Author: News Desk Benkiyabale

ತುಮಕೂರು:       ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 1952 ರಿಂದ 2014ರವರೆಗಿನ ಚುನಾವಣಾ ಹಿನ್ನೋಟ ಕೈಪಿಡಿಯನ್ನು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಬಿಡುಗಡೆ ಮಾಡಿದರು.       ತಮ್ಮ ಕಚೇರಿಯಲ್ಲಿಂದು ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಏ.18ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾಧ್ಯಮ ಮಿತ್ರರಿಗೆ ಅನುಕೂಲವಾಗುವಂತೆ ಈ ಕೈಪಿಡಿಯನ್ನು ತಯಾರಿಸಲಾಗಿದ್ದು, ಕೈಪಿಡಿಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿವರ, 2019ರ ಏ.9ಕ್ಕೆ ಇದ್ದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರವಾರು ಮತದಾರರ ಸಂಖ್ಯೆ, ಮತಗಟ್ಟೆಗಳ ವಿವರದೊಂದಿಗೆ 1952-2014ರವರೆಗಿನ ಲೋಕಸಭಾ ಚುನಾವಣಾ ಅಂಕಿ-ಅಂಶಗಳನ್ನು ನೀಡಲಾಗಿದೆ. ಕೈಪಿಡಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕಿ ಆರ್.ರೂಪಕಲಾ ಅವರು ಸಿದ್ಧಪಡಿಸಿದ್ದು, 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಧ್ಯಮ ಮಿತ್ರರಿಗೆ ಈ ಕೈಪಿಡಿ ಸದುಪಯೋಗವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.       ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಅವರು ಕೈಪಿಡಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಚುನಾವಣಾ ಶಾಖೆಯ…

Read More

ತುಮಕೂರು:       ಜಿಲ್ಲೆಯ ಮತದಾರರು ಈ ಬಾರಿ ನನ್ನ ಕೈ ಹಿಡಿದರೆ,ಅವರ ಋಣ ತೀರಿಸಿಯೇ ಜಿಲ್ಲೆಯಿಂದ ನಿಗರ್ಮಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.      ಜಿಲ್ಲಾ ಕುಂಚಿಟಿಗರ ಸಮುದಾಯಭವನದಲ್ಲಿ ತುಮಕೂರು ಜಿಲ್ಲಾ ಮಡಿವಾಳ ಸಮಾಜ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ಜಿಲ್ಲೆಯ ಮತದಾರರು ವಿರೋಧ ಪಕ್ಷದವರು ಮಾಡುವ ಅಪಪ್ರಚಾರಗಳಿಗೆ ಕಿವಿಗೊಡದೆ,ನನ್ನನ್ನು ಆರಿಸಿ ಕಳುಹಿಸಿಕೊಡಿ, ಜಿಲ್ಲೆಯ ನೀರಾವರಿ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಯೇ ಇಲ್ಲಿಂದ ನಿಗರ್ಮಿಸುತ್ತೇನೆ.ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಎಂದಿಗೂ ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ.ನನ್ನ ಜೀವನದ ಕೊನೆಯ ವರೆಗೂ ಅದನ್ನು ಉಳಿಸಿಕೊಂಡು ಹೋಗಲಿದ್ದೇನೆ ಎಂದರು.       ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ 16 ಲಕ್ಷ ಮತದಾರರಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಮತಗಳು ಸುಮಾರು 23 ಸಣ್ಣ ಸಣ್ಣ ಸಮುದಾಯಗಳಿಗೆ ಸೇರಿದ್ದು,ಅವರ ಸ್ಥಿತಿಗತಿಯನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ.ನೀರಾವರಿ…

Read More

 ಕುಣಿಗಲ್:       ಎಡೆಯೂರು ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವ ಚಾಲನೆಗೂ ಮುನ್ನ ಮೊದಲ ಪೂಜೆಯ ಷಟಸ್ಥ್ಥ ಧ್ವಜ ಹರಾಜು ನಡೆಯಿತು. ಬೆಳಗಾವಿ ಹರೇಮಠ ಅಮರನಾಥ ಗುರುಕುಲದ ಚಂದ್ರಶೇಖರ್ ಶಾಸ್ತ್ರಿ 2.46 ಲಕ್ಷ ರೂಪಾಯಿಗೆ ಪಡೆದರು.       ಮಧ್ಯಾಹ್ನ 12.30ಕ್ಕೆ ರಥದ ಗಾಲಿಗೆ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ತೆಂಗಿನಕಾಯಿ ಒಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಸುಡುವ ಬಿಸಿಲು ಲೆಕ್ಕಿಸದೆ ರಾಜ್ಯದ ನಾನಾ ಭಾಗದಿಂದ ಬಂದಿದ್ದ ಭಕ್ತರು ರಥಕ್ಕೆ ಹೂ, ಧವನ, ಬಾಳೆಹಣ್ಣು ಹಾಗೂ ಕರಿ ಮೆಣಸು ತೂರಿ ಹರಕೆ ಸಲ್ಲಿಸಿದರು. ಭಕ್ತರ ದಣಿವಾರಿಸಲು ದಾರಿಯುದ್ದಕ್ಕೂ ನೀರು, ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಿಸಲಾಯಿತು.       ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಯದುವೀರ, ಆರ್ಎಲ್ ಸಮೂಹ ಸಂಸ್ಥೆ ಚೇರ್ಮನ್ ಡಾ.ವಿಜಯ ಸಂಕೇಶ್ವರ, ಬಾಳೆಹೊನ್ನೂರು ಶಾಖಾ ಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಕುಪ್ಪೂರು…

Read More

ತುಮಕೂರು :       ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ವಿರುದ್ಧ ದೇಶದಾದ್ಯಂತ ದೊಡ್ಡ ಶಕ್ತಿ ರೂಪುಗೊಳ್ಳಲು ದೇವೇಗೌಡರ ಪಾತ್ರ ಪ್ರಮುಖವಾದದ್ದು. ಇತರೆ ರಾಜ್ಯಗಳ ಪ್ರಾದೇಶಿಕ ಪಕ್ಷಗಳನ್ನು ಬಿಜೆಪಿ ವಿರುದ್ಧ ಸಂಘಟಿಸುವಲ್ಲಿ ಪ್ರಮುಖ ದೇವೇಗೌಡರು ಕಾರಣಕರ್ತರಾಗಿದ್ದಾರೆ ಎಂದು ಸಂಸದ ಎಸ್ ಪಿ ಮುದ್ದಹನುಮೇಗೌಡರು ಹೇಳಿದರು.       ನಗರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಕಾನೂನು ಮತ್ತು ಮಾನವಹಕ್ಕುಗಳ ವಿಭಾಗ ಏರ್ಪಡಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವ ವಕೀಲರ ಸಮಾವೇಶದಲ್ಲಿ ಮಾತನಾಡಿದ ಮುದ್ದಹನುಮೇಗೌಡರು, ಇಡೀದೇಶದಲ್ಲಿ ಆಡಳಿತ ಪಕ್ಷದ ವಿರುದ್ದ ವಿವಿಧ ಪಕ್ಷಗಳ ಸಂಘಟಿಸುವ ಕಾರ್ಯದಲ್ಲಿ ದೇವೇಗೌಡರು ಮುಂಚೂಣಿಯಲ್ಲಿರುವ ಕಾರಣ, ಇವರು ಸ್ಪರ್ಧಿಸಿರುವ ತುಮಕೂರು ಕ್ಷೇತ್ರದ ಚುನಾವಣೆ ಮಹತ್ವ ಪಡೆದಿದ್ದು ದೇವೇಗೌಡರನ್ನು ಗೆಲ್ಲಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.       ತಮ್ಮ ಕಾಂಗ್ರೆಸ್ ಪಕ್ಷದ ತೀರ್ಮಾನದಂತೆ ತಾವು ಕ್ಷೇತ್ರವನ್ನು ದೇವೇಗೌಡರಿಗೆ ಬಿಟ್ಟುಕೊಡಬೇಕಾಯಿತು. ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್ ಅವರು ತಮಗೆ ದೂರವಾಣಿ ಕರೆ…

Read More

ತುಮಕೂರು:       ಹೇಮಾವತಿ ನೀರಿನ ಹಂಚಿಕೆ ವಿಚಾರದಲ್ಲಿ ದೇವೇಗೌಡರ ಕುಟುಂಬ ಪ್ರಾಣ ಹೋಗುವವರೆಗೂ ತುಮಕೂರು ಜಿಲ್ಲೆಗೆ ದ್ರೋಹ ಮಾಡಲ್ಲ, ಜಿಲ್ಲೆಯ ಬಿಜೆಪಿ ನಾಯಕರು ತಮ್ಮ ಸ್ವಾರ್ಥಕ್ಕಾಗಿ ನಮ್ಮ ಕುಟುಂಬದ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ವಾಗ್ದಾಳಿ ಮಾಡಿದರು.       ಅವರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಗೂಳೂರಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಪಕ್ಷದ ಕಾರ್ಯಕರ್ತರ ಬೃಹತ್ ಬಹಿರಂಗ ಸಮಾವೇಶ ಹಾಗು ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಆಯೋಜಿತವಾಗಿದ್ದ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡುತ್ತಿದ್ದರು.       ಕಾವೇರಿ ನ್ಯಾಯಾಧಿಕರಣದಲ್ಲಿ ತುಮಕೂರು ಜಿಲ್ಲೆಗೆ 25.31 ಟಿ ಎಂ ಸಿ ನೀರು ಹಂಚಿಕೆಯಾಗಿದೆ ಆದರೆ ಈ ಭಾರಿ 25.47 ಟಿ ಎಂ ಸಿ ಹೆಚ್ಚುವರಿ ನೀರು ತುಮಕೂರು ಜಿಲ್ಲೆಗೆ ಹರಿದಿದೆ,ಹೇಮಾವತಿ ನೀರಿನ ವಿಚಾರದಲ್ಲಿ ದೇವೇಗೌಡರ ಬಗ್ಗೆ ಅನಗತ್ಯ ಅಪಪ್ರಚಾರ ಮಾಡುವ ಬಿಜೆಪಿ ನಾಯಕರಿಗೆ ಭಗವಂತ ತಕ್ಕ ಪಾಠ ಕಲಿಸುತ್ತಾನೆ…

Read More

ಕೊರಟಗೆರ:       ಭಾರತ ದೇಶದ ಸಮಗ್ರ ಅಭಿವೃದ್ದಿ ಮತ್ತು ಬಡವರ ರಕ್ಷಣೆಗಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷಕ್ಕೆ ಕುರುಬ ಸಮುದಾಯ ಮತ್ತೋಮ್ಮೆ ಬೆಂಬಲಸಿ ತುಮಕೂರು ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜುಗೆ ಮತ ನೀಡಬೇಕು ಎಂದು ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ಮನವಿ ಮಾಡಿದರು.       ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಯುವ ಮೋರ್ಚದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ಕೊರಟಗೆರೆ ಕುರುಬ ಸಮುದಾಯದ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.       ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹಂಚುವ ವಿಚಾರದಲ್ಲಿ ಮಾಜಿ ಪ್ರದಾನಿ ದೇವೇಗೌಡರು ತಾರತಮ್ಮ ಮಾಡಿದ್ದಾರೆ. ದೇವೇಗೌಡರು ಕುರುಬ ಸಮುದಾಯದ ವಿರೋದಿ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ಹೆಜ್ಜೆ ಹೆಜ್ಜೆಗೂ ತುಳಿದುಕೊಂಡು ಬಂದಿದ್ದಾರೆ. ಜಾತಿಯ ಮೂಲಕ ರಾಜಕಾರಣ ಮಾಡುವ ಮಾಜಿ ಪ್ರಧಾನಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಸೂಚನೆ ನೀಡಿದರು.      …

Read More

ಮಧುಗಿರಿ:       ಎಚ್.ಡಿ.ದೇವೇಗೌಡರ ಪರ ಮಾಜಿ ಸಿಎಂ ಸಿದ್ದರಾಮಯ್ಯ ಮೂರು ತಾಲೂಕುಗಳಲ್ಲಿ ಬುಧವಾರ ಪ್ರಚಾರ ನಡೆಸುವ ಮೂಲಕ ಜೆಡಿಎಸ್ ವಲಯದಲ್ಲಿ ಸ್ವಲ್ಪ ಸಮಾಧಾನ ಮೂಡಿಸಿದರು.       ದೇವೇಗೌಡರ ರಾಜಕೀಯ ವಿರೋಧಿಗಳಾಗಿರುವ ಸಿದ್ದರಾಮಯ್ಯ ಪ್ರಚಾರ ನಡೆಸುವ ಬಗ್ಗೆ ಜಿಲ್ಲೆಯ ಜನರಲ್ಲಿ ಕುತೂಹಲವಿತ್ತು. ಮೈತ್ರಿ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಿ ಎಂದು ಮನವಿ ಮಾಡುವ ಮೂಲಕ ಗೊಂದಲಕ್ಕೆ ತೆರೆ ಎಳೆದರು.       ಯುವಕರೇ ನಿಮ್ಮಲ್ಲಿ ಕೈ ಜೋಡಿಸಿ ಪ್ರಾರ್ಥಿಸುತ್ತೇನೆ. ಮೋದಿ, ಮೋದಿ ಎಂದು ಹೇಳ್ಬೇಡಿ. ಅವರು ನಿಮಗೇ ಟೋಪಿ ಹಾಕಿದ್ದಾರೆ. ಬಿಜೆಪಿ ಸೋಲಿಸುವ ಮೂಲಕ ಪ್ರಜಾಪ್ರಭುತ್ವ ಉಳಿಸಿ ಎಂದು ಮನವಿ ಮಾಡಿದರು.       ಕೊಡುಗೆ ಹೇಳಲು ಏನೂ ಇಲ್ಲದೆ ಚಿತ್ರದುರ್ಗ, ಮೈಸೂರಲ್ಲಿ ಮಾಡಿದ ಭಾಷಣ ಸುಬ್ಬರಾಯನ ಕೆರೆ ಥರ ಇತ್ತು. ಅಭಿವೃದ್ಧಿ ಕೆಲಸಗಳ ಬಗ್ಗೆ ಒಂದೂ ಮಾತನಾಡಲಿಲ್ಲ ಎಂದು ವ್ಯಂಗ್ಯವಾಡಿದರು.       ಮೋದಿಯವರು ಏನು ಮಾಡಿದ್ದಾರೆ? ಉದ್ಯೋಗ ಕೇಳಿದ ಯುವಕರ ಬಳಿ…

Read More

ಕೊಡಿಗೇನಹಳ್ಳಿ:       ಬಿಜೆಪಿ ಅಭ್ಯಾರ್ಥಿ ಬಸವರಾಜು ಅವರನ್ನು ನಾವೇ ಕಾಂಗ್ರೇಸ್‍ನಿಂದ ಸಂಸದರನ್ನಾಗಿ ಮಾಡಿದ್ದೇವು ಈಗ ಕೋಮುವಾದಿ ಪಕ್ಷದಿಂದ ಮತ ಕೇಳಲು ಬರುತಿದ್ದಾರೆ ತುಮಕೂರು ಜಿಲ್ಲೆಗೆ ಅವರ ಕೂಡುಗೆ ಏನು ಎಂಬುದನ್ನು ತಿಳಿಸಲಿ ಎಂದು ಉಪ ಮುಖ್ಯಮಂತ್ರಿ ಡಾ||ಜಿ.ಪರಮೇಶ್ವರ್ ಪ್ರಶ್ನಿಸಿದರು.       ತಾಲ್ಲೂಕಿನ ಪುರವರ ಗ್ರಾಮದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿಯ ಕೋಮುವಾದಿ ಸರಕಾರ ಆಡಳಿತ ನಡೆಸುತಿದ್ದು ಬಡವರ ಪರ ಎಂದು ಪ್ರಧಾನಿ ಮೋದಿ ಸುಳ್ಳು ಹೇಳಿಕೊಂಡು ಮತ್ತೆ ಚುನಾವಣೆಗೆ ಬಂದಿದ್ದಾರೆ.       ಆದರೆ ಬಿಜೆಪಿಯುವರ ಕೂಡುಗೆ ಜಿಲ್ಲೆಗೆ ಏನಿದು ಎಂದು ಮೂದಲು ತಿಳಿಸಲಿ, ದೇಶದ ಅಭಿವೃಧ್ಧಿಗೆ ಕಾಂಗ್ರೇಸ್ ಮತ್ತು ಮಹಾ ಘಟಬಂಧನ್‍ದಿಂದ ಮಾತ್ರ ಸಾಧ್ಯ, ಮಾಜಿ ಪ್ರಧಾನಿಗಳು ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿರುವುದು ನಮ್ಮೆಲ್ಲರ ಪುಣ್ಯವಾಗಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳ ನೀಡುವ ಮೂಲಕ ಗೌಡರನ್ನು ಗೆಲ್ಲಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ ಜಿ…

Read More

ಕೊಡಿಗೇನಹಳ್ಳಿ:       ಹಬ್ಬದ ಆಸುಪಾಸಿನಲ್ಲಿ ವಿವಿಧೆಡೆ ಜೂಜಾಡುತಿದ್ದ ಖಚಿತ ಮಾಹಿತಿ ಮೇರೆಗೆ ಪಿಎಸೈ ಮೋಹನ್ ಕುಮಾರ್ ನೇತೃತ್ವದ ತಂಡ ದಾಳಿ ಪಣಕ್ಕಿಟ್ಟಿದ್ದ 11,230 ರೂಗಳನ್ನು ವಶಪಡಿಸಿಕೊಂಡಿದ್ದಾರೆ.       ಹೋಬಳಿಯ ಮೈದನಹಳ್ಳಿ ಗ್ರಾಮದಲ್ಲಿ ಜೂಜಾಡುತಿದ್ದ ಮಲ್ಲೇಗೌಡ, ಚಿಕ್ಕಣ್ಣ, ಲಕ್ಷ್ಮಿಪತಿ ಇವರಿಂದ 1390 ರೂ ಹಾಗೂ ಪುರವರ ಹೊಬಳಿಯ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಲಕ್ಷ್ಮಿನಾರಯಣ, ನಾಗರಾಜು, ಹನುಮಂತರಾಯ ಎಂಬುವವರಿಂದ 1860 ರೂ ವಶಕ್ಕೆ ಪಡೆದಿದ್ದಾರೆ.       ಕೋಡ್ಗದಾಲ ಗ್ರಾಮದಲ್ಲಿ ರಾಮಂಜಿನೇಯ, ಚಿನ್ನಪ್ಪ, ನಾಗೇಂದ್ರ ಇವರಿಂದ 3640 ರೂ ಸೇರಿದಂತೆ ಗಿರೇಗೌಡನಹಳ್ಳಿಯಲ್ಲಿ 5 ಮಂದಿ ಜೂಜು ಕೋರರಿಂದ 1120 ಹಾಗೂ ವೀರನಾಗೇನಹಳ್ಳಿ 3220 ರೂಗಳನ್ನು ವಶಕ್ಕೆ ಪಡೆದಿದ್ದು ಸುಮಾಶರು 20 ಜನ ವಿರುದ್ಧ ಕೊಡಿಗೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ತುಮಕೂರು:       ಲೋಕಸಭಾ ಚುನಾವಣೆ-2019ರ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಇಲ್ಲಿಯವರೆಗೂ ತುಮಕೂರು ಜಿಲ್ಲೆಯಲ್ಲಿ 95,13,736 ರೂ. ಮೌಲ್ಯದ 25,015.68 ಲೀ. ಮದ್ಯ, 16,67,760 ರೂ. ನಗದು ಹಾಗೂ 47 ದ್ವಿಚಕ್ರ ವಾಹನಗಳು ಸೇರಿದಂತೆ 44.47 ಲಕ್ಷ ರೂ. ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.       ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾದ್ಯಂತ ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದ್ದು, ಚೆಕ್‍ಪೋಸ್ಟ್ ಸಿಬ್ಬಂದಿ ಹಾಗೂ ಇವರ ಜೊತೆಗೆ ಎಸ್‍ಎಸ್‍ಟಿ ತಂಡಗಳ ಕಟ್ಟುನಿಟ್ಟಿನ ತಪಾಸಣೆಯಿಂದಾಗಿ ಜಿಲ್ಲೆಯಲ್ಲಿ 16,67,760 ರೂ.ಗಳ ನಗದನ್ನು ವಶಪಡಿಸಿಕೊಂಡಿದ್ದು, ತೀವ್ರ ಪರಿಶೀಲನೆಯ ನಂತರ 1,47,760 ರೂ.ಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಉಳಿದಂತೆ 15,20,000 ರೂ.ಗಳನ್ನು ಆದಾಯ ತೆರಿಗೆ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.       ಜಿಲ್ಲೆಯಲ್ಲಿ ಅಕ್ರಮ ಮದ್ಯವನ್ನು ತಡೆಗಟ್ಟಲು 14 ಅಬಕಾರಿ ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ದಿನದ 24 ಗಂಟೆಗಳು ಕಾರ್ಯಾಚರಣೆ ನಡೆಸುತ್ತಿವೆ. ಇದರಿಂದಾಗಿ ತುಮಕೂರು ಜಿಲ್ಲೆಯಲ್ಲಿ 24,063.02 ಲೀಟರ್ ದೇಶೀಯ ನಿರ್ಮಿತ ಮದ್ಯ, 826.66 ಲೀ.…

Read More