ಬೆಂಗಳೂರು: ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ.ಶಿವಕುಮಾರ ಸ್ವಾಮೀಜಿ ಸೋಮವಾರ ಮಧ್ಯಾಹ್ನ ಮಠಕ್ಕೆ ಮರಳಿದರು. ಡಿ.1 ರಂದು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಶಿವಕುಮಾರ ಸ್ವಾಮೀಜಿಗಳು, ನಗರದ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದಾಗ ರಕ್ತ ಹಾಗೂ ಕಿಡ್ನಿಯಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು. ಜತೆಗೆ ಎರಡು ಸ್ಟಂಟ್‌ಗಳನ್ನು ಸಹ ಶಸ್ತ್ರಚಿಕಿತ್ಸೆ ಇಲ್ಲದೆ ಅಳವಡಿಸಲಾಗಿದೆ. ರವಿವಾರ ಶ್ರೀಗಳು ಚೇತರಿಸಿಕೊಂಡಿದ್ದರು. ಆದರೆ, ಶ್ರೀಗಳು ಮಠಕ್ಕೆ ತೆರಳಲೇಬೇಕು ಎಂದು ಹಠ ಮಾಡಿದರು. ಹಾಗಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಿದ್ದೇವೆ ಎಂದು ವೈದ್ಯ ಡಾ.ರವೀಂದ್ರ ಅವರು ಸುದ್ದಿಗಾರರಿಗೆ ತಿಳಿಸಿದರು. ಶಿವಕುಮಾರ ಸ್ವಾಮೀಜಿಗಳಿಗೆ ಇನ್ನೂ 3-4 ಆಂಟಿ ಬಯೋಟೆಕ್ ಚಿಕಿತ್ಸೆ ನೀಡಬೇಕಾಗಿದೆ. ಹೀಗಾಗಿ, ಇನ್ನೆರಡು ಮೂರು ದಿನ ಆಸ್ಪತ್ರೆಯಲ್ಲೆ ಇರಿಸಿಕೊಳ್ಳಲು ನಿರ್ಧರಿಸಿದ್ದೆವು.…
Author: News Desk Benkiyabale
ಮಧುಗಿರಿ : ಧಾರ್ಮಿಕ ಆಚರಣೆಗಳಿಂದ ಮಾತ್ರ ಸಮಾಜದ ಸರ್ವರನ್ನು ಒಗ್ಗೂಡಿಸಲು ಸಾಧ್ಯ ಎಂದು ಕುಂಚಿಟಿಗ ಮಠದ ಪೀಠಾಧ್ಯಕ್ಷ ಶ್ರೀ ಹನುಮಂತನಾಥ ಸ್ವಾಮೀಜಿ ಅಭಿಪ್ರಾಯ ಪಟ್ಟರು. ತಾಲ್ಲೂಕಿನ ಹೊಸಕೆರೆ ಗ್ರಾಮದ ಶ್ರೀ ಬೊಮ್ಮಲಿಂಗೇಶ್ವರ ಮತ್ತು ಶ್ರೀ ವೀರನಾಗಮ್ಮ ದೇವಾಲಯಗಳಲ್ಲಿ ಕಾರ್ತಿಕ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ದಾನ, ಧರ್ಮ, ಸತ್ಕಾರ್ಯ ಚಿಂತನೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜೀವನ ಸಾರ್ಥಕವಾಗಬೇಕಾದರೆ ಸರ್ವೇಜನ ಸುಖಿನೋ ಭವಂತು ಎನ್ನುವ ರೀತಿ ಎಲ್ಲರ ಹಿತ ಚಿಂತನೆ ಮಾಡಬೇಕು. ಭಕ್ತಿಯಲ್ಲಿ ಧಾರ್ಮಿಕತೆಯಲ್ಲಿ ಭೇದ ಭಾವ ಮಾಡಬಾರದು. ಸ್ವಾರ್ಥ ಅಳಿಸಿ ನಿಸ್ವಾರ್ಥ ಸೇವೆಯಲ್ಲಿ ತೊಡಗಿದಾಗ ಮಾನವೀಯ ಮೌಲ್ಯಗಳು ಪ್ರಕಾಶಿಸುತ್ತವೆ ಎಂದರು. ಅರ್ಚಕ ನಾಗರಾಜು, ದೇವಾಲಯ ಸಮಿತಿ ಪದಾಧಿಕಾರಿಗಳಾದ ಎಚ್.ಬಿ.ವೀರಣ್ಣ, ಬೊಮ್ಮಲಿಂಗಯ್ಯ, ದಿನೇಶ್, ಕೃಷ್ಣ, ಬೊಮ್ಮಣ್ಣ, ವೀರಣ್ಣ, ರಾಮಕೃಷ್ಣ ಮುಂತಾದವರು ಇದ್ದರು.
ತುಮಕೂರು : ವಿಕಲಚೇತನರಿಗೆ ಅನುಕಂಪಕ್ಕೆ ಬದಲಾಗಿ ಸಾಮಾನ್ಯರಂತೆ ಬದುಕಲು ಅವಕಾಶ ನೀಡಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸರ್ಕಾರೇತರ ಶಾಲೆ/ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಬಾಲಭವನದಲ್ಲಿಂದು ಏರ್ಪಡಿಸಿದ್ದ “ವಿಶ್ವ ವಿಕಲಚೇತನರ ದಿನಾಚರಣೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರವು ವಿಕಲಚೇತನರಿಗಾಗಿ ವಿಶೇಷ ಶಾಲೆಗಳ ಸೌಲಭ್ಯ ಒದಗಿಸಿದ್ದು, ವಿದ್ಯಾಭ್ಯಾಸ ಹಾಗೂ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸಿದೆ. ಈ ನಿಟ್ಟಿನಲ್ಲಿ ವಿಕಲಚೇತನರು ಸರ್ಕಾರಿ ಸೌಲಭ್ಯಗಳನ್ನು ಪಡೆದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಬೇಕು. ಕಳೆದ 3 ವರ್ಷಗಳಿಂದ ಜಿಲ್ಲಾ ಪಂಚಾಯತಿಯಲ್ಲಿ ವಿಕಲಚೇತನರಿಗಾಗಿ ಮೀಸಲಾಗಿಟ್ಟಿದ್ದ ಸುಮಾರು 80ಲಕ್ಷ ರೂ. ಹಣವನ್ನು ಸ್ವಯಂ ಉದ್ಯೋಗ, ವ್ಯಾಪಾರ, ಕುರಿ ಸಾಕಾಣಿಕೆ, ತ್ರಿಚಕ್ರ ವಾಹನಗಳಿಗಾಗಿ ವೆಚ್ಚ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ…
ತಿಪಟೂರು : ನಗರದಲ್ಲಿ ನಡೆದ ಗಣಪತಿ ವಿಸರ್ಜನಾ ಮಹೋತ್ಸವದಲ್ಲಿ ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ಹಚ್ಚಿದ ಸಂದರ್ಭದಲ್ಲಿ ಪಟಾಕಿಯ ರಭಸಕ್ಕೆ ಸ್ಥಳದಲ್ಲಿದ್ದ ಕಲ್ಲು ಸಿಡಿದು ಯುವತಿ ಸಾವನ್ನಪ್ಪಿದ್ದಾಳೆ. ಸಿತಾರ(23) ಮೃತ ದುರ್ದೈವಿ. ಈಕೆ ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಹೋಬಳಿ ಮಾರಸಂದ್ರ ಗ್ರಾಮದ ವಾಸಿ ರಾಜಣ್ಣನ ಮಗಳು.ಬೆಂಗಳೂರಿನಲ್ಲಿ ವಾಸವಿದ್ದ ಸಿತಾರ ಸಂಬಂಧಿಕರ ಮನೆಗೆ ಗಣಪತಿ ಜಾತ್ರೆಗೆ ಶನಿವಾರ ಆಗಮಿಸಿದ್ದು ಭಾನುವಾರ ತಡರಾತ್ರಿ 1 ಗಂಟೆ ಸಮಯದಲ್ಲಿ ದುರ್ಮರಣಕ್ಕೀಡಾಗಿದ್ದಾರೆ ಎನ್ನಲಾಗಿದೆ. ಪಟಾಕಿ ಪ್ರದರ್ಶನದ ವೇಳೆ ಕಲ್ಲು ಸಿಡಿದು ಕಲ್ಲಿನ ಬಲವಾದ ಪೆಟ್ಟಿನಿಂದ ಸಿತಾರ ಮೃತಪಟ್ಟಿರಬಹುದೆಂದು ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಮೃತಳ ದೇಹದ ಮೇಲೆ ಯಾವುದೇ ಸುಟ್ಟ ಗಾಯಗಳಾಗಿಲ್ಲ ಕೇವಲ ಕಲ್ಲಿನ ಏಟಿನಿಂದ ಸಾವು ಸಂಭವಿಸಿರಬಹುದು ಎಂದು ವೈದ್ಯರು ತಿಳಿಸಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆ ಮಾಡಿ ಕೊಡುತ್ತಿದೆ. ಕಿಡಿಗೇಡಿಗಳೇನಾದರು ಕಲ್ಲು ಎಸೆದು ಹುಡುಗಿ ಸಾವಿಗೆ ಕಾರಣವಾದರೇ ಎಂಬ ಅನುಮಾನ ಕೆಲವರಿಗಿದೆ. ಪೊಲೀಸ್…
ತುಮಕೂರು: ಬೆಳ್ಳಂಬೆಳಗ್ಗೆ ಕರಡಿ ದಾಳಿ ಮಾಡಿದ್ದರಿಂದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಸೂರೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರೇಣುಕಮ್ಮ ಮತ್ತು ಬೇದುರ್‍ಬೀ ಅವರ ಕೈಗಳನ್ನು ಬಗೆದು ಕಂಡವನ್ನು ಕಿತ್ತಿದೆ. ಕರೀಮ್‍ಸಾಬ್ ಕಾಲನ್ನು ಕಚ್ಚಿಬಿಟ್ಟಿದೆ. ಮೂವರನ್ನೂ ತೋವಿನಕೆರೆ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದರೂ ಇವುಗಳ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲೆಯಲ್ಲಿರುವ ಕರಡಿಧಾಮದ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು ಇದರಿಂದಾಗಿ ಸ್ಥಳಿಯರ ಆಕ್ರೋಶ ಮುಗಿಲು ಮುಟ್ಟಿದೆ ಇನ್ನೂ ಕರಡಿಯಿಂದ ಕಡಿಸಿಕೊಂಡವರನ್ನು ನೋಡಲು ಜನತೆ ಮುಗಿಬಿದಿದ್ದಾರೆ ದಾಳಿಗೊಳಗಾದವರಿಗೆ ಸಮೀಪದ ತೋವಿನಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಗುತ್ತಿದೆ ಎಂದು ವರದಿಯಾಗಿದೆ.
ತುಮಕೂರು: ನಾನು ಸತ್ತರೂ ಬಿಜೆಪಿಗೆ ಹೋಗಲ್ಲ. ನಾನು ಇದ್ದರೂ ಜೆಡಿಎಸ್, ಸತ್ತರೂ ಜೆಡಿಎಸ್ ಪಕ್ಷದಲ್ಲೇ ಎಂದು ಶಾಸಕ ಗೌರಿಶಂಕರ್ ಸ್ಪಷ್ಟಪಡಿಸಿದರು. ತಾಲೂಕಿನ ಬೆಳ್ಳಾವಿಯಲ್ಲಿ ಶನಿವಾರ ನಡೆದ ಕನಕ ಜಯಂತಿಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ನಾನು ಬಿಜೆಪಿಗೆ ಹೋಗುತ್ತೇನೆಂದು ಸುಳ್ಳು ಹಬ್ಬಿಸುತ್ತಿದ್ದಾರೆ. ಅದು ಸುಳ್ಳು ನನ್ನ ಆತ್ಮ ಜೆಡಿಎಸ್. ನನ್ನ ಅಂತಿಮ ಕೂಡ ಜೆಡಿಎಸ್, ನನ್ನ ಹೆಣ ಕೂಡ ಬೇರೆ ಪಕ್ಷದ ಮುಖ ನೋಡುವುದಿಲ್ಲ ಎಂದು ಖಡಕ್ ಆಗಿ ನುಡಿದರು. ಕೆಲ ಮಾಧ್ಯಮಗಳಿಂದಲೂ ನನ್ನ ತೇಜೋವಧೆ ಆಗುತ್ತಿದೆ. ಮಾಧ್ಯಮದವರು ಸುಳ್ಳು ಸುದ್ದಿ ಬಿತ್ತರಿಸಿ ಜನರ ನಂಬಿಕೆ ಕಳೆದುಕೊಳ್ಳಬಾರದು. ವಿಶೇಷವಾಗಿ ಮಾಧ್ಯಮದವರನ್ನು ಕೈಮುಗಿದು ಕೇಳುತ್ತೇನೆ. ಅಪಪ್ರಚಾರ ಮಾಡಬೇಡಿ. ನನ್ನ ಕೊನೆ ಉಸಿರು ಇರೋವರೆಗೂ ಕೂಡ ಕುಮಾರಣ್ಣ, ದೇವೇಗೌಡರು,ಜೆಡಿಎಸ್ ಅಷ್ಟೇ.ನನ್ನ ಹೆಣ ಕೂಡ ಇನ್ನೊಂದು ಪಕ್ಷ ಅಂತಾ ಕನಸಿನಲ್ಲಿ ಕಾಣಲ್ಲ ಎಂದರು.
ನವದೆಹಲಿ: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡದ ಸರ್ಕಾರಗಳಿಗೆ ಸುಪ್ರೀಂಕೋರ್ಟ್ 50 ಸಾವಿರ ರೂ ದಂಡ ವಿಧಿಸಿದೆ. ಕರ್ನಾಟಕ ಸೇರಿ ಒಟ್ಟು 7 ರಾಜ್ಯಗಳಿಗೆ ಸುಪ್ರೀಂಕೋರ್ಟ್ 50 ಸಾವಿರ ರೂ ದಂಡ ವಿಧಿಸಿದೆ. ಜಸ್ಟೀಸ್ ಮದನ್ ಬಿ ಲೋಕುರ್ ಅವರಿದ್ದ ಪೀಠ ಕರ್ನಾಟಕ, ರಾಜಸ್ಥಾನ, ಉತ್ತರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ಅಸ್ಸಾಂ, ಗೋವಾ ರಾಜ್ಯಗಳಿಗೆ ದಂಡ ವಿಧಿಸಿದೆ. ರಾಜಸ್ಥಾನದಲ್ಲಿ ಶೇ. 50 ಕ್ಕೂ ಹೆಚ್ಚಿನ ಹುದ್ದೆಗಳು ಖಾಲಿ ಇವೆ, ಗೋವಾದಲ್ಲಿ ಶೇ.60ರಷ್ಟು ಹುದ್ದೆಗಳು ಖಾಲಿ ಇವೆ, ಅಸ್ಸಾಂನಲ್ಲಿ ಶೇ.40, ಕರ್ನಾಟಕದಲ್ಲಿ ಶೇ.50, ಮಹಾರಾಷ್ಟ್ರದಲ್ಲಿ ಶೇ 50, ಒಡಿಶಾದಲ್ಲಿ ಶೇ 33 ರಷ್ಟು, ಉತ್ತರ ಪ್ರದೇಶದಲ್ಲಿ ಶೇ. 80 ರಷ್ಟು ಹುದ್ದೆಗಳು ಖಾಲಿ ಇವೆ. ಈಗಾಗಲೇ ಖಾಲಿ ಇರುವ ಹುದ್ದೆಗಳ ಕುರಿತು ಸರ್ಕಾರಗಳಿಗೆ ಮಾಹಿತಿ ಸಲ್ಲಿಸಲು ತಿಳಿಸಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಾಲ್ಕು…
ಬೆಂಗಳೂರು: ಇಂದು ಬೆಳಗ್ಗೆ ಕಾಟನ್ ಪೇಟೆ ಮುಖ್ಯ ರಸ್ತೆಯಲ್ಲಿ ಬಸ್ ನಿಲ್ದಾಣದಲ್ಲಿ ದಿಢೀರ್ ಅಂತ ರಸ್ತೆ ಕುಸಿದಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಮುಖ್ಯರಸ್ತೆಯು ಸುಮಾರು 8 ಅಡಿ ಆಳದಷ್ಟು ಕುಸಿದಿದೆ, ಬಸ್ ಪಾಸಾಗುತ್ತಿದ್ದಂತೆಯೇ ಭೂಕುಸಿತ ಉಂಟಾಗಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಕಳಪೆ ಕಾಮಗಾರಿಯೇ ಭೂಕುಸಿತಕ್ಕೆ ಕಾರಣ ಎನ್ನಲಾಗುತ್ತಿದೆ. ಇದರಿಂದಾಗಿ ಕಾಟನ್ ಪೇಟೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವಂತಾಗಿದೆ. ಇನ್ನು ಹೀಗೆ ರಸ್ತೆ ಮಧ್ಯೆ ಕುಸಿದಿರೋದ್ರಿಂದ ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದಾರೆ.. ಜನರು ಓಡಾಡಲು ಪರ್ಯಾಯ ಮಾರ್ಗಕಾಣದೇ ಟ್ರಾಫಿಕ್ ಜಾಂ ಉಂಟಾಗಿದೆ. ಇನ್ನು ಘಟನ ಸ್ಥಳಕ್ಕೆ ಮೇಯರ‍್ ಸೇರಿದಂತೆ ಹಿರಿಯ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ
ಬೆಂಗಳೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರು ತಮ್ಮ ಪ್ರತಿ ತಿಂಗಳ ಆರೋಗ್ಯದ ಸಲುವಾಗಿ ಇಂದು ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ. ನಿನ್ನೆ ಬಿಜಿಎಸ್ ಆಸ್ಪತ್ರೆ ವೈದ್ಯರು ಮಠಕ್ಕೆ ಬಂದು ಸ್ವಾಮಿಜಿಯವರ ಆರೋಗ್ಯ ತಪಾಸಣೆ ಮಾಡಿದ್ದರು. ಆದರೂ ಕೂಡ ಮತ್ತೊಮ್ಮೆ ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವಿಶೇಷ ತಪಾಸಣೆ ಮಾಡಬೇಕಿದೆ ಎಂದು ವೈದ್ಯರ ಬೇಡಿಕೆಯ ಮೇರೆಗೆ ಇಂದು ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಸಣ್ಣದಾಗಿ ಜ್ವರ ಕಾಡುತ್ತಿದ್ದು, ರಕ್ತ ಪರೀಕ್ಷೆ, ಅಲ್ಟ್ರಾ ಸೌಂಡ್ ಮತ್ತು ಕಿಬ್ಬೊಟ್ಟೆಯ ಸಿಟಿ ಸ್ಕ್ಯಾನ್ ಮಾಡಲಾಗುತ್ತೆ. ಇನ್ನು ಕಳೆದ ಎರಡೂವರೆ ವರ್ಷಗಳಲ್ಲಿ 5 ಬಾರಿ ಶ್ರೀಗಳ ಲಿವರ್ನಲ್ಲಿ ಸ್ಟಂಟ್ ಅಳವಡಿಸಲಾಗಿದೆ. ಶ್ರೀಗಳಿಗೆ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಇಂದು ಬೆಂಗಳೂರಿನಲ್ಲೇ ಇರಲಿದ್ದು, ಇದಕ್ಕೆ ಪೂರ್ವಾಭಾವಿಯಾಗಿ ಮಠದಿಂದ ಶ್ರೀಗಳ ಶಿಷ್ಯರು ಆಗಮಿಸಿದ್ದಾರೆ. ನಾಳೆ ಸಂಜೆವರೆಗೂ ಶ್ರೀಗಳು ಆಸ್ಪತ್ರೆಯಲ್ಲೇ ಇರಲಿದ್ದು, ಅವರ…
ತುಮಕೂರು: ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್.ಐ.ವಿ(ಏಡ್ಸ್) ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಸೋಂಕಿನ ಪ್ರಮಾಣವನ್ನು ಸೊನ್ನೆಗೆ ತರುವಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು, ಸಂಘ-ಸಂಸ್ಥೆಗಳು, ಜನಸಾಮಾನ್ಯರು ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಮನವಿ ಮಾಡಿದರು. ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ನಗರ ಪಾಲಿಕೆಯ ಬಳಿ ಇಂದು ಬೆಳಿಗ್ಗೆ ಏರ್ಪಡಿಸಿದ್ದ ಜಾಗೃತಿ ಜಾಥಾ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವರ್ಷ “ತಮ್ಮ ಹೆಚ್.ಐ.ವಿ. ಸ್ಥಿತಿಯನ್ನು ತಿಳಿದುಕೊಳ್ಳಿ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಜಾಥಾ ಕಾರ್ಯಕ್ರಮದಲ್ಲಿ ಎರಡನೇ ಅಧಿಕ ಜಿಲ್ಲಾ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ್, ಆರನೇ ಅಧಿಕ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ್ ಸ್ವಾಮಿ ಹೆಚ್.ಎಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಬಾ ಸಾಹೇಬ ಜಿನರಾಳ್ಕರ್, ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಸಿದ್ದೆಗೌಡ,…