ತುಮಕೂರು: ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ ಜಮೀನು ಕಳೆದುಕೊಳ್ಳುವ ರೈತರಿಗೆ ಉತ್ತಮ ಬೆಲೆಯನ್ನು ನಿಗಧಿಪಡಿಸಲಾಗುವುದು. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ಸಂಸದ ಜಿ.ಎಸ್.ಬಸವರಾಜ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯ ಉದ್ದೇಶಕ್ಕಾಗಿ ಭೂಸ್ವಾಧೀನಪಡಿಸಿಕೊಳ್ಳಲಾದ ಜಮೀನುಗಳ ಭೂ ಮಾಲೀಕರಿಗೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ ಕಲಂ 17ರನ್ವಯ ಸಿಗಬಹುದಾದ ಪ್ರಯೋಜನಗಳ ಕುರಿತ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರೈಲ್ವೆ ಮಾರ್ಗ ನಿಮ್ಮ ಗ್ರಾಮ ಅಥವಾ ಜಮೀನಿನಲ್ಲಿ ಹಾದು ಹೋಗುವುದರಿಂದ ನಿಮಗೆ ಅನುಕೂಲವಾಗಲಿದೆ. ತಂಟೆ ತಕರಾರುಗಳನ್ನು ಮಾಡಬೇಡಿ, ತಂಟೆ ತಕರಾರುಗಳಿದ್ದರೆ ಪ್ರಾರಂಭದಲ್ಲಿ ಪರಿಹಾರ ಮಾಡಿಕೊಳ್ಳಿ. ಇವತ್ತಿಗೆ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಮುಗಿಯುವ ಹಂತಕ್ಕೆ ಬರಬೇಕಾಗಿತ್ತು. ಆದರೆ ಇನ್ನು ಜಮೀನು ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ರೈಲ್ವೆ…
Author: News Desk Benkiyabale
ತುಮಕೂರು: ಶರಣರ ಜೀವನ, ಮೌಲ್ಯಗಳು ಹಾಗೂ ವಚನಗಳು ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಬುಧವಾರ ನಗರದ ಟೌನ್‍ಹಾಲ್ ವೃತ್ತದಲ್ಲಿ ಸಹಮತ ವೇದಿಕೆ ವತಿಯಿಂದ ಸಾಣೆಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮತ್ತೆ ಕಲ್ಯಾಣ ಕಾರ್ಯಕ್ರಮದ ‘ಸಾಮರಸ್ಯ ನಡಿಗೆ’ಗೆ ವಿವಿಧ ಮಠಾಧೀಶರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಮಾತನಾಡಿ, ಇಂದು ನಾಡಿನಾದ್ಯಂತ ಮತ್ತೆ ಕಲ್ಯಾಣ ವಿಶಿಷ್ಠ ಕಾರ್ಯಕ್ರಮವನ್ನು ಪಂಡಿತಾರಾಧ್ಯ ಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಾಮರಸ್ಯದ ನಡೆ, ಸಂವಾದ ಮತ್ತು ಚಿಂತನೆಗಳನ್ನು ಬಿತ್ತುವುದರ ಮುಖಾಂತರ ಬಸವಾದಿ ಶರಣರ ತತ್ವಗಳು ಜನಮನಸ್ಸಿಗೆ ಬಿತ್ತಬೇಕು ಎಂಬ ಉದ್ಧೇಶವನ್ನಿಟ್ಟುಕೊಂಡು ಈ ಪವಿತ್ರ ಕಾರ್ಯ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು. ಇಂದಿನ ಆಧುನಿಕ ಕಾಲ ಘಟ್ಟದಲ್ಲಿ ನಮ್ಮೆಲ್ಲಾ ಸಮಸ್ಯೆಗಳ ಪರಿಹಾರ ಶರಣರ ತತ್ವಗಳಿಂದ ಮಾತ್ರ ಸಾಧ್ಯ…
ತುರುವೇಕೆರೆ: ಹೇಮಾವತಿ ನಾಲಾ ಅಚ್ಚುಕಟ್ಟು ಕಾಮಗಾರಿ ಹೆಸರಿನಲ್ಲಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕೆಲಸ ಮಾಡದೆಯೇ ಕೋಟ್ಯಾಂತರ ರೂಪಾಯಿ ಹಣ ಗೋಲ್‍ಮಾಲ್ ಮಾಡಿದ್ದಾರೆಂದು ಶಾಸಕ ಮಸಾಲಜಯರಾಮ್ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಮಾವತಿ ನಾಲೆಯ ಎರಡೂ ಬದಿಯಲ್ಲಿ ಜಂಗಲ್ ಕಟಿಂಗ್ ಹಾಗೂ ಊಳೆತ್ತುವ ಕಾಮಗಾರಿಯನ್ನು ಬೇಕಾಬಿಟ್ಟಿಯಾಗಿ ನಿರ್ವಹಿಸಿದ್ದು, ಕಾಮಗಾರಿಯನ್ನು ಪೂರ್ಣಗೊಳೆಸದೆ ಅರ್ಧಂಭರ್ಧ ಮಾಡಿದ್ದಾರೆ ಹಾಗೂ ನಾಲೆಯ ಎರಡೂ ಬದಿಯಲ್ಲಿದ್ದ ಮರಗಳ ರಂಬೆ ಕೊಂಬೆಗಳನ್ನು ನಾಲೆಯಲ್ಲಿ ಬಿಸಾಡಿ ಹೋಗಿದ್ದರಿಂದ ತಾಲೂಕಿನ ಡಿ-10ಬಳಿಯಿರುವ ಹೇಮಾವತಿ ಸೇತುವೆಯಲ್ಲಿ ನೀರು ಬ್ಲಾಕ್ ಆಗಿ ನಾಲೆ ಹೊಡೆಯುವ ಹಂತಕ್ಕೆ ತಲುಪಿತ್ತು, ರೈತರು ಆತಂಕದಿಂದ ನನಗೆ ತಿಳಿಸಿದ ಸಂಧರ್ಭದಲ್ಲಿ ನಾನೆ ಖುದ್ದು ಸ್ಥಳಪರಿಶೀಲನೆ ಮಾಡಿ ಕೂಡಲೇ ನಾಲೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಪೊದೆಗಳು ಹಾಗೂ ಮರದ ರಂಬೆಗಳನ್ನು ಹೊರತೆಗೆಸುವಲ್ಲಿ ಹರ ಸಾಹಸ ಪಡಬೇಕಾಯಿತು. ಹೇಮಾವತಿ ನಾಲೆಯ ಉದ್ದಕ್ಕೂ ಜಂಗಲ್ ಕ್ಲೀನ್ ಮಾಡದೆ ಊಳೆತ್ತದೆ ಅರ್ಧಂಭರ್ಧ ಕಾಮಗಾರಿಮಾಡಿದ್ದಾರೆ, ಆದರೂ…
ತುಮಕೂರು: ಅಕ್ಷರ ದಾಸೋಹದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ಕೈಗೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಾ ಅಕ್ಷರ ದಾಸೋಹದ ಅವ್ಯವಹಾರದ ತನಿಖೆಗಾಗಿ ತಂಡ ರಚಿಸಿದ್ದು, ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ತುಮಕೂರು ಮತ್ತು ಮಧುಗಿರಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ವಿವಿಧ ಕಾಮಗಾರಿಗಳ 1.93 ಕೋಟಿ ರೂಪಾಯಿಗಳ ಹಣದ ಬಿಲ್ ರದ್ದಾಗಿರುವ ಕುರಿತು ಅಧ್ಯಕ್ಷರ ಗಮನಕ್ಕೆ ತರಲಾಯಿತು. ಬಿಲ್ ರದ್ದಾಗಿರುವ ಕುರಿತು ಮಾಹಿತಿ ಪಡೆದ ಸಿಇಒ ಅವರು ಬಿಲ್‍ಗಳನ್ನು ಸೂಕ್ತ ದಿನಾಂಕದೊಳಗೆ ಪಾವತಿಸಿರುವ ಬಗ್ಗೆ ಖಾತರಿ ಪಡಿಸಿಕೊಂಡು ಬಿಲ್ ರದ್ದಾಗಿರುವ ಬಗ್ಗೆ ಪರಿಶೀಲನೆ ನಡೆಸಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಪಶುಭಾಗ್ಯ ಯೋಜನೆ ಮತ್ತು ಅಮೃತ ಯೋಜನೆಯನ್ನು…
ತುಮಕೂರು: ಕೊರಟಗೆರೆ ಮತ್ತು ಮಧುಗಿರಿ ತಾಲ್ಲೂಕಿಗೆ ಹೇಮಾವತಿ ಕುಡಿಯುವ ನೀರು ಸರಬರಾಜು ಮಾಡುವ ತುಮಕೂರು ತಾಲ್ಲೂಕು ಬೆಳ್ಳಾವಿ ಹೋಬಳಿ ಬಳ್ಳಾಪುರ ಸಮೀಪವಿರುವ ಪಂಪ್‍ಹೌಸ್‍ನಲ್ಲಿ ಕಳ್ಳರು ಯಂತ್ರೋಪಕರಗಣಳನ್ನು ಕಳವು ಮಾಡಿದ್ದು, ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ಸಂಸದ ಜಿ.ಎಸ್. ಬಸವರಾಜು ಅವರನ್ನು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್.ರಾಜೇಂದ್ರ ಅವರು ಕರೆದೊಯ್ದು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಸಂಸದ ಜಿ.ಎಸ್. ಬಸವರಾಜು ಅವರು, ಮಧುಗಿರಿ-ಕೊರಟಗೆರೆಗೆ ಹೇಮಾವತಿ ಕುಡಿಯುವ ನೀರು ಸರಬರಾಜಾಗುವ ತುಮಕೂರು ಗ್ರಾಮಾಂತರದ ಬಳ್ಳಾಪುರ ಪಂಪ್‍ಹೌಸ್‍ನಲ್ಲಿ ಯಂತ್ರೋಪಕರಣಗಳನ್ನು ಕಳ್ಳರು ಕಳವು ಮಾಡಿದ್ದು, ಈಗ ದುರಸ್ಥಿ ಕಾರ್ಯ ನಡೆಯುತ್ತಿದೆ. ಸಂಜೆ ವೇಳೆಗೆ ದುರಸ್ಥಿ ಕಾರ್ಯ ಮುಗಿದು ಕೊರಟಗೆರೆ ಅಗ್ರಹಾರ ಕೆರೆಗೆ ನೀರು ತಲುಪಲಿದ್ದು, ಮಂಗಳವಾರ ಸಂಜೆ ವೇಳೆಗೆ ಮಧುಗಿರಿ ಸಿದ್ಧಾಪುರ ಕೆರೆಗೆ ನೀರು ಹರಿಯಲಿದೆ ಎಂದು ತಿಳಿಸಿದರು. ಈ ಭಾರಿ ಮಧುಗಿರಿಗೆ ಅಗತ್ಯಕ್ಕಿಂತ ಹೆಚ್ಚಿನ ಹೇಮಾವತಿ ನೀರು ಬಿಡುಗಡೆ ಮಾಡಲು ವ್ಯವಸ್ಥೆ…
ಶಿರಾ: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಕಳೆದೆರಡು ದಿನಗಳಿಂದ ಬಂದ ಜಿಟಿ ಜಿಟಿ ಮಳೆಯಿಂದಾಗಿ ಇಡೀ ಬಸ್‍ನಿಲ್ದಾಣ ಕೆಸರು ಗದ್ದೆಯಾಗಿದ್ದು, ಸದರಿ ನಿಲ್ದಾಣದ ಇಂತಹ ಅವ್ಯವಸ್ಥೆಯನ್ನು ಸರಿಪಡಿಸುವಲ್ಲಿ ನಗರಸಭೆ ವಿಫಲಗೊಂಡಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ನಗರದ ಖಾಸಗಿ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈಗಾಗಲೇ ನಿಲ್ದಾಣಕ್ಕೆ ಮೇಲ್ಛಾವಣಿ ಹಾಕಲಾಗಿದೆ. ಈ ನಡುವೆ ಈ ಹಿಂದೆ ಇದ್ದ ನಿಲ್ದಾಣದ ನೆಲಹಾಸಿನ ಮಣ್ಣನ್ನು ತೆಗೆದು ಗುತ್ತಿಗೆದಾರರು ಜೇಡಿಮಣ್ಣಿನಂತಹ ಮಣ್ಣನ್ನು ನಿಲ್ದಾಣದಲ್ಲಿ ಹಾಕಿದ ಪರಿಣಾಮ ಪ್ರಯಾಣಿಕರು ಹಾಗೂ ಬಸ್‍ಗಳು ಸಂಚರಿಸಲು ತೀವ್ರತರವಾದ ತೊಂದರೆಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಪುಟ್ಟಮಕ್ಕಳು, ವಯಸ್ಸಾದವರು ಓಡಾಡುವುದೇ ಕಷ್ಟವಾಗಿದ್ದು, ಈ ಕೂಡಲೆ ನಗರಸಭೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ತುಮಕೂರು: ಜಿಲ್ಲೆಯಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತುಸಭೆ ನಡೆಸಿ ಮಾತನಾಡಿದ ಅವರು ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಮಳೆ ಆರಂಭವಾಗುತ್ತಿದ್ದು, ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕಿದೆ ಎಂದರು. ಮಳೆಯಿಂದ ಉಂಟಾಗಬಹುದಾದ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಅರಣ್ಯ ಇಲಾಖೆ, ಕಂದಾಯ ಇಲಾಖೆ, ಬೆಸ್ಕಾಂ, ಲೋಕೋಪಯೋಗಿ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸನ್ನದ್ದರಾಗಿರಬೇಕು. ಈಗಾಗಲೇ ಉತ್ತರಕರ್ನಾಟಕ ಹಾಗೂ ಪಶ್ಚಿಮಘಟ್ಟದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ತುಮಕೂರು ಜಿಲ್ಲೆಯಲ್ಲೂ ಮಳೆ ಆರಂಭವಾಗುತ್ತಿದ್ದು, ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು. ಮಳೆಯಿಂದಾಗಿ ರಸ್ತೆಗಳು…
ತುಮಕೂರು: ಅಂಗನವಾಡಿ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ಇಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶುಭ ಕಲ್ಯಾಣ್ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು. ಕುಣಿಗಲ್ ತಾಲ್ಲೂಕಿನ ಮಡಿಕೆಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಅವರು ಗುರುವಾರ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರಲ್ಲದೇ ಅಲ್ಲಿನ ಸ್ವಚ್ಚತೆ, ಮಕ್ಕಳ ಶುಚಿತ್ವ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸುವುದರೊಂದಿಗೆ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರ ಪೂರೈಕೆ ಮಾಡಲು ಸೂಚನೆ ನೀಡಿದರು. ನಂತರ ಜಾಣಗರ ಹಾಗೂ ಕಳಸಿಪಾಳ್ಯ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೂ ಭೇಟಿ ನೀಡಿದರಲ್ಲದೇ ಸದರಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ, ನರೇಗಾ ಯೋಜನೆ ಪ್ರಗತಿ ಕುರಿತಂತೆ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ತುಮಕೂರು: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ನಲವತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ 40 ಮಂದಿ ಮಹಿಳಾ ಪೊಲೀಸ್ ಸಿಬ್ಬಂದಿ ಒಳಗೊಂಡ `ವಿಶೇಷ ಕಲ್ಪತರು ಪಡೆ’ಯನ್ನು ಜಿಲ್ಲಾ ಪೊಲೀಸ್ ಇಲಾಖೆ ರಚಿಸಿದೆ. ಈ ವಿಶೇಷ ಪಡೆ ಆಯಾ ಪೊಲೀಸ್ ಉಪ ವಿಭಾಗ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿವೆ. ಪ್ರಮುಖವಾಗಿ ಬಂದೋಬಸ್ತ್ ಕರ್ತವ್ಯ, ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣ ಮೇಲೆ ತುರ್ತು ನಿಗಾವಹಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತದೆ. ಮಹಿಳೆಯರು ಮತ್ತು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ತಿಳಿಸಿದ್ದಾರೆ. ಈ ತಂಡಕ್ಕೆ ಜು.26ರಿಂದ ಆ.8ರವರೆಗೆ ಒಟ್ಟು 11 ದಿನ ವಿವಿಧ ರೀತಿಯ ತರಬೇತಿ ನೀಡಲಾಗಿದೆ. ಮೊದಲ 5 ದಿನ ದುರ್ಗಾ ಸಂಸ್ಥೆಯ ಸಂಸ್ಥಾಪಕರಾದ ಡಾ.ಬೃಂದಾ ಅಡಿಗ ಅವರು ತಮ್ಮ ತಂಡದೊಂದಿಗೆ ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಮಹಿಳೆ…
ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಂದ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಬೇಕೆಂದು ಸೂಚನೆ ನೀಡಲಾಗಿದ್ದರೂ ಕಸವನ್ನು ಬೀದಿ ಬದಿ ಎಸೆಯುವುದು ತಪ್ಪಿಲ್ಲ. ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಪ್ರತೀ ದಿನ ಮನೆ ಬಳಿಗೆ ಬರುವ ಕಸ ಸಂಗ್ರಹಿಸುವ ವಾಹನಗಳಲ್ಲಿಯೇ ವಿಲೇವಾರಿ ಮಾಡಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಮಧ್ಯರಾತ್ರಿ, ಬೆಳಗಿನ ಜಾವ, ಬೀದಿ ದೀಪ (ವಿದ್ಯುತ್ ಇಲ್ಲದಿದ್ದಾಗ) ದ್ವಿಚಕ್ರದಲ್ಲಿ ಬಂದು ಖಾಲಿನಿವೇಶನಗಳಲ್ಲಿ ಕಸ ಸುರಿದು ಹೋಗುವವರಿಗೇನು ಕಡಿಮೆ ಇಲ್ಲ. ಇಂಥ ಅವೈಜ್ಞಾನಿಕ ಕಸ ವಿಲೇವಾರಿಯನ್ನು ತಪ್ಪಿಸಲು ನಗರದ ವಾಣಿಜ್ಯ ಹಾಗೂ ವಸತಿ ಪ್ರದೇಶಗಳಲ್ಲಿ ಪಾಲಿಕೆ ಸಿಬ್ಬಂದಿಗಳು ರಾತ್ರಿ-ಹಗಲು ಪಾಳಿಯಲ್ಲಿ ಕಾರ್ಯ ನಿರ್ವಹಿಸಿ ಕಸ ಹಾಕುವವರನ್ನು ಹಿಡಿದು ಕೆಲವರಿಗೆ ತಿಳುವಳಿಕೆ ನೀಡಿ, ಕೆಲವರಿಗೆ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಭೂಬಾಲನ್ ತಿಳಿಸಿದ್ದಾರೆ. ಪಾಲಿಕೆಯು ಕಸ ವಿಲೇವಾರಿ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದಲ್ಲದೆ ನಗರವನ್ನು ಅಂದಗೊಳಿಸುವ ನಿಟ್ಟಿನಲ್ಲಿ ತನ್ನ ವ್ಯಾಪ್ತಿಯ…











