ತುಮಕೂರು : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ರಾಜಕೀಯ ಪಕ್ಷಗಳು ಹೊರತರುವ ಪಕ್ಷದ ಪ್ರಣಾಳಿಕೆಯಲ್ಲಿ ಸಭೆ/ ಸಮಾರಂಭ/ ರ್ಯಾಲಿ/ ವೇದಿಕೆ ಕಾರ್ಯಕ್ರಮಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಂತಹ ಹಾಗೂ ಕೋಮು ಪ್ರಚೋದನಾಕಾರಿ ಭಾಷಣ/ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇತ್ತೀಚೆಗೆ ಜರುಗಿದ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಒಂದು ಕೋಮು/ಜಾತಿ/ಸಮಾಜದ ಘನತೆಗೆ ವೈಯಕ್ತಿಕವಾಗಿ ಘಾಸಿಯಾಗುವಂತಹ ಹೇಳಿಕೆಗಳನ್ನು ನೀಡಬಾರದು ಹಾಗೂ ಸಾಮಾಜಿಕ ಜಾಲತಾಣಾಗಳಾದ ಟ್ವೀಟರ್, ಫೇಸ್‍ಬುಕ್ ಮತ್ತು ವಾಟ್ಸ್‍ಆಪ್‍ಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬಾರದೆಂದು ತಿಳಿಸಿದರು. ತಹಶೀಲ್ದಾರ್ ವಶಕ್ಕೆ ಸರ್ಕಾರಿ ಅತಿಥಿ ಗೃಹ:- ಸರ್ಕಾರಿ/ವಸತಿ ಗೃಹಗಳನ್ನು ಆಯಾ ತಾಲ್ಲೂಕು ತಹಶೀಲ್ದಾರರ ವಶಕ್ಕೆ ಪಡೆಯಲಾಗಿದ್ದು, ಸರ್ಕಾರಿ ಅತಿಥಿ ಗೃಹಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳು…
Author: News Desk Benkiyabale
ತುಮಕೂರು: ಸಂತ ಶಿಶುನಾಳ ಷರೀಫರಿಗೆ ಇನ್ನೊಬ್ಬ ಪರ್ಯಾಯ ಸಾಧಕ ಇಲ್ಲ. ಅವರಿಗೆ ಅವರೇ ಸಾಟಿ ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸಂತ ಶಿಶುನಾಳ ಷರೀಫರ ಅಧ್ಯಯನ ಕೇಂದ್ರವು ಹಮ್ಮಿಕೊಂಡಿದ್ದ ‘ಶಿಶುನಾಳ ಷರೀಫರ ಧೋರಣೆ ಮತ್ತು ಪ್ರೇರಣೆ’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಷರೀಫರು ಸಂತ ಶರಣ ಸೂಫಿಗಳ ಹಾದಿಯಲ್ಲಿ ಸಾಗಿದರು. ಎಲ್ಲರಿಗೂ ಮಾದರಿಯಾದರು. ಗಗನಕ್ಕೆ ಗಗನವೇ ಸಾಟಿ ಎಂಬಂತೆ ಷರೀಫರಿಗೆ ಷರೀಫರೇ ಸಾಟಿ, ಬೇರೊಬ್ಬರಿಲ್ಲ. ಇಂತಹ ದಾರ್ಶನಿಕನ ಹೆಸರಿನಲ್ಲಿ ಅಧ್ಯಯನ ಪೀಠ ಆರಂಭಿಸಿರುವುದು ಶ್ಲಾಘನೀಯ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂತ ಶಿಶುನಾಳ ಷರೀಫರ ಹಾಗೂ ಕಳಸದ ಗುರು ಗೋವಿಂದ ಭಟ್ಟರ ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಮಹೇಶ್‍ಜೋಷಿ ಮಾತನಾಡಿ, ಷರೀಫರು ನಡೆದು ಬಂದ ದಾರಿ ಮಹತ್ವಪೂರ್ಣದ್ದೆಂದು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ…
ತುಮಕೂರು: ತುಮಕೂರು ರಾಜ್ಯದಲ್ಲಿ ಹಾಲಿ ಸಂಸದರು ಇರುವ ಲೋಕಸಭಾ ಕ್ಷೇತ್ರಗಳ ಪೈಕಿ ತುಮಕೂರು ಕ್ಷೇತ್ರವನ್ನು ಮಾತ್ರ ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್. ರಾಜೇಂದ್ರ ಅವರ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‍ಗೆ ತುಮಕೂರು ಕ್ಷೇತ್ರ ಬಿಟ್ಟು ಕೊಟ್ಟಿರುವ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್. ರಾಜೇಂದ್ರ ಮಾತನಾಡಿ, ದೇಶದಲ್ಲಿ 44 ಜನ ಕಾಂಗ್ರೆಸ್ ಸಂಸದರು ಗೆದ್ದಿದ್ದಾರೆ. ಇವರ ಪೈಕಿ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸಲಾಗಿದೆ. ಇದರ ಅರ್ಥವೇನು. ಯಾವುದೇ ಕಾರಣಕ್ಕೂ ಜೆಡಿಎಸ್‍ಗೆ ಕ್ಷೇತ್ರ ಬಿಟ್ಟು ಕೊಡಬಾರದು. ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲೇಬೇಕು ಎಂದು ಪಕ್ಷದ ವರಿಷ್ಠರನ್ನು ಆಗ್ರಹಿಸಿದರು. ಶತಾಯ ಗತಾಯ ತುಮಕೂರು ಲೋಕಸಭಾ…
ತುಮಕೂರು: ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಜೀವನದ ಆರೋಗ್ಯ ಸುಧಾರಣೆ ಸೇರಿದಂತೆ ಇತರೆ ಜೀವನದ ಭದ್ರತೆಗಾಗಿ ಜೀವವಿಮೆ ಅವಶ್ಯವಾಗಿದ್ದು, ‘ಎಕ್ಸೈಡ್ ಲೈಫ್’ ಇನ್ಷೂರೆನ್ಸ್ ಮೂಲಕ ಗ್ರಾಹಕರಿಗೆ ಹೊಸ ವಿಮಾ ಯೋಜನೆಯನ್ನು ಕಲ್ಪಿಸಲಾಗುತ್ತಿದೆ ಎಂದು ವಿಮಾ ಕಂಪೆನಿಯ ತರಬೇತುದಾರ ಆಶಿಕ್ ಮನೋಹರ್ ತಿಳಿಸಿದರು. ನಗರದಲ್ಲಿಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015ರಲ್ಲಿ ಪ್ರಾರಂಭವಾದ ದಿನದಿಂದಲೂ ಎಕ್ಸೈಡ್ ಲೈಫ್ ಇನ್ಷೂರೆನ್ಸ್ ದೇಶಾದ್ಯಂತ ಟೈಯರ್2 ಮತ್ತು ಟೈಯರ್ 3 ನಗರಗಳ ಜನರೊಂದಿಗೆ ಸಕ್ರಿಯವಾಗಿದ್ದು ಅವರಿಗೆ ವಿಮೆಯ ಪ್ರಾಮುಖ್ಯತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಅವರಿಗೆ ಅವರ ಭವಿಷ್ಯಕ್ಕೆ ಸೂಕ್ತ ಹಣಕಾಸು ನಿರ್ಧಾರ ಕೈಗೊಳ್ಳಲು ಮಾಹಿತಿಯೊಂದಿಗೆ ಸನ್ನದ್ಧವಾಗಿಸುತ್ತಿದೆ ಎಂದರು. ಎಕ್ಸೈಡ್ ಲೈಫ್ ಇನ್ಷೂರೆನ್ಸ್‍ನಲ್ಲಿ ನಾವು ಪ್ರತಿ ವ್ಯಕ್ತಿಯೂ ಆರ್ಥಿಕವಾಗಿ ರಕ್ಷಣೆ ಹೊಂದಿರುವುದು ಮುಖ್ಯ ಎಂದು ನಂಬಿದ್ದೇವೆ. `ಅತ್ಯಂತ ಬೇಗ ಪ್ರಾರಂಭಿಸುವುದು’, `ಒಗ್ಗೂಡಿಸುವುದರ ಶಕ್ತಿ’ ಮತ್ತು `ತಕ್ಕಷ್ಟು ಜೀವವಿಮೆ’ಯ ಪರಿಕಲ್ಪನೆಗಳನ್ನು ಪ್ರತಿ ಭಾರತೀಯರು ಅರ್ಥ ಮಾಡಿಕೊಳ್ಳಬೇಕು” ಎಂದರು. …
ಮೈಸೂರು : ಮಾಜಿ ಸಂಸದ ಸಿ ಹೆಚ್ ವಿಜಯಶಂಕರ್ ಗೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕಾಗಿನೆಲೆ ಶ್ರೀಗಳು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಶಾರದಾ ದೇವಿ ನಗರದಲ್ಲಿರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ಕಾಗಿನೆಲೆ ಶ್ರೀಗಳು ಮೈಸೂರು-ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಂಸದ ಸಿ ಹೆಚ್ ವಿಜಯಶಂಕರ್ ಗೆ ಅವರಿಗೆ ಟಿಕೆಟ್ ನೀಡಬೇಕೆಂದು ಶ್ರೀಗಳು ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ತುಮಕೂರು: ಮದ್ಯಪಾನ, ಅತಿವೇಗ ಅಜಾಗರೂಕ ಚಾಲನೆ, ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ 86 ಸವಾರರುಗಳ ಡಿ.ಎಲ್(ಚಾಲನಾ ಪರವಾನಗಿ)ಗಳನ್ನು ಅಮಾನತ್ತುಗೊಳಿಸಿದ್ದು, ಸಂಚಾರಿ ನಿಯಮ ಉಲ್ಲಂಘಿಸಿರುವವರ ವಿರುದ್ಧದ ಕಾರ್ಯಚಾರಣೆಯನ್ನು ಇನ್ನಷ್ಟು ಚುರುಕುಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್ ಕುಮಾರ್ ಅವರು ಸಾರಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಮದ್ಯಪಾನ-120, ಅಪಘಾತ-10, ಅತಿವೇಗ/ಅಜಾಗರೂಕ ಚಾಲನೆ-35 ಹಾಗೂ ಸಂಚಾರ ನಿಯಮ ಉಲ್ಲಂಘನೆ-16 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 86 ಡಿ.ಎಲ್‍ಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದರು. ಎಲ್ಲಾ ಕಾಲೇಜುಗಳಲ್ಲಿ ಸಾರಿಗೆ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಲೋಕಸಭಾ ಚುನಾವಣೆ ಮುಗಿದ ನಂತರ ಅರಿವು ಕಾರ್ಯಕ್ರಮಗಳ ಆಯೋಜನೆ ರೂಪುರೇಷಗಳನ್ನು ಸಿದ್ದಪಡಿಸಿ, ಅದರಂತೆ ರಸ್ತೆ ಸುರಕ್ಷತೆ ಸಂಚಾರ ನಿಯಮಗಳ…
ತುಮಕೂರು: ಚುನಾವಣೆಯಲ್ಲಿ ಮತ ಚಲಾಯಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿಂದು ಮಾತನಾಡಿದ ಅವರು 18 ವರ್ಷ ತುಂಬಿದ ಪತ್ರಿಯೊಬ್ಬ ಯುವಕ/ಯುವತಿಯರು ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತಪ್ಪದೇ ಮತಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಅವರು ತಿಳಿಸಿದರು. ಮತದಾನ, ಮತಕ್ಷೇತ್ರ, ಮತಪಟ್ಟಿ ಮತ್ತಿತರ ಮಾಹಿತಿಯನ್ನು ಪಡೆಯಲು ಚುನಾವಣಾ ಆಯೋಗವು “ಚುನಾವಣೆ” ಎಂಬ ನೂತನ ಮೊಬೈಲ್ ಆ್ಯಪ್ ಸೃಜಿಸಲಾಗಿದೆ. ಗೂಗಲ್ ಪ್ಲೇಸ್ಟೋರ್ ಮೂಲಕ ಈ ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಂಡು ಚುನಾವಣಾ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ಉಚಿತ ಸಹಾಯವಾಣಿ 1950 ಕರೆ ಮಾಡುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದರ ಜೊತೆಗೆ ಸಾರ್ವಜನಿಕ ದೂರುಗಳನ್ನು ದಾಖಲಿಸಲು…
ಚಿಕ್ಕನಾಯಕನಹಳ್ಳಿ: ಗ್ರಾಮೀಣ ಭಾಗದಿಂದಲೂ ಮರೆಯಾಗುತ್ತಿರುವ ಶ್ರಮಸಂಸ್ಕೃತಿಯನ್ನು, ಈಗಿನ ಸಮಾಜಕ್ಕೆ ಪರಿಚಯುಸುವಲ್ಲಿ ತಾಲ್ಲೂಕಿನ ಶೆಟ್ಟಿಕೆರೆಯ ಜನತಾಯುವ ಕ್ರೀಡಾಸಂಘ ಪ್ರಯತ್ನ ಶ್ಲಾಘನೀಯ ಕಾರ್ಯ ಎಂದು ನಿವೃತ್ತ ಮುಖ್ಯ ಶಿಕ್ಷಕ ಶ್ರೀನಿವಾಸಮೂರ್ತಿ ತಿಳಿಸಿದರು. ತಾಲ್ಲೂಕಿನ ಶೆಟ್ಟಿಕೆರೆಯ ಜನತಾ ಪ್ರೌಢಶಾಲಾ ಆವರಣದಲ್ಲಿ ಅಂತರ್‍ರಾಷ್ಟ್ರೀಯ ಮಹಿಳಾದಿನದ ಅಂಗವಾಗಿ ನಡೆದ ರಾಗಿಬೀಸುವ ಸ್ಪರ್ಧೆ ಹಾಗೂ ಮೂರು ಬಿಂದಿಗೆ ನೀರು ಹೊರವ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದೆ ಜಾನಪದಗಳ ಹುಟ್ಟಿಗೆ ಕಾರಣವಾಗಿದ್ದ ಧಾನ್ಯಗಳನ್ನು ಬೀಸುವ ಹಾಗೂ ಕುಟ್ಟುವ ಸಂಸ್ಕೃತಿ ಇಂದು ಮರೆಯಾಗಿದೆ. ಅಂದು ರೈತರು ಕೊಟ್ಟಿಗೆ ಗೊಬ್ಬರವನ್ನು ತಮ್ಮ ಹೊಲಕ್ಕೆ ಬಳಸಿ ಯಾವುದೇ ರಾಸಾಯನಿಕ ಆಂಶದಿಂದ ಹೊರತಾದ ಧಾನ್ಯವನ್ನು ಬೆಳೆಯುತ್ತಿದ್ದರು. ನಂತರ ಕಣದಲ್ಲಿ ಸಂಸ್ಕರಿಸಿದ ಧಾನ್ಯವನ್ನು ಮನೆಗೆ ತಂದು ಕೆಡದಂತೆ ತಮ್ಮದೆ ವ್ಯವಸ್ಥೆಯಲ್ಲಿ ಇಡುತ್ತಿದ್ದರು. ಇಂತಹ ಧಾನ್ಯವನ್ನು ಪುಡಿಮಾಡಿ ಬಳಸುವಲ್ಲಿ ಬೀಸುವ ಕಲ್ಲುಗಳು , ಒರಳಕಲ್ಲು ಮತ್ತು ಒನಕೆಗಳ ಬಳಕೆ ಎಲ್ಲಾ ಮನೆಯಲ್ಲಿಯೂ ಇರುತ್ತಿತ್ತು. ಇದರ ಬಳಕೆಯಿಂದ ಧಾನ್ಯದಲ್ಲಿನ ಸತ್ವ ಹಾಗೂ ಸಾರದ…
ಚಾಮರಾಜನಗರ : ನನಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ನನಗೆ ಮಾಡಿದ ಉಪಕಾರಕ್ಕೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ನೋಡುತ್ತೀನಿ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಟಿಯಲಲ್ಲಿ ಮಾತನಾಡಿದ ಅವರು ನನಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ಕರ್ನಾಟಕಕ್ಕೆ ಕುಮಾರಸ್ವಾಮಿ ಸಿಎಂ ಆದ್ರೆ, ನನಗೆ ಮಾತ್ರ ಸಿದ್ದರಾಮಯ್ಯ ಅವರೇ ಲೀಡರ್ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಎಲ್ಲರೂ ಕೂಟ ಒಗ್ಗಟ್ಟಾಗಿದ್ದೇವೆ, ಯಾರೇ ನಿಂತರೂ ಕೂಡ ಈ ಬಾರಿ ನಮ್ಮ ಅಭ್ಯರ್ಥಿಯೇ ಗೆಲುವು ದಾಖಲಿಸಿದ್ದಾರೆ. ನಮ್ಮ ಅಭ್ಯರ್ಥಿ ಧ್ರುವ ನಾರಾಯಣ್ ಗೆಲುವು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
ತುಮಕೂರು: ಹುಳಿಯಾರು ಹೋಬಳಿ ಪೋಚಕಟ್ಟೆ ಗ್ರಾಮದ ಪೋಚಕಟ್ಟೆ ಗೇಟ್‍ನಿಂದ ಉತ್ತರಕ್ಕೆ ಪೋಚಕಟ್ಟೆ ಗ್ರಾಮ, ಹುಳಿಯಾರು ಅಮಾನಿಕೆರೆ ಮತ್ತು ಕಸಬಾ ಗ್ರಾಮಗಳ ಆಯ್ದ ಸರ್ವೆ ನಂಬರ್‍ನ ಜಮೀನುಗಳಲ್ಲಿ ಹಾದು ಹೋಗುವ ನಿಯೋಜಿತ 150ಎ ಬೈಪಾಸ್ ರಸ್ತೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತ ಮುಖಂಡರಾದ ಸತೀಶ್ ಕೆಂಕೆರೆ ನೇತೃತ್ವದಲ್ಲಿ ಈ ಭಾಗದ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹುಳಿಯಾರಿನ ನಿವಾಸಿಗಳ ಪೈಕಿ ನಾಲ್ಕು ಮಂದಿ ಮಾತ್ರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಈ ಸಂಬಂಧ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‍ಕುಮಾರ್ ಅವರಿಗೆ ಮನವಿ ಅರ್ಪಿಸಿದರು. ಬೈಪಾಸ್ ಆರಂಭಗೊಂಡಿರುವ ಪೋಚಕಟ್ಟೆ ಗ್ರಾಮ ಹುಳಿಯಾರು ಕಸಬಾ ಗಡಿಯಲ್ಲಿದ್ದು, ಈ ಎರಡು ಗ್ರಾಮಗಳ ಮಧ್ಯೆ ಪೂರ್ವಕ್ಕೆ ಹರಿಯುವ ವೇದಾವತಿ ಹಾಗೂ ಸುವರ್ಣಮುಖಿ ನದಿಗಳ ಉಪನದಿಯಿದ್ದು, ಪೋಚಕಟ್ಟೆ ಹಾಗೂ ಹುಳಿಯಾರು ಗ್ರಾಮದ ತೊರೆದಂಡೆಯಲ್ಲಿರುವ ಜಮೀನುಗಳು ತೆಂಗು, ಅಡಿಕೆ, ಬಾಳೆ ಮುಂತಾದ ಆರ್ಥಿಕ ಬೆಳೆಗಳ ಮೂಲ…