ತುಮಕೂರು: ನಾವು ಇಂದು ದುರಿತ ಕಾಲದಲ್ಲಿ ಬದುಕುತ್ತಿದ್ದು ಇಡೀ ನಗರಕ್ಕೆ ತಮ್ಮ ಶ್ರಮದಿಂದ ಅಭಿವೃದ್ಧಿ ಶಕ್ತಿ ತುಂಬುತ್ತಿರುವ ಸ್ಲಂ ಜನರನ್ನು ವ್ಯವಸ್ಥೆ ತಾರತಮ್ಯದಿಂದ ನೋಡುತ್ತಿದ್ದು ಜಾತಿಯ ಪ್ರತಿ ರೂಪಗಳಾಗಿ ಕೊಳಚೆ ಪ್ರದೇಶಗಳನ್ನು ಈ ಪ್ರಭುತ್ವ ಉಳಿಸಿಕೊಂಡಿದೆ, ಹಾಗಾಗಿ ಸ್ಲಂ ಜನರ ಶಕ್ತಿ ಚೈತನ್ಯದಿಂದ ನಮ್ಮ ಹಕ್ಕು ಪಡೆಯಲು ಮುಂದಾಗಬೇಕು ದಮನಕ್ಕೆ ಒಳಗಾದವರೇ ಮೇಲೆದ್ದು ನಿಲ್ಲ ಬೇಕಿದೆ ಎಂದು ಸಾಹಿತಿ ದು.ಸರಸ್ವತಿ ಕರೆ ನೀಡಿದ್ದರು ಇಂದು ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾತರರಿಬಾಯಿಪುಲೆ ಮಹಿಳಾ ಸಂಘಟನೆಯಿAದ ನಡೆದ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಪ್ರತಿಭಟನೆಯನ್ನು ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ನಮ್ಮ ಹಕ್ಕಿಗಾಗಿ ಹೋರಾಟ ಮಾಡಬೇಕಿದೆ ಇದನ್ನೇ ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿ, ರಮಾ,ಫಾತೀಮಾ ಹೇಳಿದ ತತ್ವ ನಾವು ಈ ತತ್ವ ಮುಟ್ಟಬೇಕಾದರೇ ಶಿಕ್ಷಣವನ್ನು ಸ್ಲಂಗಳಲ್ಲಿರುವ ವಂಚಿತ ಸಮುದಾಯಗಳು ಪಡೆಯಲೇ ಬೇಕು. ನಾವು ಗುಲಾಮರಾಗಿದ್ದಕ್ಕೆ ನಮ್ಮ ಮೇಲೆ ಧೌರ್ಜನ್ಯವನ್ನು ಮಾಡುತ್ತಿದ್ದಾರೆ.…
Author: News Desk Benkiyabale
ತುಮಕೂರು: ಇತಿಹಾಸ ಪ್ರಸಿದ್ದ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ ಆಧಿಶಕ್ತಿ ದೇವಿಯ ಜಾತ್ರಾ ಮಹೋತ್ಸವ ರಾತ್ರಿಯಿಂದ ಆರಂಭವಾಗಿದ್ದು, ಶ್ರೀ ಅಮ್ಮನವರ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಇಂದು ಮುಂಜಾನೆ ಅತ್ಯಂತ ವಿಜೃಂಭಣೆಯಿAದ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಮುಂಜಾನೆ ನಡೆದ ಹೆತ್ತೇನಹಳ್ಳಿಯಮ್ಮನ ರಥೋತ್ಸವಕ್ಕೆ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ಸಾಕ್ಷಿಯಾಯಿತು. ತುಮಕೂರು ತಾಲ್ಲೂಕಿನ ಗೂಳೂರು ಹೋಬಳಿಯ ಹೆತ್ತೇನಹಳ್ಳಿ, ಕೈದಾಳ, ಗೂಳೂರು, ಕಂಭತ್ತನಹಳ್ಳಿ, ರಂಗಯ್ಯನಪಾಳ್ಯ, ಚಿಕ್ಕಸಾರಂಗಿ, ನರುಗನಹಳ್ಳಿ, ಮಾಯಣ್ಣಗೌಡನ ಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳಲ್ಲಿ ಹೆತ್ತೇನಹಳ್ಳಿಯಮ್ಮನ ಜಾತ್ರೆಗೆ ವಿಶೇಷವಾಗಿಯೇ ಭಕ್ತ ಸಮೂಹ ಸಜ್ಜಾಗುತ್ತಾರೆ. ಅದರಂತೆ ಸೋಮವಾರ ಇಡೀ ದಿನ ಭಕ್ತರು ಉಪವಾಸ ವ್ರತ ಮಾಡಿ ಮುಂಜಾನೆ ಅಗ್ನಿಕೊಂಡ ಹಾಯ್ದು ಅಮ್ಮನವರಿಗೆ ಹರಕೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಇನ್ನು ಈ ಭಾಗದ ಹೆಣ್ಣು ಮಕ್ಕಳು ಅಮ್ಮನವರಿಗೆ ಬಾಯಿ ಬೀಗದ ಹರಕೆ ತೀರಿಸುವ ಸಂಪ್ರದಾಯ ಹಿಂದಿನಿAದಲೂ ನಡೆದುಕೊಂಡು ಬಂದಿದೆ. ಹದಿ ಹರೆಯದ ಹೆಣ್ಣು ಮಕ್ಕಳು, ಮಹಿಳೆಯರು ಸಹ ಉಪವಾಸ ವ್ರತ ಮಾಡಿ ರಾತ್ರಿ…
ತುಮಕೂರು: ನಾಡಿನ ಜನರ ಅಭಿಮಾನ ಸಂಪಾದಿಸಿರುವ ಡಾ.ರಾಜಕುಮಾರ್ ಅವರ ಕುಟುಂಬ ಸಾಕಷ್ಟು ಸಾಮಾಜಿಕ ಸೇವೆಯಲ್ಲಿ ತೊಡಗಿರುವುದು ಶ್ರೇಷ್ಠ ಕಾರ್ಯ. ಪುನೀತ್ ರಾಜಕುಮಾರ್ ಅವರ ಹೆಸರಲ್ಲಿ ಸಮಾಜ ಸೇವೆ ಮುಂದುವರೆದಿರುವುದು ಶ್ಲಾಘನೀಯ ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ನಗರದ ಸಿದ್ಧಗಂಗಾ ಮಠದಲ್ಲಿ ಡಾ. ಪುನೀತ್ ರಾಜಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಶ್ರೀಮಠದ ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರಿಗೆ ಉಚಿತ ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಶ್ರೀಮಠದಲ್ಲಿರುವ ಎಲ್ಲ ಮಕ್ಕಳಿಗೂ ಕಣ್ಣಿನ ತಪಾಸಣೆ ಹಾಗೂ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಕನ್ನಡಕ ಕೊಡಿಸುವ ಕೆಲಸವನ್ನು ಪ್ರತಿ ವರ್ಷ ಪುನೀತ್ ರಾಜ್‌ಕುಮಾರ್ ಟ್ರಸ್ಟ್ ವತಿಯಿಂದ ಮಾಡಲಾಗುತ್ತಿದೆ ಎಂದರು. ಶ್ರೀಮಠದಲ್ಲಿ ಈಗಾಗಲೇ ಡಾ.ರಾಜ್ ಕುಮಾರ್ ಚಾರಿಟಬಲ್ ಟ್ರಸ್ಟ್ ಮೂಲಕ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಇದರೊಂದಿಗೆ ಈಗ ಡಾ. ಪುನೀತ್‌ರಾಜ್ ಕುಮಾರ್ ಚಾರಿಟಬಲ್ ಟ್ರಸ್ಟ್ ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ ಎಂದ ಅವರು, ಶಂಕರ್ ಕಣ್ಣಿನ ಆಸ್ಪತ್ರೆ, ಟೈಟಾನ್…
ತುಮಕೂರು: ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮಟ್ಟದಲ್ಲಿ ಅನೇಕ ಚರ್ಚೆ, ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 25,000 ಸೈಬರ್ ಪ್ರಕರಣಗಳು ದಾಖಲಾಗುತ್ತಿವೆ. ಇದರಲ್ಲಿ ಶೇ.20 ರಷ್ಟು ಪ್ರಕರಣ ಪತ್ತೆ ಹಚ್ಚಲು ಸಾಧ್ಯವಾಗುತ್ತಿದೆ ಎಂದು ಗೃಹ ಸಚಿವರು ಹಾಗೂ ಸಾಹೇ ವಿವಿ ಕುಲಾಧಿಪತಿಗಳು ಆದ ಸವ್ಯಸಾಚಿ ಡಾ. ಜಿ ಪರಮೇಶ್ವರ್ ಅವರು ಹೇಳಿದರು. ನಗರದ ಕುಣಿಗಲ್‌ರಸ್ತೆಯ ಎಸ್‌ಎಸ್‌ಐಟಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ಆರಂಭಿಸಲಾದ ಪರಂ ಶುದ್ಧ ಕುಡಿಯುವ ನೀರಿನ ಘಟಕವನ್ನು ಭಾನುವಾರ)ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಹಿಂದೆ ಗೃಹ ಸಚಿವನಾಗಿದ್ದ ಕಾಲಘಟ್ಟದಲ್ಲಿ ಇದರ ಸ್ಥಾಪನೆಗೆ ಸರ್ಕಾರ ಮಟ್ಟದಲ್ಲಿಚಿಂತನೆ ನಡೆಸಲಾಗಿತ್ತು. ಈಗ ಪೊಲೀಸ್ ಇಲಾಖೆ ಸೇರಿದಂತೆ ಸಿದ್ಧಾರ್ಥ ಇಂಜಿನಿಯರಿAಗ್ ಕಾಲೇಜಿನ ಸಹಯೋಗದಲ್ಲಿ ಸೈಬರ್ ಸೆಕ್ಯೂರಿಟಿ ವಿಭಾಗದ ಜೊತೆಗೆ ಸೇರಿ ಸೆಂಟರ್ ಆಫ್‌ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯೂರಿಟಿ ಸೆಂಟರ್ ಸದ್ಯವೇ ಆರಂಭಿಸಲಾಗುವುದು ಎಂದರು. ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ: ಸ್ಥಳೀಯವಾಗಿ ಶುದ್ಧವಾದ ನೀರನ್ನು ಒದಗಿಸುವ ಸಲುವಾಗಿ…
ತುಮಕೂರು: ಭÀ್ರಷ್ಟಾಚಾರ ರಹಿತ, ನೈತಿಕ ರಾಜಕಾರಣವನ್ನು ನಂಬಿಕೊAಡಿರುವ ಜೆಡಿ(ಯು), ಮುಂಬರುವ 2026ರಲ್ಲಿ ನಡೆಲಿರುವ ಆಗ್ನೇಯ ಪದÀವಿಧರ ಶಿಕ್ಷಕರ ಕ್ಷೇತ್ರದ ಸಂಯುಕ್ತ ಜನತಾದಳದ ಅಭ್ಯರ್ಥಿಯಾಗಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಕೆ.ನಾಗರಾಜ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಮೊದಲು ನಾವು ಅಭ್ಯರ್ಥಿಯನ್ನು ಘೋಷಣೆ ಮಾಡಿರುವ ಉದ್ದೇಶ, ಪ್ರತಿ ಮತದಾರರನ್ನು ಅಭ್ಯರ್ಥಿ ಭೇಟಿಯಾಗಿ, ಮತಯಾಚಿಸಲಿ, ಹಣ, ಹೆಂಡ, ಇನ್ನಿತರ ಅಮಿಷಗಳ ಹೊರತಾಗಿಯೂ ಜನರು ವ್ಯಕ್ತಿ ನೋಡಿ ಮತ ಹಾಕುವಂತಹ ವಾತಾವರಣ ನಿರ್ಮಾಣವಾಗಬೇಕು ಎಂಬುದೇ ಅಗಿದೆ ಎಂದರು. ನಮ್ಮ ತಂದೆಯವರಾದ ಜೆ.ಹೆಚ್.ಪಟೇಲ್,ರಾಮಕೃಷ್ಣ ಹೆಗಡೆ ಸೇರಿದಂತೆ ಅನೇಕರು ರಾಜಕಾರಣವೆಂದರೆ ಕೇವಲ ಅಧಿಕಾರ ಎಂದು ಭಾವಿಸಿರಲಿಲ್ಲ.ಕೃಷಿ,ಪರಿಸರ,ಶಿಕ್ಷಣ,ಆಡಳಿತ,ಆರೋಗ್ಯ ಇವುಗಳೆಲ್ಲಾ ಉತ್ತಮವಾಗಿರಬೇಕು ಎಂದು ಬಯಸಿದ್ದರು. ಹಾಗಾಗಿಯೇ ಅವರ ಆಡಳಿತ ಕಾಲದಲ್ಲಿ ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಅದ್ಯತೆ ನೀಡಲಾಗಿತ್ತು.ಆದರೆ ಇಂದಿನ ರಾಜಕಾರಣ ಬದಲಾಗಿದೆ.ರಾಜಕಾರಣವೆಂದರೆ ಹಣ ಹೂಡಿ, ಹಣ ಮಾಡುವುದು ಎಂಬAತಾಗಿದೆ.ಈ ಸ್ಥಿತಿ ಬದಲಾಗಬೇಕು ಎಂಬುದು ಜೆಡಿಯು ಕರ್ನಾಟಕದ ಆಶಯವಾಗಿದೆ ಎಂದು…
ಹುಳಿಯಾರು: ಸಂಕ್ರಾAತಿ ಹಬ್ಬಕ್ಕಾದರೂ ರಾಗಿ ಖರೀಧಿಸಿ ಸರ್ಕಾರ ಹಣ ಕೊಡುತ್ತದೆಂದು ರೈತರು ಭಾವಿಸಿದ್ದರು. ಸಂಕ್ರಾAತಿ ಕಳೆದು ಶಿವರಾತ್ರಿ ಬಂದಿದ್ದರೂ ಖರೀದಿಯ ಬಗ್ಗೆ ಸರ್ಕಾರದಿಂದ ಸ್ಪಷ್ಟ ಮಾಹಿತಿಯಿಲ್ಲ. ರಾಗಿ ಖರೀದಿಗೆ ಇನ್ನೆಷ್ಟು ದಿನ ರೈತರು ಕಾಯಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಪ್ರಶ್ನಿಸಿದರು. ಹೊಸಹಳ್ಳಿ ಚಂದ್ರಣ್ಣ ಬಣದ ರಾಜ್ಯ ರೈತ ಸಂಘದಿAದ ಸೋಮವಾರ ಹುಳಿಯಾರಿನ ಎಪಿಎಂಸಿ ಮೂಲಕ ರಾಜ್ಯ ಸರ್ಕಾರಕ್ಕೆ ರಾಗಿ ಖರೀದಿ ಆರಂಭಿಸಲು ಒತ್ತಾಯಿಸಿ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿತ್ತನೆ ಬೀಜ, ಗೊಬ್ಬರ, ಉಳುಮೆ, ಕಟಾವು ಹೀಗೆ ರಾಗಿ ಬೆಳೆಯಲು ರೈತ ಸಾವಿರಾರು ರೂ. ವೆಚ್ಚ ಮಾಡಿದ್ದಾನೆ. ಕಳೆದ ವರ್ಷ ಮಳೆ ಇಲ್ಲದೆ ಬೆಳೆ ಕೈ ಕೊಟ್ಟಿದ್ದರಿಂದ ಈ ವರ್ಷ ಸಾಲಸೂಲ ಮಾಡಿ ರಾಗಿ ಬೆಳೆದಿದ್ದಾರೆ. ಜ.1 ರಂದು ನಫೆಡ್‌ಗೆ ರಾಗಿ ಬಿಟ್ಟರೆ ಸಂಕ್ರಾAತಿ ಹಬ್ಬಕ್ಕಾದರೂ ಬ್ಯಾಂಕ್ ಖಾತೆಗೆ ಸರ್ಕಾರ ಹಣ ಹಾಕುತ್ತದೆ ಎಂದು ನಿರೀಕ್ಷಿಸಿದ್ದ. ಆದರೆ ಶಿವರಾತ್ರಿ ಹಬ್ಬ ಬಂದರೂ…
ತುಮಕೂರು: ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿಯ ಚಾಲಕ, ನಿರ್ವಾಹರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಜಿಲ್ಲಾ ಘಟಕದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು. ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮುಖಂಡರು, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು. ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ಪಿ.ಸುಧೀರ್ ಮಾತನಾಡಿ, ರಾಜ್ಯದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ ಎಚ್ಚೆತ್ತುಕೊಂಡು ಅಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಹಲ್ಲೆಕೋರರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.ಈ ತಿಂಗಳ 21ರಂದು ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರು ಟಿಕೆಟ್ ವಿತರಿಸುವ ವೇಳೆ ಮರಾಠಿ ಭಾಷೆ ಮಾತನಾಡಲು ಒತ್ತಾಯಿಸಿ ಬಸ್ಸಿನ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು, ಸರ್ಕಾರ ಕನ್ನಡಿಗರಿಗೆ ರಕ್ಷಣೆ ನೀಡಬೇಕು ಎಂದರು. ಸAಘಟನೆಯ ಜಿಲ್ಲಾಧ್ಯಕ್ಷ ವಿ.ಅನಿಲ್ ನಾಯಕ್ ಮಾತನಾಡಿ, ನಮ್ಮ ಸಾರಿಗೆ…
ತುಮಕೂರು : ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷಿö್ಮ, ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ತೋರಬಾರದು ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ತಿಳಿಸಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2024-25ನೇ ಸಾಲಿನ 3ನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಈ ಯೋಜನೆಗಳ ಕುರಿತು ಮಾಹಿತಿ ನೀಡುತ್ತಾ, ಗೃಹಲಕ್ಷಿö್ಮ ಯೋಜನೆಯಡಿ ಜಿಲ್ಲೆಯಲ್ಲಿ ಆಗಸ್ಟ್ 2023ರಿಂದ ಅಕ್ಟೋಬರ್ 2024ರವರೆಗೆ 90,38,371 ಫಲಾನುಭವಿಗಳಿಗೆ ಒಟ್ಟು 1807.67 ಕೋಟಿ ರೂ. ಪಾವತಿಸಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 2023 ಜೂನ್‌ನಿಂದ ಜನವರಿ 2025ರವರೆಗೆ 1164.14 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಇದರ ಒಟ್ಟು ಆದಾಯ 34184.97 ಲಕ್ಷ ರೂ.ಗಳಾಗಿದೆ. ಯುವನಿಧಿ ಯೋಜನೆಯಲ್ಲಿ ಜನವರಿ 2025 ಅಂತ್ಯಕ್ಕೆ 7743 ಯುವಜನರು ನೋಂದಣಿಯಾಗಿದ್ದು, 5425 ಜನರಿಗೆ ಡಿಬಿಟಿ ಮೂಲಕ 7.60,83,000 ರೂ. ಪಾವತಿಸಲಾಗಿದೆ.…
ತುಮಕೂರು: ಶೈಕ್ಷಣಿಕ ನಗರ ಎಂದು ಪ್ರಸಿದ್ಧಿಯಾಗಿರುವ ತುಮಕೂರು ಜಿಲ್ಲೆಯಲ್ಲಿ ಏಳು ಇಂಜಿನಿಯರಿAಗ್ ಕಾಲೇಜು, ಮೂರು ಮೆಡಿಕಲ್ ಕಾಲೇಜುಗಳು, ಸುಮಾರು ಐಟಿಐ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳು, ಹಾಗೂ ತುಮಕೂರು ಯೂನಿವರ್ಸಿಟಿ ಇದ್ದು, ಸುಮಾರು 50 ರಿಂದ 60 ಸಾವಿರ ಜನರು ತುಮಕೂರಿನಿಂದ ಬೆಂಗಳೂರಿಗೆ ವಿವಿಧ ಐಟಿ ಕಂಪೆನಿಗಳಿಗೆ ಕೆಲಸಕ್ಕೆ ಹೋಗುತ್ತಿರುವುದರಿಂದ ತುಮಕೂರಿನಲ್ಲೇ ಐಟಿ ಹಬ್ ನಿರ್ಮಾಣ ಮಾಡುವ ಸಂಬAಧ ಈ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಟಿ.ಜೆ. ಗಿರೀಶ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಏಷ್ಯಾ ಖಂಡದಲ್ಲಿಯೆ ಅತಿ ದೊಡ್ಡ ಕೈಗಾರಿಕಾ ಪ್ರದೇಶವನ್ನು ಹೊಂದಿರುವ ತುಮಕೂರು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಬೇಕು ಎಂದು ಕೋರಿದ್ದಾರೆ. ಮಹಾನಗರ ಪಾಲಿಕೆಯ ಸರಹದ್ದಿನಲ್ಲಿ ಬರುವ ಕೈಗಾರಿಕಾ ಪ್ರದೇಶಗಳ ಆಸ್ತಿ ತೆರಿಗೆಯನ್ನು ಪ್ರತ್ಯೇಕ ಕೈಗಾರಿಕಾ ವರ್ಗ ಮಾಡಿ ಕಮರ್ಷಿಯಲ್ ಹಾಗೂ ರೆಸಿಡೆನ್ಷಿಯಲ್ ಸ್ಲಾಬ್ ಗಿಂತ ಕಡಿಮೆ ಮಾಡುವ ಬೇಡಿಕೆಯು ಸರ್ಕಾರದ ಮುಂದಿದ್ದು, ಕೆಐಎಡಿಬಿಯಿಂದ ಮಹಾನಗರ ಪಾಲಿಕೆಗೆ ವರ್ಗಾವಣೆ…
ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ಸಾವಿತ್ರಿ ಪಾಯಿಪುಲೆ ಮಹಿಳಾ ಘಟಕದ ನಗರದ ಸ್ಲಂ ಭವನದಲ್ಲಿ ಪತ್ರಿಕಾ ಹೇಳಿಕೆ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಳನದ ರಾಜ್ಯ ಸಂಚಾಲಕರ ಎ.ನರಸಿಂಹಮೂರ್ತಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿAದ ಇದೇ ಫೆಬ್ರವರಿ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗೀ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ 2025-26ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು. 2023ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನೀಡಿರುವ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ಹಾಗೂ ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆ ಘೋಷಣೆ ಸೇರಿದಂತೆ ನಿವೇಶನ…