ತುಮಕೂರು : ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲಾ ಒಂದು ರೀತಿಯ ಸುಪ್ತ ಪ್ರತಿಭೆಗಳು ಅಡಗಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್‍ಕುಮಾರ್ ಅವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ಬಾಲಕರ ಬಾಲಮಂದಿರ, ಸರ್ಕಾರಿ ಬಾಲಕಿಯರ ಬಾಲಮಂದಿರ ಇವರ ಸಂಯುಕ್ತಾಶ್ರಯದಲ್ಲಿ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಕ್ಕಳ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಕೆಲಸ ಮಾಡಬೇಕಿದೆ ಎಂದರು. ಜಿಲ್ಲಾ ಪಂಚಾಯತ್ ಸಿಇಓ ಅನೀಸ್ ಕಣ್ಮಣಿ ಜಾಯ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ…
Author: News Desk Benkiyabale
ತುಮಕೂರು: ಕರ್ನಾಟಕ ಪೊಲೀಸರ ಸೇವೆ ದೇಶದ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಇಂದಿಲ್ಲಿ ಹೇಳಿದರು. ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಮತ್ತು ಬಲೂನ್‍ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ಪೊಲೀಸ ರು ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವಲ್ಲಿ ಇತರೆ ರಾಜ್ಯಗಳ ಪೊಲೀಸರಿಗಿಂತ ಮುಂಚೂಣಿಯಲ್ಲಿದ್ದಾರೆ. ಹಾಗಾಗಿ ನಮ್ಮ ರಾಜ್ಯದ ಪೊಲೀಸರ ಸೇವೆ ಬೇರೆ ರಾಜ್ಯಗಳ ಪೊಲೀಸರಿಗೆ ಮಾದರಿಯಾಗಿದೆ ಎಂದು ಪುನರುಚ್ಚರಿಸಿದರು. ವರ್ಷದ 365 ದಿನವೂ, ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕ ಬದುಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ರಾಜ್ಯದ ಪೊಲೀಸರು ದಕ್ಷತೆ, ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದಾರೆ ಎಂದರು. ರಾಜ್ಯದ ಆರೂವರೆ ಕೋಟಿ ಜನರನ್ನು ಕಾಪಾಡುವ ಹೊಣೆ ಬೆರಳೆಣಿಕೆಯಷ್ಟು ಪೊಲೀಸರ ಮೇಲಿದೆ. ಪೊಲೀಸ ರು…
ಬೆಂಗಳೂರು: ರಾಜ್ಯಾದ್ಯಂತ ಅಘೋಷಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಮಾಡಲಾಗಿದ್ದು, ಕಳೆದ ಮೂರು ದಿನಗಳಿಂದ ಬೆಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಸಂಜೆ ಒಂದು ಗಂಟೆ ಹಾಗೂ ಉಳಿದ ನಗರಗಳಲ್ಲಿ ದಿನಕ್ಕೊಂದು ಗಂಟೆಯ ಕಾಲ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಹೆಚ್ಚು ಕಾಲ ಲೋಡ್‌ಶೆಡ್ಡಿಂಗ್ ನೆಪದಲ್ಲಿ ವಿದ್ಯುತ್ ಕಡಿತ ಮಾಡುತ್ತಿದ್ದು, ಇದಕ್ಕೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ರಿಪೇರಿ ನೆಪ ಹೇಳುತ್ತಿದ್ದಾರೆ. ಡಿಸೆಂಬರ್‌ನಲ್ಲಿಯೇ ಈ ಸ್ಥಿತಿ ನಿರ್ಮಾಣಗೊಂಡರೆ, ಬೇಸಿಗೆಯಲ್ಲಿನ ಸ್ಥಿತಿ ಹೇಗಿರುತ್ತದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ. ರಾಜ್ಯ ಸರಕಾರ ಸ್ವಾವಲಂಬಿಯಾಗಿ ವಿದ್ಯುತ್ ಉತ್ಪಾದನೆ ಮಾಡಿ, ಬೇರೆಯವರಿಗೂ ಮಾರುವಷ್ಟು ಶಕ್ತಿ ನಮ್ಮಲ್ಲಿದೆ ಎಂದು ಹೇಳಿದೆ. ಆದರೆ, ಇಂದು ಸ್ವಯಂಪ್ರೇರಿತವಾಗಿ ಅಘೋಷಿತ ಲೋಡ್‌ಶೆಡ್ಡಿಂಗ್ ಜಾರಿಮಾಡಿರುವುದು ಆತಂಕವನ್ನುಂಟು ಮಾಡಿದೆ ಎಂದು ಜನ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿವಿಧ ಮೂಲಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ ಎಂದು ಸರಕಾರ ಹೇಳಿದೆ. ರಾಜಧಾನಿ…
ತುಮಕೂರು: ಸಮೀಪದ ಎನ್.ಎಚ್.48ರ ಊರುಕೆರೆ ಬಳಿ ರಸ್ತೆ ಮಧ್ಯೆೆ ಕೆಟ್ಟು ನಿಂತಿದ್ದ ಈರುಳ್ಳಿ ತುಂಬಿದ್ದ ಲಾರಿಗೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಊರುಕೆರೆಯ ಸಮೀಪದ ಜೈನ್ ಪಬ್ಲಿಕ್ ಶಾಲೆ ಬಳಿ ರಸ್ತೆ ಮಧ್ಯೆ ಲಾರಿ ಕೆಟ್ಟು ನಿಂತಿತ್ತು. ಈ ವೇಳೆ ಶಿರಾ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಮುಂಭಾಗ ಕುಳಿತಿದ್ದ ಮೂವರು ಪ್ರಯಾಣಿಕರು ಕಬ್ಬಿಣದ ಸರಳಿಗೆ ಸಿಲುಕಿಕೊಂಡಿದ್ದಾರೆ. ನಂತರ ಕಬ್ಬಿಣವನ್ನು ಕತ್ತರಿಸಿ ಸಿಲುಕಿಕೊಂಡಿದ್ದವರನ್ನು ಹೊರ ತೆಗೆದು ಜಿಲ್ಲಾಸ್ಪತ್ರೆೆಗೆ ದಾಖಲಿಸಿಲಾಗಿದೆ. ಸುದ್ದಿ ತಿಳಿದ ಕೂಡಲೇ ಗ್ರಾಮಾಂತರ ಠಾಣೆ ಎಸ್‌ಐ ಶ್ರೀನಿವಾಸ್, ವೃತ್ತ ನಿರೀಕ್ಷಕ ಮಧುಸೂಧನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತ ಸಂಭವಿಸಿದ ನಂತರ ಈ ಭಾಗದ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು…
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಮೂವರು ಪೋಲಿಸರು ಹುತ್ಮಾತರಾಗಿದ್ದಾರೆ. ಈ ಪ್ರದೇಶದಲ್ಲಿನ ಝೈನ್‌ಪೋರಾದಲ್ಲಿ ಕಾವಲು ಕಾಯುತ್ತಿದ್ದ ನಾಲ್ವರು ಪೋಲಿಸರಿದ್ದರು. ಇಲ್ಲಿಗೆ ನುಗ್ಗಿದ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮೂರು ಮಂದಿ ಪೋಲಿಸರು ಸ್ಥಳದಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೋಲಿಸ್ ಅಧಿಕಾರಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿ ಬಳಿಕ ಪೋಲಿಸರ ಬಳಿಯಿದ್ದ ಎಲ್ಲ ಶಸ್ತ್ರಾಸ್ತ್ರಗಳನ್ನು ಪೋಲಿಸರು ಹೊತ್ತೊಯ್ದಿದ್ದು, ಸ್ಥಳದಿಂದ ಪರಾರಿಯಾಗಿದ್ದಾರೆ.
ತುಮಕೂರು: ಮಂಗಳವಾರ ಪ್ರಕಟವಾದ 5 ರಾಜ್ಯಗಳ ವಿಧಾನಸಭಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಇದು ದೇಶದ ಜನ ಮೋದಿ ಅವರ ಆಡಳಿತವನ್ನು ತಿರಸ್ಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಮಾಜಿ ಶಾಸಕ ಡಾ.ರಫೀಕ್ ಅಹಮದ್ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಆಯೋಜಿಸಿದ್ದ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಪಕ್ಷ ಛತ್ತಿಸ್‍ಗಡ ಮತ್ತು ರಾಜಸ್ಥಾನದಲ್ಲಿ ಸರಳ ಬಹುಮತ ಪಡೆಯುವ ಮೂಲಕ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದ್ದು, ಮಧ್ಯಪ್ರದೇಶದಲ್ಲಿಯೂ ಸಹ ನಮ್ಮ ಪಕ್ಷದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು ಈಗಾಗಲೇ ಬಿಎಸ್‍ಪಿ ಮತ್ತು ಎಸ್‍ಪಿ ಪಕ್ಷಗಳು ಕಾಂಗ್ರೆಸ್‍ಗೆ ಬೆಂಬಲ ವ್ಯಕ್ತಪಡಿಸುವ ಭರವಸೆ ನೀಡಿರುವುದರಿಂದ ಮಧ್ಯಪ್ರದೇಶದಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಅಭಿಪ್ರಾಯಪಟ್ಟರು. ಐದು ರಾಜ್ಯಗಳ ಚುನಾವಣಾ ಫಲಿತಾಂಶ 2019ರಲ್ಲಿ ಬರುವ ಲೋಕಸಭಾ ಚುನಾವಣಾ ದಿಕ್ಸೂಚಿಯಾಗಿದ್ದು, 2014ರ ಚುನಾವಣಾ ಪೂರ್ವದಲ್ಲಿ ಎನ್‍ಡಿಎ…
ತುಮಕೂರು: ಬಾವಿಯಲ್ಲಿ ಅಪರಿಚಿತ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಎ. ವೆಂಕಟಾಪುರದಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷದ ಅಪರಿಚಿತ ಹೆಣ್ಣು ಮಗು ಇದಾಗಿದೆ. ಕೊಲೆ ಮಾಡಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ವಿಷಯ ತಿಳಿದ ತಕ್ಷಣ ಕೋಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: ಪತ್ರಿಕೆಯಲ್ಲಿ ಜಾಹಿರಾತು ಜಾಸ್ತಿ ಇದೆ. ಬಲಪಂಥೀಯವಾಗಿ ಬರೆಯುತ್ತಿದೆ. ಬಲಹೀನವಾಗಿದೆ. ಸಮರ್ಥವಾಗಿ ಬರುತ್ತಿಲ್ಲ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ ಎಂದು ಪತ್ರಿಕೆಗಳನ್ನು ದೂರುವ ಬದಲು ಓದುಗರಾದ ನಾವು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‍ಮಟ್ಟು ತಿಳಿಸಿದರು. ಬೆಲೆ ಸಮರ 1833ರಲ್ಲೇ ಆಯಿತು. ಅದರ ಅತ್ಯಂತ ಘೋರ ರೂಪವನ್ನು ಈಗ ನೋಡುತ್ತಿದ್ದೇವೆ. ಪತ್ರಿಕೆಯ ವೆಚ್ಚವನ್ನು ಸರಿದೂಗಿಸಲು ಮಾಲಿಕರು ಜಾಹಿರಾತು ಪ್ರಕಟಿಸಲು ಆರಂಭಿಸಿದರು. ಈಗ ಪತ್ರಿಕೆಗಳು ಜಾಹಿರಾತುಗಳಿಂದಲೇ ತುಂಬಿ ಹೋಗಿವೆ. ಜಾಹಿರಾತುಗಳಿಲ್ಲದ ಪತ್ರಿಕೆಯನ್ನು ನೋಡಲು ಸಾಧ್ಯವಾಗಿಲ್ಲ. ಏಕೆಂದರೆ ಓದುಗರ ಋಣದಲ್ಲಿ ಪತ್ರಿಕೆಗಳು ಇರಬೇಕು. ಅದಕ್ಕಾಗಿ ಓದುಗರು ಹೆಚ್ಚಿನ ಬೆಲೆ ಕೊಟ್ಟು ಪತ್ರಿಕೆಗಳನ್ನು ಕೊಂಡುಕೊಳ್ಳಬೇಕು. ಇಲ್ಲದೇ ಹೋದರೆ ಮಾಲಿಕರು ಕೊಟ್ಟ ಸುದ್ದಿಯನ್ನೇ ಓದಬೇಕಾಗಿದೆ ಎಂದು ಹೇಳಿದರು. ಈಗ ಪತ್ರಿಕೆಗಳ ಬೆಲೆ 10 ರೂಪಾಯಿ ಮಾಡಿದರೆ ಯಾರು ಕೊಂಡುಕೊಳ್ಳುತ್ತಾರೆ ಹೇಳಿ. ಆ ಕೂಡಲೇ ಕಡಿಮೆ ಬೆಲೆ ಇಟ್ಟಿರುವ ಪತ್ರಿಕೆಯನ್ನೇ ಎಲ್ಲರೂ ಕೊಳ್ಳುತ್ತಾರೆ.…
ತುಮಕೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ತಿಪಟೂರು/ ಶಿರಾ ನಗರಸಭೆ, ಕುಣಿಗಲ್/ ಪಾವಗಡ ಪುರಸಭೆ, ತುರುವೇಕೆರೆ ಪಟ್ಟಣ ಪಂಚಾಯತಿ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‍ವಾರು ಕರಡು ಮತದಾರರ ಪಟ್ಟಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆ ಹಾಗೂ ತಹಸೀಲ್ದಾರರ ಕಛೇರಿಗಳಲ್ಲಿ ಡಿಸೆಂಬರ್ 10ರಂದು ಪ್ರಕಟಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ. ಪಟ್ಟಿಗೆ ಸಂಬಂಧಿಸಿದಂತೆ ಮತದಾರರು ತಮ್ಮ ಹೆಸರು ವಾಸವಿರುವ ವಾರ್ಡಿನ ವ್ಯಾಪ್ತಿಯಲ್ಲಿ ಇರದೆ ಬೇರೆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ, ಗ್ರಾಮೀಣ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಡಿಸೆಂಬರ್ 15ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗಧಿತ ಸಮಯದೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಡಿಸೆಂಬರ್ 20ರೊಳಗೆ ಇತ್ಯರ್ಥಪಡಿಸಿ, ಅಗತ್ಯವಿದ್ದಲ್ಲಿ ಸೂಕ್ತ ಬದಲಾವಣೆ…
ತುಮಕೂರು : ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗಾಗಿ ನೋಂದಾಯಿಸಿಕೊಂಡಿರುವ 1,15,196 ರೈತರ ಅರ್ಜಿಗಳ ಪೈಕಿ ಬಾಕಿ ಇರುವ 7634 ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತಿಯಲ್ಲಿಂದು ಕೇಂದ್ರ ಸರ್ಕಾರದಿಂದ ಅನುಷ್ಟಾನಗೊಳ್ಳುವ ವಿವಿಧ ಯೋಜನಾ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಕಳೆದ 2017-18ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ 1,15,196 ರೈತರು ತಮ್ಮ ಬೆಳೆಯನ್ನು ವಿಮೆಗೊಳಪಡಿಸಲು ನೋಂದಾಯಿಸಿಕೊಂಡು ಪ್ರೀಮಿಯಂ ಹಣ ಕಟ್ಟಿದ್ದರೂ ಬ್ಯಾಂಕಿನ ಅಧಿಕಾರಿಗಳು ಇಲ್ಲ-ಸಲ್ಲದ ನೆಪವೊಡ್ಡಿ 7634 ರೈತರ ಅರ್ಜಿಗಳನ್ನು ವಿಲೇವಾರಿ ಬಾಕಿ ಉಳಿಸಿಕೊಂಡಿದ್ದಾರೆ. ಬ್ಯಾಂಕ್ ಹಾಗೂ ಕೃಷಿ ಇಲಾಖೆಗಳ ನಡುವೆ ಸಾಮರಸ್ಯ ಇಲ್ಲದಿರುವುದೇ ಇದಕ್ಕೆ ಕಾರಣ ಎಂದರು. ಬ್ಯಾಂಕ್‍ನವರು ಇಲಾಖೆ ವಿರುದ್ಧ ಹಾಗೂ ಇಲಾಖೆಯು ಬ್ಯಾಂಕಿನ ವಿರುದ್ಧ ಆರೋಪ ಪ್ರತ್ಯಾರೋಪ ಮಾಡುವುದರಿಂದ ರೈತರಿಗೆ ವಿಮಾ ಪರಿಹಾರ…