ಮೈಸೂರು: ಹಾವು ಕಚ್ಚಿ 13 ವರ್ಷದ ಹೆಣ್ಣು ಚಿರತೆ (ಜಾಗ್ವಾರ್) ಮೃತಪಟ್ಟಿರುವ ಘಟನೆ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ ನಡೆದಿದೆ. ಮೃಗಾಲಯದಲ್ಲಿ ಚಿರತೆ (ಜಾಗ್ವಾರ್) ಇರುವ ಸ್ಥಳಕ್ಕೆ ಹಾವು ನುಗ್ಗಿದೆ. ಆಗ ಆಕ್ರೋಶಗೊಂಡ ಚಿರತೆ ಹಾವಿಗೆ ಕಚ್ಚಿದೆ. ಈ ವೇಳೆ ರೊಚ್ಚಿಗೆದ್ದ ಹಾವು ಕೂಡ ಚಿರತೆಗೆ ಕಚ್ಚಿದೆ. ಹೀಗೆ ಚಿರತೆ ದಾಳಿಯಿಂದ ಗಾಯಗೊಂಡಿದ್ದ ಹಾವು ಮೃತಪಟ್ಟಿದೆ. ಇನ್ನು ಹಾವು ಕಡಿದಿದ್ದರಿಂದ ಗಾಯಗೊಂಡಿದ್ದ ಚಿರತೆಗೆ ಮೃಗಾಲಯದ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಚಿರತೆಯೂ ಮೃತಪಟ್ಟಿದೆ. ಈ ಚಿರತೆಯನ್ನು ದೆಹಲಿ ಮೃಗಾಲಯದಿಂದ ತರಲಾಗಿತ್ತು. ಈ ಬಗ್ಗೆ ಮೃಗಾಲಯದ ಸಿಇಓ ಅಜಿತ್ ಕುಲಕರ್ಣಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: News Desk Benkiyabale
ಬೆಂಗಳೂರು: ಹಿರಿಯ ನಿರ್ದೇಶಕ ಎಂ.ಎಸ್ ರಾಜಶೇಖರ್ (75) ಸೋಮವಾರ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸ್ಯಾಂಡಲ್ವುಡ್ ನ ಸೃಜನಶೀಲ ನಿರ್ದೇಶಕ ಅಂತಲೇ ಕರೆಸಿಕೊಂಡಿದ್ದ ಎಂ.ಎಸ್. ರಾಜಶೇಖರ್ ಅವರು 30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಪತ್ನಿ ರಾಣಿ, ಮಗಳು ಶಾರದಾ, ಮಗ ರಘು ಅವರನ್ನು ಅಗಲಿದ್ದಾರೆ. ನಾಳೆ ನಾಗರಬಾವಿ ಸಮೀಪದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬೆಂಗಳೂರು: ದ್ವಿತೀಯ ಪಿಯುಸಿ 2019ನೇ ಸಾಲಿನ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ. ತಾತ್ಕಾಲಿಕ ವೇಳಾ ಪಟ್ಟಿಯ ಪ್ರಕಾರ ಮಾರ್ಚ್ 1 ರಿಂದ ಪರೀಕ್ಷೆ ಆರಂಭವಾಗಲಿದ್ದು, ವೇಳಾಪಟ್ಟಿಯಲ್ಲಿ ತಕರಾರುಗಳಿದ್ದಲ್ಲಿ ಮನವಿ ಮಾಡಲು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. 2019ರ ಮಾರ್ಚ್ 1- ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ, ಮಾರ್ಚ್ 2- ಎನ್‌ಎಸ್‌ಕ್ಯೂಎ ಪರೀಕ್ಷೆ, ಮಾರ್ಚ್ 3-ರವಿವಾರದ ರಜೆ, ಮಾರ್ಚ್ 4- ಮಹಾಶಿವರಾತ್ರಿ ರಜೆ, ಮಾರ್ಚ್ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್. ಮಾರ್ಚ್ 6- ಲಾಜಿಕ್, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ, ಮಾರ್ಚ್ 7- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ, ಮಾರ್ಚ್ 8- ಉರ್ದು, ಸಂಸ್ಕೃತ, ಮಾರ್ಚ್ 9- ರಾಜ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ, ಮಾರ್ಚ್ 10-ರವಿವಾರ ರಜೆ, ಮಾರ್ಚ್ 11- ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ. ಮಾರ್ಚ್ 12-ಭೂಗೋಳಶಾಸ್ತ್ರ, ಕರ್ನಾಟಕ ಮತ್ತು ಹಿಂದೂಸ್ಥಾನಿ ಸಂಗೀತ, ಮಾರ್ಚ್ 13-…
ಬೆಳಗಾವಿ: ರಾಜ್ಯ ಸರ್ಕಾರವನ್ನು ಪತನದ ಅಂಚಿಗೆ ತಂದು ನಿಲ್ಲಿಸಿದ್ದ ವಿವಾದಿತ ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ ಚುನಾವಣೆ ವೇಳೆ ಉಭಯ ಬಣಗಳ ರಾಜಿ ಸಂಧಾನದ ಅಧ್ಯಕ್ಷ ರಾಗಿದ್ದ ಮಹದೇವ ಪಾಟೀಲ್ ಸೋಮವಾರ ನಿಧನರಾಗಿದ್ದಾರೆ. ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣಾ ಕದನದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದಿಂದ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರು. ಬೆಳಗಾವಿಯ ಫೂಲ್ಬಾಗ್ ಗಲ್ಲಿ ನಿವಾಸದಲ್ಲಿ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಣ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೇ ಜೆಡಿಎಸ್ ಹಾಗೂ ಕ್ರಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ನಡುಗಿಸಿತ್ತು. ಆದ್ರೆ ಈಗ ಅಧ್ಯಕ್ಷ ಮಹಾದೇವ್ ಪಾಟೀಲ್ ಮೃತಪಟ್ಟಿರುವುದರಿಂದ ತೆರವಾದ ಸ್ಥಾನಕ್ಕೆ ಮತ್ತೆ ಚುನಾವಣೆ ನಡೆಯುವುದು ಅನಿವಾರ್ಯವಾಗಿದೆ.
ಮಧುಗಿರಿ: ಕಸಾಯಿ ಖಾನೆಗಳಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಐದು ವಾಹನಗಳನ್ನು ವಶಕ್ಕೆ ಪಡೆದ ಮಧುಗಿರಿ ಪೊಲೀಸರು 34 ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರದಿಂದ ಆಲಿಪುರಕ್ಕೆ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ವಶಕ್ಕೆ ಪಡೆದ ಪೊಲೀಸರು ನಂತರ ಗೋವುಗಳನ್ನು ಗೋಶಾಲೆಗೆ ರವಾನಿಸಿದ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ 20 ಕ್ಕೂ ಹೆಚ್ಚು ಹಸು ಕರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸ್ಥಳೀಯರು ಹಾಗೂ ಪೊಲೀಸರು ವಾಹನವನ್ನು ಅಡ್ಡಗಟ್ಟಿದ್ದಾರೆ. ಜಾನುವಾರುಳನ್ನು ವಶಕ್ಕೆ ಪಡೆದ ಪೊಲೀಸರು ನಂತರ ಗೋವುಗಳನ್ನು ಸ್ಥಳೀಯ ಗೋ ಶಾಲೆಗೆ ರವಾನಿಸಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಳ್ಳಾರಿ : ಲೋಕಸಭೆ ಉಪ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 11 ಲಕ್ಷ ರೂ.ನಗದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಸಾರಿಗೆ ಇಲಾಖೆ ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 11 ಲಕ್ಷ ರೂ.ಗಳನ್ನು ಮರಿಯಮ್ಮನಹಳ್ಳಿ ಚೆಕ್ ಪೋಸ್ಟ್ ಬಳಿ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಿ ಹಣ ಖಜಾನೆಯಲ್ಲಿಡಲಾಗಿದೆ. ಈ ದಾಳಿಯ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಝಹೀರ್ ಅಬ್ಬಾಸ್, ತಾಲ್ಲೂಕು ನೋಡಲ್ ಅಧಿಕಾರಿ ರಾಜಪ್ಪ, ತಹಸೀಲ್ದಾರ್ ರೆಹಮಾನ ಪಾಷಾ ಹಾಗೂ ಎಂಸಿಸಿ ನೋಡಲ್ ಅಧಿಕಾರಿ ವಿಶ್ವನಾಥ್ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಎಸ್‌ಎಸ್ಟಿ ತಂಡದವರು ಇದ್ದರು
ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಮಿಂಟೋ ಆಸ್ಪತ್ರೆ ವತಿಯಿಂದ ‘ಮುಂಜಾಗ್ರತೆ ವಹಿಸಿ ಅಪಾಯ ಆಗುವುದನ್ನು ತಡೆಗಟ್ಟುವುದು ಚಿಕಿತ್ಸೆ ನೀಡುವುದಕ್ಕಿಂತ ಉತ್ತಮ ಕ್ರಮ’ ಎಂಬ ಉದ್ದೇಶದೊಂದಿಗೆ ಹಬ್ಬದಲ್ಲಿ ಪಟಾಕಿಯಿಂದ ಸಂಭವಿಸುವ ಗಾಯಗಳಿಗೆ 24/7 ತುರ್ತು ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹಬ್ಬದ ಸಂದರ್ಭದಲ್ಲಿ ಅಗತ್ಯವಿರುವ ಔಷಧ ಸೇರಿದಂತೆ ಮತ್ತಿತರ ಸಾಮಗ್ರಿಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದ್ದು, ದಿನದ 24 ಗಂಟೆಗಳ ಕಾಲವೂ ಆಸ್ಪತ್ರೆಯು ಕಾರ್ಯನಿರ್ವಹಿಸಲಿದೆ. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಅನಾಹುತ ಸಂಭವಿಸಿದರೆ ಆಸ್ಪತ್ರೆಯ ಸಹಾಯವಾಣಿ ಸಂಖ್ಯೆ 080-26707176 ಅಥವಾ ಮೊ. 9481740137 ಕರೆ ಮಾಡಿ ಚಿಕಿತ್ಸೆ ಕುರಿತು ಮಾಹಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.
ಕನ್ನೂರು: ‘ಶಬರಿಮಲೆ ಅಯ್ಯಪ್ಪ ಭಕ್ತರ ಪರವಾಗಿ ಬಿಜೆಪಿ ಅಚಲವಾಗಿ ನಿಂತಿದೆ’ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಕೇರಳದ ಕನ್ನೂರಿನಲ್ಲಿ ಶನಿವಾರ ಬಿಜೆಪಿ ಪಕ್ಷ ಕಚೇರಿಯನ್ನು ಉದ್ಘಾಟಿಸಿದ ಅವರು, ನಂತರ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು. ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ನಡೆದ ಗಲಭೆಯ ನಂತರ 2000 ಕ್ಕೂ ಹೆಚ್ಚು ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಅವರು ಖಂಡಿಸಿದರು.
ಧೆಂಕನಲ್: ಒಡಿಶಾದ ಧೆಂಕನಲ್ ಜಿಲ್ಲೆಯ ಕಮಲಾಂಗ ಎಂಬ ಹಳ್ಳಿಯಲ್ಲಿ ಶನಿವಾರ ಬೆಳಿಗ್ಗೆ ಏಳು ಆನೆಗಳು ದುರ್ಮರಣಕ್ಕೀಡಾಗಿವೆ. ವಿದ್ಯುತ್ ಸ್ಪರ್ಶದಿಂದಾಗಿ ಆನೆಗಳು ಅಸುನೀಗಿರಬಹುದು ಎಂದು ಅಂದಾಜಿಸಲಾಗಿದೆ. ವಿದ್ಯುತ್ ಹರಿಯುತ್ತಿದ್ದ ತಂತಿಯನ್ನು ಆನೆಗಳ ಗುಂಪು ಹಾದುಹೋಗುವುದಕ್ಕೆ ಪ್ರಯತ್ನಿಸಿದಾಗ ಈ ಘಟನೆ ನಡೆದಿರಬಹುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮಾನವನಿರ್ಮಿತ ಕಾರಣಗಳಿಂದ ವನ್ಯಮೃಗಗಳು ಅಸುನೀಗುತ್ತಿರುವ ಘಟನೆ ನಿರಂತರವಾಗಿ ನಡೆಯುತ್ತಿದೆ. ಇಂಥ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಮತ್ತು ಅಕಸ್ಮಾತ್ ಇಂಥ ಘಟನೆಗಳು ನಡೆದರೆ ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರವಾದಿಗಳು, ವನ್ಯಜೀವಿ ಪ್ರೇಮಿಗಳು ಆಗ್ರಹಿಸಿದ್ದಾರೆ.
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗಾಂಧಿನಗರ, ರಾಜರಾಜೇಶ್ವರಿ ನಗರ ಮತ್ತು ಮಲ್ಲೇಶ್ವರಂ ವಿಭಾಗದಲ್ಲಿ ನಡೆದ ಅವ್ಯವಹಾರದಲ್ಲಿ ಭಾಗಿಯಾಗಿರುವ ಶಾಸಕರು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ. 2008ರಿಂದ 2012ರ ತನಕ ನಡೆದ ಅವ್ಯವಹಾರ, ನಕಲಿ ಬಿಲ್ ತಯಾರಿಕೆ, ಕಡತಗಳಿಗೆ ಬೆಂಕಿ ಹಚ್ಚಿರುವುದು ಎಲ್ಲವೂ ದೊಡ್ಡ ಹಗರಣ ನಡೆದಿದೆ ಎಂಬುದನ್ನು ಹೇಳುತ್ತಿವೆ. ಇದುವರೆಗೆ ಇದರ ಬಗ್ಗೆ ತನಿಖೆ ನಡೆಸಿದ ಸಂಸ್ಥೆಗಳು ಸಹ ಹಗರಣ ನಡೆದಿದೆ ಎಂದು ಹೇಳಿವೆ ಎಂದು ಎಎಪಿ ಹೇಳಿದೆ. ಹೈಕೋರ್ಟ್ ಬಳಿಕ ಎನ್‌ಜಿಟಿ ಸರದಿ: ಬಿಬಿಎಂಪಿಗೆ 5 ಕೋಟಿ ದಂಡ ಗಾಂಧಿನಗರ , ರಾಜರಾಜೇಶ್ವರಿ ನಗರ ಮತ್ತು ಮಲ್ಲೇಶ್ವರಂ ವಿಭಾಗಗಳಲ್ಲಿ 2008 ರಿಂದ 2012 ರವರೆಗೆ ನಡೆದಿರುವ 1,539 ಕೋಟಿ ರೂ. ಗಳಿಗೂ ಹೆಚ್ಚಿನ ಮೊತ್ತದ ಕಾಮಗಾರಿಗಳಲ್ಲಿನ ಅವ್ಯವಹಾರಗಳ ಬಗ್ಗೆ ಈಗಾಗಲೇ ಅನೇಕ ತನಿಖಾ ಸಂಸ್ಥೆಗಳು ವರದಿಯನ್ನು ನೀಡಿವೆ. …