ತುಮಕೂರು: ಹೇಮಾವತಿ ನಾಲೆಯಿಂದ ಮೊದಲ ಹಂತದಲ್ಲಿ ಜಿಲ್ಲೆಯ ಶಿರಾ ಹಾಗೂ ಕುಣಿಗಲ್ ತಾಲೂಕಿಗೆ ನೀರನ್ನು ಹರಿಸಲಾಗುತ್ತಿದ್ದು, ಜಿಲ್ಲೆಯ ನಾಲಾ ವ್ಯಾಪ್ತಿಯ ತಾಲೂಕಿಗಳಿಗೆ ತಲಾ 10 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಹೇಮಾವತಿ ನಾಲೆಯಿಂದ ಹರಿಸಲಾಗುವ ನೀರನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳುವ ಕುರಿತ ವಿಶೇಷ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಹೇಮಾವತಿಯ ಗೊರೂರು ಡ್ಯಾಂನಲ್ಲಿ 33 ಟಿಎಂಸಿ ನೀರು ಸಂಗ್ರಹವಿದ್ದು, ಕಳೆದ ಬಾರಿ ಕಡಿಮೆ ನೀರು ಹರಿದಿದ್ದ ಶಿರಾ ಹಾಗೂ ಕುಣಿಗಲ್ ತಾಲೂಕಿಗೆ ಈಗ ಮೊದಲ ಹಂತದಲ್ಲಿ ನೀರು ಹರಿಸಲಾಗುತ್ತಿದೆ. ತಾಲೂಕಿಗೆ ಪ್ರವೇಶವಾದ ದಿನದಿಂದ ಲೆಕ್ಕ ಹಾಕಿ 10 ದಿನಗಳ ಕಾಲ ನೀರು ಹರಿಸಲಾಗುವುದು. ತಾಲೂಕುವಾರು…
Author: News Desk Benkiyabale
ತುಮಕೂರು : ಜಿಲ್ಲೆಯಲ್ಲಿ 153 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3003 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 35, ಪಾವಗಡ-23, ಕುಣಿಗಲ್-14, ಮಧುಗಿರಿ-04, ಕೊರಗಟಗೆರೆ-16, ತುರುವೇಕೆರೆ-10, ಶಿರಾ-15, ತಿಪಟೂರು-18, ಗುಬ್ಬಿ-16, ಚಿಕ್ಕನಾಯಕನಹಳ್ಳಿ-02 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 153 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 93 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1883 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1031 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 89 ಸಾವನ್ನಪ್ಪಿದ್ದು, ಬುಧವಾರ-03 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಧುಗಿರಿ: ಕರೋನಾ ಸಂಕಷ್ಟದಲ್ಲೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ದಾಖಲೆ ಬರೆದಿದ್ದು, ಕಳೆದ ಬಾರಿ ಗಳಿಸಿದ್ದ 11 ನೇ ಸ್ಥಾನದಿಂದ 3 ನೇ ಸ್ಥಾನಕ್ಕೆ ಜಿಗಿಯುವ ಮೂಲಕ ಗೆಲುವಿನ ನಗೆ ಬೀರಿದೆ. ಫಲ ನೀಡಿದ ವಿಷನ್ 5 ತಂತ್ರ : ಕಳೆದ ಬಾರಿ 11 ನೇ ಸ್ಥಾನ ಗಳಿಸಿ ನಿರಾಸೆ ಅನುಭವಿಸಿದ ಹಿನ್ನೆಲೆಯಲ್ಲಿ ಈ ಬಾರಿ 5 ಸ್ಥಾನದೊಳಗೆ ಫಲಿತಾಂಶ ದಾಖಲಾಗಲೇಬೇಕು ಎಂಬ ಉದ್ದೇಶದಿಂದ ಶೈಕ್ಷಣಿಕ ವರ್ಷದ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಬೆಳಕು ಎಂಬ ಕ್ರಿಯಾ ಯೋಜನೆ ತಯಾರಿಸಿ ಅದರಲ್ಲಿ ವಿಷನ್ 5 ಧ್ಯೇಯ ಅನುಸರಿಸಲಾಯಿತು. ಬೆಳಕು ಎಂಬ ಪುಸ್ತಕ ರೂಪದ ಸಂಚಿಕೆಯಲ್ಲಿ ಉತ್ತರ ಸಹಿತ ಪ್ರಶ್ನೆ ಕೋಠಿ ತಯಾರಿಸಿ ವಿತರಿಸಿ ಶೈಕ್ಷಣಿಕ ಜಿಲ್ಲೆಯ ಎಲ್ಲಾ ಶಿಕ್ಷಕರಿಗೂ ಗುರಿ ತಲುಪುವಂತೆ ಮಾರ್ಗದರ್ಶನ ನೀಡಲಾಯಿತು. ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ನಿರಂತರ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.…
ತುಮಕೂರು: ಕೊರೊನದಿಂದ ತೀವ್ರ ಸಂಕಷ್ಟಕ್ಕೊಳಗಾಗಿ ವೃತ್ತಿ ಜೀವನ ನಡೆಸಲು ಸಾಧ್ಯವಾಗದ ಅಮಲಾಪುರ ಕೇಂದ್ರೀಯ ವಿದ್ಯಾಲಯದ ಸಮೀಪವಿರುವ ಹಕ್ಕಿಪಿಕ್ಕಿ ಜನಾಂಗದ ಸುಮಾರು 35 ಕುಟುಂಬಗಳಿಗೆ ಬುಧವಾರ ದಿನಸಿ ಪದಾರ್ಥಗಳ ಆಹಾರ ಕಿಟ್ ವಿತರಿಸುವ ಮೂಲಕ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ರಂಗೇಗೌಡ ಮತ್ತು ಸ್ನೇಹಿತರು ಕೊರೋನ ಸಂಕಷ್ಟದಲ್ಲಿ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಹಾಗೂ ಜಿಲ್ಲಾ ಅಲೆಮಾರಿ ಅಭಿವೃದ್ಧಿ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿಯಾದ ರಂಗೇಗೌಡ, ಕೋವಿಡ್-19 ಲಾಕ್‍ಡೌನ್ ನಂತರ ಅಲೆಮಾರಿ ಜಾತಿ ಜನರ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದ್ದು, ಪ್ರತಿನಿತ್ಯದ ಊಟಕ್ಕೂ ಪರದಾಡುತ್ತಿದ್ದಾರೆ. ಊರೂರು ಸುತ್ತಿ ವ್ಯಾಪಾರ ಮಾಡಿ ಜೀವನ ಮಾಡುವ ಇವರು ಕೋರೊನಾದಿಂದಾಗಿ ಜನ ಗ್ರಾಮಕ್ಕೆ ಇವರನ್ನು ಸೇರಿಸುತ್ತಿಲ್ಲ. ವ್ಯಾಪಾರವಿಲ್ಲದೆ ಜೀವನ ದುಸ್ಥರವಾಗಿರುವಂತಹ ಸಂದರ್ಭದಲ್ಲಿ ಕಷ್ಟಕ್ಕೆ ಸ್ಪಂಧಿಸುವಂತೆ ಅಲೆಮಾರಿ ಸಮುದಾಯ ಮನವಿ ಮಾಡಿದ ಹಿನ್ನಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ…
ತುಮಕೂರು: ಜಿಲ್ಲೆಯಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಗ್ರಾಮೀಣಾಭಿವೃದ್ಧಿ ಕೇಂದ್ರದ ಅಡಿಯಲ್ಲಿ ಸ್ಥಾಪಿಸಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಜೈವಿಕವನವನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಉಧ್ಘಾಟನೆ ನೆರವೇರಿಸಿದರು. ಪಂಡಿತನಹಳ್ಳಿಯ ಬಸದಿ ಬೆಟ್ಟದ ಹತ್ತಿರ ಉಧ್ಘಾಟನೆ ಮಾಡಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಶ್ರೀಮಂತವಾಗಿರುವ ತುಮಕೂರು ಜಿಲ್ಲೆಯಲ್ಲಿ ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ವಾತಾವರಣವಿದೆ. ಇದೀಗ ಲೋಕಾರ್ಪಣೆ ಆಗಿರುವ ಜೈವಿಕವನವೂ ಉತ್ತಮ ಪ್ರಯತ್ನವಾಗಿದೆ ಎಂದರು. ತುಮಕೂರು ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ನಗರವಾಗಿದೆ. ಆದರೆ, ನಗರದ ಸುತ್ತಮುತ್ತಲಿನ ಪ್ರದೇಶಗಳು ಹಿಂದುಳಿದಿವೆ. ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಈ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುವುದು. ಅದಕ್ಕೆ ಬೇಕಾದ ಎಲ್ಲ ಪ್ರಯತ್ನಗಳನ್ನು ಸರಕಾರ ಮಾಡಲಿದೆ. ಅಭಿವೃದ್ಧಿಯಲ್ಲಿ ಸುಸ್ಥಿರತೆ ಮತ್ತು ಕಮರ್ಷಿಯಲ್ ವಯಬಲಿಟಿ ಇಲ್ಲವಾದರೆ ಆ ಪ್ರಗತಿಗೆ ಯಾವುದೇ ಅರ್ಥವಿರುವುದಿಲ್ಲ ಎಂದು ಅವರು ಹೇಳಿದರು. ಶೈಕ್ಷಣಿಕವಾಗಿ ಬಹಳಷ್ಟು ಮುಂದುವೆರದಿರುವ ತುಮಕೂರಿನಲ್ಲಿ ಅತ್ಯುತ್ತಮ ಮಾನವ…
ಕೊರಟಗೆರೆ: ಪ್ರತಿನಿತ್ಯ ದುಡಿದು ಜೀವನ ಸಾಗಿಸಲು ಕೈಲಾಗದ ವಯಸ್ಸು. ಕೈಕಾಲು ಇಲ್ಲದೇ ಕಣ್ಣು-ಕಿವಿ ಕೇಳಿಸದಿರುವ ವಿಶೇಷ ಚೇತನರ ಬದುಕು ಬೀದಿಪಾಲು. ಮಕ್ಕಳ ಆಸರೇ ಇಲ್ಲದಿರುವ ಹಿರಿಯ ನಾಗರೀಕರ 3 ಸಾವಿರಕ್ಕೂ ಹೆಚ್ಚು ಬಡಜನತೆಗೆ ಸರಕಾರದ ಪಿಂಚಣಿ ಮತ್ತು ಮಾಶಾಸನ 6 ತಿಂಗಳಿಂದ ಮರೀಚಿಕೆಯಾಗಿ ಅಂಚೆ ಇಲಾಖೆ ಮತ್ತು ಉಪಖಜಾನೆಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಪತರು ನಾಡು ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ 8 ಅಂಚೆ ಇಲಾಖೆ ವ್ಯಾಪ್ತಿಯ 80 ಗ್ರಾಮದ 5500 ಕ್ಕೂ ಹೆಚ್ಚು ಬಡಜನರಿಗೆ ಪ್ರತಿ ತಿಂಗಳು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಷ್ಟ್ರೀಯ ಕುಟುಂಬ, ಅಂತ್ಯ ಸಂಸ್ಕಾರ, ಸಂಧ್ಯಾ ಸುರಕ್ಷಾ, ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ, ನಿರ್ಗತಿಕ ವಿಧವಾ, ವಿಶೇಷ ಚೇತನ, ಮನಸ್ವಿನಿ ಯೋಜನೆಯಡಿ 45 ಲಕ್ಷಕ್ಕೂ ಅಧಿಕ ಪಿಂಚಣಿ ಹಣ ಬರಲಿದೆ. ಕೊರಟಗೆರೆ ಉಪಖಜಾನೆಯಿಂದ ಪ್ರತಿ ತಿಂಗಳು 20 ರೊಳಗೆ ಕೊರಟಗೆರೆಯ ಎಲ್ಲಾ ಅಂಚೆ ಇಲಾಖೆಗೆ ಬಡವರ ಹಣ…
ತುಮಕೂರು: ಕೋವಿಡ್-19 ಸಂದರ್ಭದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಪಿಪಿಇ ಕಿಟ್ ನೀಡಬೇಕು. ಕೆಲಸ ಮುಗಿದ ಮೇಲೆ ಸ್ನಾನಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಎಲ್ಲರ ಸೇವೆ ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲಾ ಪೌರಕಾರ್ಮಿಕರ ಸಂಘದ ಸಿಐಟಿಯು ನೇತೃತ್ವದಲ್ಲಿ ಪೌರ ಕಾರ್ಮಿಕರು ಆಗಸ್ಟ್ 11ರಂದು ಬೆಳ್ಳಂಬೆಳಗ್ಗೆಯೇ ನಗರದ ಮಹಾನಗರ ಪಾಲಿಕೆ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಪೌರಕಾರ್ಮಿಕರ ಅಹವಾಲುಗಳನ್ನು ಆಲಿಸಿದ ಪಾಲಿಕೆ ಆಯುಕ್ತರಾದ ರೇಣುಕಾ ಅವರು ನೇರಪಾವತಿಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ಖಾಯಂಗೊಳಿಸುವ ಪ್ರಕ್ರಿಯೆ ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕು. ನಿಮ್ಮ ಬೇಡಿಕೆಗಳನ್ನು ಸರ್ಕಾರಕ್ಕೆ ಕಳಿಸಲಾಗುವುದು ಎಂದು ಭರವಸೆ ನೀಡಿದರು. ನೇರಪಾವತಿಯಡಿ ಕೆಲಸ ಮಾಡುವ ಸಂದರ್ಭದಲ್ಲಿ ಮರಣ ಹೊಂದಿರುವ ಪೌರಕಾರ್ಮಿಕರ ಅವಲಂಬಿತರಿಗೆ ಕೆಲಸ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಶಿಫಾರಸು ಮಾಡುತ್ತೇನೆ. ಕೆಲಸ ಮಾಡಿದ ನಂತರ ಸ್ನಾನದ ವ್ಯವಸ್ಥೆಗೆ ಕ್ರಮ ವಹಿಸುತ್ತೇನೆ. ಇರುವ ಸ್ನಾನಗೃಹಗಳನ್ನು ವಾರದಲ್ಲಿ ಚಾಲ್ತಿಗೊಳಿಸುತ್ತೇನೆ. ಹೆಚ್ಚುವರಿ ಸ್ನಾನಗೃಹಗಳ ಅಗತ್ಯವಿದ್ದರೆ ಕ್ರಮ ಕೈಗೊಳ್ಳುವುದಾಗಿ…
ತುಮಕೂರು: ಜಿಲ್ಲೆಯಲ್ಲಿ ಕ್ಷಯರೋಗಿಗಳ ಕಾಂಟ್ಯಾಕ್ಟ್ ಟ್ರೇಸಿಂಗ್ ಸಪ್ತಾಹವು ಆಗಸ್ಟ್ 17ರವರೆಗೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಹೊರವಲಯದಲ್ಲಿ ಅನುಕೂಲವಾಗುವಂತೆ ಇಂದು ಮೊಬೈಲ್ ಎಕ್ಸ್-ರೇ ವಾಹನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ|| ಸನತ್‍ಕುಮಾರ್ ಜಿ.ಕೆ ಅವರು ಚಾಲನೆ ನೀಡಿದರು. ಸಪ್ತಾಹದಲ್ಲಿ ಆರೋಗ್ಯ ಕಾರ್ಯಕರ್ತರ ಕ್ಷಯರೋಗಿಗಳ ಮನೆಯ ಸುತ್ತ ಅಂದರೆ ಕನಿಷ್ಠ 100 ಮೀಟರ್ ಸುತ್ತಳತೆಯಲ್ಲಿರುವ ಜನರಿಗೆ ಯಾವುದೇ ಕ್ಷಯರೋಗದ ಲಕ್ಷಣಗಳಾದ(ಕೆಮ್ಮು,ರಾತ್ರಿ ವೇಳೆ ಜ್ವರ, ತೂಕ ಕಡಿಮೆ ಆಗುವುದು, ಹಸಿವಾಗದೇ ಇರುವುದು ಕಫದಲ್ಲಿ ರಕ್ತ ಬೀಳುವುದು) ಇಂತಹ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರಿಗೆ ತಕ್ಷಣವೇ ಕಫ ಪರೀಕ್ಷೆ ಒಳಪಡಿಸಿ ಕ್ಷಯರೋಗ ದೃಡಪಟ್ಟರೆ ಆ ದಿನವೇ ಚಿಕಿತ್ಸೆಯನ್ನು ಪ್ರಾರಂಭಿಸುವುದು ಈ ಸಪ್ತಾಹದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಕ್ಷಯರೋಗದ ಲಕ್ಷಣಗಳು ಕಂಡು ಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕಫ ಪರೀಕ್ಷೆ ಮಾಡಿಸಿ…
ತುಮಕೂರು: ಕೋವಿಡ್-19 ರ ರೋಗದ ಹರಡುವಿಕೆಯ ನಂತರ ವಿಶ್ವದಾದ್ಯಂತ ಆಗುತ್ತಿರುವ ಸಾಮಾಜಿಕ ಪರಿಣಾಮ ಮತ್ತು ಬದಲಾವಣೆಗಳು ಶಿಕ್ಷಣ ಕ್ಷೇತ್ರದ ಮೇಲೂ ಬೀರಿದ್ದು, ಪ್ರಾಥಮಿಕ ಶಿಕ್ಞಣದಿಂದ ಉನ್ನತ ಶಿಕ್ಷಣದವರಗೆ ಆನ್‍ಲೈನ್ ಶಿಕ್ಷಣ ಅನಿವಾರ್ಯವಾಗಿರುವುದು ತಂತ್ರಜ್ಞಾನದ ಬೆಳವಣಿಗೆ ಗಮನ ಹರಿಸುವ ಅಗತ್ಯವಿದೆ ಎಂದು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ವಜ್ರಮಹೋತ್ಸವದ ಅಂಗವಾಗಿ ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗ ಮತ್ತು ಟೆಕ್ನಿಕಲ್ ಇನ್ಸಿಟ್ಯೂಟ್ ಪಾರ್ ಇಂಜಿನಿಯರ್ಸ್ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ‘ ¨ಭವಿಷ್ಯದ ತಂತ್ರಜ್ಞಾನದಲ್ಲಿ ಇಂಜಿನಿಯರಿಂಗ್ ವಿಜ್ಞಾನದ ಆವಿಷ್ಕಾರದ ಪ್ರವೃತ್ತಿಗಳು’ ವಿಷಯ ಕುರಿತ ಒಂದು ದಿನದ ರಾಷ್ಟ್ರೀಯ ಮಟ್ಟದ ವೆಬಿನಾರ್ ಉದ್ಗಾಟಿಸಿ ಅವರು ಮಾತನಾಡಿದರು. ಕರೋನ ಸೋಂಕಿನಿಂದ ಜಗತ್ತಿನಲ್ಲಿ ಆಗುತ್ತಿವ ಅನೇಕ ಬದಲಾವಣೆಯ ಪ್ರವೃತ್ತಿಗಳ ವೇದಿಕೆಯನ್ನು ಆನ್‍ಲೈನ್ ತಂತ್ರಜ್ಞಾನ…
ತುಮಕೂರು: ಕಾರ್ಮಿಕರ ಗಳಿಕೆ ಪಟ್ಟಿಯಲ್ಲಿರುವ ರಜೆಗಳನ್ನು ಕಡಿತಗೊಳಿಸದೆ ಪ್ರತಿ ತಿಂಗಳು 7ನೇ ತಾರೀಖಿನಂದು ವೇತನ ನೀಡಬೇಕು, ತುಟ್ಟಿಭತ್ಯ ನೀಡಬೇಕು, ಇಎಲ್ ನಗದೀಕರಣ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಸಾರಿಗೆ ಸಿಬ್ಬಂದಿ ತುಮಕೂರಿನ ಕೆಎಸ್‍ಆರ್‍ಟಿಸಿ ನಿಗಮದ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಸೈಯದ್ ಮುಜೀಬ್, ಸಾರ್ವಜನಿಕ ಉದ್ದಿಮೆಯಾದ ಸಾರಿಗೆ ನಿಗಮಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಬಾರದು. ಇದರಿಂದ ರಿಯಾರಿತಿ ದರದ ಪಾಸ್ ಪಡೆದಿರುವ ವಯೋವೃದ್ದರು, ಸ್ವಾತಂತ್ರ್ಯ ಹೋರಾಟಗಾರರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಹೇಳಿದರು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಬೇಕು. ತೈಲ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ನೀಡಬೇಕು. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತರಬೇಕು ಫ್ಯಾಬ್ರಿಕೇಶನ್…











