ತುಮಕೂರು: ಹೊರ ರಾಜ್ಯಗಳಿಂದ 439 ಜಿಲ್ಲೆಗೆ ಆಗಮಿಸಿದ್ದು, ಅವರನ್ನು ವಸತಿ ಶಾಲೆ, ಹೋಟೆಲ್‍ಗಳಲ್ಲಿ ಕ್ವಾರೆಂಟೈನ್ ಮಾಡಲಾಗಿದೆ. ಈಗಾಗಲೇ ಗಂಟಲು ದ್ರಾವ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಕೆಲವರ ವರದಿ ನೆಗೆಟಿವ್ ಬಂದಿವೆ. ಇನ್ನು ಕೆಲವು ಮಾದರಿಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೂ 4 ಕೋವಿಡ್-19 ಸಕ್ರಿಯ ಪ್ರಕರಣಗಳಿದ್ದು, ಶೀಘ್ರವಾಗಿ ಗುಣಮುಖರಾಗಲು ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಮ್ಮೆ ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುವುದು. ನೆಗೆಟಿವ್ ಬಂದಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಲಾಕ್‍ಡೌನ್ ಸಡಿಲಿಕೆಯಾಗಿದ್ದು, ಜಿಲ್ಲೆಯಲ್ಲಿ ಇಂದಿನಿಂದ ಬಸ್ ಸಂಚಾರ ಆರಂಭವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಖಾಸಗಿ ವಾಹನಗಳ ಮಾಡಲು ಅನುಮತಿ ನೀಡಲಾಗಿದೆ. ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಅಂತರ್ ಜಿಲ್ಲೆಗೆ ಪ್ರಯಾಣಿಸಲು ಯಾವುದೇ ಪಾಸ್ ಅಗತ್ಯವಿಲ್ಲ ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಸಂಜೆ 7…
Author: News Desk Benkiyabale
ಮಧುಗಿರಿ: ಪಟ್ಟಣದ ಮಿನಿ ವಿಧಾನಸೌಧದ ಪಕ್ಕದಲ್ಲಿರುವ “ಗುರುಭವನ’ದ ಆವರಣ ಅನೈರ್ಮಲ್ಯದ ಜೊತೆಗೆ ಅನೈತಿಕ ಚಟುವಟಿಕೆಗಳ ತಾಣವಾಗಿದ್ದನ್ನು ಮನಗಂಡು ಈ ಆವರಣದಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಅರಿತ ತಹಸೀಲ್ದಾರ್ ಡಾ. ಜಿ. ವಿಶ್ವನಾಥ್ ರವರು ಸ್ವಚ್ಛತಾ ಕಾರ್ಯ ಹಾಗೂ ಶ್ರಮದಾನಕ್ಕೆ ಸ್ವತಃ ಮುಂದಾಗಿ ಸಮಾಜಕ್ಕೆ ಮಾದರಿಯಾದರು. ಈ ಆವರಣದ ತುಂಬಾ ಬಿಯರ್ ಬಾಟಲುಗಳು, ಮದ್ಯದ ಪ್ಯಾಕೆಟ್ ಗಳು, ಬೀಡಿ- ಸಿಗರೇಟಿನ ತುಂಡುಗಳು, ಅನೈತಿಕ ಚಟುವಟಿಕೆ ಬಳಸುವ ವಸ್ತುಗಳು ತುಂಬಿ ತುಳುಕಾಡುತ್ತಿದ್ದವು. ಗುರುಭವನದ ಹಿಂಭಾಗದ ಖಾಲಿ ಸ್ಥಳದಲ್ಲಿ ಕಸ ಕಡ್ಡಿಗಳು ತುಂಬಿಕೊಂಡಿದ್ದ ಲ್ಲದೆ, ಟ್ರಾನ್ಸ್ ಫಾರ್ಮರ್ ಗೆ ಬಳ್ಳಿಗಳು ಎತ್ತರಕ್ಕೆ ಬೆಳೆದು ವಿಷ ಜಂತುಗಳ ವಾಸ ಸ್ಥಳವಾಗಿ ಮಾರ್ಪಟ್ಟಿತ್ತು. ಜೊತೆಗೆ ಬಯಲು ಶೌಚಾಲಯವಾಗಿ ಪರಿವರ್ತನೆಗೊಂಡಿತ್ತು. ಈ ಬಗ್ಗೆ ಲಾಕ್ ಡೌನ್ ಸಂದರ್ಭದಲ್ಲಿ ಅನಿರೀಕ್ಷಿತ ಭೇಟಿ ನೀಡಿದ್ದ ತಹಶಿಲ್ದಾರರು ಗುರುಭವನದ ಆವರಣ ಅಪವಿತ್ರವಾಗಿರುವುದನ್ನು ಪವಿತ್ರಗೊಳಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಿದರು. ತಹಸೀಲ್ದಾರ್…
ತುಮಕೂರು : ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಎಸ್‍ಆರ್‍ಟಿಸಿ ಬಸ್ ಕಾರ್ಯಾಚರಣೆಯನ್ನು ಮಂಗಳವಾರದಿಂದ ತುಮಕೂರು ಜಿಲ್ಲೆಯಲ್ಲಿ ಪ್ರಾರಂಬಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್. ಗಜೇಂದ್ರ ಕುಮಾರ್ ತಿಳಿಸಿದ್ದಾರೆ. ಬಸ್ ಕಾರ್ಯಾಚರಣೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಸಂಚರಿಸಲಿರುವ ಎಲ್ಲಾ ಬಸ್‍ಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಜೇಷನ್‍ಗೊಳಿಸಲಾಗಿದೆ. ತುಮಕೂರು ವಿಭಾಗದ ವ್ಯಾಪ್ತಿಯಲ್ಲಿ 620 ಬಸ್‍ಗಳಿದ್ದು, ಪ್ರಾರಂಭಿಕವಾಗಿ 150 ಬಸ್‍ಗಳ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರ ಬೇಡಿಕೆಗನುಗುಣವಾಗಿ ಬಸ್ ಕಾರ್ಯಾಚರಣೆ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು. ಕರ್ತವ್ಯಕ್ಕೆ ನಿಯೋಜಿಸಲಾಗುವ ಬಸ್ ಚಾಲಕರು ಹಾಗೂ ನಿರ್ವಾಹಕರ ಸುರಕ್ಷತಾ ದೃಷ್ಟಿಯಿಂದ ಅವರಿಗೆ ಸ್ಯಾನಿಟೈಜûರ್, ಮುಖಗವಸು ಹಾಗೂ ಕೈಗವಸುಗಳನ್ನು ನೀಡಲಾಗುವುದು. ವೈದ್ಯಕೀಯ ತಪಾಸಣೆಗೊಳಪಡಿಸಿ ಪ್ರಮಾಣ ಪತ್ರ ಪಡೆದ ನಂತರವೇ ಬಸ್ ಚಾಲಕರು ಹಾಗೂ ನಿರ್ವಾಹಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು. ನಗರ ಬಸ್‍ನಿಲ್ದಾಣದಿಂದ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ ಬಸ್ ಸಂಚಾರ ಪ್ರಾರಂಭವಾಗಲಿದ್ದು,…
ತುಮಕೂರು: ಕೋವಿಡ್ ಸೋಂಕಿತರಾಗಿದ್ದ ತುಮಕೂರು ನಗರದ ಕೆಹೆಚ್‍ಬಿ ಕಾಲೋನಿಯ ನಿವಾಸಿಯಾದ ಪಿ-591 ಹಾಗೂ ಪಿ-592 ಸಂಪೂರ್ಣವಾಗಿ ಗುಣಮುಖರಾಗಿ ಇಂದು ಸಂಜೆ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡರು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಪಿ-591 ಹಾಗೂ ಪಿ-592 ವ್ಯಕ್ತಿಗಳನ್ನು ಆಸ್ಪತ್ರೆಯ ಆರ್‍ಎಂಓ ಡಾ|| ವೀಣಾ ಹಾಗೂ ಆರೋಗ್ಯ ಸಿಬ್ಬಂದಿ ಸಡಗರದಿಂದ ಮನೆಗೆ ಕಳುಹಿಸಿಕೊಟ್ಟರು.
ತುಮಕೂರು : ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಸಾರ್ವಜನಿಕರ ಉಪಯೋಗಕ್ಕಾಗಿ ತುಮಕೂರು ಕೆಸ್ಸಾರ್ಟಿಸಿ ನಿರ್ಮಿಸಿರುವ ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಕರಾರಸಾ ನಿಗಮ ವತಿಯಿಂದ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಲು ಬಸ್ಸನ್ನು ಮಾರ್ಪಾಡು ಮಾಡಿ, ಮೋಬೈಲ್ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ನಗರ ಮತ್ತು ಗ್ರಾಮೀಣ ಭಾಗದಿಂದ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಅನವಶ್ಯಕ ಓಡಾಟವನ್ನು ತಪ್ಪಿಸಬಹುದು. ಅವಶ್ಯಕತೆ ಇರುವ ಕಡೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ನಲ್ಲಿಯೇ ಗಂಟಲು ದ್ರವ ಮಾದರಿಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು. ಜಿಲ್ಲಾಧಿಕಾರಿ ಡಾ.ಕೆ ರಾಕೇಶ್‍ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕಡೆ ರ್ಯಾಂಡಮ್ ಆಗಿ ಪರೀಕ್ಷೆ ಮಾಡಲು ಜನರ ಗಂಟಲು ದ್ರವ ಮಾದರಿನ್ನು ಪಡೆಯಬಹುದು. ಅಲ್ಲದೇ…
ತುಮಕೂರು: ಕೊರೊನಾ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ಕೆಲಸ ನೀಡಲಾಗುತ್ತಿದೆ. ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಮಾಸಾಚರಣೆ ಅಂಗವಾಗಿ ವೈಯಕ್ತಿಕ ಬದು ನಿರ್ಮಾಣ ಕಾಮಗಾರಿಗಳ ಕಾರ್ಯಾದೇಶ ಪತ್ರ ಹಾಗೂ ಹೊಸ ಉದ್ಯೋಗ ಚೀಟಿಗಳನ್ನು ವಿತರಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಸರ್ಕಾರದ ಆದೇಶದಂತೆ ರೈತರು ತಮ್ಮ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳಬಹುದಾಗಿದೆ. ರೈತರು ಈ ಯೋಜನೆಯನ್ನು ಸದುಪಯೋಗಪಡೆದುಕೊಳ್ಳಬೇಕು. ಜನರು ಕೆಲಸ ಮಾಡಿದರೆ ಹೆಚ್ಚು ಮಾನವ ದಿನಗಳು ಸೃಜನೆಯಾಗುತ್ತವೆ. ಮುಂದಿನ ದಿನಗಳಲ್ಲಿ ಬಿದ್ದ ಮಳೆಯ ನೀರು…
ಮಧುಗಿರಿ : ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ ಅಗತ್ಯ ಮುನ್ನೆಚ್ಚೆರಿಕೆಯ ಕ್ರಮಗಳನ್ನು ಎಲ್ಲರೂ ಪಾಲಿಸಬೇಕೆಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ತುಮಕೂರು ನಗರಸಭಾ ಮಾಜಿ ಅಧ್ಯಕ್ಷ ಟಿ ಪಿ ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಚಂದ್ರಗಿರಿ ಗ್ರಾಪಂ ವ್ಯಾಪ್ತಿಯ ಸೋದೇನಹಳ್ಳಿ ಗ್ರಾಮದಲ್ಲಿ ಶನಿವಾರ ಕೆಎನ್‍ಆರ್ ಅಭಿಮಾನಿ ಬಳಗ ಹಾಗೂ ಆರ್ ಆರ್ ಅಭಿಮಾನಿ ಬಳಗದ ವತಿಯಿಂದ ಗ್ರಾಮದ 210 ಮನೆಗಳಿಗೆ ತರಕಾರಿ ಹಾಗೂ ದಿನಸಿ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು. ತುಮಕೂರು ನಗರದಲ್ಲಿ ಇಲ್ಲಿಯವರೆವಿಗೂ ಒಂದೂವರೆ ಲಕ್ಷ ಜನರಿಗೆ ನಿತ್ಯ ದಾಸೋಹ ನಡೆಸುತ್ತಿರುವ ಹಾಗೂ ಡಿಸಿಸಿ ಬ್ಯಾಂಕ್ ನಿಂದ ರೈತರ ಸಾಲವನ್ನು ಮನ್ನಾ ಮಾಡಿಸಿ ಕೆ ಎನ್ ರಾಜಣ್ಣನವರು ಬಂಗಾರದ ಮನುಷ್ಯ ಎನಿಸಿಕೊಂಡಿದ್ದಾರೆ. ಜಾತ್ಯಾತೀತ ಪಕ್ಷಾತೀತವಾಗಿ ರೈತರ ಕೂಲಿ ಕಾರ್ಮಿಕರ ನಿರ್ಗತಿಕರ ನೆರವಿಗೆ ಸಹಾಯ ಹಸ್ತ ಚಾಚುತ್ತಿರುವ ಕೆಎನ್‍ಆರ್ ಕುಟುಂಬ ವರ್ಗದವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. …
ತುಮಕೂರು : ವೈದ್ಯರ ಸಲಹಾ ಚೀಟಿಯಿಲ್ಲದೆ ಜ್ವರ, ಶೀತ, ಕೆಮ್ಮು, ಸಾರಿ(SARI) ಹಾಗೂ ಐಎಲ್‍ಐಗೆ ಸಂಬಂಧಪಟ್ಟಂತಹ ಯಾವುದೇ ಔಷಧಗಳನ್ನು ವಿತರಣೆ/ಮಾರಾಟ ಮಾಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಔಷಧ ವ್ಯಾಪಾಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲಾ ಔಷಧ ವ್ಯಾಪಾರಸ್ಥರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುನ್ನಚ್ಚರಿಕಾ ಕ್ರಮವಾಗಿ ಮೆಡಿಕಲ್ ಸ್ಟೋರ್‍ಗಳಲ್ಲಿ ಔಷಧಿ ಕೊಳ್ಳಲು ಬರುವ ರೋಗಿ ಮತ್ತು ಅವರನ್ನು ತಪಾಸಣೆ ಮಾಡಿರುವ ವೈದ್ಯರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯಬೇಕು. ಅಲ್ಲದೇ ಈ ಮಾಹಿತಿಯನ್ನು ಸರ್ಕಾರ ನೀಡಿರುವ ವೆಬ್‍ಸೈಟ್‍ನಲ್ಲಿ ನಮೂದಿಸಬೇಕೆಂದು ಅವರು ನಿರ್ದೇಶನ ನೀಡಿದರು. ವೈದ್ಯರ ಸಲಹಾ ಚೀಟಿಯಿಲ್ಲದೇ ಔಷಧಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದ್ದಲ್ಲಿ ಅಂತಹವರ ವಿರುದ್ಧ Epidemic Act ಅಡಿಯಲ್ಲಿ ಸೂಕ್ತ ಕ್ರಮ ಜರುಗಿಸಿ ಪರವಾನಗಿಗಳನ್ನು ರದ್ದುಪಡಿಸಲಾಗುವುದು ಎಂದು…
ಗುಬ್ಬಿ : ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರದಲ್ಲಿ ನಡೆದಿದ್ದು ಮೃತ ಬಾಲಕನ್ನು ಶ್ರೀನಿವಾಸ್ ಎಂದು ಪತ್ತೆ ಹಚ್ಚಲಾಗಿದೆ. ಗುರುವಾರ ಬೆಳಗ್ಗೆ 10 ಗಂಟೆಯಲ್ಲಿ ಸ್ನೇಹಿತರೊಂದಿಗೆ ಸಿ ಎಸ್ ಪುರ ಕೆರೆಗೆ ಈಜಲು ಹೋದ ಶ್ರೀನಿವಾಸ್ ಅಚಾನಕ್ ಆಗಿ ನೀರಿನಲ್ಲಿ ಮುಳುಗಿದ್ದಾನೆ. ಇದನ್ನು ಕಂಡ ಸ್ನೇಹಿತರೆಲ್ಲರು ಭಯದಿಂದ ಓಡಿ ಹೋಗಿದ್ದಾರೆ. ಘಟನೆ ಬಗ್ಗೆ ತಿಳಿದ ಸ್ಥಳೀಯ ವ್ಯಕ್ತಿಗಳು ಅವನನ್ನು ರಕ್ಷಿಸಲು ಮುಂದಾಗಿದ್ದು ಅಷ್ಟರಲ್ಲಾಗಲೇ ಶ್ರೀನಿವಾಸ್ ಮೃತಪಟ್ಟಿದ್ದನು ಸ್ಥಳಕ್ಕೆ ಸಿ.ಎಸ್.ಪುರ ಪೆÇಲೀಸ್ ಠಾಣೆಯ ಎ ಎಸ್ ಐ ಬಸವರಾಜ್ ಭೇಟಿ ನೀಡಿ ಪ್ರಕರಣವನ್ನು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಮಕೂರು : ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತುಮಕೂರು ವತಿಯಿಂದ ತಂಬಾಕು ನಿಯಂತ್ರಣ ಕಾನೂನು-2003 ರ ಪ್ರಮುಖ ನಿಯಮಗಳಡಿ ಹಾಗೂ ಕೋವಿಡ್ -19 ನಿಯಂತ್ರಣದ ಸಲುವಾಗಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತುಮಕೂರು ನಗರದ ಶಿರಾಗೇಟ್, ಊರುಕೆರೆ, ಯಲ್ಲಾಪುರದ ಕೆಲ ಅಂಗಡಿಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ಹಾಗೂ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುತ್ತಿದ್ದವರ ವಿರುದ್ದ ಒಟ್ಟು 100 ಪ್ರಕರಣಗಳನ್ನು ದಾಖಲಿಸಿ, 11,580 ರೂ.ಗಳ ದಂಡ ವಸೂಲಿ ಮಾಡಲಾಗಿದೆ. ಕಾರ್ಯಾಚರಣೆಯ ಬಗ್ಗೆ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ನಾಗೇಂದ್ರಪ್ಪ ಹಾಗೂ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳಾದ ಡಾ|| ಮೋಹನ್ ದಾಸ್ ಆರ್.ವಿ ಇವರುಗಳು ಮಾತನಾಡಿ, ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‍ಮಸಾಲ, ಜರ್ದಾ, ಖೈನಿ, ಇತ್ಯಾದಿಗಳ ಬಳಕೆ ಮಾಡಿ ಸಾರ್ವಜನಿಕ…











