ತುಮಕೂರು : ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಕೊನೆಯ ಹಂತದಲ್ಲಿದ್ದು ಶೀಘ್ರದಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಸ್ಥಳಾಂತರಿಸಲಾಗುವುದು ಎಂದು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ತಿಳಿಸಿದರು. ತಾತ್ಕಾಲಿಕ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ತೆರವುಗೊಳಿಸಿ 5 ಮಹಡಿಗಳುಳ್ಳ ಇಂಟಿಗ್ರೇಟೆಡ್ ಬಸ್ ನಿಲ್ದಾಣ ಮಾಡಲಾಗುವುದು. ನೂತನ ಸ್ಮಾರ್ಟ್ ಬಸ್ ನಿಲ್ದಾಣವಾಗುವವರೆಗೂ ಪರ್ಯಾಯವಾಗಿ ಕೆಎಸ್‍ಆರ್‍ಟಿಸಿ ಡಿಪೋದಲ್ಲಿ ತಾತ್ಕಾಲಿಕ ಬಸ್‍ನಿಲ್ದಾಣ ಮಾಡಲು ಕಾಮಗಾರಿ ನಡೆಸುತ್ತಿದ್ದು, ಸದರಿ ಕಾಮಗಾರಿ ಕೊನೆಯ ಹಂತದಲ್ಲಿದೆ ಎಂದರು. ತಾತ್ಕಾಲಿಕ ಬಸ್ ನಿಲ್ದಾಣ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕಿಂತ ಕಡಿಮೆ ಸ್ಥಳಾವಕಾಶ ಹೊಂದಿದ್ದು, ಸಾರ್ವಜನಿಕರು ಸ್ಮಾರ್ಟ್ ಬಸ್ ನಿಲ್ದಾಣವಾಗುವರೆಗೂ ಸಹಕರಿಸಬೇಕು ಎಂದರಲ್ಲದೇ ಅಧಿಕಾರಿಗಳು ಮತ್ತು ಸ್ಮಾರ್ಟ್ ಸಿಟಿಯವರ ಸಹಕಾರದಲ್ಲಿ ಕಾಮಗಾರಿಗಳು ತುರ್ತಾಗಿ ನಡೆಯುತ್ತಿದೆ. ಬಸ್‍ಗಳ ಸಂಚಾರ ಮಾರ್ಗದ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮಾರ್ಗದರ್ಶನ ನೀಡಿದ್ದಾರೆ ಎಂದು ಅವರು ಹೇಳಿದರು.…
Author: News Desk Benkiyabale
ಕೊರಟಗೆರೆ : ಪ್ರೀತಿಸಿದ ಯುವತಿಯ ಜೊತೆ ಯುವಕ ತನ್ನ ಸ್ವಗ್ರಾಮಕ್ಕೆ ಬಂದು ಹಿಂದಿರುಗುವ ವೇಳೆ ಪಾವಗಡ-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಕಾರನ್ನು ಅಡ್ಡಗಟ್ಟಿ ಕಾರಿನಿಂದ ಯುವಕನನ್ನು ಹೊರಗೆಳೆದ 6ಜನ ದುಷ್ಕರ್ಮಿಗಳ ತಂಡ ತಲೆ ಮತ್ತು ಕುತ್ತಿಗೆಗೆ ಲಾಂಗು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ಜಿ.ನಾಗೇನಹಳ್ಳಿ ಸಮೀಪದ ರಾಜ್ಯ ಹೆದ್ದಾರಿಯ ಮೂಲಕ ಬೆಂಗಳೂರಿಗೆ ತೆರಳುವ ವೇಳೆ ಮಾರ್ಗಮಧ್ಯೆ ಪಾವಗಡದಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದ 6ಜನ ದುಷ್ಕರ್ಮಿಗಳ ತಂಡ ಯುವಕನ ಕಾರನ್ನು ಅಡ್ಡಗಟ್ಟಿ ಕಾರಿನಿಂದ ಶ್ರೀನಿವಾಸ್‍ನನ್ನು ಹೊರಗೆಳೆದು ತಲೆ ಮತ್ತು ಕುತ್ತಿಗೆಗೆ ಲಾಂಗಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ಬೆಂಗಳೂರು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗಲುಕುಂಟೆ ನಿವಾಸಿ ಶ್ರೀನಿವಾಸ್(25) ಹತ್ಯೆಯಾದ ದುರ್ದೈವಿ. ಈತ ಮೂಲತಃ ಆಂದ್ರಪ್ರದೇಶ ರಾಜ್ಯದ ಮಡಕಶಿರಾ ಮತ್ತು ತುಮಕೂರು ಜಿಲ್ಲೆಯ ಮಧುಗಿರಿ…
ತುಮಕೂರು: ತುಮಕೂರು ಮಹಾನಗರಪಾಲಿಕೆಯಲ್ಲಿನ ಪಟ್ಟಣ ವ್ಯಾಪಾರ ಸಮಿತಿಗೆ ಅಲ್ಪಸಂಖ್ಯಾತ ಮೀಸಲಾತಿ ಸ್ಥಾನಕ್ಕೆ ಡಿಸೆಂಬರ್ 21ರಂದು ನಡೆಯಬೇಕಿದ್ದ ಚುನಾವಣೆಯನ್ನು ಡಿಸೆಂಬರ್ 26ರಂದು ಮುಂದೂಡಲಾಗಿದೆ ಎಂದು ಪಟ್ಟಣ ವ್ಯಾಪಾರ ಸಮಿತಿ ಚುನಾವಣಾಧಿಕಾರಿ ತಿಳಿಸಿದ್ದಾರೆ. ಜಿಲ್ಲಾದ್ಯಂತ ಡಿಸೆಂಬರ್ 18ರ ರಾತ್ರಿ 8 ಗಂಟೆಯಿಂದ 21ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಸದರಿ ಚುನಾವಣೆಯು ಡಿಸೆಂಬರ್ 26 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಹಾನಗರಪಾಲಿಕೆ ಆವರಣದ ನಗರ ವಸತಿ ರಹಿತರ ಆಶ್ರಯ ಕೇಂದ್ರ ಹಾಗೂ ನಲ್ಮ್ ಯೋಜನೆಯ ಕಚೇರಿಯಲ್ಲಿ ನಡೆಯಲಿದೆ. ಪಟ್ಟಣ ವ್ಯಾಪಾರ ಸಮಿತಿ ಚುನಾವಣೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ಮೀಸಲಾತಿಯ 01 ಸ್ಥಾನಕ್ಕೆ ಶಾಂತಿನಗರದ ಅಭ್ಯರ್ಥಿ ಬಾಬಾ ಬಿನ್ ಷೇಕ್‍ಅಮೀರ್(ಮಾರಾಟ ನೋಂದಣಿ ಸಂಖ್ಯೆ – 1487), ಜಿ.ಸಿ.ಕಾಲೋನಿಯ ಮಹಮ್ಮದ್ ರಫೀಕ್ ಬಿನ್ ಅಬ್ದುಲ್‍ಕುದ್ದೂಸ್(ಮಾರಾಟ ನೋಂದಣಿ ಸಂಖ್ಯೆ – 780), ಶ್ರೀರಾಮನಗರದ ಮೊಹಮ್ಮದ್ ಸೌದ್ ಅಹಮದ್ ಬಿನ್ ಲೇಟ್ ರಫಿಉಲ್ಲಾ(ಮಾರಾಟ…
ತುಮಕೂರು : ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‍ಆರ್‍ಸಿ ಕಾಯ್ದೆಗಳನ್ನು ವಿರೋಧಿಸಿ ಪ್ರಗತಿಪರ ನಾಗರಿಕ ಸಂಘಟನೆಗಳ ಒಕ್ಕೂಟದಿಂದ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆ ನಡೆಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರೊಂದಿಗೆ ವಾಗ್ವಾದ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆ ಸಜ್ಜಾಗಿದ್ದ ಮುಖಂಡರನ್ನು ಸುತ್ತುವರಿದ ನೂರಾರು ಪೊಲೀಸರು ನಿಷೇಧಾಜ್ಞೆ ಜಾರಿಯಲ್ಲಿದೆ. ಹೀಗಾಗಿ ಪ್ರತಿಭಟನೆ ಅವಕಾಶ ನೀಡುವುದಿಲ್ಲ ಎಂದರು. ಇದಕ್ಕೆ ಪ್ರಗತಿಪರ ನಾಗರಿಕ ಸಂಘಟನೆಗಳ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆಗ ಪೊಲೀಸರಿಗೂ-ಮುಖಂಡರ ನಡುವೆ ವಾಗ್ವಾದ ನಡೆಯಿತು. ನಾಯಕರನ್ನು ಪೊಲೀಸರು ಸುತ್ತುವರಿಯುತ್ತಿದ್ದಂತೆಯೇ ಅಲ್ಲಲ್ಲಿ ಚದುರಿದಂತಿದ್ದ ಪ್ರತಿಭಟನಾಕಾರರು ಪೊಲೀಸರತ್ತ ಧಾವಿಸಿದರು. ಆಗ ಮೈಕ್ ಮೂಲಕ 144 ನಿಷೇಧಾಜ್ಞೆ ಜಾರಿಯಲ್ಲಿದೆ. ಗುಂಪು ಸೇರಬಾರದು ಎಂದು ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿ ಕಳಿಸಿದರು. ಬಳಿಕ ಪೊಲೀಸರು ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್. ರಾಮಯ್ಯ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್…
ತುಮಕೂರು : ಫುಡ್ ಪಾರ್ಕ್‍ಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಖಾತೆ ಆಹಾರ ಸಚಿವ ರಮೇಶ್ವರ ತೆಲಿ ತಿಳಿಸಿದರು. ತುಮಕೂರು ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಫುಡ್ ಪಾರ್ಕ್‍ಗೆ ಬುಧವಾರ ಭೇಟಿ ನೀಡಿ, ಅಲ್ಲಿ ತಯಾರಾಗುವ ಉತ್ಪನ್ನಗಳ ಮಾಹಿತಿ ಪಡೆದು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಫುಡ್ ಪಾರ್ಕ್‍ಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಸ್ವತಃ ಮೋದಿಯವರೇ ತುಮಕೂರು ಫುಡ್ ಪಾರ್ಕ್‍ಗೆ ಚಾಲನೆ ನೀಡಿದ್ದು, ಅವರ ನಿರ್ದೇಶನದಂತೆ ತುಮಕೂರು ಸೇರಿದಂತೆ ದೇಶದ ಎಲ್ಲಾ ಫುಡ್ ಪಾರ್ಕ್‍ಗಳನ್ನು ನೂತನ ತಂತ್ರಜ್ಞಾನದ ಮೂಲಕ ಮತ್ತಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದರು. ಫುಡ್ ಪಾರ್ಕ್‍ನಿಂದ ತುಮಕೂರು ಸುತ್ತಮುತ್ತಲಿನ ರೈತರಿಗೆ ಹಾಗೂ ಸ್ಥಳೀಯರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಪಾರ್ಕ್‍ನಲ್ಲಿ ಸ್ಥಳೀಯರಿಗೆ ಹೆಚ್ಚು ಉದ್ಯೋಗ ನೀಡುವಂತೆ ಸೂಚಿಸಲಾಗಿದೆ. ಅಲ್ಲದೆ, ಸ್ಥಳೀಯ ರೈತರ…
ತುಮಕೂರು : ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಭಾ.ಆ.ಸೇ ಅವರು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಡಿಸೆಂಬರ್ 19ರಂದು ಅಧಿಕಾರ ಸ್ವೀಕರಿಸಿದರು. ಅನಂತರ ಮಾತನಾಡಿದ ಅವರು, ಸ್ಮಾರ್ಟ್‍ಸಿಟಿ ಕಾಮಗಾರಿಗಳನ್ನು ಒಂದು ದಿನದಲ್ಲಿ ಪೂರ್ಣಗೊಳಿಸಲು ಸಾಧ್ಯವಿಲ್ಲ 3-4 ತಿಂಗಳಾದರೂ ಬೇಕು ಅಲ್ಲಿಯವರೆಗೂ ಸಾರ್ವಜನಿಕರು, ಜನಪ್ರತಿನಿಧಿಗಳು ತಾಳ್ಮೆಯಿಂದ ಇದ್ದು ನಮಗೆ ಸಹಕಾರ ಕೊಡಬೇಕು ಎಂದು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ಹೆಚ್ಚುವರಿ ಪ್ರಭಾರ ವ್ಯವಸ್ಥಾಪಕ ನಿರ್ದೆಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿದರು. ಸ್ಮಾರ್ಟ್‍ಸಿಟಿ ಲಿಮಿಟೆಡ್ ನಗರದಲ್ಲಿ ಬಹಳಷ್ಟು ಕಾಮಗಾರಿ ನಡೆಸುತ್ತಿದ್ದು, ಅದರಲ್ಲಿ ಕೆಲವು ಸಮಸ್ಯೆಗಳು ಕಂಡು ಬಂದಿವೆ. ಅದರಲ್ಲೂ ಮುಖ್ಯವಾಗಿ ರಸ್ತೆ ಕಾಮಗಾರಿಯಿಂದ ಜನರಿಗೆ ತೊಂದರೆಯಾಗುತ್ತಿರುವ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ಯಾವ ಸಮಸ್ಯೆಗೆ ಹೇಗೆ ಪರಿಹಾರಕಂಡುಕೊಳ್ಳುವುದು ಎಂಬುದನ್ನು ಆಲೋಚಿಸಿ ಸಾರ್ವಜನಿಕರಿಗೆ ಒಂದು ಒಳ್ಳೆಯ ವ್ಯವಸ್ಥೆಯನ್ನು…
ಗುಬ್ಬಿ : ಸರ್ಕಾರಿ ಫಡ ಜಾಗದ ಮಂಜೂರಾತಿಗೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಕಾರೇಹಳ್ಳಿ ಎಸ್ಕೇಪ್ ಬಳಿ ನಡೆದಿದೆ. ಬಿದರೆಹಳ್ಳಿ ಕಾವಲ್ ಗ್ರಾಮಕ್ಕೆ ಸೇರಿದ ಸರ್ವೆ ನಂ.59 ರಲ್ಲಿರುವ 3.17 ಎಕರೆ ಪ್ರದೇಶ ಸಕಾರಿ ಫಡ ಎಂದು ಇಂದಿಗೂ ದಾಖಲೆ ಇದೆ. ಆದರೆ ಈ ಸ್ಥಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಇರುವ ಬೀಳು ಜಾಗವಾಗಿದೆ. ಇಲ್ಲಿ ನಿವೇಶನ ವಿಂಗಡಿಸಿ ನಿರ್ಗತಿಕರಿಗೆ ನೀಡಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ 131 ಮಂದಿ ಈ ಸ್ಥಳದಲ್ಲೇ ನಿವೇಶನ ನೀಡುವುದು ಸೂಕ್ತ ಎಂದು ಕೋರಿಕೊಂಡಿದೆ. ಹಲವು ವರ್ಷಗಳಿಂದ ನಿವೇಶನ ಇಲ್ಲದೇ ಕೂಲಿ ಕೆಲಸ ಮಾಡಿಕೊಂಡು ಬದುಕು ಸಾಗಿಸುವ ಮಂದಿ ಈ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ ಎಲ್ಲಾ ಜನಾಂಗ ವರ್ಗದ ಮಂದಿ ಇರುವುದಾಗಿ ನಿವೇಶನ ಕೋರಿದ ತಂಡ ತಿಳಿಸುತ್ತಿದೆ. ದಲಿತ ಸರ್ವೋದಯ ಸಮಿತಿ ಜಿಲ್ಲಾಧ್ಯಕ್ಷ…
ತುಮಕೂರು : ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೊಂಡೊಯ್ಯುವುದು, ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಿಳಿಸಲು ಅನುಕೂಲವಾಗುವಂತೆ ಡಿಡಿಪಿಐ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕು ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಆದರೂ ಗ್ರಾಮೀಣ ಭಾಗಗಳಲ್ಲಿ ಇದನ್ನು ಕಾಣುತ್ತಿದ್ದೇವೆ ಹಾಗೂ ಒಂದೇ ವಾಹನದಲ್ಲಿ ಹೆಚ್ಚು ಸಂಖ್ಯೆಯ ಮಕ್ಕಳನ್ನು ಕರೆದೊಯ್ಯವಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಈ ದೂರುಗಳನ್ನು ದಾಖಲಿಸಿಕೊಳ್ಳಲು ಸಹಾಯವಾಣಿಯನ್ನು ಸ್ಥಾಪಿಸಬೇಕು ಎಂದರು. ಈ ದೂರುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಶಾಲೆಯ ಹಾಗೂ ವಾಹನಗಳ ವಿರುದ್ದ ಅಗತ್ಯ ಕ್ರಮ ವಹಿಸಬೇಕು ಹಾಗೂ ಈ ಕುರಿತಂತೆ ಜಾಗೃತಿ ಮೂಡಿಸಲು ಆಟೋ ಚಾಲಕರ ಸಂಘ,…
ತುಮಕೂರು : ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ಳಾವಿ ಹೋಬಳಿಯ ಎಂಟು ಕೆರೆಗಳಿಗೆ ಎತ್ತಿನಹೊಳೆಯ ಮೂ ಲಕ ಗುರುತ್ವಾಕರ್ಷಣೆಯಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಗೌರಿಶಂಕರ್ ಅವರು, ಜಿಲ್ಲಾಧಿಕಾರಿಗಳು ಹಾಗೂ ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಹಾಯ್ದು ಹೋಗಿರುವ ಎತ್ತಿನಹೊಳೆ ಪೈಪ್‍ಲೈನ್‍ನಿಂದ ಬೆಳ್ಳಾವಿ ಹೋಬಳಿಯ ಬೆಳ್ಳಾವಿ, ದೊಡ್ಡ ವೀರನಹಳ್ಳಿ, ದೊಡ್ಡೇರಿ, ಪಿ.ಗೊಲ್ಲಹಳ್ಳಿ, ಚೆನ್ನನಹಳ್ಳಿ, ಸೊರೇಕುಂಟೆ ಕೆರೆಗಳಿಗೆ 95.06ಎಫ್‍ಸಿಎಫ್‍ಟಿ(0.9) ಟಿಎಂಸಿ ನೀರನ್ನು ಗುರತ್ವಾಕ ರ್ಷಣೆಯಿಂದಲೇ ಹರಿಸಬಹುದಾಗಿದೆ. ಸದರಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಿದ್ದು, ಜನ ಜಾನುವಾರುಗಳಿಗೆ ತೊಂದರೆಯಾಗಿರುವುದರಿಂದ 210 ಕಿ.ಮೀಯಿಂದ 213 ಕಿಮೀಯೊಳಗೆ ಬರುವ ಈ 6 ಕೆರೆಗಳಿಗೆ ಸೂಕ್ತ ಜಾಗದಲ್ಲಿ ತೂಬು ನಿರ್ಮಾಣ ಮಾಡುವ ಮೂಲಕ ಹರಿಸಬಹುದಾಗಿದ್ದು, ಈ ಕೆರೆ ಗಳಿಗೆ ಎತ್ತಿನಹೊಳೆಯಿಂದ ನೀರು ಹರಿಸುವಂತೆ ಶಾಸಕ ಗೌರಿಶಂಕರ್ ಕೋರಿದ್ದಾರೆ. ಗ್ರಾಮಾಂತರ ಕ್ಷೇತ್ರಕ್ಕೆ…
ತುಮಕೂರು : ನಗರದ ಬುದ್ದಿಜೀವಿಗಳು, ಪ್ರಜ್ಞಾವಂತರು ಹಾಗೂ ನಾಗರಿಕರ ಒತ್ತಾಸೆಯಂತೆ ರಾಜ್ಯ ಸರ್ಕಾರ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ದಕ್ಷ ಐಎಎಸ್ ಅಧಿಕಾರಿ ಟಿ. ಭೂಬಾಲನ್ ಅವರನ್ನು ಮತ್ತೆ ವರ್ಗಾವಣೆ ಮಾಡಿದ್ದು, ಇಂದು ಬೆಳಿಗ್ಗೆ ಭೂಬಾಲನ್ ಅವರು ಪಾಲಿಕೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಪಾಲಿಕೆ ಆಯುಕ್ತರಾಗಿ ಜನವರಿಯಿಂದ ಅವಕಾಶ ದೊರೆತಿದ್ದು, ಮಧ್ಯೆದಲ್ಲಿ ಚುನಾವಣೆ ನಿಮಿತ್ತ ಸರ್ಕಾರ ಗೋಕಾಕ್‍ಗೆ ವರ್ಗಾವಣೆ ಮಾಡಿತ್ತು. ನಾನು ಅಲ್ಲಿಗೆ ಹೋಗಿ ಯಶಸ್ವಿಯಾಗಿ ಚುನಾವಣೆ ನಡೆಸಿದ್ದೇನೆ. ಮತ್ತೆ ಸರ್ಕಾರ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನಿಯೋಜಿಸಿದೆ. ಹಾಗಾಗಿ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು. ಈ ಹಿಂದೆ ಕೈಗೊಂಡಿದ್ದ ಅಭಿವೃದ್ಧಿಗಳನ್ನು ಮುಂದುವರೆಸಲು ನಾನು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ನಾನು ಇಲ್ಲಿಗೆ ಮತ್ತೆ ಆಯುಕ್ತರಾಗಿ ಬರಲು ಸಹಕರಿಸಿದ ಸಚಿವರು, ಶಾಸಕರು, ಎಲ್ಲ ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಎಲ್ಲ…










