ತುಮಕೂರು : ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳದ ಇಂಜಿನಿಯರುಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‌ಕುಮಾರ್ ಕಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಸಮನ್ವಯ ಸಮತಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರಿಂಗ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಪ್ರತಿ ದಿನ ಕನಿಷ್ಠ 10 ದೂರವಾಣಿ ಕರೆಗಳು ಬರುತ್ತಿದ್ದು, ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿವೆ. ಕಾಮಗಾರಿ ಪ್ರಗತಿಯಲ್ಲಿರುವ ಜಾಗದಲ್ಲಿ ಸೂಚನಾ ಫಲಕಗಳನ್ನು ಪ್ರದರ್ಶಿಸದಿರುವುದು ಅಪಘಾತಗಳಿಗೆ ಕಾರಣವಾಗಿವೆ. ಮಳೆ ಬಂದಿರುವುದರಿದ ರಸ್ತೆ ಯಾವುದು..? ಹಳ್ಳ ಯಾವುದು..? ಎಂದು ಗೊತ್ತಾಗದೆ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳು ಕೆಸರಿನಲ್ಲಿ ಹೂತುಕೊಂಡು ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ರಿಂಗ್ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಮರುಕಳಿಸಿದರೆ ಇಂಜಿನಿಯರುಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ನಿಯೋಜಿಸಿರುವ ಇಂಜಿನಿಯರುಗಳು ಗುತ್ತಿಗೆದಾರರ ಮೇಲೆ ನೆಪ ಹೇಳದೆ ಸ್ಥಳದಲ್ಲೇ ಇದ್ದು,…
Author: News Desk Benkiyabale
ತುಮಕೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದ ನಿರ್ಮಾಣ ಕಾಮಗಾರಿಯು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ನವೆಂಬರ್ ೧೮ ರಿಂದ ಜೆಸಿ ರಸ್ತೆಯಲ್ಲಿರುವ ಕೆಸ್ಸಾರ್ಟಿಸಿ ಘಟಕ ೧ ರ ಸ್ಥಳಕ್ಕೆ ತಾತ್ಕಾಲಿಕವಾಗಿ ಬಸ್ಸು ನಿಲ್ದಾಣವನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಕೆಸ್ಸಾರ್ಟಿಸಿ, ಸ್ಮಾರ್ಟ್ ಸಿಟಿ ಮಹಾನಗರ ಪಾಲಿಕೆ ಹಾಗೂ ಪೋಲಿಸ್ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುಮಕೂರು ನಗರದಲ್ಲಿರುವ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣವನ್ನು ಹೈಟೆಕ್ ಆಗಿ ನಿರ್ಮಾಣ ಮಾಡಲು ಸ್ಮಾಟ್‌ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯು ಪೂರ್ಣ ಗೊಳ್ಳುವರೆಗೂ ಈಗಿರುವ ಬಸ್ಸು ನಿಲ್ದಾಣದ ಹತ್ತಿರದಲ್ಲಿರುವ ಜೆಸಿ ರಸ್ತೆಯ ಕೆಸ್ಸಾರ್ಟಿಸಿ ಬಸ್ಸು ಡಿಪೋ ಸ್ಥಳಕ್ಕೆ ನಿಲ್ದಾಣವನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಿ ಅಲ್ಲಿಂದ ಬಸ್ಸುಗಳನ್ನು ಓಡಿಸಿದರೆ ಸಾರ್ವಜನಿಕರಿಗೆ ಅನೂಕೂಲವಾಗಲಿದೆ ಎಂಬುದರ ಬಗ್ಗೆ ಚರ್ಚಿಸಿ ಈ ನಿರ್ದಾರ ಕೈಗೋಳ್ಳಲಾಗಿದೆ ಎಂದರು. …
ತುಮಕೂರು : ನಗರದ ಎಂ.ಜಿ. ರಸ್ತೆಯ ಮುಂಭಾಗದ ಕೃಷ್ಣ ಚಿತ್ರಮಂದಿರದಿಂದ ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತೆ ಗಾಯಿತ್ರಿ ಚಿತ್ರಮಂದಿರ ಮುಂಭಾಗದವರೆಗೆ ನೋ-ಪಾರ್ಕಿಂಗ್ ಸ್ಥಳವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‌ಕುಮಾರ್ ಇಂದು ಆದೇಶ ಹೊರಡಿಸಿದ್ದಾರೆ. ಸುಗಮ ಸಂಚಾರದ ದೃಷ್ಟಿಯಿಂದ ಈ ಆದೇಶವನ್ನು ಹೊರಡಿಸಲಾಗಿದ್ದು, ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ತುಮಕೂರು: ಕರ್ನಾಟಕದಲ್ಲಿ ಆರಂಭವಾಗುವ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆ ಹುದ್ದೆಗಳನ್ನು ಇನ್ನು ಮುಂದೆ ಕನ್ನಡದ ಮಕ್ಕಳಿಗೆ ಕೊಡಬೇಕೆನ್ನುವ ನೀತಿಯನ್ನು ಸಚಿವ ಸಂಪುಟದಲ್ಲಿ ಪಾಸು ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿಂದು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಜವಳಿ ನೀತಿಯನ್ನೂ ಪಾಸು ಮಾಡಲಾಗಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊರತು ಪಡಿಸಿ ಬೇರೆ ಎಲ್ಲಾದರೂ ಮೂಲಭೂತ ಕಸಬು ಕೈಗೊಳ್ಳಲು ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುತ್ತದೆ ಎಂದರು. ನಗರಕ್ಕೆ ಹೋಗುವ ವಲಸೆ ತಪ್ಪಿಸದಿದ್ದರೆ ರಾಜ್ಯ ಶ್ರೀಮಂತವಾಗಿದೆ ಎಂದು ಭಾವಿಸಲು ಸಾಧ್ಯವಿಲ್ಲ. ರಾಜ್ಯದ ಅಭಿವೃದ್ಧಿ ಎಂದರೆ ರಾಜ್ಯದಲ್ಲಿನ ಪ್ರತಿಯೊಬ್ಬ ವ್ಯಕ್ತಿ ಅಭಿವೃದ್ಧಿಯಾಗಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಸಮಾನತೆ ಬಂದ…
ತುಮಕೂರು : ಕಚೇರಿ ಹಾಗೂ ಶಾಲಾ ಸಮಯದಂತಹ ಫೀಕ್ ಅವರ್‍ನಲ್ಲಿ ಬಸ್ಸುಗಳ ಸಂಚಾರ ಅಂತರದ ಸಮಯವನ್ನು ನಿಗದಿಪಡಿಸಿ ಹಾಗೂ ಜಿಲ್ಲೆಯಲ್ಲಿರುವ ಸಂಚಾರ ದಟ್ಟನೆಗೆ ತಕ್ಕಂತೆ ಬಸ್ಸುಗಳ ಟ್ರಿಪ್‍ಗಳನ್ನು ರೂಪಿಸುವಂತೆ ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ ಅವರು ಜಿಲ್ಲಾಧಿಕಾರಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಜಿಲ್ಲಾ ಸುರಕ್ಷತಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಧುಗಿರಿ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ಸುಗಳ ಸಂಚಾರ ಸಮಯದಲ್ಲಿ ಅಂತರವಿರಬೇಕು. ಈ ಬಸ್ಸುಗಳು ಮಾರ್ಗ ಮಧ್ಯದಲ್ಲಿ ಬರುವ ಹಳ್ಳಿಗಳ ಜನರನ್ನು ಹಾಗೂ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳುವುದಿಲ್ಲ ಎಂದು ದೂರುಗಳನ್ನು ಸಾರ್ವಜನಿಕರಿಂದ ಕೇಳಿದ್ದೇವೆ. ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಬೇಕು. ಇಲ್ಲದಿದ್ದರೆ ಅಂತಹ ಸಮಯದಲ್ಲಿ ಕೆಎಸ್ಸಾರ್ಟಿಸಿ ಬಸ್‍ಗಳನ್ನು ಓಡಿಸಲಾಗುವುದು ಎಂದು ಖಾಸಗಿ ಬಸ್ ಮಾಲೀಕರಿಗೆ ತಿಳಿಸಿದರು. …
ತುಮಕೂರು: ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 36 ಸಾಧಕರನ್ನು ಪ್ರಸಕ್ತ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ ತಿಳಿಸಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾದವರಿಗೆ ನವೆಂಬರ್ 1ರಂದು ಸಂಜೆ 4 ಗಂಟೆಗೆ ನಗರದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಂಗಭೂಮಿ, ಪತ್ರಿಕೋದ್ಯಮ, ಸಾಹಿತ್ಯ, ಕ್ರೀಡೆ, ಜಾನಪದ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಪ್ರಶಸ್ತಿಗೆ ಆಯ್ಕೆಯಾದವರ ಕ್ಷೇತ್ರವಾರು ಪಟ್ಟಿ ಇಂತಿದೆ. ರಂಗಭೂಮಿ ಕ್ಷೇತ್ರ: ಶಿರಾ ತಾಲ್ಲೂಕು ಕಟಾವೀರನಹಳ್ಳಿ ಗ್ರಾಮದ ಜಿ.ಕೆ.ರಂಗನಾಥ, ತುಮಕೂರು ತಾಲ್ಲೂಕು ಮರಳೂರಿನ ಬಿ.ರಾಮಂಜಿನೇಯ, ಭೈರವೇಶ್ವರ ನಗರದ ಡಿ.ಎನ್.ನವಿಲೇಶ್, ಗೂಳೂರಿನ ಜಿ.ಕೆ.ರಂಗಸ್ವಾಮಯ್ಯ, ತುರುವೇಕೆರೆಯ 11ನೇ ವಾರ್ಡ್‍ನ ಎಂ.ಡಿ.ಶಿವನಂಜಪ್ಪ, ತುಮಕೂರು ನಗರ ಶಿರಾ ಗೇಟ್ ಟೂಡಾ ಲೇಔಟ್‍ನ ಹೆಚ್.ಮಂಜುಳ.…
ಕೊರಟಗೆರೆ : ಕೊರಟಗೆರೆ ಪಟ್ಟಣದ ಸಮೀಪ ಜಟ್ಟಿ ಅಗ್ರಹಾರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಪಟ್ಟವರಿಗೆ ಸರಕಾರ 5 ಲಕ್ಷ ರೂ.ಪರಿಹಾರ ಮೊತ್ತ ಘೋಷಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಒತ್ತಾಯಿಸಿದರು. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಪಘಾತದಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಧುಗಿರಿಯಿಂದ ತುಮಕೂರಿಗೆ ಹೊರಟ ಬಸ್ ಮಾರ್ಗ ಮಧ್ಯೆ ಜಟ್ಟಿ ಅಗ್ರಹಾರದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿದ್ದು, 5 ಜನ ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಕ್ಕೆ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಲಿ ಎಂದರು. ಜೊತೆಗೆ, ಈ ಮಾರ್ಗದಲ್ಲಿ ಇದು ಎರಡನೇ ಅಪಘಾತವಾಗಿದೆ. ಬಸ್‍ಗಳ ವೇಗಕ್ಕೆ ಕಡಿವಾಣ ಹಾಕಬೇಕಿದೆ. ಈ ನಿಟ್ಟಿನಲ್ಲಿ ಆರ್‍ಟಿಒ ಹಾಗೂ ಪೆÇಲೀಸ್ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆರ್‍ಟಿಒ ಅವರು ಖಾಸಗಿ ಬಸ್ ಮಾಲೀಕರ…
ತುರುವೇಕೆರೆ : ವ್ಯಕ್ತಿಯೊಬ್ಬ ಮಲ್ಲಾಘಟ್ಟ ಕೆರೆಯಲ್ಲಿ ನೀರು ಮುಟ್ಟಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತನು ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಗ್ರಾಮದ ನಿವಾಸಿ ಲಿಂಗಪ್ಪ (52) ಎಂದು ಗುರುತಿಸಲಾಗಿದೆ. ಮೃತ ಲಿಂಗಪ್ಪನಿಗೆ ಎರಡು ಗಂಡು, ಒಂದು ಹೆಣ್ಣು ಮಗು ಸಹ ಇದೆ. ಸೋಮವಾರ ಮಲ್ಲಾಘಟ್ಟ ಕೆರೆ ದಡದಲ್ಲಿರುವ ಗಂಗಾಧರೇಶ್ವರ ಸ್ವಾಮಿಯ ಪೂಜೆಗೆಂದು ಬಂದಿದ್ದು ಕೆರೆಯ ದಂಡೆ ತನ್ನ ಬಟ್ಟೆಗಳನ್ನು ಕಳಚಿಟ್ಟು ನೀರು ಮುಟ್ಟಲು ಹೋಗಿ ಕಾಲು ಜಾರಿ ಅಸುನೀಗಿದ್ದಾನೆ. ಮೊನ್ನೆ 26ರ ಶನಿವಾರವಷ್ಟೆ ಮಲ್ಲಾಘಟ್ಟ ಕೆರೆ ಮೂಲಭೂತ ಸೌಕರ್ಯದ ಬಗ್ಗೆ ಹಾಗೂ ಕಾವಲುಗಾರ ನೇಮಕ ಪ್ರಜಾಪ್ರಗತಿಯಲ್ಲಿ ದಿನಪತ್ರಿಕೆಯಲ್ಲಿ ವರದಿ ಮಾಡಲಾಗಿತ್ತು.ಅಗ್ನಿಶಾಮಕ ದಳದ ಸಿಬ್ಬಂದಿ, ಪೆÇಲೀಸರು ಮತ್ತು ಸ್ಥಳೀಯ ಸಾರ್ವಜನಿಕರು ವಿಶಾಲವಾಗಿ ತುಂಬಿ ಹರಿಯುತ್ತಿರುವ ಕೆರೆಯಲ್ಲಿ ಮೃತನ ಶವ ಶೋಧನೆಗಾಗಿ ಹರಸಾಹಸ ನಡೆಸಿದ್ದು ಮಂಗಳವಾರ ಸಂಜೆ ಮೃತ ಲಿಂಗಪ್ಪನ ಶವ ಪತ್ತೆಯಾಗಿದೆಯೆಂದು ಪಟ್ಟಣದ ಪೊಲೀಸರು ತಿಳಿಸಿದ್ದಾರೆ.
ತುಮಕೂರು : ನ್ಯಾಯಾಲಯದಲ್ಲಿ ಬಾಕಿಯಿರುವ ದಲಿತ ಸಮುದಾಯದವರ ದೂರು ಪ್ರಕರಣಗಳ ನಿಖರ ಮಾಹಿತಿಯನ್ನು ಸಭೆಗೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಾರ್ವಜನಿಕ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಭೆಗೆ ಸಮರ್ಪಕ ಮಾಹಿತಿ ನೀಡಲು ತಡವರಿಸಿದ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಮುಂದಿನ ಸಭೆಯೊಳಗಾಗಿ ನಿಖರ ಮಾಹಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ನಿರ್ದೇಶನ ನೀಡಿದರು. ಸಭೆಯಲ್ಲಿ “ದಲಿತರು ಒಳಗೆ ಪ್ರವೇಶಿಸಲು ಮುಕ್ತ ಅವಕಾಶವಿದೆ” ಎಂಬ ನಾಮಫಲಕವನ್ನು ಜಿಲ್ಲಾದ್ಯಂತ ಎಲ್ಲ ಮುಜರಾಯಿ ದೇವಾಲಯಗಳ ಮುಂದೆ ಪ್ರದರ್ಶಿಸಬೇಕೆಂದು ದಲಿತ ಮುಖಂಡರೊಬ್ಬರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳ ವ್ಯಾಪ್ತಿಗೆ ಬರುವ ಮುಜರಾಯಿ ದೇವಾಲಯಗಳಲ್ಲಿ ಈ ನಾಮಫಲಕವನ್ನು ಕಟ್ಟು ನಿಟ್ಟಾಗಿ ಅಳವಡಿಸಲು ಸೂಚಿಸಿದರು. ಕೋರಾ ಹೋಬಳಿ ಬಿಟ್ಟನಕುರಿಕೆ ಗ್ರಾಮದಲ್ಲಿ…
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರದ ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರದ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದ ಬಸ್ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದು, ನಂತರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ನೀಡಿದ ಮಾಹಿತಿಯಂತೆ ಎದುರಿಗೆ ಬಂದ ಆಟೋರಿಕ್ಷಾವನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ತಲೆಕೆಳಗಾಗಿ ಬಿದ್ದದ್ದರಿಂದ ಈ ಅಪಘಾತ ಸಂಭವಿಸಿದೆ ಎಂದರು. ವಾಹನಗಳು ವೇಗಮಿತಿ ಇಲ್ಲದೇ, ಖಾಸಗಿ ಬಸ್‍ಗಳು ಓಡಾಡುವ ಸಮಯದ ಅಂತರ ಕಡಿಮೆ ಇರುವುದರಿಂದ ಈ ರೀತಿಯ ಅಪಘಾತಗಳು ಸಂಭವಿಸುತ್ತಿವೆ.…