ತುಮಕೂರು: ಲೋಕಸಭೆ ಚುನಾವಣೆ ಪ್ರಯುಕ್ತ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೆ ಹೊರಗುಳಿದವರಿಗಾಗಿ ಜಿಲ್ಲಾದ್ಯಂತ ಮೊದಲನೇ ಹಂತದಲ್ಲಿ ಫೆಬ್ರುವರಿ 23 ಮತ್ತು 24ರಂದು ಹಾಗೂ ಎರಡನೇ ಹಂತದಲ್ಲಿ ಮಾರ್ಚ್ 2 ಮತ್ತು 3ರಂದು ವಿಶೇಷ ನೋಂದಣಿ ಅಭಿಯಾನವನ್ನು ನಡೆಸಲಾಗುವುದು ಎಂದು ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯತಿಯಲ್ಲಿಂದು ನಡೆದ ಕೆ.ಡಿ.ಪಿ. ಸಭೆಯ ನಂತರ ಮಾತನಾಡಿದ ಅವರು, ಅಭಿಯಾನ ದಿನಗಳಂದು ಸಂಬಂಧಿಸಿದ ಮತಗಟ್ಟೆ ಅಧಿಕಾರಿಯು ಜನವರಿ 16ರಂದು ಪ್ರಕಟಿಸಲಾದ ಅಂತಿಮ ಮತದಾರರ ಭೌತಿಕ ಪಟ್ಟಿಯೊಂದಿಗೆ ಆಯಾ ಮತಗಟ್ಟೆಯಲ್ಲಿ ಹಾಜರಿದ್ದು, ಮತದಾರರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು. ಈ ಅಭಿಯಾನದಲ್ಲಿ ದಿನಾಂಕ: 1-1-2019ಕ್ಕೆ 18ವರ್ಷ ಪೂರ್ಣಗೊಂಡ ಅರ್ಹ ಮತದಾರರು ಮತಪಟ್ಟಿಗೆ ನೋಂದಾಯಿಸಿಕೊಳ್ಳಲು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತಗಟ್ಟೆ ಅಧಿಕಾರಿಗೆ ಸಲ್ಲಿಸಬಹುದು. ಅಲ್ಲದೆ ಮತದಾರ ಒಂದು ವಿಧಾನ ಸಭಾ ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ…
Author: News Desk Benkiyabale
ತುಮಕೂರು: ಶ್ರೀ ಸಿದ್ದಗಂಗಾ ಮಠ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಫೆಬ್ರುವರಿ 26 ರಿಂದ ಮಾರ್ಚ್ 7 ರವರೆಗೆ ಜರುಗಲಿದ್ದು, ಜಾತ್ರೆ ಪ್ರಯುಕ್ತ ಮಾರ್ಚ್ 5ರಂದು ರಥೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಏರ್ಪಡಿಸಲಾಗುವುದು ಎಂದು ಮಠದ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮಿಗಳು ತಿಳಿಸಿದ್ದಾರೆ. ಜಾತ್ರೆಯಲ್ಲಿ ಫೆಬ್ರುವರಿ 26ರ ರಾತ್ರಿ ಶ್ರೀ ಗೋಸಲ ಸಿದ್ಧೇಶ್ವರಸ್ವಾಮಿ ಉತ್ಸವ, ಶೂನ್ಯ ಸಿಂಹಾಸನರೋಹಣೋತ್ಸವ, ವೃಷಭ ವಾಹನ ಉತ್ಸವಗಳು ನಡೆಯಲಿದ್ದು, ಫೆಬ್ರುವರಿ 27ರಂದು ನಂದಿವಾಹನ ಹಾಗೂ ಗಜವಾಹನ; ಫೆಬ್ರುವರಿ 28ರಂದು ಹುಲಿವಾಹನ ಹಾಗೂ ಸಿಂಹವಾಹನ; ಮಾರ್ಚ್ 1ರಂದು ಹುತ್ತದ ವಾಹನ ಹಾಗೂ ಶೇಷವಾಹನ; ಮಾರ್ಚ್ 2ರಂದು ಅಶ್ವವಾಹನ ಹಾಗೂ ನವಿಲುವಾಹನ; ಮಾರ್ಚ್ 3ರಂದು ರಾವಣವಾಹನ, ಬಿಲ್ವವೃಕ್ಷವಾಹನ ಹಾಗೂ ನವರಂಗಪಾಲಕಿ ಉತ್ಸವ; ಮಾರ್ಚ್ 4ರಂದು ಮಹಾಶಿವರಾತ್ರಿ ಪ್ರಯುಕ್ತ ಬೆಳ್ಳಿರಥೋತ್ಸವ ಹಾಗೂ ಮುತ್ತಿನ ಪಾಲಕಿ ಉತ್ಸವ ನಡೆಯಲಿವೆ. ಅಲ್ಲದೆ ಮಾರ್ಚ್ 5ರಂದು ರಥೋತ್ಸವ ಹಾಗೂ ರುದ್ರಾಕ್ಷಿ ಮಂಟಪೋತ್ಸವ, ಮಾರ್ಚ್ 6ರಂದು ಬೆಳ್ಳಿಪಾಲಕಿ ಉತ್ಸವ; ಮಾರ್ಚ್7ರಂದು…
ತುಮಕೂರು: ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಉದ್ಘಾಟನಾ ಸಮಾರಂಭವನ್ನು ಫೆಬ್ರುವರಿ 22ರಂದು ಸಂಜೆ 6.30 ಗಂಟೆಗೆ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಸಮಾರಂಭದ ದಿವ್ಯಸಾನಿಧ್ಯ ವಹಿಸಲಿದ್ದು, ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಅವರು ವಸ್ತು ಪ್ರದರ್ಶನದ ಉದ್ಘಾಟನೆ ನೆರವೇರಿಸುವರು. ಸಣ್ಣ ಕೈಗಾರಿಕಾ ಸಚಿವ ಎಸ್.ಆರ್ ಶ್ರೀನಿವಾಸ್ ಖಾದಿ ಉತ್ಸವವನ್ನು ಉದ್ಘಾಟಿಸುವರು. ಶಾಸಕರಾದ ಜಿ.ಬಿ ಜ್ಯೋತಿಗಣೇಶ್ ಹಾಗೂ ಡಿ.ಸಿ ಗೌರಿಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಪಾಲಿಕೆ ಮೇಯರ್ ಲಲಿತ ರವೀಶ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಸ್ತುಪ್ರದರ್ಶನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ.22 ರಿಂದ ಮಾರ್ಚ್ 8ರವರೆಗೂ ಪ್ರತಿದಿನ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಫೆಬ್ರುವರಿ 22ರ ಸಂಜೆ 8.30 ಗಂಟೆಗೆ ಯಲ್ಲಾಪುರದ ಶ್ರೀ ಮಾರುತಿ ಗೆಳೆಯರ ಬಳಗದವರಿಂದ “ಕುರುಕ್ಷೇತ್ರ” ಪೌರಾಣಿಕ…
ತುಮಕೂರು: ಜಿಲ್ಲೆಯಲ್ಲಿ ಸಿರಿಧಾನ್ಯ ಬೆಳೆ ಬೆಳೆಯುವ ರೈತರಿಗೆ 10 ಸಾವಿರ ರೂ.ಗಳವರೆಗೂ ಸಾಲ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಅಕ್ಕಮಹಾದೇವಿ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸಲು ಸರ್ಕಾರದಿಂದ ನೀಡುತ್ತಿರುವ ಈ ಸೌಲಭ್ಯದ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸದರಲ್ಲದೆ, ಸಣ್ಣ ರೈತರು ಹಾಗೂ ಅತೀ ಸಣ್ಣ ರೈತರಿಗಾಗಿ ಲಭ್ಯವಿರುವ ಸರ್ಕಾರದ ವಿವಿಧ ಸವಲತ್ತುಗಳನ್ನು ಪೂರ್ಣ ಪ್ರಮಾಣದಲ್ಲಿ ಅವರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಕೆಲವು ರೈತರಿಗೆ ಜೇನು ಸಾಕಾಣಿಕೆ ಹಾಗೂ ತೋಟಗಾರಿಕೆಯ ಇಲಾಖೆಯ ಬಗ್ಗೆ ಮಾಹಿತಿಯೇ ಇರುವುದಿಲ್ಲ. ಸರ್ಕಾರಿ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು. ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಲುಪಿಸಲು ಸೂಕ್ತ ಸಾರಿಗೆ ವ್ಯವಸ್ಥೆ…
ತುಮಕೂರು: ಜನಪದ ಸಂಸ್ಕೃತಿಯೇ ಜೀವನದ ಮೌಲ್ಯವಾಗಿದ್ದು ಕಲೆ ಉಳಿದರೆ ಮಾತ್ರ ಮನುಷ್ಯ ಸಂಸ್ಕೃತಿಗೆ ಅರ್ಥ ಬರುತ್ತದೆ, ಪ್ರಜ್ಞಾವಂತರೆಲ್ಲರೂ ಸಮಾಜಮುಖಿಯಾದ ಜನಪದ ಕಲೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಕರ್ನಾಟಕ ಜಾನಪದ ಪರಿಷತ್‍ನ ಅಧ್ಯಕ್ಷ ಟಿ.ತಿಮ್ಮೇಗೌಡ ಹೇಳಿದರು. ನಗರದ ಉಪ್ಪಾರಳ್ಳಿ ಇಂದಿರಾ ವಿದ್ಯಾಸಂಸ್ಥೆ ಆವರಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಜನಪದ ಕಲೋತ್ಸವ ಉದ್ಘಾಟಿಸಿ ಮಾತನಾಡಿ, ಜನಪದ ಕಲೆ, ಸಾಹಿತ್ಯ ಮನುಷ್ಯ ಸಂಸ್ಕøತಿಯ ರೂಪವಾಗಿದ್ದು ಜನಪದರನ್ನ ಅಕ್ಷರವಂತರು ನಿರ್ಲಕ್ಷ್ಯತೆಯಿಂದ ಕಾಣಬಾರದು, ಜನಪದರೇ ನಮ್ಮ ಸಂಸ್ಕೃತಿಯ ವಕ್ತಾರರು. ಜನಪದ ಕಲೆ ಮತ್ತು ಸಂಸ್ಕೃತಿಯ ನಾಶವೇ ಮಾನವ ಸಂಸ್ಕೃತಿಯ ನಾಶವೂ ಆಗುತ್ತದೆ ಈ ಎಚ್ಚರಿಕೆ ನಾಗರೀಕ ಮಾನವರಾದ ನಮಗೆಲ್ಲರಿಗೂ ಇರಬೇಕು ಎಂದರು. ಸಮಾರಂಭದಲ್ಲಿ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ ಅವರ ಮೈಲಾರಲಿಂಗ ಕ್ಷೇತ್ರ ಕಾರ್ಯಾಧಾರಿತ ಅಧ್ಯಯನ ಕೃತಿಯನ್ನು ಡಾ.ಕಮಲಾ ಹಂಪನ ಬಿಡುಗಡೆ ಮಾತನಾಡಿ, ಡಾ.ಚಿಕ್ಕಣ್ಣ ಜಿಲ್ಲೆಯ ಆಸ್ತಿ, ಅವರ 63 ಕೃತಿಗಳಲ್ಲಿ 50ಕ್ಕೂ ಹೆಚ್ಚು ಕೃತಿ ಈ…
ಮಧುಗಿರಿ : ಸರ್ವಜ್ಞ ಸಮಾಜಕ್ಕೆ ನೀಡಿದ ಕೊಡುಗೆಗಳು ಇಂದಿಗೂ ಪ್ರಸ್ತುತ. ಸಮಾಜದ ಅಂಕು ಡೊಂಕುಗಳನ್ನು ತಿದ್ದುವುದಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹಾತ್ಮ ಸರ್ವಜ್ಞ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಪಟ್ಟಣದ ಮಾಲಿಮರಿಯಪ್ಪ ರಂಗಮಂದಿರದಲ್ಲಿ ತಾಲೂಕು ಆಡಳಿತ, ಕವಿ ಸರ್ವಜ್ಞ ವೇದಿಕೆ ಮತ್ತು ತಾಲೂಕು ಕುಂಬಾರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗಳಿಗೆ ಅರ್ಥ ಬರುತ್ತದೆ. ಸರ್ಕಾರದ ವತಿಯಿಂದ ಸರ್ವಜ್ಞ ಜಯಂತಿಯನ್ನು ಆಚರಿಸುತ್ತಿರುವುದು ಸ್ವಾಗತಾರ್ಹ. ಎಲ್ಲಾ ವರ್ಗಗಳನ್ನು ಪ್ರೀತಿ ವಿಶ್ವಾಸದಿಂದ ಗೌರವಿಸಿ ಮೈತ್ರಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು. ತಾಲೂಕು ಸರ್ವಜ್ಞ ವೇದಿಕೆಗೆ ಸರ್ಕಾರದ ವತಿಯಿಮದ ಸ್ಥಳ ಮಂಜೂರಾಗಿದ್ದು, ಸಮುದಾಯದ ಅಭಿವೃದ್ದಿಗೆ ಈ ಸ್ಥಳದಲ್ಲಿ ನಿವೇಶನ ನಿರ್ಮಿಸಿಕೊಳ್ಳಲು ಅಗತ್ಯವಿರುವ ನೆರವನ್ನು ಒದಗಿಸಲು ಬದ್ದ. ಸಮುದಾಯದ ಮುಖಂಡರ ಒತ್ತಾಯದಂತೆ ಪಟ್ಟಣದ…
ತುಮಕೂರು: ಪ್ರತಿಯೊಬ್ಬರೂ ಸಾಮಾಜಿಕ ಸಮಾನತೆಗಾಗಿ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ತತ್ವವನ್ನು ಅನುಸರಿಸಬೇಕು ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ವೈ.ಎಸ್. ಸಿದ್ದೇಗೌಡ ಕರೆ ನೀಡಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗವು ವಿವಿ ಆವರಣದಲ್ಲಿಂದು ಏರ್ಪಡಿಸಿದ್ದ “ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ” ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಮಾಜದಲ್ಲಿಂದು ನಾವೆಲ್ಲ ಸ್ವಾರ್ಥ ಮನೋಭಾವನೆಯಲ್ಲಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಯು ತಮ್ಮ ಹೊಣೆಗಾರಿಕೆಯನ್ನು ಅರಿತಾಗ ಮಾತ್ರ ಸಾಮಾಜಿಕ ನೆಮ್ಮದಿ ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ 6ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಾಬಾ ಸಾಹೇಬ್ ಎಲ್. ಜಿನರಾಳ್ಕರ್ ಅವರು ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಸಮಾನರು. ಸರ್ಕಾರವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ನೀಡಿ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಬೇಕು. ಬಡವ-ಶ್ರೀಮಂತರ ನಡುವೆ ಅಂತರ ಕಡಿಮೆಯಾದರೆ…
ತುಮಕೂರು: ಅಸಂಘಟಿತ ಕಾರ್ಮಿಕರಾದ ಮನೆಗೆಲಸಗಾರರು, ಹಮಾಲಿಗಳು, ಮೆಕ್ಯಾನಿಕ್‍ಗಳು, ಕ್ಷೌರಿಕರು, ಚಿಂದಿ ಆಯುವವರು, ಬೀದಿಬದಿ ವ್ಯಾಪಾರಿಗಳು, ಟೈಲರ್‍ಗಳು, ಚಿನ್ನಬೆಳ್ಳಿ ಕೆಲಸಗಾರರು ಪುರಿಭಟ್ಟಿ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಸಂಘಟಿತ ಕಾರ್ಮಿಕರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು. ತುಮಕೂರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ವೃತ್ತದಲ್ಲಿ ಸಮಾವೇಶಗೊಂಡ ಅಸಂಘಟಿತ ವಲಯದ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಕಾರ್ಮಿಕ ಅಧಿಕಾರಿಗಳ ಮೂಲಕ ಸಚಿವ ವೆಂಕಟರಮಣಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ರಾಜ್ಯ ಸರ್ಕಾರವು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿಯಡಿ ಅರ್ಜಿಗಳು ಸಲ್ಲಿಸಿ ಆರು ತಿಂಗಳುಗಳು ಕಳೆದಿದ್ದರೂ ಇದುವರೆಗೂ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಿಲ್ಲ. ಇದರಿಂದ ಕಾರ್ಮಿಕರಿಗೆ ಗೊಂದಲ ಉಂಟಾಗಿದೆ.…
ತುಮಕೂರು: ಇತ್ತೀಚಿನ ದಿನಗಳಲ್ಲಿ ರಾಗಿ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒತ್ತಡದ ಬದುಕಿನಿಂದ ಮಧುಮೇಹಿಗಳ ಸಂಖ್ಯೆ ಹೆಚ್ಚಾದಂತೆ ಸಿರಿಧಾನ್ಯವಾದ ರಾಗಿಯ ಮಹತ್ವವನ್ನು ಅರಿತು ಹೆಚ್ಚು ಜನರು ಬಳಸುತ್ತಿದ್ದಾರೆ ಎಂದು ಜೀವನ ಉತ್ತೇಜನಾಧಿಕಾರಿ ಗುರುದತ್ ತಿಳಿಸಿದರು. ತಾಲ್ಲೂಕಿನ ಸೋಪನಹಳ್ಳಿ ಗ್ರಾಮದ ರವಿಕುಮಾರ್ ಜಮೀನಿನಲ್ಲಿ ಐಡಿಎಫ್ ಸಂಸ್ಥೆ ಬೆಂಗಳೂರು, ಸುಪ್ರಜಾ ಫೌಂಡೇಷನ್ ಮತ್ತು ಕೊಲ್ಲಾಪುರದಮ್ಮ ರೈತ ಉತ್ಪಾದಕರ ಕಂಪನಿವತಿಯಿಂದ ಏರ್ಪಡಿಸಿದ್ದ ನಾಟಿತಳಿ ರಾಗಿಬೆಳೆಯ ಕ್ಷೇತ್ರೋತ್ಸವದಲ್ಲಿ ಮಾತನಾಡಿದ ಅವರು, ತಳಿಗಳನ್ನು ರೈತರು ಅನ್ವೇಷಣೆ ಮಾಡುವ ಮೂಲಕ ಹೊಸ ತಳಿಗಳ ಕಂಡು ಹಿಡಿಯಬೇಕು. ರಾಗಿ ತಳಿಯು ಕಡಿಮೆ ಪ್ರಮಾಣದ ನೀರಿದ್ದರೂ ಬೆಳೆಯುತ್ತದೆ ಎಂಬುದು ವಿಶೇಷ. ಮಳೆ ನಿಯಮಿತವಾಗಿ ಸುರಿಯದಿದ್ದರೂ ಒಣ ಹವೆಯನ್ನು ತಡೆದುಕೊಂಡು ಬದುಕುಳಿಯುವ ಸಾಮರ್ಥ ನಾಟಿತಳಿಗಳಲ್ಲಿ ಇರುತ್ತದೆ ಎಂದರು. ಐಡಿಎಫ್ ಸಂಸ್ಥೆಯ ತಾಲ್ಲೂಕು ಸಂಯೋಜಕ ಕೆ.ಎಸ್.ಸುರೇಶ್ ಮಾತನಾಡಿ, ಐಡಿಎಫ್ ಸಂಸ್ಥೆಯು ಆರ್ಥಿಕ ಸೆರ್ಪಡೆ, ಜೀವನ ಉತ್ತೇಜನ, ಸಂಘಟನೆ ಮತ್ತು ಕೃಷಿ ಪರಿಕರಗಳನ್ನು ಎಲ್ಲ…
ತುಮಕೂರು: ಇಂದು ಬೆಳಗ್ಗೆ ಕುಣಿಗಲ್ ತಾಲೂಕಿನ ಆಲಪ್ಪಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿ ನಿಲ್ಲಿಸಿದ್ದ ಕಾರುಗಳಿಗೆ ಸಿ.ಟಿ.ರವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಶಿಕುಮಾರ್ (28) ಹಾಗೂ ಸುನಿಲ್ ಗೌಡ (27) ಮೃತ ದುರ್ದೈವಿಗಳು. ಇನ್ನೊಬ್ಬರಿಗೆ ತೀವ್ರ ಸ್ವರೂಪದ ಮೂಳೆ ಮುರಿತ ಉಂಟಾಗಿದೆ. ಎರಡು ಕಾರುಗಳಲ್ಲಿ 13 ಜನ ಗೆಳೆಯರು ಪ್ರವಾಸಕ್ಕೆಂದು ಹೋಗಿದ್ದರು. ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಹೆದ್ದಾರಿ ಸಮೀಪ ತಮ್ಮ ಕಾರುಗಳನ್ನು ನಿಲ್ಲಿಸಿ ರಸ್ತೆಬದಿಯಲ್ಲಿ ನಿಂತಿದ್ದ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಶಾಸಕ ಸಿ.ಟಿ.ರವಿ ಅವರ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಅಪ್ಪಳಿಸಿತು. ಈ ಸಂದರ್ಭದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ನಡೆದ ತಕ್ಷಣ ಆಘಾತಕ್ಕೊಳಗಾದ ಶಾಸಕ ರವಿ ಅವರು ಸ್ವಲ್ಪ ಹೊತ್ತು ಘಟನಾ ಸ್ಥಳದಲ್ಲಿದ್ದರು ಬಳಿಕ ಬೆಂಗಳೂರಿಗೆ ಬಂದು ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿ ಪ್ರಾಥಮಿಕ…