ತುಮಕೂರು : ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಹೊರಬರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕಗಳ ಸಹಯೋಗದಲ್ಲಿ ನಗರದ ಎಸ್.ಐ.ಟಿ ಕಾಲೇಜಿನ ಶ್ರೀ ಶಿವಕುಮಾರಸ್ವಾಮೀಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ನೌಕರರಲ್ಲಿ ಅತಿಯಾದ ಒತ್ತಡ ಇರುವುದರಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳುವಲ್ಲಿ ಅನುಕೂಲವಾಗುವುದು ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಕ್ರೀಡಾಸಕ್ತಿಯನ್ನು ಪ್ರದರ್ಶಿಸಬೇಕು ಎಂದರಲ್ಲದೇ ಕ್ರೀಡಾಕೂಟದಲ್ಲಿ ಭಾಗವಹಿಸಲು ಹೇಗೆ ಉತ್ಸುಕರಾಗಿದ್ದೀರೋ.. ಅದೇ ರೀತಿ ಕಚೇರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ಕ್ರೀಡೆ, ಯೋಗ, ವಾಯ್ಯಾಮ,…
Author: News Desk Benkiyabale
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಬರೊಬ್ಬರಿ 5 ತಿಂಗಳ ಬಳಿಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ವರ್ಷ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಸುಮಾರು 30 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಗುಡ್ಡ ಕುಸಿದು ರಸ್ತೆಗೆ ಬಂಡೆಗಳು ಉರುಳಿಬಿದ್ದ ಪರಿಣಾಮ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ನಂತರದ ಎರಡು ತಿಂಗಳ ಬಳಿಕ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ರಾತ್ರಿ ವೇಳೆ ಆಂಬುಲೆನ್ಸ್ ಹೊರತುಪಡಿಸಿ ಯಾವುದೇ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿರಲಿಲ್ಲ. ಇದರಿಂದಾಗಿ ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವವರಿಗೆ ಸಮಸ್ಯೆಯಾಗಿತ್ತು. ಈಗ ಜಿಲ್ಲಾಡಳಿತ ಪ್ರಯಾಣಿಕರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಚಾರಕ್ಕೆ…
ತುಮಕೂರು : ಎಲ್ಲಾ ವಿಭಾಗದ ರೈತರು, ಕೃಷಿಕೂಲಿಕಾರರನ್ನು ಸಾಲದಿಂದ ಸಂಪೂರ್ಣ ಮುಕ್ತಗೊಳಿಸುವ ಋಣಮುಕ್ತ ಕಾಯ್ದೆ, ಡಾ.ಸ್ವಾಮಿನಾಥನ್ ವರದಿ ಆಧಾರಿತ ಕನಿಷ್ಠ ಬೆಂಬಲಬೆಲೆ ಖಾತರಿಕಾಯ್ದೆ ಜಾರಿ, ಪ್ರವಾಹಪೀಡಿತ ಜನರಿಗೆ ಸೂಕ್ತಪರಿಹಾರ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 8ರಂದು ಗ್ರಾಮೀಣ ಕರ್ನಾಟಕ ಬಂದ್‍ಗೆ ರೈತ-ಕೃಷಿಕೂಲಿಕಾರರ ಸಂಘಟನೆಗಳು ಕರೆ ನೀಡಿವೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರಾಜ್ಯ ಕಾರ್ಯದರ್ಶಿ ಜಿ.ಸಿ.ಬೈಯ್ಯಾರೆಡ್ಡಿ ತಿಳಿಸಿದರು. ತುಮಕೂರಿನ ದ್ವಾರಕ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ದೇಶದಲ್ಲಿ ಕೃಷಿಬಿಕ್ಕಟ್ಟು ಹೆಚ್ಚಿದ್ದು ರೈತ ಸಮುದಾಯ ಸಂಕಷ್ಟ ಅನುಭವಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಜನರ ನೆರವಿಗೆ ಬರುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಿಟ್ಟು ಬೇರೆ ವಿಷಯಗಳನ್ನು ಪ್ರಸ್ತಾಪಿಸುತ್ತ ಕಾಲ ಕಳೆಯುತ್ತಿದೆ. ಹೀಗಾಗಿ ರೈತ ಸಮಸ್ಯೆಗಳನ್ನು ನಿವಾರಿಸುವಂತೆ ಗಮನ ಸೆಳೆಯಲು ಬಂದ್ ಆಚರಿಸಲಾಗುತ್ತಿದೆ ಎಂದು ಹೇಳಿದರು. ರಾಜ್ಯದ ಎರಡೂ ರೈತ ಸಂಘಟನೆಗಳು,…
ತುರುವೇಕೆರೆ : ತಾಲೂಕು ಮಾವಿನಹಳ್ಳಿ ಅಂಗನವಾಡಿ ಕಾರ್ಯಕರ್ತೆ ಪದ್ಮ ಅವರ ಮೇಲೆ ಪ್ರಕಾಶ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಸೇರಿದಂತೆ ಗುಂಪೊಂದು ತೀವ್ರ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಾರ್ಯಕರ್ತೆ ಪದ್ಮ ಅವರನ್ನು ಅವರ ತೋಟದ ಮನೆಯಲ್ಲಿ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಪದ್ಮಾ ಅವರ ಕೈಬೆರಳು ಕತ್ತರಿಸಿ ಹೋಗಿವೆ. ತೀವ್ರ ಗಾಯಗೊಂಡಿರುವ ಪದ್ಮಾ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಪದ್ಮಾ ಅವರು ಮಾವಿನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಪಕ್ಕದ ಮಾಲೆ ಗ್ರಾಮದ ಪ್ರಕಾಶ್ ಮತ್ತು ಪತ್ನಿಯ ನಡುವೆ ನಡೆದ ಜಗಳದಲ್ಲಿ ಪದ್ಮಾ ಕೌನ್ಸಿಲಿಂಗ್ ನಡೆಸಿದ್ದರು. ಈ ಸಂಬಂಧ ಪ್ರಕಾಶ್ ಕೌನ್ಸಿಲಿಂಗ್‍ನಲ್ಲಿ ತನ್ನ ಪರ ನಿಲ್ಲಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಪದ್ಮಾ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಪ್ರಕಾಶ್ ಮಾತನ್ನು ಪದ್ಮಾ ಕೇಳಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಪದ್ಮಾ ವಾಸವಿದ್ದ ತೋಟದ ಮನೆಗೆ ಪ್ರಕಾಶ್,…
ತುಮಕೂರು : ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ-ಎಸ್.ವೈ.ಎಂ) ಯೋಜನೆಯಡಿ ಫಲಾನುಭವಿಗಳಾಗಲು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ.) ಗಳಲ್ಲಿ ನೋಂದಾಯಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿಂದು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ-ಎಸ್.ವೈ.ಎಂ) ಯೋಜನೆ, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಹಾಗೂ ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ವಿರುದ್ಧ ಜನ ಜಾಗೃತಿ ಮೂಡಿಸುವ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೊಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು,…
ಚಿಕ್ಕನಾಯಕನಹಳ್ಳಿ : ನಾವು ನಮಗೋಸ್ಕರ ಬದುಕಿದಾಗ ಅದು ಶ್ರೇಷ್ಟವಲ್ಲ .ಸಮಾಜಕ್ಕಾಗಿ ಬದುಕಿದಾಗ ಮಾತ್ರಶ್ರೇಷ್ಟ ಎಂದು ಕಾನೂನು ಸಚಿವಜೆ.ಸಿ.ಮಾಧುಸ್ವಾಮಿ ನುಡಿದರು. ತಾಲೂಕಿನ ಕುಪ್ಪೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಸಹಕಾರಿ ಕ್ಷೇತ್ರದಲ್ಲಿ ಕುಪ್ಪೂರು ಪತ್ತಿನ ಸಹಕಾರಿ ಬ್ಯಾಂಕ್ ಎಲ್ಲಾ ರೀತಿಯಲ್ಲಿ ಒಳ್ಳೆಯ ಸೌಲಭ್ಯವನ್ನು ಪಡೆದಿದೆ.ಇಲ್ಲಿನ ಯುವಜನಾಂಗ ಸಮರ್ಥವಾಗಿ ಕೆಲಸ ಮಾಡಿ ಉತ್ತಮ ಸಾಧನೆ ಮಾಡಿದ್ದಾರೆ. ಅವಧಿ ಮುಗಿದ ಮೇಲೂ ಸಹ ದಾಖಲೆಗಳನ್ನು ಪಡೆದು ರೈತರ ಸಾಲಮನ್ನಾ ಮಾಡಿಸಿದ್ದೇನೆ ಎಂದರು.ತಾಲೂಕಿನಲ್ಲಿ ರೈತರಿಗೆ ಹೆಚ್ಚಿನ ಮುಂಗಡ ನೀಡಿರುವ ಪ್ರಥಮ ಬ್ಯಾಂಕ್ ಇದಾಗಿದೆ ಎಂದರು. ಚುರುಕುಗೊಂಡ ತಾಲೂಕು ಆಡಳಿತಃತಾಲೂಕಿನ ರೈತರು ಕಂದಾಯ ದಾಖಲೆಗಳನ್ನು ಪಡೆಯಲು ಪರದಾಡುವುದನ್ನು ತಪ್ಪಿಸಲು,ಕಂದಾಯ ಅದಾಲತ್,ಪವತಿವಾರಸು ಖಾತೆ ಆಂದೋಲನ,ಕಂದಾಯ ಅದಾಲತ್,ಭೂ ದಾಖಲಾತಿ ತಿದ್ದುಪಡಿ,ಬಗರ್ ಹುಕುಂ ಪ್ರಕರಣಗಳ ಖಾತೆಗಳ ಬಗ್ಗೆ ಕ್ರಮ ಕೈಗೊಳ್ಳುವ ಮೂಲಕ ತಾಲೂಕು ಆಡಳಿತವನ್ನು ಚುರುಗೊಳಿಸಿದ್ದೇನೆ ಎಂದರು. …
ತುಮಕೂರು : ನಾಲ್ಕು ದಿಕ್ಕಿನಿಂದಲೂ ರಾಷ್ಟ್ರಧ್ವಜ ಹಿಡಿದು ನಾವು ಭಾರತೀಯರೆಂದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರ ಎನ್‍ಆರ್‍ಸಿ ಮತ್ತು ಸಿಎಎ ಕಾಯ್ದೆಗಳ ಜಾರಿಯನ್ನು ವಿರೋಧಿಸಿ ನಡೆದ ಪ್ರತಿಭಟನಾ ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ದೇಶದ ಐಕ್ಯತೆಯ ಬಿಂಬಿಸುವ ಘೋಷಣೆಗಳು ಮೊಳಗಿದವು. ಧರಣಿಯನ್ನುದ್ದೇಶಿಸಿ ಮಾತನಾಡಿದ ಪರಿಸರವಾದಿ ಸಿ.ಯತಿರಾಜ್ ಇಂದು ದೇಶದಲ್ಲಿ ತರುತ್ತಿರುವ ಕಾಯ್ದೆಗಳು ಜನಪರವಾಗಿರದೆ ಜನರನ್ನು ಒಡೆದುಆಳುವ ನೀತಿಗೆ ಪೂರಕವಾಗಿದೆ. ಸರ್ಕಾರದ ಸಚಿವರೊಬ್ಬರು ನೀಡುತ್ತಿರುವ ಹೇಳಿಕೆಗಳು ತದ್ವಿರುದ್ದವಾಗಿದ್ದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳನ್ನು ಗಮನಿಸಿದರೆ ಬಿಜೆಪಿಯ ದ್ವಂದ್ವವು ತಿಳಿಯುತ್ತದೆ ಎಂದು ಆರೋಪಿಸಿದರು. ಜನಪರ ಚಿಂತಕ ಕೆ.ದೊರೈರಾಜು ಮಾತನಾಡಿ, ಒಂದು ಕೋಮಿನ ಜನರಷ್ಟೇ ಅಲ್ಲ, ದೇಶದ ಬುಡಕಟ್ಟು, ಆದಿವಾಸಿಗಳು ಬಡವರು ಸಹ ಸಂಕಟಕ್ಕೆ ಒಳಗಾಗುವಂತಹ ಪರಿಸ್ಥಿತಿಯನ್ನು ದೂಡಿರುವುದನ್ನು ಯಾವುದೇ ಕಾರಣಕ್ಕೂ ನಾವು ಒಪ್ಪುವುದಿಲ್ಲ. ಪ್ರಗತಿಪರ ನಾಗರಿಕ ಸಂಘಟನೆಗಳ…
ತುಮಕೂರು : ನಗರದ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಡಾ.ಶ್ರೀಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಕರ್ನಾಟಕ ಫಿಟ್‍ನೆಸ್ ಅಂಡ್ ಬಾಡಿ ಬಿಲ್ಡರ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ದೇಹದಾಢ್ಯ ಸ್ಪರ್ಧೆ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮಗಳು ಜರುಗಿದವು. ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 150ಕ್ಕೂ ಹೆಚ್ಚು ದೇಹದಾಢ್ಯಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆರು ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆಯುವ ದೇಹದಾಢ್ಯ ಪಟುವನ್ನು ಮುಂದಿನ ತಿಂಗಳು ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಅವಕಾಶ ದೊರೆಯಲಿದೆ. ಪ್ರಮುಖವಾಗಿ ಮೆನ್ ಫಿಸಿಕ್,ಹುಮೆನ್ ಫಿಸಿಕ್,ಕರ್ನಾಟಕ ಉದಯ,ಕರ್ನಾಟಕ ಕುಮಾರ್,ಕರ್ನಾಟಕ ಕಿಶೋರ್, ಕರ್ನಾಟಕ ಕೇಸರಿ ವಿಭಾಗಗಳಲ್ಲಿ ತಲಾ ನಾಲ್ಕು ಸುತ್ತುಗಳಿದ್ದು,ಪ್ರತಿ ಸುತ್ತಿನಲ್ಲಿ ಮೊದಲು ಐದು ಸ್ಥಾನ ಪಡೆಯುವ ಕ್ರೀಡಾಪಟುಗಳಲ್ಲಿ ಅತಿ ಹೆಚ್ಚು ಅಂಕ ಪಡೆಯುವ ದೇಹಾದಾಢ್ಯ ಪಟುಗಳಿಗೆ ಕರ್ನಾಟಕ ಉದಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ತುಮಕೂರಿನ ದೇಹದಾಢ್ಯ ಪಟುಗಳಾದ ಜಿಮ್…
ತುಮಕೂರು : ಮುಂಬರುವ 2020ರ ಜನವರಿ 3ರಂದು ತುಮಕೂರು ನಗರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಅವರು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತುಮಕೂರು ನಗರದಲ್ಲಿ ಜನವರಿ 3ರಂದು ಪ್ರಧಾನ ಮಂತ್ರಿಗಳ ರಾಷ್ಟ್ರ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಕಾರ್ಯಕ್ರಮದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಇಂತಹ ಕಾರ್ಯಕ್ರಮವನ್ನು ಯಾವುದೇ ಲೋಪದೋಷವಿಲ್ಲದೆ ಯಶಸ್ವಿಯಾಗುವಂತೆ ಎಲ್ಲರೂ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿಷ್ಠಾಚಾರ ಸಮಿತಿ, ವೇದಿಕೆ ಸಮಿತಿ, ಮೂಲಭೂತ…
ತುಮಕೂರು : ಜಿಲ್ಲೆಯಲ್ಲಿ ಈಗಾಗಲೇ ಇರುವ 7 ಖರೀದಿ ಕೇಂದ್ರಗಳಲ್ಲಿ ಕನಿಷ್ಟ ಬೆಂಬಲ ಬೆಲೆ (ಎಂಎಸ್‍ಪಿ) ಯೋಜನೆಯಡಿ ರಾಗಿಯನ್ನು ಖರೀದಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ನಡೆದ 2019-20ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಕೇಂದ್ರ ತೆರೆಯುವ ಬಗ್ಗೆ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿರುವ ಗುಬ್ಬಿ, ಚಿಕ್ಕನಾಯಕನಹಳ್ಳಿ, ಕುಣಿಗಲ್, ತಿಪಟೂರು, ತುಮಕೂರು, ತುರುವೇಕೆರೆ, ಹುಳಿಯಾರ್ ಖರೀದಿ ಕೇಂದ್ರಗಳಲ್ಲಿ ಈ ಬಾರಿಯೂ ಖರೀದಿ ಪ್ರಕ್ರಿಯೆಯನ್ನು ಮುಂದುವರೆಸುವುದು ಸೂಕ್ತ ಎಂದು ಅವರು ತಿಳಿಸಿದರು. 2019-20ನೇ ಸಾಲಿನ ಎಂಎಸ್‍ಪಿ ಯೋಜನೆಯಡಿ ರಾಗಿ ಖರೀದಿ ಬೆಲೆಯು ಕ್ವಿಂಟಾಲ್‍ಗೆ 3150 ರೂ.ಗಳಾಗಿದ್ದು, ಜನವರಿ ಎರಡನೇ ವಾರದಲ್ಲಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಖರೀದಿ ಕೇಂದ್ರಗಳಲ್ಲಿ ಎಫ್‍ಎಕ್ಯೂ ಗುಣಮಟ್ಟದ ರಾಗಿಯನ್ನೇ ಖರೀದಿ…











