ತುಮಕೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಮೈಸೂರು ಸಂಸ್ಥಾನದ ಕೊನೆಯ ರಾಜ ಜಯಚಾಮರಾಜೇಂದ್ರ ಒಡೆಯರ್ ಜನ್ಮಶತಾಬ್ದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮೈಸೂರು ಸಂಸ್ಥಾನದ ರಾಜವಂಶಸ್ಥರು ಜಯಚಾಮರಾಜೇಂದ್ರ ಒಡೆಯರ್ ಅವರ ಅಳಿಯ ರ್. ರಾಜಚಂದ್ರ, ಒಡೆಯರ್ ಮೊಮ್ಮಗ ವರ್ಚಸ್ವಿ ಎಂ.ಆರ್. ಅರಸು ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಧ್ಯಾನ ಮಂದಿರಲದಲ್ಲಿ ಸ್ವಲ್ಪ ಸಮಯ ಧ್ಯಾನ ಮಾಡಿದರು. ಶಿವಕುಮಾರ ಸ್ವಾಮೀಜಿ ವಾಸಿಸುತ್ತಿದ್?ದ ಹಳೆಯ ಮಠಕ್ಕೆ ಭೇಟಿ ನೀಡಿ ಪೂಜಾ ಸ್ಥಳ, ಆಸೀನ ಸ್ಥಳಗಳನ್ನು ವೀಕ್ಷಿಸಿದರು. ನಂತರ ಸಿದ್ದಗಂಗಾ ಮಠದ ದಾಸೋಹ ಮಂದಿರ, ಉಗ್ರಾಣ ಸ್ಥಳ, ?ಡಿಗೆ ಮನೆ ಮೊದಲಾದ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀಮಠದಲ್ಲಿ ಪ್ರಸಾದ ಸ್ವೀಕರಿಸಿದ ಒಡೆಯರ್ ಅವರ ಅಳಿಯ ಆರ್. ರಾಜಚಂದ್ರ, ಮೊಮ್ಮಗ ವರ್ಚಸ್ವಿ ಎಂ.ಆರ್. ಅರಸು ಅವರು ಸಿದ್ದಗಂಗಾ ಬೆಟ್ಟಕ್ಕೆ ಹೋಗಿ…
Author: News Desk Benkiyabale
ತುಮಕೂರು : ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹ ವ್ಯಕ್ತಪಡಿಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಲಕ್ಕಪ್ಪ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಅವರನ್ನು ಹೊಣೆ ಮಾಡಿರುವುದು ಸರಿಯಲ್ಲ, ಅವರು ರಾಜೀನಾಮೆ ಹಿಂಪಡೆಯುವ ಮೂಲಕ ಅವರನ್ನು ಮುಂದುವರೆಸುವಂತೆ ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷವನ್ನು ಉಳಿಸಬೇಕೆಂದರೆ ಸಿದ್ದರಾಮಯ್ಯ ಅವರನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು, ಏಕಾಂಗಿ ಪಕ್ಷದ ಪರ ಪ್ರಚಾರ ಮಾಡಿದ ಸಿದ್ದರಾಮಯ್ಯ ಅವರಿಗೆ ಮುಖಂಡರ ಅಸಹಕಾರವೇ ಕಾರಣ ಎಂದರು. ಪ್ರಚಾರದಲ್ಲಿ ಭಾಗವಹಿಸದ ಮುಖಂಡರ ಮೇಲೆ ಪಕ್ಷ ಶಿಸ್ತುಕ್ರಮ ಜರುಗಿಸಬೇಕೆ ಹೊರತು, ಪಕ್ಷದ ಗೆಲುವಿಗಾಗಿ ಹೋರಾಡಿದವರ ಮೇಲೆ ಅಲ್ಲ, ರಾಷ್ಟ್ರ ಮತ್ತು ರಾಜ್ಯದಲ್ಲಿ ಮುಖಂಡರು ಎನಿಸಿಕೊಂಡವರು ಚುನಾವಣೆಯಲ್ಲಿ ಪಕ್ಷದ…
ತುಮಕೂರು : `ಉಪಚುನಾವಣೆಯಲ್ಲಿ ಗೆದ್ದಿರುವವರಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ಕೇಂದ್ರದ ನಾಯಕರು ನಿರ್ಧರಿಸುತ್ತಾರೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಚಿಕ್ಕನಾಯಕನಹಳ್ಳಿಯ ಕುಪ್ಪೂರು ಗದ್ದುಗೆ ಮಠದಲ್ಲಿ ನಡೆಯುತ್ತಿರುವ ಕುಪ್ಪೂರೊಡೆಯನ ಜಾತ್ರಾ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. `ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ 12ರಲ್ಲಿ ಬಿಜೆಪಿಗೆ ಗೆಲುವಾಗಿದೆ. ಗೆಲ್ಲದೆ ಇದ್ದಿದ್ದರೆ, ಇಷ್ಟು ಸಮಾಧಾನದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇನ್ನು ಮೂರುವರೆ ವರ್ಷ ಯಾವುದೇ ತಂಟೆ ತಕರಾರು ಇಲ್ಲದೆ ಕೆಲಸ ಮಾಡಬಹುದು’ ಎಂದು ಆಶಯ ವ್ಯಕ್ತಪಡಿಸಿದರು. `ಫೆಬ್ರುವರಿಯಲ್ಲಿ ಮಂಡಿಸುವ ಬಜೆಟ್‍ನಲ್ಲಿ ಉತ್ತಮ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಉದ್ದೇಶವಿದೆ. ರೈತರ ಸಂಕಷ್ಟಗಳನ್ನು ಬಗೆಹರಿಸುವುದಕ್ಕೆ ಆದ್ಯತೆ ನೀಡುತ್ತೇನೆ. ಜಾತಿ ಮತಗಳ ಬೇಧವಿಲ್ಲದೆ ಸೇವೆ ನೀಡುತ್ತಿರುವ ಸೇವೆ ಸಲ್ಲಿಸುತ್ತಿರುವ ಮಠದ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು. ಸಚಿವ ಆರ್.ಅಶೋಕ್ …
ತುಮಕೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಏಕರೂಪ ನಾಗರಿಕ ಕಾಯ್ದೆಯನ್ನು ವಿರೋಧಿಸಿ ಎಸ್ಡಿಪಿಐ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಫ್ತಿಯಾರ್ ಅವರು, ದೇಶದಲ್ಲಿ ಹಿಂದೂ ಮುಸ್ಲಿಂರು ಶಾಂತಿಯುತವಾಗಿ ಸಹಬಾಳ್ವೆ ನಡೆಸುತ್ತಿರುವಾಗ, ಕೇಂದ್ರ ಸರ್ಕಾರ ವಿಷ ಬೀಜವನ್ನು ಬಿತ್ತಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಒಪ್ಪಿರುವ ಕಾಯ್ದೆಯ ಪ್ರಕಾರ ಅಫ್ಘಾನಿಸ್ತಾನ, ಪಾಕಿಸ್ತಾನ ಸೇರಿದಂತೆ ಬೇರೆ ದೇಶಗಳಿಂದ ಭಾರತಕ್ಕೆ ಬಂದ ಮುಸ್ಲಿಂತೇರರಿಗೆ ಪೌರತ್ವ ನೀಡುವುದಾಗಿ ಹೇಳಿದ್ದು, ಭಾರತದಲ್ಲಿ ಮುಸ್ಲಿಂರನ್ನು ವಿಭಜಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು. ಭಾರತ ಸ್ವಾತಂತ್ರ ಹೋರಾಟದಲ್ಲಿ ಭಾಗಿಯಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮುಸ್ಲಿಂ ಸಮುದಾಯವನ್ನು ಕಡೆಗಣಿಸಿ, ಕೀಳು ಭಾವನೆಯಿಂದ ಮುಸ್ಲಿಂರಿಗೆ ಪೌರತ್ವವನ್ನು ನೀಡಲು ಒಪ್ಪದ ಕರಾಳ ಕಾನೂನು ಜಾರಿಗೆ ತಂದಿದೆ ಎಂದು ಆರೋಪಿಸಿದರು. ಅಸ್ಸಾಂನಲ್ಲಿ ಎನ್‍ಆರ್ಸಿಯಲ್ಲಿ ಸಿಖ್ ಸಮುದಾಯಕ್ಕೆ ನೀಡುವ ಪೌರತ್ವವನ್ನು ಮುಸ್ಲಿಂರಿಗೆ ನೀಡುವುದಿಲ್ಲ…
ತುಮಕೂರು : ಜಿಎಸ್‍ಟಿ ಕಾಯ್ದೆಯ ನಿಯಮಗಳನ್ನು ಪದೆಪದೆ ತಿದ್ದುಪಡಿ ಮಾಡಿ ಗೊಂದಲ ಉಂಟುಮಾಡಲಾಗುತ್ತದೆ, ಕಾಯ್ದೆಯ 36(4) ನಿಯಮ ರದ್ದುಪಡಿಸಬೇಕು ಎಂದು ಒತ್ತಾಯಿಸಿ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಮುಖಂಡರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕು ಮತ್ತು ಸೇವಾ ಕಾಯ್ದೆ ಅನ್ವಯ ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಂತೆ ಪ್ರತಿ ತಿಂಗಳು ಜಿಎಸ್‍ಟಿ ರಿಟರ್ನ್ ಸಲ್ಲಿಸಲು ಕಷ್ಟವಾಗುತ್ತಿದೆ ಎಂದು ಹೇಳಿ, ಜಿಎಸ್‍ಟಿ ಕಾಯ್ದೆ ನಿಯಮಗಳನ್ನು ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು. ಬಿಜಿಎಸ್ ವೃತ್ತದಲ್ಲಿ ಜಮಾವಣೆಗೊಂಡ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದರು. ಡಿಸಿ ಕಚೇರಿ ಬಳಿ ಕೆಲ ಕಾಲ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಹಣಕಾಸು ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಆಡಿಟರ್ ಪ್ರಕಾಶ್,…
ತುಮಕೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದ ರಾಜ್ಯ ಸರ್ಕಾರ ದಬ್ಬಾಳಿಕೆ, ದಮನಕಾರಿ ನೀತಿ ಅನುಸರಿಸುತ್ತಿರುವುದು ಬಿಡಬೇಕು ಎಂದು ಪಿಯುಜಿಎಲ್ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ದೊರೈರಾಜ್ ಹೇಳಿದ್ದಾರೆ. ತುಮಕೂರಿನ ಅಮಾನಿಕೆರೆಯಲ್ಲಿ ಅಂಗನವಾಡಿ ನೌಕರರ ಸಂಘ ಸಿಐಟಿಉ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಯ ಭಾಗವಾಗಿ ನಡೆಸುತ್ತಿರುವ ಧರಣಿನಿರತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು 1975ರಿಂದ ಮಕ್ಕಳ ಪೋಷಣೆ ಮತ್ತು ಕಲಿಕೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಬೇಡಿಕೆಗಳು ಸರಿಯಾಗಿವೆ. ಹಾಗಾಗಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ಮಾತೃದೇವೋಭವ ಎನ್ನುವವರು ಅಂಗನವಾಡಿ ಕಾರ್ಯಕರ್ತೆಯರನ್ನು ಕಡೆಗಣಿಸಿದ್ದಾರೆ. ಅಂಗನವಾಡಿಗಳನ್ನ ರಾಜ್ಯ ಸರ್ಕಾರ ದಮನ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಅಂಗನವಾಡಿಗಳನ್ನು ಬಲಿಷ್ಠಗೊಳಿಸಲು ಪ್ರಯತ್ನಿಸಬೇಕು. ಅಂಗನವಾಡಿಗಳನ್ನು ಮುಚ್ಚಿದರೆ ಲಕ್ಷಾಂತರ ಮಂದಿಯ ಬದುಕು ಬೀದಿಗೆ ಬೀಳುತ್ತದೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದು ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಪಾದಯಾತ್ರೆ ನಡೆಸಲು ಮುಂದಾಗಿದ್ದರೆ ಅದಕ್ಕೆ ಸರ್ಕಾರ ಅವಕಾಶ…
ತುಮಕೂರು: ಕೇಂದ್ರ ಸರ್ಕಾರ ಜನಸಾಮಾನ್ಯರ ಆಹಾರ ಬಳಕೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಈರುಳ್ಳಿ ಬೆಲೆ ನಿಯಂತ್ರಣದಲ್ಲಿ ವಿಫಲವಾಗಿರುವುದನ್ನು ಖಂಡಿಸಿ, ಪಡಿತರ ವ್ಯವಸ್ಥೆಯಡಿ ನಿಯಂತ್ರಿತ ಬೆಲೆಯಲ್ಲಿ ಈರುಳ್ಳಿ ವಿತರಣೆ ಮಾಡುವಂತೆ ಆಗ್ರಹಿಸಿ ದಿನಾಂಕ:09-12-2019ರಂದು ತುಮಕೂರು ನಗರದ ಬಿಎಸ್‍ಎನ್‍ಎಲ್ ಕಚೇರಿ ಎದುರು ಸಿಪಿಎಂ ಮತ್ತು ಸಿಐಟಿಯು ಜಂಟಿಯಾಗಿ ಪ್ರತಿಭಟನೆ ನಡೆಸಿದವು. ಸಿಪಿಐಎಂ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಈರುಳ್ಳಿ ಬೆಲೆ ಏರಿಕೆಯಿಂದ ರೈತರಿಗೂ ಲಾಭವಿಲ್ಲ. ಬಳಸುವ ಜನಸಾಮಾನ್ಯರಿಗೂ ಸಂಕಷ್ಟ ತಂದಿದೊಡ್ಡಿರುವ ಈರುಳ್ಳಿ ಬೆಲೆ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಈ ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಬೆಲೆ ಏರಿಕೆಯ ವಿರುದ್ಧ ದೊಡ್ಡ ದನಿ ಎತ್ತಿ ಅಧಿಕಾರಕ್ಕೆ ಬಂದ ಬಿಜೆಪಿಯ ದ್ವಿಮುಖ ನೀತಿ ಬಯಲಾಗಿದೆ ಎಂದು ಟೀಕಿಸಿದರು. ಕಾಳದಾಸ್ತಾನುಕೋರರನ್ನು ಮಟ್ಟಹಾಕಿ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಪ್ರಾಂತ ರೈತ ಸಂಘದ ಸಹಸಂಚಾಲಕ ಬಿ.ಉಮೇಶ್ ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರ ಯವ ಕ್ರಮ…
ತುಮಕೂರು : ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದ್ದು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿರುವ ತಲಾ 11 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಂಪ್ಯೂಟರ್ ಆಪರೇಟರ್‍ಗಳನ್ನು ಸನ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್ ತಿಳಿಸಿದರು. ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿ ನಡೆದ ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಪ್ರತಿಯೊಬ್ಬ ಗರ್ಭಿಣಿ, ಬಾಣಂತಿಯರ ಮನೆಗೆ ಭೇಟಿ ನೀಡಿ ಈ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಶ್ರಮಿಸಿರುವುದು ಶ್ಲಾಘನೀಯ ಎಂದರಲ್ಲದೆ ಮುಂದೆಯೂ ಸಹ ಇದೇ ರೀತಿ ಉತ್ತಮ ಸೇವೆ ಸಲ್ಲಿಸಿ ಎಲ್ಲಾ ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯುವಂತೆ ಮಾಡಬೇಕು ಎಂದು ಕರೆ ನೀಡಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಬಿ.ಎಸ್.ನಂದಕುಮಾರ್ ಮಾತನಾಡಿ, 6 ವರ್ಷದೊಳಗಿನ ಸಣ್ಣ ಮಕ್ಕಳು, ಗರ್ಭಿಣಿ ಮತ್ತು ಬಾಣಂತಿಯರಿಗೆ…
ತುಮಕೂರು: ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿಗಳ ಬಾಕಿಯಿರುವ ಪಿಎಫ್, ಇಎಸ್‍ಐ ಹಣವನ್ನು ಒಂದು ತಿಂಗಳೊಳಗಾಗಿ ಪೌರಕಾರ್ಮಿಕರ ಖಾತೆಗೆ ನೇರ ಜಮೆ ಮಾಡುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೆಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಸಫಾಯಿ ಕರ್ಮಚಾರಿಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಸಫಾಯಿ ಕರ್ಮಚಾರಿಗಳಿಗೆ ಮನೆಗಳ ಸಮಸ್ಯೆಯಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ನಿವೇಶನವನ್ನು ವಿತರಿಸಲು ಅಗತ್ಯ ಜಮೀನು ಗುರುತಿಸಲಾಗಿದೆ. ಮನೆಗಳನ್ನು ನಿರ್ಮಿಸಿ ವಿತರಿಸಲಾಗುವುದು ಸಫಾಯಿ ಕರ್ಮಚಾರಿಗಳಿಗೆ ಉತ್ತಮ ಜೀವನ ಭದ್ರತೆ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಅದಕ್ಕಾಗಿಯೇ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಇನ್ನಿತರೆ ಸೌಲಭ್ಯಗಳನ್ನು ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಸಫಾಯಿ ಕರ್ಮಚಾರಿಗಳು ನಿರ್ವಹಿಸುವ ಕೆಲಸಕ್ಕೆ ಬೇಕಾಗುವ ಸುರಕ್ಷತಾ ಕಿಟ್, ಸಮವಸ್ತ್ರ, ಪಾದರಕ್ಷೆಗಳು ಸೇರಿದಂತೆ ವಿವಿಧ ರೀತಿಯ ಮೂಲಸೌಲಭ್ಯಗಳನ್ನು ಒದಗಿಸಬೇಕು. ಎಂದು ಅಧಿಕಾರಿಗಳಿಗೆ ಸೂಚಿಸಿದರು. …
ತುಮಕೂರು: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಜನರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಇಲಾಖೆ ಹಾಗೂ ಜನಪ್ರತಿನಿಧಿಗಳ ನಡುವೆ ಸಮನ್ವಯತೆ ಇಲ್ಲದೇ ಇರುವುದೇ ಕಾರಣ ಎಂದು ಮಾಜಿ ಶಾಸಕ ಡಾ.ರಫೀಕ್ ಅಹಮದ್ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ನಗರವನ್ನು ಸರ್ವಾಂಗೀಣ ಅಭಿವೃದ್ಧಿ ಮಾಡಲು ಸಾಧ್ಯವಿದ್ದ ಸ್ಮಾರ್ಟ್ ಸಿಟಿ ಕಾಮಗಾರಿಗಳು ವ್ಯವಸ್ಥಿತವಾಗಿ ನಡೆಯುತ್ತಿಲ್ಲ, ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ನೋಡಿದರೆ ಬೇಸರವಾಗುತ್ತದೆ ಎಂದು ತಿಳಿಸಿದರು. ನನ್ನ ಅಧಿಕಾರವಧಿಯಲ್ಲಿ ನಗರದಲ್ಲಿ ರಸ್ತೆ, ಉದ್ಯಾನಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು, ಕಾಮಗಾರಿ ನಡೆಯುವ ಸಮಯದಲ್ಲಿ ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿದ್ದೇವು, ಆದರೆ ಸ್ಮಾರ್ಟ್ ಸಿಟಿ ಕಾಮಗಾರಿಗಳಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತದೆ, ಎಲ್ಲಿ? ಯಾವಾಗ? ಏಕೆ? ರಸ್ತೆಯನ್ನು ಅಗೆಯುತ್ತಾರೆ ಎನ್ನುವುದು ಜನಪ್ರತಿನಿಧಿಗಳಿಗೆ ಗೊತ್ತಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. 2200 ಕೋಟಿ ಸ್ಮಾರ್ಟ್ ಸಿಟಿ ಕಾಮಗಾರಿ ಕ್ರಿಯಾ ಯೋಜನೆಯಲ್ಲಿ ಸಣ್ಣ ಸಣ್ಣ ಕಾಮಗಾರಿಗಳನ್ನು ಮಾತ್ರ…











