Author: News Desk Benkiyabale

ತುಮಕೂರು:        ಕೊರೊನಾ ವೈರಸ್ ಕೋವಿನ್-19 ಸೋಂಕು ಕುರಿತು ಶಾಲೆಗಳಲ್ಲಿ ಮುಂಜಾಗ್ರತೆ ವಹಿಸಬೇಕು ಹಾಗೂ ನೆಗಡಿ, ಕೆಮ್ಮು, ಜ್ವರ ಬಂದ ಮಕ್ಕಳಿಗೆ ಕಾಯಿಲೆ ವಾಸಿಯಾಗುವವರೆಗೂ ರಜೆ ನೀಡುವಂತೆ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಸೂಚನೆ ನೀಡಿದ್ದಾರೆ.       ಸರ್ಕಾರಿ/ ಅನುದಾನಿತ/ ಖಾಸಗಿ ಶಾಲೆಗಳ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅರಿವು ನೀಡಬೇಕು. ರೋಗದ ಲಕ್ಷಣಗಳು ಕಂಡು ಬಂದರೆ ಕೂಡಲೇ ಅಂತಹ ಮಕ್ಕಳಿಗೆ ರಜೆ ನೀಡಿ ಮನೆಗೆ ಕಳುಹಿಸಿ ಚಿಕಿತ್ಸೆ ಪಡೆಯಲು ಸೂಕ್ತ ಮಾರ್ಗದರ್ಶನ ನೀಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷಾ ಸಮಯವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಜಾತ್ರೆ/ಸಮಾರಂಭಗಳಲ್ಲಿ ಹೊರಗಿನ ತಿಂಡಿ, ನೀರು ಸೇವಿಸದಂತೆ ಅವರು ಸಲಹೆ ನೀಡಿದ್ದಾರೆ. ಶೌಚಾಲಯಗಳ ಬಳಕೆ ನಂತರ ಕೈತೊಳೆಯುವ ಕ್ರಮದ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಬೇಕು ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು :       ತುಮಕೂರು ಜಿಲ್ಲೆಯಲ್ಲಿ ಸುಮಾರು 563 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೂರಬಹುದು ಎಂದು ಗುರುತಿಸಲಾಗಿದ್ದು, ತೀವ್ರವಾಗಿ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಎಂ. ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಕಂಡುಬರುವ ಮೊದಲೇ ಅಧಿಕಾರಿಗಳು ಆ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಮೂಲ ಇರುವ ಬೋರ್‍ವೆಲ್‍ಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು, ಖಾಸಗಿ ವ್ಯಕ್ತಿಗಳ ಬೋರ್‍ವೆಲ್‍ಗಳಿಂದಲೂ ನೀರು ಪಡೆಯುವ ಅವಕಾಶ ಕಲ್ಪಿಸಲಾಗಿದ್ದು, ಅದನ್ನು ಸಹ ಬಳಸಿಕೊಂಡು ತೀವ್ರವಾಗಿ ನೀರಿನ ಸಮಸ್ಯೆ ಕಂಡಿರುವ ತುಮಕೂರು, ಕುಣಿಗಲ್ ತಾಲ್ಲೂಕುಗಳ ಗ್ರಾಮಗಳಿಗೆ ಸಿ.ಆರ್. ಫಂಡ್‍ನಿಂದ ಹಣ ಬಳಸಿಕೊಂಡು ನೀರು ಸರಬರಾಜು…

Read More

ತುಮಕೂರು :       ಮುಜರಾಯಿ ಇಲಾಖೆಯ ಸಪ್ತಪದಿ-ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಅರಿವು ಮೂಡಿಸಲು ಮಾರ್ಚ್ 15ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಪ್ತಪದಿ ವಿಚಾರ ಸಂಕಿರಣದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಮತನಾಡಿದ ಅವರು, ಜಿಲ್ಲೆಯಲ್ಲಿ ಆಯ್ಕೆಯಾಗಿರುವ ದೇವಾಲಯಗಳಲ್ಲಿ ಎಪ್ರಿಲ್ 26 ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ಕುರಿತು ಜನರಿಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ ಎಂದರು.       ವಿಚಾರ ಸಂಕಿರಣದಲ್ಲಿ ಮುಜರಾಯಿ ಸಚಿವರು ಭಾಗವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸಂಸದರು ಹಾಗೂ ಎಲ್ಲಾ ಶಾಸಕರನ್ನು ವಿಚಾರ ಸಂಕಿರಣಕ್ಕೆ ಆಹ್ವಾನಿಸಬೇಕು. ಈ ಕಾರ್ಯಕ್ರಮದಲ್ಲಿ ಸಪ್ತಪದಿ ಸಾಮೂಹಿಕ ವಿವಾಹದ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಸಂಘಗಳು,…

Read More

ತುಮಕೂರು :       ಕಳೆದ 2012ರಲ್ಲಿ ನಡೆಸಿದ ಬೇಸ್‍ಲೈನ್ ಸರ್ವೆ ಸಮೀಕ್ಷೆಯಲ್ಲಿ ಹೊರಗುಳಿದ ಎಲ್ಲ ಶೌಚಾಲಯ ರಹಿತ ಕುಟುಂಬಗಳಿಗೆ ಮುಂದಿನ 6 ವಾರದೊಳಗಾಗಿ ತಪ್ಪದೇ ಶೌಚಾಲಯವನ್ನು ನಿರ್ಮಿಸಿಕೊಡಬೇಕು ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯದರ್ಶಿ ಪರಮೇಶ್ವರನ್ ಅಯ್ಯರ್ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು 10 ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸ್ವಚ್ಛ ಭಾರತ್ ಮಿಷನ್(ಗ್ರಾ)ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಬಯಲು ಬಹಿರ್ದೆಸೆ ಮುಕ್ತ ರಾಷ್ಟ್ರವನ್ನಾಗಿ ನಿರ್ಮಿಸಲು ಕೇಂದ್ರವು ಮಹತ್ವಾಕಾಂಕ್ಷಿ ಸ್ವಚ್ಛಭಾರತ್ ಮಿಷನ್(ಗ್ರಾ) ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಜಾರಿಗೆ ಬಂದು 5 ವರ್ಷ ಕಳೆದಿದ್ದು, ಮುಂದಿನ 5 ವರ್ಷಗಳಿಗಾಗಿ 2ನೇ ಹಂತದಲ್ಲಿ ಸ್ವಚ್ಛಭಾರತ್(ಮಿಷನ್) ಯೋಜನೆಯನ್ನು ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಇದಕ್ಕಾಗಿ 1.4ಲಕ್ಷಕೋಟಿ ರೂ.ಗಳ ಅಂದಾಜು ವೆಚ್ಚದ ಅನುದಾನವನ್ನು ಬಿಡುಗಡೆ ಮಾಡಲಾಗುವುದೆಂದು ತಿಳಿಸಿದರು.       ಕರ್ನಾಟಕ ರಾಜ್ಯದಲ್ಲಿ ಸ್ವಚ್ಛಭಾರತ್ ಯೋಜನೆಯಡಿ ವೈಯಕ್ತಿಕ/ಸಮುದಾಯ…

Read More

ತುಮಕೂರು:       ಬೆಂಗಳೂರು ನಗರದಲ್ಲಿ 4 ಮಂದಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ತುಮಕೂರು ನಗರವು ಬೆಂಗಳೂರಿಗೆ ಸಮೀಪವಿರುವುದರಿಂದ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೊರೋನಾ ವೈರಸ್ ನಿಯಂತ್ರಣ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿದೇಶದಿಂದ ಬರುವ ಜಿಲ್ಲೆಯ ಜನರನ್ನು ಪರೀಕ್ಷಿಸಿ, ಕೊರೋನಾ ವೈರಸ್ ಲಕ್ಷಣ ಕಂಡು ಬಂದಲ್ಲಿ ಕೂಡಲೇ ಅವರನ್ನು 14 ದಿನಗಳಿಂದ 28 ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.       ವೈಧ್ಯರು ಹಾಗೂ ವೈಧ್ಯಕೀಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಯುವ ಕುರಿತು ಒಂದು ಸುತ್ತು ತರಬೇತಿ ನೀಡಲಾಗಿದೆ. ತಾಲ್ಲೂಕು ಆಸ್ಪತ್ರೆಯ ವೈಧ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಿದ್ದು, ಈ ವೈಧ್ಯರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಿದ್ದಾರೆ ಎಂದು…

Read More

ತುಮಕೂರು:       ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ತಿಪ್ಪೂರು ಗ್ರಾಮದಲ್ಲಿ ತೆಂಗು ಹಾಗೂ ಅಡಿಕೆ ಮರಗಳನ್ನು ಕಡಿದು ತಹಶೀಲ್ದಾರರ ಮೌಖಿಕ ಆದೇಶವನ್ನು ಮೀರಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದರಿಂದ ಅಮ್ಮನಘಟ್ಟ ವೃತ್ತದ ಗ್ರಾಮ ಲೆಕ್ಕಿಗ ಮುರುಳಿ ಅವರನ್ನು ಜಿಲ್ಲಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರ ಡಾ: ಕೆ. ರಾಕೇಶ್ ಕುಮಾರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದ್ದಾರೆ.       ತಿಪ್ಪೂರು ಗ್ರಾಮದ ಶ್ರೀ ಉಡುಸಲಮ್ಮ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 12 ರಿಂದ 14ರವರೆಗೆ ನಡೆಯಲಿರುವುದರಿಂದ ಜಾತ್ರೆಗೆ ಸುಮಾರು 5 ಸಾವಿರ ಜನ ಸೇರುವ ನಿರೀಕ್ಷೆ ಇದ್ದುದರಿಂದ ದೇವಸ್ಥಾನದ ಧಾರ್ಮಿಕ ಸಮಾರಂಭ/ ಉತ್ಸವ/ ರಥೋತ್ಸವ/ ಮುತ್ತಿನ ಪಲ್ಲಕ್ಕಿ ನಡೆಯುತ್ತಿದ್ದು, ವಾಹನಗಳ ನಿಲುಗಡೆಗೆ ಸ್ಥಳಾವಕಾಶಕ್ಕಾಗಿ ಕೇವಲ ಸಣ್ಣ ಗಿಡಗಳನ್ನು ತೆರವುಗೊಳಿಸಿ ಜಾತ್ರೆಗೆ ಅನುವು ಮಾಡಿಕೊಡಲು ತಹಶೀಲ್ದಾರರು ಮೌಖಿಕವಾಗಿ ಮುರುಳಿ ಅವರಿಗೆ ಆದೇಶ ನೀಡಿದ್ದರೂ ಗ್ರಾಮ ಲೆಕ್ಕಿಗ ಮುರುಳಿ ಅವರು ತಿಪ್ಪೂರು ಗ್ರಾಮದ ಸರ್ವೆ ನಂಬರ್ 113ರ 5-18 ಗುಂಟೆ…

Read More

ತುಮಕೂರು:        ಸಕ್ಷಮ ಜಿಲ್ಲಾ ಘಟಕವು ಮಾರ್ಚ್ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಾಲಭವನದಲ್ಲಿ ಸಕ್ಷಮ ತುಮಕೂರು ಜಿಲ್ಲಾ ಘಟಕದ ದ್ವಿತೀಯ ಜಿಲ್ಲಾ ಸಮ್ಮೇಳನವನ್ನು ಹಮ್ಮಿಕೊಂಡಿದೆ.         ಕಾರ್ಯಕ್ರಮದ ಉದ್ಘಾಟನೆಯನ್ನು ಸಕ್ಷಮ ಅಖಿಲ ಭಾರತೀಯ ಕಾರ್ಯದರ್ಶಿ ಕಮಲಾ ಕಾಂತ್ ಪಾಂಡೆ ನೆರವೇರಿಸುವರು. ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದೇಶ್ವರಸ್ವಾಮೀಜಿಯವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಬಿ.ಆರ್.ಚಂದ್ರಿಕಾ, ಅಂಗವಿಕಲರ ಹಕ್ಕುಗಳ ಕಾಯಿದೆ ರಾಜ್ಯ ಆಯುಕ್ತ ವಿ.ಎಸ್.ಬಸವರಾಜು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ನಟರಾಜು ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.       ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ 9 ಗಂಟೆಗೆ ಟೌನ್‍ಹಾಲ್ ವೃತ್ತದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಐಕ್ಯತಾ ನಡಿಗೆಗೆ ಚಾಲನೆ ನೀಡುವರು. ಐಕ್ಯತಾ ನಡಿಗೆಯು ಬಾಲಭವನದಲ್ಲಿ ಸಮವೇಶಗೊಳ್ಳುತ್ತದೆ…

Read More

ಕೊರಟಗೆರೆ :       ಪರಿಸರ ಹಾನಿ ಹಾಗೂ ಭೂಮಾಲಿನ್ಯವನ್ನ ತಪ್ಪಿಸಲು ಕಸ ಸಂಗ್ರಹಣೆ ಕಾರ್ಯ ಪ್ರಾರಂಭಿಸಿದ್ದು, ಗ್ರಾಮವನ್ನ ಸ್ವಚ್ಛವಾಗಿ        ತಾಲೂಕಿನ ಹೊಳವನಹಳ್ಳಿ ಗ್ರಾಪಂಯಲ್ಲಿ ಸ್ವಚ್ಛಮೇವ ಜಯತೇ ಅಂದೋಲನದಡಿ ಕಸವನ್ನ ಸಂಗ್ರಹಣೆ ಮಾಡಲು ಕಸದ ಬುಟ್ಟಿಯನ್ನ ಹಂಚಿಕೆ ಮಾಡಿ ಮಾತನಾಡಿದರು.       ನಮ್ಮ ಗ್ರಾಪಂಯನ್ನ ಸ್ವಚ್ಛಮೇವ ಜಯತೇ ಅಂದೋಲನದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗಿದ್ದು, ಪ್ರತಿ ಮನೆಗಳಿಂದ ಕಸ ಸಂಗ್ರಹಣೆ ಆರಂಭಿಸಲಾಗಿದ್ದು. ಗ್ರಾಮದ ಪ್ರತಿ ಮನೆಗೂ ತೆರಳಿ ಕಸ ವಿಂಗಡಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಹೊಳವನಹಳ್ಳಿ ಗ್ರಾಮದ ಪ್ರತಿಯೊಂದು ವಾರ್ಡ್‍ಗಳಿಗೂ ಹಸಿ ಹಾಗೂ ಒಣ ಕಸವನ್ನ ತೆಗೆದುಕೊಳ್ಳಲು ವಾಹನ ಬರುತ್ತದೆ ವಾಹನ ಬಂದಾಗ ಆ ಕಸವನ್ನ ವಾಹನವನ್ನ ಹಾಕಬೇಕು ಎಂದು ತಿಳಿಸಿದರು. ಗ್ರಾಪಂ ಮಾಜಿ ಸದಸ್ಯ ಜಯರಾಮು ಮಾತನಾಡಿ ನಮ್ಮ ಹೊಳವನಹಳ್ಳಿ ಗ್ರಾಮ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಗ್ರಾಪಂಗೆ ಬರುವ ಅನುದಾನ ಕಡಿಮೆಯಾಗಿದ್ದು ಹೊಳವನಹಳ್ಳಿ ಅಭಿವೃದ್ಧಿ…

Read More

ತುಮಕೂರು:       ಕೊಬ್ಬರಿಗೆ ಕನಿಷ್ಠ 20 ಸಾವಿರ ಘೋಷಿಸಬೇಕು,ನೀರಾ ಇಳಿಸಲು ಅನುಮತಿ ನೀಡಬೇಕು,ತೆಂಗಿನ ಮೌಲ್ಯವರ್ಧಿತ ಉತ್ಪನಗಳ ಮಾರಾಟಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕೆಂದು ಆಗ್ರಹಿಸಿ ಇಂದು ಟೌನಾಹಾಲ್ ವೃತ್ತದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸಿ,ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.       ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ,ಡಾ.ಎಸ್.ರಫೀಕ್ ಅಹಮದ್,ಅರೆ ಶಂಕರ ಮಠದ ಶ್ರೀಚೈತನ್ಯ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಹಲವರು ಮುಖಂಡರು ಭಾಗವಹಿಸಿದ್ದ ಪ್ರತಿಭಟನೆಗೆ ಕರ್ನಾಟಕ ಪ್ರಾಂತ ರೈತ ಸಂಘ, ಹಲವು ಸಂಘ ಸಂಸ್ಥೆಗಳ ಬೆಂಬಲ ವ್ಯಕ್ತಪಡಿಸಿ ಧರಣಿಯಲ್ಲಿ ಪಾಲ್ಗೊಂಡಿದ್ದರು. ಧರಣಿ ನಿರಂತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ತೆಂಗು ಬೆಳೆಗಾರರು ಇಂದು ಅತ್ಯಂತ ಸಂಕಷ್ಟದಲ್ಲಿದೆ.ಕೇಂದ್ರ ಸರಕಾರ ತೆಂಗಿಗೆ 9200 ರೂ ಬೆಂಬಲ ಬೆಲೆ ಘೋಷಿಸಿದೆ. ಆದರೆ ಮಾರುಕಟ್ಟೆಯಲ್ಲಿ ಒಂದು ಕ್ವಿಂಟಾಲ್ ಕೊಬ್ಬರಿ 9600 ರೂಗಳಿಗೆ ಮಾರಾಟವಾಗುವ ಮೂಲಕ ವ್ಯಾಪಾರಸ್ತರು ಹಾವು ಸಾಯಬಾರದು, ಕೊಲು ಮುರಿಯಬಾರದು ಎಂಬಂತಹ ನೀತಿ ಅನುಸರಿಸುತ್ತಿದ್ದಾರೆ.       ಕೊಬ್ಬರಿ ಕನಿಷ್ಠ…

Read More

ಕೊರಟಗೆರೆ:       ಪಟ್ಟಣದ ಗೊಂದಿಹಳ್ಳಿ ರಸ್ತೆ ಗಿರಿನಗರದಲ್ಲಿ ಸುಮಾರು 20 ದಿನಗಳಿಂದಲು ಚಿರತೆಯೊಂದು ಕಂಡುಬಂದಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ,       ಹಾಗು ಈ ಭಾಗದ ಪ್ರದೇಶದಲ್ಲಿ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಿದ್ದು ಚಿಕ್ಕಮಕ್ಕಳು, ವಿದ್ಯಾರ್ಥಿಗಳು, ಹೆಣ್ಣು ಮಕ್ಕಳು, ವೃದ್ಧರು ಹಾಗು ರೈತರುಗಳು ದಿನನಿತ್ಯ ಸಂಚರಿಸುವ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಇಲ್ಲಿನ ವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ ಅಲ್ಲದೆ ಶಾಲೆಯ ಸುತ್ತಮುತ್ತಲಿನ ಪ್ರದೇಶವು ಕಲ್ಲು ಬಂಡೆ, ಗುಟ್ಟೆ ಮತ್ತು ಪೊದೆಗಳಿಂದ ಕೂಡಿದ್ದುಇಲ್ಲಿನ ಹಲವು ಮನೆಗಳು ನಿರ್ಜನ ಪ್ರದೇಶಗಳಲ್ಲಿ ಇರುವುದರಿಮದ ಚಿರತೆಯಿಂದ ಪ್ರಾಣದ ಅಪಾಯ ಸಂಭವವಿದ್ದು, ಇತ್ತೀಚೆಗೆ ತುಮಕೂರು ತಾಲ್ಲೂಕಿನಲ್ಲಿ 3 ಪುಟ್ಟ ಮಕ್ಕಳು ಚಿರತೆಗೆ ಬಲಿಯಾಗಿರುವುದರಿಂದ ಗುರುವಾರದಂದು ಆ ವಾರ್ಡಿನ ನಿವಾಸಿಗಳು ಹಾಗು ಮಾಜಿ ಪ.ಪಂ ಉಪಾಧ್ಯಕ್ಷರು ಹಾಗು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ಸಂಚಾಲಕರು, ತುಮಕೂರು ಜಿಲ್ಲೆ ಸಾಮಾಜಿಕ ಹೋರಾಟಗಾರರಾದ ನಯಾಜ್ ಅಹಮದ್ ಮತ್ತು ಗಿರಿನಗರ ಗೊಂದಿಹಳ್ಳಿ ರಸ್ತೆ ನಿವಾಸಿಗಳಾದ ನಾಯಕ…

Read More