ಬೆಂಗಳೂರು: ಶಿರಾ ಕ್ಷೇತ್ರದ ಉಪಚುನಾವಣೆ ಬಗ್ಗೆ ಕೆಪಿಸಿಸಿ ನಿರ್ಧಾರವನ್ನು ರಾಜ್ಯ ಉಸ್ತುವಾರಿ ಕಾಂಗ್ರೆಸ್‍ನ ನಾಯಕ ರಣದೀಪ್ ಸುರ್ಜೆವಾಲ ಟೀಕಿಸಿದ್ದಲ್ಲದೇ, ರಾಜ್ಯ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಜಯಚಂದ್ರ 9 ಬಾರಿ ಚುನಾವಣೆಗೆ ನಿಂತಿದ್ದಾರೆ. ಮತ್ತೆ ಅವರ ಹೆಸರನ್ನೇ ಶಿಫಾರಸ್ಸು ಮಾಡಿದ್ದೀ ರಲ್ಲ. ನಿಮಗೆ ಸಾಮಾನ್ಯಜ್ಞಾನ ವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ರಣದೀಪ್ ಸುರ್ಜೆವಾಲ ಶಿರಾ ಕ್ಷೇತ್ರದ ಕಾರ್ಯಕರ್ತರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳುವ ಕಾರ್ಯಕ್ರಮದ ಸಂದರ್ಭದಲ್ಲಿ ಹೈಕಮಾಂಡ್‍ನ ಸುರ್ಜೆವಾಲಾ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಫೋನ್ ಮಾಡಿದ್ದು, ಜಯಚಂದ್ರ ಅವರಿಗೆ ಟಿಕೆಟ್ ನೀಡಬಾರದಿತ್ತು. ರಾಜೇಶಗೌಡ ಅವರಿಗೆ ಟಿಕೆಟ್ ಕೊಡಬೇಕಿತ್ತು ಎಂದಿದ್ದಾರೆ. 1978ರಿಂದಲೂ 9 ಬಾರಿ ಜಯಚಂದ್ರ ಅವರೇ ಚುನಾವಣೆಗೆ ನಿಂತಿದ್ದಾರೆ. ನಿಮಗೆ ಕಾಮನ್ ಸೆನ್ಸ್ ಇಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜೇಶ್‍ಗೌಡ ಅವರು ಕಳೆದ ಬಾರಿ ಜೆಡಿಎಸ್ ಪರ ಪ್ರಚಾರ ಮಾಡಿ ದ್ದರು. ಈಗ ಬಿಜೆಪಿ ಸೇರಿ ದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನೆಪ…
Author: News Desk Benkiyabale
ಮಧುಗಿರಿ: ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಎಂ.ಪ್ರವೀಣ್ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಸುಮಾರು 19 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಘಟನೆ ಇತ್ತೀಚೆಗೆ ನಡೆದಿದೆ. ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಬಡಿಗೇನಹಳ್ಳಿ ಗ್ರಾಮದ ಜಮೀನಿನಲ್ಲಿ ಪಾಪಣ್ಣ ಎಂಬುವವರು 19 ಗಾಂಜಾ ಗಿಡಗಳನ್ನು ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂದಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಿಪಿಐ ಸರ್ಧಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.
ತುಮಕೂರು: ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯು ದೇಶವ್ಯಾಪಿ ವಿದ್ಯಾರ್ಥಿಗಳ ಸಮಸ್ಯೆಗಳ ನಿವಾರಣೆ ಮತ್ತು ಮೂಲಭೂತ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತ ಬಂದಿದೆ. ನವ ಉದಾರಿಕರಣ, ಖಾಸಗೀಕರಣ ಮತ್ತು ಜಾಗತೀಕರಣದ ಪರಿಣಾಮ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಪೋರೇಟ್ ಕಂಪನಿಗಳು ಹಣಹೂಡಿ ವಿದ್ಯಾರ್ಥಿಗಳಿಂದ ವಸೂಲಿಗೆ ಇಳಿದಿವೆ. ಇಂತಹ ಸಂದರ್ಭದಲ್ಲಿ ಬಡವಿದ್ಯಾರ್ಥಿಗಳು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಎಂಬುದು ಕನಸಿನ ಮಾತಾಗಿದೆ. ಕಲಾ ಮತ್ತು ವಿಜ್ಞಾನ ಹೊರತುಪಡಿಸಿ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಬಡ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ನಮ್ಮನ್ನು ಆಳುವ ಸರ್ಕಾರಗಳು ಸಹ ಶ್ರೀಮಂತರ ಪರವಾದ ನೀತಿಗಳನ್ನು ಜಾರಿಗೊಳಿಸಿ ಬಡ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರವಿಡುವ ಕೆಲಸ ಮಾಡುತ್ತಿವೆ. ರಾಜಕಾರಣಿಗಳಿಗೆ ಸೇರಿದ ಶಿಕ್ಷಣ ಸಂಸ್ಥೆಗಳೇ ಹೆಚ್ಚಾಗಿದ್ದು ದುಬಾರಿ ಶುಲ್ಕ ವಿಧಿಸುವ ಮೂಲಕ ಬಡ ವಿದ್ಯಾರ್ಥಿಗಳನ್ನು ಸುಲಿಗೆ ಮಾಡುತ್ತಿವೆ. ಇದನ್ನು ಗಮನಿಸಿದ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಉಚಿತವಾಗಿ…
ತುಮಕೂರು: ತುಮಕೂರು ಜಿಲ್ಲೆಯ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ನೂತನ ಜಿಲ್ಲಾಧ್ಯಕ್ಷರಾಗಿ ರವೀಶ್ ಅರಕೆರೆರವರನ್ನು ಆಯ್ಕೆ ಮಾಡಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಸುರೇಶ್‍ಗೌಡರು ಆದೇಶ ಹೊರಡಿಸಿರುತ್ತಾರೆ. ನೂತನ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ರವೀಶ್ ಅರಕೆರೆರವರು ಉತ್ತಮ ಸಂಘಟನಾ ಸಾಮಥ್ರ್ಯವನ್ನು ಹೊಂದಿದ್ದು, ಸಂಘಟನೆಯ ವಿಚಾರದಲ್ಲಿ ಪ್ರಭಾವಿ ರಾಜಕಾರಣಿಗಳ ಅನುಭವವನ್ನು ಮೀರಿಸುವಂತಹ ಸಂಘಟನಾ ಚಾತುರ್ಯವನ್ನು ಹೊಂದಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿವಿಧ ಜವಾಬ್ದಾರಿಗಳನ್ನ ಯಾವುದೇ ರೀತಿಯ ಲೋಪಗಳಿಲ್ಲದೆ ಸಮರ್ಥವಾಗಿ ನಿಭಾಯಿಸುವ ಮುಖೇನ ಚುನಾವಣೆಯ ಜವಾಬ್ದಾರಿಗಳಲ್ಲಿ ತಮ್ಮ ಚಾಣಾಕ್ಷತನವನ್ನು ಪ್ರದರ್ಶಿಸಿದ್ದರು. ಯಾವುದೇ ರೀತಿಯ ಅಧಿಕಾರ ಮತ್ತು ಲಲಾಸೆಗೆ ಒಳಗಾಗದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆಸಲ್ಲಿಸಿದ್ದ ಇವರ ಚಾಣಾಕ್ಷನದ ಸಂಘಟನಾ ಸಾಮಥ್ರ್ಯವನ್ನು ಅರಿತ ಸುರೇಶ್‍ಗೌಡರು ಪ್ರಸ್ತುತ ಜಿಲ್ಲಾ ಯುವಮೋರ್ಚಾಗೆ ಇವರ ಅಗತ್ಯತೆ ಇದೆ ಎನ್ನುವುದನ್ನು ಮನಗಂಡು ಆಯ್ಕೆ ಮಾಡಿದ್ದಾರೆ ಎನ್ನುವುದು ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಯುವ ಮೋರ್ಚಾದ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆ…
ತುಮಕೂರು : ಜಿಲ್ಲೆಯ ಅಂಗಡಿ ಮುಂಗಟ್ಟು ಗಳಿಗೆ ಹಾಗೂ ಜಾಹೀರಾತು ಫಲಕಗಳಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರವೇ ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥಗೌಡ ಅವರ ನೇತೃತ್ವದಲ್ಲಿ ನೂರಾರು ಕರವೇ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕನ್ನಡ ನಾಮಪತ್ರಗಳನ್ನು ಅಳವಡಿಸುವಂತೆ ಆಗ್ರಹಿಸಿದರು. ಭಾರತ ಬಹುಭಾಷೆಗಳ ನಾಡು, ಭಾಷಾ ವಾರು ಪ್ರಾಂತ್ಯಗಳ ವಿಂಗಡನೆಯ ನಂತರ ಕರ್ನಾಟಕ ಆಸ್ಥಿತ್ವಕ್ಕೆ ಬಂದಿದ್ದು, ಇದಕ್ಕಾಗಿ ಗೋಕಾಕ್ ಚಳುವಳಿಯಂತಹ ಹಲವಾರು ಹೋರಾಟಗಳೇ ನಡೆದಿವೆ. ಆದರೂ ಸಹ ಇಂದಿಗೂ ಕರ್ನಾಟಕದ ರಾಜ್ಯಧಾನಿ ಸೇರಿದಂತೆ, ಜಿಲ್ಲಾ ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ಕನ್ನಡ ನಾಮಫಲಕ ಹಾಕುವುದರಲ್ಲಿ ಹಿಂದೆಟು ಹಾಕಲಾಗುತ್ತಿದೆ. ನಾಡಿನ ಇತರ ಭಾಷೆಗಳಿಗಿಂತ ಕನ್ನಡ ಭಾಷೆಯ ನಾಮಫಲಕ ದೊಡ್ಡದಾಗಿರ ಬೇಕೆಂಬ ನಿಯಮವನ್ನು ಜಾರಿಗೆ ತಂದರೂ ಪ್ರಯೋಜನವಾಗಿಲ್ಲ. ನಿಯಮ ಪಾಲಿಸ ದವರ ವಿರುದ್ಧ ಕೇಸು ದಾಖಲಿಸಲು ಕಾರ್ಮಿಕ…
ಗುಬ್ಬಿ: ರೈತರು ಬಳಸುತ್ತಿದ್ದ ಸರ್ಕಾರಿ ರಸ್ತೆಯನ್ನೇ ಸೇರಿಸಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ದೂರು ನೀಡಿದರೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಾರಶೆಟ್ಟಿಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಜಾಣಮೌನ ತೋರುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ರಸ್ತೆ ತೆರವುಗೊಳಿಸಬೇಕು ಎಂದು ತಾಲ್ಲೂಕಿನ ಕಡಬ ಹೋಬಳಿ ಅತ್ತಿಕಟ್ಟೆ ಗ್ರಾಮಸ್ಥರು ಬುಧವಾರ ಮನವಿ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಓಡಾಡಲಾಗುತ್ತಿದ್ದ ರಸ್ತೆ ನಿತ್ಯ ಬಳಕೆ ಮಾಡಲಾಗುತ್ತಿತ್ತು. ಜತೆಗೆ ಕೃಷಿಕರು ತಮ್ಮ ಹೊಲ, ತೋಟಗಳಿಗೆ ಈ ರಸ್ತೆ ಬಳಸಿಕೊಳ್ಳುತ್ತಿದ್ದರು. ಇಲ್ಲಿನ ನಿವೇಶನವೊಂದರ ಮಾಲೀಕತ್ವಕ್ಕೆ ನ್ಯಾಯಾಲಯದ ಮೆಟ್ಟಿಲೇರಿದೆ. ಕಳೆದೆರಡು ವರ್ಷದಿಂದ ನಿವೇಶನಕ್ಕೆ ನಡೆದ ವ್ಯಾಜ್ಯ ದಿನಕಳೆದಂತೆ ಓಡಾಡುವ ರಸ್ತೆ ಅತಿಕ್ರಮಣಕ್ಕೆ ತಿರುಗಿದೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ಲಿಖಿತ ದೂರು ನೀಡಲಾಗಿತ್ತು. ಸ್ಥಳ ಪರಿಶೀಲನೆ ನಡೆಸಿದ ಅಭಿವೃದ್ದಿ ಅಧಿಕಾರಿ ಗುರುಮೂರ್ತಿ ಸರ್ಕಾರಿ ರಸ್ತೆ ಒತ್ತುವರಿ ತೆರವು ಮಾಡುವ ಮಾತುಗಳಾಡುತ್ತಲೇ ಕಾಲಹರಣ ಮಾಡಿದರು. ಇದರ ಫಲ ಅಕ್ರಮವಾಗಿ ಕಟ್ಟಡವೂ ನಿರ್ಮಾಣವಾಗಿದೆ.…
ತುಮಕೂರು: ಹೊಸ ಲೇಔಟ್‍ಗಳ ನಿರ್ಮಾಣದ ಜೊತೆಗೆ, ನಗರಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಆಸ್ತಿಗಳನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿ ಟೂಡಾ ಸದಸ್ಯರ ಮೇಲಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ವಿಘ್ನೇಶ್ವರ ಕಂರ್ಪಟ್‍ನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ನೂತನವಾಗಿ ಟೂಡಾ ಸದಸ್ಯರಾಗಿ ನೇಮಕವಾದವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸದಸ್ಯರಿಗೆ ಅಭಿನಂದಿಸಿ ಮಾತನಾಡುತಿದ್ದ ಅವರು, ಟೂಡಾ ಆಸ್ತಿಗಳಾದ ಉದ್ಯಾನವನಗಳು, ಸಿ.ಎ.ಸೈಟಗಳನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸುವ ಕೆಲಸವನ್ನು ಬಹಳ ಜವಾಬ್ದಾರಿಯಿಂದ ಸದಸ್ಯರು ಮಾಡಬೇಕಾಗಿದೆ ಎಂದರು. ನಗರದ ಹಲವಾರು ಉದ್ಯಾನವನಗಳನ್ನು ಕೆಲವರು ವಿಂಗಡಿಸಿ ಮಾರಾಟ ಮಾಡಿದ್ದಾರೆ. ನಗರಪಾಲಿಕೆ ವತಿಯಿಂದ ಪಾರ್ಕುಗಳ ಅಭಿವೃದ್ಧಿಗೆ ಮುಂದಾದಾಗ ನಿವೇಶನ ಕೊಂಡುಕೊಂಡವರು ಪರದಾಡುತ್ತಿದ್ದಾರೆ. ಹಾಗಾಗಿ ಮೊದಲು ನಗರದಲ್ಲಿ ಎಷ್ಟು ಪಾರ್ಕುಗಳಿವೆ? ಯಾವ ಸ್ಥಿತಿಯಲ್ಲಿವೆ? ಎಂಬ ಅಂಕಿ ಅಂಶವನ್ನು ದಾಖಲೆಗಳ ಸಮೇತ ಸಿದ್ದಪಡಿಸುವುದಲ್ಲದೆ, ಪಾಲಿಕೆಯ ಅಧಿಕಾರಿಗಳೊಂದಿಗೆ ಸದರಿ ಜಾಗಗಳನ್ನು ಟೂಡಾ ವಶಕ್ಕೆ ಪಡೆಯಲು ಪ್ರಯತ್ನಿಸ…
ಕೊರಟಗೆರೆ: ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ತಾಲೂಕಿನ ನಾಲ್ಕು ಗ್ರಾಪಂಗಳು ಆಯ್ಕೆಯಾಗಿದ್ದು, ಗ್ರಾಪಂಯ ಪ್ರತಿಯೊಂದು ಮನೆಯಿಂದ ಒಣ ಕಸ ಮತ್ತು ಹಸಿಕಸ ಸಂಗ್ರಹಸಿ ಅದನ್ನ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಿರ್ವಹಣೆ ಮಾಡಲಾಗುವುದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್ ಎಂದು ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಗ್ರಾಪಂಯಲ್ಲಿ ನೂತವಾಗಿ ನಿರ್ಮಾಣವಾಗುತ್ತಿರುವ ಕಸವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಮಾತನಾಡಿದರು. ಸ್ವಚ್ಛ ಭಾರತ ಮಿಷನ್ ಪರಿಕಲ್ಪನೆಯಿಂದ ಗ್ರಾಮ ಗಳಲ್ಲಿ ಸಂಗ್ರಹವಾಗುವ ಒಣ ಮತ್ತು ಹಸಿ ತ್ಯಾಜ್ಯವನ್ನ ಒಂದೆಡೆ ಸಂಗ್ರಹಿಸಿ ವಿಲೇವಾರಿ ಮಾಡುವುದು ಮತ್ತು ಸಂಸ್ಕರಿಸಿ ಬೇರೆಡೆ ಸಾಗಿಸುವ ಉದ್ದೇಶದಿಂದ ಹೊಳವನಹಳ್ಳಿ ಗ್ರಾಪಂಯ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ಸಂಗ್ರಹ ನಿರ್ವಹಣೆ ಘಟಕವೊಂದನ್ನ ಸ್ಥಾಪಿಸಲಾಗುತ್ತಿದೆ. ರಾಜ್ಯದಲ್ಲಿ ಕಸಮುಕ್ತ ಮಾಡುವ ಸಲುವಾಗಿ ಗ್ರಾಪಂಗಳಲ್ಲಿ ಕಸವಿಲೇವಾರಿ ಘಟಕವನ್ನ ಜಾರಿಗೆ ತಂದಿದ್ದು, ಒಂದು ಕಸವಿಲೇವಾರಿ ಘಟಕ ನಿರ್ಮಾಣಕ್ಕಾಗಿ ಸರಕಾರ 20 ಲಕ್ಷ ರೂ ಘೋಷಣೆ ಮಾಡಲಾಗಿದ್ದು,…
ಹುಳಿಯಾರು: ಕೇಂದ್ರ ಸರ್ಕಾರ ವಿದ್ಯುತ್ ವಲಯ ವನ್ನು ಖಾಸಗಿಕರಣ ಮಾಡುತ್ತಿ ರುವುದನ್ನು ವಿರೋಧಿಸಿ ಹುಳಿಯಾರು ಪಟ್ಟಣದ ಬೆಸ್ಕಾಂ ನೌಕರರು ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಅಸರ್ಕಾರ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀ ಕರಣಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದು ಇದರಿಂದ ಸಾಕಷ್ಟು ಸಮಸ್ಯೆಯಾಗಲಿದೆ ಎಂದು ದೂರಲಾಯಿತು. ಖಾಸಗಿಕರಣದಿಂದ ರೈತರು ಮತ್ತು ಬಡವರ ಮೇಲೆ ದುಷ್ಪರಿಣಾಮ ಬೀರಲಿದೆ. ಅಲ್ಲದೇ ಖಾಸಗೀಕರಣದ ನೀತಿ ಕಾರ್ಮಿಕರಿಗೆ ಮರಣ ಶಾಸನವಾಗಲಿದೆ. ವಿದ್ಯುತ್ ಇಲಾಖೆ ಲಾಭದಲ್ಲಿ ನಡೆಯುತ್ತಿದ್ದರೂ ಸಹ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವ ಕ್ರಮ ಸರಿಯಲ್ಲ. ಸರ್ಕಾರ ಕೂಡಲೇ ಈ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಲಾಯಿತು. ಸೆಕ್ಷನ್ ಆಫೀಸರ್ ಉಮೇಶ್ ನಾಯಕ್, ಮೂರ್ತಪ್ಪ ಸೇರಿದಂತೆ 50 ಕ್ಕೂ ಹೆಚ್ಚು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ನಂತರ ಕಪ್ಪುಪಟ್ಟಿ ಧರಿಸಿ ಕೆಲಸ ಮುಂದುವರಿಸಿದರು.
ತುಮಕೂರು: ಪರೀಕ್ಷೆಗಳನ್ನು ರದ್ದುಪಡಿಸಿ ಮುಂಬಡ್ತಿ ನೀಡುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ನೇತೃತ್ವದಲ್ಲಿ ಬಿಇಡಿ ವಿದ್ಯಾರ್ಥಿಗಳು ತುಮಕೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‍ಎಫ್‍ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ಮಾತನಾಡಿ ಯುಜಿಸಿ ಹಾಗೂ ಕೇಂದ್ರ-ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಕೋವಿಡ್ ಸಂದರ್ಭದಲ್ಲಿ ದೇಶವ್ಯಾಪಿ ಎಲ್ಲಾ ವಿವಿಗಳಲ್ಲೂ ಸಹ ತರಗತಿಗಳು ನಡೆದಿಲ್ಲ. ಆದ್ದರಿಂದ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯ ಮಾಡಲಾಗಿತ್ತು. ಇದನ್ನು ಮನಗಂಡ ಯುಜಿಸಿ ಹಾಗೂ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೂ ಮುಂಬಡ್ತಿ ನೀಡುವಂತೆ ಸೂಚಿಸಿತ್ತು. ಆದರೆ ತುಮಕೂರು ವಿವಿಯು ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡದೆ ನಿರ್ಲಕ್ಷ ಮಾಡಿತ್ತು. ಹಾಗಾಗಿ ಇಲ್ಲಿಯೂ ಸಹ ಯುಜಿಸಿ ನಿಯಮಗಳನ್ನು ಪಾಲಿಸಿ ಬಿಇಡಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ, ಮುಂದಿನ ಸೆಮಿಸ್ಟರ್‍ಗೆ ಬಡ್ತಿ ನೀಡಬೇಕೆಂದು ಒತ್ತಾಯಿಸಿದರು. ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ವಿವಿಯು ಪ್ರಾಮಾಣಿಕವಾಗಿ ಸ್ಪಂದಿಸುವ…











