ತುಮಕೂರು : ಜನರಲ್ ಕಾರಿಯಪ್ಪ ರಸ್ತೆ ಕಾಮಗಾರಿಗೆ ಕಾರ್ಯಾದೇಶ ನೀಡಿ ಈಗಾಗಲೇ 10 ತಿಂಗಳು ಕಳೆದಿದ್ದರೂ ಸಹ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಯಾವುದೇ ಪ್ರಗತಿ ಹೊಂದಿರುವುದಿಲ್ಲ. ಇನ್ನೊಂದು ವಾರದೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರೊಂದಿಗೆ ಮಾಡಿಕೊಂಡಿರುವ ಕರಾರು ಒಪ್ಪಂದವನ್ನು ಅಂತಿಮಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಅಜಯ್ ಅವರಿಗೆ ಸೂಚನೆ ನೀಡಿದರು. ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿರುವ ಬಗ್ಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಗುತ್ತಿಗೆದಾರರು, ಸ್ಮಾರ್ಟ್ಸಿಟಿ ಅಧಿಕಾರಿಗಳು ಹಾಗೂ ಪಿ.ಎಂ.ಸಿ ಅಭಿಯಂತರರೊಂದಿಗೆ ಚರ್ಚಿಸಿದ ಅವರು ಗುತ್ತಿಗೆದಾರರು ಹಾಗೂ ಇತರೆ ಇಲಾಖೆಯವರ ಸಮನ್ವಯತೆ ಇಲ್ಲದಿರುವುದರಿಂದ ಕಾಮಗಾರಿ ಪ್ರಗತಿಯಲ್ಲಿ ಹಿನ್ನಡೆಯಾಗುತ್ತಿರುವ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಳೆದ 1 ವಾರದಿಂದ ತೀವ್ರ ಮಳೆಯಾಗುತ್ತಿರುವುದರಿಂದ…
Author: News Desk Benkiyabale
ತುಮಕೂರು : ಜಿಲ್ಲೆಯಲ್ಲಿರುವ ನದಿ, ಕೆರೆ, ಕಟ್ಟೆ, ಕೊಳವೆಬಾವಿ, ತೆರೆದ ಬಾವಿ. ಹಳ್ಳ, ಕಾಲುವೆ ಸೇರಿದಂತೆ ಎಲ್ಲ ಜಲಮೂಲಗಳನ್ನು ಜಿಯೋ ಟ್ಯಾಗಿಂಗ್ಗೆ ಒಳಪಡಿಸಬೇಕೆಂದು ಸಂಸದ ಜಿ.ಎಸ್. ಬಸವರಾಜು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳ್ಳುವ ವಿವಿಧ ಕಾರ್ಯಕ್ರಮಗಳ ಉಸ್ತುವಾರಿ, ಮೇಲ್ವಿಚಾರಣೆ ಹಾಗೂ ಸಮರ್ಪಕ ಅನುಷ್ಠಾನವನ್ನು ಪರಿಶೀಲಿಸಲು ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ದಿಶಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ನಂಜುಂಡಪ್ಪ ವರದಿ ಪ್ರಕಾರ ಜಿಲ್ಲೆಯ 2574 ಗ್ರಾಮಗಳಲ್ಲಿ ಒಟ್ಟು 2022 ಕೆರೆ-ಕಟ್ಟೆಗಳಿದ್ದು, ಎಲ್ಲ ಮಾಹಿತಿಯನ್ನು ಜಿಯೋ ಟ್ಯಾಗಿಂಗ್ಗೊಳಿಸಬೇಕೆಂದರಲ್ಲದೆ ವಿಷಯ ಪರಿಣಿತರ ಅಧ್ಯಯನದನ್ವಯ 4435 ಜಲಸಂಗ್ರಹಗಾರಗಳಿರುವ ಹಿನ್ನೆಲೆಯಲ್ಲಿ ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ಯೋಜನೆಯಿಂದ ತುಂಬುವ ಕೆರೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಕೆರೆಗಳಿಗೆ “ಊರಿಗೊಂದು ಕೆರೆ-ಕೆರೆಗೆ ನದಿ ನೀರು” ಯೋಜನೆಯಡಿ ನದಿ ನೀರು ತುಂಬಿಸಲು ಅಗತ್ಯವಿರುವ ನೀರಿನ ಮೂಲಗಳ ಬಗ್ಗೆ ಚರ್ಚಿಸಿದರು. ಜಿಲ್ಲೆಯ ಸುಮಾರು 670 ಗ್ರಾಮಗಳಲ್ಲಿ ಯಾವುದೇ ಕೆರೆ-ಕಟ್ಟೆಗಳಿಲ್ಲವೆಂದು…
ತುಮಕೂರು: ತುಮಕೂರು ವಿವಿ ಡಿಜಿಟಲ್ ಗ್ರಂಥಾಲಯವನ್ನು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. “ಇಂದಿನ ಯುಗ ಡಿಜಿಟಲ್ ಯುಗ. ಈ ಡಿಜಿಟಲ್ ಯುಗದಲ್ಲಿ ಮಾಹಿತಿ ಸಂಪನ್ಮೂಲಗಳನ್ನು ಕ್ಷಿಪ್ರವಾಗಿ ತಲುಪಿಸಲು ಡಿಜಿಟಲ್ ರೂಪದಲ್ಲಿ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ತುಮಕೂರು ವಿವಿಯು ರೂಸಾ ಯೋಜನೆಯಡಿ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಿ, ಪ್ರತಿಯೊಬ್ಬರಿಗೂ ತಾವಿರುವಲ್ಲಿಯೇ ಗ್ರಂಥಾಲಯವನ್ನು ಕೊಂಡೊಯ್ಯುವಲ್ಲಿ ಮಹತ್ತರ ಹೆಜ್ಜೆಯನ್ನಿಟ್ಟಿದೆ.” ಎಂದು ತುಮಕೂರು ವಿವಿ ಕುಲಪತಿ ಪ್ರೊ. ಸಿದ್ದೇಗೌಡ ಹೇಳಿದರು. ತುಮಕೂರು ವಿವಿಯು ರೂಸಾ ಯೋಜನೆಯಡಿ ನವೀಕರಿಸಿರುವ ಗ್ರಂಥಾಲಯ ಮಾಹಿತಿ ವಿಜ್ಞಾನ ವಿಭಾಗದ ಗಣಕಯಂತ್ರ ಪ್ರಯೋಗಾಲಯ ಮತ್ತು ವಿವಿ ಡಿಜಿಟಲ್ ಗ್ರಂಥಾಲಯವನ್ನು ಮೈಸೂರು ರಾಜವಂಶಸ್ಥ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ. ಟಿ.ಡಿ.ಕೆಂಪರಾಜು ಉದ್ಘಾಟಿಸಿದರು. ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ (ರೂಸಾ) ಯೋಜನೆಯಲ್ಲಿ ದೇಶದ ವಿವಿಧ ಪ್ರತಿಷ್ಠಿತ…
ತುಮಕೂರು: ಇಂದಿನ ಯುವಕರು ಜಾಗತಿಕ ನಾಗರಿಕರಾಗಿ ಬೆಳೆಯುವುದು ಅನಿವಾರ್ಯವಾಗಿದೆ. ಬದಲಾಗಿರುವ ಕಾಲಕ್ಕೆ ತಕ್ಕಂತೆ ಹೊಸತನ ಮತ್ತು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ಮೈಸೂರು ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯವು ಶನಿವಾರ ಏರ್ಪಡಿಸಿದ್ದ ‘ಯುವ ಸಬಲೀಕರಣ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತವು ತನ್ನಲ್ಲಿರುವ ಯುವಶಕ್ತಿಯ ಸದುಪಯೋಗಪಡಿಸಿಕೊಳ್ಳಬೇಕಾಗಿದೆ ಎಂದರು. ಭಾರತದ ವಿಶ್ವದಲ್ಲೇ ಅತ್ಯಂತ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಅಭಿವೃದ್ಧಿ ಕೆಲಸಗಳಲ್ಲಿ ಪಾಲ್ಗೊಳ್ಳುವ ಅವಕಾಶ ಯುವಕರಷ್ಟು ಬೇರೆ ಯಾರಿಗೂ ಇಲ್ಲ. ಇದನ್ನು ಬಳಸಿಕೊಂಡರೆ ಭಾರತ ವಿಶ್ವಮಟ್ಟದಲ್ಲಿ ಇನ್ನಷ್ಟು ಪ್ರಭಾವಶಾಲಿಯಾಗಿ ಕಾಣಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದರು. ಭೌಗೋಳಿಕ ಸೂಚಿಗಳ ದಾಖಲೀಕರಣದಲ್ಲಿ ಮೈಸೂರು ಅರಮನೆಗೆ ವಿಶೇಷ ಆಸಕ್ತಿ ಇದೆ ಎಂದ ಅವರು ಭೌಗೋಳಿಕ ಸೂಚಿ ಗುರುತನ್ನು ಪಡೆದಿರುವ ಸುಮಾರು 250 ವಸ್ತುಗಳು ಭಾರತದಲ್ಲೂ, 40ರಷ್ಟು ವಸ್ತುಗಳು ಕರ್ನಾಟಕದಲ್ಲೂ ಇವೆ. ಅವುಗಳ…
ತುಮಕೂರು: ಹೇಮಾವತಿ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದ ನೀರು ಸಂಗ್ರಹವಿದ್ದು, ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೆರೆಗಳು ಹಾಗೂ ಇನ್ನಿತರೆ ಕೆರೆಗಳಿಗೆ ವೇಳಾಪಟ್ಟಿ ನಿಗಧಿ ಮಾಡಿಕೊಂಡು ನೀರು ಪೂರೈಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಎರಡನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಕುಡಿಯುವ ನೀರಿಗಾಗಿ ಕುಡಿಯುವ ನೀರಿನ ಕೆರೆಗಳಿಗೆ ಪೂರೈಸಲಾಗಿದೆ. ಎರಡನೆ ಹಂತದಲ್ಲಿ ವೇಳಾಪಟ್ಟಿಯಂತೆ ಶಿರಾ ಹಾಗೂ ಗುಬ್ಬಿ ತಾಲೂಕು ಕೆರೆಗಳಿಗೆ ನೀರು ಪೂರೈಸಲಾಗುತ್ತಿದೆ ಹಂತಹಂತವಾಗಿ ಇತರೆ ತಾಲೂಕಿನ ಕೆರೆಗಳಿಗೂ ಸಮಯ ನಿಗಧಿ ಮಾಡಿ ನೀರು ಪೂರೈಕೆ ಮಾಡಲಾಗುವುದು. ಈ ಬಾರಿ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದ ನೀರು ಸಂಗ್ರಹವಿದ್ದು ನೀರಿನ ಬಗ್ಗೆ ಆತಂಕ ಬೇಡ ಎಂದರು. ಪಿಂಚಣಿಗೆ ಸಂಬಂಧಿಸಿದಂತೆ ಅಂಚೆ ಇಲಾಖೆಯ…
ತುಮಕೂರು : ಜಿಲ್ಲೆಯ ಮಧುಗಿರಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ವ್ಯಾಪ್ತಿಗೆ ಸೇರಿದ ಸಿರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ಭಾರೀ ವಾಹನಗಳನ್ನು ತಡೆದು ಅಕ್ರಮವಾಗಿ ಲಂಚದ ಹಣ ಪಡೆಯುತ್ತಿದ್ದ ಆರೋಪವಿತ್ತು. ಈ ಸಂಬಂಧ ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಕಚೇರಿಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ದೂರನ್ನಾಧರಿಸಿ ಸ್ಥಳದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ಖಚಿತ ಪಡಿಸಿಕೊಂಡ ಎಸಿಬಿ ಅಧಿಕಾರಿಗಳು ದೂರು ದಾಖಲಿಸಿ ಪಂಚರ ಸಮಕ್ಷಮದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದ ಸ್ಥಳದಲ್ಲಿದ್ದ ಮಧುಗಿರಿ ಎಆರ್ಟಿಓ ಕಚೇರಿಯ ಸರ್ಕಾರಿ ವಾಹನದ ಮೇಲೆ ದಾಳಿ ನಡೆಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಇನ್ಸ್ಪೆಕ್ಟರ್ ಆರ್.ಸುರೇಂದ್ರ ಕುಮಾರ್ ಮತ್ತು ಸಿಬ್ಬಂದಿಯ ಮೇಲೆ ಎಸಿಬಿ ಡಿವೈಎಸ್ಪಿ ಬಿ.ಉಮಾಶಂಕರ್ ಮತ್ತು ಇನ್ಸ್ಪೆಕ್ಟರ್ ಸುನೀಲ್ ರವರ ತಂಡ ಹಠಾತ್ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ಸಂದರ್ಭದಲ್ಲಿ ಹಣ ಸಂದಾಯ ರಸೀದಿಯ ಮೊತ್ತಕಿಂತ 35,000 ಸಾವಿರ ನಗದು ಹಣ ಹೆಚ್ಚುವರಿಯಾಗಿ ಕಂಡುಬಂದ ಹಿನ್ನೆಲೆಯಲ್ಲಿ…
ತುಮಕೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಮಧ್ಯೆಯೂ ರೈತರ ಹೊಲಕ್ಕೆ ನೀರಾವರಿ ಸೌಲಭ್ಯ ಒದಗಿಸಬೇಕೆಂಬುದು ನನ್ನ ಮೊದಲ ಆದ್ಯತೆಯಾಗಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಧಾರ್ಮಿಕ ದತ್ತಿ ಇಲಾಖೆ, ಲೋಕೋಪಯೋಗಿ ಇಲಾಖೆ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಕ್ಷೇತ್ರ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಕುಣಿಗಲ್ ತಾಲ್ಲೂಕಿನ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರದಲ್ಲಿನ ಅಭಿವೃದ್ಧಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ದಿವಂಗತ ಮೈತ್ರಾದೇವಿ ಅವರ ಹೆಸರಿನಲ್ಲಿ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಪ್ರಾರಂಭ ಮಾಡಲು ಸೂಚಿಸಿದ್ದು, ನನ್ನ ಕುಟುಂಬ ಸದಸ್ಯರ ಆಪೇಕ್ಷೆಯಂತೆ ನನ್ನ ಸ್ವಂತ ಹಣದಿಂದ ಸಮುದಾಯ ಭವನ ನಿರ್ಮಾಣ ಮಾಡಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು. ನೀರಾವರಿ ಯೋಜನೆಗಳಿಂದ ಸೌಲಭ್ಯ ಒದಗಿಸಿ, ರೈತ…
ತುಮಕೂರು: ವಯೋವೃದ್ಧ ಮಹಿಳೆಯೊಬ್ಬರನ್ನು ಚಿರತೆ ದಾಳಿ ನಡೆಸಿ ಭೀಕರವಾಗಿ ಕೊಂದು ಹಾಕಿರುವ ಘಟನೆ ತುಮಕೂರು ಜಿಲ್ಲೆಯ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಮ್ಮ (62) ಚಿರತೆಗೆ ಬಲಿಯಾದ ದುರ್ದೈವಿ. ನಿನ್ನೆ ಸಂಜೆಯಿಂದ ಬನ್ನಿಕೊಪ್ಪ ಗ್ರಾಮದಿಂದ ಕಣ್ಮರೆಯಾಗಿದ್ದ ಲಕ್ಷ್ಮಮ್ಮ ಅವರಿಗಾಗಿ ಅವರ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಇಂದು ಬೆಳಿಗ್ಗೆ ಅರಣ್ಯ ಪ್ರದೇಶದಲ್ಲಿ ಲಕ್ಷ್ಮಮ್ಮ ಅವರ ಮೃತದೇಹ ಪತ್ತೆಯಾಗಿದ್ದು, ದೇಹದ ಬಹುತೇಕ ಭಾಗವನ್ನು ಚಿರತೆ ತಿಂದುಹಾಕಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಡುತ್ತಿದ್ದು, ಜಾನುವಾರುಗಳನ್ನು ತಿಂದು ಹಾಕಿತ್ತು. ಚಿರತೆಯನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಈಗಾಗಲೇ ಆಗ್ರಹಿಸಿದ್ದರೂ ಸಹ ಅರಣ್ಯ ಇಲಾಖೆ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾವಗಡ: ತಾಲ್ಲೂಕಿನಾದ್ಯಂತ ಅಕ್ರಮವಾಗಿ ಸಾಗಾಣಿಕೆ , ಮಾರಾಟ ಹಾಗೂ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ವೇಳೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಂಚಲು ತಂದಿದ್ದ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದ್ದ ಅಕ್ರಮ ಮದ್ಯವನ್ನು ಅಬಕಾರಿ ಉಪಯುಕ್ತರು ಆದೇಶದ ಮೇರೆಗೆ ಅಧಿಕಾರಿಗಳು ಇಂದು ನಾಶಪಡಿಸಿದರು. ಅಬಕಾರಿ ಉಪ ಅಧೀಕ್ಷಕರಾದ ಸುಭಾಸ್ ಚಂದ್ರ ಜೆ ರವರ ಸಮ್ಮುಖದಲ್ಲಿ ಮದ್ಯ 487.980 ಲೀಟರ್ ಬಿಯರ್ 10.550 ಲೀಟರ್ ಸೇಂದಿ 99.600 ಲೀಟರ್ ಸುಮಾರು 1.75 ಲಕ್ಷ ರೂಪಾಯಿಗಳ ಮದ್ಯ ಮತ್ತು ಬಿಯರ್ ಬಾಟಲಿಗಳನ್ನು ನಾಶಮಾಡಲಾಯಿತು. ಇದೇ ವೇಳೆ ಪಾವಗಡ ವಲಯ ವಿಭಾಗದ ಅಬಕಾರಿ ನಿರೀಕ್ಷಕ ನಾಗರಾಜ್ ಹೆಚ್ ಕೆ , ಸಹಾಯಕ ಅಬಕಾರಿ ನಿರೀಕ್ಷಕರು ಶಿವಬಸವಯ್ಯ. ಪೃಥ್ವಿ ರಾಜು. ಕೆ . ಎಸ್.ಬಿ.ಸಿ.ಎಲ್. ಡಿಪೋ ಚಳ್ಳಕೆರೆ ಮೇನೆಜರ್ ಬಸವರಾಜು. ಕಂದಾಯ ಇಲಾಖೆಯ ಅಧಿಕಾರಿಗಳು ಪುರಸಭೆ ಸಿಬ್ಬಂದಿ ವರ್ಗದವರು ಹಾಗೂ ಅಬಕಾರಿ ಇಲಾಖೆ…
ತುರುವೇಕೆರೆ: ರಾಜ್ಯ ಬಿಜೆಪಿ ಪಕ್ಷದ ಅಭಿವೃದ್ದಿಗಾಗಿ ಸಚಿವ ಶ್ರೀರಾಮುಲುರವರಿಗೆ ರಾಜ್ಯದ ಉಪಮುಖ್ಯ ಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಶಾಸಕ ಮಸಾಲಜಯರಾಮ್ ಸರ್ಕಾರಕ್ಕೆ ಮನವಿ ಮಾಡಿದರು. ಪಟ್ಟಣದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಾಲ್ಮೀಕಿ ಸಮುದಾಯದ ಮುಖಂಡರ ಮನವಿಯ ಮೇರೆಗೆ ಪಟ್ಟಣದಲ್ಲಿ ನಿರ್ಮಾಣವಾಗುವ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕರ ಅನುದಾನದಿಂದ 10 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆ ನೀಡಿದರು. ವಾಲ್ಮೀಕಿ ಸಮುದಾಯದ ಪರಂಪರೆ ಅತ್ಯಂತ ಪ್ರಾಚೀನವಾಗಿದ್ದು ರಾಜ್ಯದಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿ ಜಗತ್ತಿನಾದ್ಯಂತ ನಾಡಿನ ಕೀರ್ತಿಯನ್ನು ಪಸರಿಸುವಂತೆ ಮಾಡಿದವರು ವಾಲ್ಮೀಕಿ ವಂಶಸ್ಥರೆ ಎಂಬುದನ್ನು ಚರಿತ್ರೆ ಹೇಳುತ್ತದೆಂದು ಅಭಿಪ್ರಾಯಪಟ್ಟರು. ಎಪಿಎಂಸಿ ನಿರ್ದೇಶಕ ವಿ.ಟಿ.ವೆಂಕಟರಾಮ್ ಮಾತನಾಡಿ ವಾಲ್ಮೀಕಿ ಬರೆದ ರಾಮಾಯಣ ಇಡೀ ಮನುಕುಲಕ್ಕೆ ಮಾದರಿಯಾಗಿದೆ. ರಾಮಾಯಣದಲ್ಲಿ ಕುಟುಂಬದ…