ತುಮಕೂರು: ಅಪಾಯಕಾರಿ ಸಾಂಕ್ರಾಮಿಕ ರೋಗ ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮಾರ್ಚ್ 31ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ರಾಜ್ಯದ ಬೆಂಗಳೂರು ಹಾಗೂ ಕಲ್ಬುರ್ಗಿಗಳಲ್ಲಿ ಕೊರೋನಾ ವೈರಸ್(ಕೋವಿಡ್-19) ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮವಹಿಸಬೇಕಾಗಿದೆ. ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಗಳಿದ್ದು, ಹೆಚ್ಚಿನ ಜನಸಂದಣಿ ಸೇರಬಾರದಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಸಹ ಗುಂಪುಗುಂಪಾಗಿ ಜನರು ಸೇರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸಾರ್ವಜನಿಕ ಸ್ವಾಸ್ಥ್ಯಕ್ಕೆ ತೊಂದರೆಯಾಗಬಹುದು ಹಾಗೂ ಪ್ರಾಣಹಾನಿಯಾಗುವ ಸಂಭವವಿದೆ ಎಂಬುದನ್ನು ಮನಗಂಡು ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆಯನ್ವಯ ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಈ ಆದೇಶವು ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ…
Author: News Desk Benkiyabale
ತುಮಕೂರು: ಜಗತ್ತಿನಾದ್ಯಂತ ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯೂ ಇಳಿಮುಖವಾಗಿದೆ. ವಿಶ್ವದೆಲ್ಲೆಡೆ ರಣಕೇಕೆ ಹಾಕುತ್ತಿರುವ ಈ ಕೊರೊನಾ ವೈರಸ್ ಸೋಂಕು ತನ್ನ ಕದಂಬ ಬಾಹುಗಳನ್ನು ಎಲ್ಲೆಡೆ ಚಾಚುತ್ತಾ ಸೋಂಕು ಹರಡಲು ಹವಣಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕಾಯಿಲೆಗಳನ್ನು ತೋರಿಸಲು ಆಸ್ಪತ್ರೆಗಳಿಗೆ ತೆರಳುತ್ತಿದ್ದ ರೋಗಿಗಳ ಸಂಖ್ಯೆ ತಾನಾಗಿಯೇ ಕ್ಷೀಣಿಸಿದೆ. ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಜನಸಾಮಾನ್ಯರೂ ಸಹ ಜನಸಂದಣಿ ಇರುವಲ್ಲಿ ಹೆಚ್ಚು ಸಮಯ ಬೆರೆಯಬಾರದು ಎಂಬೆಲ್ಲಾ ಅಂಶಗಳನ್ನು ಅರಿತಿರುವುದರಿಂದ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಪ್ರತಿನಿತ್ಯ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ರಿಂದ…
ಚಿಕ್ಕನಾಯಕನಹಳ್ಳಿ: ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆಯ ಮಾರು ಹಾಗೂ ಮನೆಯಲ್ಲಿದ್ದ ಕೆಲವು ಸಾಮಗ್ರಿಗಳು ಸುಟ್ಟುಹೋದ ಘಟನೆ ಪಟ್ಟಣದ ಕಾಳಿದಾಸ ಬೀದಿಯಲ್ಲಿ ವರದಿಯಾಗಿದೆ. ಪಟ್ಟಣದ ಕಾಳಿದಾಸ ಬೀದಿಯಲ್ಲಿ ವಾಸವಿರುವ ಭೀಮಯ್ಯ ಎಂಬುವರ ಹೆಂಚಿನ ಮನೆಗೆ ಸೋಮವಾರ ಮಧ್ಯಾಹ್ನ 12ಕ್ಕೆ ಕಾಣಿಸಿಕೊಂಡ ಬೆಂಕಿ ಸ್ವಲ್ಪ ಸಮಯದಲ್ಲಿಯೇ ಇಡೀ ಮನೆಗೆ ವ್ಯಾಪಿಸಿಕೊಂಡಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ನೆರಹೊರೆಯವರು ತಕ್ಷಣ ಆಗ್ಮಿಶಾಮಕ ಠಾಣೆಗೆ ದೂರುನೀಡಿದ ಕಾರಣ ತಕ್ಷಣವೇ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವುದರಲ್ಲಿ ಯಶಸ್ವಿಯಾದರು. ಈ ಮನೆಯಲ್ಲಿ ಭೀಮಯ್ಯ್ ಹಾಗೂ ಶಾಂತಮ್ಮ ಸೇರಿ ನಾಲ್ಕುಮಂದಿ ವಾಸವಿದ್ದರು. ಬೆಂಕಿ ಆಕಸ್ಮಿಕ ಸಂಭವಿಸಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ಘಟನೆಯಲ್ಲಿ ಮನೆಯ ತೀರು, ಹೆಂಚು, ಮನೆಯಲ್ಲಿದ್ದ ಸುಮಾರು 2000ಕಾಯಿ, ಆಹಾರಪದಾರ್ಥಗಳು, ಮಂಚ, ದಿವಾನ್, ಬಟ್ಟೆಬರೆಗಳ ಜೊತೆಗೆ ಬೀರುವಿನಲ್ಲಿಟ್ಟದ್ದ ದಾಖಲೆ ಪತ್ರಗಳು ಸುಟ್ಟುಹೋಗಿವೆ. ತಕ್ಷಣ ಬೆಂಕಿ ನಂದಿಸಿದ ಪರಿಣಾಮ ಮನೆಯ ಹಿಂಭಾಗದಲ್ಲಿದ್ದ…
ತುಮಮಕೂರು : ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರ ದೊರೆಯುತ್ತಿದೆ. ಹೀಗಾಗಿ ಶಾಲಾಪೂರ್ವ ಶಿಕ್ಷಣವಾದ ಎಲ್‍ಕೆಜಿ, ಯುಕೆಜಿಯನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಒತ್ತಾಯಿಸಿದರು. ತುಮಕೂರಿನ ಗಾಂಧೀನಗರದಲ್ಲಿರುವ ಜನಚಳವಳಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಅಂಗವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಆರಂಭಿಸುವ ಸಾಧಕ-ಬಾಧಕಗಳ ಕುರಿತ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಂಗನವಾಡಿಗಳಲ್ಲಿ ಮಕ್ಕಳ ಲಾಲನೆ-ಪಾಲನೆಯ ಜೊತೆಯಲ್ಲಿ ಶಾಲಾಪೂರ್ವ ಶಿಕ್ಷಣ ನೀಡಿದರೆ ಕಲಿಕೆ ಉತ್ತಮವಾಗಿರುತ್ತದೆ. ಈಗಾಗಲೇ ಅಂಗನವಾಡಿಗಳಲ್ಲಿ ಬೋಧಿಸಲು ಪಠ್ಯವೂ ಇದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ವಿಟಮಿನ್, ಪ್ರೋಟೀನ್ ಅಂಶವುಳ್ಳ ಆಹಾರ ನೀಡಲಾಗುತ್ತಿದೆ. ಆರೋಗ್ಯದ ಕಡೆಯು ಗಮನ ನೀಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಕ್ಕಳ ಹಾರೈಕೆಯು ಮುಖ್ಯವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬ ಮಗುವಿಗೂ ಸಾಮಾಜಿಕರಣದ ಶಿಕ್ಷಣ ಸಿಗಬೇಕು. ಸಮಾಜದಲ್ಲಿ ಮತ್ತು ಪ್ರಕೃತಿಯ ನಡುವೆ ಬೆರೆತು ಸಂವಹನ ನಡೆಸುತ್ತಾ ಮಗುವಿನ ಬೆಳವಣಿಗೆ ಆಗುತ್ತದೆ. ಆನಂತರ ಬೇಕಾದರೆ…
ತುಮಕೂರು: ತಾಲ್ಲೂಕಿನ ಕಸಬಾ ಹೋಬಳಿ ಆಲನೂರು ಗ್ರಾಮ ಆಚಾರಪಾಳ್ಯ ರಸ್ತೆ, ಹೇಮಾವತಿ ಚಾನಲ್ ಟನಲ್‍ನಲ್ಲಿ ಅಡಗಿದ್ದ ಚಿರತೆಯನ್ನು ಇಂದು ಅರಣ್ಯ ಇಲಾಖೆಯ 25ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ. ಡಾ: ಸನ್ನತ್ ಅವರ ಮುಂದಾಳತ್ವದಲ್ಲಿ ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಸೆರೆ ಹಿಡಿದ ಚಿರತೆಯು ನರಭಕ್ಷಕ ಚಿರತೆಯಾಗಿರುವ ಸಾಧ್ಯತೆ ಹೆಚ್ಚಾಗಿದೆ. ಚಿರತೆಯನ್ನು ಸೆರೆ ಹಿಡಿದ ಸ್ಥಳವು ಮಾನವ ಹತ್ಯೆ ಸಂಭವಿಸಿದ ಸ್ಥಳದಿಂದ ಸುಮಾರು 10 ರಿಂದ 12 ಕಿ.ಮೀ. ದೂರದಲ್ಲಿದ್ದು, ಸಾರ್ವಜನಿಕ ಮಾಹಿತಿ ಹಾಗೂ ಕ್ಯಾಮೆರಾ ಟ್ರಾಪ್‍ಗಳಲ್ಲಿ ಸೆರೆಯಾಗಿರುವ ಛಾಯಾಚಿತ್ರಗಳ ಆಧಾರದ ಮೇಲೆ ಈ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಚಿರತೆಗಳು ಇರುವುದು ತಿಳಿದು ಬಂದಿದೆ. ಶಂಕಿತ ನರಭಕ್ಷಕ ಚಿರತೆಗಳನ್ನು ತ್ವರಿತವಾಗಿ ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರೆಸಲಾಗಿದೆ. ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿರುವುದರಿಂದ…
ತುಮಕೂರು: ಕೊವಿಡ್-19 3ನೇ ಹಂತದ ಹರಡುವಿಕೆಯು ಬಹಳ ತೀವ್ರ ಮತ್ತು ವ್ಯಾಪ್ತಿಯನ್ನು ವೇಗವಾಗಿ ಕ್ರಮಿಸುವುದನ್ನು ತಡೆಯಲು ಎಲ್ಲಾ ರೀತಿಯಲ್ಲೂ ಮುಂಜಾಗ್ರತಾ ಕ್ರಮವಹಿಸಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೊವಿಡ್-19 ಕುರಿತಂತೆ ನಡೆದ ಮುಂಜಾಗ್ರತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಸೋಂಕಿತ ವ್ಯಕ್ತಿಗೆ ಪ್ರಥಮ ಹಂತದಲ್ಲಿ ಸಮೀಪವಿರುವ ಕುಟುಂಬಸ್ಥರು, ಬಂಧುಗಳು ಹಾಗೂ 2ನೇ ಹಂತದಲ್ಲಿ ಅವರ ನಿಕಟವರ್ತಿಗಳಿಗೆ ಹರಡುವ ಸಾಧ್ಯತೆಯಿದ್ದು, 3ನೇ ಹಂತದಲ್ಲಿ ಅವರು ಓಡಾಡಿರುವ, ಸಂಪರ್ಕದಲ್ಲಿರುವ ಎಲ್ಲಾ ಪ್ರದೇಶಗಳ ವ್ಯಕ್ತಿಗಳಿಗೆ ತೀವ್ರವಾಗಿ ಹಾಗೂ ವಿಶಾಲವ್ಯಾಪ್ತಿಯಲ್ಲಿ ಸೋಂಕು ಹರಡುವುದರಿಂದ ಮಾರ್ಚ್ 31 ರವರೆಗೆ ತೀವ್ರ ನಿಗಾವಹಿಸಬೇಕೆಂದು ಅವರು ಸೂಚನೆ ನೀಡಿದರು. ಪ್ರತಿ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಐಸೋಲೇಷನ್ ಬೆಡ್‍ಗಳ ರೂಂಗಳನ್ನು ಸಿದ್ಧಪಡಿಸಿಕೊಳ್ಳುವುದು ಹಾಗೂ ವೆಂಟಿಲೇಟರ್‍ಗಳನ್ನು ಅಳವಡಿಸಿಕೊಳ್ಳುವುದು, ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಮತ್ತು…
ತುಮಕೂರು : ನಾವಿರುವ ಸ್ಥಳವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರು ಶುದ್ಧವಿರಬೇಕು. ವೈಯಕ್ತಿಕವಾಗಿ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು. ಅಂದರೆ ಪದೇ ಪದೇ ಸಾಬೂನು ಬಳಸಿ ಕೈಗಳನ್ನು ತೊಳೆದುಕೊಳ್ಳಬೇಕು. ಅನವಶ್ಯಕವಾಗಿ ಪ್ರವಾಸ ಅಥವಾ ಹೊರಗೆ ಓಡಾಡುವುದನ್ನು ತಪ್ಪಿಸಬೇಕು- ಹೀಗೆ ಸಾರ್ವಜನಿಕರಿಗೆ ಹಲವು ಸಲಹೆಗಳನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ನೀಡಿದ್ದಾರೆ. ಮಾರಕ ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲು ತುಮಕೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ ಮೇಯರ್ ಫರೀದಾ ಬೇಗಂ ಅವರ ಅಧ್ಯಕ್ಷತೆಯಲ್ಲಿ ಏರ್ಪಟ್ಟಿದ್ದ ಪಾಲಿಕೆಯ ತುರ್ತುಸಭೆಯಲ್ಲಿ ಆಹ್ವಾನಿತರಾಗಿ ಅವರು ಮಾತನಾಡುತ್ತಿದ್ದರು. ಕೊರೋನಾ ವೈರಸ್ ಹರಡುವ ಮೊದಲನೇ ಹಂತ, ಎರಡನೇ ಹಂತ ದಾಟಿ ಮೂರನೆಯ ಹಂತದಲ್ಲಿ ನಾವಿದ್ದೇವೆ. ವಿದೇಶದಿಂದ ಬಂದವರಿಂದ ಇದು ಹರಡುವ ಸಾಧ್ಯತೆ ಇರುವುದರಿಂದ, ವಿದೇಶ ಪ್ರಯಾಣ ಮಾಡಿಬಂದಿರುವವರ ಹಾಗೂ ಅವರೊಂದಿಗಿರುವವರ ಬಗ್ಗೆ ವಿಶೇಷವಾಗಿ ಗಮನ ಹರಿಸಬೇಕಾಗಿದೆ. ಈ ವೈರಸ್ ಗಾಳಿಯಿಂದ ಹರಡುವುದಿಲ್ಲ. ಪರಸ್ಪರ…
ತುಮಕೂರು: ಜಿಲ್ಲೆಯಲ್ಲಿ ಕರೊನಾ ವೈರಸ್ ಬಗ್ಗೆ ಭಯಬೇಡ ಮುಂಜಾಗ್ರತೆ ಇರಲಿ ಕರೊನಾ ಸೋಂಕು ತಡೆಯಲು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೊಷಿಸಿ ಮುನ್ನೇಚ್ಚರಿಕೆ ಕ್ರಮವಹಿಸುವಂತೆ ಸೂಚಿಸಲಾಗಿದ್ದು, ಜಿಲ್ಲಾಡಳಿತ ಎಲ್ಲಾ ರೀತಿಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನೇದ್ದೇಸಿ ಮಾತನಾಡಿದ ಅವರು, ವಿದೇಶದಿಂದ ಜಿಲ್ಲೆಗೆ 94 ಜನ ಪ್ರಯಾಣ ಬೆಳೆಸಿದ್ದು, ಅವರಲ್ಲಿ ಮನೆಯಲ್ಲೀರಿಸಿ ತಪಾಸಣೆಗೊಳಪಡುತ್ತಿರುವವರ ಸಂಖ್ಯೆ 83, ನಿಗಾವಣೆಯಲ್ಲಿ 28 ದಿನಗಳ ಅವಧಿ ಮುಗಿಸಿರುವವರ ಸಂಖ್ಯೆ 8, ಮರಳಿ ವಿದೇಶಕ್ಕೆ ಪ್ರಯಾಣ ಮಾಡಿರುವವರ ಸಂಖ್ಯೆ 3, ರಕ್ತ ಗಂಟಲು ಮಾದರಿಗಳ ಪರೀಕ್ಷೆ ನಡೆಸಿರುವವರ ಸಂಖ್ಯೆ 8 ಇವರಲ್ಲಿ ಸೋಂಕು ಇಲ್ಲದೇ ಇರುವ ಬಗ್ಗೆ ದೃಢಪಟ್ಟಿದೆ ಎಂದು ಅವರು ವಿವರಣೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಪ್ರತಿದಿನ ಕರೊನಾ ಸೋಂಕಿನ ಬಗ್ಗೆ ಮುಂಜಾಗ್ರತಾ ಕ್ರಮ…
ತುಮಕೂರು: ಜಿಲ್ಲೆಯ ಪ್ರತಿ ಮನೆ-ಮನೆಗಳಿಗೂ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಜನರಿಗೆ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಬಗ್ಗೆ ಇಂದಿನಿಂದ ಜನರಿಗೆ ಅರಿವು ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಅವರು ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಆರೋಗ್ಯ ಟಾಸ್ಕ್‍ಪೊರ್ಸ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಐಇಸಿ ಕಾರ್ಯಕ್ರಮಗಳನ್ನು ಹೆಚ್ಚು ಜನರನ್ನು ಸೇರಿಸಿ ಮಾಡಲು ಸಾಧ್ಯವಿಲ್ಲದ ಕಾರಣ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಸಹಕಾರದೊಂದಿಗೆ ಪ್ರತಿ ಮನೆಗೆ ತೆರಳಿ ಕರೊನಾ ಮುಂಜಾಗ್ರತಾ ಕ್ರಮಗಳ ಕುರಿತ ಕರಪತ್ರಗಳನ್ನು ಎಚ್ಚರಿಕೆಯಿಂದ ಹಂಚುವಂತೆ ಕ್ರಮ ಕೈಗೊಳ್ಳಬೇಕು ಎಂದು ಡಿಹೆಚ್‍ಓ ಡಾ||ಬಿ.ಆರ್.ಚಂದ್ರಿಕಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ನಟರಾಜ್ ಅವರಿಗೆ ಸೂಚನೆ ನೀಡಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ಎಲ್ಲಾ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿದ್ದು, ನಾವು…
ತುಮಕೂರು : ತಾಲ್ಲೂಕಿನ ಕುಪ್ಪೂರು ಗ್ರಾಮಕ್ಕೆ ಮೂಲಭೂತ ರಸ್ತೆ ಸಂಪರ್ಕ ಕಲ್ಪಿಸಿಕೊಂಡುವಂತೆ ಗ್ರಾಮಸ್ಥರು ಆಗ್ರಹಿಸಿದರು. ಸ್ಮಾರ್ಟ್‍ಸಿಟಿ ಯೋಜನೆಯಡಿ ಬುಗುಡನಹಳ್ಳಿ ಕೆರೆಯಿಂದ ಹೇಮಾವತಿ ನೀರನ್ನು ತುಮಕೂರಿನ ಅಮಾನಿಕೆರೆಗೆ ತುಂಬಿಸುವ ಯೋಜನೆ ಕೊಳವೆ ಮಾರ್ಗ ಅಳವಡಿಸುವ ಕಾರ್ಯ ತಿಪ್ಪೂರು ಗ್ರಾಮದಲ್ಲಿ ನಡೆಯುತ್ತಿರುವ ಹಿನ್ನಲೆಯಲ್ಲಿ ಮೊದಲು ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಿ ಆ ನಂತರ ತುಮಕೂರು ನಗರಕ್ಕೆ ನೀರು ಕೊಡೊಯ್ಯುವ ಕೊಳವೆ ಮಾರ್ಗ ಕಾಮಗಾರಿ ನಡೆಸಿ ಎಂದು ಗ್ರಾಮಸ್ಥರು ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ಕುಪ್ಪೂರು ಗ್ರಾಮದ ಸರ್ಕಾರಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಕುಮಾರ್ ಮಾತನಾಡಿ, ನಮ್ಮ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಸಂಸದರಿಗೆ, ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ, ಜಿಪಂ ಸಿಇಒ, ತಹಶೀಲ್ದಾರ್‍ರವರಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ, ಜನಪ್ರತಿನಿಧಿಗಳು ಚುನಾವಣೆ ಬಂದಾಗ ಮಾತ್ರ ಮತ ಕೇಳಲು ಬಂದು ರಸ್ತೆ ಮಾಡಿಸುವ ಭರವಸೆ ನೀಡಿ ಹೋಗುತ್ತಾರೆಯೇ ವಿನಃ ನಂತರ ಇತ್ತ ತಿರುಗಿಯೂ ನೋಡಲ್ಲ…