Author: News Desk Benkiyabale

 ತುಮಕೂರು :       ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರು ಸೂಚಿಸಿದರು.       ಈಗಾಗಲೇ ಜಿಲ್ಲೆಯಲ್ಲಿ ನೋಂದಣಿ ಕಾರ್ಯ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಸಲು ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ ಬಿಸಿಯೂಟ ತಯಾರಕರು, ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳು, ಸಾರಿಗೆ ಇಲಾಖೆಯಡಿಯ ಖಾಸಗಿ ಬಸ್ ಚಾಲಕರು, ಮೀನುಗಾರಿಕೆ ಇಲಾಖೆಯ ತೀವ್ರ ಹಾಗೂ ಅರೆಕಾಲಿಕ ಮೀನುಗಾರರು, ಸಮಾಜ ಕಲ್ಯಾಣ ಇಲಾಖೆಯ ಚರ್ಮ ಉದ್ಯಮ ಕಾರ್ಮಿಕರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿದ್ದು, ತಕ್ಷಣವೇ ಈ ಎಲ್ಲಾ ಕಾರ್ಮಿಕರಿಗೂ ಈ ಯೋಜನೆಯ ಕುರಿತು ಅರಿವು…

Read More

ತುಮಕೂರು :       ಯಾವುದೇ ಒಬ್ಬ ವ್ಯಕ್ತಿಯು ಜೀವನದಲ್ಲಿ ತನ್ನ ಗುರಿಯನ್ನು ಮುಟ್ಟಲು ಶಿಕ್ಷಣವು ಪ್ರಮುಖ ಸಾಧನವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅತೀಕ್ ಅಭಿಪ್ರಾಯ ವ್ಯಕ್ತಪಡಿಸಿದರು.       ತುಮಕೂರು ನಗರದ ಪಿ.ಹೆಚ್.ಕಾಲೋನಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಖುರ್ಷಿದ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ನೋಟ್ ಬುಕ್ ಹಾಗೂ ಕಂಪ್ಯೂಟರ್ ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯೆಯು ಸಾಧಕನ ಸ್ವತ್ತು. ಶಾಲೆಗೆ ಹೋಗುವ ಮೂಲಕ ಸತತ ಪರಿಶ್ರಮದಿಂದ ಸಾಧಿಸಿದಾಗ ಮಾತ್ರ ವಿದ್ಯೆ ನಮಗೆ ಒಲಿಯುತ್ತದೆ. ಇಂದಿನ ಮಕ್ಕಳೇ ನಾಳೆಯ ಭವ್ಯ ಭಾರತದ ಪ್ರಜೆಗಳು. ಕೆಲವರಿಗೆ ಶಾಲೆಗೆ ಹೋಗಲು ಆಸಕ್ತಿ ಇದ್ದರೂ ಅವಕಾಶ ಸಿಗುವುದಿಲ್ಲ. ಆದರೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ತಮಗೆ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದರಿಂದ ಪೋಷಕರ ಆಸೆಗಳನ್ನು ಈಡೇರಿಸಲು ಸಾಧ್ಯವಾಗಲಿದೆ ಎಂದರು.       ವಿದ್ಯೆಗಾಗಿ, ಜ್ಞಾನಾರ್ಜನೆಗಾಗಿ ವಿದ್ಯಾರ್ಥಿಗಳು ವಿದೇಶಗಳಿಗೆ ಹೋದರೂ ತಪ್ಪಿಲ್ಲ. ಜ್ಞಾನವು ವಿಶಾಲವಾದುದು.…

Read More

ಮಧುಗಿರಿ :       ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅದೃಷ್ಟ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 4 ವಿದ್ಯಾರ್ಥಿಗಳಿಗೆ ಕೂಡಿ ಬಂದಿದೆ.       ಶೈಕ್ಷಣಿಕ ಜಿಲ್ಲೆಯ ಶಿರಾ ತಾಲೂಕಿನ ಗ್ರಾಮೀಣ ಪ್ರದೇಶದ ಬಡ ಕುಟುಂಬದ ಚಿಕ್ಕನಹಳ್ಳಿ ಸರ್ಕಾರಿ ಶಾಲೆಯ 10 ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಎಸ್. ಸಾಗರ್ ಮತ್ತು ಬುಕ್ಕಾಪಟ್ಟಣದ ಸರ್ಕಾರಿ ಫ್ರೌಢಶಾಲೆಯ ವಿದ್ಯಾರ್ಥಿ ಪ್ರಜ್ವಲ್ ಶಿರಾ ತಾಲೂಕಿನ ಚಂಗಾವರ ಪ್ರೌಢಶಾಲೆಯ ವಿದ್ಯಾರ್ಥಿನಿ ಆರ್. ದೀಪಿಕ ಮತ್ತು ನಗರದ ಸಕಾರಿ ಪ್ರದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಚೈತ್ರ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಜ.20 ರಂದು ನವದೆಹಲಿಯಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸುತ್ತಿದ್ದಾರೆ.     ಬಡ ಕುಟುಂಬದ ಪ್ರತಿಭೆಗಳು :       ನಾಲ್ಕು ಜನ ವಿದ್ಯಾರ್ಥಿಗಳು ಬಡ ಕುಟುಂಬದಿಂದ ಬಂದವರಾಗಿದ್ದು, ದೀಪಿಕ ತಂದೆ ರಾಜಣ್ಣ ಮತ್ತು ತಾಯಿ…

Read More

ತುಮಕೂರು :        ನಗರದ ಸಿದ್ದಿವಿನಾಯಕ ಮಾರುಕಟ್ಟೆ ಮುಂಭಾಗ ಕಳೆದ 10-15 ವರ್ಷಗಳಿಂದ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಸ್ಮಾರ್ಟ್‍ಸಿಟಿ ಕಾಮಗಾರಿಯಿಂದ ಅಲ್ಲಿಂದ ತೆರವುಗೊಳಿಸಿದ್ದು, ಹಣ್ಣಿನ ವ್ಯಾಪಾರಿಗಳಿಗಾಗಿ ಶಾಸಕ ಜ್ಯೋತಿಗಣೇಶ್ ಹಾಗೂ ಆಯುಕ್ತರಾದ ಭೂಬಾಲನ್ ಸೇರಿ ಹಳೇ ಸಿದ್ದಿವಿನಾಯಕ ಮಾರುಕಟ್ಟೆ ಮುಂಭಾಗ ತಾತ್ಕಾಲಿಕವಾಗಿ ವ್ಯಾಪಾರ ಮಾಡಿಕೊಳ್ಳಲು ಒಪ್ಪಿಗೆ ನೀಡಿದ್ದಾರೆ.       ಸಿದ್ದಿವಿನಾಯಕ ಮಾರುಕಟ್ಟೆ ಸ್ಥಳಾಂತರವಾದ ನಂತರ ಪಕ್ಕದಲ್ಲಿಯೇ ಮಿನಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಗಳು ವಹಿವಾಟು ಮಾಡುತ್ತಿದ್ದು, ಈಗ ಹಣ್ಣು ಹಾಗೂ ಹೂವಿನ ವ್ಯಾಪಾರಿಗಳು ವ್ಯಾಪಾರ ಮಾಡಲು ಅಡ್ಡಿಯುಂಟು ಮಾಡುತ್ತಿದ್ದು, ಮಿನಿ ಮಾರುಕಟ್ಟೆಗೆ ತೆರಳುವ ಗೇಟ್ ಬಾಗಿಲು ಹಾಕಿ ವ್ಯಾಪಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.       ತರಕಾರಿ ವ್ಯಾಪಾರಿಗಳಂತೆ ಹಣ್ಣು ಮತ್ತು ಹೂವು ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕು, ವ್ಯಾಪಾರ ಮಾಡದೇ ಜೀವನ ನಡೆಸುವುದು ಕಷ್ಟವಾಗಿದ್ದು, ತರಕಾರಿ ವ್ಯಾಪಾರಿಗಳು ಶಾಸಕರು ಹಾಗೂ ಪಾಲಿಕೆ ಆಯುಕ್ತರು ಜಾಗ ನಿಗದಿ ಮಾಡಿದ್ದರು…

Read More

ಗುಬ್ಬಿ :       ನಿತ್ಯ ಸಾವಿರಾರು ಮಂದಿ ಸಂಚರಿಸುವ ಪ್ರಮುಖ ಚೇಳೂರು ರಸ್ತೆ ಹಾದು ಹೋಗುವ ಮಧ್ಯೆ ಪಟ್ಟಣದ ರೈಲ್ವೆ ನಿಲ್ದಾಣದಿಂದ ಅಂಡರ್‍ಪಾಸ್ ಸೇತುವೆ ದಾಟಿ ಸಾಗುವ ಒಂದು ಕಿಮೀ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ದುರಸ್ಥಿ ಕಾರ್ಯಕ್ಕೆ ಸ್ಥಳೀಯ ಪಟ್ಟಣ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಜವಾಬ್ದಾರಿ ವಹಿಸದೆ ಒಬ್ಬರನ್ನಬ್ಬರು ದೂರುತ್ತಿದ್ದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು ಚೇಳೂರು ರಸ್ತೆ ಬಂದ್ ಮಾಡಿ ಮೂರು ತಾಸು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆಯಿತು.         ಬೆಳಿಗ್ಗೆ ಚೇಳೂರು ಮತ್ತು ಅಮ್ಮನಘಟ್ಟ ಸಾಗುವ ಸರ್ಕಲ್ ಬಳಿ ರಸ್ತೆ ತಡೆ ನಡೆಸಿದ ನಾಗರೀಕ ಹೋರಾಟ ಸಮಿತಿ ಹಾಗೂ ನೂರಾರು ಗ್ರಾಮಸ್ಥರು ಒಂದು ಕಿಮೀ ರಸ್ತೆ ದುರಸ್ಥಿ ಕಾರ್ಯ ನಡೆಸಿ ಅಗಲೀಕರಣ ಮಾಡುವಂತೆ ಆಗ್ರಹಿಸಿ ಧರಣಿ ನಡೆಸಿದರು.       ಈ ಹಿಂದೆ ರೈಲ್ವೆ ಇಲಾಖೆ ಗೇಟ್ ತೆಗೆದು ಅಂಡರ್‍ಪಾಸ್ ಸೇತುವೆ ನಿರ್ಮಾಣ ಮಾಡಲಾಯಿತು. ಅವೈಜ್ಞಾನಿಕವಾಗಿ ನಿರ್ಮಾಣವಾದ…

Read More

ತುಮಕೂರು :       ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ಪ್ರಾಥಮಿಕ ಕೃಷಿ ಅಭಿವೃದ್ದಿ ಬ್ಯಾಂಕ್ ರೈತರಿಂದ ಜಪ್ತಿ ಮಾಡಿದ್ದ ಟ್ರಾಕ್ಟರ್‍ನನ್ನು ಮರು ಜಪ್ತಿ ಮಾಡುವ ಕಾರ್ಯ ನಡೆಯಿತು.       ನಗರದ ಭದ್ರಮ್ಮ ಸರ್ಕಲ್‍ನಲ್ಲಿರುವ ಪಿಎಲ್‍ಡಿ ಬ್ಯಾಂಕಿನಿಂದ ಸಾಲ ಪಡೆದಿದ್ದ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಯ ರೈತ ರಂಗನಾಥ ಎಂಬುವವರಿಗೆ ಯಾವುದೇ ನೊಟೀಸ್ ನೀಡದೆ ಬ್ಯಾಂಕ್ ಅಧಿಕಾರಿಗಳು, ಕುಟುಂಬಕ್ಕೆ ಆಧಾರವಾಗಿದ್ದ ಟ್ರಾಕ್ಟರ್ ಜಪ್ತಿ ಮಾಡಿ ತಂದ ಬ್ಯಾಂಕ್ ಗೋಡೌನ್‍ನಲ್ಲಿ ಇರಿಸಿದ್ದರು.ಶುಕ್ರವಾರ ಮಧ್ಯಾಹ್ನ 1:30ರ ಸುಮಾರಿಗೆ ಸ್ಥಳಕ್ಕೆ ಆನಂದ ಪಟೇಲ್ ನೃತೃತ್ವದಲ್ಲಿ ಆಗಮಿಸಿದ ರೈತರು ಗೋಡೌನ್‍ಗೆ ಹಾಕಿದ್ದ ಬೀಗವನ್ನು ಹೊಡೆದು ರೈತರಿಂದ ಜಪ್ತಿ ಮಾಡಿದ್ದ ಸುಮಾರು ಐದು ಟ್ರಾಕ್ಟರ್‍ಗಳನ್ನು ಮರು ಜಪ್ತಿ ಮಾಡಿ ತೆಗೆದುಕೊಂಡು ಹೋದರು.       ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್,ಸತತ ಬರಗಾಲದಿಂದ ರೈತರು ಕಂಗಾಗಲಾಗಿದ್ದಾರೆ. ರಾಜ್ಯ ಸರಕಾರವೇ ಬಲವಂತದ ವಸೂಲಿಯನ್ನು ಕೈಬಿಟ್ಟು,ರೈತರ ಮನವೊಲಿಸಿ ಸಾಲ…

Read More

ತುಮಕೂರು :       ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಗೆ ಹೊಂದಿಕೊಂಡಂತೆ ಇರುವ ಮಣಕುಪ್ಪೆಯಲ್ಲಿ ಚಿರತೆ ಬಾಲಕನನ್ನು ಹೊತ್ತೊಯ್ದು ಸಾಯಿಸುವುದಕ್ಕೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಿಲ್ಲಾ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.       ಜಿಲ್ಲೆಯಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಊರುಗಳಿಗೆ ನುಗ್ಗಿ ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದರು, ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿಯಲು ಯಾವುದೇ ಕ್ರಮವಹಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು ಜಿಲ್ಲಾ ಅರಣ್ಯಾಧಿಕಾರಿ ವಿರುದ್ಧ ಧಿಕ್ಕಾರವನ್ನು ಕೂಗಿದರು.       ಈ ವೇಳೆ ಮಾತನಾಡಿದ ಗ್ರಾಮಾಂತರ ಶಾಸಕ ಗೌರಿಶಂಕರ್ ಅವರು, ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬನ್ನಿಕುಪ್ಪೆಯಲ್ಲಿ ಚಿರತೆ ವೃದ್ಧೆಯ ಮೇಲೆ ದಾಳಿ ಮಾಡಿ ಸಾಯಿಸಿತ್ತು, ಆಗಲೇ ಅರಣ್ಯಾಧಿಕಾರಿಗಳಿಗೆ ಚಿರತೆಯನ್ನು ಹಿಡಿಯಲು ಕ್ರಮವಹಿಸುವಂತೆ ಮನವಿ ಮಾಡಿದ್ದರು ಸಹ ನಿರ್ಲಕ್ಷ್ಯವಹಿಸಿದ್ದರಿಂದ ಇಲ್ಲಿಯವರೆಗೆ ಮೂವರು ಸಾವನ್ನಪ್ಪುವಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.      …

Read More

ತುಮಕೂರು:       ಜನವರಿ 14ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಜನವರಿ 19ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜನವರಿ 21ರಂದು ನಡೆಯುವ ಅಂಬಿಗರ ಚೌಡಯ್ಯ ಜಯಂತಿಗಳನ್ನು ಸರಳವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅವರು ತಿಳಿಸಿದರು.       ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, ಮಹಾಯೋಗಿ ವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿಗಳ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಕೆಲವು ಭಾಗಗಳಲ್ಲಿ ಸಂಭವಿಸಿದ ನೆರೆಪ್ರವಾಹದ ಕಾರಣ ಸರ್ಕಾರದ ನಿರ್ದೇಶನದಂತೆ ಸಂಭ್ರಮದ ಆಚರಣೆ ಮಾಡದೆ, ನಿಗಧಿತ ದಿನಾಂಕಗಳಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಾಪುರುಷರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾತ್ವಿಕವಾಗಿ ಆಚರಣೆ ಮಾಡುವಂತೆ ಅವರು ಸೂಚಿಸಿದರು.       ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಪಾಲಿಕೆಯ ಆರೋಗ್ಯಾಧಿಕಾರಿ ಡಾ.ನಾಗೇಶ್, ಜಿಲ್ಲಾ ರೆಡ್ಡಿ ಜನ ಸಂಘದ ಅಧ್ಯಕ್ಷ ಕೆ.ಶ್ರೀನಿವಾಸರೆಡ್ಡಿ ಹಾಗೂ ಕಾರ್ಯದರ್ಶಿ…

Read More

ತುಮಕೂರು :       ಕಲೆ, ಸಾಹಿತ್ಯ, ಸಂಸ್ಕøತಿ ಹಾಗೂ ಸ್ಥಳೀಯ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಮೂಡಲಪಾಯ ಯಕ್ಷಗಾನ ಅಕಾಡೆಮಿ ಸ್ಥಾಪನೆಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇನೆ. ಈ ಸಂಬಂಧ ಸಂಬಂಧಪಟ್ಟ ಸಚಿವರೊಂದಿಗೂ ಮಾತನಾಡಿ ಒತ್ತಾಯಿಸುತ್ತೇನೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.       ಕರ್ನಾಟಕ ಯಕ್ಷಗಾನ ಅಕಾಡೆಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಸಂಘ ಮತ್ತು ಕರ್ನಾಟಕ ಜಾನಪದ ಪರಿಷತ್ತು ತುಮಕೂರು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಮೂಡಲಪಾಯ ಯಕ್ಷಗಾನ ಪರಂಪರೆ-ಪುನಶ್ಚೇತನ ವಿಚಾರ ಸಂಕಿರಣ ಮತ್ತು ಭಾಗವತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶಗೌಡ ಮನವಿ ಸ್ವೀಕರಿಸಿದ ಸಚಿವರು ಮೂಡಲಪಾಯ ಯಕ್ಷಗಾನ ಅಕಾಡೆಮಿ ಸ್ಥಾಪನೆಗೆ ನೆರವು ನೀಡುವುದಾಗಿ ಹೇಳಿದರು.       ಕಲೆ ಸಾಹಿತ್ಯ, ಭಾಷೆ ಮತ್ತು ಸಂಸ್ಕøತಿಗೆ ಪೂರಕವಾಗಿ ಶಕ್ತಿತುಂಬುವ ಕೆಲಸ ಮಾಡಿದರೆ ಸಂಸ್ಕಾರವಂತರು ಸೃಷ್ಟಿಯಾಗುತ್ತಾರೆ ಎಂದು ನಂಬಿದ್ದೇನೆ. ಈಗಿನ ಸಂದರ್ಭದಲ್ಲಿ ಸಂಸ್ಕಾರವಂತರು ಬೇಕಾಗಿದ್ದಾರೆ. ಹೀಗಾಗಿ ಯುವಜನಕ್ಕೆ…

Read More

ತುಮಕೂರು:       ರಾಜ್ಯದಲ್ಲಿಯೇ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಆಯುಕ್ತ ಎನ್.ಶಿವಕುಮಾರ್ ಅವರು ಹೇಳಿದರು.       ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಾಗೂ ತುಮಕೂರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾಜ್ಯದ ಮೊದಲ ರಸ್ತೆ ಸುರಕ್ಷತಾ ಜಾಗೃತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ದೇಶದಲ್ಲಿ ರಸ್ತೆ ಅಪಘಾತಗಳಿಂದ ಹೆಚ್ಚು ಅಕಾಲಿಕ ಮರಣ ಹೊಂದುತ್ತಿದ್ದಾರೆ. ಈ ರೀತಿಯ ರಸ್ತೆ ಅಪಘಾತಗಳು ಜನರಿಗೆ ಭಯವನ್ನುಂಟು ಮಾಡುತ್ತಿವೆ. ರಸ್ತೆಯ ನಿಯಮಗಳನ್ನು ಮರೆತು ಇಷ್ಟಬಂದ ಹಾಗೆ ರಸ್ತೆಗಳನ್ನು ಉಪಯೋಗಿಸಿಕೊಳ್ಳುತ್ತಿರುವುದು ಅಪಘಾತಕ್ಕೆ ಕಾರಣ. ರಸ್ತೆ ಅಪಘಾತಗಳನ್ನು ತಡೆಟ್ಟುವಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಿಂದ ಜಾಗೃತಿ ಅಭಿಯಾನನ್ನು ಆರಂಭಿಸಲಾಗುತ್ತಿದೆ. ಈ ಅಭಿಯಾನಕ್ಕೆ ಸರ್ಕಾರದ ಪ್ರಯತ್ನದೊಂದಿಗೆ ಸಾರ್ವಜನಿಕರು ಈ ಅಭಿಯಾನದಲ್ಲಿ…

Read More