Author: News Desk Benkiyabale

 ತುಮಕೂರು:       ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ ಲಾಲ್ ನೆಹರು ದೇಶದ ಅಭಿವೃದ್ದಿ ದೃಷ್ಟಿಯಿಂದ ಜಾರಿಗೆ ತಂದ ಪಂಚವಾರ್ಷಿಕ ಯೋಜನೆಗಳು, ಯೋಜನಾ ಆಯೋಗವನ್ನ ಇಂದಿನ ಪ್ರಧಾನಿ ನರೇಂದ್ರ ಮೋದಿ ಬದಲಾಯಿಸುವ ಮೂಲಕ ದೇಶವನ್ನು ಅದೋಗತಿಯತ್ತ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.       ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪಂಡಿತ ಜವಹರಲಾಲ್ ನೆಹರು ಅವರ 129ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ದೇಶದ ಸರ್ವತೋಮುಖ ಅಭಿವೃದ್ದಿಗಾಗಿ ಮುಂದಿನ ಐದು ವರ್ಷಗಳ ಕಾಲ ಯಾವ ವಿಷಯಗಳಿಗೆ ಅದ್ಯತೆ ನೀಡಬೇಕೆಂದು ನಿರ್ಧರಿಸುವ ಪಂಚವಾರ್ಷಿಕ ಯೋಜನೆಗಳು ಹಾಗೂ ಅದನ್ನು ನಿರ್ಧರಿಸುವ ಯೋಜನಾ ಆಯೋಗವನ್ನು ನೀತಿ ಆಯೋಗವನ್ನು ಬದಲಿಸಿದ ಪರಿಣಾಮ, ದೇಶದ ಆರ್ಥಿಕ ಬೆಳವಣಿಗೆ ಕುಂಠಿತಗೊಂಡು,ಅದೋಗತ್ತಿಯತ್ತ ಸಾಗುತ್ತಿದೆ ಎಂದರು.       ಸ್ವಾತಂತ್ರ ಪಡೆಯುವ ಉದ್ದೇಶದಿಂದ ರಚನೆಯಾದ ಕಾಂಗ್ರೆಸ್,ಸ್ವಾತಂತ್ರ ನಂತರದಲ್ಲಿ ರಾಜಕೀಯ ಪಕ್ಷವಾಗಿ ಪರಿವರ್ತನೆ ಯಾಗಿದ್ದು ಇತಿಹಾಸ. ಕಳೆದ 70  ವರ್ಷಗಳಲ್ಲಿ ಕಾಂಗ್ರೆಸ್ ರಾಷ್ಟ್ರಕ್ಕೆ…

Read More

ಬೆಂಗಳೂರು:      ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರಿಗೆ ನಗರದ 1ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.       ಆ್ಯಂಬಿಡೆಂಟ್ ಕಂಪನಿಯ ಮಾಲೀಕ ಸೈಯದ್ ಅಹಮದ್ ಫರೀದ್ ನಿಂದ 57 ಕೆಜಿ ಚಿನ್ನದ ಗಟ್ಟಿ ಪಡೆದುಕೊಂಡ ಆರೋಪದ ಪ್ರಕರಣದಲ್ಲಿ ಜೈಲು ಸೇರಿದ್ದ ಗಾಲಿ ಜನಾರ್ದನ ರೆಡ್ಡಿಗೆ  ಬಿಗ್ ರಿಲೀಫ್ ಸಿಕ್ಕಂತಾಗಿದೆ.       ಇನ್ನು ಪ್ರಕರಣ ಸಂಬಂಧ ಸಿಸಿಬಿ ಪೋಲಿಸರು ನ್ಯಾಯಾಲಯದ ಮುಂದೆ ಒಂದು ವೇಳೆ ಜಾಮೀನು ನೀಡಿದರೆ ರೆಡ್ಡಿಯವರು ಸಾಕ್ಷಿಗಳನ್ನು ನಾಶಪಡಿಸಬಹುದು ಹೀಗಾಗಿ ಜಾಮೀನು ನೀಡಬೇಡಿ ಅಂತ ಮನವಿ ಮಾಡಿದ್ದರು, ಆದರೆ ನ್ಯಾಯಾಲಯದ ಸಿಸಿಬಿಯ ಮನವಿಯನ್ನು ತಿರಸ್ಕರಿಸಿ ಜನಾರ್ಧನ ರೆಡ್ಡಿ ಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.        ಇಬ್ಬರ ಶೂರಿಟಿ ಮತ್ತು ಒಂದು ಲಕ್ಷ ರೂ. ಬಾಂಡ್​ನೊಂದಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ನಾಲ್ಕು ದಿನಗಳ ಕಾರಾಗೃಹ ವಾಸದಿಂದ ರೆಡ್ಡಿ ಹೊರಬಂದಿದ್ದಾರೆ.  

Read More

ಮಧುಗಿರಿ :       ತಾಲೂಕಿನಲ್ಲಿ ಬೇಸಿಗೆ ಬಹುದೂರವಿದ್ದರೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವ ಘಟನೆ ತಾಲೂಕಿನ ಮುದ್ದಯ್ಯನಪಾಳ್ಯದಲ್ಲಿ ಕಳೆದ 2 ತಿಂಗಳುಗಳಿಂದ ಸಾರ್ವಜನಿಕರ ಪಾಡು ಹೇಳದ್ದಾಗಿದೆ.       ಈ ಗ್ರಾಮದಲ್ಲಿ ಕಳೆದ 2 ತಿಂಗಳಿಂದ ನೀರಿಗಾಗಿ ಟ್ಯಾಂಕರ್‍ಗಳ ಮೂಲಕ ಸರಭರಾಜು ಮಾಡಲಾಗುತ್ತಿತ್ತು. ಇದ್ದ 1 ಕೊಳವೆ ಬಾವಿ ಭತ್ತಿಹೋಗಿರುವುದರಿಂದ ನೀರಿಗಾಗಿ ಖಾಸಗಿಯವರ ಮೊರೆಹೋಗಿದ್ದಾರೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ಸಿಗುವ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮುಂಭಾಗವಿರುವ ಮುನ್ನಾಬಾಯಿ ಎಂಬುವವರಿಗೆ ಸೇರಿರುವ ಕೊಳವೆ ಬಾವಿಯಿಂದ ಗಂಟೆಗೆ ಇಷ್ಟು ಎಂದು ದರ ನಿಗದಿ ಮಾಡಿ ಬಿಜವಾರ ಗ್ರಾ.ಪಂ ಯವರು ನೀರನ್ನು ಕಳೆದೆರಡು ದಿನಗಳಿಂದ ನೀರಿನ ಅನುಕೂಲ ಮಾಡಿಕೊಡಲಾಗಿದೆ.        ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಕೊಡಿಗೇನಹಳ್ಳಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಖಾಲಿ ಕೊಡಗಳೊಂದಿಗೆ ಗ್ರಾಮಸ್ಥರು ರಸ್ತೆ ತಡೆ ನಡೆಸಿದಾಗ ಗ್ರಾಮದ 7 ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಾಗಿದ್ದರಿಂದ, ನೀರಿಗಾಗಿ ಪ್ರತಿಭಟನೆ ಮಾಡಿದರೆ ಜೈಲು…

Read More

ಬೆಂಗಳೂರು :       ಭತ್ತದ ಬೆಲೆ ಕುಸಿತದಿಂದ ರೈತರ ಸಂಕಷ್ಟಕ್ಕೆ ಧಾವಿಸಿರುವ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಭತ್ತಕ್ಕೆ 1600 ರೂ. ನಂತೆ ಖರೀದಿಸಲು ನಿರ್ಧರಿಸಿ, ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.       ಈ ಸಂಬಂಧ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಿ ತಕ್ಷಣವೇ ಮಧ್ಯಪ್ರವೇಶಿಸಿ ಪ್ರತಿಕ್ವಿಂಟಾಲ್ ಭತ್ತಕ್ಕೆ 1600 ರೂ.ನಂತೆ ಖರೀದಿಸುವಂತೆ ಆದೇಶ ನೀಡಿದರು.       ರೈತರ ಸಂಕಷ್ಟದ ಹಿನ್ನೆಲೆಯಲ್ಲೆ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಅವರಿಗೆ, ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ನಾಡಗೌಡ ವೆಂಕಟರಾವ್ ಅವರು ಭತ್ತದ ಬೆಳೆಯ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು. ಇದಕ್ಕೆ ಸ್ಪಂದಿಸಿದ ಸಿಎಂ ಕುಮಾರಸ್ವಾಮಿ ಅವರು ಈ ಆದೇಶ ನೀಡಿದ್ದಾರೆ.

Read More

ದೆಹಲಿ:      ಅನಾರೋಗ್ಯ ಕಾರಣದಿಂದ ಅಕಾಲಿಕ ಮರಣ ಹೊಂದಿದ ಕೇಂದ್ರ ಸಚಿವ ಅನಂತ್​ ಕುಮಾರ್​ ಅವರು ನಿರ್ವಹಿಸುತ್ತಿದ್ದ ಒಂದು ಖಾತೆಯನ್ನು ಡಿ.ವಿ.ಸದಾನಂದ ಗೌಡರಿಗೆ ಹಂಚಿಕೆ ಮಾಡಲಾಗಿದೆ. ​      ಈಗಾಗಲೇ, ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನಿರ್ವಹಿಸುತ್ತಿದ್ದ ಸಂಸದ ಡಿ. ವಿ ಸದಾನಂದ ಗೌಡರಿಗೆ ಹೆಚ್ಚುವರಿಯಾಗಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ.       ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್‌ ತೋಮರ್‌ಗೆ ಸಂಸದೀಯ ವ್ಯವಹಾರಗಳ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ.       ಕೇಂದ್ರ ಸಚಿವರಾಗಿದ್ದಾಗ ಅನಂತ್​ ಕುಮಾರ್​ ರಾಸಾಯನಿಕ, ರಸಗೊಬ್ಬರ ಖಾತೆ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ನಿಭಾಯಿಸುತ್ತಿದ್ದರು. ಕೇಂದ್ರ ಸಂಪುಟ ಸಂತಾಪ :       ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್‌ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ತೀವ್ರ ಶೋಕ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ 2 ನಿಮಿಷ ಮೌನ ಆಚರಿಸಲಾಯಿತು.…

Read More

ಮಧುಗಿರಿ:       ಸ್ಪರ್ಧೆಗಳು ಮಕ್ಕಳ ಜ್ಞಾನ ವಿಕಾಸಕ್ಕೆ ಮತ್ತು ಸುಪ್ತ ಪ್ರತಿಭೆ ಹೊರ ಸೂಸಲು ಉತ್ತಮ ವೇದಿಕೆ ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನರಸಿಂಹಮೂರ್ತಿ ತಿಳಿಸಿದರು. ಪಟ್ಟಣದ ನಿವೇದಿತಾ ಪಬ್ಲಿಕ್ ಶಾಲಾ ಆವರಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಆಯೋಜಿಸಿದ್ದ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಭಗವದ್ಗೀತೆ ಇಡೀ ಮಾನವ ಕುಲಕೋಟಿಗೆ ಮಾರ್ಗದರ್ಶನ, ಅನುಕಂಪ ಮತ್ತು ಪ್ರೀತಿ ತೋರುವುದೇ ನಿಜವಾದ ಧರ್ಮ ಎಂದು ಸಾರುತ್ತದೆ ಎಂದರು.       ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ ಮಾತನಾಡಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿರಂತರವಾಗಿ ನಡೆಯುವ ನಿತ್ಯೋತ್ಸವವಾಗಬೇಕು, ಈ ನಿಟ್ಟಿನಲ್ಲಿ ಮಹಿಳಾ ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ವಾರಕ್ಕೊಮ್ಮೆ ಶಾಲಾ ಕಾಲೇಜುಗಳಲ್ಲಿ ನಾಡುನುಡಿಗೆ ಸಂಬಂಧಿಸಿದ ವಿವಿಧ ಸ್ಪರ್ಧೆ ಹಾಗು ಉಪನ್ಯಾಸಗಳನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದರು.       ತಾಲ್ಲೂಕು ಕ.ಸಾ.ಪ ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ ಮಾತನಾಡಿ…

Read More

 ಚಿಕ್ಕನಾಯಕನಹಳ್ಳಿ:        ಕಿಬ್ಬನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 11.11.2018 ರ ರಾತ್ರಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಸೋಮನಹಳ್ಳಿ ಗ್ರಾಮದ ಗಂಗಾಧರಯ್ಯನನ್ನು ಯಾರೋ ಹತ್ಯೆ ಮಾಡಿ, ಶವವನ್ನು ಕಿಬ್ಬನಹಳ್ಳಿ ಹೋಬಳಿಯ ಅಯ್ಯನಪಾಳ್ಯದ ರಸ್ತೆಯ ಬದಿಯಲ್ಲಿ ತಂದುಹಾಕಿರುವ ಕುರಿತು ಮೃತ ಗಂಗಾಧರಯ್ಯನ ಅಣ್ಣನ ಮಗ ಸಂದೀಪ್ ಕಿಬ್ಬನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದರ ಸಂಬಂಧ ಪ್ರಕರಣದ ತನಿಖೆಯನ್ನು ನಡೆಸಿದಾಗ, ಕೊಲೆಗೈದ ದುಷ್ಕರ್ಮಿಗಳನ್ನು ಪತ್ತೆ ಮಾಡಲಾಗಿದ್ದು, ಕೊಲೆಗೈದ ಆರೋಪಿಗಳು ಮೃತ ಗಂಗಾಧರಯ್ಯನವರ ಪತ್ನಿ ಶಾಂತಮ್ಮ, ಗುಬ್ಬಿ ತಾಲ್ಲೂಕು ಅಡಗೂರು ಎ.ಎನ್.ಮಂಜುನಾಥ್, ಅಡಗೂರಿನ ಎ.ಹೆಚ್.ಕೃಷ್ಣಪ್ಪ, ತುರುವೇಕೆರೆ ತಾಲ್ಲೂಕಿನ ರಾಮಡಿಹಳ್ಳಿಯ ವಿ.ಜ್ಞಾನೇಶ್ ಎಂಬುವವರು ಹತ್ಯೆಗೈದು ಕಿಬ್ಬನಹಳ್ಳಿ ಪೊಲೀಸ್ ಠಾಣಾ ಸರಹದ್ದಿಗೆ ತಂದು ಹಾಕಿದ್ದಾರೆಂದು ತನಿಖೆಯಲ್ಲಿ ಬಹಿರಂಗಗೊಂಡಿದೆ. https://www.benkiyabale.com/2018/11/12/%E0%B2%86%E0%B2%B8%E0%B3%8D%E0%B2%A4%E0%B2%BF-%E0%B2%B5%E0%B2%BF%E0%B2%9A%E0%B2%BE%E0%B2%B0-%E0%B2%AE%E0%B3%82%E0%B2%B5%E0%B2%B0%E0%B3%81-%E0%B2%B9%E0%B3%86%E0%B2%82%E0%B2%A1%E0%B2%A4%E0%B2%BF/       ಹತ್ಯೆಯಾದ ಗಂಗಾಧರಯ್ಯನಿಗೆ ಮೊದಲ ಪತ್ನಿ ಶಾಂತಮ್ಮಳಿದ್ದರೂ ಸಹಾ ವಿಧವೆಯೊಬ್ಬಳೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದು, ಆಕೆಯನ್ನು ತನ್ನ ಮನೆಯಲ್ಲೇ ತಂದಿಟ್ಟುಕೊಂಡಿದ್ದರ ಹಿನ್ನೆಲೆಯಲ್ಲಿ ಮೊದಲ ಪತ್ನಿ ಶಾಂತಮ್ಮ ತನ್ನ ಗಂಡ ಅನ್ಯಳೊಂದಿಗೆ ಅನೈತಿಕ…

Read More

ತುಮಕೂರು:       ರೈತರು ಸ್ವಾವಲಂಬಿಯಾಗುವ ಮೂಲಕ ಸುಸ್ಥಿರ ಬದುಕು ಕಟ್ಟಿಕೊಂಡು ಆದಾಯದಲ್ಲಿ ದ್ವಿಗುಣ ಪಡೆಯುವಲ್ಲಿ ಮುಂದಾಗಬೇಕು ಎಂದು ಐಡಿಎಫ್ ಸಂಸ್ಥೆಯ ಯೋಜನಾ ನಿರ್ದೇಶಕ ಮು.ಲ ಕೆಂಪೇಗೌಡ ತಿಳಿಸಿದರು.      ತಾಲ್ಲೂಕಿನ ಹೆಬ್ಬೂರು ಹೋಬಳಿ ಹೊನಸಿಗೆರೆ ಗೊಲ್ಲರಹಟ್ಟಿಯಲ್ಲಿ ಐಡಿಎಫ್ ಸಂಸ್ಥೆ ಬೆಂಗಳೂರು, ಸುಪ್ರಜಾ ಫೌಂಡೇಷನ್ ಮತ್ತು ಕೊಲ್ಲಾಪುರದಮ್ಮ ರೈತ ಉತ್ಪಾದಕರ ಕಂಪನಿಯ ಸಂಯುಕ್ತಾಶ್ರಯದಲ್ಲಿ ಪ್ರಗತಿ ರೈತ ವೆಂಕಟೇಶ್ ಜಮೀನಿನಲ್ಲಿ ಏರ್ಪಡಿಸಿದ್ದ ಬಾಳೆ ಕ್ಷೇತ್ರೋತ್ಸವದಲ್ಲಿ ಮಾತನಾಡಿದ ಅವರು, ಸ್ಥಳಿಯ ಸಂಪನ್ಮೂಲ ಬಳಸಿಕೊಂಡು ಮಣ್ಣು ಮತ್ತು ನೀರನ್ನು ಸಂರಕ್ಷಿಸಬೇಕು. ಪ್ರತಿಯೊಬ್ಬ ರೈತರು ಬಾಳೆ ಬೆಳೆಯನ್ನು ಬೆಳೆಯುವಾಗ ಕಿರು ಬೆಳೆಗಳನ್ನು ಬೆಳೆದಾಗ ಬಾಳೆಯಿಂದ ಬರುವ ಸಮಯಕ್ಕೆ ಕಿರು ಬೆಳೆಯಿಂದ ಆದಾಯ ಬರುತ್ತದೆ ಎಂದರು.       ಜೀವನ ಉತ್ತೇಜನಾಧಿಕಾರಿ ಹರ್ಷಿತ ಮಾತನಾಡಿ ರೈತರು ಪ್ರಥಮ ಹಂತದಲ್ಲಿ ತಿಪ್ಪೆಯನ್ನ ರಕ್ಷಣೆ ಮಾಡಿಕೊಂಡು ಕೃಷಿ ಮಾಡುಲು ಮಂದಾಗಬೇಕು ಎಂದರು. ಹೊನಸಿಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರುದ್ರೇಶ್ ಮಾತನಾಡಿ, ಐಡಿಎಫ್ ಸಂಸ್ಥೆಯು ಹಣಕಾಸಿನ ಸೌಲಭ್ಯ…

Read More

ಹುಳಿಯಾರು:        ದೇಶದಲ್ಲಿ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಹಾಗೂ ಡಾ. ಎಂ ಎಸ್ ಸ್ವಾಮಿನಾಥನ್ ವರದಿ ಅನ್ವಯ ಬೆಂಬಲ ಬೆಲೆ ಕಾನೂನು ಹಾಗೂ ಎಲ್ಲಾ ರೈತರು ಮತ್ತು ಕೃಷಿ ಕೂಲಿಕಾರರಿಗೆ ಸಾಲ ಮನ್ನಾ ಮಾಡುವ ಋಣಮುಕ್ತ ಕಾಯಿದೆ ಜಾರಿಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸುವಂತೆ ಒತ್ತಾಯಿಸಿ ರೈತ ಮುಕ್ತಿ ಮಹಾ ಪಾದಯಾತ್ರೆ ಮತ್ತು ಸಮಾವೇಶವನ್ನು ದೆಹಲಿಯ ರಾಮಲೀಲಾ ಮೈದಾನದಲ್ಲಿ ಇದೇ ತಿಂಗಳ 30ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಕೆಂಕೆರೆ ಸತೀಶ್ ತಿಳಿಸಿದರು.       ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಕೆಂಕೆರೆ ಸತೀಶ್ ರೈತರ ಎಲ್ಲ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಸಮನ್ವಯ ಸಮಿತಿವತಿಯಿಂದ 29ರಂದು ಉತ್ತರ ಪ್ರದೇಶದಲ್ಲಿ ಪಾದಯಾತ್ರೆ ಪ್ರಾರಂಭಗೊಂಡು 30ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಅಂದು ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ 400…

Read More

 ತುಮಕೂರು:       ದಿಬ್ಬೂರಿನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣ ಮಾಡಿರುವ ಜಿ+2 ಮನೆಗಳು ಹಂಚಿಕೆಯಾಗಿರುವ ಫಲಾನುಭವಿಗಳು ಸರ್ಕಾರಿ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದಲ್ಲಿ 3 ದಿನಗಳೊಳಗಾಗಿ ತೆರವುಗೊಳಿಸಬೇಕೆಂದು ಪಾಲಿಕೆ ಆಯುಕ್ತ ಮಂಜುನಾಥ ಸ್ವಾಮಿ ತಿಳಿಸಿದ್ದಾರೆ.        ಪಾಲಿಕೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಾದ ಮಂಡಿಪೇಟೆಯ ದೊಡ್ಡ ಚರಂಡಿ, ಶಾಂತಿ ಹೋಟೆಲ್ ಹಿಂಭಾಗ, ಮೀನು ಮಾರುಕಟ್ಟೆ ಪ್ರದೇಶ, ಬೆಳಗುಂಬ ರಸ್ತೆ, ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹಿಂಭಾಗ, ಮಾರಿಯಮ್ಮ ನಗರ ರಸ್ತೆ ಪಕ್ಕದ ಗುಡಿಸಲು ವಾಸಿಗಳು, ಮರಳೂರು ಜನತಾ ಕಾಲೋನಿ ಹೈಟೆನ್ಷನ್ ಕೆಳಗಡೆ ವಾಸಿಸುತ್ತಿರುವವರಿಗೆ ದಿಬ್ಬೂರಿನ ದೇವರಾಜು ಅರಸು ವಸತಿ ಬಡಾವಣೆಯಲ್ಲಿ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಹಾಲಿ ಸರ್ಕಾರಿ ಜಾಗದಲ್ಲಿ ಅನಧಿಕೃತ ಹಾಗೂ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದ ಫಲಾನುಭವಿಗಳು ಗುಡಿಸಲುಗಳನ್ನು ತೆರವು ಮಾಡಿ ದಿಬ್ಬೂರಿಗೆ ಸ್ಥಳಾಂತರಗೊಳ್ಳಲು ತಿಳಿಸಲಾಗಿತ್ತು. ಕೆಲವರು ಈವರೆಗೂ ಗುಡಿಸಲುಗಳನ್ನು ಖಾಲಿ ಮಾಡಿರುವುದಿಲ್ಲ. ಇನ್ನೂ ಕೆಲವರು ಗುಡಿಸಲು ಖಾಲಿ ಮಾಡಿ ದಿಬ್ಬೂರಿಗೆ ಸ್ಥಳಾಂತರಗೊಂಡು ಅವರ ಮಕ್ಕಳು…

Read More