ತುಮಕೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜ.22) ತುಮಕೂರಿಗೆ ಆಗಮಿಸುತ್ತಿದ್ದಾರೆ. ನಾಳಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಅವರು, ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಇಂದು ಸಂಜೆ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೂ ಮಠಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Author: News Desk Benkiyabale
ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆಯಲು ಭಕ್ತಸಾಗರವೇ ಹರಿದುಬರುತ್ತಿದೆ. ರಾಜ್ಯ ಮಾತ್ರವಲ್ಲದೇ, ದೇಶದ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತರು, ಗಣ್ಯರು ಸ್ವಾಮೀಜಿಯ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ದರ್ಶನ ಪಡೆದಿದ್ದು, ಸುಮಾರು 10 ಲಕ್ಷ ಭಕ್ತರು ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಸ್ವಾಮೀಜಿ ಅಂತಿಮ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ, ಗಣ್ಯರಿಗೆ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನಿಂತು ಅಪಾರ ಸಂಖ್ಯೆಯ ಭಕ್ತರು ಸ್ವಾಮೀಜಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ವಿವಿಧ ಮಠಾಧೀಶರು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಗೃಹಸಚಿವ ಎಂ.ಬಿ. ಪಾಟೀಲ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅಪಾರ ಸಂಖ್ಯೆಯ…
ತುಮಕೂರು: ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಲಿಂಗೈಕ್ಯರಾದ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮಿ ಅವರ ಪಾರ್ಥಿವ ಶರೀರವನ್ನು ಪಲ್ಲಕ್ಕಿಯ ಮೆರವಣಿಗೆಯೊಂದಿಗೆ ಗೋಸಲ ಸಿದ್ದೇಶ್ವರ ವೇದಿಕೆಗೆ ತರಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುವಾಗುವಂತೆ ಶಾಲಾ ಕಾಲೇಜುಗಳು ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಮಠಕ್ಕೆ ಆಗಮಿಸಲು ರಾಷ್ಟ್ರೀಯ ಹೆದ್ದಾರಿ-4 ಒಂದೇ ಸಂಚಾರಿ ಮಾರ್ಗವಿದ್ದು, ಸಂಚಾರವನ್ನು ಸುಗಮವಾಗಿಸಲು ರಸ್ತೆ ಮಾರ್ಗವನ್ನು ಬದಲಾಯಿಸಲಾಗಿದೆ. ಪೂನಾ, ಶಿರಾ ಮಾರ್ಗದ ಕಡೆ ಹೋಗುವ ವಾಹನಗಳನ್ನು ಡಾಬಸ್‍ಪೇಟೆ ಜಂಕ್ಷನ್‍ನಿಂದ ಹಾಗೂ ಶಿವಮೊಗ್ಗ ಕಡೆ ಹೋಗುವ ವಾಹನಗಳಿಗೆ ನೆಲಮಂಗಲ ಜಂಕ್ಷನ್‍ನಿಂದ ಡೈವರ್ಟ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ-4ನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಂತ್ರಿಗಳು, ವಿವಿಧ ಗಣ್ಯ ಮಹೋದಯರು ಸಂಚರಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಖಾಸಗಿ,…
ತುಮಕೂರು : ಹಲವಾರು ದಿನಗಳಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಡಾ: ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಿಗ್ಗೆ ಶಿವಸಾಯುಜ್ಯ ಹೊಂದಿದ್ದು, ರಾಜ್ಯಾದ್ಯಂತ 3 ದಿನಗಳ ಶೋಕಾಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಠದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಇಂದು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಪಾರ್ಥೀವ ಶರೀರವನ್ನು ಮಠದ ಗೋಸಲ ಸಿದ್ಧೇಶ್ವರ ವೇದಿಕೆಯಲ್ಲಿ ಮಂಗಳವಾರ ಸಂಜೆವರೆಗೂ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. ಗೌರವಾರ್ಥವಾಗಿ ರಾಜ್ಯಾದ್ಯಂತ ಶೋಕಾಚರಣೆ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಜರುಗುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದರು. ಪರಮಪೂಜ್ಯ ಸ್ವಾಮೀಜಿಯವರ ಕ್ರಿಯಾಸಮಾಧಿಯ ಕಾರ್ಯಗಳು, ಅಂತ್ಯಸಂಸ್ಕಾರವನ್ನು ಮಂಗಳವಾರ ಸಂಜೆ ನಡೆಸಲು ನಿಶ್ಚಯಿಸಲಾಯಿಸಲಾಗಿದೆ. ಅಂತಿಮ ದರ್ಶನವನ್ನು ಶಾಂತಿಯುತವಾಗಿ ನಡೆಸುವ…
ತುಮಕೂರು: ಸಿದ್ಧಗಂಗಾ ಶ್ರೀಗಳು ವೆಂಟಿಲೇಟರ್ ಇಲ್ಲದೆ ಸಹಜವಾಗಿ ಉಸಿರಾಟ ನಡೆಸುತ್ತಿದ್ದಾರೆ. ಎಂದಿನಂತೆ ಸಾರ್ವಜನಿಕರಿಗೆ ದರ್ಶನ ನೀಡುತ್ತಿದ್ದಾರೆ. ಶ್ರೀಗಳ ಆರೋಗ್ಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದಾರೆ. ಈ ಕುರಿತು ವಿಜಯ ಕರ್ನಾಟಕ ಪ್ರತ್ಯಕ್ಷವಾಗಿ ಪರಿಶೀಲಿಸಿದ್ದು, ಶ್ರೀಗಳು ಸಹಜವಾಗಿ ಉಸಿರಾಟ ನಡೆಸುತ್ತಿದ್ದಾರೆ. ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಕಿಟಕಿ ಮೂಲಕ ಭಕ್ತರಿಗೆ ದರ್ಶನ ನೀಡುತ್ತಿದ್ದಾರೆ. ಶ್ರೀಗಳ ದರ್ಶನ ಮಾಡಿದ ಭಕ್ತರು, “ಶ್ರೀಗಳು ಚೆನ್ನಾಗಿದ್ದಾರೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ಹಬ್ಬುತ್ತಿದ್ದಾರೆ”, ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದರ್ಶನಕ್ಕೆ ತೊಂದರೆ ಇಲ್ಲ: ಸಿದ್ಧಗಂಗಾ ಶ್ರೀಗಳ ಸಾರ್ವಜನಿಕ ದರ್ಶನಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ. ಆದರೂ ನಡೆದಾಡುವ ದೇವರು ಸಿದ್ಧಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ ಎನ್ನುವುದು ಭಕ್ತರ ಆತಂಕಕ್ಕೆ ಕಾರಣವಾಗಿದೆ.
ಚಿಕ್ಕಬಳ್ಳಾಪುರ: ಕಾಫಿ ಕುಡಿದು ತಾಯಿ ಮತ್ತು ಮಗಳು ಮೃತಪಟ್ಟಿದ್ದು, ಇಬ್ಬರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಾಗೇಪಲ್ಲಿ ತಾಲೂಕಿನ ಬತ್ತಲಹಳ್ಳಿ ಗ್ರಾಮದಲ್ಲಿ ಅಕ್ಕುಲಮ್ಮ (70) ಮತ್ತು ನರಸಮ್ಮ (50) ಕಾಫಿ ಕುಡಿದು ಮೃತಪಟ್ಟಿದ್ದಾರೆ. ನರಸಮ್ಮನ ಮೊಮ್ಮಕ್ಕಳಾದ ಅರವಿಂದ್ (7) ಮತ್ತು ಆರತಿ (5) ಅಸ್ವಸ್ಥರಾಗಿದ್ದು ಅವರನ್ನು ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಗ್ರಾಮದ ಅಂಗಡಿಯೊಂದರಿಂದ ಕಾಫಿಪುಡಿ ತಂದಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಕಾಫಿ ಸೇವಿಸಿದ ನಂತರ ನಾಲ್ವರೂ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಅಕ್ಕುಲಮ್ಮ ಮತ್ತು ನರಸಮ್ಮ ಮೃತಪಟ್ಟಿದ್ದಾರೆ. ಕಾಫಿಯಲ್ಲಿ ವಿಷ ಬೆರತಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, ಮತ್ತೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಂ.ಕೆ.ಅಯ್ಯಪ್ಪ, ಕಾರ್ಯದರ್ಶಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆ. (ಆರ್ಡಿಪಿಆರ್ಡಿ). ಜಿ.ಎನ್.ಶಿವಮೂರ್ತಿ, ಆಯುಕ್ತರು, ಉದ್ಯಮ ಮತ್ತು ಲೈವ್ಲಿ ಹುಡ್ ಬೆಂಗಳೂರು. ಕೆ.ಜಿ.ಶಾಂತಾರಾಂ, ಆಯುಕ್ತರು, ಕರ್ನಾಟಕ ಗೃಹ ಮಂಡಳಿ. ಆರ್.ರಾಮಚಂದ್ರನ್, ಹೆಚ್ಚುವರಿ ಆಯುಕ್ತರು, ಬಾಗಲಕೋಟೆ. ಡಾ. ಕೆ.ವಿ.ರಾಜೇಂದ್ರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್ ಬೆಳಗಾವಿ. ವೆಂಕಟ್ ರಾಜಾ, ಹೆಚ್ಚುವರಿ ಆಯುಕ್ತರು, ಅಬಕಾರಿ ಇಲಾಖೆ. ಫೌಜೀಯಾ ತರನಂ, ಜನರಲ್ ಮ್ಯಾನೇಜರ್, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ. ಲಕ್ಷ್ಮೀಕಾಂತ ರೆಡ್ಡಿ ಜಿ., ಜನರಲ್ ಮ್ಯಾನೇಜರ್, ಬಿಎಂಆರ್ಸಿಎಲ್ ಬೆಂಗಳೂರು. ನಿತೀಶ್ ಕೆ., ಸಿಇಓ, ಜಿಲ್ಲಾ ಪಂಚಾಯತ್, ಬಳ್ಳಾರಿ. ಕೆ.ಎಂ. ಜಾನಕಿ, ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪೆದ್ದಪ್ಪಯ್ಯ ಆರ್.ಎಸ್., ಸಿಇಓ, ಜಿಲ್ಲಾ ಪಂಚಾಯತ್ ಕೊಪ್ಪಳ. ಎನ್.ಜಯರಾಂ, ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ಸಹಕಾರ ಮಾರಾಟ…
ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಗಣನೀಯ ಬದಲಾವಣೆ ಆಗಿದೆ. ಸ್ವಯಂ ಉಸಿರಾಡುವಷ್ಟು ಶಕ್ತರಾಗಿದ್ದು, ಭಕ್ತರ ಪ್ರಾರ್ಥನೆ ಭಗವಂತನಿಗೆ ಮುಟ್ಟಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಸಂಸದ ಎಸ್.ಪಿ.ಮುದ್ದ ಹನುಮೇಗೌಡ ತಿಳಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶ್ರೀಮಠಕ್ಕೆ ಸ್ವಾಮೀಜಿ ಅವರನ್ನು ಸ್ಥಳಾಂತರಿಸಿದ ನಂತರ ಅವರ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಯನ್ನು ಗಮನಿಸಿದರೆ, ಇದಕ್ಕೂ ನಿಜಕ್ಕೂ ವೈದ್ಯ ಲೋಕದ ವಿಸ್ಮಯಕ್ಕೆ ಕಾರಣವಾಗಿದೆ.ಅವರ ದೇಹದಲ್ಲಿ ಚಲನಾಶಕ್ತಿ ಕಾಣುತ್ತಿದೆ.ಕೃತಕ ಉಸಿರಾಟ ತೆಗೆದ ನಂತರವೂ ಸ್ವಯಂ ಉಸಿರಾಡುವಷ್ಟು ಶಕ್ತಿ ಪಡೆದುಕೊಂಡಿದ್ದು,ಇತರೆ ಎಲ್ಲಾ ಪ್ಯಾರಾಮೀಟರ್ಸ್‍ನಲ್ಲಿಯೂ ಸ್ವಾಮೀಜಿಗಳ ಆರೋಗ್ಯ,ನಿನ್ನೆಗಿಂತ ಇಂದು ಸುಧಾರಣೆಯ ಹಂತದಲ್ಲಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ತಿಳಿಸಿದ್ದು,ಮಠದ ಭಕ್ತನಾಗಿ ನನಗೂ, ನನ್ನಂತಹ ಲಕ್ಷಾಂತರ ಜನರಿಗೆ ಇದು ಒಳ್ಳೆಯ ಸುದ್ದಿ ಎಂದರು. ಸ್ವಾಮೀಜಿಗಳ ಈ ಆರೋಗ್ಯ ಸುಧಾರಣೆಯ ಹಿಂದೆ ಅವರು ಲಕ್ಷಾಂತರ ಮಕ್ಕಳಿಗೆ ನೀಡಿದ ಅನ್ನ,ಅಕ್ಷರ,ಅಸರೆ ದಾಸೋಹ ಗಳ…
ತುಮಕೂರು: ರಾಜ್ಯದ 156 ತಾಲೂಕುಗಳಲ್ಲಿ ಬರಗಾಲವಿದ್ದು ಜನ-ಜಾನುವಾರುಗಳು ಕುಡಿಯುವ ನೀರಿಲ್ಲದೆ ನರಳುವಂತಾಗಿದ್ದು ಮೇವಿಲ್ಲದೆ ಜಾನುವಾರುಗಳು ಪರಿತಪಿಸುತ್ತಿವೆ. ಹೀಗಾಗಿ ಕೂಡಲೇ ಗೋಶಾಲೆಗಳನ್ನು ತೆರೆದು ಮೂಕಪ್ರಾಣಿಗಳ ನೆರವಿಗೆ ಬರಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯÀ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದರು. ಜಿಲ್ಲೆಯ ಪಾಲಿನ ಹೇಮಾವತಿ ನಾಲೆಯ 25 ಟಿಎಂಸಿ ನೀರಿನ ಪಾಲಿನಲ್ಲಿ 15 ಟಿಎಂಸಿ ನೀರು ಹರಿಯುತ್ತಿದ್ದು ಲೆಕ್ಕದಲ್ಲಿ ಮಾತ್ರ ತೋರಿಸಲಾಗುತ್ತಿದೆ. ಜಿಲ್ಲೆಯ ಜನಪ್ರತಿನಿಧಿಗಳು ಇಚ್ಛಾಶಕ್ತಿ ತೋರಿ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಮುಂದಾಗಬೇಕೆಂದರು. ಬರ ಪರಿಹಾರ ಕಾಮಗಾರಿ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ತುಮಕೂರು ಜಿಲ್ಲೆಯ 10 ತಾಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ರಾಜ್ಯದ ಪರಿಸ್ಥಿತಿಯೂ ಬೇರೆಯಾಗಿಲ್ಲ. ಹೀಗಿದ್ದರೂ ರಾಜಕಾರಣಿಗಳು ರೆಸಾರ್ಟ್ ರಾಜಕೀಯದಲ್ಲಿ ತೊಡಗಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಆರೋಪಿಸಿದರು. …
ತುಮಕೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬರುವ ಫೆಬ್ರುವರಿ 2 ಹಾಗೂ 3ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಮೇಳದ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಮೇಳದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಮೇಳದಲ್ಲಿ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಉದ್ಯೋಗಾರ್ಥಿಗಳು ಭಾಗವಹಿಸಬಹುದಾಗಿದೆ. ಈ ಮೇಳವನ್ನು ಯಶಸ್ವಿಯಾಗಿಸುವ ಸಲುವಾಗಿ ಸ್ವಾಗತ, ವೇದಿಕೆ, ಆರೋಗ್ಯ ಮತ್ತು ಸ್ವಚ್ಛತಾ, ಆಹಾರ, ಸಮನ್ವಯ ಸಮಿತಿ ಸೇರಿದಂತೆ ಮತ್ತಿತರ ಉಪ ಸಮಿತಿಗಳನ್ನು ರಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕಾರ್ಯಗಳನ್ನು ನಿಯೋಜಿಸಿದರು. ನಿರುದ್ಯೋಗಿಗಳಿಗೆ ಸದುಪಯೋಗವಾಗುವಂತೆ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಎಲ್ಲಾ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಭೆ ನಡೆಸಬೇಕು ಹಾಗೂ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 23…