಲೆಯಲ್ಲೇ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಚಿತ್ರದುರ್ಗ, ಬೆಂಗಳೂರು ಜಿಲ್ಲೆಗಳಿಗೆ ಕಳುಹಿಸಲು ಹಾಗೂ ನೆರೆಯ ರಾಜ್ಯದ ಅನಂತಪುರದಲ್ಲಿರುವ ವ್ಯಾಪಾರಸ್ಥರನ್ನು ಲಿಂಕ್ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.       ತುಮಕೂರು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳನ್ನು ಎಪಿಎಂಸಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿ ಮನೆ-ಮನೆಗೆ ಹಾಪ್‍ಕಾಮ್ಸ್…

Read More

ತುಮಕೂರು :       ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಇಂದು ಶಿರಾ ತಾಲ್ಲೂಕಿಗೆ ಭೇಟಿ ನೀಡಿ ತಾಲ್ಲೂಕಿನಾದ್ಯಂತ ಕೋವಿಡ್-19 ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.        ಉತ್ತರ ಕರ್ನಾಟಕದಿಂದ ವಲಸೆ ಬಂದಿರುವ ಕಾರ್ಮಿಕರಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಸುಮಾರು 100 ಜನಕ್ಕೆ ಆಶ್ರಯ ಕಲ್ಪಿಸಲಾಗಿದ್ದು, ಅವರಿಗೆ ಕೊರೋನಾ ವೈರಸ್ ಹರಡುವ ಬಗ್ಗೆ ಅರಿವು ಮೂಡಿಸಿ ಮನೋಸ್ಥೈರ್ಯ ತುಂಬಿದರು ಹಾಗೂ ಅವರಿಗೆ ಒದಗಿಸಲಾಗಿರುವ ಮೂಲಭೂತ ಸೌಲಭ್ಯಗಳ ಬಗ್ಗೆಯೂ ಪರಿಶೀಲನೆ ನಡೆಸಿ ದಿನನಿತ್ಯ ಬೇಕಾಗುವ ಅಗತ್ಯ ಸಾಮಗ್ರಿಗಳಾದ ಪೇಸ್ಟ್, ಸೋಪು, ಸ್ಯಾನಿಟರಿ ಪ್ಯಾಡ್ಸ್ ಹಾಗೂ ಬ್ರಷ್‍ಗಳನ್ನು ಸ್ಥಳದಲ್ಲಿಯೇ ವಿತರಿಸಿದರು. ಅವರಿಗೆ ಕುಡಿಯುವ ನೀರಿನ ಪೂರೈಕೆಗೆ ಮತ್ತು ಅವರು ತಂಗಿರುವ ಕೊಠಡಿ ಮತ್ತು ಶೌಚಾಲಯಗಳ ಸ್ವಚ್ಛತೆ ಕಾಪಾಡುವ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿರಾ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದ ಅವರು ಹೊರರೋಗಿಗಳ ಚಿಕಿತ್ಸೆ ಕುರಿತು ಆಸ್ಪತ್ರೆ…

Read More

ತುಮಕೂರು :       ಜಿಲ್ಲೆಯಿಂದ ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ ತೆರಳಿದ್ದ 19 ಮಂದಿಯನ್ನು ಪತ್ತೆ ಹಚ್ಚಲಾಗಿದ್ದು, ಅವರನ್ನು ವೈದ್ಯಕೀಯ ತಪಾಸಣೆ(ಮೆಡಿಕಲ್ ಸ್ಕ್ರಿನಿಂಗ್)ಗೊಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.       ವೈದ್ಯಕೀಯ ತಪಾಸಣೆಗೊಳಪಡಿಸಿದ 19 ಮಂದಿಯನ್ನು ಐಸೋಲೇಶನ್‍ನಲ್ಲಿಡಲಾಗಿದೆ. ಈವರೆಗೂ ದೆಹಲಿಗೆ ತೆರಳಿದ್ದ 19 ಜನರನ್ನು ಮಾತ್ರ ಪತ್ತೆ ಹಚ್ಚಲಾಗಿದ್ದು, ಮಾರ್ಚ್ 8 ರಿಂದ 20ರವರೆಗೂ ಇನ್ನೂ ಹೆಚ್ಚಿನ ಜನರು ಹೋಗಿರುವ ಸಾಧ್ಯತೆ ಇದೆ.       ತಬ್ಲಿಘಿ ಜಮಾತ್ ಸಭೆಗೆ ತೆರಳಿದವರ ಬಗ್ಗೆ ಮಾಹಿತಿಯುಳ್ಳ ಪತ್ರಿಕಾ ಮಾಧ್ಯಮದವರಾಗಲಿ ಅಥವಾ ಸಾರ್ವಜನಿಕರಾಗಲಿ ತುರ್ತಾಗಿ ಕಂಟ್ರೋಲ್ ರೂಂ ಸಂಖ್ಯೆ: 0816-2257368ಕ್ಕೆ ಕರೆ ಮಾಡಿ ತಿಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.  

Read More

ಚಿಕ್ಕನಾಯಕನಹಳ್ಳಿ :      ಆಕಸ್ಮಿಕ ಬೆಂಕಿ ಅವಘಡದಲ್ಲಿ ಮೂರು ಪೆಟ್ಟಿಗೆ ಅಂಗಡಿಗಳು ಸುಟ್ಟು ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಗೀಡಾದ ಪ್ರಕರಣ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ.       ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಅವಘಡದಲ್ಲಿ ಎರಡು ಎಗ್ ರೈಸ್ ಅಂಗಡಿ ಒಂದು ಕೋಳಿಮೊಟ್ಟೆ ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ತಕ್ಷಣ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚುದುರಂತವನ್ನು ತಪ್ಪಿಸಿದರು.       ಈ ಅಗ್ನಿ ಅವಘಡದಲ್ಲಿ ಪಟ್ಟಿಗೆ ಅಂಗಡಿಯೂ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು ನಷ್ಠ ಅನುಭವಿಸಿದೆ. ಈ ಸಂದರ್ಭದಲ್ಲಿ ಅಗ್ನಿ ಶಾಮಕ ಸಿಬ್ಬಂದಿಯ ಮುಖ್ಯಸ್ಥರಾದ ಮಲ್ಲಿಕಾರ್ಜುನಯ್ಯ ಮತ್ತು ತಂಡಕ್ಕೆ ಅಂಗಡಿ ಮಾಲಿಕರಾದ ಅಶೋಕ್, ಮಲ್ಲಿಕ್ ಹಾಗೂ ಜಲೀಲ್‍ಸಾಬ್ ರವರು ಅಗ್ನಿ ನಂದಿಸುವಲ್ಲಿ ನೆರವಾದರು.

Read More

 ತುಮಕೂರು :       ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಲಾಕ್‍ಡೌನ್ ಘೋಷಣೆ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಿರ್ಗತಿಕರು, ಬಡವರು, ಕೂಲಿಕಾರ್ಮಿಕರಿಗೆ ನೀಡಲು ಶಾಸಕ ಜ್ಯೋತಿಗಣೇಶ್ ನೇತೃತ್ವದಲ್ಲಿ ನಗರದ ಮಂಡಿಪೇಟೆಯಲ್ಲಿಂದು ವರ್ತಕರಿಂದ ದಿನಸಿ ಪದಾರ್ಥಗಳನ್ನು ಸಂಗ್ರಹ ಮಾಡಲಾಯಿತು.       ಶಾಸಕ ಜ್ಯೋತಿಗಣೇಶ್ ಅವರು ಮಂಡಿಪೇಟೆಯ ಪ್ರತಿ ಅಂಗಡಿ ಮಳಿಗೆಗೆ ಖುದ್ದಾಗಿ ಭೇಟಿ ನೀಡಿ ಸಂಕಷ್ಟದಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ನೀಡಬೇಕೆಂದು ವರ್ತಕರಲ್ಲಿ ಮನವಿ ಮಾಡಿ ಮಾತನಾಡುತ್ತಾ, ವರ್ತಕರೆಲ್ಲಾ ತುಂಬು ಹೃದಯದಿಂದ ದಿನಸಿ ಪದಾರ್ಥಗಳನ್ನು ನೀಡಲು ಮುಂದೆ ಬಂದಿದ್ದು, ಸಂಗ್ರಹಿಸಿದ ದಿನಸಿಯನ್ನು ಕ್ರೋಢಿಕರಿಸಿ ಅರ್ಹರಿಗೆ ವಿತರಿಸಲಾಗುವುದು ಎಂದು ತಿಳಿಸಿದರಲ್ಲದೆ, ಧನ ಸಹಾಯ ಮಾಡಲಿಚ್ಛಿಸುವವರು ಜಿಲ್ಲಾಡಳಿತ/ ಮುಖ್ಯಮಂತ್ರಿಗಳ ಪರಿಹಾರ ನಿಧಿ/ ಪಿಎಂ ಕೇರ್ ನಿಧಿಗೆ ಸಂದಾಯ ಮಾಡಬಹುದಾಗಿದೆ ಎಂದು ಮನವಿ ಮಾಡಿದರು.        ನಗರದ ವೀರಶೈವ ಕಲ್ಯಾಣ ಮಂಟಪ, ಅಯ್ಯಪ್ಪಸ್ವಾಮಿ ಮಂದಿರ, ಶಂಕರಮಠ, ಬ್ರಾಹ್ಮಣರ ವಸತಿ ನಿಲಯ ಮತ್ತಿತರ ಕಡೆ ದಾನಿಗಳಿಂದ ಸಂಗ್ರಹಿಸಿದ ದವಸ ಧಾನ್ಯಗಳನ್ನು ಬಳಸಿ ತಯಾರಿಸಿದ ಊಟವನ್ನು…

Read More

 ತುಮಕೂರು :       ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗೆ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಪ್ರಚಾರ ವಾಹಿನಿ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಇಂದು ಚಾಲನೆ ನೀಡಿದರು.       ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಭಾರತೀಯ ರೆಡ್‍ಕ್ರಾಸ್ ಸೊಸೈಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಹಯೋಗದಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.       ಚಾಲನೆ ನೀಡಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಪ್ರಚಾರ ವಾಹಿನಿ ಕಾರ್ಯಕ್ರಮದಲ್ಲಿ ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕು ಹಾಗೂ ಕಾರ್ಮಿಕ ವಲಯಗಳಲ್ಲಿ ಜಾಗೃತಿ ವಾಹನ ಸಂಚರಿಸಿ ಕೊರೋನಾ ವೈರಸ್ ಸೋಂಕು ತಡೆಯುವ ಬಗ್ಗೆ ಪ್ರಚಾರ ಮಾಡುವ ಮೂಲಕ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.       ಈ…

Read More

ತುಮಕೂರು:       ತುಮಕೂರು ವಿಪ್ರೋ ಎಂಟರ್ ಪ್ರೈಸಸ್ ಪ್ರೈ.ಲಿಮಿಟೆಡ್ ಕೋವಿಡ್-19 ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ 5ಲಕ್ಷ ಕರಪತ್ರಗಳನ್ನು ಮುದ್ರಿಸಿ ಪ್ರತಿ ಮನೆ-ಮನೆಗೆ ಕರಪತ್ರವನ್ನು ಹಾಗೂ ಎರಡೆರಡು ಸೋಪುಗಳನ್ನು ವಿತರಿಸುವ ಮೂಲಕ ವೈಯಕ್ತಿಕ ಸ್ವಚ್ಛತೆಗೆ ಮತ್ತು ಅರಿವು ಕಾರ್ಯಚಟುವಟಿಕೆಗೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದರು.       ಅವರು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿಂದು ಕರಪತ್ರ ಮತ್ತು ಸೋಪು ವಿತರಣೆ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಮಾತನಾಡಿದರು. ಸಂಸ್ಥೆಯ ಸಿಎಸ್‍ಆರ್ ನಿಧಿಯಿಂದ ನೀಡಲಾಗುತ್ತಿದೆ. ಕೊರೋನಾವನ್ನು ನಿಯಂತ್ರಿಸುವ ಕುರಿತು 5ಲಕ್ಷ ಕರಪತ್ರ ಮುದ್ರಿಸಿದ್ದು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆಮನೆಗೆ ವಿತರಿಸಲಾಗುವುದು ಹಾಗೂ ಪ್ರತಿ ಮನೆಗೆ 2 ಸೋಪುಗಳು ನೀಡಲಾಗುವುದು ಎಂದರು. ಜಿಲ್ಲೆಯ ಜನತೆ ಕೊರೋನಾ ವೈರಸ್ ಕುರಿತು ಭಯ ಪಡುವುದು ಬೇಡ. ವ್ಯಕ್ತಿಯಿಂದ ವ್ಯಕ್ತಿಗೆ ಅಂತರ ಕಾಯ್ದುಕೊಳ್ಳಿ ಮತ್ತು ಶುಚಿತ್ವಕ್ಕೆ ಮಹತ್ವ ನೀಡಿ, ಸ್ವರಕ್ಷಣೆ ಮಾಡಿಕೊಳ್ಳುವುದರ ಜೊತೆಗೆ…

Read More

 ತುಮಕೂರು:       ತುಮಕೂರು ಜಿಲ್ಲೆಯಲ್ಲಿ ಈವರೆಗೂ ಪಿ-60, ಪಿ-84 2 ಪ್ರಕರಣಗಳಲ್ಲಿ ಕೋವಿಡ್-19 ಪಾಸಿಟಿವ್ ಕಂಡು ಬಂದಿದ್ದು, ಇದನ್ನು ಹೊರತುಪಡಿಸಿ ಇವರ ಪ್ರೈಮರಿ ಕಾಂಟ್ಯಾಕ್ಟ್ ಇದ್ದವರನ್ನು ಗುರುತಿಸಿ ಜಿಲ್ಲೆಯಲ್ಲಿ 72 ಜನರನ್ನು ಪ್ರತ್ಯೇಕವಾಗಿ ಐಸೋಲೇಶನ್ ವಾರ್ಡ್‍ನಲ್ಲಿ ಇರಿಸಲಾಗಿದ್ದು, ಎಲ್ಲರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಹಿಸಲಾಗಿದ್ದು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದರು.       ನೆನ್ನೆ 16 ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳಹಿಸಲಾಗಿತ್ತು. ಅದರಲ್ಲಿ 11 ಮಾದರಿಗಳು ತಿಪಟೂರಿನಿಂದ ಕಳಹಿಸಲಾಗಿತ್ತು. ಇವು ಕೂಡ ನೆಗೆಟಿವ್ ಬಂದಿದೆ. ಆದರೂ ಸಹ ಇವರನ್ನು 14 ದಿನಗಳವರೆಗೆ ಐಸೋಲೇಶನ್‍ನಲ್ಲಿಯೇ ಇರಿಸಲಾಗುವುದು. ನಂತರ ಅವರನ್ನು ಮನೆಗೆ ಕಳಹಿಸಲಾಗುತ್ತದೆ ಎಂದರು.       ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ನೊಡಲ್ ಅಧಿಕಾರಿಯನ್ನಾಗಿ ನೇಮಿಸಿ ಕಾರ್ಮಿಕರ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಕಾರ್ಮಿಕರಿಗೆ ಯಾವುದೇ ಕೊರತೆಯಾಗದಂತೆ 20 ಕಡೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ 11 ಶೆಲ್ಟರ್‍ಗಳನ್ನು ಗುರುತಿಸಲಾಗಿದೆ. ಕಾರ್ಮಿಕರು, ಬಡವರು…

Read More

ತುಮಕೂರು:       ಸರ್ಕಾರದ ಸೂಚನೆಯಂತೆ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳನ್ನು ಕಡ್ಡಾಯವಾಗಿ ತೆರೆಯವುದು ಮತ್ತು ಬಾಡಿಗೆ ಮನೆಯಲ್ಲಿರುವ ವೈದ್ಯರನ್ನು ಖಾಲಿ ಮಾಡುವವರ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಮಧುಗಿರಿ ಪಟ್ಟಣದಲ್ಲಿಂದು ತಾಲ್ಲೂಕಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅವರು ಮಾತನಾಡಿದರು.       ಈಗಾಗಲೇ ಕೋವಿಡ್-19 ದೇಶದೆಲ್ಲೆಡೆ ವ್ಯಾಪಕ ಹರಡುತ್ತಿರುವ ಹಿನ್ನೆಲೆಯಲ್ಲಿ 3ನೇ ಹಂತಕ್ಕೆ ಹೋಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಖಾಸಗಿ ವೈದ್ಯರುಗಳು ತಮ್ಮ ಆಸ್ಪತ್ರೆ ಮತ್ತು ಕ್ಲಿನಿಕ್‍ಗಳನ್ನು ತೆರೆದು ಸ್ಥಳೀಯರಿಗೆ ಅನುಕೂಲವಾಗುವಂತೆ ಸಹಕರಿಸಬೇಕು ಎಂದರು. ಜಿಲ್ಲಾಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿರ್ವತಿಸಲಾಗಿದ್ದು, ಕೊರೋನಾ ಶಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುವುದು. ಜಿಲ್ಲಾಸ್ಪತ್ರೆಗೆ ಬರುವ ಗರ್ಭಿಣಿಯರನ್ನು ಶ್ರೀದೇವಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುವುದು. ಸಾರ್ವಜನಿಕರು…

Read More

ತುಮಕೂರು :       ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಕೆಲವರು ಮನೆಯಲ್ಲಿರದೆ ಸುಖಾ ಸುಮ್ಮನೆ ಓಡಾಡುತ್ತಿದ್ದಾರೆ.       ಇಂಥವರಿಗೆ ಜಾಗೃತಿ ಮೂಡಿಸುವ ಸಲುವಾಗಿ ಗಜಸ್ಯ ಟೀಮ್‍ನ ಕಲಾವಿದರು ಮಂಗಳವಾರ ನಗರದ ಹೃದಯ ಭಾಗವಾದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದ ಕೋಟೆ ಆಂಜನೇಯ ದೇವಸ್ಥಾನದ ಸರ್ಕಲ್ ಬಳಿ ರಸ್ತೆಯಲ್ಲಿ ಕೊರೋನಾ ಸೋಂಕು ಕುರಿತು “ಎಚ್ಚರಿಕೆ! ನಾನು ಕೊರೋನಾ”, “ನಿಮ್ಮ ಸುರಕ್ಷತೆ ನಿಮ್ಮ ಕೈನಲ್ಲಿ”, “ನಿಮ್ಮನ್ನು ಮತ್ತು ಇತರರನ್ನು ರಕ್ಷಿಸಿ!” ಎಂಬ ವಾಕ್ಯದೊಂದಿಗೆ ಕೆಮ್ಮು ಹಾಗೂ ಸೀನುವುದರಿಂದ ಕರೋನಾ ವೈರಸ್ ಹರಡುತ್ತದೆ ಎಂಬ ಸಂದೇಶ ಸಾರುವ ಚಿತ್ರವನ್ನು ಬಿಡಿಸಿದ್ದಾರೆ.       ಕಲಾವಿದರಾದ ಮನು, ದುಶ್ಯಂತ ಕುಮಾರ್(ದ್ರುವ), ನಾಗಭೂಷಣ್, ಅಭಿ ಅವರು ಈ ಚಿತ್ರವನ್ನು ಬಿಡಿಸುವ ಮೂಲಕ ಜನರು ತಮ್ಮ ಮನೆಯಲ್ಲಿಯೇ ಇದ್ದು ಕೊರೋನಾ ವೈರಸ್ ಹರಡದಂತೆ ತಡೆಯಲು ಸಹಕರಿಸಬೇಕೆಂದು ಅರಿವು ಮೂಡಿಸಿದ್ದಾರೆ.

Read More