ತುಮಕೂರು: ದೌರ್ಜನ್ಯ ಮುಕ್ತ ಬಾಲ್ಯದಿಂದ ಮಕ್ಕಳ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬದಾಮಿಕರ್ ಅಭಿಪ್ರಾಯಪಟ್ಟರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ನರಸಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಬಾಲನ್ಯಾಯ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳನ್ನು ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸುವಲ್ಲಿ ಪೋಷಕರು, ಶಿಕ್ಷಕರು ಹಾಗೂ ಅಧಿಕಾರಿಗಳು ಅನುವು ಮಾಡಿಕೊಡಬೇಕು. ಬಾಲ್ಯದಲ್ಲಿ ಮಕ್ಕಳ ಹಕ್ಕುಗಳು ಸದುಪಯೋಗವಾಗುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಬಿ.ಎಲ್. ಜಿನರಾಳ್ಕರ್ ಮಾತನಾಡಿ, ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ದತಿಯಂತಹ ಅನಿಷ್ಟ ಆಚರಣೆಗಳು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಅವುಗಳ ನಿವಾರಣೆಗಾಗಿ ಸರ್ಕಾರ ಹಲವಾರು ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದೆ.…
Author: News Desk Benkiyabale
ಮಧುಗಿರಿ : ಪಟ್ಟಣದಲ್ಲಿರುವ ಗುರುಭವನದ ತಾಲ್ಲೂಕು ಸಮಿತಿಯಲ್ಲಿನ ಹಣಕಾಸಿನ ಅವ್ಯವಹಾರಗಳನ್ನು ಖಂಡಿಸಿ ಡಿ.1 ರಂದು ಮಧ್ಯಾಹ್ನ 12.30 ಕ್ಕೆ ಬಿ.ಇ.ಒ ಕಚೇರಿ ಎದುರು ಶಾಂತಿಯುತ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು 9 ಶಿಕ್ಷಕರ ಸಂಘಗಳು ಪ್ರಕಟಣೆಯಲ್ಲಿ ತಿಳಿಸಿದೆ. ಗುರುಭವನದ ವಾಣಿಜ್ಯ ಮಳಿಗೆಗಳ ಸಂಪೂರ್ಣ ಕಾಮಗಾರಿಯ ಖರ್ಚು, ವೆಚ್ಚಗಳನ್ನು ಪಾಸ್ ಬುಕ್ ಸಹಿತ ನೀಡಬೇಕು, 31 ಅಂಗಡಿ ಮಳಿಗೆಗಳಿಂದ ವಸೂಲಾಗಿರುವ 12 ತಿಂಗಳ ಬಾಡಿಗೆ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮ ಮಾಡಿಬೇಕು, ಸರಕಾರದ ಸುತ್ತೋಲೆಯಂತೆ ಗುರುಭವನ ಸಮಿತಿಯ ಅಧ್ಯಕ್ಷರು ಮತ್ತು ಖಜಾಂಚಿಗಳು ಜಂಟಿಯಾಗಿ ಖಾತೆಯನ್ನು ನಿರ್ವಹಿಸಬೇಕು, 31 ಅಂಗಡಿ ಮಳಿಗೆಯವರಿಂದ ಬಾಡಿಗೆಯನ್ನು ನಗದು ರೂಪದಲ್ಲಿ ವಸೂಲು ಮಾಡದೆ ನೇರವಾಗಿ ಗುರುಭವನ ಸಮಿತಿಯ ಜಂಟಿ ಖಾತೆಗೆ ಅಂಗಡಿಯವರೆ ಬಾಡಿಗೆಯನ್ನು ಸಂದಾಯ ಮಾಡಿ ಹಣವನ್ನು ಕಟ್ಟಿದ ರಶೀದಿಯನ್ನು ನಿರ್ವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಒಬ್ಬ ಗುಮಾಸ್ತರನ್ನು ನೇಮಿಸಬೇಕು, ಸರಕಾರದ ಸುತ್ತೋಲೆಯಂತೆ ಗುರುಭವನ ಸಮಿತಿಯು ಪುನರ್ ರಚನೆಯಾಗಬೇಕು. ಗುರುಭವನ ಸಮಿತಿಯಲ್ಲಿ…
ಕೊರಟಗೆರೆ: ಹೋರಾಟ ಮತ್ತು ಸಂಘಟನೆಯಿಂದ ಕನ್ನಡ ಭಾಷೆಯನ್ನು ಉಳಿಸಲು ಸಾಧ್ಯವಿಲ್ಲ. ಕನ್ನಡ ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ನಾವೇಲ್ಲರು ಬೆಳೆಸಿ ಕನ್ನಡ ನಾಡಿನ ಭೂಪಟವನ್ನು ವಿಶ್ವದ ಭೂಪಟದಲ್ಲಿ ಕಾಣುವಂತಹ ಪ್ರಯತ್ನ ಮಾಡಬೇಕು ಎಂದು ಸಿವಿಲ್ ನ್ಯಾಯಾಧೀಶ ರಮೇಶ್‍ಬಾಬು ತಿಳಿಸಿದರು. ಪಟ್ಟಣದ ಜೆಎಂಎಪ್‍ಸಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ 46ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗದೇ ಕನ್ನಡ ನಾಡಿನ ಪ್ರತಿಯೊಬ್ಬ ಮನುಷ್ಯನ ಜೀವನದ ಕ್ಷಣದಲ್ಲಿಯೂ ಕನ್ನಡ ಭಾಷೆಯನ್ನು ನೆನೆಯುವಂತಹ ಕೆಲಸ ಮಾಡಬೇಕು. ಬೆಂಗಳೂರು ನಗರದ ಬಹುತೇಕ ಕಡೆ ಮತ್ತು ರಾಜ್ಯದ ಗಡಿಭಾಗಗಳಲ್ಲಿ ಕನ್ನಡ ಭಾಷೆ ಮರೆಯಾಗಿ ಪರಬಾಷೆಯ ಬಳಕೆ ಹೆಚ್ಚಾಗುತ್ತೀದೆ ಎಂದು ವಿಷಾದ ವ್ಯಕ್ತಪಡಿಸಿದರು. ಸರಕಾರಿ ಅಭಿಯೋಜಕ ಷೇಕ್ ಮಹಮ್ಮದ್ ಅಲಿ…
ಕೊರಟಗೆರೆ: ತನ್ನ ಹೊಲದಲ್ಲಿ ಹುಲ್ಲು ತರಲು ಹೋದಾಗ ಹೆಜ್ಜೇನು ದಾಳಿಗೆ ತುತ್ತಾದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆಡೆದಿದೆ. ಹೊಳವನಹಳ್ಳಿ ಹೋಬಳಿಯ ಲಂಕೇನಹಳ್ಳಿ ಗ್ರಾಮದ ವೃದ್ದ ಹನುಮಂತರಾಯಪ್ಪ (70) ಎಂಬ ವ್ಯಕ್ತಿ ತನ್ನ ಹೊಲದಲ್ಲಿ ಹುಲ್ಲು ತರಲು ಹೋದಾಗ ಏಕಾಏಕಿ ಮೂರು ಸಾವಿರಕ್ಕೂ ಹೆಚ್ಚು ಹೆಜ್ಜೇನು ಹುಳುಗಳು ದಾಳಿ ಮಾಡಿವೆ. ಹೆಜ್ಜೇನುಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಅವರು ಮೈ ಮೇಲಿನ ಬಟ್ಟೆ ಬಿಚ್ಚಿ ಹಾಕಿ ಸಮೀಪದಲ್ಲೇ ಇದ್ದ ನೀರಿನ ತೊಟ್ಟಿ ಒಳಗೆ ಧುಮುಕಿದ್ದಾರೆ. ಹೀಗಿದ್ದರೂ ಹೆಜ್ಜೇನು ದಾಳಿ ಮಾಡುವುದನ್ನು ನಿಲ್ಲಿಸಲಿಲ್ಲ. ಅವರ ಚೀರಾಟ, ಕೂಗಾಟ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅವರನ್ನು ಗ್ರಾಮದೊಳಗೆ ಕರೆದುಕೊಂಡು ಬಂದ್ರು ಬನಿಯನ್ ಒಳಗೆ 10ಕ್ಕೂ ಹೆಚ್ಚು ಹೆಜ್ಜೇನುಗಳು ಇದ್ದುದು ಕಂಡು ಬಂದಿದೆ. ಇದಲ್ಲದೆ ಕೊರಟಗೆರೆ ಆಸ್ಪತ್ರೆಗೆ ಕರೆತಂದರು ಕೂಡ ಅವರ ಒಳ ಉಡುಪಿನಲ್ಲಿ ನಾಲ್ಕು ನೊಣಗಳು ಪ್ರತ್ಯಕ್ಷವಾಗಿದ್ದವು. ಕೊರಟಗೆರೆ ತಾಲ್ಲೂಕು…
ಬೆಂಗಳೂರು: ಪರೀಕ್ಷಾ ಕೇಂದ್ರಗಳಲ್ಲಿನ ನಕಲು ತಡೆಯುವ ಉದ್ದೇಶದಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವೇಳೆ ಕೈ ಗಡಿಯಾರ ಕಟ್ಟಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವುದಕ್ಕೆ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿಷೇಧ ಹೇರಲಾಗಿದೆ. ಮುಂದಿನ ವರ್ಷ ನಡೆಯಲಿರುವ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಿಂದ ಈ ನಿಯಮ ಅನ್ವಯವಾಗಲಿದ್ದು, ಪರ್ಯಾಯ ಮಾರ್ಗವಾಗಿ ಪರೀಕ್ಷಾ ಕೇಂದ್ರಗಳಲ್ಲೆ ಗೋಡೆ ಗಡಿಯಾರ ಹಾಕಲು ನಿರ್ಧರಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳು ಕೈ ಗಡಿಯಾರ ಬಿಟ್ಟು ಪರೀಕ್ಷಾ ಕೊಠಡಿಗೆ ತೆರಳಬೇಕು. ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಿಇಟಿಯಲ್ಲಿ ಇದನ್ನು ಜಾರಿಗೆ ತರಲಾಗಿತ್ತು. ಕೆಇಎ ತನ್ನ ಹಣದಿಂದಲೇ ಪರೀಕ್ಷಾ ಕೇಂದ್ರಗಳಿಗೆ ಗೋಡೆ ಗಡಿಯಾರ ಖರೀದಿಸಿ ಹಾಕಿತ್ತು. ಪರೀಕ್ಷಾ ಸಮಯದಲ್ಲಿ ಗಡಿಯಾರ ಇಲ್ಲದಿದ್ದರೆ ನಾವು ಸಮಯದ ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ. ಡಿಜಿಟಲ್ ಗಡಿಯಾರಗಳನ್ನು ಬೇಕಾದರೆ ನಿಷೇಧ ಮಾಡಿ. ಸಾಮಾನ್ಯ ವಾಚ್ ಕಟ್ಟಿಕೊಳ್ಳುವವರಿಗೆ ಪ್ರವೇಶ ನೀಡಬೇಕು. ಅಲ್ಲದೆ,…
ತುಮಕೂರು : ಕಟ್ಟಡ ಹಂತದಲ್ಲಿದ್ದ ಆಸ್ಪತ್ರೆಯಲ್ಲಿ ಮಹಿಳೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನಗರದ ರಾಜಲಕ್ಷ್ಮೀ ನರ್ಸಿಂಗ್ ಹೋಂನಲ್ಲಿ ಈ ಘಟನೆ ನಡೆದಿದ್ದು, ನೆಲಮಂಗಲ ತಾಲ್ಲೂಕಿನ ಹಳೆ ನಿಜಗಲ್ ಗ್ರಾಮದ ವಸಂತ (32)ಮೃತ ಪಟ್ಟ ದುರ್ದೈವಿ. ಅಪೆಂಡಿಕ್ಸ್ ನಿಂದ ಬಳಲುತ್ತಿದ್ದ ವಸಂತ ನ.21 ರಂದು ರಾಜಲಕ್ಷ್ಮೀ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಳು. ನಿನ್ನೆ ಮದ್ಯಾಹ್ನ ಅಂದರೆ ನ.26 ರಂದು ಡಾ.ನರೇಂದ್ರ ರವರು ವಸಂತಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಿದ್ದರು. ಆಸ್ಪತ್ರೆಯಲ್ಲಿ ಐಸಿಯು ಇಲ್ಲದ ಕಾರಣ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಸಂಜೆ ವೇಳೆಗೆ ಉಸಿರಾಟದ ಸಮಸ್ಯೆ ಅಧಿಕವಾದ ಕಾರಣ ತುರ್ತು ನಿಗಾ ಘಟಕದ ಅಗತ್ಯತೆ ಅನಿವಾರ್ಯವಾಗಿದ್ದು, ಚಿಕಿತ್ಸೆ ನೀಡದೇ ಟಿಎಚ್‍ಎಸ್ ಆಸ್ಪತ್ರೆಗೆ ಮಹಿಳೆಯನ್ನು ವರ್ಗಾಯಿಸಿ ಕೈತೊಳೆದುಕೊಂಡಿದ್ದಾರೆ. ಟಿಹೆಚ್‍ಎಸ್ ಆಸ್ಪತ್ರೆಗೆ ತೆರಳುತ್ತಿದ್ದಂತೆ ವಸಂತ ಮೃತಪಟ್ಟಿದ್ದಾಳೆ. ಆಸ್ಪತ್ರೆ ಯಲ್ಲಿನ ಅವ್ಯವಸ್ಥೆ, ವೈದ್ಯರ ನಿರ್ಲಕ್ಷದಿಂದ ವಸಂತಾ…
ಮಧುಗಿರಿ : ರಾಜ್ಯ ಸರಕಾರ ಗ್ರಾಮೀಣ ಭಾಗದ ಬಡವರು ಹಾಗೂ ಹಳ್ಳಿಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿದ್ದು, ಫಲಾನುಭವಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಗರಣಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಗರಣಿ ಗ್ರಾ.ಪಂ.ನಿಂದ ವಿವಿಧ ಫಲಾನುಭವಿಗಳಿಗೆ ಹಲವಾರು ಯೋಜನೆಯಡಿ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ದೇಶವು ಅಭಿವೃದ್ಧಿ ಪಥದಲ್ಲಿ ಮುನ್ನೆಡೆಯಲು ಮೊದಲು ಹಳ್ಳಿಗಳ ಅಭಿವೃದ್ಧಿಯಾಗಬೇಕು ಎಂದು ರಾಷ್ಟ್ರಪಿತ ಮಹಾತ್ಮ ಗಾಂೀಜಿಯವರು ಹೇಳಿದ್ದರು. ಕುಮಾರಸ್ವಾಮಿ ನೇತೃತ್ವದ ಸರಕಾರವು ಅದೇ ಹಾದಿಯಲ್ಲಿ ಮುನ್ನಡೆಯುತ್ತಿದ್ದು, ಗ್ರಾಮೀಣ ಜನರ ಬದುಕನ್ನು ಆರ್ಥಿಕವಾಗಿ ಸದೃಢವಾಗಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಂತೆ ಈ ಕಾರ್ಯಕ್ರಮ ನಡೆಯುತ್ತಿದೆ. ವಿಕಲಚೇತನರಿಗೆ ಸಹಾಯಧನ, ಮನೆಯಿಲ್ಲದವರಿಗೆ ಸೂರು, ಶುದ್ಧ ಕುಡಿಯುವ ನೀರು, ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ವಿತರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗುತ್ತಿದೆ. ಸಾರ್ವಜನಿಕರು ಸರಕಾರಕ್ಕೆ ಸಹಕಾರ ನೀಡಿ, ತಮಗೆ…
ಕೊರಟಗೆರೆ: ಅವೈಜ್ಞಾನಿಕ ಕೇಶಿಪ್ ರಾಜ್ಯ ಹೆದ್ದಾರಿಯ ತಿರುವಿನಲ್ಲಿ ಖಾಸಗಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಆಗಿ ತನ್ನ ತಮ್ಮನ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಹಿಂದಕ್ಕೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ತಂದೆ ಮತ್ತು ಮಗ ಇಬ್ಬರು ಮೃತ ಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ತಾಲೂಕಿನ ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ವಾಸಿಯಾದ ಕೃಷ್ಣಪ್ಪನ ಮಗನಾದ ತಿಮ್ಮಯ್ಯ(62) ಮತ್ತು ತಿಮ್ಮಯ್ಯನ ಮಗನಾದ ವೆಂಕಟೇಶ್(38) ಎಂಬ ತಂದೆಮಗ ಮೃತಪಟ್ಟ ದುರ್ದೈವಿ. ತನ್ನ ಚಿಕ್ಕ ಮಗನ ಮದುವೆಯ ಆಮಂತ್ರಣ ಪತ್ರಿಕೆ ಕೊಟ್ಟು ಹಿಂದಕ್ಕೆ ಬರುವ ದಾರಿಯಲ್ಲಿ ಅಪಘಾತ ಆಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೊರಟಗೆರೆ ಪಟ್ಟಣದ ಬೈಪಾಸ್‍ಗೆ ಸಂಪರ್ಕ ಕಲ್ಪಿಸುವ ಸಿದ್ದೇಶ್ವರ ಕಲ್ಯಾಣ ಮಂಟಪ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಮಧುಗಿರಿ ಕಡೆಯಿಂದ ತಿರುವಿನಲ್ಲಿ ಅತಿವೇಗದಿಂದ ಬಂದ ಮಾರುತಿ ಕೃಪ ಖಾಸಗಿ ಬಸ್, ಕೊರಟಗೆರೆ ಕಡೆಯಿಂದ ತನ್ನ ಮಲ್ಲೆಕಾವು ಗ್ರಾಮದ…
ಗುಬ್ಬಿ : ಖಾಸಗಿ ಒಡೆತನದ ಆರ್.ಸಿ.ಸಿ ಪೋಲ್‍ಗಳನ್ನು ತಯಾರಿಸುವ ಸಿಮೆಂಟ್ ಕಾರ್ಖಾನೆಯ ಹಳ್ಳಕ್ಕೆ ಲಾರಿ ಬಿದ್ದು ಯಾದಗಿರಿ ಮೂಲದ ಕೂಲಿ ಕಾರ್ಮಿಕ ಶಾಂತಪ್ಪ ಅಸುನೀಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಎನ್.ಹೆಚ್. 206 ರಸ್ತೆಯ ಬದಿಯಲ್ಲಿರುವ ನಂದಿ ಕಾಂಕ್ರಿಟ್ ಪ್ರಾಡಕ್ಟ್‍ನಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಅನುನಾಳದ ಗ್ರಾಮದ ಶಾಂತಪ್ಪ ಮತ್ತು ಕುಟುಂಬದವರು ಸುಮಾರು ಒಂದೂವರೆ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು ಇಂದು ಬೆಳಗಿನ ಸಮಯದಲ್ಲಿ ಟಿಪ್ಪರ್ ಲಾರಿಯಲ್ಲಿ ಬಂದಂತಹ ಸರಕನ್ನು ಇಳಿಸಲು ಗುಂಡಿಯ ಒಳಗೆ ಇಳಿದಿದ್ದ ಕಾರ್ಮಿಕನಿಗೆ ಮೇಲಿದ್ದ ಲಾರಿಯು ಗುಂಡಿಯು ಕುಸಿದ ಕಾರಣ ಲಾರಿ ಸಮೇತ ಗುಂಡಿಯೊಳಗೆ ಜಾರಿದ ಕಾರಣ ವ್ಯಕ್ತಿಯು ಮೃತಪಟ್ಟಿದ್ದಾನೆ. ಮೂಕನಹಳ್ಳಿ ಪಟ್ಟಣ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಈ ಕಾರ್ಖಾನೆಗೆ ದಿನಾಂಕ : 12-04-2018ರಂದು ಪರವಾನಗಿ ಪಡೆದಿದ್ದು ಮೂರು ಜನ ಒಡೆತನದ ಈ ಕಾರ್ಖಾನೆಗೆ ಕಾರ್ಮಿಕ ಇಲಾಖೆಯಿಂದ ಯಾವುದೇ ಕಾರ್ಮಿಕರನ್ನು ನೊಂದಾಯಿಸದೆ ಇರುವುದು ಒಂದೆಡೆಯಾದರೆ…
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ ಅಂಬರೀಶ್(66), ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಂಜೆ ಮನೆಯಲ್ಲಿ ಕುಸಿದು ಬಿದ್ದ ಅಂಬರೀಶ್ ರನ್ನು ಕುಟುಂಬದ ಸದಸ್ಯರು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಾಗಲೇ ಉಸಿರಾಟದ ಸಮಸ್ಯೆ ಮತ್ತು ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ಅವರಿಗೆ ವಿಕ್ರಂ ಆಸ್ಪತ್ರೆಯ ಡಾ.ಸತೀಶ್ ಅವರ ತಂಡ ಚಿಕಿತ್ಸೆ ನೀಡಲು ಸತತ ಪ್ರಯತ್ನ ನಡೆಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಬರೀಶ್ ರಾತ್ರಿ 9.30ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಚಿವ ಜಾರ್ಜ್, ಮಂಡ್ಯದ ಸಂಸದ ಎಲ್. ಆರ್.ಶಿವರಾಮೇಗೌಡ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಮುನಿರತ್ನ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಮಂಡ್ಯದ ಜನರ ಕಣ್ಮಣಿಯಾಗಿ ಮಂಡ್ಯದ ಗಂಡು ಎಂದೇ ಹೆಸರಾಗಿದ್ದರು. ಅಂಬರೀಶ್ ನಿಧನದ ಸುದ್ದಿ ತಿಳಿದು ಆಸ್ಪತ್ರೆಗೆ ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ…