Author: News Desk Benkiyabale

ತುಮಕೂರು:      ನಗರದ ವಿನಾಯಕ ನಗರದಲ್ಲಿ ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿ ವತಿಯಿಂದ 43ನೇ ವರ್ಷದ ಸಿದ್ಧಿ ವಿನಾಯಕ ವಿಸರ್ಜನಾ ಮಹೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾಧಿಕಾರಿ ಕೆ.ರಾಕೇಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಮೆರವಣಿಗೆಗೆ ಚಾಲನೆ ನೀಡಿದರು.       ಮೆರವಣಿಗೆಯೂ ವಿನಾಯಕ ನಗರದಿಂದ ಬಿ.ಎಚ್.ರಸ್ತೆ, ಟೌನ್‍ಹಾಲ್, ಎಂ.ಜಿ.ರಸ್ತೆ, ಹೊರಪೇಟೆ, ಗುಂಚಿಸರ್ಕಲ್, ಮಂಡಿಪೇಟೆ, ಆಯಿಲ್ ಮಿಲ್ ರೋಡ್, ಚಿಕ್ಕಪೇಟೆ, ಕೋಟೆ ಆಂಜನೇಯಸ್ವಾಮಿ ವೃತ್ತ, ಗಾರ್ಡನ್ ರಸ್ತೆ ಮುಖಾಂತರ ಕೆ.ಎನ್.ಎಸ್ ಕಲ್ಯಾಣಿಯಲ್ಲಿ ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ವಿಸರ್ಜಿಸಲಾಯಿತು.       ಕೋಟೆ ಆಂಜನೇಯಸ್ವಾಮಿ ವೃತ್ತದಲ್ಲಿ ಶಿವು ಎಲೆಕ್ಟ್ರಿಕಲ್‍ವತಿಯಿಂದ ವಿದ್ಯುತ್ ದೀಪಾಲಂಕಾರ ಹಾಗೂ ವಾದ್ಯಗೋಷ್ಠಿ ಮೂಲಕ ಸಿದ್ಧಿವಿನಾಯಕ ಮೂರ್ತಿಯನ್ನು ಸ್ವಾಗತಿಸಲಾಯಿತು, ಮೆರವಣಿಯಲ್ಲಿ ಚೆನ್ನೈನ ಶಿವತಾಂಡವ ನೃತ್ಯ, ಬೆಂಗಳೂರಿನ ಸುಪ್ರಸಿದ್ಧ ವಿಶೇಷ ಅಲಂಕೃತ ವಾಹನ, ಡೋಲು, ನಂದಿಧ್ವಜ, ನಾಸಿಕ್‍ಡೋಲು, ಚಿಟ್ಟಿಮೇಳ, ವೀರಗಾಸೆ, ಸೋಮನಕುಣಿತ, ಡಂಕವಾದ್ಯ, ಚಂಡೆವಾದ್ಯ, ಕೀಲುಕುಣಿತ, ಪಟದ ಕುಣಿತ, ಕೋಲಾಟ,…

Read More

ತುಮಕೂರು:       ಚುನಾವಣೆಯಲ್ಲಿ ಸೋಲುಗೆಲುವು ಸಾಮಾನ್ಯ, ಕಳೆದ ಲೋಕಸಭಾ ಚುನಾವಣೆಯಲ್ಲಿ 6.5ಲಕ್ಷ ಮತಗಳನ್ನು ನೀಡಿದ ಮತದಾರರಿಗೆ ಧನ್ಯವಾದವನ್ನು ತಿಳಿಸಬೇಕಿತ್ತು, ತಡವಾಗಿ ಬಂದಿದ್ದೇನೆ ನನ್ನನ್ನು ಕ್ಷಮಿಸಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದರು.       ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ ಜಿಲ್ಲೆ ಮತದಾರರು ಹಾಗೂ ಮುಖಂಡರು ಸಹಕಾರ ನೀಡಿದ್ದೀರಿ, ಸೋಲನ್ನು ಸ್ಪೂರ್ತಿಯಾಗಿ ಸ್ವೀಕರಿಸಿ, ಪ್ರತಿ ತಾಲ್ಲೂಕಿಗೆ ಹೋಗಿ ಧನ್ಯವಾದ ಹೇಳಬೇಕು ಅದಕ್ಕಾಗಿ ಕಾರ್ಯಕ್ರಮ ರೂಪಿಸುವಂತೆ ಗುಬ್ಬಿ ಶಾಸಕ ವಾಸುಗೆ ಹೇಳಿದ್ದೇ ಏಳು ತಿಂಗಳ ನಂತರ ಜಿಲ್ಲೆಗೆ ಬಂದಿದ್ದೇನೆ, ಪ್ರತಿ ತಾಲ್ಲೂಕಿಗೆ ಹೋಗಿ ಮತದಾರರ ಕಷ್ಟ ಸುಖ ಆಲಿಸುತ್ತೇನೆ ಎಂದು ಹೇಳಿದರು.        ಮೂರು ವರ್ಷಗಳ ಹಿಂದೆಯೇ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೆ, ಆದರೆ ವಿಧಿ ಇಲ್ಲಿಗೆ ಬಂದು ನಿಲ್ಲುವಂತೆ ಮಾಡಿತು, ಸೋತೆ ಎನ್ನುವ ಸಿಟ್ಟು ನನಗಿಲ್ಲ, ಪಕ್ಷದಲ್ಲಿ ಸಮರ್ಥ ಯುವ…

Read More

ತುಮಕೂರು:       ಮೊದಲು ನಮ್ಮ ಮನಸ್ಥಿತಿ ಬದಲಾಯಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಂಘ(ರಿ) ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ಬಾಲಭವನದಲ್ಲಿಂದು ಏರ್ಪಡಿಸಿದ್ದ “ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ”ಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಾತ್ಮರ ದಿನವನ್ನು ಆಚರಣೆಗಷ್ಟೇ ಸೀಮಿತಗೊಳಿಸಬಾರದು. ಅವರ ಜೀವನಾದರ್ಶಗಳನ್ನು ನಾವೆಲ್ಲಾ ಅಳವಡಿಸಿಕೊಂಡಾಗ ಮಾತ್ರ ಆಚರಣೆ ಸಾರ್ಥಕವಾಗುತ್ತದೆ ಎಂದರಲ್ಲದೆ, ಕನಿಷ್ಟ ಚಿಂತನೆಗಳು ಸಮಾಜದ ಬೆಳವಣಿಗೆಯನ್ನು ಕುಗ್ಗಿಸುತ್ತದೆ. ತತ್ವ ರಹಿತ ರಾಜಕೀಯ, ಕೆಲಸವಿಲ್ಲದ ಸಂಪಾದನೆ, ಪ್ರಜ್ಞೆಯಿಲ್ಲದ ಸುಖ, ಗುಣವಿಲ್ಲದ ಜ್ಞಾನ, ನೈತಿಕತೆಯಿಲ್ಲದ ವಾಣಿಜ್ಯ, ತ್ಯಾಗವಿರದ ಪೂಜೆಯು ಮೌಲ್ಯರಹಿತ ಸಮಾಜವನ್ನು ಸೃಷ್ಟಿ ಮಾಡುತ್ತದೆ ಎಂಬ ಗಾಂಧೀ ವಿಚಾರ ಧಾರೆಗಳ ಮೇಲೆ ಬೆಳಕು ಚೆಲ್ಲಿದರು.       ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಮಾತನಾಡಿ, ಸತ್ಯ ಹಾಗೂ…

Read More

ತುಮಕೂರು:        ರಾಷ್ಟ್ರಪಿತ ಮಹಾತ್ಮಗಾಂಧಿಜೀಯವರ 150ನೇ ಜನ್ಮ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿ ಹಾಗೂ ತುಮಕೂರು ನಗರದ ಎನ್.ಆರ್.ಕಾಲೋನಿಯಲ್ಲಿ ‘ಸ್ವಚ್ಚತಾ ಅರಿವು’ ಎಂಬ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು.       ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ರಾಮಕೃಷ್ಣರವರು ಮಾತನಾಡುತ್ತಾ ದೇಶದ ಸ್ವತಂತ್ರಕ್ಕಾಗಿ ಹೋರಾಡಿದ ಧುರೀಣ ವ್ಯಕ್ತಿಗಳಲ್ಲಿ ಗಾಂಧೀಜಿಯವರ ಕೊಡುಗೆ ಅಪಾರವೆಂದರು, ಅವರಿಗೆ ಮಿಗಿಲಾದವರು ಯಾರು ಇಲ್ಲ. ತಮ್ಮ ಬದುಕಿನ ಪ್ರತಿ ಕ್ಷಣವನ್ನು ದೇಶಕ್ಕಾಗಿ ಮುಡಿಪಿಟ್ಟು ಕೊನೆಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಸತ್ಯ ಹಾಗೂ ಅಹಿಂಸಾ ತತ್ವ ಬಳಸಿ ಆಂಗ್ಲರನ್ನು ಕಟ್ಟಿ ಹಾಕಿದ ಗಾಂಧಿಜೀಯವರು ಭ್ರಿ‍ಟಿ‍‍ಷರ ವಿರುದ್ದ ದಂಡಿ ಸತ್ಯಾಗ್ರಹವನ್ನೊಳಗೊಂಡಂತೆ ಅನೇಕ ಬಾರಿ ಸೆರೆವಾಸವನ್ನು ಅನುಭವಿಸಿದ್ದಾರೆ. ಇವರ ಪ್ರಯತ್ನದಿಂದ ಭಾರತ ಸ್ವತಂತ್ರಗೊಂಡಿತು. ಇವರ ತ್ಯಾಗಕ್ಕಾಗಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವನ್ನು `ವಿಶ್ವ ಅಹಿಂಸಾ ದಿನ’ವೆಂದು ಘೋಷಿಸಿದೆ. ದೀನದಲಿತರ ಬಡವರ ಪರವಾಗಿ ಹೋರಾಡಿದ ಬಾಪೂಜಿಯವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲೆಂದೇ ದಲಿತರ ಕಾಲೋನಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ…

Read More

ತುಮಕೂರು:       ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಪದವೀಧರರು ಸೇರಲು ಅಕ್ಟೋಬರ್ 1ರಿಂದ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ತಿಳಿಸಿದರು.        ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನ್ಯಾಯಾಲಯ ಸಭಾಂಗಣದಲ್ಲಿಂದು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿಂದು ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಮತ್ತು ಎಲೆಕ್ಟರ್ಸ್ ವೆರಿಫೀಕೇಶನ್ ಪ್ರೋಗ್ರಾಂ ಮತ್ತು ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ತಯಾರಿಕೆ ಸಂಬಂಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಭೆಯಲ್ಲಿ ಅವರ ಮಾತನಾಡಿ, ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪದವೀಧರರು ಸಹ ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ. ಹಳೆಯ ಮತದಾರರ ಪಟ್ಟಿಗಳನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಪದವಿ ಮುಗಿಸಿ 3 ವರ್ಷಗಳು ಪೂರೈಸಿರುವವರು ಇದೇ ಅಕ್ಟೋಬರ್ 1ರಿಂದ ನವೆಂಬರ್ 6ರವರೆಗೂ ನಮೂನೆ-18ರಲ್ಲಿ ಅರ್ಹ ಪದವೀಧರರು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರ ಕಚೇರಿ, ತಾಲ್ಲೂಕು ಕಚೇರಿ ಹಾಗೂ ಮಹಾನಗರ ಪಾಲಿಕೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು. ಕರ್ನಾಟಕ ಆಗ್ನೇಯ ಪದವೀಧರ…

Read More

ತುಮಕೂರು :       ಕುಣಿಗಲ್ ತಾಲ್ಲೂಕಿನಲ್ಲಿ ಹೇಮಾವತಿ ಚಾನಲ್ ಮಾಡುವ ನಿಟ್ಟಿನಲ್ಲಿ ಏಕಾಏಕಿ ರೈತರ ಜಮೀನಿಗೆ ಪ್ರವೇಶ ಮಾಡಿ ಯಾವುದೇ ನೋಟೀಸ್ ನೀಡದೆ , ಪರಿಹಾರ ನೀಡದೇ ಮನಸೋ ಇಚ್ಚೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಹೇಮಾವತಿ ಇಲಾಖಾ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದದ ಪಟೇಲ್ ಆರೋಪಿಸಿದರು.       ನಗರದ ಕುಣಿಗಲ್ ರಸ್ತೆಯಲ್ಲಿರುವ ಹೇಮಾವತಿ ಕಚೇರಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಬೇಜವಬ್ಧಾರಿ ಹೇಳಿಕೆಗಳಿಗೆ ಆಕ್ರೋಶಗೊಂಡ ರೈತರು ಕಚೇರಿಗೆ ಬೀಗ ಜಡಿದು ದಿಢೀರ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕುಣಿಗಲ್ ಮೂಲಕ ಹುಲಿಯೂರುದುರ್ಗದ ವರೆಗೆ ಕುಡಿಯುವ ನೀರಿನ ಯೋಜನೆಗಾಗಿ ಮಾಡುತ್ತಿರುವ ಚಾನಲ್‍ಗಾಗಿ ರೈತರ ಜಮೀನುಗಳನ್ನು ವಶಪಡಿಸಿಕೊಂಡಿದ್ದು, ಅದಕ್ಕೆ ಪರಿಹಾವೂ ನೀಡಿಲ್ಲ. ಕೇಳಲು ಕಚೇರಿಗೆ ಬಂದರೆ ಸರಿಯಾದ ಉತ್ತರವೂ ಸಿಗುತ್ತಿಲ್ಲ ಎಂದು ಆರೋಪಿಸಿದರು.       ಕಳೆದ 7 ವರ್ಷಗಳಿಂದ ಕಾಮಾಗಾರಿ ನೆಪದಲ್ಲಿ ರೈತರ ಜಮೀನುಗಳನ್ನು ವಶಕ್ಕೆ…

Read More

ತುಮಕೂರು:       ನಗರ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಆವರಣದಲ್ಲಿದ್ದ ಬೃಹತ್ ಗಾತ್ರದ ಬೇವಿನ ಮರವೊಂದು ಉರುಳಿ ಬಿದ್ದು, ಸಿಬ್ಬಂದಿಯೊಬ್ಬರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.       ಗುರುವಾರ ಬೆಳಿಗ್ಗೆ 11.43ರ ಸಮಯದಲ್ಲಿ ಬೇವಿನ ಮರವು ಉರುಳಿ ಬಿದ್ದಿದ್ದರಿಂದ ಕಾಲೇಜಿನ ಸಿಬ್ಬಂದಿ ಬಬಿತಾ ಎಂಬುವರ ಭುಜಕ್ಕೆ ಗಾಯವಾಗಿದೆ, ಮರ ಅಪ್ಪಿತಪ್ಪಿ ಕಾಲೇಜಿನ ಗ್ರಂಥಾಲಯದ ಮೇಲಾಗಲಿ ಅಥವಾ ಸಿಬ್ಬಂದಿ ಕೊಠಡಿ ಮೇಲಾಗಲಿ ಉರುಳಿ ಬಿದ್ದಿದ್ದರೆ ಭಾರೀ ಅನಾಹುತ ನಡೆಯುವ ಸಾಧ್ಯತೆ ಇತ್ತು. ಗ್ರಂಥಾಲಯದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು, ಸಿಬ್ಬಂದಿ ಕೊಠಡಿಯಲ್ಲಿ ಉಪನ್ಯಾಸಕರು ಇದ್ದರು, ಮರದ ಬಳಿ ಕುಳಿತು ಓದುತ್ತಿದ್ದ ವಿದ್ಯಾರ್ಥಿಗಳು ಇಂದು ಆ ಕಡೆ ಹೋಗದೇ ಇದ್ದರಿಂದ ಅನಾಹುತ ತಪ್ಪಿದಂತಾಗಿದೆ.         ಮರ ಉರುಳಿದ್ದರಿಂದ ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಎಬಿಎಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾಲೇಜಿನ ಕೊಠಡಿಗಳು ಹಾಳಾಗಿದ್ದು, ಕಟ್ಟಡ ನವೀಕರಣ ಮಾಡಬೇಕು,2014ರಲ್ಲಿ ಆರಂಭಗೊಂಡ ಈ ಕಾಲೇಜಿಗೆ ಸ್ವಂತ…

Read More

ತುಮಕೂರು :      ಕುರಿ ಕಾಯಲು ಹೋಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ್ದ ಅಪರಾಧಿಗೆ ಇಲ್ಲಿನ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷಗಳ ಕಠಿಣ ಶಿಕ್ಷೆ ಹಾಗೂ 5 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.       18.4.2005 ರಂದು ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ವ್ಯಾಪ್ತಿಯ ಹಂಚಿಪುರ ಗ್ರಾಮದ ಬಳಿ ಬಾಲಕಿ ಕುರಿ ಕಾಯುತ್ತಿದ್ದಾಗ ಗೋವಿಂದ ಎಂಬಾತ ಬಲತ್ಕಾರವಾಗಿ ಅತ್ಯಾಚಾರ ವೆಸಗಿದ್ದ. ಈ ಸಂಬಂಧ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಅಂದಿನ ಸಿಪಿಐ ಎ.ಆರ್.ಬಲರಾಮೇಗೌಡ ದೂರು ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.       ಪ್ರಕರಣದ ವಿಚಾರಣೆಯು ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಗೋವಿಂದನಿಗೆ ಮೇಲ್ಕಂಡಂತೆ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ದೇಶಪಾಂಡೆ ಅವರು ತೀರ್ಪು ಪ್ರಕಟಿಸಿದ್ದಾರೆ. ನೊಂದ ಬಾಲಕಿಗೆ ಕಾನೂನು ರೀತಿ ಪರಿಹಾರ ಹಣವನ್ನು ಸಂತ್ರಸ್ತರ ಪರಿಹಾರ ನಿಧಿಯಲ್ಲಿ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ…

Read More

ತುರುವೇಕೆರೆ :       ತಾಲೂಕಿನ ತಹಶೀಲ್ದಾರ್ ಕಚೇರಿಯ ವೃತ್ತದ ಬಳಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನರವರನ್ನು, ಶಾಸಕ ಮಸಾಲೆಜಯರಾಮ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಹೂಮಾಲೆ ಹಾಕಿ ಸನ್ಮಾನಿಸಿದರು.       ತಿಪಟೂರಿನ ಹೊನ್ನವಳ್ಳಿ ಗ್ರಾಮದ ಉಡಿಸಲಮ್ಮ ದೇವಾಲಯದ ಪೂಜೆ ಮುಗಿಸಿ ಕುಣಿಗಲ್ ತಾಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ನೋಡಲು ಶಾಸಕ ಮಸಾಲೆಜಯರಾಮ್ ಆದಿಯಾಗಿ ನೂರಾರು ಕಾರ್ಯಕರ್ತರು ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ 11ಗಂಟೆಯಿಂದಲೇ ಜಮಾಯಿಸಿದ್ದರು, ನಮ್ಮ ನೆಚ್ಚಿನ ನಾಯಕನ ಬರುವಿಕೆಯನ್ನರಿತ ಬಿ.ಎಸ್.ವೈ ಅಭಿಮಾನಿ ಪಡೆ ಮಧ್ಯಾಹ್ನದ ವೇಳೆಗೆ ನೂರಾರು ಸಂಖ್ಯೆಯಲ್ಲಿ ತಾಲೂಕಿನ ತಹಶೀಲ್ದಾರ್ ಕಚೇರಿ ಆವರಣಕ್ಕೆ ಜಮಾಯಿಸಿದರು.       ಒಂದು ಗಂಟೆ ಮುಂಚಿತವಾಗಿಯೇ ಬ್ಯಾಂಡ್ ಸೆಟ್ ವಾದ್ಯದ ಮೂಲಕ ಆಗಮನದ ನಿರೀಕ್ಷೆಗೆ ಮೆರುಗು ತಂದ ಬಿಜೆಪಿ ಕಾರ್ಯಕರ್ತರು ಪಠಾಕಿ ಸಿಡಿಸಿ ಬಿಜೆಪಿ ಭಾವುಟದೊಂದಿಗೆ ಕೇಸರಿ ಶಾಲುಗಳನ್ನು ಹೊದ್ದು ಸಂಭ್ರಮಿಸಿದರು.       ಮದ್ಯಾಹ್ನದ ವೇಳೆಗೆ…

Read More

ತುಮಕೂರು:       ಶಾಲಾ ಶಿಕ್ಷಣದಿಂದ ಬಂದ ವಿದ್ಯಾರ್ಥಿಗಳಿಗೆ ಉತ್ತಮವಾದ ಮಾರ್ಗದರ್ಶನವನ್ನು ಮಾಡುವ ಮೂಲಕ ಉತ್ತಮ ಭವಿಷ್ಯ ಕಲ್ಪಿಸಿಕೊಡುವ ಅವಕಾಶ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾನೂನು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.       ನಗರದ ಕನ್ನಡ ಭವನದಲ್ಲಿ ನಡೆದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಶಕ್ತಿ ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡುವ ಉಪನ್ಯಾಸಕರೇ ನಿಜವಾದ ಗುರುಗಳು, ವಿದ್ಯಾರ್ಥಿಗಳಲ್ಲಿ ಜಾನದ ಹಸಿವು ಹೆಚ್ಚಿಸುವ ಕೆಲಸ ಮಾಡುವ, ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಉಪನ್ಯಾಸಕರ ಅವಶ್ಯಕತೆ ಇದೆ ಎಂದರು. ಬೋಧನೆ ಮಾಡುವವರೆಲ್ಲ ಗುರುಗಳಲ್ಲ, ವಿದ್ಯಾರ್ಥಿಗಳನ್ನು ತಿದ್ದಿತೀಡಿ, ಪ್ರೋತ್ಸಾಹಿಸುವವರನ್ನು ಮಾತ್ರ ಗುರುಗಳು ಎನ್ನುತ್ತಾರೆ, ವಿದ್ಯಾರ್ಥಿಗಳ ಭವಿಷ್ಯದ ಜವಾಬ್ದಾರಿ ಉಪನ್ಯಾಸಕರ ಮೇಲಿದೆ ಎಂದ ಅವರು, ಪದವಿ ಪೂರ್ವ ಶಿಕ್ಷಣದಿಂದ ಪಡೆಯುವ ಅಂಕಗಳಿಗೆ ಯಾವುದೇ ಮಾನ್ಯತೆ ಇಲ್ಲದಂತಾಗಿದ್ದು, ಸಿಇಟಿ ಅಂಕಗಳಿಕೆಯೇ ಮುಖ್ಯವಾಗಿದ್ದು,…

Read More