ತುಮಕೂರು: ಸಾಮಾಜಿಕ, ಐತಿಹಾಸಿಕ ಸಂದೇಶ ಸಾರುವ ಚಿತ್ರಗಳನ್ನು ವೀಕ್ಷಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಕ್ಕಳಿಗೆ ಕಿವಿಮಾತು ಹೇಳಿದರು. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ವತಿಯಿಂದ ನಗರದ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ “ಡೆಲ್ ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದ ಅವರು ಭವಿಷ್ಯದಲ್ಲಿ ಮುಂದಿನ ಹಾದಿಗಳು ಸುಲಭವಾಗಿರುವುದಿಲ್ಲ ಮಕ್ಕಳು ಈಗಿನಿಂದಲೇ ಪ್ರಯತ್ನ ಪಡಬೇಕು. ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ನೀತಿ ಕತೆಯನ್ನು ಹೇಳಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಗಂಗಾಜನೇಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್, ಎಲ್‍ಎಕ್ಸ್‍ಎಲ್ ಐಡಿಯಾಸ್‍ನ ಶರತ್‍ಕುಮಾರ್ ಮತ್ತಿತರು ಹಾಜರಿದ್ದರು. ಚಲನಚಿತ್ರ ಪ್ರದರ್ಶನಲ್ಲಿ ಮಕ್ಕಳ ವಯಸ್ಸಿಗನುಣವಾಗಿ ಮಕ್ಕಳ ಜವಾಬ್ದಾರಿ, ನೈತಿಕತೆ, ಪರಿಸರ…
Author: News Desk Benkiyabale
ತುಮಕೂರು: ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ನವೆಂಬರ್ 14 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ 66ನೇ ಅಖಿಲ ಭಾರತ ಸಹಕಾರಿ ಸಪ್ತಾಹ 2019ರ ಸಮಾರಂಭಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ವಾಹನಗಳಿಗೆ ನಗರದ ಅಮಾನಿಕೆರೆ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುಬ್ಬಿ, ಶಿರಾ, ಕುಣಿಗಲ್, ಕೊರಟಗೆರೆ ತಾಲ್ಲೂಕಿನಿಂದ ಕಾರ್ಯಕ್ರಮಕ್ಕೆ ಆಗಮಿಸುವ ಬಸ್ಸುಗಳು ಹಾಗೂ ಇತರೆ ವಾಹನಗಳು ಸಾರ್ವಜನಿಕರನ್ನು ಜೂನಿಯರ್ ಕಾಲೇಜು ಮೈದಾನದಲ್ಲಿ ಇಳಿಸಿ ನಂತರ ಶಂಕರಮಠ-ಎಸ್.ಎಸ್.ಸರ್ಕಲ್-ಕೋತಿತೋಪು ಮಾರ್ಗವಾಗಿ ಹಾಗೂ ಬೆಂಗಳೂರು ಮಾರ್ಗದಿಂದ ಆಗಮಿಸುವ ಬಸ್ಸುಗಳು ಸಾರ್ವಜನಿಕರನ್ನು ಶಂಕರಮಠದ ಬಳಿ ಇಳಿಸಿ ನಂತರ ಟೌನ್‍ಹಾಲ್-ಅಶೋಕ ರಸ್ತೆ-ಕೋಡಿ ಸರ್ಕಲ್ ಮೂಲಕ ಅಮಾನಿಕೆರೆ ಬಳಿ ಪಾರ್ಕಿಂಗ್ ಮಾಡಬೇಕು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ತುಮಕೂರು: ಬೆಂಗಳೂರು ನಗರ, ಜ್ಞಾನ ಭಾರತಿ ಪೊಲೀಸ್ ಠಾಣಾ ಪಿಎಸ್‍ಐ ಬವರಾಜ್ ಅವರಿಂದ ವಕೀಲರಾದ ನವೀನ್ ಕುಮಾರ್ ಅವರ ಮೇಲೆ ಹಲ್ಲೆ ಮಾಡಿ ದೌರ್ಜನ್ಯವೆಸಗಿರುವುದನ್ನು ಖಂಡಿಸಿ ತುಮಕೂರು ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಪಿಎಸ್‍ಐ ಬಸವರಾಜು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಲಾಯಿತು. ಜಮೀನು ವಿಷಯಕ್ಕೆ ಸಂಬಂಧಿಸಿದಂತೆ ಕಕ್ಷಿದಾರರ ಜೊತೆ ದೂರು ನೀಡಲು ಹೋದಾಗ ಪಿಎಸ್‍ಐ ಬಸವರಾಜು ಅವರು ವಕೀಲರಾದ ನವೀನ್ ಕುಮಾರ್ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಹಿಗ್ಗಾಮುಗ್ಗ ಥಳಿಸಿ ಅವಾಶ್ಚ್ಯ ಶಬ್ದಗಳನ್ನು ಬಳಸಿ ನಿಂದಿಸಿ ದೈಹಿಕ ಹಲ್ಲೆ ಮಾಡಿರುತ್ತಾರೆ. ಸದರಿ ಘಟನೆಯನ್ನು ನಮ್ಮ ತುಮಕೂರು ಜಿಲ್ಲಾ ವಕೀಲರ ಸಂಘವು ತೀವ್ರವಾಗಿ ಖಂಡಿಸುತ್ತದೆ. ಸದರಿ ವಿಚಾರವಾಗಿ ನ.12 ರಂದು ತುಮಕೂರಿನ ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಡೆದ ತೀರ್ಮಾನದಂತೆ ನ.13 ರಂದು ನಡೆಯುವ ನ್ಯಾಯಾಲಯದ ಎಲ್ಲಾ ಕಾರ್ಯಕಲಾಪಗಳಿಂದ…
ತುಮಕೂರು: ದೇಶದಲ್ಲಿ ಆರ್ಥಿಕತೆ ಕುಸಿತಕ್ಕೆ ಹಾಗೂ ಉದ್ಯೋಗ ಕುಸಿತವಾಗಿರುವುದಕ್ಕೆ ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ ನೀತಿಗಳು ಹಾಗೂ ಜನವಿರೋಧಿ ನೀತಿಗಳೇ ಕಾರಣ, ದೇಶದಲ್ಲಿ ಆರ್ಥಿಕತೆ ಕುಸಿಯಲು ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಒತ್ತಾಯಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 2014ರಲ್ಲಿ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ಭರವಸೆಗಳನ್ನು ಈಡೇರಿಸ ಮೋದಿ ಸರ್ಕಾರ, 2019ರ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಅಧಿಕಾರವನ್ನು ಗಿಟ್ಟಿಸಿಕೊಂಡಿದೆ, ದೇಶದಲ್ಲಿ ನಿರುದ್ಯೋಗ ನಿವಾರಣೆ, ಕೃಷಿ, ಶಿಕ್ಷಣ, ಕೈಗಾರಿಕೆಯ ವಿಚಾರಗಳಲ್ಲಿ ದೇಶ ನಿರೀಕ್ಷಿತ ಪ್ರಗತಿ ಸಾಧಿಸಲು ವಿಫಲವಾಗಿದೆ ಎಂದು ಆರೋಪಿಸಿದರು. ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ದೇಶದ ಬೆಳವಣಿಗೆಗೆ ಯಾವುದೇ ವಿಧದ ಮಹತ್ವದ ಕೊಡುಗೆಯನ್ನು ನೀಡದೇ…
ಮಧುಗಿರಿ : ಅವಧಿಗೆ ಮುನ್ನ ತಹಶೀಲ್ದಾರ್ ವರ್ಗಾವಣೆ ಸರಿಯಾದ ಕಾನೂನು ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿರುವ ರಾಜ್ಯ ಆಡಳಿತ ನ್ಯಾಯ ಮಂಡಳಿಯು ಮಧುಗಿರಿ ತಹಶೀಲ್ದಾರ್ ನಂದೀಶ್ ರವರ ಅಕಾಲಿಕ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ್ದು, ಹುದ್ದೆಯಲ್ಲಿ ಮುಂದುವರೆಯುವಂತೆ ಆದೇಶಿಸಿದೆ. ಮಧುಗಿರಿ ತಹಶೀಲ್ದಾರ್ ನಂದೀಶ್‍ರವರನ್ನು ವರ್ಗಾವಣೆ ಮಾಡಿಸುವಂತೆ ಕ್ಷೇತ್ರದ ಕೆಲ ರಾಜಕಾರಣಿಗಳು ಮುಖ್ಯಮಂತ್ರಿಯಿಂದ ಬೇರೊಂದು ಇಲಾಖೆಯ ಅಧಿಕಾರಿಯನ್ನು ಶಿಫಾರಸ್ಸು ಮಾಡಿಸಿದ್ದರು. ಇದನ್ನು ಪ್ರಶ್ನಿಸಿ ತಹಶೀಲ್ದಾರ್ ನಂದೀಶ್ ಕೆಎಟಿ ಮೊರೆ ಹೋಗಿದ್ದರು. ಇವರ ವಾದವನ್ನು ಆಲಿಸಿದ ರಾಜ್ಯ ಆಡಳಿತ ನ್ಯಾಯ ಮಂಡಳಿಯು ಯಾವುದೇ ಅಧಿಕಾರಿಯನ್ನು ಒಂದು ಜಾಗಕ್ಕೆ ನೇಮಿಸಿದರೆ ಕನಿಷ್ಟ 2 ವರ್ಷ ವರ್ಗಾವಣೆ ಅಸಂಭವ. ಇದು ಅವಧಿಗೆ ಮುನ್ನವೇ ವರ್ಗಾವಣೆ ಮಾಡಿದ ಪ್ರಕರಣವಾಗಿದ್ದು ಕಾನೂನು ರೀತಿ ಸರಿಯಲ್ಲ.. ಮಾರುಕಟ್ಟೆಯ ಅಧಿಕಾರಿಯನ್ನು ಕಂದಾಯ ಇಲಾಖೆಯ ಅರಿವಿಲ್ಲದಂತಹ ತಹಶೀಲ್ದಾರ್ ಹುದ್ದೆಗೆ ನಿಯೋಜಿಸುವುದು ಅಕ್ಷಮ್ಯ ಎಂದು ವಾದಿಸಿದರು. ಈ ಮೇಲಿನ ಅಂಶವನ್ನೆಲ್ಲ ಪರಿಗಣಿಸಿದ ನ್ಯಾಯಮೂರ್ತಿ ಭಕ್ತವತ್ಸಲಂ ರವರು, ಸದರಿ ಮಧುಗಿರಿ…
ತುಮಕೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಸಮುದಾಯದವರ ಸ್ಮಶಾನ ಭೂಮಿಗಳನ್ನು ಗುರ್ತಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತಿಳಿಸಿದರು. ತುಮಕೂರು ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಹಿತರಕ್ಷಣಾ ಹಾಗೂ ಕುಂದುಕೊರತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿರುವ ಪರಿಶಿಷ್ಟ ಜಾತಿ/ವರ್ಗದ ಜನಾಂದವರಿಗೆ ಸ್ಮಶಾನ ಭೂಮಿ ಒದಗಿಸುವುದು ಮೊದಲ ಆದ್ಯತೆ. ಸುಮಾರು 75 ಗ್ರಾಮಗಳಲ್ಲಿ ಸ್ಮಶಾನ ಭೂಮಿಗಳಿಲ್ಲ. ಭೂ-ಲಭ್ಯತೆ ಪಟ್ಟಿ ಆಧಾರದ ಮೇಲೆ ಭೂಮಿ ನೀಡಲಾಗುವುದು. ಸರ್ಕಾರಿ ಜಾಗ ಲಭ್ಯವಿಲ್ಲದಿದ್ದಲ್ಲಿ ಖಾಸಗೀ ಜಮೀನನ್ನು ಖರೀದಿ ಮಾಡಿ ಜಾಗ ನೀಡಲಾಗುವುದು ಎಂದು ಅವರು ತಿಳಿಸಿದರು. ಗೂಳೂರು, ಹೆಗ್ಗೆರೆ, ಹರಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಿಡುಗಡೆಯಾಗುವ ಅನುದಾನವನ್ನು ಪರಿಶಿಷ್ಟ ಜಾತಿ/ವರ್ಗಗಳ ಕಾಮಗಾರಿ ಯೋಜನೆಗೆ ಸರಿಯಾಗಿ ಬಳಸಿಕೊಂಡಿಲ್ಲ ಎಂದು ದಲಿತ…
ತುಮಕೂರು: ಇತಿಹಾಸ ಪ್ರಸಿದ್ಧ ಸಿದ್ದಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿಯಾಗಿದ್ದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಐಕ್ಯ ಸ್ಥಳದ ಗದ್ದುಗೆಯ ಪೀಠದ ಮೇಲೆ ಶಿವಲಿಂಗ ಪ್ರತಿಷ್ಠಾಪಿಸಲಾಯಿತು. ಇಂದು ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀಗಳ ಗದ್ದುಗೆಯ ಪೀಠದ ಮೇಲೆ 38 ಇಂಚು ಉದ್ದದ ಶಿವಲಿಂಗವನ್ನು ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಪ್ರತಿಷ್ಠಾಪಿಸಲಾಯಿತು. ಪ್ರಾತಃಕಾಲದಿಂದಲೇ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹಲವು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಶಿವಲಿಂಗವನ್ನು ದೈವೀಕರಿಸಿ ಪ್ರತಿಷ್ಠಾಪನೆ ಮಾಡಲಾಯಿತು. ಇಂದು ಪ್ರತಿಷ್ಠಾಪಿಸಿದ ಶಿವಲಿಂಗವನ್ನು ಶ್ರೀಗಳು ತಂಗುತ್ತಿದ್ದ ಹಳೇ ಮಠದಲ್ಲಿ ಮಂಡಲದ 48 ದಿನಗಳ ಕಾಲ ಜಲಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ ಹಾಗೂ ಶಯನಾಧಿವಾಸದ ವಿಧಿ-ವಿಧಾನ ಪೂರೈಸಲಾಗಿತ್ತು. ಹೀಗೆ ಸಕಲ ವಿಧಿ ವಿಧಾನವನ್ನು ಪೂರೈಸಿ ದೈವೀಶಕ್ತಿಯನ್ನು ಪಡೆದ ಪವಿತ್ರ ಲಿಂಗವನ್ನು ಶ್ರೀಗಳ ಗದ್ದುಗೆಯ ಪೀಠದ…
ತುರುವೇಕೆರೆ: ಮುಂಬರಲಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಹದಿನೈದಕ್ಕೆ ಹದಿನೈದು ಸ್ಥಾನಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸಲಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. ಪಟ್ಟಣದ ವಿರಕ್ತ ಮಠದ ಆವರಣದಲ್ಲಿ ನಡೆಯಲಿರುವ ಡಾ:ಕರಿವೃಷಭ ದೇಶಿಕೇಂದ್ರ ಸ್ವಾಮಿಯವರ 25ನೇ ವರ್ಷದ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ 15ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಇದರಲ್ಲಿ ಅನುಮಾನವೇ ಬೇಡ, ನನಗೆ ಹಲವು ಉಪಚುನಾವಣೆಗಳನ್ನು ನಡೆಸಿದ ಅನುಭವವಿದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರ ನಿರೀಕÉ್ಷಗೆ ಮೀರಿ ಸ್ಪಂದಿಸುತ್ತಿದ್ದು, ಹಾಗಾಗಿ ಪಕ್ಷದ ಹದಿನೈದು ಅಭ್ಯರ್ಥಿಗಳು ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆರೋಗ್ಯ ಇಲಾಖೆಯಲ್ಲಿ ಕೆ.ಪಿ.ಎಸ್.ಸಿ. ಮೂಲಕ ನಡೆಯುತ್ತಿದ್ದ ವೈದ್ಯರ ನೇಮಕಾತಿ ಪದ್ದತಿಯನ್ನು ರದ್ದು ಮಾಡಿದ್ದು, ನೇರವಾಗಿ ನೇಮಕಾತಿ ಮಾಡಿಕೊಳ್ಳುವ ಕ್ರಮಕ್ಕೆ ಮುಂದಾಗಿದ್ದೇವೆ, ಹಾಗೂ ಸರ್ಕಾರಿ ಕರ್ತವ್ಯದಲ್ಲಿರುವ ವೈದ್ಯರು ಖಾಸಗಿ ಕ್ಲಿನಿಕ್‍ಗಳನ್ನು…
ತುಮಕೂರು: ದ್ವೇಷದ ರಾಜಕಾರಣ ಮಾಡಲ್ಲ ಎಂದು ಹೇಳಿದ ಯಡಿಯೂರಪ್ಪ, ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಹೆಚ್.ಡಿ.ಕೆ.ಕಾಲದಲ್ಲಿ ಬಿಡುಗಡೆಯಾದ 40 ಕೋಟಿ ರೂ ಅನುದಾನ ತಡೆಹಿಡಿಯುವ ಮೂಲಕ ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಆರೇಹಳ್ಳಿ ಗ್ರಾಮದ ದೊಡ್ಡಮ್ಮ,ಚಿಕ್ಕಮ್ಮ ಹಾಗೂ ಆಂಜನೇಯಸ್ವಾಮಿ ದೇವಾಲಯದ ಉದ್ಘಾಟನೆಗೆ ಹಾಗೂ ಶಿಲಾ ವಿಗ್ರಹಗಳ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ನನ್ನ 59 ವರ್ಷಗಳ ರಾಜಕಾರಣದಲ್ಲಿ ಎಂದಿಗೂ ಈ ರೀತಿಯ ದ್ವೇಷದ ರಾಜಕಾರಣ ಮಾಡಿಲ್ಲ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಐವತ್ತೊಂಬತ್ತು ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಸೋಲು,ಗೆಲುವನ್ನು ಸಮಾನವಾಗಿ ಸ್ವೀಕರಿಸಿದ್ದೇನೆ. ದ್ವಾಪರಾಯುಗದ ಧರ್ಮರಾಯನಂತೆ ಧರ್ಮದ ರಾಜಕಾರಣ ಮಾಡಿದ್ದೇನೆ.ಕಳೆದ ಲೋಕಸಭೆಯ ಕೊನೆಯ ದಿನ ಮುಂದೆ ಸ್ಪರ್ಧೆ ಮಾಡಬಾರದು ಎಂದು ತೀರ್ಮಾನಿಸಿದ್ದೇ.ಆದರೆ ವಿಧಿಯಾಟ,ಚಕ್ರವೂಹ್ಯಕ್ಕೆ ಸಿಲುಕಿ,ಶಕುನಿ ಆಟಕ್ಕೆ ಬಲಿಯಾಗಿ ಸೋಲು ಅನುಭವಿಸಬೇಕಾಯಿತು.ಇದಕ್ಕಾಗಿ ಎದೆಗುಂದುವುದಿಲ್ಲ.ಎಲ್ಲಿ ಅವಮಾನಕ್ಕೆ ಒಳಗಾಗಿದ್ದೇನೆಯೋ…
ತುಮಕೂರು : ನಗರದ ಶಿರಾಗೇಟ್ ನಾಗಯ್ಯನಪಾಳ್ಯದ ಅನಿಕೇತನ ಶಾಲೆ ಬಳಿ ಗುರುವಾರ ಸಂಜೆ ನಡೆದ ಮಹಾಂತೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವಣ್ಣನ ಪಾಳ್ಯದ ಸುಹಾಸ್ (19), ಮನೋಹರ್ (20) ಮತ್ತು ಯಶವಂತ್ (19) ಬಂಧಿತ ಆರೋಪಿಗಳು. ಗುರುವಾರ ಸಂಜೆ ಮಹಾಂತೇಶ್ ಮತ್ತು ಮಂಜುನಾಥ್ ಎಂಬುವವರ ಮೇಲೆ ಬಂಧಿತರು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಮಹಾಂತೇಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆರೋಪಿಗಳ ಪತ್ತೆಗಾಗಿ ಎಸ್.ಪಿ ಡಾ.ಕೆ.ವಂಶಿಕೃಷ್ಣ ಹಾಗೂ ಎಎಸ್‍ಪಿ ಟಿ.ಜೆ.ಉದೇಶ್ ಮುಂದಾಗಿದ್ದರು. ಡಿವೈಎಸ್‍ಪಿ ತಿಪ್ಪೇಸ್ವಾಮಿ ಹಾಗೂ ಸಿಬಿಐ ನವೀನ್ ಉಸ್ತುವಾರಿಯಲ್ಲಿ ತನಿಖಾ ತಂಡ ರಚಿಸಿದ್ದರು.ಕಾರ್ಯಾಚರಣೆಯಲ್ಲಿ ಪಿಎಸ್‍ಐ ವಿಜಯಲಕ್ಷ್ಮಿ, ಕೃಷ್ಣೇಗೌಡ, ಸಿಬ್ಬಂದಿ ರಮೇಶ್, ನಾಗರಾಜ್, ಡಿ.ಮಂಜುನಾಥ್, ರಾಮಚಂದ್ರಯ್ಯ, ನವೀನ್ ಕುಮಾರ್, ಈರಣ್ಣ, ಸೈಯದ್, ಮುಕ್ತಿಯಾರ್, ಪ್ರಸನ್ನಕುಮಾರ್, ಜೈಪ್ರಕಾಶ್, ಸಿದ್ದೇಶ್ವರ್ ಪಾಲ್ಗೊಂಡಿದ್ದರು.ಹತ್ಯೆ ನಡೆದು 24 ಗಂಟೆಯ ಒಳಗೆ ಆರೋಪಿಗಳನ್ನು ಪತ್ತೆ ಹಚ್ಚಿದ ಸಿಬ್ಬಂದಿಯನ್ನು ಎಸ್‍ಪಿ ಪ್ರಶಂಸಿಸಿದ್ದಾರೆ.…











