ಹುಳಿಯಾರು : ಹುಳಿಯಾರು ಸಮೀಪದ ಮತಿಘಟ್ಟದ ಪೆಟ್ರೋಲ್ ಬಂಕ್ ಬಳಿ ನೂರಾರು ಎಕರೆ ಜಮೀನಲ್ಲಿ ಬೆಂಕಿ ತಗುಲಿದ ಘಟನೆ ಮಂಗಳವಾರ ನಡೆದಿದೆ.ಪೆಟ್ರೋಲ್ ಬಂಕ್ ಹತ್ತಿರ ಇದಕಿದ್ದ ಹಾಗೆ ಜಮೀನಿನಲ್ಲಿ ರಾಗಿ ಕಟಾವು ಮಾಡಿ ಬಿಟ್ಟಿದ್ದ ರಾಗಿ ಕೂಳೆಗೆ ಬೆಂಕಿ ತಗುಲಿದೆ. ಮೊದಲೆ ಬಿಸಿಲಿಗೆ ರಾಗಿ ಕೂಳೆ ಒಣಗಿದ್ದ ಕ್ಷಣಾರ್ಧದಲ್ಲಿ ನೂರಾರು ಎಕರೆ ಜಮೀನನ್ನು ಆವರಿಸಿಕೊಂಡಿದೆ. ಬೈಕ್‍ಗೆ ಪೆಟ್ರೋಲ್ ಹಾಕಿಸಲು ಬಂದಿದ್ದ ಬೈಕ ಸವಾರರೊಬ್ಬರು ಇದನ್ನು ಗಮನಿಸಿ ಹಂದನಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪರಿಣಾಮ ಪಿಎಸ್‍ಐ ಶಿವಕುಮಾರ್ ಸ್ಥಳಕೆ ಆಗಮಿಸಿ ಅಗ್ನಿಶಾಮಕ ದಳದವರನ್ನು ಕರೆಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಮುಂದಿನ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.
Author: News Desk Benkiyabale
ತುಮಕೂರು : ಅಧಿಕಾರಿಗಳ ಕಿರುಕುಳಕ್ಕೆ ನೊಂದ ಕೆಎಸ್‍ಆರ್ಟಿಸಿ ಚಾಲಕ ಅಧಿಕಾರಿಗಳೆದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣ ನಗರದ ಕೆಎಸ್‍ಆರ್ಟಿಸಿ ಕಚೇರಿಯಲ್ಲಿ ನಡೆದಿದೆ. ವಿಷ ಸೇವಿಸಿದ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕ ಮಹಮದ್ ಕಮ್ಮಾರ್, ವಿಷ ಸೇವನೆಗೆ ಮೊದಲು ಅಧಿಕಾರಿಗಳ ಕಿರುಕುಳದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.ಗುಬ್ಬಿ ತಾಲ್ಲೂಕು ಕೆ.ಜಿ.ಟೆಂಪಲ್ ಗ್ರಾಮದ ಮಹಮದ್ ಕಮ್ಮಾರ್ ಕೆಎಸ್‍ಆರ್ಟಿಸಿಯಲ್ಲಿ ಚಾಲಕರಾಗಿ ಸೇವೆಯಲ್ಲಿದ್ದಾರೆ. ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ರಜೆ ಕೋರಿದ್ದಕ್ಕೆ ಅಧಿಕಾರಿಗಳು ರಜೆ ನಿರಾಕರಿಸಿದ್ದರು ಎನ್ನಲಾಗಿದೆ. ಇದರ ಜೊತೆ ಅಧಿಕಾರಿಗಳ ಕಿರುಕುಳ ನೀಡುತ್ತಿದ್ದರೆಂದು ಆರೋಪ ಮಾಡಿ ಪತ್ರದಲ್ಲಿ ವಿವರಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಕೆಎಸ್‍ಆರ್ಟಿಸಿ ಕಚೇರಿಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರಕುಮಾರ್ ಎದುರೇ ಮಹಮದ್‍ಕಮ್ಮಾರ್ ಕ್ರಿಮಿನಾಶಕ ದ್ರಾವಣ ಕುಡಿದು ಆತ್ಮಹತ್ಯೆಗೆ ಪ್ರಯತ್ನ ಮಾಡಿದರು. ತಕ್ಷಣ ಎಚ್ಚೆತ್ತುಕೊಂಡ ಅಧಿಕಾರಿಗಳು ಮಹಮದ್…
ತುಮಕೂರು: ಮಾರಣಾಂತಿಕ ಕೊರೋನಾ ವೈರಸ್ ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಹಾಸಿಗೆಗಳುಳ್ಳ ವಿಶೇಷ ವಾರ್ಡ್ ತೆರೆದು, ಪ್ರತ್ಯೇಕ ಸಿಬ್ಬಂದಿ ನೇಮಕ ಮಾಡಲಾಗಿದ್ದು, ದಿನದ 24 ಗಂಟೆಯು ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆ ಸನ್ನದ್ದವಾಗಿದೆ. ಮುಂಜಾಗ್ರತಾ ಕ್ರಮಗಳು:- ಕೊರೋನಾ ವೈರಸ್‍ಗೆ ನಿರ್ದಿಷ್ಟ ಚಿಕಿತ್ಸೆ ಕಂಡು ಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಕೆಮ್ಮುವಾಗ ಬಟ್ಟೆಯಿಂದ ಮುಚ್ಚಿಕೊಳ್ಳಬೇಕು. ತುಮಕೂರು ಜಿಲ್ಲೆಯಲ್ಲಿ ಜನರು ಆತಂಕ ಪಡುವ ಅಗತ್ಯವಿಲ್ಲ. ಈಲ್ಲೆಯಲ್ಲಿ ಸಂಶಯಾತ್ಮಕ ಸೋಂಕು ಕಂಡು ಬಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ವೈರಸ್‍ನ ಲಕ್ಷಣಗಳಿರುವವರು ಕೂಡಲೇ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ವೀರಭದ್ರಯ್ಯ ಅವರು ತಿಳಿಸಿದ್ದಾರೆ. ಕಳೆದ ದಿನಗಳ ಹಿಂದೆ ಚೀನಾದ ವುಹಾನ್‍ನಲ್ಲಿ ಮೊದಲು…
ತುಮಕೂರು : ಮನೆ ಬಾಡಿಗೆ ಭತ್ಯೆ, ಪ್ರಯಾಣ ಭ್ಯತೆ ನಿಲ್ಲಿಸಿರುವುದನ್ನು ಖಂಡಿಸಿ, ಕನಿಷ್ಠ ವೇತನ ಬಾಕಿ ನೀಡುವುದು, ಪ್ರೋತ್ಸಾಹಧನ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಫಿಟ್‍ವೆಲ್ ಟೂಲ್ಸ್ ಅಂಡ್ ಫೋರ್ಜಿಂಗ್ ಕಾರ್ಮಿಕರ ಸಂಘದ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯ ಮುಂದೆ ಪ್ರತಿಭಟನೆ ನಡೆಸಿದರು. ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಾದ ರಜೆಗಳನ್ನು ನೀಡದೆ ಕಿರುಕುಳ ನೀಡಲಾಗುತ್ತಿದೆ. ಉತ್ಪಾದನಾ ಆಧಾರದಲ್ಲಿ ಕೊಡುತ್ತಿದ್ದ ಪ್ರೋತ್ಸಾಹ ಧನವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದು ಅದನ್ನು ಮುಂದುವರಿಸಬೇಕು. 2108, 2019ನೇ ಸಾಲಿನ ವಾರ್ಷಿಕ ಬೋನಸ್ 20ರಷ್ಟು ನೀಡಬೇಕು. ಎಕ್ಸ್‍ಗ್ರೇಸಿಯಾ ಶೇ.5ರಷ್ಟು ನೀಡಬೇಕು, 200 ಮಂದಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಎಲ್ಲಾ ಕಾರ್ಮಿಕರಿಗೂ ನೇಮಕಾತಿ ಆದೇಶ ನಿಡಬೇಕು. ಸೇವಾ ಭದ್ರತೆ ಒದಗಿಸಬೇಕು.ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನಮ್ಮ ಬೇಡಿಕೆಗಳ ಕುರಿತು ಫಿಟ್‍ವೆಲ್ ಟೂಲ್ಸ್ ಅಂಡ್ ಫೋರ್ಜಿಂಗ್ ಆಡಳಿತ ಮಂಡಳಿಯವರ ಗಮನಕ್ಕೆ ತಂದಿದೆ. ಆದರೂ ಇದರ…
ತುಮಕೂರು : ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ, ಚುನಾವಣೆಗೆ ಮೂರು ತಿಂಗಳಿದ್ದಾಗ ರಾಜಕಾರಣ ಮಾಡೋಣ ಈಗ ಅಭಿವೃದ್ಧಿಗೆ ಗಮನ ಹರಿಸೋಣ, 3-4 ತಿಂಗಳಲ್ಲಿ ಮತ್ತೆ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು. ಹೊನ್ನುಡಿಕೆ ಸರ್ಕಾರಿ ಶಾಲೆ ವಾರ್ಷಿಕೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಮೈತ್ರಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು, ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ತಂದು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಶಿಥಿಲಗೊಂಡಿದ್ದ ಶಾಲೆಯನ್ನು ಅಭಿವೃದ್ಧಿಪಡಿಸುವಂತೆ ಕಳೆದ ವಾರ್ಷಿಕೋತ್ಸವದಲ್ಲಿ ಶಾಲೆಯ ಶಿಕ್ಷಕರು ಮನವಿ ಮಾಡಲಾಗಿತ್ತು, ಅದರಂತೆ ಶಾಲೆಗೆ ಮೂರು ಹೊಸ ಕಟ್ಟಡಗಳನ್ನು ಒಂದೇ ವರ್ಷದಲ್ಲಿ ಅಭಿವೃದ್ಧಿಪಡಿಸಿ ಉದ್ಘಾಟಿಸಲಾಗಿದೆ, ಹೊನ್ನುಡಿಕೆ ಸರ್ಕಾರಿ ಶಾಲೆಯನ್ನು ದತ್ತುಪಡೆದು ವಿಶೇಷವಾಗಿ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು. …
ತುಮಕೂರು : ವರ್ಣಮಯ ಹೂಗಳಿಂದ ಅರಳಿದ್ದ ಆಕೃತಿಗಳು, ನಾನಾ ಹಣ್ಣುಗಳಿಂದ ಮೂಡಿದ್ದ ಆಕಾರಗಳು, ಮಕ್ಕಳನ್ನು ಸೆಳೆಯುವ ಕಾರ್ಟೂನುಗಳು, ಕಲಾವಿದನ ಕಲಾಕುಂಚದಲ್ಲಿ ರೂಪುಗೊಂಡಿದ್ದ ನಾನಾ ಚಿತ್ರಗಳು, ಕಲಾಕಾರಗಳು, ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆಗಳು, ಅರಣ್ಯ-ಗುಡ್ಡದ ಪ್ರದೇಶಗಳು, ಜೇನು ಸಾಕಾಣಿಕೆಯ ಮಾದರಿ, ಹೀಗೆ ಹಳ್ಳಿ ಸೊಗಡನ್ನು ಬಿಂಬಿಸುವ ಪಂಚಾಯತಿ ಕಟ್ಟೆಯ ನೋಟ ಹೀಗೆ ನಾನಾ ಬಗೆಯಲ್ಲಿ ಜನವರಿ 31 ರಿಂದ ಮೂರು ದಿನಗಳ ಕಾಲ ತುಮಕೂರು ನಗರಲ್ಲಿ ಅನಾವರಣಗೊಂಡಿದ್ದ ಫಲಪುಷ್ಪ ಪ್ರದರ್ಶನ ನೋಡುಗರ ಕಣ್ಮನಗಳಿಗೆ ತಂಪು ನೀಡಿತು. ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ, ಜಿಲ್ಲಾ ತೋಟಗಾರಿಕಾ ಸಂಘ ಹಾಗೂ ಕೃಷಿ ಇಲಾಖೆ ಆತ್ಮ ಯೋಜನೆ ಸಹಯೋಗದಲ್ಲಿ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ನಡೆದ ಫಲಪುಷ್ಪ ಪ್ರದರ್ಶನ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಮೂರು ದಿನವೂ ವೀಕ್ಷಣೆಗೆ ಜನಸಾಗರವೇ ಹರಿದು ಬಂದಿತ್ತು. ಈ ಫಲಪುಷ್ಪ ಪ್ರದರ್ಶನ `ಸಕಲವೂ ಒಳಗೊಂಡ ನಿಸರ್ಗ ಮಾತೆ’ಯನ್ನು ಒಂದೇ ಸೂರಿನಡಿ ನೋಡಿದಂತಹ ಅನುಭವವನ್ನು ಮನಸ್ಸಿಗೆ ಉಣಬಡಿಸಿತು. …
ತುಮಕೂರು : ಭಾರತೀಯ ಜೀವವಿಮಾ ನಿಗಮವನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಅಖಿಲ ಭಾರತ ಜೀವವಿಮಾ ನೌಕರರ ಸಂಘ, ಅಭಿವೃದ್ಧಿ ಅಧಿಕಾರಿಗಳ ಸಂಘ ಮತ್ತು ಅಧಿಕಾರಿಗಳ ಸಂಘಟನೆಗಳು ನೇತೃತ್ವದಲ್ಲಿ ತುಮಕೂರಿನ ಗಾಂಧೀನಗರದಲ್ಲಿರುವ ಕಚೇರಿ ಮುಂದೆ ನೌಕರರು ಸಾಂಕೇತಿಕ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ ಜಿಲ್ಲಾಧ್ಯಕ್ಷ ನಂಜುಡಸ್ವಾಮಿ, ಬಜೆಟ್‍ನಲ್ಲಿ ಎಲ್‍ಐಸಿ ಶೇರು ವಿಕ್ರಯಕ್ಕೆ ತೀರ್ಮಾನಿಸಿರುವುದು ಆಘಾತಕಾರಿ ಬೆಳವಣಿಗೆ. ಸಧ್ಯಕ್ಕೆ ಗ್ರಾಹಕರ ಹಣಕ್ಕೆ ಭಯವಿಲ್ಲ. ಆದರೆ ಭಾರತೀಯ ಜೀವ ವಿಮಾ ನಿಗಮ ಖಾಸಗೀಕರಣಗೊಳಿಸಿದರೆ ಸಾರ್ವಜನಿಕರ ಹಣಕ್ಕೆ ಭದ್ರತೆ ಇರುವುದಿಲ್ಲ. ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿರುವ ಎಲ್‍ಐಸಿ ಲಾಭದಲ್ಲಿದೆ. ಇಂತಹ ಸಂಸ್ಥೆಯ ಷೇರು ವಿಕ್ರಯಕ್ಕೆ ಸರ್ಕಾರ ಮುಂದಾಗುವುದು ಸರಿಯಲ್ಲ ಎಂದರು. ಭಾರತೀಯ ಜೀವ ವಿಮಾನ ನಿಗಮ ಇದುವರೆಗೂ ಸಾವಿರಾರು ಕೋಟಿ ರೂಪಾಯಿ ಲಾಭವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತ ಬಂದಿದೆ.…
ತುಮಕೂರು : ಅಲ್ಪಸಂಖ್ಯಾತರ ವರ್ಗದವರ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿರುವುದರಿಂದ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಅನುದಾನವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಿ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ಜಾರ್ಜ್ ಕುರಿಯನ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಧಾನಮಂತ್ರಿ 15 ಅಂಶಗಳ ಹಾಗೂ ಪ್ರಧಾನಮಂತ್ರಿ ಜನ ವಿಕಾಸ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಅತಿ ಹೆಚ್ಚು ಅಲ್ಪಸಂಖ್ಯಾತರರು 308 ಜಿಲ್ಲೆಗಳನ್ನು ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯಕ್ರಮದಡಿ ಈಗಾಗಲೇ ಆಯ್ಕೆ ಮಾಡಿದ್ದು, ಈ ಪೈಕಿ ತುಮಕೂರು ಜಿಲ್ಲೆಯು ಒಂದಾಗಿದೆ. ಇನ್ನೂ ಅಲ್ಪಸಂಖ್ಯಾತರರು ಹೆಚ್ಚಿರುವ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 5 ಕಿಲೋ ಮೀಟರ್ ವ್ಯಾಪ್ತಿಗೊಳಪಡುವ ಗ್ರಾಮಗಳ ಕ್ಲಸ್ಟರ್ ಗ್ರಾಮವನ್ನಾಗಿ ರಚಿಸಿ ಅಲ್ಪಸಂಖ್ಯಾತ ವರ್ಗದವರಿಗೆ ಶೌಚಾಲಯ, ಹೆಲ್ತ್ ಸೆಂಟರ್ ಸೇರಿದಂತೆ…
ತುಮಕೂರು : : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜನವರಿ 31 ಹಾಗೂ ಫೆಬ್ರವರಿ 1ರಂದು ನಡೆದ ಜಿಲ್ಲಾಮಟ್ಟದ ಇನ್‍ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 8 ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಟವಾಡಿಯ ಚೇತನ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿ ತೇಜಸ್, ಶ್ರೀ ಸಿದ್ಧಗಂಗಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಂ.ಎಸ್. ಯಶಸ್, ಶ್ರೀ ಸಿದ್ಧೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಗಿರೀಶ್, ಕೆಸರುಮಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೀತಿ, ಬ್ಯಾತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಿನ್ಮಯಿ, ದೊಡ್ಡವೀರನಹಳ್ಳಿ ಜಿಹೆಚ್‍ಪಿಎಸ್ ಶಾಲೆಯ ಎಲ್.ಎಸ್.ಜಯಣ್ಣ, ಕ್ಯಾತ್ಸಂದ್ರ ನಿವೇದಿತಾ ಪ್ರೌಢ ಶಾಲೆಯ ಶಿವಣ್ಣಗೌಡ, ಸತ್ಯಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಿ.ಅಮೃತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಕ್ಷೇತ್ರ ಶಿಕ್ಷಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರಟಗೆರೆ : ತಾಲ್ಲೂಕಿನ ಸರ್ಕಾರಿ ಗೋಮಾಳ, ಗುಂಡು ತೋಪು, ರಾಜಕಾಲುವೆ ಹಾಗೂ ಕೆರೆ ಒತ್ತುವರಿ ತೆರವುಗೊಳಿಸು ವಂತೆ ಒತ್ತಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಫೆ.3 ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಮಿಕೊಂಡಿರುವುದಾಗಿ ಸಂಘದ ಅಧ್ಯಕ್ಷ ಸಿದ್ದರಾಜು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಗೋಮಾಳ, ಗುಂಡು ತೋಪು ಕೆರೆ ಒತ್ತುವರಿಯ ಬಗ್ಗೆ ರೈತ ಸಂಘ ಮಾಹಿತಿ ನೀಡಿ ತೆರವು ಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸಹ ತಾಲ್ಲೂಕು ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ. ಸರ್ಕಾರಿ ಭೂಮಿ ಖಾಸಗಿ ಬಲಿಷ್ಟ ವ್ಯಕ್ತಿಗಳ ಪಾಲಾಗುತ್ತಿದ್ದರೂ ಅಧಿಕಾರಿಗಳು ಕಂಡು ಕಾಣದಂತೆ ಕುಳಿತಿದ್ದಾರೆ. ಎತ್ತಿನಹೊಳೆ ಯೋಜನೆ ಅವೈಜ್ಞಾನಿಕವಾಗಿದ್ದು, ರೈತರಿಗೆ ಅಲ್ಪಸ್ವಲ್ಪ ಹಣ ನೀಡಿ ಕಾಲುವೆ ಮಾಡುತ್ತಿದ್ದಾರೆ. ಬೆಸ್ಕಾಂ ಇಲಾಖೆ ಅಧೀಕಾರಿಗಳು ರೈತರಿಗೆ ಸರಿಯಾದ ರೀತಿಯಲ್ಲಿ ಸ್ಪಂಧಿಸುತ್ತಿಲ್ಲ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟುಕೊಂಡು ಫೆ.3 ರಂದು ಪಟ್ಟಣದ ಕೆಎಸ್‍ಆರ್ಟಿಸಿ ಬಸ್ ನಿಲ್ದಾಣದಿಂದ…