ತುಮಕೂರು : ನ್ಯಾಯಾಲಯದಲ್ಲಿ ಬಾಕಿಯಿರುವ ದಲಿತ ಸಮುದಾಯದವರ ದೂರು ಪ್ರಕರಣಗಳ ನಿಖರ ಮಾಹಿತಿಯನ್ನು ಸಭೆಗೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಾರ್ವಜನಿಕ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಭೆಗೆ ಸಮರ್ಪಕ ಮಾಹಿತಿ ನೀಡಲು ತಡವರಿಸಿದ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಮುಂದಿನ ಸಭೆಯೊಳಗಾಗಿ ನಿಖರ ಮಾಹಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ನಿರ್ದೇಶನ ನೀಡಿದರು. ಸಭೆಯಲ್ಲಿ “ದಲಿತರು ಒಳಗೆ ಪ್ರವೇಶಿಸಲು ಮುಕ್ತ ಅವಕಾಶವಿದೆ” ಎಂಬ ನಾಮಫಲಕವನ್ನು ಜಿಲ್ಲಾದ್ಯಂತ ಎಲ್ಲ ಮುಜರಾಯಿ ದೇವಾಲಯಗಳ ಮುಂದೆ ಪ್ರದರ್ಶಿಸಬೇಕೆಂದು ದಲಿತ ಮುಖಂಡರೊಬ್ಬರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳ ವ್ಯಾಪ್ತಿಗೆ ಬರುವ ಮುಜರಾಯಿ ದೇವಾಲಯಗಳಲ್ಲಿ ಈ ನಾಮಫಲಕವನ್ನು ಕಟ್ಟು ನಿಟ್ಟಾಗಿ ಅಳವಡಿಸಲು ಸೂಚಿಸಿದರು. ಕೋರಾ ಹೋಬಳಿ ಬಿಟ್ಟನಕುರಿಕೆ ಗ್ರಾಮದಲ್ಲಿ…
Author: News Desk Benkiyabale
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರದ ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರದ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದ ಬಸ್ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದು, ನಂತರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ನೀಡಿದ ಮಾಹಿತಿಯಂತೆ ಎದುರಿಗೆ ಬಂದ ಆಟೋರಿಕ್ಷಾವನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ತಲೆಕೆಳಗಾಗಿ ಬಿದ್ದದ್ದರಿಂದ ಈ ಅಪಘಾತ ಸಂಭವಿಸಿದೆ ಎಂದರು. ವಾಹನಗಳು ವೇಗಮಿತಿ ಇಲ್ಲದೇ, ಖಾಸಗಿ ಬಸ್‍ಗಳು ಓಡಾಡುವ ಸಮಯದ ಅಂತರ ಕಡಿಮೆ ಇರುವುದರಿಂದ ಈ ರೀತಿಯ ಅಪಘಾತಗಳು ಸಂಭವಿಸುತ್ತಿವೆ.…
ಆಟೋ ಚಾಲಕನ ಅಜಾಗರೂಕತೆ ಮತ್ತು ಚೆಲ್ಲಾಟದಿಂದ ಖಾಸಗಿ ಬಸ್ಸಿನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತವಾಗಿ ಬಸ್ಸಿನಲ್ಲಿದ್ದ ಐದು ಜನ ಮೃತ ಪಟ್ಟಿದ್ದಾರೆ. ಇನ್ನುಳಿದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕೈಕಾಲು ಮುರಿದು ತೀವ್ರ ತರಹದ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬುಧವಾರ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಜೆಟ್ಟಿಅಗ್ರಹಾರದ ಸರಕಾರಿ ಪ್ರೌಢಶಾಲೆಯ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಜಗನ್ನಾಥಪುರ ಕಡೆಯಿಂದ ಅಗ್ರಹಾರದ ಮುಖ್ಯರಸ್ತೆಗೆ ಸೇರಲು ಬಂದಂತಹ ಆಟೋ ವೇಗವಾಗಿ ಬರುತ್ತಿದ್ದ ವಿಜಯಲಕ್ಷ್ಮೀ ಎಂಬ ಖಾಸಗಿ ಬಸ್ಸನ್ನು ನೋಡಿಯೂ ಮುನ್ನುಗ್ಗಿದ್ದಾನೆ. ಅಪಘಾತ ತಡೆಯಲು ಯತ್ನಿಸಿದ ಬಸ್ಸು ನಿಯಂತ್ರಣಕ್ಕೆ ಬರದೇ ಪಲ್ಟಿ ಹೊಡೆದು ಅಪಘಾತವಾಗಿದೆ. ಅಪಘಾತದಲ್ಲಿ ಕೊರಟಗೆರೆ ತಾಲೂಕಿನ ಗೇರಹಳ್ಳಿ ಗ್ರಾಮದ ಇಮ್ರಾನ್(18), ಹೊಳವನಹಳ್ಳಿಯ ಅಕ್ರಂಪಾಷ(28), ಕೊರಟಗೆರೆ ಪಟ್ಟಣದ ಮೊಹಮ್ಮದ್ ಸಾಜದ್(19), ಪುಲಮಾಚೀಹಳ್ಳಿಯ ಶಿವಕುಮಾರ್(27) ಮತ್ತು ಮಧುಗಿರಿ…
ಶಿರಾ : ದೀಪಾವಳಿ ಹಬ್ಬದ ಪ್ರಯುಕ್ತ ಎಮ್ಮೆ ಮತ್ತು ಬೈಕ್ ತೊಳೆಯಲು ಹೋಗಿದ್ದ ಯಲಪೇನಹಳ್ಳಿಯ ಯೋಗೇಶ್(15) ಮತ್ತು ಸಿದ್ದೇಶ್(11) ಎಂಬ ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ಕೆರೆಯಲ್ಲಿ ಎಮ್ಮೆಯ ಮೈ ತೊಳೆಯುವಾಗ, ಅದು ಇವರಿಬ್ಬರನ್ನು ಎಳೆದುಕೊಂಡು ಆಳವಿರುವ ಕಡೆಗೆ ಹೋಗಿದೆ. ಅದನ್ನು ದಡಕ್ಕೆ ಎಳೆದು ತರುವ ಪ್ರಯತ್ನವನ್ನು ಈ ಅಣ್ಣ-ತಮ್ಮಂದಿರು ಮಾಡಿದ್ದಾರೆ. ಆದರೆ ಆ ಪ್ರಯತ್ನ ಫಲಿಸಲಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ದೊಡ್ಡಪ್ಪ – ಚಿಕ್ಕಪ್ಪನ ಮಕ್ಕಳಾದ ಇವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು ದುಃಖದ ಮಡುವಿನಲ್ಲಿ ಮುಳುಗಿದ್ದಾರೆ. ಪಟ್ಟನಾಯಕನಹಳ್ಳಿ ಪೆÇಲೀಸರು ಮಹಜರು ಕಾರ್ಯ ನಡೆಸುತ್ತಿದ್ದಾರೆ.
ತುಮಕೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿಂದು ಗಾಂಧೀಜಿಯವರ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಜಿ.ಬಿ ಜ್ಯೋತಿಗಣೇಶ್ ಹಾಗೂ ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಚಾಲನೆ ನೀಡಿದರು.ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಕರ್ನಾಟಕದಲ್ಲಿ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿವೆ. ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬರುತ್ತಿದ್ದಾರೆ. ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸುವ ಮೂಲಕ ಗಾಂಧೀಜಿಯವರ ಸ್ಮರಣೆ ಮಾಡಿಕೊಳ್ಳಬಹುದು ಎಂದರು.ಪ್ರದರ್ಶನ ವೀಕ್ಷಿಸಿದ ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಮಾತನಾಡಿ, ಗಾಂಧೀಜಿ ಅವರ ಜೀವನ ಸಾಧನೆಗಳ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಎಲ್ಲರಿಗೂ ಇದೊಂದು ಸದಾವಕಾಶವಾಗಿದೆ. ಸತ್ಯ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟ ಹಾಗೂ ಅಪಾರ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ತೋರಿಸಿದ ಮಹಾತ್ಮ ಗಾಂಧೀಜಿ…
ತುಮಕೂರು : ಸ್ಪೋಟಕ ಪಟಾಕಿಗಳನ್ನು ಅಧಿಕೃತವಾಗಿ ಪರವಾನಗಿ(ಅನುಮತಿ) ಪಡೆದ ಮಾರಾಟಗಾರರು ಮಾತ್ರ ಆದೇಶಾನುಸಾರ ಮಾರಾಟ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ದೀಪಾವಳಿ ಹಬ್ಬಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಪಟಾಕಿ ಸಿಡಿಸುವುದರಿಂದ ವಾಯುಮಾಲಿನ್ಯ, ಶಬ್ದಮಾಲಿನ್ಯ ಹಾಗೂ ಪಟಾಕಿ ಸಿಡಿಸಿದ ನಂತರ ಘನತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ ಸರಣಿ ಸ್ಪೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದರು. ಸಾರ್ವಜನಿಕರು ದೀಪಾವಳಿ ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಯನ್ನ ಸಿಡಿಸಬೇಕು. ಶಾಲಾ ಕಾಲೇಜುಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ ಎಂದು ತಿಳಿಸಿದರಲ್ಲದೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದೀಪಾವಳಿ ಹಬ್ಬದ ದಿನದಿಂದ 7 ದಿನಗಳವರೆಗೆ ಪಟಾಕಿ ಸಿಡಿಸುವುದರ ಬಗ್ಗೆ ಮೇಲ್ವಿಚಾರಣೆ ಮಾಡಬೇಕು. ಪಾಲಿಕೆ ಸೇರಿದಂತೆ ಎಲ್ಲ ನಗರ…
ತುಮಕೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾದ ದೇಶದ 100 ಸ್ಮಾರ್ಟ್ ಸಿಟಿಗಳ ರ್ಯಾಂಕಿಂಗ್ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿದ್ದ ತುಮಕೂರು ಸ್ಮಾರ್ಟ್ ಸಿಟಿಯು 19ನೇ ಸ್ಥಾನಕ್ಕೆ ಏರಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಯ್.ವಿ ಅವರು ಸಂತಸ ಹಂಚಿಕೊಂಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹಮ್ಮಿಕೊಂಡ ಯೋಜನೆಗಳ ಅನುಷ್ಠಾನದಲ್ಲಿ ಪ್ರಗತಿಯ ವೇಗ ಹೆಚ್ಚಾಗಿದ್ದು, ಈ ಸಿಟಿ ರ್ಯಾಂಕಿಂಗ್ ಏರಿಕೆಗೆ ಸಾಧ್ಯವಾಗಿದೆ. ಮುಂಬರುವ ದಿನಗಳಲ್ಲಿಯೂ ಸಹ ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಹೆಚ್ಚಿಸಿ ನಗರವನ್ನು ಸ್ಮಾರ್ಟ್ ಸಿಟಿ ಮಾಡಲು ಶ್ರಮವಹಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಟಾಕಿಮುಕ್ತ ಪರಿಸರಸ್ನೇಹಿ ದೀಪಾವಳಿ ಹಬ್ಬ ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಪಟಾಕಿ ಸುಡುವ ಹುಚ್ಚು ಜನರಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಪಟಾಕಿ ಸುಡುವುದರಿಂದ ಆರೋಗ್ಯದ ಮೇಲೆ, ಪರಿಸರದ ಮೇಲೆ ದುಷ್ಪರಿಣಾಮ ಬೀರುವುದಲ್ಲದೇ ವಾಯು, ಶಬ್ದ, ನೆಲ, ಜಲಮಾಲಿನ್ಯಗಳು ಒಟ್ಟಿಗೆ ಉಂಟಾಗುತ್ತದೆ. ಪಟಾಕಿ ತಯಾರಿಸಲು ಗಂಧಕ, ರಂಜಕ, ಸತು, ಲಿಥಿಯಂ, ಬೇರಿಯಂ ಸೇರಿದಂತೆ ಮೂವತ್ತಕ್ಕೂ ಹೆಚ್ಚು ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಈ ರಾಸಾಯನಿಕಗಳು ಅಸ್ತಮಾ, ಹೃದ್ರೋಗ, ಕಣ್ಣು ಉರಿ, ಚರ್ಮ ಖಾಯಿಲೆಗಳಿಗೆ ಕಾರಣವಾಗುತ್ತವೆ. ಅಲ್ಲದೇ ಪಟಾಕಿಯಿಂದ ಹೊಗೆ, ಸದ್ದು, ಅಗ್ನಿ ದುರಂತ, ರಸ್ತೆ ಅಪಘಾತ, ಬಾಲಕಾರ್ಮಿಕ ಶೋಷಣೆ, ಕಸ ಉತ್ಪಾದನೆ, ಮತ್ತಿತರ ಅನಾಹುತಗಳು ಸಂಭವಿಸುತ್ತವೆ. ಪಟಾಕಿ ಬದಲು ಎಣ್ಣೆದೀಪ, ರಂಗೋಲಿ, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುಂದಿನ ಪೀಳಿಗೆಗೆ ಸುಂದರ ಪರಿಸರವನ್ನು ಉಳಿಸಬೇಕು. ಪಟಾಕಿ ಸಿಡಿಸುವುದು ಪರಿಸರ ವಿರೋಧಿ ಎಂದು ತಿಳಿದು ಪಟಾಕಿ ಖರೀದಿಸಲು ವಿನಿಯೋಗಿಸುವ ಹಣವನ್ನು ಮರಗಿಡ…
ತುಮಕೂರು : ಜಿಲ್ಲೆಯ 8 ವಿವಿಧ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಆದೇಶಿಸಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ತಿಳಿಸಿದ್ದಾರೆ. ಚುನಾವಣಾ ವೇಳಾಪಟ್ಟಿ: ವೇಳಾಪಟ್ಟಿಯನ್ವಯ ಚುನಾವಣಾಧಿಕಾರಿಗಳು ಅಕ್ಟೋಬರ್ 28ರಂದು ಚುನಾವಣಾ ನೋಟೀಸ್ ಹೊರಡಿಸಲಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ಅಕ್ಟೋಬರ್ 31 ಕಡೆಯ ದಿನವಾಗಿದ್ದು, ನವೆಂಬರ್ 2ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ನವೆಂಬರ್ 4 ಕೊನೆಯ ದಿನ. ಮತದಾನದ ಅವಶ್ಯವಿದ್ದರೆ ನವೆಂಬರ್ 12ರಂದು ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಸಲಾಗುವುದು. ಮರು ಮತದಾನದ ಅವಶ್ಯವಿದ್ದಲ್ಲಿ ನವೆಂಬರ್ 13ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಸಲಾಗುವುದು. ಗ್ರಾಮ ಪಂಚಾಯತಿಗೆ ಸಂಬಂಧಿಸಿದ ತಾಲ್ಲೂಕು ಕೇಂದ್ರದಲ್ಲಿ ನವೆಂಬರ್ 14ರಂದು ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಗ್ರಾಮ ಪಂಚಾಯಿತಿ ಮತ್ತು ಮೀಸಲಾತಿ…
ತುಮಕೂರು : ಹೇಮಾವತಿ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದ ನೀರು ಸಂಗ್ರಹವಿದ್ದು, ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೆರೆಗಳು ಹಾಗೂ ಇನ್ನಿತರೆ ಕೆರೆಗಳಿಗೆ ವೇಳಾಪಟ್ಟಿ ನಿಗಧಿ ಮಾಡಿಕೊಂಡು ನೀರು ಪೂರೈಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಎರಡನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಸಚಿವರು, ಪಿಂಚಣಿಗೆ ಸಂಬಂಧಿಸಿದಂತೆ ಅಂಚೆ ಇಲಾಖೆಯ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳನ್ನು ಒಳಗೊಂಡಂತೆ ಉಪ ವಿಭಾಗ ಅಧಿಕಾರಿಗಳು ಪಿಂಚಣಿ ಅದಾಲತ್‍ಗಳನ್ನು ನಡೆಸಿ ಪಿಂಚಣಿಗೆ ಸಂಬಂಧಿಸಿದಂತೆ ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕುಣಿಗಲ್ ಎಕ್ಸ್‍ಪ್ರೆಸ್ ಕೆನಾಲ್ ಯೋಜನೆಯನ್ನು ರದ್ದುಪಡಿಸಲಾಗಿದ್ದು, ಯೋಜನೆಗೆ ಮೀಸಲಿಟ್ಟಿದ್ದ 600 ಕೋಟಿ ರೂ. ಹಣವನ್ನು ಹೇಮಾವತಿ ಮುಖ್ಯ ನಾಲೆಯನ್ನು ಆಧುನೀಕರಣಗೊಳಿಸಲು ವರ್ಗಾಯಿಸಲಾಗಿದೆ. ಯೋಜನೆಯನ್ನು…











