Author: News Desk Benkiyabale

ತುರುವೇಕೆರೆ:       ಶೀಘ್ರದಲ್ಲೇ ಎನ್.ಬಿ.ಸಿ. ಹೇಮಾವತಿ ನಾಲೆಯ ಡಿ-26 ಉಪನಾಲೆಯ ಮೂಲಕ ತಾಲೂಕಿನ ವಿವಿಧ ಕೆರೆಗಳಿಗೆ ನೀರು ತುಂಬಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಶಾಸಕ ಮಸಾಲಜಯರಾಮ್ ತಿಳಿಸಿದರು.      ತಾಲೂಕಿನ ಎರದಹಳ್ಳಿ ಸಮೀಪವಿರುವ ಹೇಮಾವತಿ ನಾಲೆಯ ಡಿ-26 ಉಪನಾಲೆಯ ಸ್ಥಳ ಪರಿಶೀಲನೆಯನ್ನು ಹೇಮಾವತಿ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿ ಮಾತನಾಡಿದರು.       ಸುಮಾರು 15ವರ್ಷಗಳ ನಂತರ ಹೇಮಾವತಿ ನಾಲೆಯ ಉಪನಾಲೆ ಡಿ-26 ನಾಲೆಯ ಮೂಲಕ ತಾಲೂಕಿನ ಮಾಯಸಂದ್ರ ಹೋಬಳಿಯ ಸೀಗೆಹಳ್ಳಿ, ಹರಳಕೆರೆ, ಇಟ್ಟಿಗೆಹಳ್ಳಿ, ನರೀಗೆಹಳ್ಳಿ, ಮಲ್ಲೂರು, ಯರದಹಳ್ಳಿ ಕೆರೆಗಳಿಗೆ ನೀರು ಹರಿಸುವ ಸಂಬಂಧ ಸ್ಥಳ ಪರಿಶೀಲನೆ ಮಾಡಿದ್ದು, ನೀರು ಹರಿಸುವುದರಿಂದ ಸಾವಿರಾರು ಎಕರೆ ಕೃಷಿ ಭೂಮಿಗೆ ಅನುಕೂಲವಾಗುವುದರ ಜೊತೆಗೆ ಅಂತರ್ಜಲ ಅಭಿವೃದ್ಧಿ ಹೊಂದಲಿದೆ. ಇದು ಸ್ಥಳೀಯ ರೈತರುಗಳ ಹಲವು ವರ್ಷಗಳ ಕನಸಾಗಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಈಗಾಗಲೆ ಹೇಮಾವತಿ ಇಲಾಖೆಯ ಅಧಿಕಾರಿಗಳಿಗೆ ಉಪನಾಲೆಯಲ್ಲಿ ಬೆಳೆದಿರುವ ಜಂಗಲ್ ತೆರವುಗೊಳಿಸಲು ಸೂಚಿಸಲಾಗಿದೆ…

Read More

ತುಮಕೂರು:       ಬೆಳಗಾವಿ ನಗರದ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಲಾಗಿದ್ದ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಪ್ರತಿಮೆಯನ್ನು ತೆರವುಗೊಳಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಹಾಗೂ ಸದರಿ ಸ್ಥಳದಲ್ಲಿಯೇ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯಿಸಿ ಇಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹಲವಾರು ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.       ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಶಂಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಎಸ್.ಶಂಕರ್,ದೇಶದ ಅದರಲ್ಲಿಯೂ ಕನ್ನಡನಾಡಿನ ಕಿತ್ತೂರನ್ನು ಬ್ರಿಟಿಷ್‍ರ ಕಪಿಮುಷ್ಠಿಯಿಂದ ಬಿಡುಗಡೆಗೊಳಿಸಬೇಕು ಎಂಬ ಮಹದಾಸೆಯಿಂದ ತನ್ನ ಜೀವದ ಕೊನೆಯ ಉಸಿರು ಇರುವವರೆಗೂ ಹೋರಾಡಿದ ಸಂಗೋಳ್ಳಿ ರಾಯಣ್ಣನ ಪ್ರತಿಮೆಯನ್ನು ಪೊಲೀಸರು ದುರುದ್ದೇಶದಿಂದ ತೆರವುಗೊಳಿಸಿರುವುದು ಖಂಡನೀಯ.       ಸಂಗೋಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಾಪನೆಯಿಂದ ಇದುವರೆಗೂ ಯಾರಿಗೂ ಯಾವ ರೀತಿಯ ತೊಂದರೆಯೂ ಆಗಿರಲಿಲ್ಲ.ಶಾಂತಿ, ಸೌಹಾರ್ಧತೆಗೆ ಧಕ್ಕೆಯಾಗಿರಲಿಲ್ಲ.ಆದರೆ ಏಕಾಎಕಿ ಪ್ರತಿಮೆ ತೆರವುಗೊಳಿಸಿರುವುದು ಇಡೀ ಕನ್ನಡನಾಡಿನ ಸ್ವಾತಂತ್ರ…

Read More

ಕೊರಟಗೆರೆ:      ಹುಣಸೆ ಮರದ ಪ್ರತಿ ಸಸಿಗೆ 300ರೂಗೆ ಖರೀದಿಸಿ ಬರಗಾಲದಲ್ಲಿಯೂ 3 ವರ್ಷ ಕಷ್ಟಪಟ್ಟು ಬೆಳೆಸಿದ ಹುಣಸೆ ಗಿಡಗಳನ್ನ ಶುಕ್ರವಾರ ರಾತ್ತೋರಾತ್ರಿ ಕತ್ತರಿಸಿರುವ ಪರಿಣಾಮ ರೈತನಿಗೆ ದಾರಿ ಕಾಣದೇ ಪರಿಹಾರ ಮತ್ತು ಭದ್ರತೆಗಾಗಿ ಅರಣ್ಯ ಇಲಾಖೆಯಿಂದ ಪೊಲೀಸ್ ಠಾಣೆಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.        ತಾಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾಪಂ ವ್ಯಾಪ್ತಿಯ ಸೊಣ್ಣೇನಹಳ್ಳಿ ಗ್ರಾಮದ ಸರ್ವೇ ನಂ.8/2ರ ಜಮೀನಿನಲ್ಲಿ ರೈತ ವೀರಭದ್ರಯ್ಯ ಕಳೆದ 3ವರ್ಷದ ಹಿಂದೆ ಆಂಧ್ರ್ರಪ್ರದೇಶದಿಂದ ಪ್ರತಿ ಹುಣಸೆ ಸಸಿಗೆ 300ರೂ ಪಾವತಿಸಿ ತಂದು 3 ವರ್ಷ ನೀರಿನ ಕೊರತೆಯ ನಡುವೆ ಬೆಳೆಸಿರುವ ಗಿಡಗಳನ್ನು ದುಷ್ಕರ್ಮಿಗಳ ತಂಡ ದ್ವೇಷದಿಂದ ಕತ್ತರಿಸಿದ್ದಾರೆ.       ಸೊಣ್ಣೇನಹಳ್ಳಿ ಗ್ರಾಮದ ರೈತ ವೀರಭದ್ರಯ್ಯನ ಕುಟುಂಬ ತನ್ನ ಜಮೀನಿನಲ್ಲಿ ಬೆಳೆದಿರುವ ಹುಣಸೆ ಗಿಡಗಳನ್ನು ಈ ಮೊದಲು ಜು.7ರಂದು 15 ಹುಣಸೆ ಗಿಡಗಳನ್ನು ಕಡಿದು ಹಾಕಿದ್ದರು. ಆಗ ರೈತ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಈಗ ಜು.21ರ ಶುಕ್ರವಾರ…

Read More

      ಜಿಲ್ಲೆಯಲ್ಲಿ 165 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4408 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 40, ಪಾವಗಡ-15, ಕುಣಿಗಲ್-19, ಮಧುಗಿರಿ-10, ತುರುವೇಕೆರೆ-19, ಶಿರಾ-11, ತಿಪಟೂರು-26, ಗುಬ್ಬಿ-10, ಚಿಕ್ಕನಾಯಕನಹಳ್ಳಿ-11 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 165 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 165 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 3254 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1015 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 139 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು :       ಜಿಲ್ಲೆಯಲ್ಲಿ 117 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3866 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 63, ಪಾವಗಡ-14, ಕುಣಿಗಲ್-10, ಮಧುಗಿರಿ-02, ತುರುವೇಕೆರೆ-06, ಶಿರಾ-4, ತಿಪಟೂರು-09, ಗುಬ್ಬಿ-05, ಚಿಕ್ಕನಾಯಕನಹಳ್ಳಿ-04 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 117 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 102 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2767 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 980 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 11+ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು:       ಗಣೇಶ ಚೌತಿಯಂದು ಗೌರಿ-ಗಣೇಶರನ್ನು ಕೂರಿಸಿ ಸಾಂಪ್ರದಾಯಿಕವಾಗಿ ಹಬ್ಬ ಆಚರಣೆ ಮಾಡುವ ವಿಚಾರದಲ್ಲಿ ಸರ್ಕಾರ ವಿಧಿಸಿದ್ದ ನಿಬಂಧನೆಗಳು, ವಿಗ್ರಹಗಳ ತಯಾರಕ ಮತ್ತು ಮಾರಾಟಗಾರರಲ್ಲಿ ಉಂಟಾಗಿದ್ದು, ಗೊಂದಲಕ್ಕೆ ಮುಕ್ತಿ ಸಿಕ್ಕಿದಂತಾಗಿದೆ.       ಮಾರ್ಚ್ ತಿಂಗಳಿನಲ್ಲಿ ವಕ್ಕರಿಸಿದ್ದ ಕೊರೋನಾ ಕೆಲ ದಿನಗಳಲ್ಲಿಯೇ ಉಲ್ಬಣವಾಗಿದ್ದರಿಂದ ಸಾರ್ವಜನಿಕ ಹಿತದೃಷ್ಠಿಯಿಂದ ಸೋಂಕು ತಡೆಗಟ್ಟುವ ಸಲುವಾಗಿ ವಿಧಿಯಿಲ್ಲದೆ ಲಾಕ್‍ಡೌನ್ ವಿಧಿಸಬೇಕಾಗಿದ್ದು ಅನಿವಾರ್ಯವಾಗಿತ್ತು. ಇದರಿಂದಾಗಿ ಸಾರ್ವಜನಿಕವಾಗಿ ಕೆಲಸವಿಲ್ಲದೆ ಹೊರ ಹೋಗದೇ ಮನೆಯಲ್ಲೇ ಕುಳಿತುಕೊಂಡಿರುವ ಪರಿಸ್ಥಿತಿಯುಂಟಾಗಿ ಜೀವನ ದುಸ್ತರವಾಗಿ ಮುಂದಿನ ದಾರಿ ಕಾಣದೆ ಜನ ತತ್ತರಿಸಿ ಹೋಗಿದ್ದಾರೆ. ದಿನ ಕಳೆದಂತೆ ಲಾಕ್‍ಡೌನ್ ಹಂತ ಹಂತವಾಗಿ ತೆರವುಗೊಳಿಸಿದ್ದರೂ ವ್ಯಾಪಾರ ವಹಿವಾಟುಗಳು ನಿರೀಕ್ಷಿಸಿದ ಮಟ್ಟ ತಲುಪಲೇ ಇಲ್ಲ, ಅನೇಕ ಕೈಗಾರಿಕೆಗಳು, ಅಂಗಡಿ ಮುಂಗಟ್ಟುಗಳು ಮುಚ್ಚಿದ ಕಾರಣ ಹಳ್ಳಿಗಳಿಂದ ನಗರಕ್ಕೆ ವಲಸೆ ಹೋಗಿದ್ದ ಸಾವಿರಾರು ಕುಟುಂಬಗಳು ಮರಳಿ ಗೂಡಿಗೆ ಎಂಬಂತೆ ತಮ್ಮ ಊರುಗಳಿಗೆ ಬರಲೇಬೇಕಾಯಿತು. ಹಲವರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು ಮತ್ತೆ ಹಲವರು ವೃತ್ತಿ ಆಧಾರಿತ ಕುಲ ಕಸುಬುಗಳನ್ನು ಆಶ್ರಯಿಸಬೇಕಾಯಿತು.…

Read More

ತುಮಕೂರು:       ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ನಿರಂತರ ಹೋರಾಟ ನಡೆಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.       ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶಾಸಕ ಡಿ.ಸತ್ಯನಾರಾಯಣ್ ಶ್ರದ್ಧಾಂಜಲಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷವಾಗಿ, ಆರಂಭದಿಂದಲೂ ರೈತರು, ಕಾರ್ಮಿಕರ ವಿಚಾರದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದಿದೆ. ಮುಂದೆಯೂ ರೈತರ ಪರವಾಗಿ ನಿಲ್ಲಲ್ಲಿದೆ ಎಂದರು.       ರೈತ ವಿರೋಧಿ ಕಾಯ್ದೆಗಳಾಗಿರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಧೇಯಕ-2020, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿಧೇಯಕ, 2020 ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಕುರಿತಂತೆ ಇನ್ನೊಂದು ರಾಷ್ಟ್ರೀಯ ಪಕ್ಷದ ನಿಲುವು ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಇಂತಹ ಕರಾಳ ಕಾಯ್ದೆಗಳು ಜಾರಿಯಾಗಲು ಅವಕಾಶ…

Read More

ತುಮಕೂರು :      ಜಿಲ್ಲೆಯಲ್ಲಿ 171 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3749 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 50, ಪಾವಗಡ-24, ಕುಣಿಗಲ್-21, ಮಧುಗಿರಿ-21, ಕೊರಟಗೆರೆ-06, ತುರುವೇಕೆರೆ-09, ಶಿರಾ-10, ತಿಪಟೂರು-18, ಗುಬ್ಬಿ-06, ಚಿಕ್ಕನಾಯಕನಹಳ್ಳಿ-05 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 171 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 103 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2665 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 967 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 117 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ಮಧುಗಿರಿ:       ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ, ಸಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳುವ ಮೂಲಕ ಮಾಜಿ ಶಾಸಕ ಕೆ.ಎನ್. ರಾಜಣ್ಣ ಟಿ.ಬಿ.ಜೆಗೆ ಟಾಂಗ್ ನೀಡಿದ್ದಾರೆ.       ಪಟ್ಟಣದ ತಮ್ಮ ಸ್ವಗೃಹದಲ್ಲಿ ಹಮ್ಮಿಕೊಂಡಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಸಿರಾ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಇದರ ಬಗ್ಗೆ ಹೆಚ್ಚೇನು ಮಾತನಾಡುವುದಿಲ್ಲ. ಈ ತಿಂಗಳ ಕೊನೆಯಲ್ಲಿ ದಿವಂಗತ ಸತ್ಯನಾರಾಯಣ್‍ರವರ ಪುಣ್ಯತಿಥಿಯನ್ನು ಹಮ್ಮಿಕೊಳ್ಳಲಾಗಿದ್ದು, ಈಗ ಇದರ ಬಗ್ಗೆ ಮಾತನಾಡುವುದು ಸರಿಯಲ್ಲ. ನಂತರದ ದಿನಗಳಲ್ಲಿ ಕೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲಿದ್ದು, ರಾಜಕೀಯದಲ್ಲಿರುವ ಎಲ್ಲರಿಗೂ ಆಸೆ ಆಕಾಂಕ್ಷೆಗಳಿರುತ್ತವೆ. ನಮ್ಮ ಪಕ್ಷದಿಂದ ಏನೆಲ್ಲಾ ಅಬಿಪ್ರಾಯಗಳು ಬರುತ್ತವೆ, ಇತರೆ ಪಕ್ಷಗಳಲ್ಲಿ ಯಾವ ಹೇಳಿಕೆಗಳು ಬರುತ್ತವೆ ಎಂಬುದನ್ನೆಲ್ಲಾ ಕ್ರೋಡೀಕರಿಸಿ ಮುಂದಿನ ದಿನಗಳಲ್ಲಿ ಮಾಧ್ಯಮದ ಮುಂದೆ ನಿರ್ಧಾರ ಪ್ರಕಟಿಸುತ್ತೇನೆ ಎಂದರು. ಟೋಲ್ ರದ್ದು ಮಾಡುತ್ತೇನೆ:…

Read More

ತುಮಕೂರು:       ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿರ್ದೇಶನದನ್ವಯ ಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಕ್ಕೆ ನೀಡಿ ಸೋಂಕಿತರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.        ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಕೊರೊನಾ ಸೋಂಕಿತರ ಚಿಕಿತ್ಸೆಯನ್ನು ನಿರಾಕರಿಸಬಾರದು. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರಕ್ಕೆ ಬಿಟ್ಟು ಕೊಡಬೇಕಾಗಿರುವ ಶೇ.50ರಷ್ಟು ಬೆಡ್‍ಗಳನ್ನು ಕಡ್ಡಾಯವಾಗಿ ಮೀಸಲಿಟ್ಟು, ಸೋಂಕಿತರು ಬಂದಾಗ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಬೇಕು ಎಂದು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳಿಗೆ ಸೂಚಿಸಿದರು.       ಸರ್ಕಾರದ ವತಿಯಿಂದ ರೆಫರ್ ಆಗುವ ಸೋಂಕಿತರ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಸರ್ಕಾರ ನಿಗಧಿಪಡಿಸಿರುವ ದರದಲ್ಲಿ ಪಾವತಿಸಲಾಗುವುದು. ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜುಗಳು…

Read More