ತುಮಕೂರು: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಸಿಟಿ ಕಚೇರಿಯು ಸ್ಮಾರ್ಟ್ ಲುಕ್ ಪಡೆದುಕೊಂಡಿರುವುದು ಸಂತಸ ಮೂಡಿಸಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷೆ ಡಾ|| ಶಾಲಿನಿ ರಜನೀಶ್ ಖುಷಿ ವ್ಯಕ್ತಪಡಿಸಿದರು. ಸ್ಮಾರ್ಟ್ ಸಿಟಿ ಕಚೇರಿಯಲ್ಲಿಂದು ನೂತನ ಸಭಾಂಗಣವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ಅವರು ಈ ಕಚೇರಿಗೆ ಹೊಸ ಬದಲಾವಣೆ ತಂದು ಸ್ಮಾರ್ಟ್ ಲುಕ್ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ರೀತಿ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಾರಂಭವಾಗಿರುವ ಕಾಮಗಾರಿಗಳು ತ್ವರಿತವಾಗಿ ಅನುಷ್ಠಾನಗೊಂಡು ನಂಬರ್ ಒನ್ ಸ್ಮಾರ್ಟ್ ನಗರವಾಗುವ ಕಾಲ ದೂರ ಉಳಿದಿಲ್ಲವೆಂದು ಆಶಿಸಿದರು. ಕಳೆದ ಬಾರಿ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದಲ್ಲಿ ಸ್ವಚ್ಛತೆ ಇಲ್ಲದಿರುವ ಬಗ್ಗೆ ಅಧಿಕಾರಿಗಳ ಮೇಲೆ ಸಿಟ್ಟಾಗಿದ್ದು, ನೆನಪಿಸಿಕೊಂಡ ಅವರು ಈ ದಿನ ಬರುವ ದಾರಿಯಲ್ಲಿ ಬಿ.ಹೆಚ್. ರಸ್ತೆಯನ್ನು ಗಮನಿಸಿದ್ದೇನೆ. ರಸ್ತೆಯನ್ನು ಅಂದವಾಗಿ, ಸ್ವಚ್ಛವಾಗಿ ಹಸಿರಿನಿಂದ ಕಂಗೊಳಿಸುವಂತೆ…
Author: News Desk Benkiyabale
ತುಮಕೂರು: ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಯಶಸ್ಸು ಕಂಡಿರುವ ಮಹಿಳೆಯರ ವಾರ್ಷಿಕ ಆದಾಯದಲ್ಲಿ ಹೆಚ್ಚಳವಾಗಿರುವುದು ಸಂತಸ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಸಮಗ್ರ ಕೃಷಿ ಪದ್ಧತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರೈತರೊಂದಿಗೆ ನಡೆದ ಚರ್ಚೆಯಲ್ಲಿ ರೈತ ಮನವಿಗಳನ್ನು ಆಲಿಸಿ ಮಾತನಾಡಿದ ಅವರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಲು ಸರ್ಕಾರದಿಂದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಪದ್ಧತಿಯನ್ನು ಅನುಸರಿಸುವ ಮೂಲಕ ಮುಂದಿನ ದಿನಗಳಲ್ಲಿ ಮಹಿಳೆಯರು ಉತ್ಪಾದಿಸುವ ಆಹಾರ ಪದಾರ್ಥ ಹಾಗೂ ಬೆಳೆಯುವ ಬೆಳೆಗೆ ಮಾರುಕಟ್ಟೆ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಚರ್ಚೆಯಲ್ಲಿ ಕೊರಟಗೆರೆ ತಾಲೂಕಿನ ರೈತ ರವಿಕುಮಾರ್ ಮಾತನಾಡಿ ಸಮಗ್ರ ಕೃಷಿ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಈ ಸೌಲಭ್ಯವನ್ನು ಹೆಚ್ಚು ರೈತರು ಬಳಸಿಕೊಳ್ಳುವಂತಾಗಬೇಕು. ಸಮಗ್ರ ಕೃಷಿ ಪದ್ಧತಿಯ ಬಗ್ಗೆ ರೈತರಿಗೆ…
ತುಮಕೂರು: ಬಿಎಸ್‍ಎನ್‍ಎಲ್ ಕೇಬಲ್‍ಗಳ ನಿಖರ ಮಾಹಿತಿಯಿಲ್ಲದಿರುವುದರಿಂದ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಸ್ಮಾರ್ಟ್ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕೂಡಲೇ ತಮ್ಮ ಸಂಸ್ಥೆಯ ಕೇಬಲ್‍ಗಳು ಹಾದು ಹೋಗಿರುವ ಮಾರ್ಗದ ನಿಖರ ಮಾಹಿತಿಯನ್ನು ನೀಡಿ ಕಾಮಗಾರಿ ತ್ವರಿತವಾಗಿ ನಡೆಯಲು ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಬಿಎಸ್‍ಎನ್‍ಎಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಮ್ಮ ಕಚೇರಿಯಲ್ಲಿ ಇತ್ತೀಚೆಗೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಸಮನ್ವಯ ಸಮಿತಿಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಬಿಎಸ್‍ಎನ್‍ಎಲ್ ಕೇಬಲ್‍ಗಳ ನಿಖರ ಮಾಹಿತಿಯಿಲ್ಲದೆ ಸ್ಮಾರ್ಟ್ ರಸ್ತೆ ಪ್ರಗತಿ ವಿಳಂಬವಾಗಿದೆ. ಪ್ರಗತಿ ಕಾರ್ಯದಲ್ಲಿ ಬಿಎಸ್‍ಎನ್‍ಎಲ್ ಕೇಬಲ್‍ಗಳಿಗೆ ಹಾನಿಯಾದರೆ ಸ್ಮಾರ್ಟ್ ಸಿಟಿ ಹೊಣೆಯಾಗುವುದಿಲ್ಲ. ರಸ್ತೆ ಅಗೆಯುವ ಹಾಗೂ ಚೇಂಬರ್ ನಿರ್ಮಿಸುವ ಸಂದರ್ಭದಲ್ಲಿ ಬಿಎಸ್‍ಎನ್‍ಎಲ್ ಅಧಿಕಾರಿಗಳು ಖುದ್ದು ಹಾಜರಿದ್ದು, ಕೇಬಲ್ ಲೇಯಿಂಗ್ ಮಾಹಿತಿ ನೀಡಿ ಸಹಕರಿಸಬೇಕೆಂದು ಬಿಎಸ್‍ಎನ್‍ಎಲ್ ಅಧಿಕಾರಿಗಳಿಗೆ ತಿಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳುವ ಎಲ್ಲ…
ಪಾವಗಡ : ಪಟ್ಟಣದ ಶಾಂತಿನಗರದ ಯೋಗಮಂದಿರದ ಮುಂಭಾಗ ವೃದ್ದೆ ಕಾಲುನಡಿಗೆಯಕಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯೆಕ್ತಿ ದ್ವೀಚಕ್ರವಾಹನದಲ್ಲಿ ಬಂದು ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದವಾಸಿ ಶಾಂತಮ್ಮ ಮಂಗಳವಾರ ಸಂಜೆ ಜೈನ್ ಲೇಔಟ್‍ನಲ್ಲಿರುವ ಸಂಬಂದಿಕರ ಮನೆಗೆ ತೆರಳುವ ವೇಳೆ ಶಾಂತಿನಗರದ ಯೋಗಮಂದಿರದ ಮುಂಭಾಗದ ತಿರುವಿನಲ್ಲಿ ಶಾಂತಮ್ಮ ಕೋರಳಿನಲ್ಲಿದ್ದ 60 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ದ್ವೀಚಕ್ರ ವಾಹನದಲ್ಲಿ ಬಂದಾ ಅಪರಿಚಿತ ವ್ಯೆಕ್ತಿ ಕಿತ್ತುಕೊಂಡು ಪರಾರಿಯಾಗಿದ್ದು , ಘಟನೆಯ ಸಂಬಂದ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ,ಸ್ಥಳಕ್ಕೆ ಪಿಎಸೈ ರಾಘವೇಂದ್ರರವರು ಬೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.
ತುಮಕೂರು : ರಾಜ್ಯದಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಪರಿಹಾರ ಕೆಲಸ ಕೈಗೊಳ್ಳುವಂತೆ ಸಚಿವರನ್ನು ಸಂತ್ರಸ್ಥ ನೆರೆ ಜಿಲ್ಲೆಗಳಿಗೆ ಕಳುಹಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಯ ದರ್ಶನ ಪಡೆದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಅತೀವೃಷ್ಠಿಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಚಿವರಿಗೆ ಸೂಚಿಸಿದ್ದೇನೆ ಎಂದರು. ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದಿಂದ ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿದೆ. ನಾನು ಮುಖ್ಯಮಂತ್ರಿ ಆಗಿದ್ದನ್ನು ಅವ್ರು ನೋಡಿದ್ರೆ ಎಷ್ಟು ಸಂತಸ ಪಡುತ್ತಿದ್ದರು. ಅವರ ಆಶೀರ್ವಾದ ನನ್ನ ಮೇಲೆ ಇರುತ್ತದೆ ಎಂದು ಅವರು ತಿಳಿಸಿದರು. ಗದ್ದುಗೆ ದರ್ಶನ ಪಡೆದ ನಂತರ ಮುಖ್ಯಮಂತ್ರಿಗಳು ಸಿದ್ಧಲಿಂಗ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು…
ತುಮಕೂರು: ತುಮಕೂರು ಜಿಲ್ಲೆ ಅಭಿವೃದ್ದಿ ಕುರಿತಂತೆ ಬಹಳಷ್ಟು ಕನಸುಗಳನ್ನು ಇಟ್ಟುಕೊಂಡು ನಾನು ಸಚಿವನಾಗಿದ್ದು, ಕೆರೆಗಳಿಗೆ ನೀರು ಹರಿಸುವುದು ನನ್ನ ಮೊದಲ ಆದ್ಯತೆ ಎಂದು ನೂತನ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ: ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದು ಹಾಗೂ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ನಂತರ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಯಾವ ಖಾತೆ ನೀಡಿದರೂ ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಮೊದಲು ಕೆರೆಗಳಿಗೆ ನೀರು ಹರಿಸುವ ಮಹದಾಸೆ ನನ್ನದಾಗಿದೆ. ಜಿಲ್ಲೆಯಲ್ಲಿ ಹೇಮಾವತಿ, ಭದ್ರ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಯಡಿ ಮೂರು ಕಡೆ ನಾಲೆ ನಿರ್ಮಾಣವಾಗುತ್ತಿದ್ದು, ಅದರಲ್ಲಿ ಸಾಧ್ಯವಾಗುವಷ್ಟು ನೀರನ್ನು ಶೇಖರಿಸುವುದರಿಂದ ನೀರಿನ ಮಟ್ಟ ಹೆಚ್ಚಾಗುತ್ತದೆ. ಇದರಿಂದ ಜಿಲ್ಲೆಯ ಜನರಿಗೆ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ಜನರು…
ತುಮಕೂರು: ಕುಡಿಯುವ ನೀರಿನ ಬೋರ್‍ವೆಲ್‍ನ ವಿದ್ಯುತ್ ಸಂಪರ್ಕದ ಆರ್.ಆರ್ (ರೆವೆನ್ಯೂ ರಿಜಿಸ್ಟಾರ್) ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಮೇಶ್ ತಿಳಿಸಿದರು. ಆಗಸ್ಟ್ 17 ಶನಿವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲೆಯ ಬೆಸ್ಕಾಂ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಬೋರ್‍ವೆಲ್ ವಿದ್ಯುತ್ ಸಂಪರ್ಕದ ಮೇಲೆ ಆರ್.ಆರ್. ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು. ಆರ್. ಆರ್. ಸಂಖ್ಯೆ ಇಲ್ಲದಿದ್ದರೆ ಕೂಡಲೇ ಅದನ್ನು ಬರೆಸುವ ವ್ಯವಸ್ಥೆ ಮಾಡಿ ಎಂದು ಬೆಸ್ಕಾಂ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕು-6, ಕುಣಿಗಲ್-11 ತಿಪಟೂರು-3, ತುರುವೇಕೆರೆ-2, ಚಿಕ್ಕನಾಯಕನಹಳ್ಳಿ-1, ಮಧುಗಿರಿ-2, ಶಿರಾ-7, ಪಾವಗಡ-7 ತಾಲ್ಲೂಕುಗಳಿಂದ ಒಟ್ಟು 39 ಬೆಸ್ಕಾಂ ನ ಒಬಿ ಕೆಲಸ ಮಳೆ…
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ತುಮಕೂರು ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಈ ಕೆಳಕಂಡ ಸ್ಥಳಗಳಲ್ಲಿ ಗೋಶಾಲೆ ತೆರೆಯಲಾಗಿದೆ. ಮಧುಗಿರಿ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಹಿಪ್ಪೆ ತೋಪು,: ತಿಪಟೂರು ತಾಲ್ಲೂಕು ಹೊನ್ನವಳ್ಳಿ ಹೋಬಳಿಯ ಬಾಗವಾಳದ ಮುನಿಯಪ್ಪನ ಆಲದಮರ: ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣ: ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಗಂಡಿಹಳ್ಳಿ ಮಠ: ತುಮಕೂರು ತಾಲ್ಲೂಕು ಕೋರಾ ಹೋಬಳಿಯ ಚಿಕ್ಕತೊಟ್ಲುಕೆರೆ ಅಟವಿಸ್ವಾಮಿ ಮಠ: ಪಾವಗಡ ತಾಲ್ಲೂಕು ನಿಡಗಲ್ ಹೋಬಳಿಯ ವದನಕಲ್ಲು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣ: ತುರುವೇಕೆರೆ ತಾಲ್ಲೂಕು ದಬ್ಬೇಘಟ್ಟ ಹೋಬಳಿಯ ಅರೆಮಲ್ಲೇನಹಳ್ಳಿ ರಂಗನಾಥಸ್ವಾಮಿ ದೇವಸ್ಥಾನದ ಆವರಣ: ಚಿಕ್ಕನಾಯನಕಹಳ್ಳಿ ತಾಲ್ಲೂಕು ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಶ್ರೀಗುರು ಸಿದ್ದರಾಮೇಶ್ವರ ದೇವಸ್ಥಾನದ ಹಿಂಭಾಗ: ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಹೋಬಳಿಯ ಬೆಟ್ಟದಳ್ಳಿ ಮಠದ ಆವರಣದಲ್ಲಿ ಗೋಶಾಲೆಗಳನ್ನು ಆರಂಭಿಸಲಾಗಿದೆ. ಮೇವಿನ ಕೊರತೆಯಿರುವ ಜಿಲ್ಲೆಯ ರೈತಬಾಂಧವರು ತಮ್ಮ ಜಾನುವಾರುಗಳನ್ನು ಗೋಶಾಲೆಗೆ…
ತುಮಕೂರು: ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, 1 ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ಸ್ ಹಾಗೂ 7 ಕಾಮಗಾರಿಗಳ ಗುತ್ತಿಗೆದಾರರಿಗೆ ಒಟ್ಟು 65,09,553 ರೂ.ಗಳ ದಂಡ ವಿಧಿಸಲಾಗಿದೆ. ತುಮಕೂರು ನಗರವನ್ನು ಸ್ಮಾರ್ಟ್ ನಗರವನ್ನಾಗಿಸುವ ನಿಟ್ಟಿನಲ್ಲಿ ನಗರದಲ್ಲಿ ಸ್ಮಾರ್ಟ್‍ಸಿಟಿ ಲಿಮಿಟೆಡ್ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ ರವರು ಕಾಮಗಾರಿಗಳಿಗೆ ಸಂಬಂಧಿಸಿದ ನಕ್ಷೆ ಮತ್ತು ಇತರೆ ವಿವರಗಳನ್ನು ಸರಿಯಾದ ಸಮಯಕ್ಕೆ ನೀಡದೆ ಇರುವುದರಿಂದ ಕಾಮಗಾರಿಗಳ ಪ್ರಗತಿಯಲ್ಲಿ ವಿಳಂಬವಾಗುತ್ತಿದೆ ಎಂದು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪಾಲಿಕೆ ಆಯುಕ್ತ ಟಿ.ಭೂಬಾಲನ್ ತಿಳಿಸಿದ್ದಾರೆ. ಸ್ಮಾರ್ಟ್‍ಸಿಟಿ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ ಹಾಗೂ ಕಾಮಗಾರಿಗಳ ಗುತ್ತಿಗೆದಾರರಿಗೆ ವಿಧಿಸಿರುವ ದಂಡದ ವಿವರ ಇಂತಿದೆ. ಕೆ.ಆರ್. ಬಡಾವಣೆಯ ಬಸ್ ನಿಲ್ದಾಣದಿಂದ ರೂರಲ್ ಪೊಲೀಸ್ ಸ್ಟೇಷನ್ ವರೆಗಿನ ಫೀಲ್ಡ್ ಮಾರ್ಷಲ್ ಕಾರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುತ್ತಿಗೆದಾರ ಶ್ರೀ ಶ್ರೀನಿವಾಸ ಕನ್ಸ್‍ಸ್ಟ್ರಕ್ಷನ್ಸ್…
ಪಾವಗಡ : ಬಿಸಿಯೂಟ ಯೋಜನೆಯಲ್ಲಿ ವಸತಿನಿಲಯಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ನೀಡದೇ ಮಕ್ಕಳ ಬಾಯಿಗೆ ಮಣ್ಣು ಹಾಕುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಶಾಸಕ ವೆಂಕಟರವಣಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಶುಕ್ರವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರೆದಿದ್ದ ತಾಲ್ಲೂಕು ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಮಾತನಾಡುತ್ತಾ, ಶಾಲೆಗಳಲ್ಲಿನ ಬಿಸಿಯೂಟ ಯೋಜನೆಯಲ್ಲಿ, ಎಸ್.ಸಿ. ಎಸ್.ಟಿ. ಹಾಗೂ ಬಿ.ಸಿ.ಎಂ. ವಸತಿ ನಿಲಯಗಳಲ್ಲಿ ತರಕಾರಿ, ಎಣ್ಣೆ ಉಳಿಸಿಕೊಂಡು ಕಳಪೆ ಅಡುಗೆ ಮಾಡುವುದು ಕಂಡು ಬಂದಿದೆ. ಸಂಬಂಧಿಸಿದ ಅಕ್ಷರ ದಾಸೋಹ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಬಿ.ಇ.ಒ. ಸಿದ್ದಗಂಗಪ್ಪ, ಶಿವಣ್ಣ, ಮತ್ತು ಸುಬ್ಬರಾಯಗೆ ಎಚ್ಚರಿಕೆ ನೀಡಿದರು. ಅಲ್ಲದೇ ಪ್ರತಿನಿತ್ಯ ವಸತಿನಿಲಯಗಳಿಗೆ ಬೇಟಿ ನೀಡಿ ಮಕ್ಕಳ ಜೊತೆಯಲ್ಲಿ ಊಟ ಮಾಡಬೇಕೆಂದು ತಾಕೀತು ಮಾಡಿದರು. ಮೇವು ಬ್ಯಾಂಕ್‍ಗಳಲ್ಲಿ ಲೋಡ್ ಗಟ್ಟಲೆ ಹುಲ್ಲು ನೀಡುತ್ತಿದ್ದೀರ.. ಬಡ ರೈತರಿಗೆ ಅನ್ಯಾಯ ಮಾಡುತ್ತೀದ್ದಿರ ಎಂದು ಪಶು ವೈದ್ಯಾಧಿಕಾರಿ…