ಕೊರಟಗೆರೆ: ಪಟ್ಟಣದ ಗೊಂದಿಹಳ್ಳಿ ರಸ್ತೆ ಗಿರಿನಗರದಲ್ಲಿ ಸುಮಾರು 20 ದಿನಗಳಿಂದಲು ಚಿರತೆಯೊಂದು ಕಂಡುಬಂದಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ, ಹಾಗು ಈ ಭಾಗದ ಪ್ರದೇಶದಲ್ಲಿ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಿದ್ದು ಚಿಕ್ಕಮಕ್ಕಳು, ವಿದ್ಯಾರ್ಥಿಗಳು, ಹೆಣ್ಣು ಮಕ್ಕಳು, ವೃದ್ಧರು ಹಾಗು ರೈತರುಗಳು ದಿನನಿತ್ಯ ಸಂಚರಿಸುವ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಇಲ್ಲಿನ ವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ ಅಲ್ಲದೆ ಶಾಲೆಯ ಸುತ್ತಮುತ್ತಲಿನ ಪ್ರದೇಶವು ಕಲ್ಲು ಬಂಡೆ, ಗುಟ್ಟೆ ಮತ್ತು ಪೊದೆಗಳಿಂದ ಕೂಡಿದ್ದುಇಲ್ಲಿನ ಹಲವು ಮನೆಗಳು ನಿರ್ಜನ ಪ್ರದೇಶಗಳಲ್ಲಿ ಇರುವುದರಿಮದ ಚಿರತೆಯಿಂದ ಪ್ರಾಣದ ಅಪಾಯ ಸಂಭವವಿದ್ದು, ಇತ್ತೀಚೆಗೆ ತುಮಕೂರು ತಾಲ್ಲೂಕಿನಲ್ಲಿ 3 ಪುಟ್ಟ ಮಕ್ಕಳು ಚಿರತೆಗೆ ಬಲಿಯಾಗಿರುವುದರಿಂದ ಗುರುವಾರದಂದು ಆ ವಾರ್ಡಿನ ನಿವಾಸಿಗಳು ಹಾಗು ಮಾಜಿ ಪ.ಪಂ ಉಪಾಧ್ಯಕ್ಷರು ಹಾಗು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ಸಂಚಾಲಕರು, ತುಮಕೂರು ಜಿಲ್ಲೆ ಸಾಮಾಜಿಕ ಹೋರಾಟಗಾರರಾದ ನಯಾಜ್ ಅಹಮದ್ ಮತ್ತು ಗಿರಿನಗರ ಗೊಂದಿಹಳ್ಳಿ ರಸ್ತೆ ನಿವಾಸಿಗಳಾದ ನಾಯಕ…
Author: News Desk Benkiyabale
ತುಮಕೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೈಲಾಡಕರೆ ಗ್ರಾಮದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಂದು ವರ್ಷದ ಬಾಲಕ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ವೇಗದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಟವೇರಾ ಹಾಗೂ ಬ್ರೀಜಾ ಕಾರುಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ಮಂಜುನಾಥ್ (35), ತನುಜಾ (25), ಒಂಬತ್ತು ತಿಂಗಳ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ಸೌಂದರರಾಜ್ (48), ರಾಜೇಂದ್ರ (27), ಸರಳಾ (32), ಪ್ರಶನ್ಯಾ (14), ಮಾಲಾಶ್ರೀ (4), ಲಕ್ಷ್ಮೀಕಾಂತ್ (24), ಸಂದೀಪ (36), ಮಧು (28) ಮೃತಪಟ್ಟವರು. ನಾಲ್ಕು ಪ್ರಯಾಣಿಕರು ಬ್ರೀಜಾ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದು, ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಹೊಸೂರು ಮೂಲಕ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟವೆರಾ ಕಾರಿಗೆ ಡಿಕ್ಕಿ ಹೊಡೆದಿದೆ. ಟವೆರಾದಲ್ಲಿದ್ದ ಪ್ರಯಾಣಿಕರು ತಮಿಳುನಾಡಿನ ನಿವಾಸಿಗಳು ಎಂದು ಹೇಳಲಾಗಿದೆ.…
ತುಮಕೂರು : ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿಕೊಂಡು ಮಾರ್ಚ್ ಅಂತ್ಯದೊಳಗೆ ಶೇ.100ರಷ್ಟು ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‍ಸಿಪಿ/ಟಿಎಸ್‍ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಇಲಾಖೆವಾರು ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನ ಹಾಗೂ ವೆಚ್ಚವಾಗಿರುವ ಮೊತ್ತದ ಬಗ್ಗೆ ಇಲಾಖೆ ಅಧಿಕಾರಿಗಳಿಂದ ದೃಢೀಕರಣ ಪಡೆಯುವಂತೆ ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು. ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಹೆಚ್ಚುವರಿ ಅನುದಾನ ಬಿಡುಗಡೆಯಾಗುತ್ತಿರುವ ಇಲಾಖೆಗಳಲ್ಲಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಟ್ಟುಕೊಳ್ಳಿ ಎಂದರು. ಅಲ್ಲದೇ ಸಮಸ್ಯೆ ಇದ್ದರೆ ಅದನ್ನು ನೇರವಾಗಿ ಗಮನಕ್ಕೆ ತರಬೇಕು ಎಂದರು. ಸಭೆಗೆ ಗೈರು ಹಾಜರಾಗಿರುವ ಕಾರ್ಮಿಕ…
ತುಮಕೂರು : ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸದ 4 ಇಲಾಖೆ/ ಏಜೆನ್ಸಿಗಳಿಗೆ 1ಕೋಟಿ ರೂ. ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಭೂಬಾಲನ್ ತಿಳಿಸಿದ್ದಾರೆ. ಅಗೆದಿರುವ ರಸ್ತೆಗಳನ್ನು ಪುನರ್‍ಸ್ಥಾಪಿಸದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ(ಕೆಯುಡಬ್ಲ್ಯುಎಸ್ ಅಂಡ್ ಡಿಬಿ) 60ಲಕ್ಷ ರೂ., ಬೆಸ್ಕಾಂ ಸಂಸ್ಥೆಗೆ 10 ಲಕ್ಷ ರೂ., ಮೆಘಾ ಗ್ಯಾಸ್ ಕಂಪನಿಗೆ 20ಲಕ್ಷ ರೂ. ಹಾಗೂ ರಿಲೆಯನ್ಸ್ ಜಿಯೋ ಕಂಪನಿಗೆ 10ಲಕ್ಷ ರೂ.ಗಳ ದಂಡವನ್ನು ವಿಧಿಸಲಾಗಿದೆ. ವಿವಿಧ ಕಾಮಗಾರಿಗಾಗಿ ಅಗೆದಿರುವ ರಸ್ತೆಗಳನ್ನು ಸಮರ್ಪಕವಾಗಿ ಪುನರ್‍ಸ್ಥಾಪನೆ(Restoration) ಮಾಡದೆ ಇರುವುದರಿಂದ ನಗರದಲ್ಲಿ ಧೂಳು ಹೆಚ್ಚಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಅನುಷ್ಠಾನಗೊಳಿಸಿರುವ ವಿವಿಧ ಕಾಮಗಾರಿಯ ಪುನರ್ ಸ್ಥಾಪನೆಯನ್ನು ತುರ್ತಾಗಿ ಯಥಾಸ್ಥಿತಿಯಲ್ಲಿ ನಿರ್ವಹಣೆ ಮಾಡಲು ಸಂಬಂಧಿಸಿದ ಇಲಾಖೆ/ ಏಜೆನ್ಸಿಗಳಿಗೆ ಹಲವಾರು ಬಾರಿ ಸೂಚಿಸಲಾಗಿದ್ದರೂ ಈವರೆಗೂ ಕ್ರಮ ಕೈಗೊಳ್ಳದೇ ಇರುವುದರಿಂದ ಈ ದಂಡವನ್ನು ವಿಧಿಸಲಾಗಿದೆ. ಅಗೆದಿರುವ ರಸ್ತೆಗಳ ಪುನರ್‍ಸ್ಥಾಪನೆಯನ್ನು…
ತುಮಕೂರು : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಇರುವ ಮಹಾನಗರ ಪಾಲಿಕೆಯ ವಾಣಿಜ್ಯ ಮಳಿಗೆಗಳ ಬಾಡಿಗೆ ಭರಿಸದೆ ನಾಲ್ಕಾರು ವರ್ಷಗಳಿಂದ ಠಿಕಾಣಿ ಹೂಡಿದ್ದ ವ್ಯಾಪಾರಿಗಳಿಗೆ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಶಾಕ್ ನೀಡಿದ್ದಾರೆ. ಮಳಿಗೆಗಳಿಗೆ ದಿಢೀರನೆ ಭೇಟಿ ನೀಡಿ ಬಾಕಿ ಉಳಿಸಿಕೊಂಡಿದ್ದ ಸುಮಾರು 1 ಕೋಟಿ ಮೊತ್ತದ ಬಾಡಿಗೆಯನ್ನು ವಸೂಲಿ ಮಾಡಿದ್ದಾರೆ. ಸಕಾಲಕ್ಕೆ ಬಾಡಿಗೆ ಕಟ್ಟಲು ಹಿಂದೇಟು ಹಾಕಿದ 8 ಮಳಿಗೆಗಳ ಬಾಗಿಲನ್ನು ಬಂದ್ ಮಾಡಿಸಿದ್ದಾರೆ. ಕೆಲವು ಮಳಿಗೆಗಳ ಬಾಡಿಗೆ ಮೊತ್ತವನ್ನು ಚೆಕ್ ಮೂಲಕ ಪಡೆದಿರುವ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು `ಮಾರ್ಚ್ 10ರ ಒಳಗೆ ಬಾಡಿಗೆಯು ಪಾಲಿಕೆಯ ಖಾತೆಗೆ ಸಂದಾಯ ಆಗಬೇಕು’ ಎಂದು ವ್ಯಾಪಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕೆಲವರ ಬಳಿ ನಗದಿನ ರೂಪದಲ್ಲಿ ಬಾಡಿಗೆ ವಸೂಲಿ ಮಾಡಿದ್ದಾರೆ.ಪಾಲಿಕೆಯ ಮಳಿಗೆಗಳನ್ನು ಟೆಂಡರ್ ಮೂಲಕ ಪಡೆದಿರುವ 20ಕ್ಕೂ ಹೆಚ್ಚು ವ್ಯಾಪಾರಿಗಳು ನಾಲ್ಕೈದು ವರ್ಷಗಳಿಂದ ಬಾಡಿಗೆ ಪಾವತಿಸಿರಲಿಲ್ಲ. ಇದರಲ್ಲಿ ಕನಿಷ್ಠ 20,000…
ತುಮಕೂರು: ಮಾರಣಾಂತಿಕ ಕೊರೋನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಎಚ್ಚರವಹಿಸಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೊರೋನಾ ವೈರಸ್ ಪ್ರಕರಣ ಹರಡದಂತೆ ತಡೆಗಟ್ಟಲು ಮುಂಜಾಗ್ರತೆ ವಹಿಸುವ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೊರೋನಾ ವೈರಸ್‍ನಿಂದಾಗಿ ಚೀನಾ ದೇಶ ತತ್ತರಿಸುತ್ತಿದ್ದು, ವಿದೇಶಗಳಲ್ಲಿದ್ದ ಭಾರತೀಯರು ದೇಶಕ್ಕೆ ಮರಳಿದ್ದಾರೆ. ಈ ಪೈಕಿ ತೆಲಗಾಂಣ ರಾಜ್ಯದಲ್ಲಿ ಸೋಂಕು ಪತ್ತೆಯಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಆರೋಗ್ಯ ಇಲಾಖೆಯು ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದೆ ಎಂದರು. ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಪ್ರತ್ಯೇಕವಾಗಿ 5 ಹಾಸಿಗೆಗಳುಳ್ಳ ವಿಶೇಷ ವಾರ್ಡ್ ತೆರೆದು, ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಲಾಗಿದೆ. ಅದೇ ರೀತಿ ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ತಾಲ್ಲೂಕ್ ಸರ್ಕಾರಿ ಆಸ್ಪತ್ರೆಯಲ್ಲಿ ಕೂಡಲೇ ಪ್ರತ್ಯೇಕ ವಾರ್ಡ್‍ಗಳನ್ನು ಮಾಡಬೇಕು ಎಂದರಲ್ಲದೇ ವಿದೇಶದಿಂದ ಬರುವ ಜನರಿಗೆ ಏರ್‍ಪೋರ್ಟ್‍ಗಳಲ್ಲಿ ವಿಳಾಸ…
ತುಮಕೂರು : ತುಮಕೂರು ತಾಲ್ಲೂಕಿನಾದ್ಯಂತ ಹೆಚ್ಚಿನದಾಗಿ ಗ್ರಾಮೀಣ ಭಾಗದಲ್ಲಿ ಚಿರತೆ ದಾಳಿ ನಡೆಯುತ್ತಿದ್ದು, ಒಂಟಿಮನೆಯಲ್ಲಿರುವ ಕುಟುಂಬಗಳು ಎಚ್ಚರಿಕೆಯಿಂದ ಇರಬೇಕು ಎಂದು ತಾಲ್ಲೂಕಿನ ತಹಶೀಲ್ದಾರ್ ಮೋಹನ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ತಾಲ್ಲೂಕು ತಹಶೀಲ್ದಾರ್ ಕಛೇರಿಯ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು, ವೃದ್ದರು ಮತ್ತು ಮಹಿಳೆಯರು ಯಾವುದೇ ಕಾರಣಕ್ಕೂ ಒಂಟಿಯಾಗಿ ಓಡಾಡಬಾರದು. ಸಂಜೆ 6 ಗಂಟೆಯೊಳಗೆ ಮನೆಯನ್ನು ಸೇರಬೇಕು ಎಂದು ಮನವಿ ಮಾಡಿದರು. ಚಿರತೆಯು ಕಂಡಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಜನ ಸೇರಿ ಗದ್ದಲ ಮಾಡದೇ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು. ದನಗಳನ್ನು ಮೇಯಿಸಲು ಹೊಲಕ್ಕೆ ಹೋದಾಗ ಬಯಲು ಪ್ರದೇಶದಲ್ಲಿ ಕುಳಿತುಕೊಳ್ಳಬೇಕು. ಪೊದೆಗಳ ಬಳಿ ಒಂಟಿಯಾಗಿ ಕೂರಬಾರದು. ಸಂಜೆ 6 ಗಂಟೆಯ ನಂತರ ಎಲ್ಲಾ ಸಾಕು ಪ್ರಾಣಿಗಳನ್ನು ಮನೆಯ ಹಾಗೂ ಕೊಟ್ಟಿಗೆಯ ಒಳಗೆ ಸುರಕ್ಷಿತವಾಗಿರುವಂತೆ ನಿಗಾವಹಿಸಬೇಕು. ಸಾಕುಪ್ರಾಣಿಗಳನ್ನು ಚಿರತೆ ಹತ್ಯೆ ಮಾಡಿದ್ದರೆ ಅದನ್ನು…
ತುಮಕೂರು: ತುಮಕೂರು ತಾಲ್ಲೂಕಿನ ದೇವರಾಯನದುರ್ಗ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ರಥೋತ್ಸವ ಮಾರ್ಚ್ 9ರಂದು ಸುಮಾರು ಒಂದೂವರೆ ಲಕ್ಷ ಜನರ ಸಮ್ಮುಖದಲ್ಲಿ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುರಕ್ಷಿತ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಕಾಮಗಾರಿಗಳನ್ನು ಇನ್ನೂ 2-3 ದಿವಸಗಳಲ್ಲಿ ಪೂರ್ಣಗೊಳಿಸಿಕೊಡಲು ಲೋಕೋಪಯೋಗಿ ಇಲಾಖೆ ಹಾಗೂ ಬೆಸ್ಕಾಂ ಇಲಾಖೆಯ ಇಂಜಿನಿಯರ್‍ಗಳಿಗೆ ಉಪವಿಭಾಗಾಧಿಕಾರಿ ಅಜಯ್ ಗಡುವು ನೀಡಿರುತ್ತಾರೆ. ತುಮಕೂರು ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಜಾತ್ರಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಊರ್ಡಿಗೆರೆ ಕಡೆಯಿಂದ ಕೈಗೊಂಡಿರುವ ರಸ್ತೆ ಕಾಮಗಾರಿ ಹಾಗೂ ರಥಬೀದಿಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎರಡು ಬದಿಯ ಚರಂಡಿಗಳ ಮೇಲೆ ಸ್ಲಾಬ್ ಹಾಕಲು ಅವರು ಸೂಚನೆ ನೀಡಿದರು. ಎರಡು ಇಲಾಖೆಗಳ ಇಂಜಿನಿಯರ್‍ಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಾಯಿಂಟ್ ಇನ್ಸ್ಪೆಕ್ಷನ್ ಮಾಡಿ ಕಾಮಗಾರಿಗಳ ಪ್ರಗತಿ ಮತ್ತು ಸುರಕ್ಷತೆಯ ಬಗ್ಗೆ ಗಮನ ಹರಿಸುವಂತೆ ಉಪವಿಭಾಗಾಧಿಕಾರಿಗಳು ಸೂಚನೆ ನೀಡಿದರು. …
ತುಮಕೂರು: ತುಮಕೂರು ಜಿಲ್ಲೆಯ 34 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 4ರಿಂದ 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ತುಮಕೂರು ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ತುಮಕೂರು, ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ ಮತ್ತು ಕುಣಿಗಲ್ ತಾಲ್ಲೂಕುಗಳ 24 ಪರೀಕ್ಷಾ ಕೇಂದ್ರಗಳು, ಮಧುಗಿರಿ ವ್ಯಾಪ್ತಿಯಲ್ಲಿ ಬರುವ ಮಧುಗಿರಿ, ಶಿರಾ, ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 10 ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. 2020ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಥಮವಾಗಿ (ಫ್ರೆಶರ್ಸ್)-23492, ಪುನರಾವರ್ತಿತ (ರಿಪೀಟರ್ಸ್)-3387, ಖಾಸಗಿ ವಿದ್ಯಾರ್ಥಿಗಳು-581, ಕಲಾ ವಿಭಾಗ-7350, ವಾಣಿಜ್ಯ-11348, ವಿಜ್ಞಾನ-8762, ಆ ಪೈಕಿ ಬಾಲಕರು-12638, ಬಾಲಕಿಯರು-14822 ಸೇರಿ ಜಿಲ್ಲೆಯಲ್ಲಿ ಒಟ್ಟು 27460 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಲಿದ್ದಾರೆ. ಮಾರ್ಚ್ 4ರಂದು ಬುಧವಾರ ಇತಿಹಾಸ, ಫಿಜಿಕ್ಸ್, ಬೇಸಿಕ್ ಮ್ಯಾಥ್ಸ್ ವಿಷಯಗಳ ಪರೀಕ್ಷೆ ನಡೆಯಲಿವೆ. ಎಂದು…
ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾಣಿ ಪೌಂಡೇಶನ್, ಸಾರ್ವಜನಿಕ ಶಿಕ್ಷಣ ಇಲಾಖೆ, ರೆಡ್‍ಕ್ರಾಸ್ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿಂದು ಎನ್‍ಪಿಪಿಸಿಡಿ ಕಾರ್ಯಕ್ರಮದಡಿಯಲ್ಲಿ ಜೀವನಕ್ಕಾಗಿ ಶ್ರವಣ: ಶ್ರವಣ ದೋಷವು ನಿಮ್ಮನ್ನು ಮಿತಿಗೊಳಿಸಲು ಬಿಡಬೇಡಿ ಎಂಬ ಘೋಷಣೆಯೊಂದಿಗೆ ವಿಶ್ವ ಶ್ರವಣ ದಿನ/ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ. ಆರ್. ಚಂದ್ರಿಕಾ ಅವರು ನಗರದ ಟೌನ್‍ಹಾಲ್ ಬಳಿ ಹಸಿರು ನಿಶಾನೆ ತೋರಿದರು. ಜಾಗೃತಿ ಅಭಿಯಾನದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ, ಡಾ. ಮಹಿಮಾ, ಡಾ. ಕೇಶವರಾಜ್, ಡಾ. ಸನತ್‍ಕುಮಾರ್, ಡಾ. ಮೋಹನ್‍ದಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿಶ್ವ ಶ್ರವಣ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥವು ನಗರದ ಟೌನ್‍ಹಾಲ್‍ನಿಂದ ಸಾಗಿ ಜಿಲ್ಲಾಸ್ಪತ್ರೆಯಲ್ಲಿ ಸಮಾವೇಶಗೊಂಡಿತು.