ತುಮಕೂರು: ಪ್ರತಿಯೊಬ್ಬರೂ ತಮಗೆ ಸಿಗಬೇಕಾಗಿರುವ ಹಕ್ಕು ಬೇರೆಯವರಿಗೂ ಸಿಗಬೇಕು, ನಮಗೆ ಏನು ಆಗಬಾರದೆಂದು ಬಯಸುತ್ತೇವೆಯೋ ಅದು ಬೇರೆಯವರಿಗೂ ಆಗಬಾರದೆಂದು ಅರಿತಾಗ ನಿಜವಾದ ಮಾನವನ ಹಕ್ಕು ಲಭಿಸಿದಂತಾಗುತ್ತದೆ. ಮಾನವ ಜನಿಸಿದಾಗಿನಿಂದಲೆ ಅವನ ಹಕ್ಕು ಆರಂಭವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪಕ್ ಕುಮಾರ್ ದತ್ತಾ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಹಾಗೂ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿಂದು ತುಮಕೂರು ವಿಶ್ವವಿದ್ಯಾನಿಲಯದ ಡಾ||ಪಿ.ಸದಾನಂದಮಯ್ಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ಅರಿವು, ರಕ್ಷಣೆ, ನೆರವು ಸಂರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಸಂಸಾರಕ್ಕೆ ಬಂದಾಗಿನಿಂದಲೂ ಮಾನವ ಹಕ್ಕುಗಳು ಬಂದಿವೆ ಎಂದರು. ಸಾರ್ವಜನಿಕ ಸೇವೆಯಲ್ಲಿರುವವರು ಜನರ ಹಿತಕ್ಕಾಗಿ ಕೆಲಸ ಮಾಡುವ ಮನೋಭಾವ ರೂಢಿಸಿಕೊಳ್ಳಬೇಕು. ಮಾನವನ ಹಕ್ಕು ಉಲ್ಲಂಘನೆಯಾದ ಪ್ರತಿಯೊಬ್ಬರೂ ತಮ್ಮ…
Author: News Desk Benkiyabale
ತುಮಕೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರು 57ನೇ ಹುಟ್ಟು ಹಬ್ಬದ ಅಂಗವಾಗಿ ಬುಧವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ಧಿಕ ಶುಭಾಶಯಗಳನ್ನು ಕೋರುತ್ತೇನೆ. ಇಂದು ನಾನು ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿಗಳಾದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಮಾಡಿದ್ದೇನೆ. ಲಿಂ.ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ. ಅವರ ಆಶೀರ್ವಾದ, ಬಸವಣ್ಣನವರ ಆಶೀರ್ವಾದಿಂದ ನಮ್ಮ ರಾಜ್ಯ, ದೇಶದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲಸಿದೆ. ಸಾಮಾಜಿಕ ನ್ಯಾಯ ಪ್ರತಿಯೊಬ್ಬರಿಗೂ ಸಿಗಲಿ ಎಂದು ಆಶಿಸುತ್ತೇನೆ ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಈಗಾಗಲೇ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರಿಗೆ ಪ್ರತಿಯೊಂದು ಮಾಹಿತಿ ಇದೆ.…
ತುಮಕೂರು : ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು ಎರಡನೇ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಜನ ಬೀದಿಗೆ ಇಳಿದಿದ್ದಾರೆ. ಜನವಿರೋಧಿ ಸಿಎಎ, ಎನ್‍ಅರ್‍ಸಿ ಮತ್ತು ಎನ್‍ಪಿಆರ್‍ಗಳನ್ನು ವಾಪಸ್ ಪಡೆಯುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಜನವಾದಿ ಮಹಿಳಾ ಸಂಘಟನೆಯ ನಾಯಕಿ ಕೆ.ಎಸ್.ವಿಮಲ ಹೇಳಿದ್ದಾರೆ. ತುಮಕೂರು ನಗರದ ಟೌನ್‍ಹಾಲ್‍ನಲ್ಲಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಸಿಎಎ, ಎನ್‍ಆರ್ಸಿ ಮತ್ತು ಎನ್‍ಪಿಆರ್ ವಿರೋಧಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಜನರಿಗೆ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್‍ನ ಎಬಿಸಿಡಿ ಕಲಿಸಲು ಹೊರಟಿದೆ, ನಾವು ಕೇಂದ್ರ ಸರ್ಕಾರಕ್ಕೆ ಎಕ್ಸ್-ವೈ ಕಲಿಸಬೇಕಾದ ತುರ್ತು ಅಗತ್ಯವಿದೆ ಎಂದು ತಿಳಿಸಿದರು.ನಮ್ಮ ಸಂವಿಧಾನವನ್ನು ಭಾರತೀಯರಾದ ನಾವು ಒಪ್ಪಕೊಂಡಿದ್ದು ನಮಗೆ ನಾವೇ ಸಮರ್ಪಿಸಿಕೊಂಡಿದ್ದೇವೆ. ಜಾತಿ, ಧರ್ಮ, ಲಿಂಗ, ಭಾಷೆ, ವರ್ಗದ ತಾರತಮ್ಯವಿಲ್ಲದೆ ಅಂಗೀಕರಿಸಿದ್ದೇವೆ. ಇಂದು ಅಂತಹ ಸಂವಿಧಾನಕ್ಕೆ ಕುತ್ತು ಬಂದಿದೆ. ಸಂವಿಧಾನವನ್ನು ಉಳಿಸಿಕೊಳ್ಳಲು…
ಗುಬ್ಬಿ: ಬಿದರೆ ಗ್ರಾಮಕ್ಕೆ ನೀರು ಒದಗಿಸುವ ಎರಡು ಬೋರ್‍ವೆಲ್‍ಗಳು ಇರುವ ಜಮೀನು ಒಡೆತನದ ವಿವಾದದಿಂದ ಇಡೀ ಗ್ರಾಮಕ್ಕೆ ಕುಡಿಯುವ ನೀರು ಏಕಾಏಕಿ ನಿಲ್ಲಿಸಿದ ಗ್ರಾಮ ಪಂಚಾಯಿತಿ ವಿರುದ್ದ ಆಕ್ರೋಶ ಹೊರಹಾಕಿದ ನೂರಾರು ಗ್ರಾಮಸ್ಥರು ಖಾಲಿ ಕೊಡ ಪ್ರದರ್ಶನ ಪ್ರತಿಭಟನೆ ಜತೆಗೆ ಕಚೇರಿ ಮುಚ್ಚಿ ಅಧಿಕಾರಿಗಳಿಗೆ ದಿಗ್ಬಂಧನ ಹಾಕಿದ ಘಟನೆ ಸೋಮವಾರ ನಡೆಯಿತು. ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನವಾದ ಬಿದರೆ ಗ್ರಾಮ ದೊಡ್ಡ ಗ್ರಾಮವಾಗಿದೆ. ಇಲ್ಲಿನ ಸಾವಿರಕ್ಕೂ ಅಧಿಕ ಮನೆಗಳಿಗೆ ನೀರು ಒದಗಿಸುವ ಎರಡು ಬೋರ್‍ವೆಲ್‍ಗಳು ಇರುವ ಜಮೀನು ಸರ್ವೆ ನಂ.114 ರಲ್ಲಿನ 20 ಗುಂಟೆಯು ನಮ್ಮದು ಎನ್ನುತ್ತಿರುವ ಗ್ರಾಮದ ರಘುನಾಥ ಅವರು ಇಲ್ಲಿನ ಬೋರ್‍ವೆಲ್‍ಗಳಲ್ಲಿ ಪಂಪ್‍ಪೋಟಾರ್ ಎತ್ತಿಕೊಳ್ಳಲು ಸೂಚಿಸಿರುತ್ತಾರೆ ಎಂದು ಪಂಚಾಯಿತಿ ಈ ಹಿಂದೆ ಸಭೆ ನಡೆಸಿ ಈ ಜಮೀನು ರಘುನಾಥ ಅವರ ಪೂರ್ವಿಕರು ದಾನವಾಗಿ ನೀಡಿದ್ದ ಸ್ಥಳವಾಗಿದೆ. ಇಲ್ಲಿ ಆಸ್ಪತ್ರೆಗೂ ಜಮೀನು ನೀಡಲಾಗಿದೆ. ಉಳಿದ 25 ಗುಂಟೆಯನ್ನು ಗ್ರಾಮ ಪಂಚಾಯಿತಿಗೆ ನೀಡಿದ್ದರು.…
ತುಮಕೂರು : ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರು ಸೂಚಿಸಿದರು. ಈಗಾಗಲೇ ಜಿಲ್ಲೆಯಲ್ಲಿ ನೋಂದಣಿ ಕಾರ್ಯ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಸಲು ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ ಬಿಸಿಯೂಟ ತಯಾರಕರು, ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳು, ಸಾರಿಗೆ ಇಲಾಖೆಯಡಿಯ ಖಾಸಗಿ ಬಸ್ ಚಾಲಕರು, ಮೀನುಗಾರಿಕೆ ಇಲಾಖೆಯ ತೀವ್ರ ಹಾಗೂ ಅರೆಕಾಲಿಕ ಮೀನುಗಾರರು, ಸಮಾಜ ಕಲ್ಯಾಣ ಇಲಾಖೆಯ ಚರ್ಮ ಉದ್ಯಮ ಕಾರ್ಮಿಕರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿದ್ದು, ತಕ್ಷಣವೇ ಈ ಎಲ್ಲಾ ಕಾರ್ಮಿಕರಿಗೂ ಈ ಯೋಜನೆಯ ಕುರಿತು ಅರಿವು…
ತುಮಕೂರು : ಯಾವುದೇ ಒಬ್ಬ ವ್ಯಕ್ತಿಯು ಜೀವನದಲ್ಲಿ ತನ್ನ ಗುರಿಯನ್ನು ಮುಟ್ಟಲು ಶಿಕ್ಷಣವು ಪ್ರಮುಖ ಸಾಧನವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅತೀಕ್ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ನಗರದ ಪಿ.ಹೆಚ್.ಕಾಲೋನಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಖುರ್ಷಿದ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ನೋಟ್ ಬುಕ್ ಹಾಗೂ ಕಂಪ್ಯೂಟರ್ ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯೆಯು ಸಾಧಕನ ಸ್ವತ್ತು. ಶಾಲೆಗೆ ಹೋಗುವ ಮೂಲಕ ಸತತ ಪರಿಶ್ರಮದಿಂದ ಸಾಧಿಸಿದಾಗ ಮಾತ್ರ ವಿದ್ಯೆ ನಮಗೆ ಒಲಿಯುತ್ತದೆ. ಇಂದಿನ ಮಕ್ಕಳೇ ನಾಳೆಯ ಭವ್ಯ ಭಾರತದ ಪ್ರಜೆಗಳು. ಕೆಲವರಿಗೆ ಶಾಲೆಗೆ ಹೋಗಲು ಆಸಕ್ತಿ ಇದ್ದರೂ ಅವಕಾಶ ಸಿಗುವುದಿಲ್ಲ. ಆದರೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ತಮಗೆ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದರಿಂದ ಪೋಷಕರ ಆಸೆಗಳನ್ನು ಈಡೇರಿಸಲು ಸಾಧ್ಯವಾಗಲಿದೆ ಎಂದರು. ವಿದ್ಯೆಗಾಗಿ, ಜ್ಞಾನಾರ್ಜನೆಗಾಗಿ ವಿದ್ಯಾರ್ಥಿಗಳು ವಿದೇಶಗಳಿಗೆ ಹೋದರೂ ತಪ್ಪಿಲ್ಲ. ಜ್ಞಾನವು ವಿಶಾಲವಾದುದು.…
ಮಧುಗಿರಿ : ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅದೃಷ್ಟ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 4 ವಿದ್ಯಾರ್ಥಿಗಳಿಗೆ ಕೂಡಿ ಬಂದಿದೆ. ಶೈಕ್ಷಣಿಕ ಜಿಲ್ಲೆಯ ಶಿರಾ ತಾಲೂಕಿನ ಗ್ರಾಮೀಣ ಪ್ರದೇಶದ ಬಡ ಕುಟುಂಬದ ಚಿಕ್ಕನಹಳ್ಳಿ ಸರ್ಕಾರಿ ಶಾಲೆಯ 10 ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಎಸ್. ಸಾಗರ್ ಮತ್ತು ಬುಕ್ಕಾಪಟ್ಟಣದ ಸರ್ಕಾರಿ ಫ್ರೌಢಶಾಲೆಯ ವಿದ್ಯಾರ್ಥಿ ಪ್ರಜ್ವಲ್ ಶಿರಾ ತಾಲೂಕಿನ ಚಂಗಾವರ ಪ್ರೌಢಶಾಲೆಯ ವಿದ್ಯಾರ್ಥಿನಿ ಆರ್. ದೀಪಿಕ ಮತ್ತು ನಗರದ ಸಕಾರಿ ಪ್ರದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಚೈತ್ರ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಜ.20 ರಂದು ನವದೆಹಲಿಯಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸುತ್ತಿದ್ದಾರೆ. ಬಡ ಕುಟುಂಬದ ಪ್ರತಿಭೆಗಳು : ನಾಲ್ಕು ಜನ ವಿದ್ಯಾರ್ಥಿಗಳು ಬಡ ಕುಟುಂಬದಿಂದ ಬಂದವರಾಗಿದ್ದು, ದೀಪಿಕ ತಂದೆ ರಾಜಣ್ಣ ಮತ್ತು ತಾಯಿ…
ತುಮಕೂರು : ನಗರದ ಸಿದ್ದಿವಿನಾಯಕ ಮಾರುಕಟ್ಟೆ ಮುಂಭಾಗ ಕಳೆದ 10-15 ವರ್ಷಗಳಿಂದ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಸ್ಮಾರ್ಟ್‍ಸಿಟಿ ಕಾಮಗಾರಿಯಿಂದ ಅಲ್ಲಿಂದ ತೆರವುಗೊಳಿಸಿದ್ದು, ಹಣ್ಣಿನ ವ್ಯಾಪಾರಿಗಳಿಗಾಗಿ ಶಾಸಕ ಜ್ಯೋತಿಗಣೇಶ್ ಹಾಗೂ ಆಯುಕ್ತರಾದ ಭೂಬಾಲನ್ ಸೇರಿ ಹಳೇ ಸಿದ್ದಿವಿನಾಯಕ ಮಾರುಕಟ್ಟೆ ಮುಂಭಾಗ ತಾತ್ಕಾಲಿಕವಾಗಿ ವ್ಯಾಪಾರ ಮಾಡಿಕೊಳ್ಳಲು ಒಪ್ಪಿಗೆ ನೀಡಿದ್ದಾರೆ. ಸಿದ್ದಿವಿನಾಯಕ ಮಾರುಕಟ್ಟೆ ಸ್ಥಳಾಂತರವಾದ ನಂತರ ಪಕ್ಕದಲ್ಲಿಯೇ ಮಿನಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಗಳು ವಹಿವಾಟು ಮಾಡುತ್ತಿದ್ದು, ಈಗ ಹಣ್ಣು ಹಾಗೂ ಹೂವಿನ ವ್ಯಾಪಾರಿಗಳು ವ್ಯಾಪಾರ ಮಾಡಲು ಅಡ್ಡಿಯುಂಟು ಮಾಡುತ್ತಿದ್ದು, ಮಿನಿ ಮಾರುಕಟ್ಟೆಗೆ ತೆರಳುವ ಗೇಟ್ ಬಾಗಿಲು ಹಾಕಿ ವ್ಯಾಪಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ತರಕಾರಿ ವ್ಯಾಪಾರಿಗಳಂತೆ ಹಣ್ಣು ಮತ್ತು ಹೂವು ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕು, ವ್ಯಾಪಾರ ಮಾಡದೇ ಜೀವನ ನಡೆಸುವುದು ಕಷ್ಟವಾಗಿದ್ದು, ತರಕಾರಿ ವ್ಯಾಪಾರಿಗಳು ಶಾಸಕರು ಹಾಗೂ ಪಾಲಿಕೆ ಆಯುಕ್ತರು ಜಾಗ ನಿಗದಿ ಮಾಡಿದ್ದರು…
ಗುಬ್ಬಿ : ನಿತ್ಯ ಸಾವಿರಾರು ಮಂದಿ ಸಂಚರಿಸುವ ಪ್ರಮುಖ ಚೇಳೂರು ರಸ್ತೆ ಹಾದು ಹೋಗುವ ಮಧ್ಯೆ ಪಟ್ಟಣದ ರೈಲ್ವೆ ನಿಲ್ದಾಣದಿಂದ ಅಂಡರ್‍ಪಾಸ್ ಸೇತುವೆ ದಾಟಿ ಸಾಗುವ ಒಂದು ಕಿಮೀ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ದುರಸ್ಥಿ ಕಾರ್ಯಕ್ಕೆ ಸ್ಥಳೀಯ ಪಟ್ಟಣ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆ ಜವಾಬ್ದಾರಿ ವಹಿಸದೆ ಒಬ್ಬರನ್ನಬ್ಬರು ದೂರುತ್ತಿದ್ದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು ಚೇಳೂರು ರಸ್ತೆ ಬಂದ್ ಮಾಡಿ ಮೂರು ತಾಸು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆಯಿತು. ಬೆಳಿಗ್ಗೆ ಚೇಳೂರು ಮತ್ತು ಅಮ್ಮನಘಟ್ಟ ಸಾಗುವ ಸರ್ಕಲ್ ಬಳಿ ರಸ್ತೆ ತಡೆ ನಡೆಸಿದ ನಾಗರೀಕ ಹೋರಾಟ ಸಮಿತಿ ಹಾಗೂ ನೂರಾರು ಗ್ರಾಮಸ್ಥರು ಒಂದು ಕಿಮೀ ರಸ್ತೆ ದುರಸ್ಥಿ ಕಾರ್ಯ ನಡೆಸಿ ಅಗಲೀಕರಣ ಮಾಡುವಂತೆ ಆಗ್ರಹಿಸಿ ಧರಣಿ ನಡೆಸಿದರು. ಈ ಹಿಂದೆ ರೈಲ್ವೆ ಇಲಾಖೆ ಗೇಟ್ ತೆಗೆದು ಅಂಡರ್‍ಪಾಸ್ ಸೇತುವೆ ನಿರ್ಮಾಣ ಮಾಡಲಾಯಿತು. ಅವೈಜ್ಞಾನಿಕವಾಗಿ ನಿರ್ಮಾಣವಾದ…
ತುಮಕೂರು : ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ಪ್ರಾಥಮಿಕ ಕೃಷಿ ಅಭಿವೃದ್ದಿ ಬ್ಯಾಂಕ್ ರೈತರಿಂದ ಜಪ್ತಿ ಮಾಡಿದ್ದ ಟ್ರಾಕ್ಟರ್‍ನನ್ನು ಮರು ಜಪ್ತಿ ಮಾಡುವ ಕಾರ್ಯ ನಡೆಯಿತು. ನಗರದ ಭದ್ರಮ್ಮ ಸರ್ಕಲ್‍ನಲ್ಲಿರುವ ಪಿಎಲ್‍ಡಿ ಬ್ಯಾಂಕಿನಿಂದ ಸಾಲ ಪಡೆದಿದ್ದ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಯ ರೈತ ರಂಗನಾಥ ಎಂಬುವವರಿಗೆ ಯಾವುದೇ ನೊಟೀಸ್ ನೀಡದೆ ಬ್ಯಾಂಕ್ ಅಧಿಕಾರಿಗಳು, ಕುಟುಂಬಕ್ಕೆ ಆಧಾರವಾಗಿದ್ದ ಟ್ರಾಕ್ಟರ್ ಜಪ್ತಿ ಮಾಡಿ ತಂದ ಬ್ಯಾಂಕ್ ಗೋಡೌನ್‍ನಲ್ಲಿ ಇರಿಸಿದ್ದರು.ಶುಕ್ರವಾರ ಮಧ್ಯಾಹ್ನ 1:30ರ ಸುಮಾರಿಗೆ ಸ್ಥಳಕ್ಕೆ ಆನಂದ ಪಟೇಲ್ ನೃತೃತ್ವದಲ್ಲಿ ಆಗಮಿಸಿದ ರೈತರು ಗೋಡೌನ್‍ಗೆ ಹಾಕಿದ್ದ ಬೀಗವನ್ನು ಹೊಡೆದು ರೈತರಿಂದ ಜಪ್ತಿ ಮಾಡಿದ್ದ ಸುಮಾರು ಐದು ಟ್ರಾಕ್ಟರ್‍ಗಳನ್ನು ಮರು ಜಪ್ತಿ ಮಾಡಿ ತೆಗೆದುಕೊಂಡು ಹೋದರು. ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಪಟೇಲ್,ಸತತ ಬರಗಾಲದಿಂದ ರೈತರು ಕಂಗಾಗಲಾಗಿದ್ದಾರೆ. ರಾಜ್ಯ ಸರಕಾರವೇ ಬಲವಂತದ ವಸೂಲಿಯನ್ನು ಕೈಬಿಟ್ಟು,ರೈತರ ಮನವೊಲಿಸಿ ಸಾಲ…











