ತುಮಕೂರು: ನಗರದ ಕೆಎಚ್ಬಿ ಕಾಲೋನಿಯಲ್ಲಿ ವಾಸವಾಗಿದ್ದ ಪತಿ, ಪತ್ನಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತುಮಕೂರು ಜಿಲ್ಲೆಯಲ್ಲಿ ಮೃತ ಪಿ-535 ಹಾಗೂ ಪಿ-553ರ ಸಂಪರ್ಕದಲ್ಲಿದ್ದ ಇಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ತಿಳಿಸಿದ್ದಾರೆ. ಮೃತ ಪಿ-535 ಹಾಗೂ ಪಿ-553ರ ಪಕ್ಕದ ಮನೆಯವರಾದ ಗಂಡ-ಹೆಂಡತಿ ಇಬ್ಬರಿಗೂ ಸೋಂಕು ತಗುಲಿದ್ದು, ಅವರನ್ನು ಐಸೋಲೇಶನ್ ಮಾಡಲಾಗಿದೆ. ಇವರನ್ನು ಪಿ-591 ಹಾಗೂ ಪಿ-592 ಎಂದು ಗುರುತಿಸಲಾಗಿದೆ. ಜಿಲ್ಲೆಯು ಆರೇಂಜ್ ವಯಲದಲ್ಲಿರುವುದರಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು. ಆದ್ದರಿಂದ ಮಕ್ಕಳು, ವಯಸ್ಸಾದವರು ಮನೆಯಿಂದ ಹೊರಗಡೆ ಹೋಗಬಾರದು. ಸಾರ್ವಜನಿಕರು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.
Author: News Desk Benkiyabale
ತುಮಕೂರು: ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ, ತೋವಿನಕೆರೆ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಬರಪೀಡಿತ ತಾಲ್ಲೂಕಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಗಳು ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ, ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಕಾರ್ಯಕ್ರಮವಾದ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಮನೆಗೆ ಸರ್ಕಾರದ ವತಿಯಿಂದ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಇದರ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್…
ತುಮಕೂರು : ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತುಮಕೂರು ತಹಶೀಲ್ದಾರ್ ಮೋಹನ್ ಕುಮಾರ್ ರವರ ಜೊತೆ ಅಸಂಬದ್ಧವಾಗಿ ಮಾತನಾಡಿದ ಆಡಿಯೋ ವೈರಲ್ ಆಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ್ ತನ್ನ ನಾಲಿಗೆಯ ಮೇಲೆ ಹಿಡಿತವಿಲ್ಲದೆ ತಾಲ್ಲೂಕು ದಂಡಾಧಿಕಾರಿಯೊಂದಿಗೆ ಅಸಭ್ಯವಾಗಿ ಮಾತನಾಡಿದ್ದು ಶಾಸಕ ಸ್ಥಾನಕ್ಕೆ ಚ್ಯುತಿ ಬರುವಂತದ್ದಲ್ಲ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಓರ್ವ ಶಾಸಕರಾಗಿ ತಾಲ್ಲೂಕು ದಂಡಾಧಿಕಾರಿ ಮೋಹನ್ ರವರೊಟ್ಟಿಗೆ ಹೇಗೆ ಮಾತನಾಡಬೇಕೆಂಬ ಪರಿವಿಲ್ಲದೆ ಏಕ ವಚನಗಳನ್ನು ಬಳಸಿ ಮಾತನಾಡಿರುವುದು ಎಷ್ಟರಮಟ್ಟಿಗೆ ಸರಿ ಎನ್ನುವಂತಹ ಚರ್ಚೆಗಳಾಗುತ್ತಿವೆ. ತಹಶೀಲ್ದಾರ್ ರವರೋರ್ವರನ್ನು ನೀವು ದನ ಕಾಯುತ್ತಿದ್ದೀರಾ ಎನ್ನುವ ಪದದೊಂದಿಗೆ ಆರಂಭ ಮಾಡಿ ಮುಂದೆ ಬಳಸಿದ ಪದಪುಂಜಗಳು ಶಾಸಕ ಸ್ಥಾನಕ್ಕೆ ಶೋಭೆ ತರುವಂತದ್ದಾಗಿರಲಿಲ್ಲ. ಶಾಸಕರಾದ ತಕ್ಷಣ ತನ್ನ ಸರ್ವಾಧಿಕಾರಿ ಧೋರಣೆಯಿಂದ ತಹಶೀಲ್ದಾರರೊಬ್ಬರನ್ನು ಆ ರೀತಿ ಮಾತನಾಡಲು ಆ ಕ್ಷೇತ್ರದ ಜನ ಆಯ್ಕೆ ಮಾಡಿ ಕಳುಹಿಸಿದ್ದರೇ..? ಶಾಸಕರಿಗೆ ತಹಶೀಲ್ದಾರ್ ರವರ ಆಡಳಿತದ ಕಾರ್ಯವ್ಯಾಪ್ತಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಾರ್ಯವ್ಯಾಪ್ತಿ,…
ಕೊರಟಗೆರೆ: ಅನಾರೋಗ್ಯದಿಂದ ಬಳಲುತ್ತೀದ್ದ ಕೊರಟಗೆರೆ ಪೊಲೀಸ್ ಠಾಣೆಯ ಗೃಹರಕ್ಷಕ ದಳದ ಘಟಕಾಧಿಕಾರಿ ಹನುಮಂತರಾಜು ಹೃದಯಘಾತದಿಂದ ತುಮಕೂರು ನಗರದ ಶ್ರೀದೇವಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮುಂಜಾನೆ ಜರುಗಿದೆ. ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹುಲೀಕುಂಟೆ ಗ್ರಾಪಂ ವ್ಯಾಪ್ತಿಯ ಗೌರಗಾನಹಳ್ಳಿ ಗ್ರಾಮದ ವಾಸಿಯಾದ ರಂಗಯ್ಯನ ಮಗನಾದ ಹನುಮಂತರಾಜು(35) ಮೃತ ದುರ್ದೈವಿ. ಪ್ರಸ್ತುತ ಈಗ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಘಟಕಾಧಿಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಮೃತ ಹನುಮಂತರಾಜು ಏ.29ರ ಬುಧವಾರ ತಡರಾತ್ರಿ ಕೊರಟಗೆರೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ತುಮಕೂರಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಸೂಚನೆಯಂತೆ ನಗರದ ಶ್ರೀದೇವಿ ಆಸ್ಪತ್ರೆಗೆ ದಾಖಲಾಗಿ ಮೇ.1ರ ತನಕ ಚಿಕಿತ್ಸೆ ಪಡೆದಿದ್ದಾರೆ. ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತೆಯಲ್ಲಿ ಮೃತಪಟ್ಟಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಘಟಕಾಧಿಕಾರಿ ಆಗಿ ಕರ್ತವ್ಯದಲ್ಲಿದ್ದ ಹನುಮಂತರಾಜು ಪೊಲೀಸ್ ಮತ್ತು ಅಬಕಾರಿ ಇಲಾಖೆಯ ತುಮಕೂರು,…
ಕೊರಟಗೆರೆ: ವನ್ಯಪ್ರಾಣಿ ಕಾಡುಮೊಲ ಬೇಟಿಯಾಡಿ ಚರ್ಮವನ್ನು ಸುಲಿಯುವ ವಿಡಿಯೋ ಮತ್ತು ಪೊಟೋ ಟಿಕ್‍ಟಾಕ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿವರ್ಗ ಸೆರೆಹಿಡಿದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿರುವ ಘಟನೆ ಶುಕ್ರವಾರ ನಡೆದಿದೆ. ತುಮಕೂರು ಉಪಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಸಿ.ಗಿರೀಶ್ ಮಾರ್ಗದರ್ಶನ ಮತ್ತು ಮಧುಗಿರಿ ಸಹಾಯಕ ಉಪ ಸಂರಕ್ಷಣಾಧಿಕಾರಿ ಶ್ರೀನಿವಾಸ ಎನ್.ಯರಡೋಣಿ ಮತ್ತು ಕೊರಟಗೆರೆ ವಲಯ ಅರಣ್ಯಾಧಿಕಾರಿ ಸತೀಶ್‍ಚಂದ್ರ ನೇತೃತ್ವದ ತಂಡ ವಿನಯ್ ಮತ್ತು ವಿನಯಕುಮಾರ್ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾಪಂ ವ್ಯಾಪ್ತಿಯ ಕರಿದುಗ್ಗನಹಳ್ಳಿ ವಿನಯ ಮತ್ತು ಎಸ್.ಗೊಲ್ಲಹಳ್ಳಿ ವಿನಯಕುಮಾರ್ ಎಂಬಾತನು ಟಿಕ್‍ಟಾಕ್ ಪ್ರಚಾರದ ಹುಚ್ಚು ಮನಸ್ಸಿನಿಂದ ಮೊಲದ ಚರ್ಮ ಸುಳಿಯುವ ವಿಡಿಯೋ ಮತ್ತು ಪೊಟೋ ಹಾಕಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿವರ್ಗ ದಾಳಿ ನಡೆಸಿದ್ದಾರೆ. ಅರಣ್ಯದಲ್ಲಿ ವಾಸಿಸುವ ಕಾಡುಮೊಲ ಬೇಟಿಯಾಡಿ ಮನೆಯ…
ತುಮಕೂರು: ಸಾರ್ವಜನಿಕ ಸೇವೆಯಲ್ಲಿ ಸದಾ ತೊಡಗಿಕೊಂಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಮುಖಗವಸು, ಕೈಗವಸು ಹಾಗೂ ಸ್ಯಾನಿಟೈಜರ್‍ಗಳನ್ನು ನೀಡುವ ಮೂಲಕ ಪೊಲೀಸರ ಮೇಲೆ ಕಾಳಜಿ ತೋರಿರುವ ಹೆಗ್ಗೆರೆ ಗ್ರಾಮಸ್ಥರಿಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಲಕ್ಷ್ಮಯ್ಯ ಅಭಿನಂದನೆ ಸಲ್ಲಿಸಿದರು. ತಮ್ಮ ಠಾಣೆಯಲ್ಲಿ ಗುರುವಾರ ಹೆಗ್ಗೆರೆ ಗ್ರಾಮಸ್ಥರಿಂದ ಮುಖಗವಸು, ಕೈಗವಸು ಹಾಗೂ ಸ್ಯಾನಿಟೈಜರ್‍ಗಳನ್ನು ಸ್ವೀಕರಿಸಿ ಮಾತನಾಡಿದ ಅವರು ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಹಾಗೂ ರಕ್ಷಣಾ ದೃಷ್ಟಿಯಿಂದ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಹೆಗ್ಗೆರೆ ಗ್ರಾಮಸ್ಥರು ರಕ್ಷಣಾ ಸಾಮಗ್ರಿಗಳನ್ನು ನೀಡಿರುವುದು ಅಭಿನಂದನಾರ್ಹ ಎಂದರಲ್ಲದೆ ಕೊರೋನಾ ಕಾರ್ಯಾಚರಣೆಯಲ್ಲಿ ಪೊಲೀಸರೊಂದಿಗೆ ನಾವಿದ್ದೇವೆ ಎಂಬ ಗ್ರಾಮಸ್ಥರ ಕಾಳಜಿಯು ನಮಗೆ ಇನ್ನಷ್ಟು ಸ್ಫೂರ್ತಿದಾಯಕವಾಗಿದೆ ಎಂದರು. ಈ ಸಂದರ್ಭದಲ್ಲಿ ಹೆಗ್ಗೆರೆ ಗ್ರಾಮದ ಮುಖಂಡರಾದ ಚಂದ್ರಶೇಖರ್‍ಗೌಡ, ಕೃಷ್ಣಯ್ಯ, ಭೋಜಣ್ಣ, ಸೋಮಶೇಖರ್ ಆಲ್ಯಾಳ್, ಆನಂದ್‍ಕುಮಾರ್, ಮಂಜುನಾಥ್, ರಂಗಲಕ್ಷ್ಮಿ, ಜಯಶ್ರೀ, ಶೈಲಜಾ, ಠಾಣೆಗೆ ಹೊಸದಾಗಿ…
ತುಮಕೂರು: ಅಗತ್ಯ ವಸ್ತುಗಳಿಲ್ಲದೆ ಸಮಸ್ಯೆಯಲ್ಲಿ ಸಿಲುಕಿದ್ದ ನಗರದ ಸರ್ಕಾರಿ ಪಾಲಿಟೆಕ್ನಿಕ್ ಬಳಿ ಪೆಟ್ಟಿಗೆ ಅಂಗಡಿಯಲ್ಲಿಯೇ ವಾಸವಿದ್ದು, ಚಮ್ಮಾರಿಕೆ ಕಾಯಕ ಮಾಡುತ್ತಿರುವ ವಿಕಲಚೇತನ ಮಂಜುನಾಥ ಅವರಿಗೆ ಇಂದು ತಾಲೂಕು ಆಡಳಿತದ ವತಿಯಿಂದ ದಿನನಿತ್ಯದ ದಿನಸಿ ಸಾಮಗ್ರಿಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಯಿತು ಎಂದು ಕಾರ್ಮಿಕ ಅಧಿಕಾರಿ ಸುಭಾಷ್ ಎಮ್ ಆಲದಕಟ್ಟಿ ತಿಳಿಸಿದ್ದಾರೆ. ಕೋವಿಡ್ 19ಗೆ ಸಂಬಂಧಿಸಿದಂತೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸುಮಾರು 50 ವರ್ಷದ ಮಂಜುನಾಥ್ ಅವರು ಅಗತ್ಯ ವಸ್ತುಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆಂದು ಕಾರ್ಮಿಕ ಇಲಾಖೆಗೆ ಟ್ವಿಟರ್ ಮೂಲಕ ಬಂದ ದೂರಿಗೆ ಕೂಡಲೇ ಸ್ಥಳಕ್ಕೆ ಧಾವಿಸಿ ಸ್ಪಂದಿಸಲಾಗಿದೆ. ಅನಿರೀಕ್ಷಿತ ಲಾಕ್ ಡೌನ್‍ನಿಂದ ಮಂಜುನಾಥ ಅವರ ಜೀವನ ನಿರ್ವಹಣೆ ದುಸ್ತರವಾಗಿತ್ತು. ಅಲ್ಲದೆ ಅವರು ಪಡಿತರ ಚೀಟಿ ಹೊಂದಿಲ್ಲದಿರುವ ಮಾಹಿತಿಯೂ ಸಹ ಈ ಸಂದರ್ಭದಲ್ಲಿ ತಿಳಿದು ಬಂದಿದೆ. ಪಡಿತರ ಚೀಟಿಯೊಂದಿಗೆ ಸರ್ಕಾರದ ಇನ್ನಿತರ ಸೌಲಭ್ಯಗಳನ್ನು ಕೋರಿ ಅರ್ಜಿ ಸಲ್ಲಿಸುವ ಬಗ್ಗೆ ಹಾಗೂ ಮತ್ತೆ ಇಂತಹ ಸಮಸ್ಯೆ ಎದುರಾದಲ್ಲಿ…
ತುಮಕೂರು: ಯುವ ಸಮೂಹ ದೇಶ ಸಂಕಷ್ಟದಲ್ಲಿ ಇರುವ ಸಮಯದಲ್ಲಿ ದೇಶಕ್ಕೆ ಕೊಡುಗೆ ನೀಡಲು ಮುಂದಾಗಿರುವುದು ಶ್ಲಾಘನೀಯವಾದ ಕಾರ್ಯ ಎಂದು ಸಿದ್ಧಗಂಗಾ ಮಠಾಧೀಶರಾದ ಸಿದ್ಧಲಿಂಗಸ್ವಾಮೀಜಿ ತಿಳಿಸಿದರು. ನಗರದ ಬೀರೇಶ್ವರ ಕನ್ವೆಷನ್ ಹಾಲ್ ನಲ್ಲಿ ಆರ್.ಆರ್.ಅಭಿಮಾನಿ ಬಳಗದ ವತಿಯಿಂದ ಕೊರೋನಾ ಸಂಕಷ್ಟದಲ್ಲಿರುವವರಿಗೆ ಆಹಾರ ವಿತರಣಾ ಕಾರ್ಯವನ್ನು ವೀಕ್ಷಿಸಿ ಮಾತನಾಡಿದ ಅವರು, ಯುವ ಸಮೂಹ ಒಟ್ಟಾಗಿ ಸಂಕಷ್ಟದಲ್ಲಿ ಇರುವವರ ಸೇವೆಗೆ ತೊಡಗಿರುವುದು ಸಂತಸದ ವಿಚಾರ, ಇಂತಕ್ಕೆ ಕಾರ್ಯಕ್ಕೆ ಪ್ರೋತ್ಸಾಹ ನೀಡಬೇಕು ಎಂದರು. ದೇಶವಷ್ಟೇ ಅಲ್ಲದೇ ಪ್ರಪಂಚಾದ್ಯಂತ ಕೊರೋನಾ ವ್ಯಾದಿ ಹಬ್ಬಿದ್ದು, ಇದರಿಂದ ನಿಜವಾಗಿಯೂ ತೊಂದರೆಗೆ ಒಳಗಾಗಿರುವುದು ಕಟ್ಟಡ ಕಾರ್ಮಿಕರು, ದಿನಗೂಲಿ ಕಾರ್ಮಿಕರು ಅವರ ಹೊಟ್ಟೆ ತುಂಬಿಸುವ ಕೆಲಸಕ್ಕೆ ರಾಜೇಂದ್ರ ಅವರ ನೇತೃತ್ವದಲ್ಲಿ ಯುವಕರು ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಾತ್ಮಗಾಂಧಿ ಅವರು ಹೇಳಿದಂತೆ ಯುವಕರು ಈ ದೇಶದ ಆಸ್ತಿ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಅಭಿಪ್ರಾಯಪಟ್ಟರು. ಕೊರೋನಾ ವ್ಯಾದಿಯನ್ನು ದೂರ ಮಾಡುವ ನಿಟ್ಟಿನಲ್ಲಿ ಎಲ್ಲರೂ…
ತುಮಕೂರು: ನಗರದ ಡಿವೈಎಸ್‍ಪಿ ಕಚೇರಿ ಬಳಿ ಗೃಹ ರಕ್ಷಕದಳ ಸಿಬ್ಬಂದಿಗಳಿಗೆ ಮತ್ತು ಪೊಲೀಸ್ ಠಾಣಾ ಸ್ವಚ್ಛತಗಾರರಿಗೆ ಆಹಾರ ಧಾನ್ಯ ಕಿಟ್ ಮತ್ತು ತರಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ ವಿತರಿಸಿದರು. ನಂತರ ಮಾತನಾಡಿದ ಅವರು, ಕೋವಿಡ್-19ರ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದರು. ವೈದ್ಯರು ಮತ್ತು ಪೊಲೀಸರಿಗೂ ಕೂಡ ತಪಾಸಣೆ ಮಾಡಬೇಕೆಂದು ಜಿಲ್ಲಾಡಳಿತ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಚೆಕ್‍ಪೋಸ್ಟ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಮನೆಗೆ ಹೋಗುವಾಗ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಅಲ್ಲದೇ ಮನೆಯವರಿಗೂ ಸಹ ಇದರ ಬಗ್ಗೆ ಅರಿವು ಮೂಡಿಸಬೇಕು. ವಯಸ್ಸಾದ ಹೋಂ ಗಾರ್ಡ್ ಸಿಬ್ಬಂದಿಗಳಿಗೆ ತಿಂಗಳಿಗೆ 2 ಬಾರಿ ತಪಾಸಣೆ ಮಾಡಲಾಗುವುದು. ಯಾವುದೇ ಸಮಸ್ಯೆಯಿದ್ದರೆ ಸಬ್‍ಇನ್ಸ್‍ಪೆಕ್ಟರ್‍ಗಳಿಗೆ ತಿಳಿಸಿ ಎಂದರು. ಲಾಕ್‍ಡೌನ್ ಮುಗಿದ ನಂತರವೂ ಸಹ ಸಾಮಾಜಿಕ ಅಂತರ…
ತುಮಕೂರು: ದಿನೇ ದೆನೇ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆತಂಕ ಹೆಚ್ಚುತ್ತಿದೆ. ಜಿಲ್ಲೆಯ ಕೆಹೆಚ್‍ಬಿ ಕಾಲೋನಿಯ ಪಿ-535 ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಪಿ-553 ವ್ಯಕ್ತಿಗೂ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ತಿಳಿಸಿದ್ದಾರೆ. ಮೃತ ಪಿ-535 ವ್ಯಕ್ತಿಯು ಪ್ರಾಥಮಿಕ ಸಂಪರ್ಕದಲ್ಲಿದ್ದ ಅವರ ಕುಟುಂಬ ಸದಸ್ಯರ 4 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 3 ಮಾದರಿಗಳು ನೆಗೆಟಿವ್ ಬಂದಿದ್ದು, ಮೃತ ವ್ಯಕ್ತಿಯ ಪತ್ನಿಗೆ ಪಾಸಿಟಿವ್ ಬಂದಿದ್ದು, ಅವರನ್ನು ಐಸೋಲೇಶನ್ ಮಾಡಲಾಗಿದೆ. ಉಳಿದಂತೆ ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದ್ದು, ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದು, ಅವರನ್ನು ಸಹ ಪರೀಕ್ಷೆಗೊಳಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 5 ಜನರಿಗೆ ಸೋಂಕು ತಗಲಿದ್ದು ಇಬ್ಬರು ಮೃತಪಟ್ಟಿದ್ದು. ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದು…











