ಕೊರಟಗೆರೆ: ಮದುವೆಯಾಗಿ ಕೇವಲ 21ದಿನಕ್ಕೆ ಆಷಾಡ ಮಾಸದ ಪ್ರಯುಕ್ತ ತವರು ಮನೆಗೆ ಆಗಮಿಸಿದ್ದ ಪೂಜಾ ಎಂಬಾಕೆ ತಂದೆ ಮನೆಯಲ್ಲಿನ ತೀರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ತಾಲೂಕಿನ ಹೊಳವನಹಳ್ಳಿ ಹೋಬಳಿ ದುಗ್ಗೇನಹಳ್ಳಿ ಗ್ರಾಮದ ವೀರೆಗೌಡನ ಮಗಳಾದ ಪೂಜಾ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮದುವೆಯಾದ ನಂತರ ಮೊದಲ ಸಲ ತವರು ಮನೆಗೆ ಆಗಮಿಸಿದ್ದ ಪೂಜಾ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೋಳಾಲ ಹೋಬಳಿ ವ್ಯಾಪ್ತಿಯ ಲಕ್ಕಮುತ್ತನಹಳ್ಳಿ ಗ್ರಾಮದ ಹನುಮಂತರಾಯಪ್ಪನ ಮಗ ಪ್ರದೀಪ್ ಎಂಬಾತನ ಜೊತೆ ಕಳೆದ 21ದಿನದ ಹಿಂದಷ್ಟೆ ಮದುವೆಯಾಗಿದ್ದಾಳೆ. ಆಷಾಡ ಮಾಸದ ಪ್ರಯುಕ್ತ ತವರು ಮನೆಗೆ ಆಗಮಿಸಿದ ವೇಳೆ ದುರ್ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ಪೂಜಾಳನ್ನು ಕೊರಟಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಗೋವಿಂದರಾಜು, ಸಿಪಿಐ ನದಾಫ್, ಪಿಎಸೈ ಮುತ್ತುರಾಜು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
Author: News Desk Benkiyabale
ಗುಬ್ಬಿ: ತಾಲ್ಲೂಕಿನ ಚೇಳೂರು ಸಮೀಪದ ಅಂತಾಪುರ ಕೋಡಿ ಎಂಬ ಗ್ರಾಮದಲ್ಲಿ ಕಾಣಿಸಿಕೊಂಡ ಮೂರನೇ ಕೊರೋನಾ ಸೋಂಕಿತ ಪ್ರಕರಣ ಇಡೀ ತಾಲ್ಲೂಕಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಚೇಳೂರು ಕಲ್ಯಾಣ ಮಂಟಪದಲ್ಲಿ ಕ್ವಾರೆಂಟೈನ್‍ನಲ್ಲಿದ್ದ ದೆಹಲಿ ಮೂಲದ ಕ್ರೇನ್ ಆಟರೇಟರ್ ಎತ್ತಿನಹೊಳೆ ಯೋಜನೆ ಕೆಲಸಕ್ಕೆ ಬರುವಾಗ್ಗೆ ಕೊರೋನಾ ವೈರಸ್ ಅಂಟಿಸಿಕೊಂಡು ಬಂದಿದ್ದು ತಾಲ್ಲೂಕಿಗೆ ಪಾದಾರ್ಪಣೆ ಎಂದೆನಿಸಿತು. ಈತನ ಸಂಪರ್ಕಕ್ಕೆ ಬಂದವರ ಸಂಖ್ಯೆ ಕಡಿಮೆ ಎನಿಸಿದ ಹಿನ್ನಲೆ ಜನರಲ್ಲಿ ಈ ಪ್ರಕರಣ ಬಗ್ಗೆ ಹೆಚ್ಚಿನ ಗಮನ ಸಿಗಿಲಿಲ್ಲ. ನಂತರ ಗುಬ್ಬಿ ಸಮೀಪದ ಕಿಟ್ಟದಕುಪ್ಪೆ ಗ್ರಾಮದಲ್ಲಿ ಕಾಣಿಸಿಕೊಂಡ ಅಡುಗೆ ತಯಾರಕನಲ್ಲಿನ ವೈರಸ್ ಪಾಸಿಟೀವ್ ಇಡೀ ತಾಲ್ಲೂಕಿಗೆ ಬೆಚ್ಚಿಬೀಳಿಸಿತ್ತು. ಮೂರು ದಿನದಲ್ಲೇ ಮೂರನೇ ಪ್ರಕರಣ ಅಂತಾಪುರ ಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಕಾಣಿಸಿರುವುದು ಸಮುದಾಯ ಹರಡುವಿಕೆಗೆ ಸಾಕ್ಷಿಯಾಗುತ್ತಿದೆ ಎಂಬ ಆತಂಕ ಮೂಡಿಸಿದೆ. ಚೇಳೂರಿನಿಂದ ಶಿರಾ ಮಾರ್ಗ ಮಧ್ಯೆ ಸಿಗುವ 40 ಮನೆಯ ಅಂತಾಪುರ ಸಣ್ಣ ಗ್ರಾಮದಲ್ಲಿ…
ಗುಬ್ಬಿ: ಮೈನಿಂಗ್ ನಡೆಯುವ ಸ್ಥಳಗಳಿಗಿಂತ ಭಿನ್ನವಾಗಿ ಕೆರೆಕಟ್ಟೆಗಳಲ್ಲಿ ಮಣ್ಣು ತೆಗೆಯುವ ಕೆಲಸ ನಿರಂತರವಾಗಿ ತಾಲ್ಲೂಕಿನ ಕಸಬ ಹೋಬಳಿಯಲ್ಲಿ ಹೆಚ್ಚಾಗಿ ನಡೆದಿದೆ. ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಕೆರೆಕಟ್ಟೆಗಳಲ್ಲಿ ನಿಯಮ ಮೀರಿ ಮಣ್ಣು ಸಾಗಿಸಿರುವುದು ಪ್ರಕೃತಿಗೆ ವಿರುದ್ಧವಾದದ್ಧು ಎಂದು ಸಾಮಾಜಿಕ ಹೋರಾಟಗಾರರು ಆರೋಪಿಸಿದ್ದಾರೆ. ಗುಬ್ಬಿ ಪಟ್ಟಣದ ಹೊರವಲಯದಲ್ಲಿ ಹಾದು ಹೋಗುತ್ತಿರುವ ಹೆದ್ದಾರಿ ಸರ್ವಿಸ್ ರಸ್ತೆ ನಿರ್ಮಾಣದಲ್ಲಿ ಫ್ಲೈಓವರ್ ಸೇತುವೆಗಳ ನಿರ್ಮಾಣ ಮಾಡಬೇಕಾಗಿರುವ ಕಾರಣ ಮಣ್ಣಿನ ಅಗತ್ಯತೆ ಇತ್ತು. ಆದರೆ ಮಣ್ಣು ಸಮೀಪದಲ್ಲೇ ಹುಡುಕಲು ಮುಂದಾದ ಗುತ್ತಿಗೆದಾರರು ರಸ್ತೆ ನಿರ್ಮಾಣದ ಅಕ್ಕಪಕ್ಕದ ಕೆರೆಕಟ್ಟೆ, ಗೋಮಾಳ, ಗೋಕಟ್ಟೆ, ಅರಣ್ಯ ಪ್ರದೇಶ ಸ್ಥಳಗಳ ಜತೆಗೆ ರೈತರ ಜಮೀನಿನಲ್ಲಿ ಸಹ ಮಣ್ಣು ಸಾಗಿಸಲು ಆರಂಭಿಸಿದರು. ದಿನ ಕಳೆದಂತೆ ಕೆರೆಗಳ ಆಕೃತಿಯೇ ವಿಚಿತ್ರವಾಗಿದ್ದು ಕೆಲ ಪ್ರಜ್ಞಾವಂತ ರೈತರಲ್ಲಿ ಆತಂಕ ತಂದಿದೆ. ಸರ್ಕಾರದ ನಿಯಮ ಪ್ರಕಾರ ನಾಲ್ಕೈದು ಅಡಿಗಳಿಂತ ಆಳ ತೊಡುವಂತಿಲ್ಲ. ಆದರೆ ಸುಮಾರು 50 ಅಡಿಗಳ ಆಳಕ್ಕೂ ಹೊರಟ ಜೆಸಿಬಿ ಯಂತ್ರಗಳು ಬಿಡುವಿಲ್ಲದೇ…
ತುಮಕೂರು: ಜೂನ್-25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಪ್ರಾರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸರ್ ಮಾಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ. ತುಮಕೂರು ಮಹಾನಗರ ಪಾಲಿಕೆಗೆ ಒಳಪಡುವ ಪರೀಕ್ಷಾ ಕೇಂದ್ರಗಳಿಗೆ ಮಹಾನಗರ ಪಾಲಿಕೆಯ ಮೇಯರ್ ಭೇಟಿ ನೀಡಿ ಪಾಲಿಕೆಯ ವತಿಯಿಂದ ಶಾಲಾ ಆವರಣವನ್ನು ಕೊಠಡಿಗಳನ್ನು ವೀಕ್ಷಿಸಿ ಸಾಹಿತ್ಯ ಮಾಡಿಸಿದರು ಈ ವೇಳೆ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕಾಮಾಕ್ಷಿ ಜೂನ್ 25ರಿಂದ ಎಸ್‍ಎಸ್‍ಎಲ್‍ಸಿಪರೀಕ್ಷೆ ಗಳು ಪ್ರಾರಂಭವಾಗುತ್ತಿದೆ ತುಮಕೂರಿನಲ್ಲಿ 33 ಪರೀಕ್ಷಾ ಕೇಂದ್ರಗಳು ಇವೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು ಪೋಷಕರಲ್ಲಿ ಸಾರ್ವಜನಿಕರಲ್ಲಿ ಮನವಿ ಎಂದರೆ ಎಲ್ಲರೂ ಕೈಜೋಡಿಸುವ ಮೂಲಕ ಸರಾಗವಾಗಿ ನಡೆಯಲು ಸಹಕರಿಸಬೇಕೆಂದು ಕೋರಿದರು ಪೋಷಕರು ತಮ್ಮ ಮಕ್ಕಳ ಆತಂಕಪಡುವ ಅಗತ್ಯವಿಲ್ಲ ನಿಮ್ಮ ಮಕ್ಕಳು ನಮ್ಮ ಮಕ್ಕಳು ಇದ್ದಂತೆ ಎಲ್ಲರೂ ಜಾಗರೂಕತೆಯಿಂದ ಈ ಪರೀಕ್ಷೆಯನ್ನು ಯಶಸ್ವಿಗೊಳಿಸೋಣ ಎಂದರು. …
ಚಿಕ್ಕನಾಯಕನಹಳ್ಳಿ: ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾದ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಸೂಕ್ತ ಸಲಹೆ ನೀಡಿದರು. ಪಟ್ಟಣದ ಹೊಸಬೀದಿ ಬಳಿಯ ಹಿರಿಯಣ್ಣನ ಹಟ್ಟಿವಾಸಿ ಮಹಿಳೆಯೊಬ್ಬರಿಗೆ ಕೊರೊನಾ ಧೃಡಪಟ್ಟ ಹಿನ್ನಲೆಯಲ್ಲಿ ಈ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿತ್ತು. ಸದರಿ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್‍ಕುಮಾರ್ ಭೇಟಿ ನೀಡಿ ಸ್ಥಳಪರೀಶೀಲಿಸಿದರು. ನಂತರ ತಹಸೀಲ್ದಾರ್, ಆರೋಗ್ಯ ಸಿಬ್ಬಂದಿ, ಪುರಸಭಾ ಅಧಿಕಾರಿವರ್ಗ ಹಾಗೂ ಪೊಲೀಸ್ ಸಿಬ್ಬಂದಿಗೆ ಹಲವು ನಿರ್ದೇಶನ ನೀಡಿದರು. ಮೊದಲ ಪ್ರಕರಣದಿಂದ ಪಟ್ಟಣದ ಜನತೆ ಭಯಭೀತಗೊಂಡಿರುವ ಹಿನ್ನಲೆಯಲ್ಲಿ ಜನರಿಗೆ ಸೂಕ್ತ ತಿಳುವಳಿಕೆ ಅಗತ್ಯವಿದೆ, ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಜಾಗ್ರತೆ ಹಾಗೂ ರಕ್ಷಣಾತ್ಮಕ ಕ್ರಮಗಳ ಬಗ್ಗೆ ತಿಳುವಳಿಕೆ ನೀಡುವ ಮೂಲಕ ಜನರನ್ನು ಭಯ ಹಾಗೂ ಭೀತಿಯಿಂದ ಮುಕ್ತಗೊಳಿಸಬೇಕಿದೆ ಎಂದರು. ಈವರೆಗೂ ಸೋಂಕಿತ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿರುವ 16 ಮಂದಿಯ ಗಂಟಲುದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇವರಪೈಕಿ 14 ಮಂದಿಯನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಸೋಕಿತ ಮಹಿಳೆಯು ಗಾರೆ…
ತುಮಕೂರು: ತುಮಕೂರು ಜಿಲ್ಲೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಬಿ.ಸುರೇಶ್‍ಗೌಡರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿರುತ್ತಾರೆ. ನೂತನ ಜಿಲ್ಲಾಧ್ಯಕ್ಷ ಸ್ಥಾನದ ಸಾರಥ್ಯವನ್ನು ವಹಿಸಿಕೊಳ್ಳಲು ಸನ್ನದ್ಧರಾಗಿರುವ ಬಿ.ಸುರೇಶ್‍ಗೌಡ ಹಿಂದೆ ಬಿಜೆಪಿಯ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎರಡು ಬಾರಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ. ಒಂದು ಬಾರಿ ಮೈಸೂರು ಪೇಪರ್ ಮಿಲ್ಸ್‍ನ (ನಿಗಮ-ಮಂಡಳಿ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರ ಸುರೇಶ್‍ಗೌಡರು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಜಿಲ್ಲಾಧ್ಯಕ್ಷರಾಗಿ ಎರಡನೇ ಬಾರಿ ಮರು ನೇಮಕಗೊಂಡಿರುತ್ತಾರೆ. ಇವರ ಆಯ್ಕೆಯನ್ನು ಕಂಡು ಅವರ ಅಭಿಮಾನಿ ಬಳಗ ಸಂಭ್ರಮಿಸಿದೆ.
ತುಮಕೂರು: ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 4ರವರೆಗೆ ತುಮಕೂರು(ದ) ಶೈಕ್ಷಣಿಕ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ಸೇರಿದಂತೆ ಒಟ್ಟು 144 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ. ಪರೀಕ್ಷೆಗೆ 37306 ವಿದ್ಯಾರ್ಥಿಗಳು ನೋಂದಣಿ: ತುಮಕೂರು ಶೈಕ್ಷಣಿಕ ಜಿಲ್ಲೆಯ 23783 ಹಾಗೂ ಮಧುಗಿರಿಯ 13523 ಸೇರಿದಂತೆ ಒಟ್ಟು 37306 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಈ ಪೈಕಿ ಜಿಲ್ಲೆಯ 20329 ಬಾಲಕರು ಹಾಗೂ 16977 ಬಾಲಕಿಯರಿದ್ದು, ಇವರಲ್ಲಿ 34366(ಪ್ರಥಮ ಪ್ರಯತ್ನ), 2082(ಪುನರಾವರ್ತಿತ), 587(ಖಾಸಗಿ), 204(ಖಾಸಗಿ ಪುನರಾವರ್ತಿತ), 67(ಪುನರಾವರ್ತಿತ ಹಳೆಯ) ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೋವಿಡ್-19ರ ಹಿನ್ನೆಲೆಯಲ್ಲಿ ಸುರಕ್ಷತೆಯೊಂದಿಗೆ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. 144 ಪರೀಕ್ಷಾ ಕೇಂದ್ರ : ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ತುಮಕೂರಿನ 85 ಹಾಗೂ ಮಧುಗಿರಿಯ 59 ಸೇರಿದಂತೆ ಒಟ್ಟು 144 ಪರೀಕ್ಷಾ…
ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕು ರತ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರೀನಿವಾಸಪ್ಪ ಎಂಬ ರೈತ ತಮ್ಮ ಜಮೀನಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದರಿಂದ ಈತನ ಕುಟುಂಬಕ್ಕೆ 40ಸಾವಿರ ರೂ.ಗಳ ಆದಾಯ(ಕೂಲಿ ಹಣ) ದೊರೆತಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ. ರೈತ ಶ್ರೀನಿವಾಸಪ್ಪ ಅವರು ತಮಗಿರುವ 5 ಎಕರೆ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಇದರಿಂದ ಮಳೆಗಾಲದಲ್ಲಿ ಬದುಗಳಲ್ಲಿ ನೀರು ಶೇಖರಣೆಯಾಗಿ ತೇವಾಂಶ ಹೆಚ್ಚಿ ಕೃಷಿಯಲ್ಲಿ ಸುಮಾರು 10 ರಿಂದ 15ರಷ್ಟು ಹೆಚ್ಚಿನ ಇಳುವರಿ ಪಡೆಯಬಹುದಲ್ಲದೆ ಬದುವಿನ ಮೇಲೆ ಗಿಡಗಳನ್ನು ನೆಟ್ಟು ಬದು ಬೇಸಾಯ ಸಹ ಮಾಡಬಹುದಾಗಿದೆ. ಈ ಕಾಮಗಾರಿಯಿಂದಾಗಿ ರೈತ ಕುಟುಂಬಕ್ಕೆ 146 ಮಾನವ ದಿನಗಳ ಸೃಜನೆಯಾಗುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವಲ್ಲಿ ಯೋಜನೆಯು ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಕೃಷಿಹೊಂಡ ನಿರ್ಮಾಣದಿಂದ ಜಲ ಮರುಪೂರಣ : …
ತುಮಕೂರು: ಜಿಲ್ಲೆಯಲ್ಲಿ ಜೂನ್ 25ರಿಂದ ಜುಲೈ 2ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಯಾವುದೇ ವಿದ್ಯಾರ್ಥಿಯು ಗೈರು ಹಾಜರಾಗಬಾರದಂತೆ ಎಚ್ಚರವಹಿಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವ ಸಿದ್ಧತಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲೆ ಯಶಸ್ವಿಯಾಗಿರುವಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸಮಪರ್ಕವಾಗಿ, ವ್ಯವಸ್ಥಿತವಾಗಿ ಮಾಡಬೇಕು. ಮಕ್ಕಳು ಭಯಪಡದೇ ಪರೀಕ್ಷೆ ಬರೆಯುವಂತಾಗಬೇಕು. ಅಲ್ಲದೇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮನೆಯಿಂದಲೇ ಬಿಸಿ ನೀರನ್ನು/ಬಿಸಿ ಆರಿದ ನೀರು ತರುವಂತೆ ತಿಳಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳ ಮನಸ್ಥಿತಿ ಕೆಡದಂತೆ ಎಚ್ಚರವಹಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗದಂತೆ ಒಂದು ದಿನದ ಮೊದಲೇ ಕೊಠಡಿಗಳ ವಿವರಗಳನ್ನು ಮೊಬೈಲ್‍ಗೆ ಸಂದೇಶ…
ತುಮಕೂರು: ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 3ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾದ್ಯಂತ 144 ಪರೀಕ್ಷಾ ಕೇಂದ್ರ ಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಪಾರ ದರ್ಶಕವಾಗಿ ನಡೆಸುವ ದೃಷ್ಟಿಯಿಂದ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆಯು ಜೂನ್ 25 ರಿಂದ ಜುಲೈ 3ರವರೆಗೆ (ಪರೀಕ್ಷೆ ನಡೆಯುವ ದಿನಗಳಂದು) ಬೆಳಿಗ್ಗೆ 9 ರಿಂದ ಸಂಜೆ 5-30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಿಷೇಧಾವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು. ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವಂತಿಲ್ಲ. ನಿಷೇಧವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು. ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು…











