ತುಮಕೂರು: ಹೃದಯ ರೋಗಕ್ಕೆ ಸಂಬಂಧಿಸಿದ ಆರೋಗ್ಯ ಸೇವೆ ಬಡಜನರಿಗೆ ಸಿಗುವುದು ಕಷ್ಟವಾಗಿದೆ. ಹಣವಂತರು ದೊಡ್ಡ ದೊಡ್ಡ ಆಸ್ಪತ್ರೆಗಳಿಗೆ ತೆರಳುತ್ತಾರೆ. ಆದರೆ ಬಡವರಿಗೆ ಸರ್ಕಾರಿ ಆಸ್ಪತ್ರೆ ನಿಗಧಿತ ಸಮಯದೊಳಗೆ ಚಿಕಿತ್ಸೆ ಸಿಗುವುದಿಲ್ಲ. ಅಂಥ ಜನಜನರ ಸೇವೆಗಾಗಿ ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್’ ತೆರೆಯಲಾಗುತ್ತಿದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 26ರಂದು ವೈದ್ಯಕೀಯ ಕಾಲೇಜಿನಲ್ಲಿ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್ ಆರಂಭವಾಗಲಿದ್ದು, ವಿದೇಶಿ ಗುಣಮಟ್ಟದ ಆಧುನಿಕ ಸಲಕರಣೆಗಳನ್ನು ಒಳಗೊಂಡ ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ. 32 ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ತಂದೆ ಡಾ. ಗಂಗಾಧರಯ್ಯ ಮತ್ತು ಸಹೋದರರಾದ ಡಾ.ಶಿವಪ್ರಸಾದ್ ಆಶಯದಂತೆ ಸಮಾಜದ ಕಟ್ಟಕಡೆಯ ಬಡಜನರಿಗೆ ಆರೋಗ್ಯ ಸೇವೆ…
Author: News Desk Benkiyabale
ಹುಳಿಯಾರು: ಕಾಳು ಕಟ್ಟುವ ಹಂತದಲ್ಲಿ ಮಳೆಯಿಲ್ಲ ಎಂದು ಚಿಂತಾಕ್ರಾಂತರಾಗಿದ್ದ ರೈತರಿಗೆ ಕಳೆದ ಎರಡು ದಿನಗಳಿಂದ ಆಗಾಗ ಬಿಟ್ಟೂ ಬಿಡದಂತೆ ಸುರಿಯುತ್ತಿರುವ ಮಳೆ ಒಂದೆಡೆ ಸಂತಸಕ್ಕೆ ಕಾರಣವಾದರೆ ಮತ್ತೊಂದೆಡೆ ಮಳೆ ಹೊಡೆತಕ್ಕೆ ಸಿಕ್ಕಿ ತೆನೆ ಬಂದಿರುವ ರಾಗಿ ಮತ್ತು ಸಾಮೆ ಬೆಳೆ ನೆಲಕ್ಕೆ ಉರುಳಿ ಬಿದ್ದು ಆತಂಕಕ್ಕೆ ಕಾರಣವಾಗಿದೆ. ಲಾಕ್‍ಡೌನ್‍ನಿಂದಾಗಿ ಪಟ್ಟಣ ಸೇರಿದ್ದ ಯುವಕರು ಹಳ್ಳಿಗಳಿಗೆ ಮರಳಿ ಬಂದ ಪರಿಣಾಮ ಈ ಬಾರಿ ಹುಳಿಯಾರು ಸುತ್ತ ಮುತ್ತ ದಾಖಲೆಯ ರಾಗಿ ಬಿತ್ತನೆ ಆಗಿತ್ತು. ಕಳೆದ ತಿಂಗಳು ಉತ್ತಮವಾಗಿ ಮಳೆ ಬಂದಿದ್ದರಿಂದ ರೈತರು ಬೆಳೆಗೆ ಸಾಕಷ್ಟು ಯೂರಿಯಾ ಗೊಬ್ಬರ ಹಾಕಿದ್ದರು. ಇದರಿಂದ ರಾಗಿ ಬೆಳೆಯು ಹುಲುಸಾಗಿ ಬೆಳೆದಿತ್ತಲ್ಲದೆ ಹಲವೆಡೆ ಹೊಡೆ ಬಿಚ್ಚಿ ಮಳೆಯ ನಿರೀಕ್ಷೆಯಲ್ಲಿತ್ತು. ಅದೃಷ್ಟವಶತ್ ಕಳೆದ ವಾರದಿಂದ ಆಗಾಗ ಮಳೆ ಬೀಳುತ್ತಿದ್ದು ರೈತರ ಹರ್ಷಕ್ಕೆ ಕಾರಣವಾಗಿತ್ತು. ಆದರೆ ಮಂಗಳವಾರ ಮತ್ತು ಬುಧವಾರ ಬಿದ್ದ ಮಳೆಗೆ ಕೆಲವೆಡೆ ರಾಗಿ ಮತ್ತು ಸಾಮೆ ಬೆಳೆಗೆ…
ತುಮಕೂರು: ಆಗ್ನೇಯ ಪದವಿಧರರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್‍ಬಾಬು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಸಿದ್ದಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಮೊದಲಿಗೆ ಹಿರಿಯ ಶ್ರೀಗಳಾದ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಗದ್ದುಗೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ನಂತರ, ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀಸಿದ್ದಲಿಂಗಸ್ವಾಮೀಜಿ ಅವರ ಬಳಿ ತೆರಳಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ರಮೇಶ್‍ಬಾಬು, ಸಿದ್ದಗಂಗಾ ಮಠಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ಅದರಲ್ಲಿಯೂ ಚಿಕ್ಕನಾಯಕನಹಳ್ಳಿ ತಾಲೂಕಿನವನಾದ ನನಗೆ ಸಿದ್ದಗಂಗಾ ಮಠದ ಅನುಗ್ರಹ ಸದಾ ಇರುತ್ತದೆ.ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿ ಹಾಗೂ ಶ್ರೀಸಿದ್ದಲಿಂಗಸ್ವಾಮೀಜಿ ಇಬ್ಬರ ಅಶೀರ್ವಾದವೂ ನನ್ನ ಮೇಲಿದೆ.ನನ್ನ ರಾಜಕೀಯ ಜೀವನದ ಬೆಳವಣಿಗೆಗೆ ಇದು ಕಾರಣ ಎಂದರು. ಕಳೆದ ಸಾಲಿನಲ್ಲಿ ನನಗೆ ಸಿಕ್ಕ ಅಲ್ಪ ಅವಧಿಯಲ್ಲಿಯೇ ಶಿಕ್ಷಕರು ಮತ್ತು ಪದವಿಧರರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸಿದ್ದೇನೆ.ಅಲ್ಲದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದ 6ನೇ ವೇತನ ಆಯೋಗದ ಶಿಫಾರಸ್ಸುಗಳ ಸಂಪೂರ್ಣ ಜಾರಿ ಹಾಗೂ…
ಗುಬ್ಬಿ : ಬಿಜೆಪಿ ಸರ್ಕಾರ ಮೂರು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಷ್ಟೇ ಸಂಖ್ಯೆ ನಿರುದ್ಯೋಗ ಸೃಷ್ಟಿಸಿ ದೇಶದ ಆರ್ಥಿಕತೆಯನ್ನೇ ಬುಡಮೇಲು ಮಾಡಿದೆ. ಈ ಸಂದರ್ಭದಲ್ಲಿ ಪದವೀಧರರು ಬಿಜೆಪಿ ಸರ್ಕಾರದಿಂದ ಏನನ್ನೂ ನಿರೀಕ್ಷಿಸಲಾಗದ ಸ್ಥಿತಿ ಇದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆರ್.ಚೌಡರೆಡ್ಡಿ ತೂಪಲ್ಲಿ ತಿಳಿಸಿದರು. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಶೇ 40 ರಷ್ಟು ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಸ್ವಯಂ ಉದ್ಯೋಗ ಸೃಷ್ಟಿಸುವ ಕೆಲಸ ಮಾಡಬೇಕಾದ ಬಿಜೆಪಿ ಸರ್ಕಾರ ಕೇವಲ ವ್ಯಾಪಾರೀಕರಣ ನಡೆಸಿಕೊಂಡು ಕಾಲಹರಣ ಮಾಡಿದೆ ಎಂದು ದೂರಿದರು. ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅನುಭವಿ ಶಿಕ್ಷಣ ಸಚಿವರಾಗಿ ಬಸವರಾಜು ಹೊರಟ್ಟಿ ಮಾಡಿದ ಕಾರ್ಯ ಅಭೂತಪೂರ್ವ. ಅಂದು ಶಾಲಾಕಾಲೇಜು ಸ್ಥಾಪಿಸಿ ಶಿಕ್ಷಣ ರಂಗದಲ್ಲಿ ಕ್ರಾಂತಿ ನಡೆಸಿದ್ದರು. ಈ ವೇಳೆ ಸಾವಿರಾರು ಉದ್ಯೋಗ ಸೃಷ್ಟಿಸುವ ಕೆಲಸ…
ತುಮಕೂರು : ಶಿರಾ ವಿಧಾನಸಭಾ ಉಪ ಚುನಾವಣೆಯ ಚುನಾವಣಾ ತರಬೇತಿಗೆ ಗೈರು ಹಾಜರಾಗಿರುವ ಪಿಆರ್‍ಓ ಹಾಗೂ ಎಪಿಆರ್‍ಓ ಅಧಿಕಾರಿಗಳಿಗೆ ಅಕ್ಟೋಬರ್ 24ರಂದು ತುಮಕೂರು ನಗರದ ಸಿದ್ದಗಂಗಾ ಮಹಿಳಾ ಪದವಿ/ಪದವಿಪೂರ್ವ ಕಾಲೇಜಿನಲ್ಲಿ ತರಬೇತಿಯನ್ನು ಹಮ್ಮಿಕೊಂಡಿದ್ದು, ಕಡ್ಡಾಯವಾಗಿ ತರಬೇತಿಗೆ ಹಾಜರಾಗುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ: ಕೆ. ರಾಕೇಶ್ ಕುಮಾರ್ ಸೂಚಿಸಿದ್ದಾರೆ. ಅಕ್ಟೋಬರ್ 21ರಂದು ನಡೆದ ತರಬೇತಿಗೆ ಕೆಲ ಪಿಆರ್‍ಓ ಹಾಗೂ ಎಪಿಆರ್‍ಓಗಳು ಗೈರು ಹಾಜರಾಗಿದ್ದು, ತಮ್ಮ ಗೈರು ಹಾಜರಿಗೆ ಲಿಖಿತ ವಿವರಣೆಯೊಂದಿಗೆ ಕಡ್ಡಾಯವಾಗಿ ಅಂದಿನ(ಅಕ್ಟೋಬರ್ 24) ತರಬೇತಿಗೆ ಹಾಜರಾಗುವಂತೆ ನಿರ್ದೇಶನ ನೀಡಿದ್ದಾರೆ. ತಪ್ಪಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕೊರಟಗೆರೆ : ಟೋಟಲ್ ಟರ್ನ್ ಕೀ ಆಧಾರದಲ್ಲಿ ಬೆಸ್ಕಾಂನಲ್ಲಿ ಬಹುಕೋಟಿಯ ಟೆಂಡರ್ ಕರೆದಿರುವ ಬಗ್ಗೆ ಹಾಗೂ ಇದರಿಂದ ವಿದ್ಯುತ್ ಗುತ್ತಿಗೆದಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಹಾಗೂ ಗ್ರಾಹಕರಿಗೂ ಆಗುತ್ತಿರುವ ತೊಂದರೆಗಳೇನಂದರೆ, ಬೆಸ್ಕಾಂನಲ್ಲಿ ಟೋಟಲ್ ಟರ್ನ್ ಕೀ ಆಧಾರದಲ್ಲಿ ಬೆಸ್ಕಾಂನ ಎಲ್ಲಾ ವಿದ್ಯುತ್ ಕಾಮಾಗಾರಿಗಳನ್ನು ಕಾರ್ಯ ನಿರ್ವಾಹಿಸಲು ಬಹುಕೋಟಿಯ ಟೆಂಡರ್ ಕರೆದಿರುವುದು ಲಕ್ಷಾಂತರ ಗ್ರಾಹಕರಿಗೆ ಹಾಗೂ ಸ್ಥಳಿಯ ಬೆಸ್ಕಾಂ ಗುತ್ತಿಗೆದಾರರಿಗೆ ತೊಂದರೆಯಾಗಿದೆ. ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೊರಟಗೆರೆ ತಾಲ್ಲೂಕು ಅಧ್ಯಕ್ಣ ಎಸ್ ಆರ್ ಸೋಮಶೇಖರ್ ಮಾತನಾಡಿ, ಈ ಟೆಂಡರ್ ಪ್ರಕ್ರಿಯೆಯಿಂದ ಎಲ್ಲಾ ಗುತ್ತಿಗೆದಾರರಿಗೆ ಅಪಾರ ನಷ್ಟವಾಗುತ್ತದೆ ಹಾಗೂ ಕುಟುಂಬ ನಿರ್ವಹಣೆಯು ತುಂಬಾ ಕಷ್ಟಕರವಾಗುತ್ತದೆ ಕಾರಣ ಬೆಸ್ಕಾಂನ ಕಾಮಾಗಾರಿಗಳನ್ನು ನಂಬಿಕೊಂಡು ಕರ್ನಾಟಕ ರಾಜ್ಯದ ಅನುಮತಿ ಪಡೆದು ವಿದ್ಯುತ್ ಗುತ್ತಿಗೆದಾರ ಲೈಸನ್ಸ್ ಅನ್ನು ಕರ್ನಾಟಕ ಸರ್ಕಾರದಿಂದಲೇ ಪಡೆದು ಕೆಲಸ ನಿರ್ವಹಿಸುತ್ತಿರುತ್ತೇವೆ. ಆದರೆ ಈಗ ಬೆಸ್ಕಾಂನಲ್ಲಿ ಟೋಟಲ್ ಟರ್ನ್ ಕೀ ಆಧಾರದಲ್ಲಿ ಟೆಂಡರ್…
ತುಮಕೂರು : ಸಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳಿಗೆ ನ.3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅತ್ಯಂತ ಬಹುತದಿಂದ ಜಯಶೀಲರಾಗಿ ಈ ಎರಡೂ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪರ್ವವನ್ನೇ ಸೃಷ್ಠಿಸಲಿದ್ದಾರೆ ಎಂದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿ ಮಾತನಾಡಿದ ಅವರು, ಈ ಉಪಚುನಾವಣೆಯಲ್ಲಿ ಅಭಿವೃದ್ಧಿಯತ್ತ ಜನರ ಒಲವಿದೆ. ಇನ್ನು ಎರಡು ಮುಕ್ಕಾಲು ವರ್ಷ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸಲಿದ್ದು, ಜನರಿಗೆ ಅಗತ್ಯ ಸವಲತ್ತು, ಸೌಲಭ್ಯಗಳನ್ನು ಪೂರೈಸುವ ಕೆಲಸ…
ಹುಳಿಯಾರು : ಹುಳಿಯಾರು ಹೋಬಳಿಯ ಸೀಗೆಬಾಗಿಯಲ್ಲಿ ಚಿರತೆ ದಾಳಿಗೆ ಕರು ಬಲಿಯಾದ ಘಟನೆ ನಡೆದಿದ್ದು ಈ ಭಾಗದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಸೀಗೆಬಾಗಿಯ ಗೊರವಣ್ಣನವರ ಕರಿಯಮ್ಮ ಅವರಿಗೆ ಸೇರಿದ ಕರು ಚಿರತೆ ದಾಳಿಗೆ ಬಲಿಯಾಗಿದ್ದು ಇವರು ಇಲ್ಲಿನ ಗಂಗಾಧರ್ ಅವರ ತೋಟದಲ್ಲಿ ಎಂದಿನಂತೆ ತಮ್ಮ ನಾಲ್ಕು ದನ ಮತ್ತು ಕರುವನ್ನು ಮೇಯಿಸಲು ಕರೆದೊಯ್ದಿದ್ದರು. ರಾಸುಗಳು ಮೇಯುತ್ತಿದ್ದ ಸಂದರ್ಭದಲ್ಲಿ ಚಿರತೆಯೊಂದು ಕರು ಮೇಲೆ ಎಗರಿ ಬಿದ್ದು ಪಕ್ಕದ ಬೇಲಿಗೆ ಕರುವನ್ನು ಎಳೆದೊಯ್ದು ತಿನ್ನಲು ಆರಂಭಿಸಿತು. ಇದನ್ನು ಕಂಡ ಕರಿಯಮ್ಮ ಗಾಭರಿಯಿಂದ ರಾಸುಗಳನ್ನು ಅಲ್ಲಿಯೇ ಬಿಟ್ಟು ಊರಿಗೆ ಓಡಿಹೋಗಿ ವಿಷಯ ಮುಟ್ಟಿಸಿದ್ದಾರೆ. ಊರಿನವರು ಬಂದು ನೋಡುವಷ್ಟರಲ್ಲಿ ಚಿರತೆ ಕರುವನ್ನು ಅರ್ಧ ತಿಂದು ಪರಾರಿಯಾಗಿದೆ. ಪರಿಣಾಮ ಊರಿನ ಗ್ರಾಮಸ್ಥರು, ಕುರಿಗಾಹಿಗಳು, ಹೈನುಗಾರರು ತಮ್ಮ ಸಾಕು ಪ್ರಾಣಿಗಳನ್ನು ಮೇಯಿಸಲು ಹೋಗದೆ ಭಯಭೀತರಾಗಿದ್ದಾರೆ. ಹಾಗಾಗಿ ಅರಣ್ಯ ಇಲಾಖೆಯವರು ತಕ್ಷಣ ಬೋನ್…
ತುಮಕೂರು: ನಗರದ ಮಂಡಿಪೇಟೆಯಲ್ಲಿ ನೂತನವಾಗಿ ಆರಂಭವಾಗಿರುವ ಮೆಟ್ರೋದಿಂದ ಮಂಡಿಪೇಟೆ ರಸ್ತೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಮಂಜುನಾಥ್ ಮತ್ತು ಟ್ರಾಫಿಕ್ ಇನ್ಸ್‍ಪೆಕ್ಟರ್ ಶಿವಕುಮಾರ್ ಅವರಿಗೆ ಸಮಾಜ ಸೇವಕರು ಹಾಗೂ ಆರ್ಯವೈಶ್ಯ ಮುಖಂಡರಾದ ನಟರಾಜು ಒತ್ತಾಯಿಸಿದರು. ಮಂಡಿಪೇಟೆಯ ವರ್ತಕರು ಮತ್ತು ಸಾರ್ವಜನಿಕರೊಂದಿಗೆ ನಟರಾಜು ಅವರು, ತೆರಳಿ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್ ಅವರೊಂದಿಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಚರ್ಚಿಸಿ, ನೀವು ಮೆಟ್ರೋ ಆರಂಭಿಸಿರುವುದರಿಂದ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಈ ಭಾಗದ ವರ್ತಕರು ಮತ್ತು ಸಾರ್ವಜನಿಕರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಮನವಿ ಮಾಡಿದರು. ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಶಿವಕುಮಾರ್ ಅವರು, ಸಮಾಜ ಸೇವಕರಾದ ನಟರಾಜು ಸೇರಿದಂತೆ ವರ್ತಕರು ಹಾಗೂ ಸಾರ್ವಜನಿಕರೊಂದಿಗೆ ಕೆಲಹೊತ್ತು ಚರ್ಚೆ ನಡೆಸಿದರು. ಇವರ ಮನವಿಗೆ ಸ್ಪಂದಿಸಿದ…
ಹುಳಿಯಾರು: ದಸರಾ ಮತ್ತು ದೀಪಾವಳಿ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆಯಲ್ಲಿ ಕೋವಿಡ್ 19 ರ ನಿಯಮಾವಳಿಗಳಂತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ 6 ಅಡಿ ಅಂತರವನ್ನು ಕಾಯ್ದಿರಿಸಿಕೊಂಡು ವ್ಯಾಪಾರ ವಹಿವಾಟು ನಡೆಸಬೇಕು ಇಲ್ಲವಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಪಪಂ ಮುಖ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ವ್ಯಾಪಾರಿಗಳು ಆದಷ್ಟು ಹಬ್ಬಕ್ಕೆ ಅಗತ್ಯವಾದ ಹೂವು, ಹಣ್ಣು, ತರಕಾರಿ ಮತ್ತು ದಿನಸಿ ಪದಾರ್ಥಗಳನ್ನು ಹೋಂ ಡಿಲುವರಿ ಮಾಡಿದರೆ ಉತ್ತಮವಾಗಿರುತ್ತದೆ. ಗ್ರಾಹಕರೂ ಕೂಡ ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಿ ಒಮ್ಮೆ ಹಬ್ಬಕ್ಕೆ ಬೇಕಾದ ಅಷ್ಟೂ ಸಾಮಗ್ರಿಗಳನ್ನು ಖರೀಧಿಸಿ ಮನೆಯಿಂದ ಹೊರಬಾರದಂತೆ ಮನೆಯಲ್ಲಿ ಹಬ್ಬ ಆಚರಿಸಲು ನಿರ್ಧರಿಸಿದರೆ ಒಳಿತು. ಇದರಿಂದ ಕೊರೊನಾ ಸೋಂಕು ಹರಡುವುದನ್ನು ತಡೆಯಲು ತಾವೆಲ್ಲರೂ ಅತ್ಯಮೂಲ್ಯ ಕೊಡುಗೆ ಕೊಟ್ಟಂತ್ತಾಗುತ್ತದೆ ಎಂದಿದ್ದಾರೆ. ಹಬ್ಬದ ವ್ಯಾಪಾರದ ಸಂದರ್ಭದಲ್ಲಿ ಪಪಂ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ತಂಡ ಪಟ್ಟಣದಲ್ಲಿ ಸಂಚಾರ ಮಾಡುತ್ತಿದ್ದು ಮಾಸ್ಕ್ ಧರಿಸದೆ ಓಡಾಡುವುದು, ಸಾರ್ವಜನಿಕ ಅಂತರವನ್ನು…











