Author: News Desk Benkiyabale

ತುಮಕೂರು:       ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನೆನ್ನೆ ಕಳುಹಿಸಿದ್ದ ಮಾದರಿಗಳು ನೆಗೆಟಿವ್ ಬಂದಿವೆ. ಮಾನ್ಯ ಪ್ರಧಾನ ಮಂತ್ರಿಗಳು ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.       ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾನ್ಯ ಪ್ರಧಾನ ಮಂತ್ರಿಗಳು ಮೇ 3ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿಯೂ ಸಹ ಲಾಕ್‍ಡೌನ್ ಪ್ರಕ್ರಿಯೆ ಮುಂದುವರೆಯುತ್ತದೆ. ಶಿರಾ ತಾಲೂಕಿನಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಕೋವಿಡ್-19 ಪ್ರಕರಣ ಕಂಡು ಬಂದಿರುವ ಪ್ರದೇಶಗಳಲ್ಲಿರುವ ಜನರಿಗೆ ಜ್ವರ, ಕೆಮ್ಮು, ನೆಗಡಿ, ಶೀತ ಲಕ್ಷಣಗಳಿರುವ ರೋಗಿಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ಅದರಂತೆ ತಾಲೂಕಿನಲ್ಲಿ ಕಟ್ಟುನಿಟ್ಟಾಗಿ ಲಾಕ್‍ಡೌನ್ ಅನ್ನು ಪಾಲಿಸಬೇಕು ಎಂದರು.       ತಾಲೂಕುಗಳಲ್ಲಿ ಹೆಚ್ಚಿನ ಕಟ್ಟೇಚ್ಚರ ವಹಿಸಲು ನಿರ್ದೇಶಿಸಲಾಗಿದೆ. ಸಾರ್ವಜನಿಕರು ಲಾಕ್‍ಡೌನ್ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ದೂರುಗಳು ಬರುತ್ತಿದ್ದು, ಇದಕ್ಕಾಗಿ ಎಲ್ಲಾ ತಾಲೂಕುಗಳಲ್ಲಿ ಕಂದಾಯ ಹಾಗೂ ಪೊಲೀಸ್…

Read More

ತುಮಕೂರು:      ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 70 ಮಂದಿಯನ್ನು ಹೋಂ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ.        ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ. ಒಟ್ಟು 195 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದ್ದು, 300 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 391 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 326 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. 4 ಮಾದರಿಗಳು ತಿರಸ್ಕøತಗೊಂಡಿವೆ ಹಾಗೂ 59 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಿಹೆಚ್‍ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತುಮಕೂರು :       ಕೋವಿಡ್-19 ಸೋಂಕು ಹರಡದಂತೆ ಜಾರಿಯಲ್ಲಿರುವ ಲಾಕ್‍ಡೌನ್ ಸಂದರ್ಭದಲ್ಲಿ ರೈತರಿಂದ ಖರೀದಿಸಿದ ಹಣ್ಣು, ತರಕಾರಿಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವ ವರ್ತಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಎಚ್ಚರಿಕೆ ನೀಡಿದರು.        ನಗರದ ಅಂತರಸನಹಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರು ಬೆಳೆದಂತಹ ತರಕಾರಿ, ಹಣ್ಣುಗಳನ್ನು ನೇರವಾಗಿ ಮಾರಾಟ ಮಾಡಲು ಎಪಿಎಂಸಿ.ಗೆ ತರುವ ಸಮಯದಲ್ಲಿ ಚೆಕ್‍ಪೋಸ್ಟ್‍ಗಳಲ್ಲಿ ಹಾಗು ಪೊಲೀಸರಿಂದ ಅಡಚಣೆ ಉಂಟಾಗಬಾರದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಬಂಧಿಸಿದವರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಎಪಿಎಂಸಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.       ಸರ್ಕಾರದ ಕಟ್ಟುನಿಟ್ಟಿನ ಆದೇಶವಿದ್ದರೂ ಸಹ ರಾಜ್ಯದ ಕೆಲವು ಕಡೆ ಚೆಕ್‍ಪೋಸ್ಟ್‍ಗಳಲ್ಲಿ ರೈತರು ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ರೈತರು ಯಾವುದೇ ಬೆಳೆ ಬೆಳೆಯಲಿ, ಮಾರಕಟ್ಟೆಗೆ ತಂದು ಮಾರಾಟ ಮಾಡಲು…

Read More

ತುಮಕೂರು :        ಕೋವಿಡ್-19ರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಿಂದ ರಾಜ್ಯದೊಳಗಡೆ ಹುಣಸೆಹಣ್ಣು ಮತ್ತು ಕೊಬ್ಬರಿಯ ಮಾರಾಟಕ್ಕೆ ಅವಕಾಶವಿದೆ. ಆದರೆ ಹೊರ ರಾಜ್ಯಗಳಿಗೆ ಮಾರಾಟ ಮಾಡಲು ಅವಕಾಶವಿರುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.        ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಕೋವಿಡ್-19ರ ನಿಯಂತ್ರಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.       ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ನೆರೆ ರಾಜ್ಯಗಳಲ್ಲಿ ಕೋವಿಡ್-19ರ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಹೊರರಾಜ್ಯಗಳಿಗೆ ಕೊಬ್ಬರಿ ಮತ್ತು ಹುಣಸೆಹಣ್ಣನ್ನು ಜಿಲ್ಲೆಯಿಂದ ವ್ಯಾಪಾರ ಮಾಡಲು ಅವಕಾಶ ನೀಡಬಾರದು. ನಮ್ಮ ರಾಜ್ಯದೊಳಗೆ ವ್ಯಾಪಾರ ಮಾಡಿಕೊಳ್ಳಲಿ ಎಂದು ಅವರು ತಿಳಿಸಿದರು.       ಪಾವಗಡ, ಶಿರಾ ತಾಲ್ಲೂಕಿನಲ್ಲಿ ಹಾಲಿಗೆ ಬೇಡಿಕೆ ಬಂದಿದ್ದು, ಸರ್ಕಾರದ ವತಿಯಿಂದ ಕೊಳಚೆ…

Read More

ತುಮಕೂರು :       ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಏಪ್ರಿಲ್ 13ರ ಸಂಜೆ 5 ಗಂಟೆಯಿಂದ 14ರ ಮಧ್ಯರಾತ್ರಿ 12 ಗಂಟೆವರೆಗೆ ಕಸಾಯಿಖಾನೆ ಮುಚ್ಚಲು, ಮಾಂಸ ಮಾರಾಟ ಮಾಡುವುದಾಗಲಿ ಸಂಗ್ರಹಣೆ ಮಾಡುವುದಾಗಲಿ ನಿಷೇಧಿಸಿದೆ.     ಈ  ಅವಧಿಯಲ್ಲಿ ಕಸಾಯಿ ಖಾನೆ ತೆರೆಯವುದಾಗಲಿ ಹಾಗೂ ಮಾಂಸ ಮಾರಾಟ ಮಾಡಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಗುಬ್ಬಿ :       ಬೇಸಿಗೆಯ ಕಾಲದಲ್ಲಿ ತೆಂಗಿನಗಿಡಗಳನ್ನು ಉಳಿಸಿಕೊಳ್ಳಲು ಹನಿನೀರಾವರಿಗೆ ಅಳವಡಿಸಿಕೊಂಡ ಪೈಪ್‍ಲೈನ್‍ಗಳನ್ನು ಕಿಡಿಗೇಡಿಗಳು ಹಾಳು ಮಾಡಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಅಮ್ಮನಘಟ್ಟ ಗ್ರಾಪಂ ಅಧ್ಯಕ್ಷ ಬಸವರಾಜು ತಮ್ಮ ಅಳಲು ತೋಡಿಕೊಂಡರು.       ತಾಲ್ಲೂಕಿನ ಕಸಬ ಹೋಬಳಿ ತಿಪ್ಪೂರು ಗ್ರಾಮದ ಸೆರ್ವೆ ನಂಬರ್ 36ರಲ್ಲಿನ ನನ್ನ ಹೆಸರಿನ 35 ಗುಂಟೆ ಜಮೀನಿನ ತಕರಾರು ಈಗಾಗಲೇ ಕಳೆದ 14 ವರ್ಷದಿಂದ ನಿರಂತರವಾಗಿ ನಡೆದಿದೆ. ನನ್ನ ಹೆಸರಿನ ಜಮೀನಿನಲ್ಲಿ ನಾನು ಬೆಳೆಸಿದ ತೆಂಗಿನಸಸಿಗಳಿಗೆ ನೀರುಣಿಸಲು ಹರಸಾಹಸ ಪಡಡುವಂತಾಗಿದೆ. ಬೇಸಿಗೆಯಲ್ಲಿ ಇರುವ ಕೊಂಚ ನೀರನ್ನು ಹನಿನೀರಾವರಿ ಮೂಲಕ ನೀರು ನೀಡಲು ಪೈಪ್‍ಲೈನ್ ಅಳವಡಿಸಿದ ಮರುದಿನ ಎಲ್ಲಾ ಪೈಪ್‍ಲೈನ್ ಕಿತ್ತು ಪ್ಲಾಸ್ಟಿಕ್ ಪೈಪ್ ಕತ್ತರಿಸಿ ತುಂಡು ತುಂಡು ಮಾಡಲಾಗಿದೆ. ಈ ಬಗ್ಗೆ ಗುಬ್ಬಿ ಠಾಣೆಯಲ್ಲಿ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ ಎಂದು ದೂರಿದರು.        ಪಕ್ಕದ ಜಮೀನನಲ್ಲೇ ಕೃಷಿ ನಡೆಸುವಾತ ಈ 35 ಗುಂಟೆ…

Read More

ತುಮಕೂರು:       ಸ್ಮಾರ್ಟ್ ಸಿಟಿ ಅಭಿಯಾನದಡಿ ಈಗಾಗಲೇ ಆರಂಭಿಸಿರುವ ಡಿಜಿಟಲ್ ಲೈಬ್ರರಿ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ಓದುಗರಲ್ಲಿ ಮನವಿ ಮಾಡಿದ್ದಾರೆ.       ಕೋವಿಡ್-19 ಸೋಂಕು ಹರಡದಂತೆ ದೇಶದಾದ್ಯಂತ ಘೋಷಿಸಿರುವ ಲಾಕ್‍ಡೌನ್ ಸಂದರ್ಭದಲ್ಲಿ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಮಕ್ಕಳು, ವಯಸ್ಕರು, ವೃದ್ಧರು ಸೇರಿದಂತೆ ಎಲ್ಲಾ ರೀತಿಯ ಓದುಗರು ಈ ಡಿಜಿಟಲ್ ಲೈಬ್ರರಿಯ ಸದಸ್ಯತ್ವ ಉಚಿತವಾಗಿ ಪಡೆಯಬಹುದಾಗಿದೆ.         ಡಿಜಿಟಲ್ ಲೈಬ್ರರಿಗೆ ವಿಶ್ವದ ಯಾವುದೇ ಸ್ಥಳದಿಂದ ಪ್ರವೇಶ ಪಡೆಯಬಹುದಾಗಿದೆ. ಈ ಲೈಬ್ರರಿಯಲ್ಲಿ 5000ಕ್ಕಿಂತ ಹೆಚ್ಚು ಇ-ಪುಸ್ತಕ, 3ಲಕ್ಷಕ್ಕಿಂತ ಹೆಚ್ಚು ಇ-ಮ್ಯಾಗಜೀನ್, 250ಕ್ಕಿಂತ ಹೆಚ್ಚು ಇ-ದಿನಪತ್ರಿಕೆ, ದೇಶದ ಅತ್ಯುತ್ತಮ ವೃತ್ತ ಪತ್ರಿಕೆಗಳ ಸಂಕ್ಷಿಪ್ತ ವಾಣಿಜ್ಯ ವರದಿಗಳು ಲಭ್ಯವಿರುತ್ತವೆ. ಓದುಗರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.        ಡಿಜಿಟಲ್ ಲೈಬ್ರರಿ ಸದಸ್ಯತ್ವ ಹೊಂದಲು  https://tumakurudigitallibrary.in/ Android App Name (Google Play Store): E-Bhandara ಅನ್ನು ಸಂಪರ್ಕಿಸಬಹುದಾಗಿದೆ…

Read More

ತುಮಕೂರು :       ರಾಜ್ಯದಲ್ಲಿ 19ಸಾವಿರ ನ್ಯಾಯಬೆಲೆ ಅಂಗಡಿಗಳಿದ್ದು, ಪಡಿತರ ವಿತರಣೆ ಮಾಡುವಾಗ ತೂಕದಲ್ಲಿ ವ್ಯತ್ಯಾಸ ಹಾಗೂ ಪಡಿತರದಾರರಿಂದ ಹಣ ಪಡೆಯುವುದು ಕಂಡು ಬಂದರೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಗೋಪಾಲಯ್ಯ ಅವರು ಎಚ್ಚರಿಕೆ ನೀಡಿದರು.       ನಗರದ ಪ್ರವಾಸಿ ಮಂದಿರದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿದಿನ ರಾಜ್ಯದ 2 ಜಿಲ್ಲೆಗೆ ಭೇಟಿ ನೀಡಿ ಪಡಿತರ ವಿತರಣೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದ್ದೇನೆ ಎಂದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ರಾಜ್ಯ ಸಂಕಷ್ಟಕ್ಕೆ ಸಿಲುಕಿದ್ದು, ಜನರಿಗೆ ಪಡಿತರ ಆಹಾರ ಧಾನ್ಯ ವಿತರಣೆ ಮಾಡುವುದು ನನ್ನ ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಕಡು ಬಡವರಿಗೆ ತೊಂದರೆಯಾಗದಂತೆ ಪಡಿತರ ಆಹಾರ ಧಾನ್ಯವನ್ನು ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಡಿತರ ವಿತರಣೆಯಲ್ಲಿ ನ್ಯಾಯಬಲೆ ಅಂಗಡಿಗಳ ವಿರುದ್ಧ ಪ್ರತೀ ದಿನ ದೂರವಾಣಿ ಕರೆ ಮೂಲಕ ದೂರುಗಳು ಬರುತ್ತಿವೆ.…

Read More

ತುಮಕೂರು:       ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಭೈರವೇಶ್ವರ ಕಾಲೇಜಿನ ಬಳಿ ವಾಸವಿರುವ ಅಂಧ ಕಲಾವಿದರಿಗೆ ಇಂದು ಬೆಳಿಗ್ಗೆ ಕಾರ್ಮಿಕ ಇಲಾಖೆಯಿಂದ 25 ಕೆ.ಜಿ. ಅಕ್ಕಿ, ಸಕ್ಕರೆ, ಸೋಪು ಹಾಗೂ ಮತ್ತಿತರ ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿ ಸುಭಾಷ್ ಎಂ. ಆಲದಕಟ್ಟೆ, ಕಂದಾಯ ನಿರೀಕ್ಷಕರು ಮತ್ತಿತರರಿದ್ದರು.       ಕೋವಿಡ್-19 ಸೋಂಕು ಹರಡದಂತೆ ಜಾರಿಯಲ್ಲಿರುವ ಲಾಕ್‍ಡೌನ್ ಸಂದರ್ಭದಲ್ಲಿ ಆಹಾರಕ್ಕೆ ತೊಂದರೆಯಾಗಬಾರದೆನ್ನುವ ದೃಷ್ಟಿಯಿಂದ ಈ ಅಂಧ ಕಲಾವಿದರ ತಂಡಕ್ಕೆ ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು. ಕೊರೋನಾ ಯೋಧರಿಂದ ಆಹಾರ ಪೂರೈಕೆ:        ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್‍ಕ್ರಾಸ್ ಸೊಸೈಟಿ ಹಾಗೂ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ರಚಿಸಲಾಗಿರುವ ಕೊರೋನಾ ಯೋಧರು (ಕೊರೋನಾ ವಾರಿಯರ್ಸ್) ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಹೆಗ್ಗೆರೆಯ ಈ 5 ಮಂದಿ ಅಂಧ ಕಲಾವಿದರಾದ ವಿಜಯ್‍ಕುಮಾರ್, ಸುರೇಶ್, ಮಂಜುಳ, ಶಿವಮ್ಮ, ಶೈಲಜ ಅವರಿಗೆ…

Read More

ತುಮಕೂರು :       ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 159 ಮಂದಿಯನ್ನು ಹೋಂ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ.        ಒಟ್ಟು 141 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದ್ದು, 211 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 202 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 188 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. 3 ಮಾದರಿಗಳು ತಿರಸ್ಕøತಗೊಂಡಿವೆ ಹಾಗೂ 9 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಿಹೆಚ್‍ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More