ತುಮಕೂರು: ಸವಿತಾ ಸಮಾಜದ ಯುವಜನತೆ ಶೈಕ್ಷಣಿಕವಾಗಿ, ಅರ್ಥಿಕವಾಗಿ ಮುಂದೆ ಬರಲು ಅಗತ್ಯವಾದ ಮಾರ್ಗದರ್ಶವನ್ನು ಸಮಾಜದ ಹಿರಿಯರು ನೀಡುವ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಸಲಹೆ ನೀಡಿದ್ದಾರೆ. ನಗರದ ಕನ್ನಡಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಸಾಪ,ಸವಿತಾ ಸಮಾಜ,(ರಿ), ತುಮಕೂರು ತಾಲೂಕು ಮತ್ತು ನಗರ ಸವಿತಾ ಸಮಾಜದ ವತಿಯಿಂದ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ದೀಪಬೆಳಗಿ , ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತಿದ್ದ ಅವರು,ದುಡಿಯುವ ಕೈಗಳಿಗೆ ಕೆಲಸ ನಿಟ್ಟಿನಲ್ಲಿ ಸರಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಶೈಕ್ಷಣಿಕವಾಗಿ, ಅರ್ಥಿಕವಾಗಿ ಹೇಗೆ ಸವಿತಾ ಸಮಾಜದ ಸದೃಢವಾಗಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸಿ, ಅವರು ಸಹ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ತಾವೆಲ್ಲರೂ ಸಹಕಾರ ನೀಡಬೇಕೆಂದರು. ಯಾವುದೇ ಸಮಾಜ ಅಭಿವೃದ್ದಿಯಾಗಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ನಿಮ್ಮಲ್ಲಿ ಸಂಘಟನೆ ಎಂಬುದು ಇದ್ದರೆ, ರಾಜಕಾರಣಿಗಳು, ಅಧಿಕಾರಿಗಳು ಎಲ್ಲರೂ ನಿಮ್ಮನ್ನು ಹುಡುಕಿಕೊಂಡು ಬರುತ್ತಾರೆ ಎಂದರು. ವೇದಿಕೆಯಲ್ಲಿ…
Author: News Desk Benkiyabale
ತುಮಕೂರು: ಲೇಖಕ,ವಿಮರ್ಶಕ ಡಾ.ರವಿಕುಮಾರ್ ನೀ.ಹ.ಅವರ ಅವು ಅಂಗೇ ಕಥಾ ಸಂಕಲನದಲ್ಲಿರುವ ಕಥೆಗಳು ಅಂಚಿನ ಸಮುದಾಯಗಳ ದ್ವನಿಯಾಗಿವೆ ಎಂದು ಚಿಂತಕರಾದ ಡಾ.ಭಾರತಿದೇವಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಕನ್ನಡ ಭವನದಲ್ಲಿ ಜಲಜಂಬೂ ಲಿಂಕ್ಸ್, ತುಮಕೂರು, ಅರುಣೋದಯ ಸಹಕಾರ ಸಂಘ(ರಿ), ಜಿಲ್ಲಾ ಕಸಾಪ,ತುಮಕೂರು, ಕರ್ನಾಟಕ ಲೇಖಕಿಯರ ಸಂಘ(ರಿ), ತುಮಕೂರು ಅಲೇಖ್ಯ ಎಂಟರ್‌ಪ್ರೆöÊಸಸ್, ತುಮಕೂರು ಇವರು ಆಯೋಜಿಸಿಸದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ವಿಮರ್ಶಕ ಡಾ.ರವಿಕುಮಾರ್.ನೀ.ಹ. ಅವರ ಅವು ಅಂಗೇ ಕಥಾ ಸಂಕಲನ ಲೋಕಾರ್ಪಣೆ ಹಾಗು ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಅವು ಅಂಗೇ ಕಥಾ ಸಂಕಲನದಲ್ಲಿರುವ ಬಹುತೇಕ ಕಥೆಗಳು, ಅವರ ಸಂಶೋಧನಾ ಕೃತಿಗಳಾದ ಕುರಂಗರಾಯ, ಜಲಂಜAಭೂ ಕನ್ಯ,ಕಣ್ಣು ಧರಿಸಿ ಕಾಣಿರೋ ಇವುಗಳ ಮುಂದುವರೆದ ಭಾಗಗಳಂತೆ ಕಂಡು ಬರುತಿದ್ದು, ಸಮುದಾಯದ ದ್ವನಿಯನ್ನು ಬಿತ್ತಿರಿಸುತ್ತಿದ್ದು, ಸಾಂಸ್ಕೃತಿಕ ರಾಜಕಾರಣದಿಂದ ಕಣ್ಮೆರೆಯಾದ ನೆಲಮೂಲದ ಸಂಸ್ಕೃತಿಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ ಎಂದರು. ಡಾ.ರವಿಕುಮಾರ್ ನೀ.ಹ.ಅವರ ಪ್ರತಿ ಕಥೆಯಲ್ಲಿಯೂ ತಾರತಮ್ಯ ಮುಕ್ತ ಸಮಾಜದ ಕನಸು ಇರುವುದನ್ನು ಕಾಣಬಹುದು.ಯಾತನೆ,ನೋವಿನಿಂದ ಕೂಡಿದ ಭೂತ ಕಾಲವನ್ನು ವರ್ತಮಾನದಲ್ಲಿ ಎದುರುಗೊಳ್ಳುವ…
ತುಮಕೂರು: ಇತ್ತೀಚಿನ ಕಾಲದಲ್ಲಿ ಮಕ್ಕಳಲ್ಲಿ ಫೋನ್ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಓದಿನ ಆಸಕ್ತಿ ಕಡಿಮೆಯಾಗುತ್ತಿದೆ. ಆ ಮೂಲಕ ಅವರ ಭವಿಷ್ಯಕ್ಕೆ ತೊಡಕಾಗುತ್ತಿದೆ. ಹಾಗಾಗಿ ಪೋಷಕರು ಮಕ್ಕಳು ಫೋನ್ ಬಳಸದಂತೆ ನೋಡಿಕೊಳ್ಳಬೇಕಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್ ತಿಳಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸಿರಾ ಗೇಟ್‌ನಲ್ಲಿರುವ ಅರಿವು ಇಂಟರ್ ನ್ಯಾಷನಲ್ ಶಾಲೆಯ 2024-25ನೇ ಸಾಲಿನ ವಾರ್ಷಿಕೊತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಫೇಸ್ ಬುಕ್, ಇನ್ಸ್ಟ್ರಾಗ್ರಾಮ್ ಬಳಸದೆಯೂ ಬದುಕಬಹುದು. ಮಕ್ಕಳಲ್ಲಿ ಫೇಸ್ ಬುಕ್ ಇನ್ಸ್ಟ್ರಾಗ್ರಾಮ್ ಕಡಿಮೆ ಬಳಸುವಂತೆ ಪೋಷಕರು ನೋಡಿಕೊಂಡರೆ ಮಕ್ಕಳ ಭವಿಷ್ಯಕ್ಕೆ ಚೆನ್ನಾಗಿರುತ್ತದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದರು. ಮಕ್ಕಳ ಆಸಕ್ತಿಯನ್ನು ತಿಳಿದುಕೊಂಡು ಅವರಿಗೆ ಪ್ರೋತ್ಸಾಹ ನೀಡಬೇಕು. ಪೋಷಕರು ಕೂಡ ಮಕ್ಕಳ ಮೇಲೆ ಇದೇ ಓದಬೇಕು, ಅದನ್ನೇ ಓದಬೇಕು ಎಂದು ಒತ್ತಡವನ್ನು ಹಾಕಬಾರದು ಎಂದು ಸಲಹೆ ಮಾಡಿದರು. ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಮಕ್ಕಳಿಗೆ ಪೋಷಕರು ಒತ್ತಡ ಹಾಕಬಾರದು.…
ತುಮಕೂರು: ಇತ್ತೀಚಿಗೆ ಬದಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳು ಮಾನವನಿಗೆ ಸಹಕಾರಿ, ಸಹಾಯವು ಅಲ್ಲದೆ ಆರ್ಥಿಕವಾಗಿಯೂ ಅಪಾಯ ತಂದುಡ್ಡುವAತಹ ವ್ಯವಸ್ಥೆಗೆ ದಾರಿ ಮಾಡಿ ಕೊಟ್ಟಿದ್ದು ಸಮಾಜದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಸುರಕ್ಷತೆಗೆ ಸುಧಾರಿತ ಮತ್ತು ಪರಿಣಾಮಕಾರಿಯಾದಂತಹ ತಾಂತ್ರಿಕ ವ್ಯವಸ್ಥೆ ರೂಪುಗೊಳ್ಳಬೇಕಾಗಿದ್ದು ಇಂದಿನ ತಾಂತ್ರಿಕ ವ್ಯವಸ್ಥೆಗಳ ಅಡಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯ ತುಮಕೂರು ನಗರ ಟ್ರಾಪಿಕ್ ಜಾಮ್ ಸಮಸ್ಯೆ, ಇತರೆ ವುಷಗಳಿಂದ ಸುರಕ್ಷಿತವಾಗಿ ರಕ್ಷಣೆಯಲ್ಲಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಬಿ ಅಶ್ವಿಜಾ ಅವರು ತಿಳಿಸಿದರು. ತುಮಕೂರು ನಗರ ಹೊರವಾಲಯದ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಒಂದು ವಾರಗಳ ಕಾಲ ಏರ್ಪಡಿಸಲಾಗಿದ್ದ ‘ಇ ಆಡಳಿತದ ಸುರಕ್ಷತೆ ಮತ್ತು ಸೈಬರ್ ಕ್ರೈಂ ವಸ್ತುಸ್ಥಿತಿ ಆಧುನಿಕ ಕೃತಕ ಬುದ್ಧಿಮತ್ತೆ ವಿಷಯ ಕುರಿತಾದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಇಡೀ ರಾಜ್ಯದಲ್ಲಿ ತುಮಕೂರು ನಗರ ಅತಿ ವೇಗವಾಗಿ ಬೆಳೆಯುತ್ತಿದೆ ಅನೇಕ ತಂತ್ರಜ್ಞಾನದ ವ್ಯವಸ್ಥೆಗಳು ಇಲ್ಲಿಗೆ ಅವಶ್ಯಕವಾಗಿದ್ದು ತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ…
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡಾಗ ಮಾತ್ರ ವೃತ್ತಿ ಜೀವನದಲ್ಲಿ ಬರುವ ಸಲಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಎಂದು ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂಎಸ್ ರವಿಪ್ರಕಾಶ್ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾನಿಲಯದ ಎಲೆಕ್ಟಿçಕಲ್ ಸೆಮಿನಾರ್ ನಲ್ಲಿ ನಡೆದ ಇಂಡಸ್ಟಿçಯಲ್ ಆಟೋಮೇಷನ್ ಎಂಬ ವಿಷಯದ ಕುರಿತು ಹತ್ತು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಅಭಿವೃದ್ಧಿಯಾಗಿರುವ ಕೃತಕ ಬುದ್ದಿಮತ್ತೆಯಂತಹ ತ್ರಂತ್ರಜ್ಞಾನವು ಸಾಕಷ್ಟು ಕ್ಷೇತ್ರವನ್ನು ಆವರಿಸಿದೆ. ಇಂತಹ ತಂತ್ರಜ್ಞಾನಗಳ ಅರಿವು ನಿಮಗಿದ್ದರೆ ತಾಂತ್ರಿಕ ಯುಗದಲ್ಲಿ ನೀವು ಉಳಿಯಲು ಸಾಧ್ಯವಾಗುತ್ತದೆ. ಕಲಿಕೆ ನಿರಂತರವಾದ್ದು ಪ್ರತಿನಿತ್ಯವೂ ಹೊಸತನ್ನು ಕಲಿಯುತ್ತಿರಬೇಕು ಎಂದು ತಿಳಿಸಿದರು. ಎಚ್‌ಎಂಎಸ್ ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟಿçಕಲ್ ವಿಭಾಗದ ಮುಖ್ಯಸ್ಥರಾದ ಡಾ. ತ್ಯಾಗರಾಜು ಮಾತನಾಡಿ ವಿದ್ಯಾರ್ಥಿಗಳು ಪ್ರೆಶ್ನೆಕೇಳುವ ಮನೋಭಾವವನ್ನು ರೂಡಿಸಿಕೊಳ್ಳಿ. ಪ್ರೆಶ್ನೆ ಕೇಳುವುದರಿಂದ ಗೊಂದಲಗಳಿಗೆ ಪರಿಹಾರ ಸಿಗುತ್ತದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಈ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದು…
ತುಮಕೂರೂ: ತಂತ್ರe್ಞÁನ ಪ್ರಾಭಲ್ಯವಿರುವ ಯುಗದಲ್ಲಿ ಸರ್ವವ್ಯಾಪಿಯಾಗಿರುವ ಮೊಬೈಲï ಫೋನುಗಳ ಅತಿಯಾದ ಬಳಕೆ ವಿದ್ಯಾರ್ಥಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂಬ ಆತಂಕವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಚೇತನಕುಮಾರ್ ವ್ಯಕ್ತಪಡಿಸಿದರು. ಅವರು ತುಮಕೂರಿನ ಬಾಲಭವನದಲ್ಲಿ ಬಾಲಭವನ ಸಮಿತಿ ಹಾಗೂ ಝೆನ್ ಟೀಮ್ ವತಿಯಿಂದ ಆಯೋಜಿಸಿದ್ದ ಮೈಸೂರು ರಂಗಾಯಣದ ಮೈ ಫ್ಯಾಮಿಲಿ ನಾಟಕವನ್ನು ಚೆಂಡೆ ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮೊಬೈಲ್ ಫೋನ್ ಗಳಿಂದ ಸಿಗುವ ಮನರಂಜನೆಯ ಆಕರ್ಷಣೆಯು ಏಕಾಗ್ರತೆಗೆ ಭಂಗ ತರುತ್ತದೆ ಎಂದ ಅವರು ಇದರಿಂದಾಗಿ ಮಕ್ಕಳ ಕಡಿಮೆ ಶೈP್ಷÀಣಿಕ ಕಾರ್ಯP್ಷÀಮತೆಗೆ ಕಾರಣವಾಗುತ್ತದೆ ಎಂದು ವಿಷಾದಿಸಿದರು. ಮೊಬೈಲï ಫೋನ್ ಗಳ ಅತಿಯಾದ ಬಳಕೆ ವ್ಯಸನದಂತಹ ನಡಾವಳಿಕೆಗೆ ಕಾರಣವಾಗುತ್ತದೆ. ಹೀಗಾಗಿ ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲï ಫೋನ್ ನೀಡಬೇಕು ಎಂಬುದನ್ನು ಪೋಷಕರು ನಿರ್ಧರಿಸಬೇಕು ಎಂದು ಸಲಹೆ ನೀಡಿದರು. ಸಂವಹನಕ್ಕಾಗಿ ಅತಿಯಾದ ಮೊಬೈಲ್ ಅನ್ನು ಬಳಸುವುದರಿಂದ ಮಕ್ಕಳ ಮಾನಸಿಕ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ವರ್ಚುವಲ್ ಸಂವಹನಗಳಲ್ಲಿ ಹೆಚ್ಚಿನ…
ತುಮಕೂರು: ಮಡಿವಾಳ ಸಮಾಜ ಕುಲಕಸುಬಿನ ಜೊತೆಗೆ, ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ, ಅವರು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವAತೆ ಮಾಡಬೇಕೆಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕಸಾಪ ಹಾಗೂ ಜಿಲ್ಲಾ ಮಡಿವಾಳ ಸಂಘ ಹಾಗೂ ವಿವಿಧ ಮಡಿವಾಳ ಸಮುದಾಯದ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವೀರ ಗಣಾಚಾರಿ ಶ್ರೀಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶ್ರೀಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು,ಮಡಿವಾಳ ವೃತ್ತಿಯಲ್ಲಿಯೂ ಒಳ್ಳೆಯ ಆದಾಯವಿದೆ. ಇದನ್ನು ಮಾಡುವವರು ಮಾಡಲಿ, ಭಿನ್ನ ಕೆಲಸಗಳಿಗೆ ಹೋಗಬೇಕೆಂಬ ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತು ನೀಡಿ,ನಿಮ್ಮದೆ ಹಾಸ್ಟಲ್ ಜಾಗದಲ್ಲಿ ಮಕ್ಕಳಿಗೆ ಮಾರ್ಗದರ್ಶನ ನೀಡಿ,ಮೊದಲಿನಿಂದಲೂ ನಮ್ಮ ಕುಟುಂಬ ಮಡಿವಾಳ ಸಮಾಜದ ಜೊತೆಗಿದೆ.ಮುಂದೆಯೂ ನಿಮ್ಮ ಜೊತೆಗೆ ಇರಲಿದ್ದೇನೆ ಎಂಬ ಭರವಸೆಯನ್ನು ನೀಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ,12ನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡಿದ್ದ ಶಿವಶರಣರು ಅನುಭವ ಮಂಟಪದ ಮೂಲಕ…
ಪಾವಗಡ: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ ಹತ್ತಕ್ಕೂ ಅಧಿಕ ಜನರಿಗೆ ಗಂಭೀರ ಗಾಯ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸೆಂಟ್ರಿAಗ್ ಕೆಲಸಕ್ಕೆ ತೆರಳಿ, ಮರಳಿ ತಮ್ಮ ಊರಿಗೆ ಬರುತ್ತಿದ್ದಂತಹ ಸಂದರ್ಭದಲ್ಲಿ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಬಗುಡೂರು ಗ್ರಾಮದ ತಿರುವಿನ ಬಳಿ, 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬೀಕರ ಅಪಘಾತ ಸಂಭವಿಸಿದ್ದು ಹತ್ತಕ್ಕೂ ಅಧಿಕ ಜನ ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ. ಎಚ್ ಹೊಸಳ್ಳಿ ತಾಂಡ ಗ್ರಾಮದ ಲಂಬಾಣಿ ಸಮುದಾಯದ ಪುರುಷ ಹಾಗೂ ಮಹಿಳಾ ಕಾರ್ಮಿಕರು ಸೆಂಟ್ರಿAಗ್ ಕೆಲಸಕ್ಕೆಂದು ತಿರುಮಣಿ ಭಾಗಕ್ಕೆ ಶುಕ್ರವಾರ ತೆರಳಿದ್ದರು,ಕೆಲಸವನ್ನು ಮುಗಿಸಿ ಮರಳಿ ತಮ್ಮ ಗ್ರಾಮಕ್ಕೆ ಬರುವಂತಹ ಸಂದರ್ಭದಲ್ಲಿ ಬುಗುಡೂರು ಸಮೀಪ ವಾಹನ ನಿಯಂತ್ರಣ ತಪ್ಪಿ ಪಟ್ಟಿಯಾಗಿದೆ ಘಟನೆಯಲ್ಲಿ 55 ವರ್ಷದ ತಿಪ್ಪ ನಾಯಕ್ ಎನ್ನುವವರ ಒಂದು ಕೈ ಸಂಪೂರ್ಣ ನಜ್ಜುಗುಜ್ಜಾಗಿದ್ದು ಲಕ್ಷಮ್ಮ, ಅರುಣಾ, ಕಾವೇರಿ, ಶಾಂತಮ್ಮ, ಶಾಂತಾಬಾಯಿ,ಪ್ರಕಾಶ್, ದೇವಿ ಬಾಯಿ, ಸಕ್ಕಬಾಯಿ ಎನ್ನುವವರಿಗೆ ತಲೆ ಹಾಗೂ ಸೊಂಟ ಇತರೆ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು…
ತುಮಕೂರು : ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾ ಪಂಚಯತಿ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹAತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ…
ತುಮಕೂರು: ಸೌಹಾರ್ಧ ತುಮಕೂರು ವತಿಯಿಂದ ಮಹಾತ್ಮ-ಹುತಾತ್ಮ ಸೌಹಾರ್ಧ ಸಪ್ತಾಹದ ಅಂಗವಾಗಿ ನಗರದ ಟೌನ್‌ಹಾಲ್ ಮುಂಭಾಗದ ಬಿ.ಜಿ.ಎಸ್.ವೃತ್ತದಲ್ಲಿ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಸೌಹಾರ್ಧ ಸಂಕಲ್ಪ ದಿನ, ಸಭೆ-ಪ್ರತಿಭೆ-ಸ್ವೀಕಾರ, ಸೌಹಾರ್ಧ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಕುರಿತು ಮಾತನಾಡಿದ ನಿವೃತ್ತ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ,ಧರ್ಮ, ಜಾತಿ, ಭಾಷೆ ಇವೆಲ್ಲವೂ ಜನರ ನಡುವೆ ಸೌಹಾರ್ಧ ಬೆಸೆಯುವ ಅಂಶಗಳು, ಆದರೆ ಇಂದು ಇವುಗಳೇ ಜನರ ನಡುವೆ ದ್ವೇಷ ಬಿತ್ತುವ ವಿಷಯಗಳಾಗಿರುವುದು ನಿಜಕ್ಕೂ ದುರಾದೃಷ್ಟಕರ. ಇಂತಹ ಅಂಶಗಳ ಬಗ್ಗೆ ಜನರು ಯಾವಾಗಲು ಎಚ್ಚರಿಕೆಯಿಂದ ಹೆಜ್ಜೆಗಳ ನಿಡಬೇಕಿದೆ. ಮೊದಲು ನಮ್ಮ ನಡುವೆಯೇ ಸೌಹಾರ್ಧವನ್ನು ಮೈಗೂಡಿಸಿಕೊಂಡು,ನಮ್ಮ ನೆರೆಹೊರೆಯವರನ್ನು ಸಹ ಸೌಹಾರ್ಧದೆಡೆಗೆ ತೆಗೆದುಕೊಂಡು ಹೋಗಬೇಕಾಗಿದೆ.ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದರು. ಕರ್ನಾಟಕ,ಹಾಗೆಯೇ ತುಮಕೂರು ಜಿಲ್ಲೆ ರಾಷ್ಟçಕವಿ ಕುವೆಂಪು ಅವರ ಮಾತಿನಂತೆ ಶಾಂತಿಯ ತೋಟವಾಗಿದೆ. ನಾವುಗಳು ಇದನ್ನು ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ನಾವೆಲ್ಲರೂ ತಾಳ್ಮೆ, ಸಹನೆಯಿಂದ ವರ್ತಿಸಬೇಕಿದೆ.ಎಲ್ಲ ಧರ್ಮ,ಜಾತಿ, ವರ್ಗದ ಜನರೊಂದಿಗೆ ಸ್ನೇಹದಿಂದ ಬೇರತ ಬಾಳುವುದನ್ನು ಕಲಿಯಬೇಕಾಗಿದೆ.ನಮ್ಮಗಳ ನಡುವೆ ಇರುವ…