ತುಮಕೂರು: ತುಮಕೂರು ನಗರ ವಿಭಾಗದ ಪೊಲೀಸರು ಹಾಗೂ ಜಿಲ್ಲಾ ಶಸಸ್ತ್ರ ಮೀಸಲು ಪಡೆಯ 20 ಜನ ಪೊಲೀಸರಿಗೆ ಶನಿವಾರ ಬೆಳಿಗ್ಗೆ ಎಸ್ಪಿ ಅವರ ಕಛೇರಿಯ ಮುಂಭಾಗದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇಸಿದಿ ನತಂತರ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕೊರೊನಾ ಪಾಸಿಟೀವ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾದ ಕರ್ತವ್ಯ ನಿರ್ವಹಿಸುತ್ತಿರುವ ನಿಮ್ಮ ಕಾರ್ಯವೈಖರಿ ನಿಜಕ್ಕೂ ಮೆಚ್ಚುಗೆ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಸುಮಾರು 20 ಕ್ಕೂ ಹೆಚ್ಚು ಸಿಬ್ಬಂದಿಗಳು ಕುಟುಂಬದವರು ಪಾಸಿಟೀವ್ ಬಂದ ಸಂದರ್ಭದಲ್ಲಿ ನಿಮ್ಮ ಕುಟುಂಬದವರಿಗೆ ಆತ್ಮವಿಶ್ವಾಸ ಹೆಚ್ಚಿಸಿ ನಾವು ನಿಮ್ಮೊಂದಿಗಿದ್ದೇವೆ ಆತಂಕ ಬೇಡ ಎಂದು ಮನವಿ ಮಾಡಿದ್ದೆವು. ಇಲಾಖೆಯ ಹಿರಿಯ ಅಧಿಕಾರಿಗಳಾದ ಶಿಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್‍ರವರು ತುಮಕೂರು ಜಿಲ್ಲೆಯ ಪೊಲೀಸರು ಕೋವಿಡ್-19 ಸಂದರ್ಭದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಇದಕ್ಕೆ ಮೂಲ…
Author: News Desk Benkiyabale
ತುಮಕೂರು: ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶವು ಎರಡ್ಮೂರು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿಯ ಬದಲಾವಣೆಯನ್ನು ಕಾಣಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದ್ದಾರೆ. ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಆರ್ಥಿಕ ವಿಚಾರದಲ್ಲಿ ಸ್ವಲ್ಪ ಮಟ್ಟಿನ ಸಮಾನತೆ ಸಾಧಿಸಿದ್ದರೂ, ಸಾಮಾಜಿಕವಾಗಿ ಸಮಾಜ ನಿರ್ಮಾಣಕ್ಕೆ ಇನ್ನೂ ಬಹುದೂರ ಸಾಗಬೇಕಾಗಿದೆ. ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಕೆಲಸ ಆಗಬೇಕಾಗಿದೆ ಎಂದರು. ಸ್ವಾತಂತ್ರ ಬಂದು 73ವರ್ಷಗಳು ಕಳೆದಿದ್ದರೂ ಜಾತಿ ರಹಿತ ಸಮಾಜ ನಿರ್ಮಾಣದತ್ತ ಕೊಂಚ ಕೆಲಸಗಳಾಗಿದ್ದರೂ, ವರ್ಗರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ಹಿಂದೆ ಬಿದ್ದಿದ್ದೇವೆ. ಬಡವ, ಬಲ್ಲಿದ, ಮೇಲು, ಕೀಳು ಎಂಬ…
ತುಮಕೂರು : ಜಿಲ್ಲೆಯಲ್ಲಿ 101 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3211 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 38, ಪಾವಗಡ-12, ಕುಣಿಗಲ್-07, ಮಧುಗಿರಿ-01, ಕೊರಟಗೆರೆ-06, ತುರುವೇಕೆರೆ-10, ಶಿರಾ-07, ತಿಪಟೂರು-08, ಗುಬ್ಬಿ-11, ಚಿಕ್ಕನಾಯಕನಹಳ್ಳಿ-01 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 101 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 119 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2194 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1017 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 101 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ
ತುಮಕೂರು : ಜಿಲ್ಲೆಯಲ್ಲಿ 92 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3211 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 31, ಪಾವಗಡ-09, ಕುಣಿಗಲ್-09, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-05, ಶಿರಾ-03, ತಿಪಟೂರು-08, ಗುಬ್ಬಿ-04, ಚಿಕ್ಕನಾಯಕನಹಳ್ಳಿ-06 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 92 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 62 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1043 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1040 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 96 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು: ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವಯಂ ದಾಖಲಿಸುವ “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್”ಗೆ ಸಚಿವ ಬಿ.ಸಿ ಪಾಟೀಲ್ ಅವರು ಶುಕ್ರವಾರ ಚಾಲನೆ ನೀಡಿದರು. ತಾಲೂಕಿನ ಕೋರ ಹೋಬಳಿಯ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಬೆಳೆಗಳ ಫೋಟೋ ಅಪ್‍ಲೋಡ್ ಮಾಡುವ ಮೂಲಕ ಚಾಲನೆ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3 ವರ್ಷಗಳಿಂದ ಬೆಳೆ ಸಮೀಕ್ಷೆ ಮಾಡಲಾಗುತ್ತಿದೆ. ಈ ಮೊದಲು ಆಯಾ ಗ್ರಾಮದ ಪಿಆರ್‍ಒಗಳು ರೈತರ ಜಮೀನುಗಳಿಗೆ ಬಂದು ಬೆಳೆಯ ಫೋಟೋ ತೆಗೆಯುತ್ತಿದ್ದರು. ಆದರೆ ಪ್ರಸಕ್ತ ವರ್ಷದಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರ ತೆಗೆದು ರೈತರೇ ಸ್ವಯಂ ಅಪ್‍ಲೋಡ್ ಮಾಡಬಹುದಾಗಿದೆ ಎಂದರು. ಬೆಳೆ ಸಮೀಕ್ಷೆಗಾಗಿ ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವಂತಿಲ್ಲ. ರೈತ ತನ್ನ ಜಮೀನಿನಲ್ಲಿ ತಾನು ಬೆಳೆದ ಬೆಳೆಯನ್ನು ತಾನೇ ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆಯಡಿ ಸಂಗ್ರಹವಾಗುವ ಮಾಹಿತಿಯನ್ನು ಪ್ರಕೃತಿ…
ತುಮಕೂರು: ವ್ಯಾಟ್ಸ್‍ಆ್ಯಪ್ ಕರೆಗಳ ಮೂಲಕ ಉದ್ಯಮಿಯೊಬ್ಬರಿಗೆ ಬೆದರಿಕೆ ಕರೆ ಹಾಕಿ ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳನ್ನು ಎನ್‍ಇಪಿಎಸ್ ಪೊಲೀಸರು ಬಂಧಿಸಿದ್ದಾರೆ. ನಗರದ ಮಂಡಿಯಲ್ಲಿ ಆಯಿಲ್ ಮಿಲ್ ಇಟ್ಟುಕೊಂಡಿರುವ ಉದ್ಯಮಿಯೊಬ್ಬರಿಗೆ ವ್ಯಾಟ್ಸ್‍ಆ್ಯಪ್ ಸಂದೇಶಗಳನ್ನು ಕಳುಹಿಸುವ ಮೂಲಕ 50 ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಸದರಿ ಉದ್ಯಮಿಯು ವಾಲ್ಮೀಕಿ ನಗರದ ತಮ್ಮ ಮನೆಗೆ ತೆರಳುವ ವೇಳೆ ಕಾರನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿ ಬೆದರಿಕೆಯನ್ನು ಸಹ ಹಾಕಿದ್ದರು. ಈ ಸಂಬಂಧ ಹೊಸಬಡಾವಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳಾದ ಅಲಿ ಹುಸೇನ್(40), ಶಾನ್ ವಾಜ್ ಪಾಷ(40), ಮೆಹಬೂಬ್ ಖಾನ್ (40), ಸೈಯದ್ ಶವರ್(34), ಇವರನ್ನು ಬಂದಿಸಿದ್ದು, ಸ್ಟೈಲ್ ಇಮ್ರಾನ್ ಎಂಬ ವ್ಯಕ್ತಿ ತಲೆ ಮರೆಸಿಕೊಂಡಿದ್ದಾನೆ. ಇವನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೇಲ್ಕಂಡ ಆರೋಪಿಗಳು ಕೃತ್ಯಕ್ಕಾಗಿ ಬಳಸಿದ್ದ ಆರು ಮೊಬೈಲ್ ಮತ್ತು…
ತುಮಕೂರು: ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಕಿಡಿಗೇಡಿಗಳು ನಡೆಸಿದ ಹಲ್ಲೆಯನ್ನ ಖಂಡಿಸಿ ತುಮಕೂರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್ ನೇತೃತ್ವದಲ್ಲಿ ಪತ್ರಕರ್ತರು ಪ್ರತಿಭಟನೆ ನಡೆಸಿದರು. ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ಮಾಡುವ ಮೂಲಕ ಹಲ್ಲೆಕೋರರನ್ನು ಬಂದಿಸುವಂತೆ ಒತ್ತಾಯಿಸಿ, ಹಾಗೂ ಇಂತಹ ಘಟನೆಗಳು ಮರುಕಳಿಸಿದಂತೆ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ ಪತ್ರಕರ್ತರು ಯಾವುದೇ ಜಾತಿ ಧರ್ಮ ವನ್ನ ಲೆಕ್ಕಿಸದೇ ಪಕ್ಷಾತೀತವಾಗಿ ಪ್ರಾಮಾಣಿಕತೆಯಿಂದ ಘಟನೆಯ ಸತ್ಯಾಸತ್ಯತೆಯನ್ನ ವರದಿ ಮಾಡಲು ತೆರಳಿರುತ್ತಾರೆ ಅಂತಹ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ, ಹಾಗೂ ಇದೇ ರೀತಿ ಕಳೆದ ಒಂದು ವಾರದಲ್ಲಿ ಬೇರೆ ಬೇರೆ ಕಡೆಗಳಲ್ಲಿ ಪತ್ರಕರ್ತರ…
ತುಮಕೂರು : ಜಿಲ್ಲೆಯಲ್ಲಿ 116 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3119 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 49, ಪಾವಗಡ-12, ಕುಣಿಗಲ್-18, ಮಧುಗಿರಿ-06, ಕೊರಗಟಗೆರೆ-02, ತುರುವೇಕೆರೆ-04, ಶಿರಾ-13, ತಿಪಟೂರು-03, ಗುಬ್ಬಿ-08, ಚಿಕ್ಕನಾಯಕನಹಳ್ಳಿ-01 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 92 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 125 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2008 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1019 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 92 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಗುಬ್ಬಿ: ತಾನು ಬೆಳೆಸಿದ ಮರ ತನ್ನ ಮೇಲೆ ಬಿದ್ದಿರುವ ರೀತಿ ಬೆಂಗಳೂರಿನಲ್ಲಿ ನಡೆದ ಗಲಭೆ ಕುರಿತು ಶಾಸಕ ಅಖಂಡ ಶ್ರೀನಿವಾಸ್ ಯೋಚಿಸಬೇಕಿದೆ. ವಿನಾಕಾರಣ ಕೋಮು ಗಲಭೆಗೆ ಮೂಲವಾಗುವ ರಾಜಕಾರಣ ಸಲ್ಲದು. ಇದರಿಂದ ಶ್ರೀಸಾಮಾನ್ಯರಲ್ಲಿ ಆತಂಕ ಮನೆ ಮಾಡುತ್ತದೆ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ತಿಳಿಸಿದರು. ತಾಲ್ಲೂಕಿನ ಸಿ.ಎಸ್.ಪುರ ಗದ್ದೇಹಳ್ಳಿಯಲ್ಲಿ ಬುಧವಾರ ನಡೆದ 1.25 ಕೋಟಿ ರೂಗಳ ಸಿಸಿ ರಸ್ತೆ ನಿರ್ಮಾಣ ಹಾಗೂ 11 ಲಕ್ಷ ರೂಗಳ ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಬಿಜೆಪಿ ಸರ್ಕಾರದ ಬಂದ ದಿನದಿಂದ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ನಡೆದ ಕೆಲ ಘಟನೆಗಳು ರಾಜಕೀಯ ಪ್ರೇರಿತವಾಗಿವೆ ಅಷ್ಟೇ. ಈ ಘಟನೆಯಲ್ಲೂ ಅವರ ಜನರೇ ಅವರಿಗೆ ತಿರುಗಿ ಬಿದ್ದಿದ್ದಾರೆ. ಈ ಘಟನೆಯು ಮತ್ತೊಂದು ತಿರುವು ಪಡೆಯುವ ಮುನ್ನ ತಪ್ಪಿತಸ್ಥರನ್ನು ಹುಡುಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮುಂದುವರೆದು ಎಲ್ಲಿಯೋ ಇಂತಹ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ…
ತುಮಕೂರು : ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಪರಿಷ್ಕರಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಅಭಿಯನದಲ್ಲಿ ಉದ್ಯೋಗ ಚೀಟಿ ಹೊಂದಿಲ್ಲದ ಅರ್ಹ ಕುಟುಂಬಗಳನ್ನು ಗುರುತಿಸುವ, ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ ಹಾಗೂ ಮದುವೆಯಾಗಿ ಬೇರೆ ಪ್ರದೇಶಕ್ಕೆ ತೆರಳಿದ ಕುಟುಂಬದ ಸದಸ್ಯರ ಹೆಸರನ್ನು ಉದ್ಯೋಗ ಚೀಟಿಯಿಂದ ತೆಗೆದು ಹಾಕಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನರೇಗಾ ಯೋಜನೆಯಡಿ ಕುಟುಂಬಗಳಿಗೆ ವಿತರಿಸಲಾದ ಉದ್ಯೋಗ ಚೀಟಿಗಳಲ್ಲಿ ಕೂಲಿಕಾರರ ಹೆಸರು, ವಯಸ್ಸು, ವರ್ಗ, ಬ್ಯಾಂಕ್ ಖಾತೆ ವಿವರಗಳು, ಆಧಾರ್ ಸಂಖ್ಯೆ, ಭಾವಚಿತ್ರ ಮೊದಲಾದ ವಿವರಗಳನ್ನು ನರೇಗಾ ಸಾಫ್ಟ್ ತಂತ್ರಾಂಶದಲ್ಲಿ ಸಮರ್ಪಕವಾಗಿ ದಾಖಲಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಉದ್ಯೋಗ ಚೀಟಿ ಪರಿಷ್ಕರಣೆ ಅಭಿಯಾನದ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದಲ್ಲಿ ಉಪಕಾರ್ಯದರ್ಶಿ(ಅಭಿವೃದ್ಧಿ), ಎಡಿಪಿಸಿ, ಜಿಲ್ಲಾ ಎಂ.ಐ.ಎಸ್. ಸಂಯೋಜಕರನ್ನೊಳಗೊಂಡ ತಂಡವನ್ನು ನೇಮಿಸಲಾಗಿದೆ.…











