Author: News Desk Benkiyabale

ತುಮಕೂರು:       ಬಿಜೆಪಿ ಸರ್ಕಾರ ರಚನೆ ಹಾಗೂ ಡಿಸಿಸಿ ಬ್ಯಾಂಕ್ ಸೂಪರ್‍ಸೀಡ್‍ಗೆ ತಡೆಯಾಜ್ಞೆ ಹೊರಬಂದ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ಅಭಿಮಾನಿಗಳು ನಗರದ ಟೌನ್‍ಹಾಲ್‍ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.       ಈ ವೇಳೆ ಮಾತನಾಡಿದ ಊರುಕೆರೆ ವಿಎಸ್‍ಎಸ್‍ಎನ್ ಅಧ್ಯಕ್ಷ ಷಣ್ಮುಖ ಅವರು, ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ಸಾಕಷ್ಟು ಶ್ರಮಿಸಿದ್ದಾರೆ, ಬ್ಯಾಂಕ್‍ನಿಂದ ಎಲ್ಲ ವರ್ಗದ ಜನರಿಗೂ ಅನುಕೂಲ ಮಾಡಿದ್ದಾರೆ, ಅಂತವರಿಗೆ ಬ್ಯಾಂಕ್ ಸೂಪರ್‍ಸೀಡ್ ಮಾಡುವ ಮೂಲಕ ತೊಂದರೆ ನೀಡಿದರು, ತೊಂದರೆ ನೀಡಿದವರೇ ಇಂದು ಅಧಿಕಾರವನ್ನು ಕಳೆದುಕೊಂಡಿದ್ದಾರೆ, ರಾಜಣ್ಣ ಅವರು ನುಡಿದಂತೆ ಒಂದು ವಾರದೊಳಗೆ ಡಿಸಿಸಿ ಬ್ಯಾಂಕ್‍ನಲ್ಲಿ ಅಧಿಕಾರವನ್ನು ಸ್ಥಾಪಿಸಿದ್ದಾರೆ ಎಂದರು.       ಜಿಲ್ಲೆಯ ಜನರು ಝೀರೋ ಟ್ರಾಫಿಕ್‍ನಿಂದ ಬೇಸತ್ತಿದ್ದರು, ಸರ್ಕಾರ ಬಿದ್ದು ಝೀರೋ ಟ್ರಾಫಿಕ್ ಕಳೆದುಕೊಂಡಿರುವುದರಿಂದ ತುಮಕೂರು ಜಿಲ್ಲೆಗೆ ಒಳಿತಾಗಿದೆ ಎಂದು ಪರೋಕ್ಷವಾಗಿ ಡಾ.ಜಿ.ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ರಾಜಣ್ಣ ಅವರು ಅಗತ್ಯವಾಗಿದ್ದಾರೆ, ಬಿಜೆಪಿ…

Read More

ಬೆಂಗಳೂರು:       ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.       ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಹಸಿರು ಶಾಲು ಹೊದ್ದು, ಗೋಧೋಳಿ ಲಗ್ನದಲ್ಲಿ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಬಾಯಿ ವಾಲ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿದರು.        ಕಾರ್ಯಕ್ರಮದಲ್ಲಿ ರಾಜ್ಯದ ಬಿಜೆಪಿ ನಾಯಕರು ಸೇರಿದಂತೆ ಪಕ್ಷದ ಅನೇಕರು ಪಾಲ್ಗೊಂಡು ಯಡಿಯೂರಪ್ಪ ಅವರಿಗೆ ಶುಭಕೋರಿದರು.       ಪದಗ್ರಹಣ ಸಮಾರಂಭ ಹಿನ್ನೆಲೆಯಲ್ಲಿ ರಾಜಭವನದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಖಾಕಿಪಡೆ ಭದ್ರತೆ ಕೈಗೊಂಡಿದೆ. ಇನ್ನು ರಾಜಭವನ ಮಾರ್ಗವಾಗಿ ತೆರಳುವ ವಾಹನಗಳಿಗೆ ಬದಲು ಮಾರ್ಗ ವ್ಯವಸ್ಥೆ ಕಲ್ಪಿಸಲಾಗಿದೆ.

Read More

ಹುಳಿಯಾರು:       ಪಟ್ಟಣದ ಬಸ್ ನಿಲ್ದಾಣದಲ್ಲಿ ಎರಡ್ಮೂರು ದಶಕಗಳಿಂದಲೂ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ನಮ್ಮನ್ನು ತೆರವು ಗೊಳಿಸಿ 15 ದಿನವಾಗಿದ್ದು ಜೀವನ ನಿರ್ವಹಣೆ ಕಷ್ಟವಾಗಿದ್ದು ಅತಂತ್ರ ಸ್ಥಿತಿಯಲ್ಲಿರುವ ನಮಗೆ ಪರ್ಯಾಯ ಜಾಗ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕೆಂದು ಬಸ್ ನಿಲ್ದಾಣದ ಫುಟ್‍ಪಾತ್ ವ್ಯಾಪಾರಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.       ಕಳೆದ ವಾರದಿಂದಲೂ ತುಮಕೂರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಬರುತ್ತಿದ್ದ ಫುಟ್ಪಾತ್ ವ್ಯಾಪಾರಿಗಳಿಗೆ ತಾವೇ ಖುದ್ದಾಗಿ ಹುಳಿಯಾರಿನ ಸ್ಥಳಕ್ಕೆ ಬಂದು ಪರಿಶೀಲಿಸುವ ಆಶ್ವಾಸನೆ ನೀಡಿದ್ದ ಹಿನ್ನೆಲೆಯಲ್ಲಿ ಡಾ. ಕೆ.ರಾಕೇಶ್ ಕುಮಾರ್ ಇಂದು ಹುಳಿಯಾರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಆಗಮಿಸಿ ಫುಟ್ಪಾತ್ ವ್ಯಾಪಾರಿಗಳ ಅಹವಾಲು ಆಲಿಸಿದರು.       ತಮ್ಮ ಸಮಸ್ಯೆ ಬಗ್ಗೆ ಕಣ್ಣೀರಿಟ್ಟ ಫುಟ್ಪಾತ್ ವ್ಯಾಪಾರಿಗಳು ಭಾವೋದ್ವೇಗದಿಂದ ಜಿಲ್ಲಾಧಿಕಾರಿಗಳ ಕಾಲಿಗೆ ಬಿದ್ದ ಘಟನೆ ಕೂಡ ಜರಗಿತು. ನೂರಕ್ಕೂ ಹೆಚ್ಚು ಸೇರಿದ್ದ ವ್ಯಾಪಾರಿಗಳ ಮನವಿ ಆಲಿಸಿದ ಜಿಲ್ಲಾಧಿಕಾರಿಗಳು ಪರ್ಯಾಯ ಸ್ಥಳ ಕಲ್ಪಿಸುವ ಬಗ್ಗೆ ಆಲೋಚಿಸುವುದಾಗಿ…

Read More

ಗುಬ್ಬಿ :      ತಾಲ್ಲೂಕಿನ ಎಸ್.ಕೊಡಗೀಹಳ್ಳಿ ಗ್ರಾಮದ ಶ್ರೀನಿವಾಸ ಪ್ರೌಢಶಾಲೆಯ 39 ವಿದ್ಯಾರ್ಥಿಗಳು ಹೊಟ್ಟೆನೋವು ಮತ್ತು ವಾಂತಿಯಿಂದ ಅಸ್ವಸ್ಥರಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.       ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಕಬ್ಬಿಣಾಂಶದ ಮಾತ್ರೆಗಳನ್ನು ನೀಡಲಾಗಿತ್ತು. ಅದನ್ನು ನುಂಗಿದ ಕಾರಣ ನಮ್ಮ ಮಕ್ಕಳಿಗೆ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ ಎಂದು ಮಕ್ಕಳ ಪೋಷಕರು ತಿಳಿಸಿದ್ದಾರೆ. ಮಾತ್ರೆ ಸೇವಿಸಿದ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ಬಂದಾಗಲೆ ಹೊಟ್ಟೆನೋವು ಮತ್ತು ವಾಂತಿಯಿಂದ ಬಳಲುತ್ತಿದ್ದರು. ಕೂಡಲೆ ಪೋಷಕರು ಸಮೀಪದ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.       ಬೆಳಗ್ಗೆ ಶಾಲೆಗೆ ಬಂದಾಗ ಮತ್ತಷ್ಟು ವಿದ್ಯಾರ್ಥಿಗಳು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಕೂಡಲೆ ಆಂಬ್ಯುಲೆನ್ಸ್ ವಾಹನಗಳಲ್ಲಿ ತಾಲ್ಲೂಕು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ತ್ವರಿತವಾಗಿ ಚಿಕಿತ್ಸೆ ನೀಡಿದ ಕಾರಣ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಯಾವುದೇ ರೀತಿಯ ತೊಂದರೆಯಾಗದೆ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆಂದು ತಾಲ್ಲೂಕು ವೈದ್ಯಾಧಿಕಾರಿ ಡಾ:ಬಿಂದೂಮಾದವ್ ತಿಳಿಸಿದ್ದಾರೆ.    …

Read More

ತುಮಕೂರು :       ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನಿಗಮಗಳ ವತಿಯಿಂದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಸಹಾಯಧನ ಮತ್ತಿತರ ಸೌಲಭ್ಯಗಳನ್ನು ಅರ್ಹತೆಗನುಗುಣವಾಗಿ ನೀಡುವಂತೆ ಒತ್ತಾಯಿಸಿ ಹಾಗೂ ದಲಿತ ಮೇಲಿನ ಹಲ್ಲೆ, ದೌರ್ಜನ್ಯವನ್ನು ಖಂಡಿಸಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.       ಪ್ರತಿಭಟನೆಯನ್ನು ಉದ್ದೇಶಿ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಳವಾಗಿದ್ದು ಸರ್ಕಾರ ಈ ದೌರ್ಜನ್ಯ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ನೀಡುವಲ್ಲಿ ವಿಫಲವಾಗಿದೆ. ತುಮಕೂರು ಜಿಲ್ಲೆಯ ಮಲ್ಲೇಕಾವು ಗ್ರಾಮದಲ್ಲಿ ದಲಿತರು ದೇವಾಲಯಕ್ಕೆ ಪ್ರವೇಶ ಮಾಡಿದರೆಂದು ಜಗದೀಶ್ ಎಂಬುವರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಆದರೂ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.       ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಲಿತರ ಮೇಲೆ ಹಲ್ಲೆ, ಅಸ್ಪೃಶ್ಯತಾ ಆಚರಣೆ ಜಾರಿಯಲ್ಲಿದ್ದು ಸರ್ಕಾರ…

Read More

ತುಮಕೂರು :       ನಗರದ ಪಶ್ಚಿಮ ವಿಭಾಗದ ಸಂಚಾರಿ ಪಿಎಸ್‍ಐ ಜ್ಞಾನಮೂರ್ತಿ ರವರು ತಮ್ಮ ಕೆಲವು ಸಿಬ್ಬಂದಿಗಳೊಟ್ಟಿಗೆ ಸೇರಿಕೊಂಡು ಭ್ರಷ್ಟಾಚಾರಕ್ಕಿಳಿದಿದ್ದಾರೆ.       ದಿನಾಂಕ 23-07-2019 ರ ಮಂಗಳವಾರ ಸಂಜೆ ಸರಿಸುಮಾರು 7.30 ರ ಸುಮಾರಿನಲ್ಲಿ ಕೆಎ-51 ಎಎ 9651 ಟಾಟಾ ಕಂಪನಿಯ ಲಗೇಜು ಸಾಗಿಸುವ ವಾಹನವನ್ನು ನಗರದ ಬಿಹೆಚ್ ರಸ್ತೆಯ ಟ್ರೆಂಡ್ಸ್ ಮುಂಭಾಗದಿಂದ ತೆಗೆದುಕೊಂಡು ಹೋಗಿರುತ್ತಾರೆ. ಸ್ವತಃ ಪಶ್ಚಿಮ ವಿಭಾಗದ ಪಿಎಸ್‍ಐ ಜ್ಞಾನಮೂರ್ತಿರವರೇ ವಾಹನವನ್ನು ತಮ್ಮ ಠಾಣಾ ವ್ಯಾಪ್ತಿಗೆ ತೆಗೆದುಕೊಂಡು ಹೋಗಿ ನಿಲ್ಲಿಸಿಕೊಂಡಿರುತ್ತಾರೆ. ವಾಹನದ ಮಾಲೀಕರು ಮತ್ತು ಚಾಲಕರು ವಾಹನ ಬಿಡುವಂತೆ ಬೇಡಿದರೂ ಬಿಡದೇ ಅದರಲ್ಲಿದ್ದ ಸಾಮಾನು ಮತ್ತು ಸರಂಜಾಮುಗಳ ಸಮೇತ ತಮ್ಮ ವಶಕ್ಕೆ ಪಡೆದು ಹಣಕ್ಕಾಗಿ ಬೇಡಿಕೆಯಿಟ್ಟು ಮಾಲೀಕರು ಮತ್ತು ಚಾಲಕರನ್ನು ಬೆದರಿಸಿರುತ್ತಾರೆಂದು ತಿಳಿದುಬಂದಿರುತ್ತದೆ. ದಿನಾಂಕ 23-07-2019 ರ ರಾತ್ರಿ 7.30 ರಿಂದ 24-07-2019 ರ ಸಂಜೆ 4.30 ರವರೆಗೆ ಅನಧಿಕೃತವಾಗಿ ತಮ್ಮ ವಶದಲ್ಲೇ ಇಟ್ಟುಕೊಂಡು ಹಣಕ್ಕಾಗಿ ಒತ್ತಾಯ ಮಾಡಿ 4000 ರೂ. ಲಂಚದ…

Read More

ಕೊಡಿಗೇನಹಳ್ಳಿ:       ಗ್ರಾಮದ ಬಾಲಕೀಯರ ಶಾಲೆ ಅಡುಗೆ ಕೋಣೆಯ ಬೀಗ ಮುರಿದ ಕದೀಮರು ಅಕ್ಷರ ದಾಸೋಹದ ಅಡುಗೆ ಪಾತ್ರೆಗಳನ್ನು ದೊಚಿರುವ ಘಟನೆ ತಡವಾಗಿ ಬೆಳಕಿಗ ಬಂದಿದೆ.       ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಸರಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯು ಬಾನುವಾರ ರಜೆ ಇದ್ದು ಅಡುಗೆ ಕೋಣೆಗೆ ಬೀಗ ಹಾಕಲಾಗಿತ್ತು, ಎಂದಿನಂತೆ ಮುಖ್ಯ ಶಿಕ್ಷಕಿ ತಿಮ್ಮರಾಜಮ್ಮ ಸೋಮವಾರ ಬೆಳಿಗ್ಗೆ ಬೀಗ ತೆರಯಲು ಹೋದಾಗ ಕಳುವಾಗಿರವ ಬಗ್ಗೆ ತಿಳಿದು ಬಂದಿದೆ.ತಕ್ಷಣ ಪರಿಶೀಲಿಸಿದಾಗ ಶಾಲೆಯಲ್ಲಿ ಅಡುಗೆಗೆ ಬಳಸುತಿದ್ದ 15ಕೆಜಿ, 10ಕೆಜಿ, 8 ಕೆಜಿ, ಹಾಗೂ 3 ಕೆಜಿ ತೂಕದ ಸುಮಾರು 4 ಅಡುಗೆ ಪಾತ್ರೆಗಳು ಕಳುವಾಗಿವೆ ಎಂದು ಮುಖ್ಯ ಶಿಕ್ಷಕಿ ದೂರಿನಲ್ಲಿ ಉಲ್ಲೇಖಸಿದ್ದಾರೆ,ಕಳೆದ 10 ದಿನಗಳ ಹಿಂದೆ ಸರಕಾರಿ ಉರ್ದು ಶಾಲೆಯಲ್ಲಿ ಭರ್ತಿ ಗ್ಯಾಸ್ ಸಿಲೆಂಡರ್ ಕಳವಾಗಿತ್ತು, ಇದಕ್ಕು ಮುನ್ನ ಬಾಲಕರ ಶಾಲೆಯಲ್ಲಿ ಕಂಪ್ಯೋಟರ್ ಕಳವಾಗಿದೆ, ಪದೇ ಪದೇ ಕದೀಮರು ರಜಾ ದಿನಗಳಲ್ಲಿ ಶಾಲೆಯ ಬೀಗಗಳನ್ನು ಮುರಿಯುತ್ತಿದ್ದು ಸರಕಾರಿ ಶಾಲೆಯ…

Read More

ತುಮಕೂರು:       ರೈತಸಿರಿ, ಕೃಷಿಭಾಗ್ಯ, ಪಿಎಂಕಿಸಾನ್, ಬೆಳೆ ವಿಮಾ, ಗಂಗಾ ಕಲ್ಯಾಣ ಸೇರಿದಂತೆ ಎಲ್ಲಾ ಕೃಷಿ ಯೋಜನೆಗಳನ್ನು ಅರ್ಹ ರೈತ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಜರುಗಿದ ಕೆಡಿಪಿ ಸಭೆ ಅಧ್ಯಕ್ಷತೆವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸುತ್ತಾ ಮಾತನಾಡಿದ ಅವರು, ರೈತರಿಗಾಗಿ ಜಾರಿಯಲ್ಲಿರುವ ಸರ್ಕಾರಿ ಯೋಜನೆಗಳ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮಳೆ ಬಾರದೆ ಮೊದಲೇ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಂದಾದರೂ ರೈತರು ಕೊಂಚ ಸುಧಾರಿಸಿಕೊಳ್ಳಲಿ ಎಂದು ತಿಳಿಸಿದ ಅವರು, ಬಾಕಿ ಇರುವ ಬೆಳೆ ವಿಮಾ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಬೇಕೆಂದು ಸೂಚಿಸಿದರು.       ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ ಮಾತನಾಡಿ, ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಈವರೆಗೆ ಶೇ.9ರಷ್ಟು ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಸುಮಾರು 40…

Read More

ತುಮಕೂರು:       ಸಣ್ಣ ಕೈಗಾರಿಕೋದ್ಯಮಿಗಳು ತಾವು ಹೊಸದಾಗಿ ಆವಿಷ್ಕರಿಸಿದ ಕೈಗಾರಿಕೆ/ಯಂತ್ರೋಪಕರಣಗಳ ಪೇಟೆಂಟ್(ಹಕ್ಕುಪತ್ರ)ಅನ್ನು ತಪ್ಪದೇ ಪಡೆದಿರಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಅವರು ಸಲಹೆ ನೀಡಿದರು.       ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ), ಜಿಲ್ಲಾ ಕೈಗಾರಿಕಾ ಕೇಂದ್ರ, ಮತ್ತಿತರ ಸರ್ಕಾರಿ ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಗರದ ಗಾಜಿನಮನೆಯಲ್ಲಿಂದು ಏರ್ಪಡಿಸಿದ್ದ “ದಕ್ಷಿಣ ಭಾರತದ ಆಗ್ರೋ ಎಕ್ಸ್‍ಪೋ ಕೃಷಿ ಮತ್ತು ಪೂರಕ ವಸ್ತುಪ್ರದರ್ಶನ” ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.       ಈ ವಸ್ತುಪ್ರದರ್ಶನಕ್ಕೆ ತಾವು ಭೇಟಿ ನೀಡಿದ ಸಂದರ್ಭದಲ್ಲಿ ಎಷ್ಟೋ ಮಳಿಗೆಗಳಲ್ಲಿರುವ ಕೈಗಾರಿಕೋದ್ಯಮಿಗಳು ತಮ್ಮ ಉತ್ಪನ್ನದ ಪೇಟೆಂಟ್ ಪಡೆಯದಿಲ್ಲದಿರುವುದು ಕಂಡುಬಂತು. ಒಂದು ದೇಶವನ್ನು ಅಭಿವೃದ್ಧಿ ದೇಶವೆಂದು ವಿಶ್ವ ಮಟ್ಟದಲ್ಲಿ ಪರಿಗಣಿಸಬೇಕಾದರೆ ಹೆಚ್ಚಿನ ಸಂಖ್ಯೆಯಲ್ಲಿ ಪೇಟೆಂಟ್ ಆಗಿರುವ ಅಂಶವನ್ನೂ ಸಹ ಗಣನೆಗೆ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಉದ್ಯಮಿಗಳು ತಮ್ಮ ಹೊಸ ಆವಿಷ್ಕಾರ ಮಾಡಿದ ಯಂತ್ರ/ಕೈಗಾರಿಕೆ/ಉತ್ಪನ್ನಗಳಿಗೆ ತಪ್ಪದೇ ಪೇಟೆಂಟ್ ಪಡೆಯಬೇಕು. ಹೊಸದಾಗಿ ಆವಿಷ್ಕರಿಸಿದ ಯಂತಗಳ ಡಿಜೈನ್, ಪ್ರಾಸೆಸ್,…

Read More

ತುಮಕೂರು:       ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸೂಪರ್ ಸೀಡ್ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಡಿಸಿಸಿ ಬ್ಯಾಂಕ್ ನೌಕರರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.       ನಗರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸೇರಿದಂತೆ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರಗಳ ಶಾಖೆ ಮುಂಭಾಗ ಕಪ್ಪುಪಟ್ಟಿ ಧರಿಸಿ ಜಮಾಯಿಸಿದ ಬ್ಯಾಂಕ್ ನೌಕರರು ಬ್ಯಾಂಕ್‍ನ ಆಡಳಿತ ಮಂಡಳಿಯನ್ನು ರದ್ದುಮಾಡಿ ಸೂಪರ್ ಸೀಡ್ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.       ಪ್ರತಿಭಟನಾಕಾರರನ್ನು ಉದ್ದೇಶಿಸಿ ಡಿಸಿಸಿ ಬ್ಯಾಂಕ್ ನೌಕರರ ಯೂನಿಯನ್ ಕಾರ್ಯದರ್ಶಿ ಮಧುಸೂದನ್ ಮಾತನಾಡಿ, ಕೂಡಲೇ ರದ್ದುಪಡಿಸಿರುವ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಮತ್ತೆ ಅಧಿಕಾರ ನೀಡಬೇಕು. ಕೇವಲ ರಾಜಕೀಯ ದ್ವೇಷಕ್ಕೋಸ್ಕರ ಇಡೀ ಜಿಲ್ಲೆಯ ರೈತ…

Read More