Author: News Desk Benkiyabale

ತುಮಕೂರು:       ಜಿಲ್ಲೆಯಿಂದ ಹುಣಸೆ ಹಣ್ಣು ಮತ್ತು ಕೊಬ್ಬರಿಯನ್ನು ಕೆಲವು ನಿಬಂಧನೆಗೊಳಪಟ್ಟು ಹೊರ ರಾಜ್ಯಗಳಿಗೆ ಕಳುಹಿಸಲು ಏಪ್ರಿಲ್ 24ರಿಂದ(ನಾಡಿದ್ದು) ಅವಕಾಶ ಕಲ್ಪಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೊವಿಡ್-19 ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ಹೊರ ರಾಜ್ಯಗಳಿಗೆ ಹುಣಸೆ ಹಣ್ಣು ಮತ್ತು ಕೊಬ್ಬರಿ ತೆಗೆದುಕೊಂಡು ಹೋಗಿ ವಾಪಸ್ ಬರುವ ಲಾರಿ ಡ್ರೈವರ್‍ಗಳನ್ನು 14 ದಿನಗಳವರೆಗೆ ಕಡ್ಡಾಯವಾಗಿ ಕ್ವಾರೆಂಟೈನ್ ಮಾಡಲಾಗುವುದು ಎಂದರು.       ಕೋವಿಡ್-19ರ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ರೈಸ್‍ಮಿಲ್‍ಗಳಲ್ಲಿ ಹೊರ ರಾಜ್ಯಗಳಿಂದ ಭತ್ತ ತರಿಸುತ್ತಿರುವುದು ಹಾಗೂ ರೈಸ್ ಸರಬರಾಜು ಮಾಡುತ್ತಿದ್ದು, ವ್ಯವಸ್ಥಿತವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ ಕೊಬ್ಬರಿ ಹಾಗೂ ಹುಣಸೆ ಹಣ್ಣಿನ ವರ್ತಕರು/ಎಪಿಎಂಸಿಗಳು ನಿರ್ವಹಣೆ ಮಾಡಬೇಕು ಎಂದರು.…

Read More

ತುಮಕೂರು: ಕೊರೊನಾ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾವಹಿಸಲು ಕೃಷಿ ಚಟುವಟಿಕೆಗೆ ಪೂರಕವಾದ ಪರಿಕರಗಳು ಮತ್ತು ಬೋರ್‍ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ ಮಾಡಿ ಕೊಡಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ರೈತರು ನಿಶ್ಚಿಂತೆಯಿಂದ ಕೃಷಿ ಕಾಯಕ ಮುಂದುವರಿಸಲು ಮನವಿ ಮಾಡಿದರು.       ಇದುವರೆಗೂ ತಾವು ತುಮಕೂರು ಸೇರಿದಂತೆ 26 ಜಿಲ್ಲೆಗಳ ಕೃಷಿ ಪರಿಸ್ಥಿಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ.ಸರಣಿ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. 19 ಜಿಲ್ಲೆಗಳ ಕೃಷಿ ಸ್ಥಿತಿಗತಿ – ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಿದ್ದೇನೆ. ಇನ್ನೂ 4 ಜಿಲ್ಲೆಗಳ ಪರಿಶೀಲನೆ ನಂತರ ಮತ್ತೊಮ್ಮೆ ಸಮಗ್ರ ವರದಿ ಸಲ್ಲಿಸುತ್ತೇನೆ…

Read More

ತುಮಕೂರು:       ಜಿಲ್ಲೆಯ ಪಾಲಿನ ಬಾಕಿ ಉಳಿಸಿಕೊಂಡಿರುವ ಹೇಮಾವತಿ ನೀರನ್ನು ಕೂಡಲೇ ಹರಿಸಲು ಕ್ರಮ ಕೈಗೊಳ್ಳಬೇಕು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ, ಮಾಜಿ ಶಾಸಕ ಬಿ.ಸುರೇಶ ಗೌಡ ಸಲಹೆ ನೀಡಿದ್ದಾರೆ.       ಗೊರೂರು ಜಲಾಶಯದಲ್ಲಿ ಇನ್ನೂ 7 ಟಿಎಂಸಿ ಅಡಿಯಷ್ಟು ನೀರಿನ ಸಂಗ್ರಹವಿದೆ. ಇದು ತುಮೂರು ಪಾಲಿನ ನೀರು ಆಗಿದೆ. ಈ ನೀರನ್ನು ಕೂಡಲೇ ತುಮಕೂರಿಗೆ ಬಿಡಬೇಕು ಎಂದು ಹೇಳಿದ್ದಾರೆ.       ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಅಷ್ಟೇ ಅಲ್ಲದೇ ಅಂತರ್ಜಲದ ಕುಸಿತದ ಕಾರಣ ರೈತರು ಬೀದಿಗೆ ಬೀಳುತ್ತಿದ್ದಾರೆ. ಹೀಗಾಗಿ ತುಮಕೂರು ಪಾಲಿನ ನೀರನ್ನು ಕೂಡಲೇ ಹರಿಸಬೇಕು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರೊಂದಿಗೆ ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ.       ಕಳೆದ ಜಲಾಶಯದಲ್ಲಿ ನೀರಿದ್ದರೂ ತುಮಕೂರು ಗ್ರಾಮಾಂತರ ಕ್ಷೇತ್ರದ ಕೆರೆಗಳನ್ನು ತುಂಬಿಸಿಕೊಳ್ಳುವಲ್ಲಿ ಶಾಸಕ ಬಿ.ಸಿ.ಗೌರಿಶಂಕರ್ ವಿಫಲರಾದರು. ಸರ್ಕಾರದ ಮೇಲೆ ಒತ್ತಡ…

Read More

ಚಿಕ್ಕನಾಯಕನಹಳ್ಳಿ:       ಬಿಜಾಪುರ, ಗುಲ್ಬರ್ಗಾ ಜಿಲ್ಲೆಯ ಸಂಪರ್ಕದಲ್ಲಿದ್ದು ಇಲ್ಲಿ ನೆಲೆಸಿರುವವರ ಬಗ್ಗೆ ಹೆಚ್ಚಿನ ನಿಗಾವಹಿಸಿ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಖಡಕ್ ಸೂಚನೆ ನೀಡಿದರು.         ಕೊರೊನಾ ವೈರಸ್ ತಡೆ ಅನ್ವಯ ಲಾಕ್‍ಡೌನ್ ಸಂದರ್ಭದಲ್ಲಿ ನಡೆದಿರುವ ಕಾನೂನು ಪರಿಪಾಲನೆ ಹಾಗೂ ವಿವಿಧ ಇಲಾಖೆಗಳ ಕಾರ್ಯಪ್ರಗತಿಯ ಮಾಹಿತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಇದಕ್ಕೂ ಮೊದಲು ತಹಸೀಲ್ದಾರ್ ತೇಜಸ್ವಿನಿ ಮಾಹಿತಿ ನೀಡಿ ಬೆಸ್ಕಾ ಇಲಾಖೆಯಡಿ ನಡೆಯುವ ಕಾಮಗಾರಿ ಕೆಲಸಕ್ಕೆ ಚಿಕ್ಕೋಡಿ ಜಿಲ್ಲೆಯಿಂದ ನಾಲ್ಕುಮಂದಿ ದ್ವಿಚಕ್ರ ವಾಹನದಲ್ಲಿ ತಾಲ್ಲೂಕಿಗೆ ಬಂದಿದ್ದಾರೆ, ಇದಲ್ಲದೆ ತಮಿಳುನಾಡಿನ ಕೃಷ್ಣಗಿರಿ ಮೂಲದ ಲಾರಿ ಚಾಲಕ ತಾಲ್ಲೂಕಿನ ಅರೇನಹಳ್ಳಿಗೇಟ್ ಬಳಿ ನೆಲೆಸಿದ್ದರೆ, ಮತ್ತೊಬ್ಬ ಮುದ್ದೆಬಿಹಾಳದ ಲಾರಿ ಮಾಲಿಕ ಹಾಗೂ ಅವನೊಂದಿಗಿರುವ ಚಾಲಕನನ್ನೂ ಸಹ ಬಂದಿದ್ದು ಇವರೆಲ್ಲರನ್ನೂಸಹ ಐಸೋಲೇಷನ್‍ನಲ್ಲಿ ಇರಿಸಲಾಗಿದ್ದು ಯಾವುದೇ ಸೋಂಕಿನ ಲಕ್ಷಣ ಕಂಡುಬಂದಿಲ್ಲವೆಂದರು. ಈ ವಿವರದಿಂದ ಗಾಬರಿಗೊಂಡ ಸಚಿವರು ಇಂತಹ ವ್ಯಕ್ತಿಗಳ ಬಗ್ಗೆ ಹೆಚ್ಚು ನಿಗಾವಹಿಸಿ, ಇವರೆಲ್ಲಾ ಹೇಗೆ ಇಲ್ಲಿಗೆ ನುಸುಳಿದರೆಂದು ಪ್ರಶ್ನಿಸಿದರು.…

Read More

ತುಮಕೂರು :       ತಾಲ್ಲೂಕಿನ ನಾಗವಲ್ಲಿಯಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದ ಸಂಕಷ್ಟ ಅನುಭವಿಸುತ್ತಿರುವ ಬಡವರಿಗೆ ಮಾಜಿ ಶಾಸಕ ಸುರೇಶ್‌ಗೌಡ ಆಹಾರ ಸಾಮಗ್ರಿ ಕಿಟ್, ಹಣ್ಣು ತರಕಾರಿಗಳನ್ನು ವಿತರಿಸಿದರು.        ಕೊರೊನಾ, ಲಾಕ್ ಡೌನ್ ಕಾರಣದಿಂದ ತುಮಕೂರು ಗ್ರಾಮಾಂತರ ಕ್ಷೇತ್ರದ ಜನರು ತೀರಾ ಸಂಕಷ್ಟಕ್ಕೆ ಸಿಲುಕಿದ್ದು, ಗ್ರಾಮಾಂತರ ಕ್ಷೇತ್ರದಿಂದ ಬೆಂಗಳೂರು ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ನೆಲೆಸಿರುವ ಉದ್ಯಮಿಗಳು, ಶ್ರೀಮಂತರು, ಸಾಪ್ಟವೇರ್ ಎಂಜಿನಿಯರ್ ಗಳು ಕ್ಷೇತ್ರಕ್ಕೆ ನೆರವಾಗುವ ನಿಟ್ಟಿನಲ್ಲಿ ಮುಂದೆ ಬರಬೇಕು ಎಂದು ಮಾಜಿ ಶಾಸಕ ಬಿ.ಸುರೇಶಗೌಡ ಮನವಿ ಮಾಡಿದರು.       ಜಿ.ಪಂ. ಸದಸ್ಯೆ ಅನಿತಾಸಿದ್ದೇಗೌಡ, ಗ್ರಾ.ಪಂ. ಅಧ್ಯಕ್ಷೆ ಪಾರ್ವತಮ್ಮ,ಉಪಾಧ್ಯಕ್ಷೆ ಮಂಜುಳಾ, ಸದಸ್ಯ ರಮೇಶ್, ಮಾಜಿ ಅಧ್ಯಕ್ಷ ನಾಗಣ್ಣ, ಸುಮಿತ್ರಮ್ಮ, ಆರಾಧ್ಯ, ಗೋಪಿ,ನಾರಾಯಣಪ್ಪ, ಪ್ರಕಾಶ್, ಗಿರೀಶ್,ಪಾಪಣ್ಣ, ನವೀನ್ ಮತ್ತಿತರರು ಉಪಸ್ಥಿತರಿದ್ದರು.

Read More

ತುಮಕೂರು :       ಪಶು ಸಂಗೋಪನೆ ಇಲಾಖೆಯಡಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ನಗರದ ಹನುಮಂತಪುರದಲ್ಲಿ ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಇಂದು ಚಾಲನೆ ನೀಡಿದರು.       ನಂತರ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಮಾಂಸವನ್ನು ನೇರವಾಗಿ ಜನರಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ವೈದ್ಯರು ಹೇಳುವಂತೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ದೇಹಕ್ಕೆ ಪ್ರೋಟಿನ್ ಅಂಶ ಅಗತ್ಯವಿರುವುದರಿಂದ ಆರೋಗ್ಯಕರ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆ. ಮಾರುಕಟ್ಟೆಯ ದರಕ್ಕಿಂತ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟ ಮಾಂಸವನ್ನು ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.       ಪಾಲಿಕೆ ಮೇಯರ್ ಫರೀದಾ ಬೇಗಂ ಅವರು ಮಾತನಾಡಿ, ಕೋವಿಡ್-19ರ ನಿಯಂತ್ರಣದ ಹಿನ್ನಲೆಯಲ್ಲಿ ಲಾಕ್‍ಡೌನ್ ಆಗಿರುವುದರಿಂದ ಮನೆ ಬಾಗಿಲಿಗೆ ಮಾಂಸವನ್ನು ತಲುಪಿಸುವ ಉದ್ದೇಶದಿಂದ ಮಾಂಸ ಮಾರಾಟದ ಸಂಚಾರಿ ಮಳಿಗೆ ತೆರೆಯಲಾಗಿದೆ. ಜನರು ಸ್ಮಾರ್ಟ್ ಆಗಿ ಮನೆಯಿಂದ ಫೋನ್ ಮಾಡಿ ಮನೆ ಬಾಗಿಲಿಗೆ…

Read More

ತುಮಕೂರು :      ಕೋವಿಡ್-19 ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಾಮಗಾರಿ ನಿರ್ವಹಿಸುವ ಸ್ಥಳಗಳಲ್ಲಿ ಕೂಲಿ ಕಾರ್ಮಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಸಲಹೆ ನೀಡಿದರು.       ಶಿರಾ ತಾಲ್ಲೂಕು ಮಾಗೋಡು ಗ್ರಾಮಪಂಚಾಯತಿ ವ್ಯಾಪ್ತಿ ಗಿರಿನಾಥನಹಳ್ಳಿ ಗ್ರಾಮಕ್ಕೆ ಇಂದು ಭೇಟಿ ನೀಡಿ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲಾಗುತ್ತಿದ್ದ ಕೆರೆ ಹೂಳೆತ್ತುವ ಕಾಮಗಾರಿಯನ್ನು ಪರಿಶೀಲಿಸಿ ಕೂಲಿ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿ ಮಾತನಾಡಿದ ಅವರು, ಪ್ರಸ್ತುತ ಕೊರೋನಾ ಸಾಂಕ್ರಾಮಿಕ ರೋಗ ಹರಡುತ್ತಿದ್ದು, ಕಾಮಗಾರಿ ನಿರ್ವಹಿಸುವಾಗ ಕೂಲಿಕಾರ್ಮಿಕರು ಕನಿಷ್ಟ ಒಂದು ಮೀಟರ್‍ನಷ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರೊಂದಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಸೂಚಿಸಿದರು.       ಕೂಲಿಕಾರ್ಮಿಕರಿಗೆ ಕಾಮಗಾರಿ ನಿರ್ವಹಿಸಲು ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಶಿರಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ನಿರ್ದೇಶನ ನೀಡಿದರಲ್ಲದೆ, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ರೈತರು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ ಮಾಡಿಕೊಳ್ಳಲು…

Read More

ತುಮಕೂರು:      ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 09 ಮಂದಿಯನ್ನು ಹೋಂ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ.      ಒಟ್ಟು 360 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದ್ದು, 361 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 905 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 720 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಮತ್ತೊಬ್ಬ ಗುಣಮುಖರಾಗಿರುತ್ತಾರೆ. 5 ಮಾದರಿಗಳು ತಿರಸ್ಕøತಗೊಂಡಿವೆ ಹಾಗೂ 178 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಿಹೆಚ್‍ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read More

ತುಮಕೂರು:       ದೇಶವೇ ಸಂಕಷ್ಟದಲ್ಲಿರುವಾಗ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ರವರು ತನ್ನ ತಾಯಿಯ ಮಾತಿನಂತೆ 50 ಸಾವಿರ ಕುಟುಂಬಗಳ ಬಡವರಿಗೆ ಹಾಗೂ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ರೈತರ ಬದುಕು ಹಸನುಗೊಳಿಸುತ್ತಿರುವ ಕಾರ್ಯ ಶ್ಲಾಘನೀಯ ವಾದದ್ದು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟರು.       ತುಮಕೂರು ತಾಲ್ಲೂಕು ಹೊನ್ನುಡಿಕೆ ಗ್ರಾಮದಲ್ಲಿ ಪಡಿತರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಅವರು, ತಮ್ಮ ಕ್ಷೇತ್ರದ ಐವತ್ತು ಸಾವಿರ ಕುಟುಂಬಗಳಿಗೆ ಹತ್ತು ಕೆಜಿ ಪಡಿತರ ಹಾಗೂ ರೈತರಿಂದ ನೇರವಾಗಿ ಖರೀದಿಸಿ ಬಡವರಿಗೆ ಉಚಿತವಾಗಿ 50 ಟನ್ ಬಾಳೆಹಣ್ಣು 50 ಟನ್ ವಿವಿಧ ರೀತಿಯ ತರಕಾರಿಯೊಂದಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ಅನ್ನು ಸಾಮಾಜಿಕ ಅಂತರದಲ್ಲಿ ವಿತರಿಸುತ್ತಿರುವುದು ಸಂತಸದ ವಿಚಾರ ಎಂದರು.       ಮೇ.3ರವರೆಗೆ ಪ್ರತಿನಿತ್ಯ ಐದು ಸಾವಿರ ಕುಟುಂಬಗಳಿಗೆ ನೆರವಿನಂತೆ 50 ಸಾವಿರ ಪಡಿತರ ಕಿಟ್ ನೀಡುವ ಮೂಲಕ ಗೌರಿಶಂಕರ್ ಅವರು…

Read More

ತುಮಕೂರು:       ಲಾಕ್‍ಡೌನ್‍ನಿಂದ ಸಂಕಷ್ಟಕ್ಕೊಳಗಾದ ಗ್ರಾಮಾಂತರದ ಬಡ ಕುಟುಂಬಗಳಿಗೆ ಮಾಜಿ ಶಾಸಕ ಬಿ.ಸುರೇಶ್‍ಗೌಡ ಅವರು ಅಗತ್ಯ ದಿನಸಿ ವಸ್ತುಗಳು, ಮಾಸ್ಕ್ ಮತ್ತು ರೈತರಿಂದ ಖರೀದಿಸಿದ ತರಕಾರಿಯನ್ನು ವಿತರಿಸುವ ಕಾರ್ಯಕ್ರಮಕ್ಕೆ ಕಂದಾಯ ಸಚಿವರಾದ ಆರ್.ಅಶೋಕ್ ಚಾಲನೆ ನೀಡಿದರು.       ಗ್ರಾಮಾಂತರದ ಊರ್ಡಿಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಹಾರದ ಕಿಟ್ ವಿತರಿಸಿ ಮಾತನಾಡಿದ ಆರ್.ಅಶೋಕ್, ಗ್ರಾಮಾಂತರದ ಮಾಜಿ ಶಾಸಕರಾದ ಬಿ.ಸುರೇಶ್‍ಗೌಡರು ರೈತರಿಂದ ತರಕಾರಿ ಖರೀಧಿಸಿ, ಜೊತೆಗೆ ಅಗತ್ಯ ದಿನಬಳಕೆಯ ವಸ್ತುಗಳನ್ನು ಬಡ ಜನತೆಗೆ ನೀಡುತ್ತಿರುವುದು ಶ್ಲಾಘನೀಯ. ಇದೇ ರೀತಿ ದಾನಿಗಳು ಮುಂದೆ ಬಂದು ಬಡ ಜನತೆಗೆ ನೆರವಾಗಬೇಕೆಂದು ಮನವಿ ಮಾಡಿದರು.       ಇಂದು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಶ್ರಮ ವಹಿಸಿ ಕೆಲಸ ನಿರ್ವಹಿಸಿದ್ದರಿಂದ ಕೊರೋನ ವೈರಸ್ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಸಾರ್ವಜನಿಕರೂ ಸಹಕರಿಸಿದ್ದಾರೆ ಎಂದು ಬಣ್ಣಿಸಿದರು. ಸಾರ್ವಜನಿಕರು ಹೊರಗೆ ಹೋಗದೆ ಮನೆಯಲ್ಲೇ ಇದ್ದು, ತಮ್ಮ…

Read More