ತುಮಕೂರು : ನಡೆದಾಡುವ ದೇವರು ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಇಂದಿಲ್ಲಿ ತಿಳಿಸಿದರು. ನಗರದ ಸಿದ್ದಗಂಗಾ ಮಠಕ್ಕೆ ತಮ್ಮ ಪತ್ನಿ ಆಶಾಪಾಟೀಲ್ ಅವರೊಂದಿಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿರುವ ಕೊಠಡಿಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಎಲ್ಲ ಪ್ಯಾರಮೀಟರ್ ಚೆನ್ನಾಗಿದೆ ಎಂದರು. ಶ್ರೀಗಳ ಆರೋಗ್ಯ ಕುರಿತು ವೈದ್ಯರೊಂದಿಗೂ ಚರ್ಚಿಸಿದ್ದೇನೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಶ್ರೀಗಳನ್ನು ಬಹಳಷ್ಟು ಜಾಗರೂಕತೆಯಿಂದ ನೋಡಿಕೊಳ್ಳಲಾಗುತ್ತಿದೆ. ಶ್ರೀಗಳನ್ನು ನೋಡಲು ಹೋದ ಸಂದರ್ಭದಲ್ಲಿ ಸೋಂಕು ತಗುಲಬಾರದು ಎಂಬ ಉದ್ದೇಶದಿಂದ ನಮ್ಮೆಲ್ಲರಿಗೂ ಮಾಸ್ಕ್ ಹಾಕಿ ಒಳಗೆ ಪ್ರವೇಶ ನೀಡಲಾಯಿತು ಎಂದ ಅವರು, ವೈದ್ಯರು ಶ್ರೀಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಶೀಘ್ರ ಗುಣಮುಖರಾಗಲಿದ್ದಾರೆ ಎಂದರು. …
Author: News Desk Benkiyabale
ತುಮಕೂರು: ಜನವರಿ 8 ಮತ್ತು 9ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ತುಮಕೂರು ನಗರದಲ್ಲಿ ಪ್ರಚಾರಾಂದೋಲನ ಮತ್ತು ಬೀದಿಬದಿ ಸಭೆಗಳಿಗೆ ಚಾಲನೆ ನೀಡಲಾಯಿತು. ಪ್ರಚಾರಾಂದೋಲನದಲ್ಲಿ ಜನರಿಗೆ ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ನಿರಂತರ ಸಭೆಗಳನ್ನು ಮಾಡಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಲಾಯಿತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ನೂರಾರು ಮಂದಿ ಪ್ರಾಣತ್ಯಾಗ ಮಾಡಿದ್ದಾರೆ. ಅವರ ಆಶಯಗಳು ಮತ್ತು ದೇಶದ ಸಂಪತ್ತನ್ನು ಉಳಿಸಲು ನಡೆಸುವ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಸ್ವಾತಂತ್ರ್ಯ ಚೌಕದಲ್ಲಿ ನಡೆದ ಪ್ರಚಾರಾಂದೋಲನದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಾಕಷ್ಟು ಸಮಸ್ಯೆಗಳು ಉದ್ಭವಿಸಿವೆ. ಈ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಕೇಂದ್ರ ಸರ್ಕಾರ ಜನರ…
ತುಮಕೂರು: ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಮನೆ ಮನೆಗೆ ಅಡುಗೆ ಅನಿಲ ಸರಬರಾಜು ಮಾಡುವ ಪೈಪ್‍ಲೈನ್ ಅಳವಡಿಸುವ ಕಾಮಗಾರಿಗೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಶೆಟ್ಟಿಹಳ್ಳಿ ವೃತ್ತದ ದೋಬಿಘಾಟ್ ರಸ್ತೆಯಲ್ಲಿ ಚಾಲನೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರಕಾರದ 50ಃ50ರ ಅನುದಾನದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಯೋಜಯ ಪಿಪಿಪಿ ಮಾಡಲ್‍ನಲ್ಲಿ ಮನೆಮನೆಗೆ ಅಡುಗೆ ಅನಿಲ ವಿತರಿಸುವ ಪೈಪ್‍ಲೈನ್ ಕಾಮಗಾರಿಯ ಜವಾಬ್ದಾರಿಯನ್ನು ಮೇಗಾ ಗ್ಯಾಸ್ ಏಜೆನ್ಸಿಗೆ ನೀಡಲಾಗಿದೆ.ಮುಂದಿನ ಐದು ವರ್ಷದಲ್ಲಿ ನಗರದ ಎಲ್ಲಾ ಮನೆಗಳಿಗೂ ಪೈಪ್‍ಲೈನ್ ಮೂಲಕವೇ ಅಡುಗೆ ಅನಿಲ ವಿತರಣೆಯಾಗಲಿದೆ ಎಂದು ಶಾಸಕ ಜೋತಿ ಗಣೇಶ್ ತಿಳಿಸಿದ್ದಾರೆ. ಅಭಿವೃದ್ದಿ ಕಾಮಗಾರಿಗಳು ನಡೆಯುವಾಗ ರಸ್ತೆ ಅಗೆಯುವುದು ಸಹಜ.24*7 ನಿರಂತರ ಕುಡಿಯುವ ನೀರು ಸರಬರಾಜು, ಯುಜಿಡಿ,ಜಿಯೋ ಬ್ರಾಡ್‍ಬಾಂಡ್ ಪೈಪ್‍ಲೈನ್,ಅಡುಗೆ ಅನಿಲ ಸರಬರಾಜು ಹಾಗೂ ವಿದ್ಯುತ್ ಸಂಪರ್ಕಕ್ಕೆ ಸಹ ಕಾಮಗಾರಿಗಳು ನಡೆಯುತ್ತಿದ್ದು, ರಸ್ತೆ ಅಗೆಯುವ ಕಾಮಗಾರಿ ನಡೆಯುವಾಗ ಹಾಲಿ ಇರುವ ಟೆಲಿಪೋನ್,ಕುಡಿಯುವ ನೀರಿನ ಪೈಪ್‍ಲೈನ್ ಸಂಪರ್ಕಕ್ಕೆ ತೊಂದರೆಯಾದರೆ…
ಬೆಂಗಳೂರು: ಸ್ಯಾಂಡಲ್‍ವುಡ್‍ನ ಖ್ಯಾತ ಹಿರಿಯ ನಟ ಲೋಕನಾಥ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಲೋಕನಾಥ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, 5 ದಶಕಗಳ ಕಾಲ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಲೋಕನಾಥ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಧ್ಯಾಹ್ನ 12 ರಿಂದ 2.30ರವರೆಗೂ ಅಂತಿಮ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಬಳಿಕ ಸಂಜೆ 4 ಗಂಟೆಗೆ ಬನಶಂಕರಿಯಲ್ಲಿರುವ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ದೇವಾಂಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದ್ದು, ಪುತ್ರ ಅಶ್ವಿನ್ ಶ್ಯಾಂಡಿಲ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಸಂಜೆ 4 ಗಂಟೆಗೆ ಬನಶಂಕರಿ…
ಪ್ರಪಂಚದ ಅತ್ಯಂತ ಜನಪ್ರಿಯ ಸಂದೇಶ ರವಾನೆ ವೇದಿಕೆ ವಾಟ್ಸಾಪ್ ಡಿಸೆಂಬರ್ 31 ರ ನಂತ್ರ ಕೆಲ ಮೊಬೈಲ್ ಗಳಲ್ಲಿ ತನ್ನ ಸೇವೆ ನಿಲ್ಲಿಸಲಿದೆ. ಫೇಸ್ಬುಕ್ ಸ್ವಾಮ್ಯದ ವಾಟ್ಸಾಪ್ ಈಗಾಗಲೇ ಈ ಬಗ್ಗೆ ಘೋಷಣೆ ಮಾಡಿದೆ. ಹಿಂದಿನ ವರ್ಷ ಕೂಡ ವಾಟ್ಸಾಪ್ ಕೆಲ ಫೋನ್ ಗಳಲ್ಲಿ ತನ್ನ ಸೇವೆ ಸ್ಥಗಿತಗೊಳಿಸಿತ್ತು. ವಿಂಡೋಸ್ ಫೋನ್ 8.0, ಬ್ಲ್ಯಾಕ್ಬೆರಿ ಒಎಸ್, ಬ್ಲ್ಯಾಕ್ಬೆರಿ 10 ನಲ್ಲಿ ವಾಟ್ಸಾಪ್ ಬರ್ತಿಲ್ಲ. ಡಿಸೆಂಬರ್ 31, 2017 ರ ನಂತ್ರ ಈ ಮೊಬೈಲ್ ಗೆ ಸೇವೆ ನೀಡುವುದನ್ನು ವಾಟ್ಸಾಪ್ ನಿಲ್ಲಿಸಿತ್ತು. ಈಗ ನೋಕಿಯಾದ ಎಸ್ 40 ಸರದಿ. ಡಿಸೆಂಬರ್ 31, 2018 ರ ನಂತ್ರ ಈ ಫೋನ್ ಬಳಕೆದಾರರು ವಾಟ್ಸಾಪ್ ಬಳಸಲು ಸಾಧ್ಯವಿಲ್ಲ. ಆಂಡ್ರಾಯ್ಡ್ 2. 3. 7 ಜಿಂಜರ್ಬ್ರೆಡ್ ಸ್ಮಾರ್ಟ್ಫೋನ್ ಹಾಗೂ ಐಫೋನ್ ಚಾಲನೆ ಮಾಡ್ತಿರುವ ಐಒಎಸ್ 7 ಸ್ಮಾರ್ಟ್ಫೋನ್ ಗಳಲ್ಲಿ 2020 ರವರೆಗೆ ಮಾತ್ರ ವಾಟ್ಸಾಪ್ ಬಳಸಬಹುದಾಗಿದೆ. …
ತುಮಕೂರು : ಶ್ರೀ ಶಿವಕುಮಾರಸ್ವಾಮೀಜಿ ಅನಾರೋಗ್ಯದ ಹಿನ್ನೆಲೆ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾನು ಕೂಡ ಸ್ವಾಮೀಜಿ ಅವರ ಪಾದ ಮುಟ್ಟಿ ನಮಸ್ಕಾರ ಮಾಡಿದೆ. ಪ್ರಸಾದ ಮಾಡಿಕೊಂಡು ಹೋಗಿ ಎಂದು ಸ್ವಾಮೀಜಿ ಕೈ ಸನ್ನೆ ಮಾಡಿದರು ಎಂದಿರುವ ಅವರು ಗಾಳಿ ಸುದ್ದಿಗೆ ಭಕ್ತರು ಕಿವಿಗೊಡಬೇಡಿ ಎಂದು ಇದೇ ವೇಳೆ ಮನವಿ ಮಾಡಿದರು. ಒಂದು ವಾರದಲ್ಲಿ ಸಂಪೂರ್ಣವಾಗಿ ಸ್ವಾಮೀಜಿ ಅವರು ಚೇತರಿಸಿಕೊಳ್ಳುತ್ತಾರೆ ಎಂದು ಇದೇ ವೇಳೆ ತಿಳಿಸಿದರು. ಶಾಸಕರಾದ ಜೆ.ಸಿ. ಮಾಧುಸ್ವಾಮಿ, ಮಾಜಿ ಶಾಸಕ ಸುರೇಶ್ ಗೌಡ, ಮಾಜಿ ಸಂಸದ ಜಿ.ಎಸ್. ಬಸವರಾಜ್ ಮತ್ತಿತರರು ಈ ವೇಳೆ ಹಾಜರಿದ್ದರು.
ತುಮಕೂರು: ಕಳೆದ ವರ್ಷದಂತೆ ಈ ವರ್ಷವೂ ಜನವರಿ 5 ಹಾಗೂ 6ರಂದು ನಗರದ ಗಾಜಿನಮನೆಯಲ್ಲಿ “ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಬೆಂಗಳೂರಿನಲ್ಲಿ ಜನವರಿ 18ರಂದು ರಾಜ್ಯ ಮಟ್ಟದ ಮೇಳ ನಡೆಯುವುದರಿಂದ ಅದಕ್ಕೂ ಮುನ್ನ ಜಿಲ್ಲೆಯಲ್ಲಿ ಈ ಮೇಳವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಮೇಳದಲ್ಲಿ ರೈತರು ಬೆಳೆದ ವಿವಿಧ ಬಗೆಯ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಗುವುದಲ್ಲದೆ, ಸಾರ್ವಜನಿಕರಿಗೆ ಸಿರಿಧಾನ್ಯಗಳ ಉಪಯುಕ್ತತೆ ಬಗ್ಗೆ ಮಾಹಿತಿ ನೀಡಲಾಗುವುದೆಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಜಿಲ್ಲೆಯ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಡೆಯಲಿರುವ ಈ ಮೇಳಕ್ಕೆ ಜಿಲ್ಲೆಯ ಸುಮಾರು 10 ಸಾವಿರ ರೈತರು ಆಗಮಿಸಲಿದ್ದಾರೆ ಎನ್ನುವ ನಿರೀಕ್ಷೆಯಿದೆ. ಕಳೆದ ಬಾರಿಗಿಂತ…
ನೋಟು ಅಮಾನ್ಯೀಕರಣ ಮತ್ತು ಜಿಎಸ್‍ಟಿ ನೀತಿಯನ್ನು ತೀವ್ರ ಸಂಕಷ್ಟಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಕೊರಟಗೆರೆ ತಾಲೂಕು ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಯ ಅಜ್ಜಿಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಹೊಸ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ವಿಫಲರಾಗಿದ್ದಾರೆ. ಕೃಷಿಯ ನಂತರ ಉದ್ಯೋಗ ಸೃಷ್ಟಿಸಿದ್ದ ನಿರ್ಮಾಣ ವಲಯ ನೋಟು ಅಮಾನ್ಯೀಕರಣ ಮತ್ತು ಜಿಎಸ್‍ಟಿ ನೀತಿಯನ್ನು ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ಇದರಿಂದ ಆರ್ಥಿಕ ಸಂಚಲನವು ಸ್ಥಗಿತಗೊಂಡು ಕೃಷಿ, ವ್ಯಾಪಾರ ಮತ್ತು ಉದ್ಯೋಗದ ಮೇಲೆ ಬಾರೀ ಹಿನ್ನಡೆಗೆ ಕಾರಣವಾಗಿ ಕಾರ್ಮಿಕರ ಬದುಕು ದುಸ್ಥಿತಿಗೆ ಇಳಿದಿದೆ. ಆದ್ದರಿಂದ ನಿರ್ಮಾಣ ವಲಯವನ್ನು ರಕ್ಷಿಸಲು ಮತ್ತು ದೇಶದ ಅಭಿವೃದ್ಧಿಗೆ…
ತುಮಕೂರು: ಕ್ಷಯರೋಗದ ಬಗ್ಗೆ ಮನೆ-ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾದ್ಯಂತ ಜನವರಿ 2 ರಿಂದ 12ರವರೆಗೆ “ಸಕ್ರಿಯ ರೋಗ ಪತ್ತೆ ಆಂದೋಲನ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರ ಡಾ: ಸನತ್ ತಿಳಿಸಿದ್ದಾರೆ. ಈ ಆಂದೋಲನದಲ್ಲಿ ನಿಯೋಜಿತ ತಂಡವು ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಮನೆಗಳಿಗೆ ಭೇಟಿ ನೀಡಿ ರೋಗದ ಜನಜಾಗೃತಿ ಮೂಡಿಸಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಫ ಸಂಗ್ರಹಣೆ ಮಾಡಿ ಆ ದಿನವೇ ಕಫ ಪರೀಕ್ಷೆ ಮಾಡಲಾಗುವುದು. ಕಫದಲ್ಲಿ ಕ್ರಿಮಿಗಳು ಪತ್ತೆಯಾದಲ್ಲಿ ಅಂದಿನಿಂದಲೇ ಚಿಕಿತ್ಸೆ ಪ್ರಾರಂಭಿಸಲಾಗುವುದು. ಭಿತ್ತಿಪತ್ರ ಬಿಡುಗಡೆ:- ಆಂದೋಲನದ ಪ್ರಯುಕ್ತ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಇಂದು ಭಿತ್ತಿಪತ್ರವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಬಿ.ಆರ್.ಚಂದ್ರಿಕಾ, ಆರ್‍ಸಿಹೆಚ್ ಅಧಿಕಾರಿ ಡಾ: ಕೇಶವ್‍ರಾಜ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ: ಆರ್.ವಿ.ಮೋಹನ್‍ದಾಸ್, ಡಿಪಿಸಿ…
ಬೆಂಗಳೂರು: ಹಾಸನವನ್ನ ಪ್ರಜ್ವಲ್ ಗೆ ಬಿಟ್ಟುಕೊಡ್ತೇನೆ ಅಂತ ಮಾಜಿ ಪಿಎಂ ಹೆಚ್.ಡಿ ದೇವೇಗೌಡ್ರು ಘೋಷಣೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿ, ಪ್ರಜ್ವಲ್ ಹಾಸನದಲ್ಲಿ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ನಾನು ಹಾಸನ ಲೋಕಸಭಾ ಕ್ಷೇತ್ರವನ್ನು ಅವನಿಗೆ ಬಿಟ್ಟುಕೊಡುತ್ತೇನೆ ಎಂದರು. ಈ ಮೂಲಕ ಅಧಿಕೃತವಾಗಿ ಮುಂದಿನ ಲೋಕಸಭಾ ಚುನಾವಣೆಗೆ ಪ್ರಜ್ವಲ್ ರೇವಣ್ಣನವರು ಪ್ರವೇಶ ಮಾಡುವುದು ಬಹುತೇಕ ಫಿಕ್ಸ್ ಆಗಿದೆ.