ತುಮಕೂರು: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ಅಧ್ಯಕ್ಷರಾಗಿ ಹೆಬ್ಬೂರು ಹೋಬಳಿ ಸಿರಿವರದ ಉಮೇಶ್‍ಗೌಡ ಮತ್ತು ಉಪಾಧ್ಯಕ್ಷರಾಗಿ ಬೆಳ್ಳಾವಿ ಹೋಬಳಿ ಕೊಟ್ಟನಹಳ್ಳಿ ಗೊಲ್ಲರಹಟ್ಟಿಯ ಶಿವರಾಜ್ ಬುಧವಾರ ಅಧಿಕಾರ ಸ್ವೀಕರಿಸಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 15 ಸದಸ್ಯರನ್ನು ಸರ್ಕಾರ ನಾಮರ್ದೇಶನ ಮಾಡಿದ್ದು, ಸಿರಿವರದ ಉಮೇಶ್‍ಗೌಡ ಅಧ್ಯಕ್ಷರಾಗಿ ಮತ್ತು ಕೊಟ್ಟನಹಳ್ಳಿ ಗೊಲ್ಲರಹಟ್ಟಿಯ ಶಿವರಾಜ್ ಉಪಾಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‍ಗೌಡ ಅವರು ಭೇಟಿ ನೀಡಿ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಶುಭ ಕೋರಿದರು. ಈ ವೇಳೆ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಕೊಡಿಸುವಂತಹ ಮಾರುಕಟ್ಟೆ ಇದಾಗಿದ್ದು, ಇಲ್ಲಿ ಭತ್ತ, ರಾಗಿ, ಜೋಳ ಈ ರೀತಿಯ ಬೆಳೆಗಳನ್ನು ರೈತರು ಮಾರಾಟ ಮಾಡಲು ಬರುತ್ತಾರೆ. ರೈತರಿಗೆ ಸರಿಯಾದ ಬೆಂಬಲ…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿಂದು 127 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1473ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ತುಮಕೂರು-60, ಶಿರಾ-6, ಪಾವಗಡ-10, ಮಧುಗಿರಿ ಹಾಗೂ ಗುಬ್ಬಿ ತಾಲೂಕಿನಲ್ಲಿ ತಲಾ 7, ಕುಣಿಗಲ್-13, ತಿಪಟೂರು-8, ಚಿಕ್ಕನಾಯಕನಹಳ್ಳಿ-1, ತುರುವೇಕೆರೆ-9, ಕೊರಟಗೆರೆ-6 ಸೇರಿದಂತೆ ಒಟ್ಟು 127 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಇಂದು ಜಿಲ್ಲಾಸ್ಪತ್ರೆಯಿಂದ 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 665 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 761 ಸಕ್ರಿಯ ಪ್ರಕರಣಗಳಿದ್ದು, ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ 47 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ಜಿಲ್ಲೆಯಲ್ಲಿಂದು 132 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1346ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ತುಮಕೂರು-56, ಶಿರಾ-5, ಪಾವಗಡ-5, ಗುಬ್ಬಿ-6, ಕುಣಿಗಲ್-22, ತಿಪಟೂರು-9, ಮಧುಗಿರಿ-8, ಚಿಕ್ಕನಾಯಕನಹಳ್ಳಿ-4, ತುರುವೇಕೆರೆ-13, ಕೊರಟಗೆರೆ-4 ಸೇರಿದಂತೆ ಒಟ್ಟು 132 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಇಂದು ಜಿಲ್ಲಾಸ್ಪತ್ರೆಯಿಂದ 33 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 636 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 667 ಸಕ್ರಿಯ ಪ್ರಕರಣಗಳಿದ್ದು, ಇಂದು ಒಬ್ಬರು ಮೃತಪಟ್ಟಿದ್ದು, ಈವರೆಗೆ 43 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ರಾಜ್ಯದ ಜನಹಿತಕ್ಕಾಗಿ ಹಲವಾರು ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಧಾರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ರಾಜ್ಯ ಸರ್ಕಾರದ ಅಧಿಕಾರಕ್ಕೆ ಬಂದು ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಸಂದರ್ಭದಲ್ಲಿ ವಿಧಾನ ಸೌಧದ ಬ್ಯಾಂಕ್ವೆಂಟ್ ಹಾಲ್‍ನಲ್ಲಿ ಏರ್ಪಡಿಸಿದ್ದ ಸರ್ಕಾರದ ಸಾಧನೆಯ ಕಿರು ಹೊತ್ತಿಗೆ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಿಸಲು ಜಿಲ್ಲಾ ಪಂಚಾಯತಿಯಲ್ಲಿ ಏರ್ಪಡಿಸಿದ್ದ ವೀಕ್ಷಣಾ ಕಾರ್ಯಕ್ರಮದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜನರ ವೈಯಕ್ತಿಕ ಜೀವನ, ಕೈಗಾರಿಕಾ ಅಭಿವೃದ್ಧಿ ಹಾಗೂ ವ್ಯಾಪಾರಸ್ಥರ ಅನುಕೂಲಕ್ಕಾಗಿ ಶಾಸನಾತ್ಮಕವಾಗಿ ಕೆಲಸ ಮಾಡುವ ಮೂಲಕ ಈ ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ ಎಂದರು. ಸಂಜೆ ಹೊತ್ತಿನಲ್ಲಿ ದುಡಿಯುವ ಮಹಿಳೆಯರ ಸುರಕ್ಷತೆಗಾಗಿ ಅಂಗಡಿ ಮತ್ತು ಸ್ಥಾಪನೆ ಕಾಯ್ದೆ ತಿದ್ದುಪಡಿ ಮಾಡಲಾಗಿದೆ ಹಾಗೂ ಯಾವುದೇ ಇಲಾಖೆಯ ನಿರಾಕ್ಷೇಪಣಾ ಪತ್ರವಿಲ್ಲದೆ ಹೊಸದಾಗಿ ಉದ್ಯಮ ಆರಂಭಿಸುವವರಿಗಾಗಿ ಕೈಗಾರಿಕಾ ಕಾಯ್ದೆಯಡಿ ಅನುಕೂಲ…
ಕೊರಟಗೆರೆ : ತಾಲೂಕಿನ ಸುಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ಕ್ಷೇತ್ರದ ದೇವಸ್ಥಾನ ಒಂದರ ಅರ್ಚಕರ ಮಡದಿಗೆ ಕಾಣಿಸಿಕೊಂಡಿದ್ದ ಕೊರೊನಾ ಪಾಸಿಟಿವ್ ವರದಿಯಿಂದ ದೇವಸ್ಥಾನ ಹಾಗೂ ಆವರಣವನ್ನು ಸೀಲ್ಡ್ ಮಾಡಲಾಗಿತ್ತು . ಇನ್ನೇನು ಇದೇ ತಿಂಗಳ 31 ರಂದು ವರಮಹಾಲಕ್ಷ್ಮಿ ಹಬ್ಬವಾಗಿದ್ದು ಕರುನಾಡಿನ ಸುಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ದೇವಿಯ ದರ್ಶನಕ್ಕೆ ಜುಲೈ 28 ರ ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಧುಗಿರಿ ಉಪವಿಭಾಗಾಧಿಕಾರಿ ಡಾ. ನಂದಿನಿದೇವಿ ಭಾನುವಾರ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ ತಾಲ್ಲೂಕಿನ ಪುಣ್ಯಕ್ಷೇತ್ರ ಶ್ರೀ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಿಯ ದೇವಾಲಯವನ್ನು ಜುಲೈ 27 ರಂದು ತೆರೆದು ಸ್ವಚ್ಛತೆ ಮತ್ತು ಕೊರೊನಾ ಭದ್ರತಾ ಕ್ರಮ ಕೈಗೊಂಡು ಮರುದಿನ ಮುಂಜಾನೆಯಿಂದ ಭಕ್ತರಿಗೆ ದೇವಿಯ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ . ಜುಲೈ ೩೧ ಶುಭ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ದಿನವೂ…
ತುಮಕೂರು: ಸೌಹಾರ್ದ, ಸಹಕಾರ ಕ್ಷೇತ್ರದಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಎನ್.ಎಸ್.ಜಯಕುಮಾರ್ ಅವರ ಸೇವೆ ಅನನ್ಯವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು. ತುಮಕೂರು ತಾಲ್ಲೂಕು ಯಲ್ಲಾಪುರದಲ್ಲಿ ಟಿಎಂಸಿಸಿ ನಾಲ್ಕನೇ ಎಟಿಎಂ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರಿನಿಂದ ಆರಂಭವಾದ ಟಿಎಂಸಿಸಿ ಕಾರ್ಯಚಟುವಟಿಕೆ ದೇಶದ ಹಲವೆಡೆ ಕಾರ್ಯನಿರ್ವಹಿಸುವಂತಾಗಿದ್ದು, ದೇಶ ವ್ಯಾಪಿ ಟಿಎಂಸಿಸಿ ಕಾರ್ಯನಿರ್ವಹಿಸುವಂತಾಗಲಿ ಎಂದು ಆಶಿಸಿದರು. ಬ್ಯಾಂಕ್ ಲಾಭವನ್ನು ಬಡವರ ಸೇವೆಗೆ ಉಪಯೋಗಿಸುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿರುವ ಟಿಎಂಸಿಸಿ ಈಗಾಗಲೇ ಕೊರೋನಾ ವಾರಿಯರ್ಸ್ ಗಳಿಗೆ ಪಿಪಿಇ ಕಿಟ್ ಹಾಗೂ ಪೌರ ಕಾರ್ಮಿಕರಿಗೆ ಸಮವಸ್ತ್ರಗಳನ್ನು ನೀಡಲು ಮುಂದೆ ಬಂದಿದ್ದು, ಇಂತಹ ಸೇವೆಯನ್ನು ಮಾಡಲು ಉಳ್ಳವರು ಮುಂದೆ ಬರಬೇಕೆಂದು ಸಲಹೆ ನೀಡಿದರು. ಟಿಎಂಸಿಸಿ ನಮ್ಮ ಬ್ಯಾಂಕ್ ಎನ್ನುವ ಭಾವನೆ ಜನರಲ್ಲಿ ಮೂಡಿರುವುದರಿಂದಲೇ ಇಂದು ಉತ್ತಮ ಸೇವೆಯನ್ನು ನೀಡುವುದರೊಂದಿಗೆ ಟಿಎಂಸಿಸಿ ಲಾಭಾಂಶವನ್ನು ಷೇರುದಾರರಿಗೆ ಒದಗಿಸುತ್ತಿದ್ದು, ಜನರ ನಂಬಿಕೆಯನ್ನು ಹೆಚ್ಚಿಸಿಕೊಂಡು…
ತುಮಕೂರು: ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳಲ್ಲಿ ಜುಲೈ 30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಜಿಲ್ಲಾ ದಂಡಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳು ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಷೇಧಾಜ್ಞೆಯು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 10 ರಿಂದ ಸಂಜೆ 4-30ಗಂಟೆವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ಈ ಅವಧಿಯಲ್ಲಿ ನಿಷೇಧಿತ ಪ್ರದೇಶಗಳಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು : ಪ್ರಸಿದ್ಧ ಗೊರವನಹಳ್ಳಿ ವರಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿರುವ ಮಾರಮ್ಮ ದೇಗುಲದ ಅರ್ಚಕರ ಪತ್ನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ವರಮಹಾಲಕ್ಷ್ಮಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಇತ್ತೀಚೆಗೆ ದೇವಾಲಯದ ಅರ್ಚಕರ ಪತ್ನಿಗೆ ಕೊರೋನಾ ಸೋಂಕು ದೃಡಪಟ್ಟಿತ್ತು, ಇದೀಗ ಅವರು ಗುಣಮುಖವಾಗಿ ಮನೆಗೆ ಬಂದಿದ್ದಾರೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೇವಸ್ಥಾನದ ಮೂಲಗಳು ಸ್ಪಷ್ಟಪಡಿಸಿವೆ. ಜುಲೈ 20ರಿಂದ ದೇವಸ್ಥಾನದ ಬಾಗಿಲು ಮುಚ್ಚಲಾಗಿದ್ದು, ಭಕ್ತರ ದರ್ಶನ ಹಾಗೂ ಪೂಜೆಗೆ ನಿರ್ಬಂಧ ವಿಧಿಸಲಾಗಿದೆ. ಪೂಜೆ-ಪುನಸ್ಕಾರವನ್ನು ಸ್ಥಗಿತಗೊಳಿಸಲಾಗಿದೆ.
ಗುಬ್ಬಿ: ಮೂಲಭೂತ ಸೌಲಭ್ಯ ಒದಗಿಸುವ ಅಭಿವೃದ್ಧಿ ಕೆಲಸಗಳೇ ಮರೀಚಿಕೆಯಾದ ಹಿನ್ನಲೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಮತ ಬಹಿಷ್ಕರಿಸಲು ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜವರೇಗೌಡನಪಾಳ್ಯ ಗ್ರಾಮಸ್ಥರು ಒಕ್ಕರಲಿನ ತೀರ್ಮಾನಕ್ಕೆ ನಿಂತಿದ್ದಾರೆ. ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಬ್ಯಾಡಗೆರೆ ಕ್ಷೇತ್ರಕ್ಕೆ ಒಳಪಟ್ಟ ಮೂರು ಗ್ರಾಮಗಳಿಂದ ಒಟ್ಟು 700 ಮತದಾರರಿದ್ದಾರೆ. ಪಂಚಾಯಿತಿ ನಿಯಮಾನುಸಾರ ಈ ಕ್ಷೇತ್ರ ಎರಡು ಸದಸ್ಯತ್ವ ಪಡೆಯಬೇಕಿದೆ. ಈ ಬಗ್ಗೆ ಕಳೆದ 5 ವರ್ಷದ ಹಿಂದೆಯೇ ಪ್ರಸ್ತಾಪ ಮಾಡಿ ಮತದಾನ ಬಹಿಷ್ಕಾರದ ಪ್ರತಿಭಟನೆ ನಡೆಸಲಾಗಿತ್ತು. ಯಾವುದೇ ಮೂಲ ಸವಲತ್ತು ಪಡೆಯಲು ಬಹಿಷ್ಕಾರದ ಅಸ್ತ್ರ ಬಳಸಬೇಕಿದೆ. ಚುನಾವಣಾ ಸಂದರ್ಭದಲ್ಲಿ ಮಾತ್ರವೇ ಒಂದಿಷ್ಟು ಕೆಲಸ ಮಾಡಿಕೊಡುವ ಅಧಿಕಾರಿಗಳು ಪ್ರತಿಭಟನೆಗೆ ಮಾತ್ರ ಬೆಲೆ ನೀಡುತ್ತಿದ್ದಾರೆ. ಮೌಖಿಕ ಚರ್ಚೆ ಮಾಡಿದರೆ ವರ್ಷನಾಗಟ್ಟಲೇ ಯಾವ ಕೆಲಸ ಮಾಡಿಕೊಡುವುದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಇದೇ ಗ್ರಾಮ ಪಂಚಾಯಿತಿಯಲ್ಲಿ 470 ಮತದಾರರು, 550 ಜನಸಂಖ್ಯೆ ಇರುವ…
ತುಮಕೂರು : ಜಿಲ್ಲೆಯಲ್ಲಿ ಇಂದು 119 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1110 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ತುಮಕೂರು-49, ಮಧುಗಿರಿ-9, ಗುಬ್ಬಿ-01, ತಿಪಟೂರಿನಲ್ಲಿ -09 , ಕುಣಿಗಲ್ -08, ತುರುವೇಕೆರೆ-05, ಚಿಕ್ಕನಾಯಕನಹಳ್ಳಿ-13, ಕೊರಟಗೆರೆ-08, ಪಾವಗಡ-13, ಶಿರಾ -03 ಸೇರಿದಂತೆ ಒಟ್ಟು 119 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 43 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 595 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 473 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 42 ಮಂದಿ ಸಾವನ್ನಪ್ಪಿದ್ದು, ಶುಕ್ರವಾರ-04 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.











