Author: News Desk Benkiyabale

ತುರುವೇಕೆರೆ:       ಡಿ.ಕೆ.ಶಿವಕುಮಾರ್ ಭಂದನದ ವಿಚಾರದಲ್ಲಿ ತನಿಖೆ ಕಾನೂನು ಚೌಕಟ್ಟಿನಲ್ಲಿಯೇ ಸಾಗುತ್ತಿದ್ದು, ಇದರಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ:ಅಶ್ವಥ್ಥನಾರಾಯಣ ತಿಳಿಸಿದರು.       ತುರುವೇಕೆರೆ ಮಾರ್ಗವಾಗಿ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ನಿರ್ಮಿತವಾಗಿರುವ ಶ್ರೀ ಕಾಲಭೈರವೇಶ್ವರ ಸಮುದಾಯ ಭವನದ ಲೋಕಾರ್ಪಣಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಎದುರು ಎಲ್ಲರೂ ಸಮಾನರು, ಕಾನೂನನ್ನು ಎಲ್ಲರೂ ಗೌರವಿಸಬೇಕು, ಡಿ.ಕೆ.ಶಿವಕುಮಾರ್ ತಪ್ಪು ಮಾಡಿಲ್ಲದಿದ್ದರೆ ಹೊರಬರುತ್ತಾರೆ, ಆದರೆ ಈ ವಿಚಾರಕ್ಕೆ ರಾಜಕೀಯ ಲೇಪನ ಹಚ್ಚುವ ಅವಶ್ಯಕತೆಯಿಲ್ಲ, ನಮ್ಮ ದೇಶದ ಕಾನೂನು ಸಾಮಾನ್ಯನಿಂದ ಹಿಡಿದು ಕೋಟ್ಯಾಧಿಪತಿಗೂ ಒಂದೇಯಿದೆ ಕಾನೂನನ್ನು ನಾವುಗಳು ಗೌರವಿಸಬೇಕು ಎಂದರು.       ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು ಮುಂದಿನ ಎರಡು ತಿಂಗಳಲ್ಲಿ ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ ಎಂದರು.       ಸ್ಥಳೀಯ ಶಾಸಕ ಮಸಾಲೆಜಯರಾಮ್, ಮುಖಂಡರುಗಳಾದ ಕೊಂಡಜ್ಜಿ ವಿಶ್ವನಾಥ್, ಗಂಗಣ್ಣ, ವಿ.ಬಿ.ಸುರೇಶ್,…

Read More

ತುಮಕೂರು:       ದಶಕದ ಹಿಂದೆ ಹೂಳು ತುಂಬಿಕೊಂಡು ಹಾಳಾಗಿದ್ದ ಅಮಾನಿಕೆರೆ ಅಭಿವೃದ್ಧಿ ಕಾಮಗಾರಿಯು ಸ್ಮಾರ್ಟ್ ಸಿಟಿ ಯೋಜನೆಯಡಿ ಭರದಿಂದ ಸಾಗಿದ್ದು, ಶನಿವಾರ ತಾಂತ್ರಿಕ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿತು.       ಭೇಟಿ ಸಂದರ್ಭದಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಅಧ್ಯಕ್ಷೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಾತನಾಡಿ, ತುಮಕೂರಿನ ಹೆಮ್ಮೆ ಎಂದೇ ಬಿಂಬಿತವಾಗಿರುವ ಅಮಾನಿಕೆರೆಯನ್ನು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ (TSCL) ಅಭಿವೃದ್ಧಿ ಕಾಮಗಾರಿ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯಡಿ ಕೆರೆಯ ಬಂಡ್ ಅಭಿವೃದ್ಧಿ, ಬೋಟಿಂಗ್ ಕೊಳದ ಅಭಿವೃದ್ಧಿ, ಸೈಕಲ್ ಟ್ರ್ಯಾಕ್, ಫುಟ್ಪಾತ್ ಮತ್ತು ಮೋನೋರೈಲ್, ಕಾರ್ ಪಾತ್‍ವೇ ಅಭಿವೃದ್ಧಿ, ವಾಕಿಂಗ್‍ಪಾತ್, ವಾರಾಂತ್ಯದ ಸಂಗೀತ ಕಾರಂಜಿ, ಮಕ್ಕಳ ಆಟಿಕೆ ಜಾಗ, ಮಕ್ಕಳಿಗೆ ಉದ್ಯಾನವನ, ಯೋಗಕೇಂದ್ರ, ಉದ್ಯಾನವನಕ್ಕೆ ಬಂದ ಪ್ರವಾಸಿಗರು ದೂರದಲ್ಲೇ ನಿಂತು ಪಕ್ಷಿಗಳ ಕಲರವ ನೋಡ(ಕೇಳ)ಲು, ಪಕ್ಷಿಗಳಿಗೆ ಉತ್ತಮ ಆವಾಸಸ್ಥಾನಗಳನ್ನು ಕಲ್ಪಿಸುವುದು ಹಾಗೂ ಅವುಗಳ…

Read More

ಕೊರಟಗೆರೆ:       ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಐಟಿ ಮತ್ತು ಇಡಿ ಇಲಾಖೆಯನ್ನು ಬಳಸಿಕೊಂಡು ಕಾಂಗ್ರೇಸ್ ಪಕ್ಷದ ನಾಯಕರ ವಿರುದ್ದ ಸೇಡಿನ ರಾಜಕೀಯ ಮಾಡುತ್ತಾ ವಿರೋದ ಪಕ್ಷವನ್ನು ಹಣಿಯುವ ಪ್ರಯತ್ನ ಮಾಡುತ್ತೀದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಆಕ್ರೋಶ ವ್ಯಕ್ತಪಡಿಸಿದರು.       ಅವರು ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಕಾಂಗ್ರೇಸ್ ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಡಿ.ಕೆ.ಶಿವಕುಮಾರ ಬಂಧನವನ್ನು ವಿರೋದಿಸಿ ಗುರುವಾರ ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.       ನಮ್ಮ ದೇಶದ ಜನರು ಕಾನೂನು ರೀತಿಯಲ್ಲಿ ಕೆಲಸ ನಿರ್ವಹಣೆ ಮಾಡುವಂತೆ ನರೇಂದ್ರ ಮೋದಿಗೆ ಜನಾದೇಶ ನೀಡಿದ್ದಾರೆ. ಆದರೇ ಇಲಾಖೆಗಳ ಮೂಲಕ ಪ್ರತಿಪಕ್ಷದ ನಾಯಕರನ್ನು ಹತ್ತೀಕ್ಕುವ ಕೆಲಸದಲ್ಲಿ ತೊಡಗಿದೆ. ದೇಶದ ಆರ್ಥಿಕತೆ ಕೆಳಮಟ್ಟಕ್ಕೆ ಇಳಿದಿದೆ. ಲಕ್ಷಾಂತರ ಜನರು ಇರುವ ಉದ್ಯೋಗ ಇಲ್ಲದೇ ನಿರುದ್ಯೋಗಿಗಳಾಗಿ ತಿರುಗಾಡುತ್ತೀದ್ದಾರೆ ಎಂದು ಆರೋಪ ಮಾಡಿದರು.       ದೇಶದ ಮಾಜಿ ಹಣಕಾಸು ಸಚಿವ ಚಿಂದಂಬರ ಮತ್ತು ರಾಜ್ಯದ ಭವಿಷ್ಯದ…

Read More

ತುರುವೇಕೆರೆ:        ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿನ ಕಾಂಕ್ರಿಟ್ ರಸ್ತೆ ಕಾಮಗಾರಿ ವಿಚಾರದಲ್ಲಿ ಶಾಸಕ ಮಸಾಲ ಜಯರಾಮ್ ಮತ್ತು ಬಿಜೆಪಿ ಮುಖಂಡರು ಹಾಗೂ ತಾಲೂಕು ಪಂಚಾಯಿತಿ ಜೆಡಿಎಸ್ ಸದಸ್ಯ ರವಿ ಮತ್ತು ಸ್ಥಳೀಯ ಜೆಡಿಎಸ್ ಮುಖಂಡರ ನಡುವೆ ಮಾತಿನ ಚಕಮಕಿ ಗುರುವಾರ ನಡೆದಿದೆ.       ತಾಲೂಕಿನ ಕುರುಬರಹಳ್ಳಿ ಗ್ರಾಮಕ್ಕೆ ಮುಖ್ಯಮಂತ್ರಿ ಗ್ರಾಮ ವಿಕಾಸ್ ಯೋಜನೆಯಡಿ ಮುಂಜೂರಾಗಿರುವ ಕಾಂಕ್ರಿಟ್ ರಸ್ತೆ ಹಾಗೂ ಭೂಮಿಪೂಜೆ ಕಾಮಗಾರಿಗೆ ಶಾಸಕ ಮಸಾಲೆಜಯರಾಮ್ ಇತ್ತೀಚೆಗಷ್ಟೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದ್ದರು ಅದರಂತೆ ಸ್ಥಳೀಯ ಗುತ್ತಿಗೆದಾರರು ಕಾಮಗಾರಿ ಪ್ರಾರಂಬಿಸಿದ್ದರು. ಚರಂಡಿ ಮಾಡುವ ವಿಚಾರದಲ್ಲಿ ಸ್ಥಳಿಯ ಗ್ರಾಮಸ್ಥರು ಸಹಕರಿಸದೆ ರಾಜಕೀಯ ತಿರುವು ಪಡೆದು ಕಾಮಗಾರಿಯನ್ನು ನಿಲ್ಲಿಸಲಾಗಿತ್ತು.       ಈ ವಿಚಾರ ತಿಳಿದ ಶಾಸಕ ಮಸಾಲ ಜಯರಾಮ್ ಗುರುವಾರ ಸಂಜೆ ಸ್ಥಳ ಪರಿಶೀಲನಗೆ ಖುದ್ದು ಗ್ರಾಮಕ್ಕೆ ಆಗಮಿಸಿದ್ದಾಗ ತಾಲೂಕು ಪಂಚಾಯ್ತಿ ಸದಸ್ಯ ರವಿ ಹಾಗೂ ಜೆಡಿಎಸ್ ಬೆಂಬಲಿಗರು ಗ್ರಾಮದಲ್ಲಿ ಚರಂಡಿ ಮಾಡಿ ರಸ್ತ ಕಾಮಗಾರಿ ಮಾಡಿ…

Read More

ತುಮಕೂರು:       ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ವಿದ್ಯಾರ್ಥಿ ನಿಲಯಗಳಲ್ಲಿ ಶುಚಿತ್ವ ಕಾಪಾಡಬೇಕು ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಕಲ್ಯಾಣ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡುವುದರೊಂದಿಗೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಶುದ್ಧ ಕುಡಿಯುವ ನೀರು, ಆಟೋಟಗಳ ಬಗ್ಗೆ ಆದ್ಯತೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.       ಸಮಾಜ ಕಲ್ಯಾಣ ಇಲಾಖೆ ಮತ್ತು ಇನ್ನುಳಿದ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ವೇತನ ಪಾವತಿಯಾಗಿರುವ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ಕೈಗೊಂಡ ಅವರು ಇಲಾಖೆಗಳಲ್ಲಿ ಮಂಜೂರಾದ ಹುದ್ದೆಗಳಿಗೆ ತಪ್ಪದೇ ನಿಗಧಿತ ಅವಧಿಯೊಳಗೆ ವೇತನವನ್ನು ಪಾವತಿಸಬೇಕು. ಮಂಜೂರಾದ ಹುದ್ದೆಗಳಿಗೆ ಹೆಚ್ಚುವರಿಯಾಗಿ ನೇಮಕ ಮಾಡಿಕೊಂಡಿದ್ದಲ್ಲಿ ವಿವರಗಳನ್ನು ಜಿಲ್ಲಾ ಪಂಚಾಯಿತಿಗೆ…

Read More

 ತುಮಕೂರು:       ಜಿಲ್ಲೆಯ ತುಮಕೂರು ತಾಲ್ಲೂಕು ಹೆಬ್ಬೂರು ವ್ಯಾಪ್ತಿ ಡಿ 23-ಅರಿಯೂರು, ಡಿ 24-ಬೊಮ್ಮನಹಳ್ಳಿ ಹಾಗೂ 153 ಎಸ್ಕೇಪ್‍ವಾಲ್ ಡಿ.ಎಸ್.ಪಾಳ್ಯ, ಕಣಕುಪ್ಪೆ ಗೇಟ್‍ವಾಲ್ ಬಳಿ ಹಾದು ಹೋಗಿರುವ ಹೇಮಾವತಿ ಚಾನೆಲ್ ಗೇಟ್‍ಗಳ ಸುತ್ತಮುತ್ತ 100 ಮೀಟರ್ ಪ್ರದೇಶದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತುಮಕೂರು ತಾಲೂಕಿನ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಆರ್. ಯೋಗಾನಂದ ಆದೇಶ ಹೊರಡಿಸಿದ್ದಾರೆ.       ಕುಡಿಯುವ ನೀರಿಗಾಗಿ ಹರಿಸುತ್ತಿರುವ ಹೇಮಾವತಿ ನೀರನ್ನು ಏಕಾಏಕಿ ರೈತರು ಜಮಾಯಿಸಿ, ಕೆರೆಗಳಿಗೆ ತುಂಬಿಸಿಕೊಳ್ಳುವ ಸಲುವಾಗಿ ನಾಲೆಯ ತೂಬುಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಹೇಮಾವತಿ ನಾಲೆಯ ಗೇಟ್‍ಗಳನ್ನು ಜಖಂಗೊಳಿಸುವ ಸಂಭವವಿರುವುದರಿಂದ ಈ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.       ನಿಷೇಧಾಜ್ಞೆಯು ಈಗಾಗಲೇ ಜಾರಿಯಲ್ಲಿದ್ದು, ಸೆಪ್ಟೆಂಬರ್ 10ರ ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಿಷೇಧಾವಧಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು. ಯಾವುದೇ ರೀತಿಯ ಅಪಾಯಕಾರಿಯಾದ…

Read More

ಕೊರಟಗೆರೆ:       ನಮ್ಮದೇಶದ ಶಿಕ್ಷಣ ಕ್ಷೇತ್ರದ ನೀತಿಗಳು ಪ್ರಾಥಮಿಕ ಶಾಲಾ ಶಿಕ್ಷಣವನ್ನು ಅಪಾಯದಅಂಚಿಗೆತಲುಪುವಂತೆ ಮಾಡಿದೆಎಂದು ಮಾಜಿಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ವಿಷಾದ ವ್ಯಕ್ತಪಡಿಸಿದರು.       ಪಟ್ಟಣದ ಮಾರುತಿಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದಡಾ.ಎಸ್.ರಾಧಕೃಷ್ಣನ್‍ರವರ 132ನೇ ಜಯಂತಿಯ ಪ್ರಯುಕ್ತ ಗುರುವಾರ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.       ಸರಕಾರ ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದೇ ಸರಕಾರಿ ಶಾಲೆಗಳ ಅವನತಿಗೆ ಮೂಲ ಕಾರಣವಾಗಿದೆ. ಖಾಸಗಿ ಶಾಲೆಗಳ ವಾಹನಗಳು ಮನೆಯ ಬಾಗಿಲಿಗೆ ಬಂದು ಸರಕಾರಿ ಶಾಲೆಗಳು ಮುಚ್ಚುತ್ತೀವೆ. ಸರಕಾರಿ ಶಾಲೆಗಳಲ್ಲಿ ಉತ್ತಮಗುಣಮಟ್ಟದ ಶಿಕ್ಷಣ ಕಲ್ಪಿಸಿದರೇ ಖಾಸಗಿ ಶಾಲೆಗಳ ಅವಶ್ಯಕತೆಯೇ ಬರುವುದಿಲ್ಲ ಎಂದು ತಿಳಿಸಿದರು.       ತಂತ್ರಜ್ಞಾನದಲ್ಲಿಇಡೀ ವಿಶ್ವಕ್ಕೆ ಭಾರತಕೊಡುಗೆಅಪಾರವಾಗಿದೆ. ನಮ್ಮರಾಜಧಾನಿ ಬೆಂಗಳೂರಿನಲ್ಲಿ ದೇಶದ ಶೇ.60ರಷ್ಟು ಸಾಪ್ಟ್‍ವೇರ್ ಕಂಪನಿಗಳೇ ತಂತ್ರಾಂಶತಯಾರು ಮಾಡುತ್ತೀವೆ. ಇದರಿಂದದೇಶ ಮತ್ತುರಾಜ್ಯಕ್ಕೆ ನೂರಾರುಕೋಟಿ ಲಾಭ ಬರುತ್ತೀದೆ. ಶಿಕ್ಷಣ ಎಂಬುದು ಮುಂದಿನ ಪೀಳಿಗೆಯನ್ನು ಮಾಡಲಿದೆ. ಇದರ ಗುರುತ್ತರ ಜವಾಬ್ದಾರಿ ಮತ್ತುಕರ್ತವ್ಯ ಶಿಕ್ಷಕರದಾಗಿದೆ ಎಂದು ಹೇಳಿದರು.…

Read More

ಕೊರಟಗೆರೆ:       ಒಂಟಿ ಮಹಿಳೆ ಮನೆಯಲ್ಲಿ ದರೋಡೆ ಮಾಡಿದ್ಧ ಆರೋಪಿಗಳನ್ನ ಕೊರಟಗೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.       ಕೊರಟಗೆರೆ ತಾಲ್ಲೂಕಿನ ಅರಸಾಪುರ ಗ್ರಾಮದಲ್ಲಿ ಆಗಸ್ಟ್ 12 ರಂದು ಒಂಟಿ ಮನೆಯನ್ನೇ ಟಾರ್ಗೆಟ್ ಮಾಡಿ ಹೊಂಚು ಹಾಕಿ ಮನೆಯಲ್ಲಿದ್ದ ಓರ್ವ ಮಹಿಳೆಯ ಕೈಕಾಲು ಹಗ್ಗದಿಂದ ಕಟ್ಟಿ ಮನೆಯಲ್ಲಿದ್ದ ಚಿನ್ನಾಭರಣ. ಎರಡು ಮೊಬೈಲ್‍ಗಳನ್ನು ದೋಚಿ ಪರಾರಿಯಾಗಿದ್ದರು..ಘಟನಾ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕೊರಟಗೆರೆ ಪೊಲೀಸರು ಬಲೆಬೀಸಿದ್ದರು.       ತುಮಕೂರು ಎಸ್ಪಿ ಡಾ ಕೋನ ವಂಶಿಕೃಶಷ್ಣ ಘಟನಾ ಸ್ಧಳಕ್ಕೆ ಭೇಟಿ ನೀಡಿ ಎಎಸ್ಪಿ ಉದೇಶ್, ಮಧುಗಿರಿ ಡಿವೈಎಸ್ಪಿ ಧರಣೇಶ್ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಏ ಎಫ್.ಕೆ ನದಾಫ್, ಪಿಎಸೈ ಮಂಜುನಾಥ್ ಬಿ.ಸಿ.ಹಾಗೂ ಸಿಬ್ಬಂದಿಗಳಾದ ವೆಂಕಟೇಶ್. ಮೋಹನ್ ದೊಡ್ಡಲಿಂಗಯ್ಯ.ಲೋಹಿತ್, ಶಿವಪ್ರಸಾದ್ ಹಾಗೂ ತಾಂತ್ರಿಕ ಸಿಬ್ಬಂದಿ ರಮೇಶ್ ಸೇರಿದ ತಂಡ ತಮಿಳುನಾಡಿನಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಚಾಪರಪಲ್ಲಿ…

Read More

ತುಮಕೂರು:       60 ವರ್ಷ ತುಂಬಿದ ರೈತರಿಗೆ ಕನಿಷ್ಠ ಪಿಂಚಣಿ, ಕೃಷಿ ಭೂಮಿಯಲ್ಲಿ ಅಂರ್ತಜಲ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ತುಮಕೂರು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.       ರೈತರ ಹಕ್ಕೋತ್ತಾಯ ದಿನದ ಅಂಗವಾಗಿ ಟೌನ್‍ಹಾಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸ ಲಾಯಿತು.       ಈ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಗಿರೀಶ್, ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ತೆಂಗು ಮತ್ತು ಅಡಿಕೆ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದು, ನಷ್ಟಕ್ಕೆ ಒಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ರೈತರಿಗೆ ವೈಜ್ಞಾನಿಕವಾಗಿ ಫಸಲ್ ಭೀಮಾ ಯೋಜನೆಯನ್ನು ಜಾರಿ ಮಾಡ ಬೇಕೆಂದು ಒತ್ತಾಯಿಸಿದರು.       ಜಿಲ್ಲೆಯ ನೀರಾವರಿ ಯೋಜನೆಗಳಾದ ಹೇಮಾವತಿ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು…

Read More

ತುಮಕೂರು:       ವಿದ್ಯಾರ್ಥಿಗಳಿಗೆ ಅಕ್ಷರದೊಂದಿಗೆ ಬದುಕಿನ ಮೌಲ್ಯಗಳ ಬಗ್ಗೆ ಅರಿವನ್ನು ಮೂಡಿಸುವವರೇ ನಿಜವಾದ ಗುರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.          ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ(ದಕ್ಷಿಣ)ಯ ಸಹಯೋಗದಲ್ಲಿಂದು ನಗರದ ಅಮಾನಿಕೆರೆಯ ಗಾಜಿನಮನೆಯಲ್ಲಿ ಏರ್ಪಡಿಸಿದ್ದ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ 132ನೇ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಶಿಕ್ಷಣಕ್ಕೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಶಕ್ತಿಯಿರುತ್ತದೆ. ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಕ್ಕಳು ಹಿರಿಯರ ಹಾಗೂ ಶಿಕ್ಷಕರ ನಡೆ-ನುಡಿಗಳನ್ನು ಅನುಸರಿಸುವ ಮನೋಭಾವ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಬುದ್ಧಿ ಹೇಳುವ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಮಗು ತನ್ನ ಜಗತ್ತಿನಲ್ಲಿ ಶಿಕ್ಷಕನೇ “ಸೂಪರ್ ಮ್ಯಾನ್”. ಗುರುವಿಗೆ ತಿಳಿಯದಿರುವ ವಿಷಯವೇ ಇಲ್ಲ ಎಂದು ಭಾವಿಸಿಕೊಂಡಿರುತ್ತದೆ. ಪ್ರತಿ ಮಗುವಿನ ಉತ್ತಮ ಭವಿಷ್ಯದ ಜೀವನವನ್ನು ರೂಪಿಸುವ ಶಕ್ತಿ…

Read More