ತುಮಕೂರು: ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಿಪ್ಪೇಶ ಹಾಗೂ ಲಕ್ಷ್ಮಣ್ ಎಂಬುವವರ ಮೇಲೆ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದ ರಂಗಪ್ಪ, ಭೀಮಣ್ಣ ಬಿನ್ ನರಸಪ್ಪ ಹಾಗೂ ಭೀಮಣ್ಣ ಬಿನ್ ಯಲ್ಲಪ್ಪ ಎಂಬ ಮೂರು ಮಂದಿ ಆರೋಪಿಗಳಿಗೆ 4 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 15000 ರೂ.ಗಳ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತೀರ್ಪು ನೀಡಿದ್ದಾರೆ. ಪ್ರಕರಣದ ಹಿನ್ನಲೆ:- ಮೂವರು ಆರೋಪಿಗಳು ಸೇರಿ 2018ರ ಮಾರ್ಚ್ 10ರಂದು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿ ರಿಂಗ್ ರಸ್ತೆಯಲ್ಲಿರುವ ಡಿ.ಎ.ಟಿ ಮಸೀದಿ ಬಳಿ ತಿಪ್ಪೇಶ ಮತ್ತು ಲಕ್ಷ್ಮಣ ಎಂಬುವವರನ್ನು ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಮಾಡಬೇಕೆಂಬ ಉದ್ದೇಶದಿಂದ ಇಬ್ಬರಿಗೂ ಇಟ್ಟಿಗೆಯಿಂದ ಹಣೆ, ಕೆನ್ನೆ, ಹೊಟ್ಟೆ, ಎದೆ, ಕಿವಿ ಭಾಗಕ್ಕೆ ಹೊಡೆದು ತೀವ್ರ ಸ್ವರೂಪದ ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುವುದು ತನಿಖೆಯಿಂದ ಸಾಬೀತಾಗಿದೆ. ಆರೋಪ ರುಜುವಾತಾದ ಕಾರಣ ರಂಗಣ್ಣ, ಭೀಮಣ್ಣ ಬಿನ್ ನರಸಪ್ಪ, ಭೀಮಣ್ಣ ಬಿನ್ ಯಲ್ಲಪ್ಪ ಅವರಿಗೆ…
Author: News Desk Benkiyabale
ತುಮಕೂರು: ಶ್ರೀಗಂಧ ಮರಗಳನ್ನು ಅಕ್ರಮವಾಗಿ ಕಡಿದು ಸ್ವಾಧೀನ ಪಡಿಸಿಕೊಂಡಿದ್ದ ಆರೋಪದ ಮೇಲೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಲಕ್ಷ್ಮಿ ಎಂಬ ಮಹಿಳೆಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ.ಗಳ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತೀರ್ಪು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ:- ಗುಬ್ಬಿ ಅರಣ್ಯ ವಲಯದ ವ್ಯಾಪ್ತಿಯೊಳಗಿನ ದೊಡ್ಡಗುಣಿ ಅನುಭಾಗದ ಮಾರಶೆಟ್ಟಿಹಳ್ಳಿ ರಾಜ್ಯ ಮೀಸಲು ಅರಣ್ಯ ಪ್ರದೇಶದಲ್ಲಿ ಹಂಡನಹಳ್ಳಿ ಗುಡ್ಡದ ತಪ್ಪಲಿನಲ್ಲಿ ಸುಮಾರು 17 ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸ್ವಾಧೀನ ಪಡಿಸಿಕೊಂಡಿದ್ದರೆಂಬ ಖಚಿತ ಮಾಹಿತಿ ಮೇರೆಗೆ ದೊಡ್ಡಗುಣಿ ಉಪವಲಯ ಅರಣ್ಯಾಧಿಕಾರಿ ಬಸವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಆರೋಪಿ ಲಕ್ಷ್ಮಿ ಬಳಿ ಶ್ರೀಗಂಧದ ಮರಗಳಿರುವುದು ಸಾಬೀತಾಗಿದೆ. ಆರೋಪಿ ಲಕ್ಷ್ಮಿ ಬಳಿಯಿದ್ದ ಶ್ರೀಗಂಧದ ಮರಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ. ಅರಣ್ಯ ಅಧಿಕಾರಿ ಆರ್.ರಮೇಶ್ ಅವರು ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರದ…
ತುಮಕೂರು: ಮಾಧ್ಯಮ ಕ್ಷೇತ್ರದ ಒಟ್ಟಾರೆ ಭವಿಷ್ಯ ಡಿಜಿಟಲ್ ಮಾಧ್ಯಮಗಳಲ್ಲಿ ಅಡಗಿದೆ ಎಂದು ದುಬೈಯ ಹೈಯರ್ ಕಾಲೇಜಸ್ ಆಫ್ ಟೆಕ್ನಾಲಜಿಯ ಅಪ್ಲೈಡ್ ಮೀಡಿಯ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಎಂ. ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಶುಕ್ರವಾರ ಹಮ್ಮಿಕೊಂಡಿದ್ದ ‘ಮಾಧ್ಯಮರಂಗ: ಭವಿಷ್ಯದಲ್ಲೇನಿದೆ?’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಂಪ್ರದಾಯಿಕ ಮಾಧ್ಯಮಗಳ ಜಾಗವನ್ನು ಸಾಮಾಜಿಕ ಮಾಧ್ಯಮಗಳು ಆವರಿಸಿಕೊಳ್ಳುತ್ತಿವೆ. ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂದು ಇದರರ್ಥವಲ್ಲ. ಭವಿಷ್ಯದಲ್ಲಿ ಅದರ ಸ್ವರೂಪ ಬದಲಾಗಲಿದೆ. ವಾಸ್ತವವಾಗಿ ಸ್ಥಳೀಯ ಪತ್ರಿಕೆಗಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದರು. ಕಾರ್ಪೋರೇಟ್ ಕಂಪೆನಿಗಳು ತಮ್ಮ ಜಾಹೀರಾತು ಮೊತ್ತದ ಶೇ. 45 ಪಾಲನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರಕ್ಕಾಗಿ ಬಳಸಲಿವೆ. ಸೋಶಿಯಲ್ ಮೀಡಿಯಾ ಮ್ಯಾನೇಜರ್ ಎಂಬುದು ಮುಂದಿನ ಕೆಲವೇ ವರ್ಷಗಳಲ್ಲಿ ಪ್ರತಿಷ್ಠಿತ ಹುದ್ದೆಯಾಗಲಿದೆ ಎಂದು ಪ್ರತಿಪಾದಿಸಿದರು. 2000ದಲ್ಲಿ ಭಾರತದಲ್ಲಿ…
ಶಿರಾ : ನಗರದ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಸೌಲಭ್ಯವಿಲ್ಲವೆಂದು ಆರೋಪಿಸಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸಾರಿಗೆ ಬಸ್ಸನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಕಳ್ಳಂಬೆಳ್ಳ ಗ್ರಾಮದ ಗೇಟ್‍ನಲ್ಲಿ ನಡೆದಿದೆ. ಕಳ್ಳಂಬೆಳ್ಳ ಹೋಬಳಿಯ ಬೆಂಚೆ, ಕಳ್ಳಂಬೆಳ್ಳ ಗ್ರಾಮ, ಗೋಪಾಲದೇವರಹಳ್ಳಿ, ದೊಡ್ಡ ಅಗ್ರಹಾರ, ಚಿಕ್ಕ ಅಗ್ರಹಾರ, ಬಟ್ಟಿಗಾನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ವಿದ್ಯಾರ್ಥಿಗಳು ಶಿರಾ ನಗರದ ಶಾಲಾ-ಕಾಲೇಜುಗಳಿಗೆ ಬರಬೇಕಿದ್ದು, ಬೆಳಗ್ಗೆ ಕೇವಲ ಒಂದು ಸರ್ಕಾರಿ ಬಸ್ ಬಿಟ್ಟರೆ ಇನ್ನಾವುದೇ ಸರ್ಕಾರಿ ಬಸ್‍ಗಳನ್ನು ಈ ರಸ್ತೆಯ ಮೂಲಕ ಚಲಿಸಲು ಅವಕಾಶ ಕಲ್ಪಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಕಳ್ಳಂಬೆಳ್ಳ ಗ್ರಾಮದ ಗೇಟ್‍ನಲ್ಲಿ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸ್‍ನ್ನು ಅಡ್ಡಗಟ್ಟಿದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸದ ಹೊರತು ಬಸ್ಸನ್ನು ಬಿಡುವುದಿಲ್ಲ ಎಂದು ಹಠ ಹಿಡಿದು ಕೂತರು. ವಿವಿಧ ಗ್ರಾಮಗಳ ಸುಮಾರು 200ಕ್ಕೂ ಹೆಚ್ಚು ಮಂದಿ…
ತುಮಕೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಇದಕ್ಕೆ ಪ್ರಮುಖ ಕಾರಣ ಪರಿಚಯಸ್ಥರು, ಸಂಬಂಧಿಕರು ಹಾಗೂ ನೆರೆಹೊರೆಯವರೇ ಆಗಿರುತ್ತಾರೆ. ಇಂತಹ ಪ್ರಕರಣಗಳು ಮಕ್ಕಳ ಮೇಲೆ ಮಾನಸಿಕವಾಗಿ ಗಂಭೀರ ಪರಿಣಾಮ ಬೀರುತ್ತಿರುವುದು ಆಘಾತಕಾರಿ ಅಂಶವಾಗಿದ್ದು, ಇದಕ್ಕೆ ಪೋಷಕರ ನಿರ್ಲಕ್ಷ್ಯ ಹಾಗೂ ಮಕ್ಕಳಿಗೆ ಈ ಕುರಿತು ಅರಿವು ಇಲ್ಲದಿರುವುದೇ ಪ್ರಮುಖ ಕಾರಣ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರೊಬೇಷನರಿ ಅಧಿಕಾರಿ ಕವಿತಾ ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತುಮಕೂರು ಇವರ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ 2012 ಹಾಗೂ ಮಕ್ಕಳ ಮಾರಾಟ ಹಾಗೂ ಸಾಕಾಣಿಕೆ ಕುರಿತು ಮಾತನಾಡಿದ ಅವರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಪರಿಚಯಿಸಿದರು. ಬಾಲ್ಯ ವಿವಾಹ ಮತ್ತು ಪೋಕ್ಸೋ ಕಾಯ್ದೆ ಕುರಿತು ಉದಾಹರಣೆಗಳೊಂದಿಗೆ ವಿವರಿಸುತ್ತಾ ಬಾಲ್ಯ ವಿವಾಹ ನಿಷೇಧ ಕಾಯ್ದೆಯಲ್ಲಿ ಬಾಲ್ಯ ವಿವಾಹ ಮಾಡಿದರೆ ಯಾರೆಲ್ಲಾ ಶಿಕ್ಷೆಗಳಿಗೆ ಗುರಿಯಾಗುತ್ತಾರೆ ಹಾಗೂ ಬಾಲ್ಯ…
ತುಮಕೂರು : ಸಭೆಗೆ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿಂದು ನರೇಗಾ ಮತ್ತು ನೀರು ಸಂರಕ್ಷಣೆ ಕುರಿತು ಪ್ರಗತಿ ಪರಿಶೀಲಾನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಒದಗಿಸುವ ಮಾಹಿತಿ ನಿಖರವಾಗಿರಬೇಕು. ಅಸ್ಪಷ್ಟ ಮಾಹಿತಿ ನೀಡಿದರೆ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಮಾಡಲಾಗುವುದೆಂದ ಅವರು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶೇ.48ರಷ್ಟು ಮಾತ್ರ ಉದ್ಯೋಗ ಒದಗಿಸಲಾಗಿದೆ. ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ. ಇದರಿಂದ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವಲ್ಲಿ ರಾಷ್ಟ್ರ ಮಟ್ಟದಲ್ಲಿ ಹಿಂದುಳಿದಿದ್ದೇವೆ. ನರೇಗಾ ಯೋಜನೆಯಡಿ ಗುರಿ ಮೀರಿ ಸಾಧನೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಭಾಗ್ಯ ಯೋಜನೆಯಡಿ ಕೈಗೊಳ್ಳಲಾಗುವ ಕೃಷಿ ಹೊಂಡ ಕಾಮಗಾರಿಯನ್ನು ಜುಲೈ 31ರೊಳಗಾಗಿ ಪೂರ್ಣಗೊಳಿಸಬೇಕು. ಮಳೆಗಾಲ ಪ್ರಾರಂಭವಾಗುವ ಮುನ್ನವೇ ಪೂರ್ಣಗೊಳಿಸಬೇಕಿತ್ತು. ಮಳೆ…
ಕುಣಿಗಲ್ : ರೈತರಿಗೆ ರಾಗಿ ಖರೀದಿಯಲ್ಲಿ ಮೋಸ ಮಾಡಿದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿದಾಗ ಪ್ರತಿಭಟನೆಯನ್ನ ಕೈಬಿಡಿ ರೈತರ ಹಣ ಸಂದಾಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿ ತಿಂಗಳಾದರೂ ಇನ್ನೂ ರೈತರ ರಾಗಿ ದುಡ್ಡು ನೀಡಿಲ್ಲ ಎಂದು ಆರೋಪಿಸಿ ರೈತ ಸಂಘ ತಾಲ್ಲೂಕು ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ಘಟನೆ ನಡೆಯಿತು. ಮಹಿಳೆಯರು ಸೇರಿದಂತೆ ಹಲವು ರೈತರು ತಮ್ಮ ಜಮೀನಿನಲ್ಲಿ ರಾಗಿ ಬೆಳೆದು ಖರೀದಿ ಕೇಂದ್ರಕ್ಕೆ ಸುಮಾರು 1087 ರೈತರಿಂದ ಪಡೆದಿದ್ದು ಇದರಲ್ಲಿ 391 ರೈತರಿಗೆ ಮಾತ್ರ ನೀಡಿದ್ದರೂ ಇನ್ನೂ ಹಣ ನೀಡಿಲ್ಲ ಎಂಬ ಅವರ ದೂರಿನ ಮೇರೆಗೆ ಜಿಲ್ಲಾ ಹಸಿರು ಸೇನೆಯ ಅಧ್ಯಕ್ಷ ಆನಂದ್ ಪಟೇಲ್ ನೇತೃತ್ವದಲ್ಲಿ ಅಧಿಕಾರಿಗಳ ವಿರುದ್ದ ಧಿಕ್ಕಾರ ಕೂಗುವ ಮೂಲಕ ತಾಲ್ಲೂಕು ಕಚೇರಿ ಮುಂದಿನ ಗೇಟಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಡಿಸಿದರು. ರೈತರಿಂದ ರಾಗಿ ಖರೀದಿಸಿದ ಅಧಿಕಾರಿಗಳು ರಶೀದಿಯನ್ನು ನೀಡದೆ ಖಾಲಿ ಚೀಟಿಯಲ್ಲಿ…
ತುಮಕೂರು: ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರವನ್ನು ಬಿಜೆಪಿ ರೂಪಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕವು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು ಬಿಜೆಪಿ ಕುದುರೆ ವ್ಯಾಪಾರ ಮಾಡಿದಂತೆ ಶಾಸಕರನ್ನು ನೂರಾರು ಕೋಟಿಗಳ ಲೆಕ್ಕದಲ್ಲಿ ಖರೀದಿಸುತ್ತಿದೆ. ಕೋಟಿಗಳ ಲೆಕ್ಕದಲ್ಲಿ ಆಮಿಷ ಒಡ್ಡುತ್ತಿದೆ. ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು, ಆಯ್ಕೆಯಾದ ಜನಪ್ರತಿನಿಧಿಗಳು ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಅವರನ್ನು ರಾಜ್ಯದ ಜನರು ಎಂದಿಗೂ ಕ್ಷಮಿಸಲಾರರು ಎಂದು ಹರಿಹಾಯ್ದರು. ರಾಜೀನಾಮೆ ಕೊಟ್ಟಿರುವ ಶಾಸಕರು ಮುಂದಿನ ಪೀಳಿಗೆಗೆ ಕೆಟ್ಟ ರಾಜಕೀಯದ ಪರಿಪಾಟ ಹೇಳಿಕೊಡುತ್ತಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಅವರು ಮನಸ್ಸು ಬದಲಿಸಿಕೊಂಡು ಪಕ್ಷಕ್ಕೆ ಬಂದರೆ, ಸರ್ಕಾರ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತದೆ ಎಂದರು. ಕಾಂಗ್ರೆಸ್‍ನ ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಣ, ನಮ್ಮ ಪಕ್ಷದಿಂದ ಗೆದ್ದು ಅಧಿಕಾರ ಅನುಭವಿಸಿ, ಈಗ ಶಾಸಕರು ಆಮಿಷಗಳಿಗೆ ಬಲಿಯಾಗುತ್ತಿದ್ದಾರೆ. ತೆವಲಿಗೆ ಪಕ್ಷ ಬಿಡುವುದು ಸರಿಯಲ್ಲ. ಶಾಸಕರು…
ತುಮಕೂರು: ಕಚೇರಿ ಕರ್ತವ್ಯದ ಅವಧಿಯಲ್ಲಿ ಕಚೇರಿಯಲ್ಲಿರದೇ, ಯಾರಿಗೂ ತಿಳಿಸದೇ ಬೆಂಗಳೂರಿಗೆ ಹೋಗುವ ಆರ್‍ಟಿಒ ಅವರನ್ನು ವರ್ಗಾವಣೆ ಮಾಡುವ ಮೂಲಕ ಸಾರ್ವಜನಿಕರ ಕೆಲಸಕ್ಕೆ ಅನುಕೂಲ ಮಾಡಿಕೊಡಬೇಕಿದೆ ಎಂದು ತುಮಕೂರು ನಗರ ಆಟೋ ಡೀಲರ್ಸ್ ಏಜೆಂಟ್ಸ್ ಮತ್ತು ಫೈನಾನ್ಸಿಯರ್ಸ್ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಟಿ.ಆರ್.ಸುರೇಶ್ ಒತ್ತಾಯಿಸಿದರು. ಆರ್‍ಟಿಒ ಕಚೇರಿಗೆ ಸಂಘದ ಮುಖಂಡರೊಂದಿಗೆ ತೆರಳಿದ ಟಿ.ಆರ್.ಸುರೇಶ್ ಅವರು ವಾಯು ಮಾಲಿನ್ಯ ತಪಾಸಣೆಯಿಂದ ಕೆಲ ತಾಲ್ಲೂಕುಗಳಿಗೆ ವಿನಾಯಿತಿ ನೀಡುವಂತೆ ಕಳೆದ ತಿಂಗಳು ಮನವಿ ಸಲ್ಲಿಸಿದರು, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ, ಹಣವಿಲ್ಲದೇ ಆರ್‍ಟಿಒ ಯಾವುದೇ ಕೆಲಸವನ್ನು ಮಾಡುತ್ತಿಲ್ಲ, ಜಿಲ್ಲಾ ಮಟ್ಟದ ಅಧಿಕಾರಿ ಜಿಲ್ಲಾಕೇಂದ್ರದಲ್ಲಿರದೇ, ಯಾವಾಗಲೂ ಬೆಂಗಳೂರಿನಲ್ಲಿರುತ್ತಾರೆ, ಸಾರ್ವಜನಿಕರು ದೂರವಾಣಿ ಮೂಲಕ ಸಂಪರ್ಕಿಸಿದರೆ ಉದ್ಧಟತನದಿಂದ ವರ್ತಿಸುತ್ತಾರೆ ಎಂದು ದೂರಿದರು. ಆಟೋ ರಿಕ್ಷಗಳಿಗೆ ವಾಯು ಮಾಲಿನ್ಯ ತಪಾಸಣಾ ಪತ್ರವನ್ನು ಹೊಂದಿರುವುದು ಕಡ್ಡಾಯಗೊಳಿಸಲಾಗಿದ್ದು, ಗುಬ್ಬಿ, ನಿಟ್ಟೂರು,ಕುಣಿಗಲ್ ಹಾಗೂ ಶಿರಾದಲ್ಲಿ ತಪಾಸಣಾ ಕೇಂದ್ರಗಳು ಇಲ್ಲದೇ ಇರುವುದರಿಂದ ಅಲ್ಲಿನ ವಾಹನಗಳು ತುಮಕೂರು…
ತುಮಕೂರು : ವಸತಿ ಯೋಜನೆಯಡಿ ಮಂಜೂರಾಗಿ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ವಿವಿಧ ಇಲಾಖೆಗಳು ಅನುಷ್ಟಾನಗೊಳಿಸುವ ಮನೆಗಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದ ಅವರು ಜಿಲ್ಲೆಗೆ ಈಗಾಗಲೇ ರಾಜೀವ್‍ಗಾಂಧಿ ವಸತಿ ನಿಗಮದ ವತಿಯಿಂದ 26,526 ನಿವೇಶನ ರಹಿತರನ್ನು ಗುರುತಿಸಲಾಗಿದೆ. ಈ ಪೈಕಿ 1,191 ನಿವೇಶನ ರಹಿತರಿಗೆ ಹಕ್ಕುಪತ್ರ ಹಂಚಿಕೆ ಮಾಡಲು 36.50 ಎಕರೆ ಸರ್ಕಾರಿ ಜಮೀನು ಮತ್ತು 23.05 ಎಕರೆ ಖರೀದಿ ಜಮೀನು ಸೇರಿದಂತೆ ಒಟ್ಟು 59.55 ಎಕರೆ ಜಮೀನು ಲಭ್ಯವಿದೆ. ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ತಹಶೀಲ್ದಾರ್‍ಗಳೊಂದಿಗೆ ಚರ್ಚಿಸಿ ನಿವೇಶನ ರಹಿತರಿಗೆ ಹಕ್ಕುಪತ್ರ ಹಂಚಿಕೆ ಮಾಡಲು ಆದ್ಯತೆ ಮೇರೆಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಲಿಡ್ಕರ್ ನಿಗಮದ ವತಿಯಿಂದ 2018-19 ನೇ ಸಾಲಿನಲ್ಲಿ ಜಿಲ್ಲೆಗೆ 40…











